Shuru
Apke Nagar Ki App…
ಶಿವಮೊಗ್ಗದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ ದೊಡ್ಡಪೇಟೆ ಪೊಲೀಸರ ದಾಳಿ: ಆರೋಪಿಯ ಜೊತೆಗೆ ಆಟೋ ಜಪ್ತಿ ಶಿವಮೊಗ್ಗ: ಏಪ್ರಿಲ್ 12ರಂದು ಎನ್‌ಟಿ ರಸ್ತೆಯಲ್ಲಿನ ಹೋಟೆಲ್ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿದೆ. ಈ ವೇಳೆ ರಾಗಿಗುಡ್ಡದ ನಿವಾಸಿ ಆಸೀಫ್ ಖಾನ್ (33) ಅವರನ್ನು ಬಂಧಿಸಲಾಗಿದ್ದು, ಆರೋಪಿಯಿಂದ ಅಂದಾಜು ₹70,000 ಮೌಲ್ಯದ 1 ಕೆಜಿ 400 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು ₹80,000 ಮೌಲ್ಯದ ಆಟೋವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 134/2026 ರಂತೆ NDPS ಕಾಯ್ದೆಯ ಕಲಂ 20(b)(ii)(B) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇರ್ಫಾನ್ ಕನ್ನಡಿಗ
ಶಿವಮೊಗ್ಗದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ ದೊಡ್ಡಪೇಟೆ ಪೊಲೀಸರ ದಾಳಿ: ಆರೋಪಿಯ ಜೊತೆಗೆ ಆಟೋ ಜಪ್ತಿ ಶಿವಮೊಗ್ಗ: ಏಪ್ರಿಲ್ 12ರಂದು ಎನ್‌ಟಿ ರಸ್ತೆಯಲ್ಲಿನ ಹೋಟೆಲ್ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿದೆ. ಈ ವೇಳೆ ರಾಗಿಗುಡ್ಡದ ನಿವಾಸಿ ಆಸೀಫ್ ಖಾನ್ (33) ಅವರನ್ನು ಬಂಧಿಸಲಾಗಿದ್ದು, ಆರೋಪಿಯಿಂದ ಅಂದಾಜು ₹70,000 ಮೌಲ್ಯದ 1 ಕೆಜಿ 400 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು ₹80,000 ಮೌಲ್ಯದ ಆಟೋವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 134/2026 ರಂತೆ NDPS ಕಾಯ್ದೆಯ ಕಲಂ 20(b)(ii)(B) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
More news from ಕರ್ನಾಟಕ and nearby areas
- ಬೆಂಗರೆಯ ಸ್ಯಾಂಡ್ಸ್‌ಪಿಟ್ ಪ್ರದೇಶದಲ್ಲಿರುವ ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳು ಏಪ್ರಿಲ್ 17ರಿಂದ 20ರವರೆಗೆ ಭಕ್ತಿಭಾವದಿಂದ ಮೇಳೈಸಲಿದೆ ಎಂದು ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರ ಇದರ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಮೋಹನ್ ಬೆಂಗ್ರೆ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸೀತಾ ರಾಮ ಲಕ್ಷ್ಮಣ ಹನುಮಾನ್ ಸಮೇತ ಪಟ್ಟಾಭಿರಾಮ ದೇವರ ಬಿಂಬ ಪ್ರತಿಷ್ಠೆ ಹಾಗೂ ವೀರ ಮಾರುತಿ ದೇವರ ಬಿಂಬ ಪುನಃ ಪ್ರತಿಷ್ಠೆ, ನಾಗಶಿಲಾ ಪುನಃ ಪ್ರತಿಷ್ಠೆ ಏಪ್ರಿಲ್ 18ರಂದು ಬೆಳಿಗ್ಗೆ 8ರಿಂದ 9ರ ವರೆಗೆ ವೃಷಭ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಶ್ರೀ ಕುಡುಪು ಕೃಷ್ಣರಾಜ ತಂತ್ರಿಗಳ ಮಾರ್ಗದರ್ಶನದಲ್ಲಿ ನೆರವೇರಲಿದೆ. ಬೆಳಿಗ್ಗೆ 10.30 ಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದಂಗಳ ಅವರಿಂದ ಸ್ವಾಗತ ಗೋಪುರದ ಉದ್ಘಾಟನೆ ಕಾರ್ಯ ನಡೆಯಲಿದೆ .ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಇದರಲ್ಲಿ ನಾಡೋಜ ಜಿ ಶಂಕರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳನ್ನು ಭಾಗವಹಿಸಲಿದ್ದಾರೆ ಎಂದರು .1
- ಗದಗ ಮುಂಡರಗಿ ತಾಲೂಕು ಆಡಳಿತ, ತಾಲೂಕುವರ ಪಂಚಾಯತ್, ಮುಂಡರಗಿ,ಸಮಾಜ ಕಲ್ಯಾಣ ಇಲಾಖೆ, ಹಾಗೂ ಮುಂಡರಗಿ ತಾಲೂಕಿನ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ 135 ನೇ ಜಯಂತೋತ್ಸ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು, ಈ ಸಂದರ್ಭದಲ್ಲಿ ತಾಲೂಕು ಆಡಳಿತ ತಾಲೂಕು ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ತಾಲೂಕಿನ ಎಲ್ಲಾ ಹಿರಿಯರು, ಮುಖಂಡರು, ಮಹಿಳೆಯರು, ಯುವಕರು, ಉಪಸ್ಥಿತರಿದ್ದರು.1
- Gadag Jilla snake Raheman1
- ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಬೋಟ್ ಪೆರೇಡ್ ಜನರ ಕಣ್ಣನ್ನು ತಂಪು ಗೊಳಿಸಿದೆ1
- ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಧಾರವಾಡ ಶಾರದಾ ಸ್ಕೂಲ್ ಬಳಿಯ ರಸ್ತೆಯಲ್ಲಿ ಭೀಮ ನಡಿಗೆ ಶೀಘ್ರ ನೇಮಕಾತಿ ಕಡೆಗೆ ಹೋರಾಟದ ಭಾಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲು ಆಗಮಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಸಂವಿಧಾನ ವಿರೋಧಿ ನಡೆಯನ್ನು ಸರ್ಕಾರ ಅನುಸರಿಸುತ್ತಿದೆ. ಉದ್ಯೋಗಾಕಾಂಕ್ಷಿಗಳ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನ ಮಾಡುತ್ತಿದೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾಲಾರ್ಪಣೆ ಮಾಡಲು ಬೀಡುತ್ತಿಲ್ಲ, ನಾವು ಜೈಲಿನಿಂದಲೇ ಹೋರಾಟ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.1
- ಬಳ್ಳಾರಿ ನಗರದ ವಾರ್ಡ್ ನಂಬರ್ 10 ರಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಸಿಹಿ ಹಂಚುವ ಮೂಲಕ ಆಚರಣೆ ಮಾಡಲಾಯಿತು1
- Post by Suresh Belagere1
- ಪ್ರಕರಣದ ಪಿರ್ಯಾದಿದಾರರಾದ ಬಂಟ್ವಾಳ ನೆಟ್ಲಮುಡ್ನೂಡು ನಿವಾಸಿಯಾದ ಸೇಸಮ್ಮ (47) ರವರು ಪರಿಶಿಷ್ಠ ಜಾತಿಗೆ ಸೇರಿದವರಾಗಿದ್ದು, ಬಂಟ್ವಾಳ ನೇರಳಕಟ್ಟೆಯಲ್ಲಿರುವ ಸಹಕಾರ ಸಂಘದ ಸಿಬ್ಬಂದಿಯಾಗಿರುತ್ತಾರೆ. ದಿನಾಂಕ -02-04-2026 ರಂದು ಸದ್ರಿಯವರು ಕರ್ತವ್ಯದಲ್ಲಿದ್ದಾಗ, ಸದ್ರಿ ಶಾಖೆಯ ಪ್ರಭಾರ ವ್ಯವಸ್ಥಾಪಕನಾದ ಆರೋಪಿ ಯತೀಶ್ ಡಿ ಗೌಡ ಎಂಬವರು ಬಂದು ಏಕಾಏಕಿ ಪಿರ್ಯಾದಿದಾರರಿಗೆ ಕರ್ತವ್ಯ ನಿರ್ವಹಿಸಬಾರದು ಎಂದು ತಿಳಿಸಿದ್ದು, ಅದಕ್ಕೆ ಪಿರ್ಯಾದಿದಾರರು ಆಕ್ಷೇಪಿಸಿದಾಗ, ಆರೋಪಿಯು ಪಿರ್ಯಾದಿದಾರರನ್ನು ಕೈಯಿಂದ ತಳ್ಳಿ ಜಾತಿ ನಿಂದನೆ ಮಾಡಿರುತ್ತಾನೆ. ಆ ಬಳಿಕ ದಿನಾಂಕ:07-04- 2026 ರಂದು ಬೆಳಿಗ್ಗೆ, ಪಿರ್ಯಾದಿದಾರರು ಪುನಃ ಕರ್ತವ್ಯಕ್ಕೆ ಹಾಜರಾದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಇದರಿಂದ ಪಿರ್ಯಾದಿದಾರರು ಮನನೊಂದು ಅಸ್ವಸ್ಥಳಾಗಿ ಕಚೇರಿಯಲ್ಲಿ ಬಿದ್ದವರನ್ನು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ಸದ್ರಿ ಸಂಘದ ಪದಾಧಿಕಾರಿಗಳಾದ ಯಶೋಧ, ಪುಷ್ಪರಾಜ್ ಚೌಟ ಹಾಗೂ ಯತೀಶ್ ಡಿ ಗೌಡ ಎಂಬವರ ವಿರುದ್ಧ ಪಿರ್ಯಾದಿದಾರರು ದಿನಾಂಕ: 11-04-2026 ರಂದು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 88/2026, ಕಲಂ: 74, 49 BNS 2023 ಮತ್ತು ಕಲಂ: 3(1) (r) (s), 3(2)(va) The SC & ST (Prevention of Atrocities) Amendment Act 2015 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.1
- ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ದಿನಾಂಕ 14/04/2026 ರ ಮಂಗಳವಾರದಂದು ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ 135 ನೇ ಜಯಂತೋತ್ಸವವನ್ನು ಬೆಳಿಗ್ಗೆ 10:30 ಕ್ಕೆ ತಹಶಿಲ್ದಾರರವರ ಕಛೇರಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಸದರಿ ಕಾರ್ಯಕ್ರಮಕ್ಕೆ ತಾವೆಲ್ಲ ಆಗಮಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉದಯಕುಮಾರ ಎಲಿವಾಳ ರವರು ತಿಳಿಸಿದ್ದಾರೆ1