ದಿನಾಂಕ ಬದಲಾವಣೆಗಳು -ಸಮಸ್ಯೆ ಪರಿಹಾರವೋ? ಅಥವಾ ಮಾದಿಗ ಸಮಾಜದ ಹೋರಾಟ ಹತ್ತಿಕ್ಕುವ ರಾಜಕೀಯ ಕುತಂತ್ರವೋ? ದಿನಾಂಕ ಬದಲಾವಣೆಗಳು -ಸಮಸ್ಯೆ ಪರಿಹಾರವೋ? ಅಥವಾ ಮಾದಿಗ ಸಮಾಜದ ಹೋರಾಟ ಹತ್ತಿಕ್ಕುವ ರಾಜಕೀಯ ಕುತಂತ್ರವೋ? ಮೀಸಲಾತಿ ಎಂಬುದು ಯಾವುದೋ ಸರ್ಕಾರ ಕೊಡುವ ದಾನವಲ್ಲ. ಅದು ದಲಿತ ಸಮಾಜದ, ವಿಶೇಷವಾಗಿ ಮಾದಿಗ ಸಮುದಾಯದ ಸಂವಿಧಾನಬದ್ಧ ಹಕ್ಕು. ಆದರೆ ಇಂದು ಆ ಹಕ್ಕಿನ ವಿಚಾರದಲ್ಲಿ ನಡೆಯುತ್ತಿರುವ ದಿನಾಂಕಗಳ ಆಟ ದಲಿತ ಜನರಲ್ಲಿ ಗಂಭೀರ ಅನುಮಾನಗಳನ್ನು ಹುಟ್ಟಿಸುತ್ತಿದೆ. ಒಂದು ದಿನಾಂಕ ಹೇಳಿ… ಮತ್ತೊಂದು ದಿನಾಂಕಕ್ಕೆ ತಳ್ಳುವುದು… ಸಭೆ ಮಾಡುತ್ತೇವೆ ಎಂದು ಭರವಸೆ ನೀಡಿ… ಮತ್ತೆ ಹೊಸ ಕುಂಟುನೆಪದ ಕಾರಣ ಹೇಳುವುದು… ಈ ಎಲ್ಲವುಗಳು ನಿಜವಾಗಿಯೂ ಸಮಸ್ಯೆ ಪರಿಹಾರಕ್ಕಾಗಿ ನಡೆಯುತ್ತಿವೆಯೇ? ಅಥವಾ ಮಾದಿಗ ಸಮಾಜದ ಹೋರಾಟವನ್ನು ಹತ್ತಿಕ್ಕಲು ಕಾಂಗ್ರೆಸ್ ಸಿದ್ದರಾಮಯ್ಯನವರು ನಡೆಸುತ್ತಿರುವ ರಾಜಕೀಯ ಕುತಂತ್ರವೇ? ಜನರ ಮೀಸಲಾತಿ ಹಕ್ಕುಗಳ ಪ್ರಶ್ನೆಯಲ್ಲಿ ವಿಳಂಬ ಅಂದರೆ ಅದು ನ್ಯಾಯವಲ್ಲ — ಅದು ನೇರ ಅನ್ಯಾಯ. ವರ್ಷಗಳಿಂದಲೂ ಮಾದಿಗ ಸಮಾಜ ಕೇಳುತ್ತಿರುವುದು ಯಾವುದೋ ವಿಶೇಷ ಅನುಗ್ರಹವಲ್ಲ. ಅವರು ಕೇಳುತ್ತಿರುವುದು ತಮ್ಮ ಹಕ್ಕು, ತಮ್ಮ ಪಾಲಿನ ನ್ಯಾಯ ಮಾತ್ರ. ಆದರೆ ಸರ್ಕಾರಗಳು ಮಾತು ಕೊಟ್ಟು ಕಾಲಹರಣ ಮಾಡುವ ಕಾಂಗ್ರೇಸ್ ರಾಜಕೀಯ ಆಟವನ್ನು ಮುಂದುವರಿಸಿದರೆ, ಅದು ಸಮಾಜದ ಸಹನೆಯನ್ನು ಪರೀಕ್ಷಿಸುವ ಕೆಲಸವಾಗುತ್ತದೆ. ಮಾತು ಕೊಟ್ಟು ಹಿಂದೆ ಸರಿಯುವುದು ನಾಯಕತ್ವವಲ್ಲ — ಅದು ದಲಿತರಿಗೆ ನಂಬಿಕೆಗೆ ಮಾಡುವ ದ್ರೋಹ. ಆದ್ದರಿಂದ ಸರ್ಕಾರವು ಮತ್ತಷ್ಟು ಸಮಯ ತಳ್ಳುವ ಆಟವನ್ನು ತಕ್ಷಣ ನಿಲ್ಲಿಸಬೇಕು. ಮಾದಿಗ ಸಮಾಜಕ್ಕೆ ಕೊಟ್ಟ ಮಾತನ್ನು ಉಳಿಸಬೇಕು. ಹಕ್ಕಿನ ಪ್ರಶ್ನೆಯನ್ನು ರಾಜಕೀಯ ಲಾಭಕ್ಕಾಗಿ ಬಳಸುವ ಕುತಂತ್ರವನ್ನು ಬಿಟ್ಟು, ನೇರವಾಗಿ ನ್ಯಾಯ ನೀಡಬೇಕು. ಇಲ್ಲದಿದ್ದರೆ ಒಂದು ವಿಷಯ ಸ್ಪಷ್ಟ — ಸಮಾಜದ ಆಕ್ರೋಶ ಇನ್ನಷ್ಟು ಉರಿಯುವುದು ಖಚಿತ. ಯಾಕೆಂದರೆ ನಮ್ಮ ಮೀಸಲಾತಿ ಹಕ್ಕಿಗಾಗಿ ನಡೆಯುವ ಹೋರಾಟವನ್ನು ಯಾರೂ ಹತ್ತಿಕ್ಕಲು ಸಾಧ್ಯವಿಲ್ಲ. ಸಮಾಜದ ನ್ಯಾಯಕ್ಕಾಗಿ ಎದ್ದಿರುವ ದಲಿತರ ಧ್ವನಿ ಯಾವಾಗಲೂ ಗಟ್ಟಿಯಾಗಿಯೇ ಕೇಳಿಸುತ್ತದೆ. ಹಕ್ಕು ಸಿಗುವವರೆಗೆ ಹೋರಾಟ ನಿಲ್ಲದು… ನ್ಯಾಯ ದೊರೆಯುವವರೆಗೆ ಈ ಧ್ವನಿ ಮೌನವಾಗದು. ✊🔥 ನಾಗರಾಜ್ ಕಲ್ಲಹಳ್ಳಿ

- ಮೇಡಮ್ ಬರ್ತಾವ್ರೆ ತುಮಕೂರಿಗೆ1
- ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಸೇರ್ಪಡಿಸಬೇಕಾಗಿ ವಿನಂತಿ1
- ಬಳ್ಳಾರಿ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ನಿರ್ಮಾಣ ಹಾಗೂ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಡ್ಡರಬಂಡೆ ಪ್ರದೇಶದಲ್ಲಿ ಶೀಘ್ರದಲ್ಲೇ ಶಾದಿ ಮಹಲ್ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು. ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸಿರ್ ಹುಸೇನ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರ ಸಹಯೋಗದಲ್ಲಿ ನಗರದಲ್ಲಿ ಎರಡು ಶಾದಿ ಮಹಲ್ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಬಡ ಕುಟುಂಬಗಳ ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ಶಾದಿ ಮಹಲ್ ಸಹಾಯಕವಾಗಲಿದೆ ಎಂದರು. ಇದೇ ವೇಳೆ ಈದ್ಗಾ ಮತ್ತು ಖಬರಸ್ತಾನದ ಸ್ವಚ್ಛತೆ ಹಾಗೂ ಹಸೀರಿಕರಣದಲ್ಲಿ ತೊಡಗಿದ್ದ ಯುವಕರ ಕಾರ್ಯವನ್ನು ಮೆಚ್ಚಿ ಯೂತ್ ರೆವಲ್ಯೂಷನ್ ತಂಡದ ಸದಸ್ಯರನ್ನು ಸನ್ಮಾನಿಸಿದರು.1
- ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.1
- ಚಳ್ಳಕೆರೆ: ಸಾರ್ವಜನಿಕರ ಸದುಪಯೋಗಕ್ಕಾಗಿ ಮೀಸಲಿಟ್ಟಿರುವ ಸರ್ಕಾರಿ ಸ್ಮಶಾನ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದವರ ವಿರುದ್ಧ ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ಚಳ್ಳಕೆರೆ ತಾಲೂಕಿನ ಚೌಳೂರು ಕಾವಲಿನ ಸರ್ವೆ ನಂ. 1ರಲ್ಲಿ ಸಾರ್ವಜನಿಕರಿಗಾಗಿ ಸುಮಾರು ಎರಡು ಎಕರೆ ಸ್ಮಶಾನ ಭೂಮಿ ಮೀಸಲಾಗಿದ್ದು, ಅದನ್ನು ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ರೇಹಾನ್ ಪಾಷ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ, ಸರ್ವೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜೆಸಿಬಿ ಯಂತ್ರದ ಸಹಾಯದಿಂದ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿದರು. ಸರ್ಕಾರಿ ಭೂಮಿ, ವಿಶೇಷವಾಗಿ ಸ್ಮಶಾನ ಹಾಗೂ ಸಾರ್ವಜನಿಕರ ಸದುಪಯೋಗಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಯಾರೂ ಅಕ್ರಮವಾಗಿ ಒತ್ತುವರಿ ಮಾಡಬಾರದು. ಇಂತಹ ಒತ್ತುವರಿ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ಎಚ್ಚರಿಕೆ ನೀಡಿದ್ದಾರೆ.1
- Bellary district siruguppa5
- ಚಿತ್ರದುರ್ಗದ ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಒಂದಲ್ಲ ಒಂದು ದೂರು ಕೇಳಿ ಬರುತ್ತಲೇ ಇರುವ ನಡುವೆಯೇ ನಡೆದ ಬಾಣಂತಿಯ ಸಾವು.. ಚಿತ್ರದುರ್ಗ :ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಪರಶುರಾಮಪುರದ ಶಿಲ್ಪ ಎನ್ನುವ ಮಹಿಳೆಯೋರ್ವರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.. ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದರು. ಹೆರಿಗೆ ಬಳಿಕ ವೈದ್ಯರು ನಿರ್ಲಕ್ಷ ತೋರಿದ ಪರಿಣಾಮ ಶಿಲ್ಪಾಳ ಸಾವು ಸಂಭವಿಸಿದೆ. ಏಕಾಏಕಿ ಐಸಿಯುಗೆ ಶಿಫ್ಟ್ ಮಾಡಬೇಕೆಂದು ಹೇಳಿ ನೇರವಾಗಿ ಶವಾಗಾರಕ್ಕೆ ಶಿಫ್ಟ್ ಮಾಡಿದ್ದಾರೆ ಎಂಬುದು ಮೃತಳ ತಾಯಿ ದುರ್ಗಮ್ಮ ಅವರ ಆರೋಪ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದ್ದು, ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಸೇರಿ ಸಿಬ್ಬಂದಿಯನ್ನು ತರಾಟೆಗೆ ಪಡೆದಿದ್ದಾರೆ..1
- ಬಳ್ಳಾರಿ ಕೋಟೆಯ ಪ್ರದೇಶದಲ್ಲಿ ಬೆಂಕಿ ಅವಘಡ.1