ಶಿಕಾರಿಪುರ ತಾಲ್ಲೂಕಿನ ಬಿಳಿಕಿ ಗ್ರಾಮದ ನಿವಾಸಿ ಪ್ರೇಮಕ್ಕ ನಿಗೂಢವಾಗಿ ಕೊಲೆಯಾದ ದುರ್ದೈವಿ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಬಿಳಕಿ ಗ್ರಾಮದಲ್ಲಿ ನಡುಕ ಹುಟ್ಟಿಸುವ ಘಟನೆಯೊಂದು ನಡೆದಿದೆ. ಗ್ರಾಮದ ಅಂಗನವಾಡಿ ಸಹಾಯಕಿಯೊಬ್ಬರು ತಮ್ಮ ಸ್ವಗೃಹದಲ್ಲೇ ನಿಗೂಢವಾಗಿ ಕೊಲೆಯಾಗಿದ್ದಾರೆ.ಕೊಲೆಯಾದ ದುರ್ದೈವಿಯನ್ನು ಬಿಳಕಿ ಗ್ರಾಮದ ನಿವಾಸಿ ಪ್ರೇಮಕ್ಕ (52) ಎಂದು ಗುರುತಿಸಲಾಗಿದೆ. ಇವರು ಸ್ಥಳೀಯ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ರಾತ್ರಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಪ್ರೇಮಕ್ಕ ಅವರ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ನಿಖಿಲ್ ಬಿ. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾಕ್ಷ್ಯ ಸಂಗ್ರಹಕ್ಕಾಗಿ ಸ್ಥಳಕ್ಕೆ ಬೆರಳಚ್ಚು ತಜ್ಞರು (FSL) ಹಾಗೂ ಶ್ವಾನದಳ ಆಗಮಿಸಿ ತಪಾಸಣೆ ನಡೆಸಿವೆ. ಈ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ನಿಖರ ಕಾರಣವೇನು? ಮತ್ತು ಈ ಕೃತ್ಯದ ಹಿಂದೆ ಯಾರ ಕೈವಾಡವಿದೆ? ಎಂಬ ಬಗ್ಗೆ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.
ಶಿಕಾರಿಪುರ ತಾಲ್ಲೂಕಿನ ಬಿಳಿಕಿ ಗ್ರಾಮದ ನಿವಾಸಿ ಪ್ರೇಮಕ್ಕ ನಿಗೂಢವಾಗಿ ಕೊಲೆಯಾದ ದುರ್ದೈವಿ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಬಿಳಕಿ ಗ್ರಾಮದಲ್ಲಿ ನಡುಕ ಹುಟ್ಟಿಸುವ ಘಟನೆಯೊಂದು ನಡೆದಿದೆ. ಗ್ರಾಮದ ಅಂಗನವಾಡಿ ಸಹಾಯಕಿಯೊಬ್ಬರು ತಮ್ಮ ಸ್ವಗೃಹದಲ್ಲೇ ನಿಗೂಢವಾಗಿ ಕೊಲೆಯಾಗಿದ್ದಾರೆ.ಕೊಲೆಯಾದ ದುರ್ದೈವಿಯನ್ನು ಬಿಳಕಿ ಗ್ರಾಮದ ನಿವಾಸಿ ಪ್ರೇಮಕ್ಕ (52) ಎಂದು ಗುರುತಿಸಲಾಗಿದೆ. ಇವರು ಸ್ಥಳೀಯ ಅಂಗನವಾಡಿಯಲ್ಲಿ
ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ರಾತ್ರಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಪ್ರೇಮಕ್ಕ ಅವರ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ನಿಖಿಲ್ ಬಿ. ಅವರು ಭೇಟಿ ನೀಡಿ
ಪರಿಶೀಲನೆ ನಡೆಸಿದ್ದಾರೆ. ಸಾಕ್ಷ್ಯ ಸಂಗ್ರಹಕ್ಕಾಗಿ ಸ್ಥಳಕ್ಕೆ ಬೆರಳಚ್ಚು ತಜ್ಞರು (FSL) ಹಾಗೂ ಶ್ವಾನದಳ ಆಗಮಿಸಿ ತಪಾಸಣೆ ನಡೆಸಿವೆ. ಈ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ನಿಖರ ಕಾರಣವೇನು? ಮತ್ತು ಈ ಕೃತ್ಯದ ಹಿಂದೆ ಯಾರ ಕೈವಾಡವಿದೆ? ಎಂಬ ಬಗ್ಗೆ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.
- ಶಿವಮೊಗ್ಗ: ನಗರದಲ್ಲಿ ಜೀವ ತೆಗೆಯುತ್ತಿರುವ ಹಂಪ್ ಗಳ ಹಿಂದೆ ಇದೀಗ ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಪ್ರತ್ಯೇಕ ಪ್ರತ್ಯೇಕವಾಗಿಯೇ ಬೆನ್ನು ಬಿದ್ದು ಹಂಪ್ ಗಳ ನಿರ್ಮಾಣಗಳಲ್ಲಿ ಆಗಿರುವ ತಪ್ಪು ಹುಡುಕಿ ಸರಿ ಮಾಡುತ್ತಿವೆ. ಒಂದು ಕಡೆ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡರು ಶಿವಮೊಗ್ಗದ ಹಂಪ್ ಗಳನ್ನು ಹುಡುಕಿ ಪರಿಶೀಲಿಸುತ್ತಿ ದ್ದಾರೆ. ಮತ್ತೊಂದು ಕಡೆ ಪೊಲೀಸ್ ಇಲಾಖೆಯ ಎಸ್ ಪಿ ನಿಖಿಲ್ ಬಿ. ಮತ್ತು ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ಸಿಬ್ಬಂದಿ ಗಳೊಂದಿಗೆ ಅವೈಜ್ಞಾನಿಕ ಹಂಪ್ ಗಳ ಹುಡುಕಾಟ ಆರಂಭಿಸಿ ಸ್ಥಳ ಪರಿಶೀಲಿಸಿ, ಸರಿ ಪಡಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿಸುವ ಉದ್ದೇಶದಿಂದ ಹಾಕಲಾದ ಹಂಪ್ ಗಳೇ ಜನರ ಜೀವಗಳ ಜೊತೆ ಆಟವಾಡಲಾರಂಭಿಸಿದ್ದು ಜನಾಕ್ರೋಶಕ್ಕೆ ಕಾರಣವಾಗುತ್ತಿದೆ. ಒಂದೆರಡು ಕಡೆ ಪ್ರಮುಖ ಜಾಗಗಳಲ್ಲಿ ಹಂಪ್ ಗಳನ್ನು ಹಾಕಲು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಜಂಟಿ ಕಾರ್ಯಾಚರಣೆ ಆರಂಭಿಸಿದಾಗ ಕೆಲವು ಕಡೆ ಜನರೇ ಒತ್ತಡ ಮಾಡಿ ಹಲವು ಕಡೆ ಹಂಪ್ ಗಳನ್ನು ಹಾಕಿಸಿಕೊಂಡಿದ್ದರು. ಅಪಘಾತ ಸಂಭವಿಸಿದ ರಸ್ತೆಗಳಲ್ಲಿರುವ ಹಂಪ್ ಗಳ ಬಳಿ ಎರಡೂ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲಿಸಿ ಅವುಗಳನ್ನು ತೆಗೆಸುವ ಅಥವಾ ಸರಿ ಮಾಡುವ ಕೆಲಸ ತಕ್ಷಣದಿಂದ ಮಾಡುತ್ತಿರುವುದರಿಂದ ಬಹಳಷ್ಟು ಜೀವಗಳು ಉಳಿಯುವುದರಲ್ಲಿ ಸಂದೇಹವಿಲ್ಲ.1
- ತೀರ್ಥಹಳ್ಳಿ: ಪಟ್ಟಣದ ಹೃದಯ ಭಾಗದಲ್ಲಿ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯು ನಿನ್ನೆಯಿಂದ ನಡೆಯುತ್ತಿದ್ದು ಎರಡನೇ ದಿನವಾದ ಇಂದು ಬುಧವಾರದ ಶ್ರೀ ದೇವಿಯ ಅಲಂಕಾರ ಮತ್ತು ಪೂಜೆ2
- ಭದ್ರಾವತಿ ತಾಲ್ಲೂಕು ಬಂಜಾರ ಸಂಘ ಹಾಗೂ ಸಮಾಜದ ವತಿಯಿಂದ ಅದ್ದೂರಿಯಾಗಿ ಶ್ರೀ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ1
- ದಾವಣಗೆರೆ : ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಜನರಲ್ಲಿ ಸುರಕ್ಷತೆ ಭಾವನೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ದಾವಣಗೆರೆ ನಗರದಲ್ಲಿ ಎಸ್ಪಿ ಶೇಖರ್ ಹೆಚ್ ಟಿ ಐಪಿಎಸ್ ರವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಪೊಲೀಸ್ ಫಥ ಸಂಚಲನವು ನಗರದ ಹೊಂಡದ ವೃತ್ತದಿಂದ ಆರಂಭವಾಗಿ ಅಂಬೇಡ್ಕರ್ ವೃತ್ತ, ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತಕ್ಕೆ ಮುಕ್ತಾಯವಾಗಿತು. ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತದಲ್ಲಿ ಸಮಾಪ್ತಿಯಾಯಿತು. ಪೊಲೀಸ್ ಪಥ ಸಂಚಲನದಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ ರವರು, ಪೊಲೀಸ್ ನಿರೀಕ್ಷಕರಾದ ಶ್ರೀ ವಸಂತ್, ಶ್ರೀ ಸುನೀಲ್ ಕುಮಾರ್, ಶ್ರೀಮತಿ ಶಿಲ್ಪಾ, ಶ್ರೀ ನಂಜುಂಡಸ್ವಾಮಿ, ಶ್ರೀ ಮಂಜುನಾಥ ಕುಪ್ಪೇಲೂರು, ಪಿ ಎಸ್ ಐ ರವರಾದ ಶ್ರೀ ರವಿನಾಯ್ಕ, ಶ್ರೀ ಸಚಿನ್, ಶ್ರೀ ಮತಿ ಶಕುಂತಲಾ ಇತರರು, ಆರ್ ಎ ಎಫ್ ತಂಡದ ಪೊಲೀಸ್ ನಿರೀಕ್ಷಕರಾದ ಶ್ರೀ ರಾಜು ಹಾಗೂ ಸಿಬ್ಬಂದಿಗಳು, ನಗರ ಪೊಲೀಸ್ ಹಾಗೂ ಡಿ ಎ ಆರ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು. ರಾಜು4
- ಶಿಗ್ಗಾವಿ, ತಾಲೂಕಿನ ಗಂಜೀಗಟ್ಟಿ ಗ್ರಾಮದಲ್ಲಿನ ಚರಮೂರ್ತೆಶ್ವರ ಮಠದಲ್ಲಿ ಶಿವರಾತ್ರಿ ಅಂಗವಾಗಿ ಭವ್ಯ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು ನಂತರ ಮಠದ ಆವರಣದಲ್ಲಿ ಸಾವಿರಾರೂ ಭಕ್ತರು ಪ್ರಸಾದ ಸವಿದರು. ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರುಗಿದವು ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.2
- Post by Nitishgoud Tadas Patil press r1
- ಈ ಸರ್ಕಾರಿ ಭೂಮಿ ಇದು ಜಾಗ ಮನೆಯನ್ನು ಕಟ್ಟಿಕೊಂಡರೆ ಇದು ವಿಜಯನಗರ ಜಿಲ್ಲೆ ಇಟಗಿ ಗ್ರಾಮದಲ್ಲಿರುವ ಸರ್ಕಾರಿ ಜಾಗ ಗ್ರಾಮ ಪಂಚಾಯತಿ ಇಟಗಿ ಕೋಟೆ ಸರ್ಕಾರಿ ಭೂಮಿಯಲ್ಲಿ ಗ್ರಾಮ ಸರ್ಕಾರಿ ಜಾಗವನ್ನು ಸರ್ಕಾರಿ ಜಾಗವನ್ನು ಕಟ್ಟಿಕೊಂಡಿದ್ದಾರೆ ಇದು ಅಂಗನವಾಡಿ ಶಾಲೆ ಮತ್ತು ಆಸ್ಪತ್ರೆ ಆಗಬೇಕೈತಿ ಇದು ಪಂಚಾಯತಿ ಅಧ್ಯಕ್ಷರ ಎಲ್ಲಾ ಸೇರಿಕೊಂಡು ಅಕ್ರಮವಾಗಿ ಬರೆದು ಕೊಟ್ಟಿದ್ದಾರೆ ಗ್ರಾಮ್ ಪಂಚಾಯ್ತಿ ನಂಬರ್ಸಿಗೆ ಬರೆದುಕೊಟ್ಟಿದ್ದಾರೆ1
- ತೀರ್ಥಹಳ್ಳಿ: ಪಟ್ಟಣಕ್ಕೆ ಹತ್ತಿರವಿರುವ ಕುರುವಳ್ಳಿಯ ಪುತ್ತಿಗೆ ಮಠದ ಪಕ್ಕದಲ್ಲಿರುವ ಗೌರಿಶಂಕರ ದೇವಸ್ಥಾನದಲ್ಲಿ ನಿನ್ನೆ ಶಿವರಾತ್ರಿಯ ಪ್ರಯುಕ್ತ ಶಿವನಿಗೆ ಮಹಾಪೂಜೆ ಸಲ್ಲಿಸಲಾಯಿತು.1