Shuru
Apke Nagar Ki App…
ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
ಸಿಹಿಮೋಗ್ಗೆ ಸುದ್ಧಿ ಕನ್ನಡ
ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ
More news from ಕರ್ನಾಟಕ and nearby areas
- ಶಿವಮೊಗ್ಗ-ವಂದೇ ಮಾತರಂ ಗೀತೆ ಎರಡೇ ಚರಣ: ಕಾರ್ಯಕ್ರಮ ದಿಂದ ಹೊರನಡೆದ ಶಾಸಕ ಶಿವಮೊಗ್ಗ: ವಂದೇ ಮಾತರಂ ಗೀತೆಯಲ್ಲಿ ಕೇವಲ ಎರಡು ಚರಣವನ್ನು ಹಾಡಿದ್ದಕ್ಕೆ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯ ಕ್ರಮದಿಂದ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೊರ ನಡೆದಿರುವ ಘಟನೆ ನಡೆದಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳ ವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮವನ್ನು ಜಿಲ್ಲಾಡಳಿತ ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಚನ್ನಬಸಪ್ಪ ಕಾರ್ಯಕ್ರಮ ದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಹಾಡಿದ್ದಕ್ಕೆ ವೇದಿಕೆಯಲ್ಲಿಯೇ ಅಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಅವರು ಇದ್ದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣ ಹಾಡಿ ಅಪಮಾನ ಮಾಡಲಾಗಿದೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಕಾರ್ಯಕ್ರಮದಲ್ಲಿ ಎರಡು ಚರಣ ಹಾಡಬೇಕೆಂದು ಎಲ್ಲಿ ಇದೆ, ಆದೇಶ ತೋರಿಸಿ ಎಂದು ಆಗ್ರಹಿಸಿದರು. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲೇಶಪ್ಪ ರಾಜ್ಯ ಸರ್ಕಾರದ ಆದೇಶವನ್ನು ತೋರಿಸಿದರು. ಇದಕ್ಕೆ ಗರಂ ಆದ ಶಾಸಕರು ಹಾಗಾದ್ರೆ ಕೇಂದ್ರ ಸರ್ಕಾರದ ಆದೇಶವನ್ನು ಮೊಟಕುಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ವಂದೇ ಮಾತರಂ ಗೀತೆಗೆ ಅಪಮಾನ ಮಾಡಿದ ವೇದಿಕೆಯಲ್ಲಿ ನಾನು ಇರಲ್ಲ ಎಂದು ಭವನದಿಂದ ಹೊರ ನಡೆದರು. ನಂತರ ತಮ್ಮ ಕಚೇರಿಯಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಸೇರಿ ಒಂದು ಕಾನೂನು ಮಾಡುತ್ತದೆ. ಆದರೆ ರಾಜ್ಯ ಸರ್ಕಾರವು ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳು ಇರುವ ಕಾರ್ಯಕ್ರಮ ದಲ್ಲಿ ಮಾತ್ರ ಪೂರ್ಣ ಗೀತೆ ಹಾಡಬೇಕು, ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಕೇವಲ ಎರಡು ಚರಣ ಹಾಡಬೇಕೆಂದು ಆದೇಶ ಮಾಡಿದೆ. ಇದು ಸರಿ ಅಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಣಯ ವನ್ನು ತೆಗೆದುಕೊಂಡು ವಂದೇ ಮಾತರಂ ಗೀತೆಗೆ 150 ವರ್ಷವಾದ ಕಾರಣ ಗೀತೆಯನ್ನು ಗಾಯನ ಮಾಡಬೇಕೆಂದು ಸಂಸತ್ತಿನಲ್ಲಿ ತಿದ್ದುಪಡಿ ಮಾಡಲಾಗಿದೆ. ಇದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಆದರೆ ಇದನ್ನು ರಾಜ್ಯ ಸರ್ಕಾರ ತನ್ನ ಕ್ಯಾಬಿನೆಟ್ನಲ್ಲಿ ತೀರ್ಮಾನ ಮಾಡಲಾಗಿದೆ ಎಂದು ವಂದೇ ಮಾತರಂನ ಎರಡು ಚರಣ ಮಾತ್ರ ಹಾಡಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಇಂದು ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆಯಂದು ವಂದೇ ಮಾತರಂ ಗೀತೆಯನ್ನು ಕೇವಲ ಎರಡು ಚರಣವನ್ನು ಹಾಡಲಾಯಿತು. ಇದನ್ನು ಪ್ರಶ್ನಿಸಿದರೆ, ರಾಜ್ಯ ಸರ್ಕಾರದ ಆದೇಶ ಎಂದು ಜಿಲ್ಲಾಧಿಕಾರಿ ಗಳು ತಿಳಿಸಿದ್ದಾರೆ. ಇದರಿಂದ ನಾನು ಕಾರ್ಯಕ್ರಮದಿಂದ ಹೊರಗೆ ಬಂದಿದ್ದೇನೆ ಎಂದು ಶಾಸಕ ಚನ್ನಬಸಪ್ಪ ತಿಳಿಸಿದರು. ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು ಇರುವ ಕಾರ್ಯಕ್ರಮ ಹೊರತುಪಡಿಸಿ ಉಳಿದ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡಿನ ಎರಡು ಚರಣ ಮಾತ್ರ ಹಾಡಬೇಕೆಂದು ರಾಜ್ಯ ಸರ್ಕಾರ ಇತ್ತೀಚಿಗೆ ಆದೇಶ ಮಾಡಿದೆ. ಹಾಗಾದ್ರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪಿಎಂ ಅವರಿಗೆ ಒಂದು ಕಾನೂನು, ಸಾಮಾನ್ಯ ಜನರಿಗೆ ಒಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು. ಕಾನೂನು ಅನ್ನು ಗಾಳಿಗೆ ತೂರುವ ಕೆಲಸ ಮಾಡುತ್ತಿದ್ದಿರಾ, ನೀವು ಈ ದೇಶದ ಪ್ರಜೆಗಳು ಅಲ್ವಾ ಎಂದು ಅವರು ಪ್ರಶ್ನಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಬೇರೆ ಬೇರೆ ಕಾನೂನು ಇದೆಯೇ ಎಂದರು. ಜನಗಣಮನ ಗೀತೆಯಲ್ಲಿ ಎಲ್ಲ ರಾಜ್ಯಗಳ ಹೆಸರು ಇದೆಯೇ ಎಂದು ಪ್ರಶ್ನಿಸಿದರು. ಇದು ಅಕ್ಷಮ್ಯ ಅಪರಾಧವಾಗಿದೆ. ನ್ಯಾಯಾಧೀಶರ ಮುಂದೆ ಇಟ್ಟುಕೊಂಡು ನ್ಯಾಯಾಂಗಕ್ಕೆ ಕೊಡಲಿ ಪೆಟ್ಟು ಕೊಡುವ ಕೆಲಸ ಮಾಡಲಾ ಗುತ್ತಿದೆ. ಸಂವಿಧಾನಕ್ಕೆ ಅಪಪ್ರಚಾರ ಮಾಡಲು ಶಾಸಕ ಚನ್ನಿ ಬಿಡಲ್ಲ ಎಂದು ಹೇಳಿದರು. ಸರ್ಕಾರಿ ಕಾರ್ಯಕ್ರಮದಲ್ಲೂ ಗೀತೆಯನ್ನು ಪೂರ್ಣ ಹಾಡಬೇಕಿತ್ತು. ನೀವು ನಿರ್ಣಯ ಮಾಡಿದಂತೆ ನಡೆಯಲ್ಲ. ಕಾಂಗ್ರೆಸ್ ಪಕ್ಷ ವನ್ನು ಅಲ್ಪಸಂಖ್ಯಾಂತರಿಗೆ ಅಡ ಇಡಲಾಗಿದೆ ಎಂದು ಶಾಸಕ ಚನ್ನಬಸಪ್ಪ ಕಿಡಿಕಾರಿದ್ದಾರೆ. ಇದನ್ನು ಗಂಭೀರವಾಗಿ ತೆಗೆದುಕೊಂಡು ಹೋಗಬೇಕಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. 136 ಜನ ಇದ್ದೇವೆಂದು ಕಾಂಗ್ರೆಸ್ ಏನು ಮಾಡಿದ್ರು ನಡೆಯುತ್ತದೆ ಎಂದು ತಿಳಿದುಕೊಂಡರೆ ತಪ್ಪು. ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ. ಬಂಕಿಮಚಂದ್ರ ಚಟರ್ಜಿ ಆರಾಧ್ಯ ದೈವ ಎಂದರು. ಸ್ವಾತಂತ್ರ್ಯ ಹೋರಾಟಕ್ಕೆ ವಂದೇ ಮಾತರಂ ಬೇಕಿತ್ತು. ಆದರೆ ಈಗ ಬೇಡವೇ ಎಂದು ಪ್ರಶ್ನಿಸಿದರು. ಸಂವಿಧಾನಕ್ಕೆ ಬಿಕ್ಕಟ್ಟಿನ ಸಂದರ್ಭ ಬಂದಿದೆ. ಇದನ್ನು ರಾಜ್ಯ ಸರ್ಕಾರ ಹುಟ್ಟುಹಾಕಿದೆ. ನಮ್ಮಲ್ಲಿ ಭಾರತೀಯ ನೀತಿ ಸಂಹಿತೆ ಇದೆಯೇ ಹೊರತು ಕರ್ನಾಟಕ ನೀತಿ ಸಂಹಿತೆ ಅಂತ ಇಲ್ಲ. ಮುಂದಿನ ವಾರ ನಡೆಯುವ ಅಧಿವೇಶನದಲ್ಲಿ ಇದನ್ನು ಪ್ರಶ್ನೆ ಮಾಡಲಾಗುವುದು ಎಂದರು.1
- ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದು, ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ /ಸಿಡಿಮದ್ದುಗಳನ್ನು ಸಿಡಿಸುವುದರಿಂದ, ಮೆರವಣಿಗೆ ಮಾರ್ಗದಲ್ಲಿರುವ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇದ್ದು, ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯೋವೃದ್ಧರಿಗೆ. ಮಕ್ಕಳಿಗೆ ತೊಂದರೆಯಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ಹಾಗೂ ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 35. 36ರಡಿಯಲ್ಲಿ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಅಕ್ಟೋಬರ್ 5 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಾಂತ ಎಲ್ಲಾ ರೀತಿಯ ಕಲರ್ ಪೇಪರ್ బ్లాస్టింగా. ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ.1
- ಲಕ್ಷಾಂತರ ಭಕ್ತರ ನಡುವೆ ಸಡಗರ ಸಂಭ್ರಮದಿಂದ ಜರುಗಿದ ಎರಡು ರಾಜ್ಯಗಳನ್ನು ಬೆಸುವ ಗೌರಸಮುದ್ರ ಮಾರಮ್ಮ ಜಾತ್ರೆ1
- "ಗ್ರಾನೈಟ್ ಕಲ್ಲುಗಳಿಂದ ನಿರ್ಮಿಸಲಾದ ಈ ಮಸೀದಿಯ ವಿಶೇಷತೆ ಏನು? "1
- ವಿವಿಧೆಡೆ ಅದ್ದೂರಿ ಗಣೇಶೋತ್ಸವ, ಭವ್ಯ ಶೋಭಾಯಾತ್ರೆ ಮೆರವಣಿಗೆ... ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ನಗರದ ಉಳ್ಳಾಲ ವಿದ್ಯಾವಿನಾಯಕ ಉತ್ಸವ ಸಮಿತಿ ವತಿಯಿಂದ 43 ನೇ ವರ್ಷದ ಗಣೇಶೋತ್ಸವ ಅಚರಣೆ ನಡೆದಿದೆ.ಹಾಗೂ ಬಗಂಬಿಲ ಸತ್ಯನಾರಾಯಣ ಮಂದಿರದಲ್ಲಿ 19 ವರ್ಷದ ಗಣೇಶೋತ್ಸವದ ಶೋಭಾಯಾತ್ರೆ ಮೆರವಣಿಗೆ ಅದ್ದೂರಿಯಾಗಿ ಜರುಗಿತು.ಇನ್ನೂ ಮೆರವಣಿಗೆಯಲ್ಲಿ ಕುಣಿತ ಭಜನಾ ತಂಡ, ಚೆಂಡೆ, ಸ್ತಬ್ಧ ಚಿತ್ರಗಳು ಭಾಗ ವಹಿಸಿದ್ದವು,1
- ಬರದ ಬೇಗುದಿ: ಶೇಂಗಾ ಬೆಳೆ ಉಳಿಸಲು ಟ್ಯಾಂಕರ್ ನೀರಿನ ಮೊರೆ: ಸಾಲ ಮಾಡಿ ನೀರುಣಿಸುತ್ತಿರುವ ರೈತರು ಕೂಡ್ಲಿಗಿ: ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಶೇಂಗಾ ಬೆಳೆ ಒಣಗುವ ಹಂತಕ್ಕೆ ತಲುಪಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ. ಗುಡೇಕೋಟೆ ಗ್ರಾಮದ ರೈತ ಶಾಮ್ ರಾವ್ ಅವರು ಮಳೆಯ ನಿರೀಕ್ಷೆಯಲ್ಲಿದ್ದ ಶೇಂಗಾ ಬೆಳೆಗೆ ಟ್ಯಾಂಕರ್ ಮೂಲಕ ನೀರುಣಿಸುತ್ತಿರುವ ದೃಶ್ಯ ರೈತರ ಸಂಕಷ್ಟಕ್ಕೆ ಕನ್ನಡಿ ಹಿಡಿದಂತಾಗಿದೆ. ಶಾಮ್ ರಾವ್ ಅವರು ತಮ್ಮ ಮೂರುವರೆ ಎಕರೆ ಜಮೀನಿನಲ್ಲಿ ಶೇಂಗಾ ಬಿತ್ತನೆ ಮಾಡಿದ್ದು, ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದರು. ಆದರೆ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆ ತೇವಾಂಶದ ಕೊರತೆಯಿಂದ ಒಣಗುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಟ್ರ್ಯಾಕ್ಟರ್ ಮೂಲಕ ಟ್ಯಾಂಕರ್ ನೀರನ್ನು ಹೊಲಕ್ಕೆ ಸಾಗಿಸಿ ಶೇಂಗಾ ಬೆಳೆಗೆ ನೀರು ಹಾಯಿಸುತ್ತಿದ್ದಾರೆ. ಈಗಾಗಲೇ ಒಂದು ಟ್ಯಾಂಕರ್ ನೀರಿಗೆ ₹500ರಂತೆ 10 ಟ್ಯಾಂಕರ್ ನೀರು ಹಾಕಲಾಗಿದ್ದು, ನೀರಿಗಾಗಿಯೇ ಸುಮಾರು ₹5,000 ವೆಚ್ಚವಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಬಾರದಿದ್ದರೆ ಇನ್ನಷ್ಟು ನೀರು ಹಾಕಬೇಕಾದ ಅನಿವಾರ್ಯತೆ ರೈತನ ಮುಂದಿದೆ.1
- 🚨 ಶಿವಮೊಗ್ಗದಲ್ಲಿ ಆಹಾರ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ; ಕೊಳೆತ ಹಣ್ಣು ಪತ್ತೆ, ಜ್ಯೂಸ್ ಸೆಂಟರ್ ಸೀಜ್! ಕೊಳೆತ ಹಣ್ಣು ಮಾರಾಟಕ್ಕೆ ಸಿದ್ಧತೆ? ಶಿವಮೊಗ್ಗದಲ್ಲಿ ತನು ಜ್ಯೂಸ್ ಸೆಂಟರ್ ಸೀಜ್1
- ಶಿವಮೊಗ್ಗ-ಕೊಳೆತ ಹಣ್ಣು ಗಳಿಂದ ಜ್ಯೂಸ್ ತಯಾರಿ ಆರೋಪ:ಎಸಿ ಡಾ. ಮೈತ್ರಿ ನೇತೃತ್ವದಲ್ಲಿ ದಾಳಿ ಶಿವಮೊಗ್ಗ: ಬಿಸಿಲಿನ ತಾಪಕ್ಕೆ ತಂಪು ನೀಡುವ ಹೆಸರಿನಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದರೆಂಬಆರೋಪ ಕೇಳಿಬಂದಿರುವ ತಿಲಕನಗರದ ತನು ಜ್ಯೂಸ್ ಸೆಂಟರ್ ಮೇಲೆ ಉಪವಿಭಾಗಾಧಿಕಾರಿ ಡಾ.ಮೈತ್ರಿ ನೇತೃತ್ವ ದಲ್ಲಿ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಖಡಕ್ ಕ್ರಮ ಕೈಗೊಂಡಿದೆ. ಸಾರ್ವಜನಿಕರಿಂದ ಬಂದ ದೂರು ಗಳ ಹಿನ್ನೆಲೆಯಲ್ಲಿ ಎಸಿ ಡಾ.ಮೈತ್ರಿ, ತಹಶೀಲ್ದಾರ್ ರಾಜೀವ್ ಹಾಗೂ ಆಹಾರ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ತನು ಜ್ಯೂಸ್ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ, ವಿವಿಧ ಬಗೆಯ ಹಣ್ಣುಗಳು ಕೊಳೆತ ಹಾಗೂ ಹಾಳಾದ ಸ್ಥಿತಿಯಲ್ಲಿ ಕಂಡು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗ್ರೇಪ್ಸ್, ಚಿಕ್ಕು, ಡ್ರ್ಯಾಗನ್ ಫ್ರೂಟ್, ಸೇಬು, ದಾಳಿಂಬೆ ಸೇರಿದಂತೆ ಹಲವು ಹಣ್ಣುಗಳ ಮೇಲೆ ಫಂಗಸ್ ಮತ್ತು ಬೂಷ್ಟಿನಂತಹ ಬೆಳವಣಿಗೆ ಕಂಡುಬಂದಿದ್ದು, ಅವುಗಳನ್ನು ಜ್ಯೂಸ್ ತಯಾರಿಕೆಗೆ ಬಳಸ ಲಾಗುತ್ತಿತ್ತೆಂಬುದು ಪರಿಶೀಲನೆಯ ವೇಳೆ ಗಮನಕ್ಕೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಗ್ರಾಹಕರ ಕಣ್ಣಿಗೆ ತಂಪು.ಒಳಗೆ ಮಾತ್ರ ಕೊಳೆತ ಹಣ್ಣುಗಳ ದಾಸ್ತಾನು? ತನು ಜ್ಯೂಸ್ ಸೆಂಟರ್‌ನಲ್ಲಿ ಬಗೆಬಗೆಯ ಜ್ಯೂಸ್‌ಗಳು ಕಡಿಮೆ ದರದಲ್ಲಿ ದೊರೆಯು ತ್ತವೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಹಲವರು ಇಲ್ಲಿಗೆ ಬರುತ್ತಿದ್ದರು. ಹೊರಗಿನಿಂದ ನೋಡಿದಾಗ ಎಲ್ಲವೂ ಸ್ವಚ್ಛವಾಗಿಯೇ ಕಾಣುತ್ತಿದ್ದರೂ, ಅಧಿಕಾರಿಗಳ ಪರಿಶೀಲನೆಯ ವೇಳೆ ಒಳಭಾಗ ದಲ್ಲಿ ಕಂಡುಬಂದ ಪರಿಸ್ಥಿತಿ ಮಾತ್ರ ಆಘಾತಕಾರಿಯಾಗಿತ್ತು ಎಂದು ಎಸಿ ತಿಳಿಸಿದ್ದಾರೆ. ಜ್ಯೂಸ್‌ಗೆ ಬಳಸುವ ಹಣ್ಣುಗಳನ್ನು ತಾಜಾ ಸ್ಥಿತಿಯಲ್ಲಿ ಇಡುವ ಬದಲು, ದೀರ್ಘಕಾಲ ಸಂಗ್ರಹಿಸಿಟ್ಟಿರುವಂತೆ ಕಂಡುಬಂದಿದ್ದು, ಕೆಲವು ಹಣ್ಣು ಗಳು ಕೊಳೆತು ಹೋಗಿದ್ದವು. ಫ್ರೀಜರ್‌ನಲ್ಲಿಯೂ ಕಳಪೆ ಸ್ಥಿತಿಯ ಹಣ್ಣು ಗಳು ಕಂಡುಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಅಧಿಕಾರಿಗಳ ಪರಿಶೀಲನೆ ವೇಳೆ ಗ್ರೇಪ್ಸ್, ಚಿಕ್ಕು, ಡ್ರ್ಯಾಗನ್ ಫ್ರೂಟ್, ಸೇಬು, ದಾಳಿಂಬೆ ಸೇರಿದಂತೆ ವಿವಿಧ ಹಣ್ಣುಗಳು ಕೊಳೆತ ಸ್ಥಿತಿ ಯಲ್ಲಿ ಕಂಡುಬಂದಿವೆ ಎಂದು ತಿಳಿದುಬಂದಿದೆ. ಕೆಲವು ಹಣ್ಣುಗಳ ಮೇಲೆ ಫಂಗಸ್, ಬೂಷ್ಟಿನಂತಹ ಬೆಳವಣಿಗೆ ಕಂಡುಬಂದಿದ್ದು, ಇವುಗಳನ್ನು ಸಾರ್ವಜನಿಕರು ಸೇವಿಸುವುದು ಸೂಕ್ತವಲ್ಲ ಎಂಬ ಪ್ರಾಥಮಿಕ ಅಭಿಪ್ರಾಯ ವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಹಣ್ಣುಗಳು ಎಷ್ಟು ದಿನಗಳಿಂದ ಸಂಗ್ರಹಿಸ ಲಾಗಿತ್ತು ಎಂಬುದನ್ನು ಕೇವಲ ಮೇಲ್ನೋಟದ ಪರಿಶೀಲ ನೆಯ ಆಧಾರದ ಮೇಲೆ ನಿಖರ ವಾಗಿ ಹೇಳಲು ಸಾಧ್ಯವಿಲ್ಲ. ಮಾದರಿಗಳನ್ನು ವಿಶ್ಲೇಷಣೆಗೆ ಕಳುಹಿಸಿದ ನಂತರವೇ ಅದರ ಗುಣಮಟ್ಟ ಹಾಗೂ ಸ್ಥಿತಿಯ ಬಗ್ಗೆ ಹೆಚ್ಚಿನ ಸ್ಪಷ್ಟತೆ ದೊರೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.1
- ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ. ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.2