logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಳ್ಳಾರಿಯ ಅಭಿವೃದ್ಧಿ ಹರಿಕಾರರು ಹಾಗೂ ಮಾಜಿ ಶಾಸಕರಾದ ಗಾಲಿ ಸೋಮಶೇಖರ್ ರೆಡ್ಡಿ ಅವರ ಜನ್ಮದಿನದ ಅಂಗವಾಗಿ, ಯುವ ಮುಖಂಡ ಹುಂಡೇಕರ್ ರಾಜೇಶ್ ಅವರ ನೇತೃತ್ವದಲ್ಲಿ ಕೊಲ್ಮಿ ಚೌಕ್ ವೃತ್ತ ಮತ್ತು ದೊಡ್ಡ ಮಾರ್ಕೆಟ್ ರಸ್ತೆಯಲ್ಲಿ ವಿಶೇಷ ಅನ್ನದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಗಾಲಿ ಸೋಮಶೇಖರ್ ರೆಡ್ಡಿ ಅವರು ಸ್ವತಃ ಆಗಮಿಸಿ ಚಾಲನೆ ನೀಡಿದರು ಹಾಗೂ ಸಾರ್ವಜನಿಕರೊಂದಿಗೆ ತಮ್ಮ ಜನ್ಮದಿನದ ಸಂಭ್ರಮವನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಸಾವಿರಾರು ಮಂದಿಗೆ ಅನ್ನದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸ್ವಾಮಿ ನಾಯಕ್, ರಾಮಲಿ ನಾಯಕ್, ಹುಂಡೇಕರ್ ರಾಕೇಶ್, ದುರ್ಗಪ್ಪ, ಗಾದಿಲಿಂಗ, ರಾಮರೆಡ್ಡಿ, ದೇವರಾಜ್, ಹೊನ್ನೂರ್ ಸ್ವಾಮಿ, ಪವನ, ವಿನೋದ, ಜಗ್ಗ, ಮೆಹಬೂಬ್ ಸೇರಿದಂತೆ ಅನೇಕ ಮುಖಂಡರು ಹಾಗೂ ನೂರಾರು ಅಭಿಮಾನಿಗಳು ಭಾಗವಹಿಸಿ ಗಾಲಿ ಸೋಮಶೇಖರ್ ರೆಡ್ಡಿ ಅವರಿಗೆ ಶುಭಾಶಯ ಕೋರಿದರು.

2 hrs ago
user_A News24Kannada
A News24Kannada
Newsagent Ballari, Karnataka•
2 hrs ago

ಬಳ್ಳಾರಿಯ ಅಭಿವೃದ್ಧಿ ಹರಿಕಾರರು ಹಾಗೂ ಮಾಜಿ ಶಾಸಕರಾದ ಗಾಲಿ ಸೋಮಶೇಖರ್ ರೆಡ್ಡಿ ಅವರ ಜನ್ಮದಿನದ ಅಂಗವಾಗಿ, ಯುವ ಮುಖಂಡ ಹುಂಡೇಕರ್ ರಾಜೇಶ್ ಅವರ ನೇತೃತ್ವದಲ್ಲಿ ಕೊಲ್ಮಿ ಚೌಕ್ ವೃತ್ತ ಮತ್ತು ದೊಡ್ಡ ಮಾರ್ಕೆಟ್ ರಸ್ತೆಯಲ್ಲಿ ವಿಶೇಷ ಅನ್ನದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಗಾಲಿ ಸೋಮಶೇಖರ್ ರೆಡ್ಡಿ ಅವರು ಸ್ವತಃ ಆಗಮಿಸಿ ಚಾಲನೆ ನೀಡಿದರು ಹಾಗೂ ಸಾರ್ವಜನಿಕರೊಂದಿಗೆ ತಮ್ಮ ಜನ್ಮದಿನದ ಸಂಭ್ರಮವನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಸಾವಿರಾರು ಮಂದಿಗೆ ಅನ್ನದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸ್ವಾಮಿ ನಾಯಕ್, ರಾಮಲಿ ನಾಯಕ್, ಹುಂಡೇಕರ್ ರಾಕೇಶ್, ದುರ್ಗಪ್ಪ, ಗಾದಿಲಿಂಗ, ರಾಮರೆಡ್ಡಿ, ದೇವರಾಜ್, ಹೊನ್ನೂರ್ ಸ್ವಾಮಿ, ಪವನ, ವಿನೋದ, ಜಗ್ಗ, ಮೆಹಬೂಬ್ ಸೇರಿದಂತೆ ಅನೇಕ ಮುಖಂಡರು ಹಾಗೂ ನೂರಾರು ಅಭಿಮಾನಿಗಳು ಭಾಗವಹಿಸಿ ಗಾಲಿ ಸೋಮಶೇಖರ್ ರೆಡ್ಡಿ ಅವರಿಗೆ ಶುಭಾಶಯ ಕೋರಿದರು.

More news from Karnataka and nearby areas
  • ಬಳ್ಳಾರಿಯ ಅಭಿವೃದ್ಧಿ ಹರಿಕಾರರು ಹಾಗೂ ಮಾಜಿ ಶಾಸಕರಾದ ಗಾಲಿ ಸೋಮಶೇಖರ್ ರೆಡ್ಡಿ ಅವರ ಜನ್ಮದಿನದ ಅಂಗವಾಗಿ, ಯುವ ಮುಖಂಡ ಹುಂಡೇಕರ್ ರಾಜೇಶ್ ಅವರ ನೇತೃತ್ವದಲ್ಲಿ ಕೊಲ್ಮಿ ಚೌಕ್ ವೃತ್ತ ಮತ್ತು ದೊಡ್ಡ ಮಾರ್ಕೆಟ್ ರಸ್ತೆಯಲ್ಲಿ ವಿಶೇಷ ಅನ್ನದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಗಾಲಿ ಸೋಮಶೇಖರ್ ರೆಡ್ಡಿ ಅವರು ಸ್ವತಃ ಆಗಮಿಸಿ ಚಾಲನೆ ನೀಡಿದರು ಹಾಗೂ ಸಾರ್ವಜನಿಕರೊಂದಿಗೆ ತಮ್ಮ ಜನ್ಮದಿನದ ಸಂಭ್ರಮವನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಸಾವಿರಾರು ಮಂದಿಗೆ ಅನ್ನದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸ್ವಾಮಿ ನಾಯಕ್, ರಾಮಲಿ ನಾಯಕ್, ಹುಂಡೇಕರ್ ರಾಕೇಶ್, ದುರ್ಗಪ್ಪ, ಗಾದಿಲಿಂಗ, ರಾಮರೆಡ್ಡಿ, ದೇವರಾಜ್, ಹೊನ್ನೂರ್ ಸ್ವಾಮಿ, ಪವನ, ವಿನೋದ, ಜಗ್ಗ, ಮೆಹಬೂಬ್ ಸೇರಿದಂತೆ ಅನೇಕ ಮುಖಂಡರು ಹಾಗೂ ನೂರಾರು ಅಭಿಮಾನಿಗಳು ಭಾಗವಹಿಸಿ ಗಾಲಿ ಸೋಮಶೇಖರ್ ರೆಡ್ಡಿ ಅವರಿಗೆ ಶುಭಾಶಯ ಕೋರಿದರು.
    1
    ಬಳ್ಳಾರಿಯ ಅಭಿವೃದ್ಧಿ ಹರಿಕಾರರು ಹಾಗೂ ಮಾಜಿ ಶಾಸಕರಾದ ಗಾಲಿ ಸೋಮಶೇಖರ್ ರೆಡ್ಡಿ ಅವರ ಜನ್ಮದಿನದ ಅಂಗವಾಗಿ, ಯುವ ಮುಖಂಡ ಹುಂಡೇಕರ್ ರಾಜೇಶ್ ಅವರ ನೇತೃತ್ವದಲ್ಲಿ ಕೊಲ್ಮಿ ಚೌಕ್ ವೃತ್ತ ಮತ್ತು ದೊಡ್ಡ ಮಾರ್ಕೆಟ್ ರಸ್ತೆಯಲ್ಲಿ ವಿಶೇಷ ಅನ್ನದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಗಾಲಿ ಸೋಮಶೇಖರ್ ರೆಡ್ಡಿ ಅವರು ಸ್ವತಃ ಆಗಮಿಸಿ ಚಾಲನೆ ನೀಡಿದರು ಹಾಗೂ ಸಾರ್ವಜನಿಕರೊಂದಿಗೆ ತಮ್ಮ ಜನ್ಮದಿನದ ಸಂಭ್ರಮವನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಸಾವಿರಾರು ಮಂದಿಗೆ ಅನ್ನದಾನ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಸ್ವಾಮಿ ನಾಯಕ್, ರಾಮಲಿ ನಾಯಕ್, ಹುಂಡೇಕರ್ ರಾಕೇಶ್, ದುರ್ಗಪ್ಪ, ಗಾದಿಲಿಂಗ, ರಾಮರೆಡ್ಡಿ, ದೇವರಾಜ್, ಹೊನ್ನೂರ್ ಸ್ವಾಮಿ, ಪವನ, ವಿನೋದ, ಜಗ್ಗ, ಮೆಹಬೂಬ್ ಸೇರಿದಂತೆ ಅನೇಕ ಮುಖಂಡರು ಹಾಗೂ ನೂರಾರು ಅಭಿಮಾನಿಗಳು ಭಾಗವಹಿಸಿ ಗಾಲಿ ಸೋಮಶೇಖರ್ ರೆಡ್ಡಿ ಅವರಿಗೆ ಶುಭಾಶಯ ಕೋರಿದರು.
    user_A News24Kannada
    A News24Kannada
    Newsagent Ballari, Karnataka•
    2 hrs ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಜೂನ್ 20ರಂದು ಎಐಟಿಯುಸಿ ನೇತೃತ್ವದಲ್ಲಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ತಮ್ಮ ಹತ್ತಾರು ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ತಹಶಿಲ್ದಾರರ ಮುಖಾಂತರ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಪ್ರತಿಭಟನಾಕಾರರು ಮಹಾತ್ಮಗಾಂಧಿ ರಾಷ್ಟ್ರೀಯ ಸ್ಮಾರಕದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಪಟ್ಟಣದ ಪ್ರಮುಖ ಬೀದಿಗಳು ಮತ್ತು ವೃತ್ತಗಳ ಮೂಲಕ ಸಾಗಿ ತಾಲೂಕು ಆಡಳಿತ ಸೌಧವನ್ನು ತಲುಪಿದರು. ಈ ವೇಳೆ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು. ನಂತರ ಹೆಚ್.ವೀರಣ್ಣ ಅವರ ನೇತೃತ್ವದಲ್ಲಿ ತಹಶಿಲ್ದಾರರಾದ ವಿ.ಕೆ.ನೇತ್ರಾವತಿ ಯವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೇಡರೇಷನ್‌ನ ತಾಲೂಕು ಪದಾಧಿಕಾರಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ನೂರಾರು ಸದಸ್ಯರು ಭಾಗವಹಿಸಿದ್ದರು. ಅಕ್ಷರ ದಾಸೋಹ ಇಲಾಖಾಧಿಕಾರಿಗಳು ಸಹ ಹಾಜರಿದ್ದರು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಜೂನ್ 20ರಂದು ಎಐಟಿಯುಸಿ ನೇತೃತ್ವದಲ್ಲಿ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ತಮ್ಮ ಹತ್ತಾರು ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ತಹಶಿಲ್ದಾರರ ಮುಖಾಂತರ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಪ್ರತಿಭಟನಾಕಾರರು ಮಹಾತ್ಮಗಾಂಧಿ ರಾಷ್ಟ್ರೀಯ ಸ್ಮಾರಕದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಪಟ್ಟಣದ ಪ್ರಮುಖ ಬೀದಿಗಳು ಮತ್ತು ವೃತ್ತಗಳ ಮೂಲಕ ಸಾಗಿ ತಾಲೂಕು ಆಡಳಿತ ಸೌಧವನ್ನು ತಲುಪಿದರು.

ಈ ವೇಳೆ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು. ನಂತರ ಹೆಚ್.ವೀರಣ್ಣ ಅವರ ನೇತೃತ್ವದಲ್ಲಿ ತಹಶಿಲ್ದಾರರಾದ ವಿ.ಕೆ.ನೇತ್ರಾವತಿ ಯವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೇಡರೇಷನ್‌ನ ತಾಲೂಕು ಪದಾಧಿಕಾರಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ನೂರಾರು ಸದಸ್ಯರು ಭಾಗವಹಿಸಿದ್ದರು. ಅಕ್ಷರ ದಾಸೋಹ ಇಲಾಖಾಧಿಕಾರಿಗಳು ಸಹ ಹಾಜರಿದ್ದರು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    10 hrs ago
  • ಮಾನ್ವಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಹಿಂದೂ ಜನಜಾಗೃತಿ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಮೂಲಕ ಈ ಮನವಿ ರವಾನಿಸಲಾಗಿದೆ. ರಾಜ್ಯದ ಹರಿಹರ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರೊ. ಕೆ.ಎಸ್. ಭಗವಾನ್ ಅವರು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹೇಳಿಕೆಗಳನ್ನು ನೀಡಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಹಿಂದೂ ಜನಜಾಗೃತಿ ಒತ್ತಾಯಿಸಿದೆ. ಹಿಂದೂ ಜನಜಾಗೃತಿ ಮಾನ್ವಿ ಶಾಖಾ ಸಮನ್ವಯಕ ಮಾರುತಿ ನಾಯಕ ಅವರು ಮಾತನಾಡಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಜೂನ್ 9 ರಂದು ಹರಿಹರದ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ಆಯೋಜಿಸಲಾಗಿದ್ದ ಪ್ರೊ. ಬಿ. ಕೃಷ್ಣಪ್ಪ ಜಯಂತಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ವೇದಿಕೆಯಲ್ಲಿ ಪ್ರೊ. ಕೆ.ಎಸ್. ಭಗವಾನ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಉದ್ದೇಶಪೂರ್ವಕವಾಗಿ ಹಿಂದೂಗಳು ಅತ್ಯಂತ ಶ್ರದ್ಧೆ ಮತ್ತು ಭಕ್ತಿಗಳಿಂದ ಪೂಜಿಸುವ ಪ್ರಭು ಶ್ರೀರಾಮರ ಕುರಿತು ಆಧಾರರಹಿತ ಆರೋಪಗಳನ್ನು ಮಾಡುವುದರ ಜೊತೆಗೆ, ಹಿಂದೂ ದೇವತೆಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದರು. ಪ್ರೊ. ಕೆ.ಎಸ್. ಭಗವಾನ್ ಅವರ ಹೇಳಿಕೆಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ನಿರಂತರವಾಗಿ ಧಕ್ಕೆ ಉಂಟುಮಾಡುತ್ತಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟುಮಾಡಿವೆ ಎಂದು ಮಾರುತಿ ನಾಯಕ ತಿಳಿಸಿದರು. ಆದ್ದರಿಂದ, ಅವರ ವಿರುದ್ಧ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಸುರೇಶ ನಾಡಗೌಡ, ನಾಗರಾಜ ಶೆಟ್ಟಿ, ವರಪ್ರಸಾದ, ದತ್ತು ಚಲ್ಮಲ್, ಪ್ರಭು ಜೇಗರಕಲ್ಸ್, ರಾಜಶೇಖರ, ನಿಂಗು ಮಡಿವಾಳ, ದುರುಗಪ್ಪ, ಶರಣು ಆಂಜನೇಯ್ಯ ನೀರಮಾನ್ವಿ, ಬಿ.ಪಿ. ರಾಘವೇಂದ್ರ, ಬಸವಪುತ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    1
    ಮಾನ್ವಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಹಿಂದೂ ಜನಜಾಗೃತಿ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಮೂಲಕ ಈ ಮನವಿ ರವಾನಿಸಲಾಗಿದೆ. ರಾಜ್ಯದ ಹರಿಹರ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರೊ. ಕೆ.ಎಸ್. ಭಗವಾನ್ ಅವರು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹೇಳಿಕೆಗಳನ್ನು ನೀಡಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಹಿಂದೂ ಜನಜಾಗೃತಿ ಒತ್ತಾಯಿಸಿದೆ.

ಹಿಂದೂ ಜನಜಾಗೃತಿ ಮಾನ್ವಿ ಶಾಖಾ ಸಮನ್ವಯಕ ಮಾರುತಿ ನಾಯಕ ಅವರು ಮಾತನಾಡಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಜೂನ್ 9 ರಂದು ಹರಿಹರದ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ಆಯೋಜಿಸಲಾಗಿದ್ದ ಪ್ರೊ. ಬಿ. ಕೃಷ್ಣಪ್ಪ ಜಯಂತಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ವೇದಿಕೆಯಲ್ಲಿ ಪ್ರೊ. ಕೆ.ಎಸ್. ಭಗವಾನ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಉದ್ದೇಶಪೂರ್ವಕವಾಗಿ ಹಿಂದೂಗಳು ಅತ್ಯಂತ ಶ್ರದ್ಧೆ ಮತ್ತು ಭಕ್ತಿಗಳಿಂದ ಪೂಜಿಸುವ ಪ್ರಭು ಶ್ರೀರಾಮರ ಕುರಿತು ಆಧಾರರಹಿತ ಆರೋಪಗಳನ್ನು ಮಾಡುವುದರ ಜೊತೆಗೆ, ಹಿಂದೂ ದೇವತೆಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದರು.

ಪ್ರೊ. ಕೆ.ಎಸ್. ಭಗವಾನ್ ಅವರ ಹೇಳಿಕೆಗಳು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ನಿರಂತರವಾಗಿ ಧಕ್ಕೆ ಉಂಟುಮಾಡುತ್ತಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟುಮಾಡಿವೆ ಎಂದು ಮಾರುತಿ ನಾಯಕ ತಿಳಿಸಿದರು. ಆದ್ದರಿಂದ, ಅವರ ವಿರುದ್ಧ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಸುರೇಶ ನಾಡಗೌಡ, ನಾಗರಾಜ ಶೆಟ್ಟಿ, ವರಪ್ರಸಾದ, ದತ್ತು ಚಲ್ಮಲ್, ಪ್ರಭು ಜೇಗರಕಲ್ಸ್, ರಾಜಶೇಖರ, ನಿಂಗು ಮಡಿವಾಳ, ದುರುಗಪ್ಪ, ಶರಣು ಆಂಜನೇಯ್ಯ ನೀರಮಾನ್ವಿ, ಬಿ.ಪಿ. ರಾಘವೇಂದ್ರ, ಬಸವಪುತ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    15 hrs ago
  • ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಉಜ್ಜಿನಿ ಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ, ನಗರಂಗೆರೆ ಗ್ರಾಮಪಂಚಾಯಿತಿ ಹಾಗೂ ಮೂರ್ತಿ ಇನ್ವೆಸ್ಟರ್ಸ್ ಅಂಡ್ ಡೆವಲಪರ್ಸ್ ಗ್ರೂಪ್ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ವಿಶ್ವಗುರು ಬಸವಣ್ಣ ಜಯಂತಿ ಮತ್ತು ದಿ. ಡಿ. ಸುಧಾಕರ್ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಮುಲು ಜಿಲ್ಲಾ ನಿರ್ದೇಶಕರಾದ ಬಿ.ಸಿ. ಸಂಜೀವಮೂರ್ತಿ ಅವರು, ಭಾರತದ ಸಂವಿಧಾನವು ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದ್ದು, ಇಂದು ತಾನು ಇಲ್ಲಿ ನಿಂತು ಮಾತನಾಡಲು ಡಾ. ಅಂಬೇಡ್ಕರ್ ಅವರ ಕೊಡುಗೆ ಅಪಾರ ಎಂದು ಹೇಳಿದರು. ಸಂಜೀವಮೂರ್ತಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಭಾರತೀಯ ಸಂವಿಧಾನದ ಶಿಲ್ಪಿ, ಶ್ರೇಷ್ಠ ಸಮಾಜ ಸುಧಾರಕ, ಮತ್ತು ಅರ್ಥಶಾಸ್ತ್ರಜ್ಞ ಎಂದು ಬಣ್ಣಿಸಿದರು. ಭಾರತದ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ಅವರ ಕೊಡುಗೆಗಳು ಅಪಾರವಾಗಿದ್ದು, ಅವರು ಸಂವಿಧಾನ ರಚಿಸದಿದ್ದರೆ ಇಂದು ಇಂತಹ ಕಾರ್ಯಕ್ರಮಗಳಲ್ಲಿ ನಿಂತು ಮಾತನಾಡಲು ಅವಕಾಶ ಸಿಗುತ್ತಿರಲಿಲ್ಲ ಎಂದು ಒತ್ತಿ ಹೇಳಿದರು. ಅಂಬೇಡ್ಕರ್ ಅವರು ಭಾರತೀಯ ಸಂವಿಧಾನದ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ಇದೇ ವೇಳೆ, ೧೨ನೇ ಶತಮಾನದ ಶರಣರ ಕ್ರಾಂತಿಯ ಹರಿಕಾರ ಬಸವಣ್ಣನವರ ಸಿದ್ಧಾಂತವು ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಮೇಲೆ ಆಧಾರಿತವಾಗಿದೆ ಎಂದು ತಿಳಿಸಿದರು. ಜಾತಿ-ಭೇದ ಮತ್ತು ಲಿಂಗ ತಾರತಮ್ಯವನ್ನು ವಿರೋಧಿಸಿ, ಪ್ರತಿಯೊಬ್ಬರಿಗೂ ಸಮಾನವಾದ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಹಕ್ಕುಗಳನ್ನು ಒದಗಿಸುವುದು ಬಸವಣ್ಣನವರ ಮುಖ್ಯ ಗುರಿಯಾಗಿತ್ತು ಎಂದು ಹೇಳಿದರು. ಅವರು ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ಬಲವಾಗಿ ವಿರೋಧಿಸಿ, ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ, ನಡತೆಯಿಂದಲೇ ವ್ಯಕ್ತಿಯ ಮೌಲ್ಯ ನಿರ್ಧಾರವಾಗುತ್ತದೆ ಎಂದು ಪ್ರತಿಪಾದಿಸಿದರು. ಪ್ರತಿಯೊಬ್ಬರೂ ತಮ್ಮದೇ ಆದ ಪ್ರಾಮಾಣಿಕ ಕಾಯಕ ಮಾಡಬೇಕು, ದುಡಿಮೆಯೇ ದೈವತ್ವಕ್ಕೆ ಸಮಾನ ಎಂಬುದು ಬಸವಣ್ಣನವರ ನಂಬಿಕೆಯಾಗಿತ್ತು ಎಂದರು. ದಿ. ಡಿ. ಸುಧಾಕರ್ ಉತ್ತಮ ರಾಜಕಾರಣಿಯಾಗಿದ್ದು, ಬಡ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ ಎಂದು ಸಂಜೀವಮೂರ್ತಿ ಸ್ಮರಿಸಿದರು. ಈ ಮಹನೀಯರ ಜಯಂತಿ ಪ್ರಯುಕ್ತ, ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಆಟೋ ಹಾಗೂ ಟ್ರ್ಯಾಕ್ಟರ್ ಚಾಲಕರಿಗೆ ಉಚಿತವಾಗಿ ವಾಹನ ಚಾಲನಾ ಪರವಾನಗಿ ಕೊಡಿಸುವ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿ, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಆದಿಜಾಂಬುವಂತ ಮಠದ ಷಡಾಕ್ಷರಿಮುನಿ ಸ್ವಾಮೀಜಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    1
    ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಉಜ್ಜಿನಿ ಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ, ನಗರಂಗೆರೆ ಗ್ರಾಮಪಂಚಾಯಿತಿ ಹಾಗೂ ಮೂರ್ತಿ ಇನ್ವೆಸ್ಟರ್ಸ್ ಅಂಡ್ ಡೆವಲಪರ್ಸ್ ಗ್ರೂಪ್ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ವಿಶ್ವಗುರು ಬಸವಣ್ಣ ಜಯಂತಿ ಮತ್ತು ದಿ. ಡಿ. ಸುಧಾಕರ್ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಮುಲು ಜಿಲ್ಲಾ ನಿರ್ದೇಶಕರಾದ ಬಿ.ಸಿ. ಸಂಜೀವಮೂರ್ತಿ ಅವರು, ಭಾರತದ ಸಂವಿಧಾನವು ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದ್ದು, ಇಂದು ತಾನು ಇಲ್ಲಿ ನಿಂತು ಮಾತನಾಡಲು ಡಾ. ಅಂಬೇಡ್ಕರ್ ಅವರ ಕೊಡುಗೆ ಅಪಾರ ಎಂದು ಹೇಳಿದರು.

ಸಂಜೀವಮೂರ್ತಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಭಾರತೀಯ ಸಂವಿಧಾನದ ಶಿಲ್ಪಿ, ಶ್ರೇಷ್ಠ ಸಮಾಜ ಸುಧಾರಕ, ಮತ್ತು ಅರ್ಥಶಾಸ್ತ್ರಜ್ಞ ಎಂದು ಬಣ್ಣಿಸಿದರು. ಭಾರತದ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ಅವರ ಕೊಡುಗೆಗಳು ಅಪಾರವಾಗಿದ್ದು, ಅವರು ಸಂವಿಧಾನ ರಚಿಸದಿದ್ದರೆ ಇಂದು ಇಂತಹ ಕಾರ್ಯಕ್ರಮಗಳಲ್ಲಿ ನಿಂತು ಮಾತನಾಡಲು ಅವಕಾಶ ಸಿಗುತ್ತಿರಲಿಲ್ಲ ಎಂದು ಒತ್ತಿ ಹೇಳಿದರು. ಅಂಬೇಡ್ಕರ್ ಅವರು ಭಾರತೀಯ ಸಂವಿಧಾನದ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ಇದೇ ವೇಳೆ, ೧೨ನೇ ಶತಮಾನದ ಶರಣರ ಕ್ರಾಂತಿಯ ಹರಿಕಾರ ಬಸವಣ್ಣನವರ ಸಿದ್ಧಾಂತವು ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಮೇಲೆ ಆಧಾರಿತವಾಗಿದೆ ಎಂದು ತಿಳಿಸಿದರು. ಜಾತಿ-ಭೇದ ಮತ್ತು ಲಿಂಗ ತಾರತಮ್ಯವನ್ನು ವಿರೋಧಿಸಿ, ಪ್ರತಿಯೊಬ್ಬರಿಗೂ ಸಮಾನವಾದ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಹಕ್ಕುಗಳನ್ನು ಒದಗಿಸುವುದು ಬಸವಣ್ಣನವರ ಮುಖ್ಯ ಗುರಿಯಾಗಿತ್ತು ಎಂದು ಹೇಳಿದರು. ಅವರು ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ಬಲವಾಗಿ ವಿರೋಧಿಸಿ, ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ, ನಡತೆಯಿಂದಲೇ ವ್ಯಕ್ತಿಯ ಮೌಲ್ಯ ನಿರ್ಧಾರವಾಗುತ್ತದೆ ಎಂದು ಪ್ರತಿಪಾದಿಸಿದರು. ಪ್ರತಿಯೊಬ್ಬರೂ ತಮ್ಮದೇ ಆದ ಪ್ರಾಮಾಣಿಕ ಕಾಯಕ ಮಾಡಬೇಕು, ದುಡಿಮೆಯೇ ದೈವತ್ವಕ್ಕೆ ಸಮಾನ ಎಂಬುದು ಬಸವಣ್ಣನವರ ನಂಬಿಕೆಯಾಗಿತ್ತು ಎಂದರು.

ದಿ. ಡಿ. ಸುಧಾಕರ್ ಉತ್ತಮ ರಾಜಕಾರಣಿಯಾಗಿದ್ದು, ಬಡ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ ಎಂದು ಸಂಜೀವಮೂರ್ತಿ ಸ್ಮರಿಸಿದರು. ಈ ಮಹನೀಯರ ಜಯಂತಿ ಪ್ರಯುಕ್ತ, ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಆಟೋ ಹಾಗೂ ಟ್ರ್ಯಾಕ್ಟರ್ ಚಾಲಕರಿಗೆ ಉಚಿತವಾಗಿ ವಾಹನ ಚಾಲನಾ ಪರವಾನಗಿ ಕೊಡಿಸುವ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿ, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಆದಿಜಾಂಬುವಂತ ಮಠದ ಷಡಾಕ್ಷರಿಮುನಿ ಸ್ವಾಮೀಜಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಬೆಂಗಳೂರಿನಲ್ಲಿಂದು ಅವರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‌ಪೀರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಒಟ್ಟಾಗಿ ಸೇರಿ ಈ ಪದಗ್ರಹಣ ಕಾರ್ಯಕ್ರಮಕ್ಕೆ ತೆರಳಿದರು. ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೇಳೆ, ಕಾರ್ಯಕರ್ತರು ಸಿ.ಎಂ. ಡಿ.ಕೆ. ಶಿವಕುಮಾರ್ ಮತ್ತು ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಪರವಾಗಿ ಘೋಷಣೆಗಳನ್ನು ಕೂಗಿದರು. ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಕೋಟೆನಾಡಿನ (ಚಿತ್ರದುರ್ಗ) ಕಾಂಗ್ರೆಸ್ ಮುಖಂಡರು ಸಹ ತೆರಳಿದ್ದರು.
    1
    ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಬೆಂಗಳೂರಿನಲ್ಲಿಂದು ಅವರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‌ಪೀರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಒಟ್ಟಾಗಿ ಸೇರಿ ಈ ಪದಗ್ರಹಣ ಕಾರ್ಯಕ್ರಮಕ್ಕೆ ತೆರಳಿದರು.

ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೇಳೆ, ಕಾರ್ಯಕರ್ತರು ಸಿ.ಎಂ. ಡಿ.ಕೆ. ಶಿವಕುಮಾರ್ ಮತ್ತು ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಪರವಾಗಿ ಘೋಷಣೆಗಳನ್ನು ಕೂಗಿದರು. ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಕೋಟೆನಾಡಿನ (ಚಿತ್ರದುರ್ಗ) ಕಾಂಗ್ರೆಸ್ ಮುಖಂಡರು ಸಹ ತೆರಳಿದ್ದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
  • ಕನ್ನಡ ಚಿತ್ರರಂಗದ ಚಲನಚಿತ್ರ ನಟ ಹಾಗೂ ಹೋರಾಟಗಾರ ಚೇತನ್ ಅವರು ಇಳಕಲ್ ನಗರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಕರ್ನಾಟಕದಲ್ಲಿ ಹೊಸ ಪಕ್ಷ ಸ್ಥಾಪನೆ ಕುರಿತು ಸುದ್ದಿಗೋಷ್ಠಿ ನಡೆಸಿದರು. ಅವರ ಆಗಮನದ ಹಿನ್ನೆಲೆಯಲ್ಲಿ, ಚೇತನ್ ಅವರ ಅಭಿಮಾನಿಗಳು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ತಮ್ಮ ಅಭಿಮಾನ ಮೆರೆದರು. ಈ ಕಾರ್ಯಕ್ರಮದಲ್ಲಿ ಅವರ ಎಲ್ಲ ಅಭಿಮಾನಿಗಳು ಉಪಸ್ಥಿತರಿದ್ದರು.
    4
    ಕನ್ನಡ ಚಿತ್ರರಂಗದ ಚಲನಚಿತ್ರ ನಟ ಹಾಗೂ ಹೋರಾಟಗಾರ ಚೇತನ್ ಅವರು ಇಳಕಲ್ ನಗರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಕರ್ನಾಟಕದಲ್ಲಿ ಹೊಸ ಪಕ್ಷ ಸ್ಥಾಪನೆ ಕುರಿತು ಸುದ್ದಿಗೋಷ್ಠಿ ನಡೆಸಿದರು. ಅವರ ಆಗಮನದ ಹಿನ್ನೆಲೆಯಲ್ಲಿ, ಚೇತನ್ ಅವರ ಅಭಿಮಾನಿಗಳು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ತಮ್ಮ ಅಭಿಮಾನ ಮೆರೆದರು. ಈ ಕಾರ್ಯಕ್ರಮದಲ್ಲಿ ಅವರ ಎಲ್ಲ ಅಭಿಮಾನಿಗಳು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಗದಗ ಜಿಲ್ಲೆಯ ಕದಡಿ ಗ್ರಾಮದ ಮಲ್ಲಯ್ಯಜ್ಜನ ಕಟ್ಟೆ ಹತ್ತಿರ ಶನಿವಾರ ಬೆಳಿಗ್ಗೆ ಜನದಟ್ಟಣೆಯಿರುವ ವಸತಿ ಪ್ರದೇಶದಲ್ಲಿ ಬೃಹತ್ ನಾಗರ ಹಾವೊಂದು ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಮೂಡಿಸಿದೆ. ಹಾವು ಸಳ ಸಳನೆ ಬರುತ್ತಿರುವುದನ್ನು ಕಂಡ ಸಾರ್ವಜನಿಕರು ಭಯಭೀತರಾಗಿ ಕೆಲ ಹೊತ್ತು ನಿಂತು ನೋಡುತ್ತಿದ್ದರು. ಈ ವೇಳೆ, ಕೆಲವರು ಇದು ದೇವರ ಹಾವಿರಬಹುದೇ ಎಂದು ಪರಸ್ಪರ ಚರ್ಚಿಸತೊಡಗಿದರು. ತಕ್ಷಣವೇ ಅಲ್ಲಿಯೇ ಇದ್ದವರು ಒಬ್ಬ ಹಾವು ಹಿಡಿಯುವ ವ್ಯಕ್ತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮಾಹಿತಿ ತಿಳಿದು ಧಾವಿಸಿದ ಉರಗ ರಕ್ಷಕರು, ಮಣ್ಣಿನ ಗೋಡೆಯಲ್ಲಿ ಅಡಗಿಕೊಂಡಿದ್ದ ಹಾವನ್ನು ಹೊರಗೆಳೆದು ಜೀವಂತವಾಗಿ ಸೆರೆ ಹಿಡಿದು ನಂತರ ಅದನ್ನು ಹೊರ ವಲಯದಲ್ಲಿ ಬಿಟ್ಟು ಹೋಗಿದ್ದಾರೆ. ಈ ಪ್ರಸಂಗ ಗ್ರಾಮಸ್ಥರ ನಡುವೆ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉರಗ ರಕ್ಷಕರು, ಎಲ್ಲಿಯೇ ಹಾವು ಕಂಡರೂ ಯಾರೂ ಅವುಗಳನ್ನು ಬಡಿಯಬಾರದು, ಬದಲಿಗೆ ಉರಗ ರಕ್ಷಕರಿಗೆ ಅಥವಾ ಅರಣ್ಯ ಇಲಾಖೆಯವರಿಗೆ ತಿಳಿಸಿ ಅವುಗಳ ರಕ್ಷಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ. ಈ ಘಟನೆ ನಡೆದಾಗ ಗ್ರಾಮಸ್ಥರಾದ ಅಜ್ಜು ರಾಜೇಖಾನ್, ಪ್ರಕಾಶ ಕಮ್ಮಾರ, ಪ್ರವೀಣ ಚೋಳಪ್ಪನವರ, ನಬಿಸಾಬ ರಾಜೇಖಾನ ಸೇರಿದಂತೆ ಇತರರು ಉಪಸ್ಥಿತರಿದ್ದರು.
    2
    ಗದಗ ಜಿಲ್ಲೆಯ ಕದಡಿ ಗ್ರಾಮದ ಮಲ್ಲಯ್ಯಜ್ಜನ ಕಟ್ಟೆ ಹತ್ತಿರ ಶನಿವಾರ ಬೆಳಿಗ್ಗೆ ಜನದಟ್ಟಣೆಯಿರುವ ವಸತಿ ಪ್ರದೇಶದಲ್ಲಿ ಬೃಹತ್ ನಾಗರ ಹಾವೊಂದು ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಮೂಡಿಸಿದೆ. ಹಾವು ಸಳ ಸಳನೆ ಬರುತ್ತಿರುವುದನ್ನು ಕಂಡ ಸಾರ್ವಜನಿಕರು ಭಯಭೀತರಾಗಿ ಕೆಲ ಹೊತ್ತು ನಿಂತು ನೋಡುತ್ತಿದ್ದರು. ಈ ವೇಳೆ, ಕೆಲವರು ಇದು ದೇವರ ಹಾವಿರಬಹುದೇ ಎಂದು ಪರಸ್ಪರ ಚರ್ಚಿಸತೊಡಗಿದರು.

ತಕ್ಷಣವೇ ಅಲ್ಲಿಯೇ ಇದ್ದವರು ಒಬ್ಬ ಹಾವು ಹಿಡಿಯುವ ವ್ಯಕ್ತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮಾಹಿತಿ ತಿಳಿದು ಧಾವಿಸಿದ ಉರಗ ರಕ್ಷಕರು, ಮಣ್ಣಿನ ಗೋಡೆಯಲ್ಲಿ ಅಡಗಿಕೊಂಡಿದ್ದ ಹಾವನ್ನು ಹೊರಗೆಳೆದು ಜೀವಂತವಾಗಿ ಸೆರೆ ಹಿಡಿದು ನಂತರ ಅದನ್ನು ಹೊರ ವಲಯದಲ್ಲಿ ಬಿಟ್ಟು ಹೋಗಿದ್ದಾರೆ. ಈ ಪ್ರಸಂಗ ಗ್ರಾಮಸ್ಥರ ನಡುವೆ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉರಗ ರಕ್ಷಕರು, ಎಲ್ಲಿಯೇ ಹಾವು ಕಂಡರೂ ಯಾರೂ ಅವುಗಳನ್ನು ಬಡಿಯಬಾರದು, ಬದಲಿಗೆ ಉರಗ ರಕ್ಷಕರಿಗೆ ಅಥವಾ ಅರಣ್ಯ ಇಲಾಖೆಯವರಿಗೆ ತಿಳಿಸಿ ಅವುಗಳ ರಕ್ಷಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ. ಈ ಘಟನೆ ನಡೆದಾಗ ಗ್ರಾಮಸ್ಥರಾದ ಅಜ್ಜು ರಾಜೇಖಾನ್, ಪ್ರಕಾಶ ಕಮ್ಮಾರ, ಪ್ರವೀಣ ಚೋಳಪ್ಪನವರ, ನಬಿಸಾಬ ರಾಜೇಖಾನ ಸೇರಿದಂತೆ ಇತರರು ಉಪಸ್ಥಿತರಿದ್ದರು.
    user_ಪ್ರಕಾಶ ಗುದ್ನೇಪ್ಪನವರ.
    ಪ್ರಕಾಶ ಗುದ್ನೇಪ್ಪನವರ.
    Local News Reporter ಗದಗ, ಗದಗ, ಕರ್ನಾಟಕ•
    51 min ago
  • ಬಳ್ಳಾರಿ ನಗರದ 7ನೇ ವಾರ್ಡಿನ ಬಾಪೂಜಿನಗರ ವೃತ್ತದಲ್ಲಿ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಅವರ ಹುಟ್ಟುಹಬ್ಬವನ್ನು ಕರ್ನಾಟಕ ಯುವ ಜಾಗೃತಿ ವೇದಿಕೆಯ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ವಿಶೇಷ ಸಂದರ್ಭದಲ್ಲಿ, ವಿದ್ಯಾರ್ಥಿಗಳಿಗೆ ಸ್ಟೀಲ್ ನೀರಿನ ಬಾಟಲ್‌ಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದರ ಜೊತೆಗೆ, ಪ್ಲಾಸ್ಟಿಕ್ ಮುಕ್ತ ಬಳ್ಳಾರಿ ಸಂಕಲ್ಪವನ್ನು ಕೈಗೊಂಡು, ಸಮಾಜಮುಖಿ ಸಂದೇಶಗಳನ್ನು ಸಾರಲಾಯಿತು. ಈ ಸಮಾಜಮುಖಿ ಕಾರ್ಯಕ್ರಮವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಮಾಜಿ ಶಾಸಕರಿಗೆ ಶುಭಾಶಯ ಕೋರಲು ಕಾರ್ಯಕ್ರಮದಲ್ಲಿ ಹಲವಾರು ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.
    1
    ಬಳ್ಳಾರಿ ನಗರದ 7ನೇ ವಾರ್ಡಿನ ಬಾಪೂಜಿನಗರ ವೃತ್ತದಲ್ಲಿ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಅವರ ಹುಟ್ಟುಹಬ್ಬವನ್ನು ಕರ್ನಾಟಕ ಯುವ ಜಾಗೃತಿ ವೇದಿಕೆಯ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ವಿಶೇಷ ಸಂದರ್ಭದಲ್ಲಿ, ವಿದ್ಯಾರ್ಥಿಗಳಿಗೆ ಸ್ಟೀಲ್ ನೀರಿನ ಬಾಟಲ್‌ಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದರ ಜೊತೆಗೆ, ಪ್ಲಾಸ್ಟಿಕ್ ಮುಕ್ತ ಬಳ್ಳಾರಿ ಸಂಕಲ್ಪವನ್ನು ಕೈಗೊಂಡು, ಸಮಾಜಮುಖಿ ಸಂದೇಶಗಳನ್ನು ಸಾರಲಾಯಿತು. ಈ ಸಮಾಜಮುಖಿ ಕಾರ್ಯಕ್ರಮವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು.

ಮಾಜಿ ಶಾಸಕರಿಗೆ ಶುಭಾಶಯ ಕೋರಲು ಕಾರ್ಯಕ್ರಮದಲ್ಲಿ ಹಲವಾರು ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.
    user_A News24Kannada
    A News24Kannada
    Newsagent Ballari, Karnataka•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.