logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಯುವ ಸಬಲೀಕರಣ ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಎರಡು ತಿಂಗಳ ಬ್ಯಾಡ್ಮಿಂಟನ್ ಬೇಸಿಗೆ ಶಿಬಿರವು ಮಂಗಳೂರಿನ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಸಮಾರೋಪಗೊಂಡಿತು. ಈ ಶಿಬಿರದಲ್ಲಿ ಸುಮಾರು 250 ಮಕ್ಕಳು ಭಾಗವಹಿಸಿದ್ದು, ಬೆಳಿಗ್ಗೆ ಮತ್ತು ಸಂಜೆ ಎರಡು ಅವಧಿಗಳಲ್ಲಿ ತರಬೇತಿ ನೀಡಲಾಯಿತು. ಮುಖ್ಯ ತರಬೇತುದಾರರಾದ ಅನಿರುದ್ಧ ಪಟುವರ್ಧನ್ ಹಾಗೂ ವಿವೇಕ್ ಜಾನ್ ಅವರ ಮಾರ್ಗದರ್ಶನದಲ್ಲಿ ನಾಲ್ಕು ಸಹಾಯಕ ತರಬೇತುದಾರರೊಂದಿಗೆ ಈ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಅಸೋಸಿಯೇಷನ್‌ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಅಶೋಕ್ ಹೆಗಡೆ, ಖಜಾಂಚಿ ಶ್ರೀಮತಿ ಲಕ್ಷ್ಮಿ ಸುವರ್ಣ ಹಾಗೂ ಸಮಿತಿಯ ಸದಸ್ಯರಾದ ನೂರು ಮಹಮ್ಮದ್, ವಿಜೇತಾ, ರಿಯಾಜ್ ಹಸ್ಸನ್, ರಾಕೇಶ್ ಉಪಸ್ಥಿತರಿದ್ದರು. ರೈಜ್ ಪಿಸಿ ಅವರು ವಂದನಾರ್ಪಣೆ ಮಾಡಿದರು.

5 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
5 hrs ago

ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಯುವ ಸಬಲೀಕರಣ ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಎರಡು ತಿಂಗಳ ಬ್ಯಾಡ್ಮಿಂಟನ್ ಬೇಸಿಗೆ ಶಿಬಿರವು ಮಂಗಳೂರಿನ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಸಮಾರೋಪಗೊಂಡಿತು. ಈ ಶಿಬಿರದಲ್ಲಿ ಸುಮಾರು 250 ಮಕ್ಕಳು ಭಾಗವಹಿಸಿದ್ದು, ಬೆಳಿಗ್ಗೆ ಮತ್ತು ಸಂಜೆ ಎರಡು ಅವಧಿಗಳಲ್ಲಿ ತರಬೇತಿ ನೀಡಲಾಯಿತು. ಮುಖ್ಯ ತರಬೇತುದಾರರಾದ ಅನಿರುದ್ಧ ಪಟುವರ್ಧನ್ ಹಾಗೂ ವಿವೇಕ್ ಜಾನ್ ಅವರ ಮಾರ್ಗದರ್ಶನದಲ್ಲಿ ನಾಲ್ಕು ಸಹಾಯಕ ತರಬೇತುದಾರರೊಂದಿಗೆ ಈ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಅಸೋಸಿಯೇಷನ್‌ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಅಶೋಕ್ ಹೆಗಡೆ, ಖಜಾಂಚಿ ಶ್ರೀಮತಿ ಲಕ್ಷ್ಮಿ ಸುವರ್ಣ ಹಾಗೂ ಸಮಿತಿಯ ಸದಸ್ಯರಾದ ನೂರು ಮಹಮ್ಮದ್, ವಿಜೇತಾ, ರಿಯಾಜ್ ಹಸ್ಸನ್, ರಾಕೇಶ್ ಉಪಸ್ಥಿತರಿದ್ದರು. ರೈಜ್ ಪಿಸಿ ಅವರು ವಂದನಾರ್ಪಣೆ ಮಾಡಿದರು.

More news from ಕರ್ನಾಟಕ and nearby areas
  • ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕದಲ್ಲಿ ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ತಯಾರಿಸುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಲಾಗಿದೆ. ಅಕ್ರಮ ಗೋವಧೆ ನಡೆಯುತ್ತಿರುವ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ಮಾಹಿತಿ ಬಂದ ಕೂಡಲೇ, ಅವರು ಕಡಬದ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತೋಟವೊಂದರಲ್ಲಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದೆ. ದಾಳಿ ನಡೆಸಿ ವಿಚಾರಣೆಗೊಳಪಡಿಸಿದಾಗ, ಬಂಧಿತರಾದ ಕೆ ಅಬ್ದುಲ್ ರಫೀಕ್ (37), ಅದ್ರಾಮ ಮಂತೂರು (41) ಮತ್ತು ಅಬ್ದುಲ್ ಖಾದರ್ ಪಣೆಮಜಲು (57) ಎಂಬುವವರು ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ತಯಾರಿಸುತ್ತಿರುವುದು ದೃಢಪಟ್ಟಿದೆ. ಪೊಲೀಸರು ಸ್ಥಳದಲ್ಲಿದ್ದ ಜಾನುವಾರು ಮಾಂಸ, ಇತರೆ ಸೊತ್ತುಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 36/2026, ಕಲಂ 4, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    1
    ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕದಲ್ಲಿ ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ತಯಾರಿಸುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಲಾಗಿದೆ. ಅಕ್ರಮ ಗೋವಧೆ ನಡೆಯುತ್ತಿರುವ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ಮಾಹಿತಿ ಬಂದ ಕೂಡಲೇ, ಅವರು ಕಡಬದ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತೋಟವೊಂದರಲ್ಲಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದೆ.

ದಾಳಿ ನಡೆಸಿ ವಿಚಾರಣೆಗೊಳಪಡಿಸಿದಾಗ, ಬಂಧಿತರಾದ ಕೆ ಅಬ್ದುಲ್ ರಫೀಕ್ (37), ಅದ್ರಾಮ ಮಂತೂರು (41) ಮತ್ತು ಅಬ್ದುಲ್ ಖಾದರ್ ಪಣೆಮಜಲು (57) ಎಂಬುವವರು ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ತಯಾರಿಸುತ್ತಿರುವುದು ದೃಢಪಟ್ಟಿದೆ. ಪೊಲೀಸರು ಸ್ಥಳದಲ್ಲಿದ್ದ ಜಾನುವಾರು ಮಾಂಸ, ಇತರೆ ಸೊತ್ತುಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 36/2026, ಕಲಂ 4, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    5 hrs ago
  • ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಪರ್ಪುಂಜದಲ್ಲಿ ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸದೆ ಇರುವ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ವಿದ್ಯಮಾನವನ್ನು ಮೆಸ್ಕಾಂ ಇಲಾಖೆಯ "ಜಾಣಕುರುಡಿಗೆ ಹಿಡಿದ ಕನ್ನಡಿ" ಎಂದು ವಿಡಿಯೋ ಮೂಲಕ ಬಿಂಬಿಸಲಾಗಿದೆ. ಕಳೆದ ಎರಡು ವರ್ಷಗಳಿಂದಲೂ ಈ ಮರಗಳು ಮಳೆಗಾಲದಲ್ಲಿ ಯಾವುದೇ ಕ್ಷಣದಲ್ಲಿ ಮುರಿದು ವಿದ್ಯುತ್ ಕಂಬಗಳ ಮೇಲೆ ಬೀಳುವ ಭೀತಿ ಇದೆ. ಕುಂಬ್ರ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಪ್ರತಿದಿನ ಹತ್ತಾರು ಬಾರಿ ಇದೇ ರಸ್ತೆಯಲ್ಲಿ ಸಂಚರಿಸಿದರೂ, ಕಣ್ಣಿಗೆ ಸ್ಪಷ್ಟವಾಗಿ ಕಾಣುವ ರೀತಿಯಲ್ಲಿದ್ದರೂ ಸಹ ಈ ಅಪಾಯವನ್ನು ಗಮನಿಸದಿರುವುದು ವಿಪರ್ಯಾಸ ಎಂದು ವರದಿಯಲ್ಲಿ ತಿಳಿಸಲಾಗಿದೆ. ಮಳೆಗಾಲಕ್ಕೆ ಇಲಾಖೆಯ ಸಿದ್ಧತೆಗಳ ಬಗ್ಗೆಯೇ ಇದು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮರಗಳು ಬಿದ್ದು ವಿದ್ಯುತ್ ಕಂಬಗಳು ತುಂಡಾದರೆ ಅದು ಮೆಸ್ಕಾಂನವರಿಗೆ ಆಗುವ ನಷ್ಟವೇ ಹೊರತು ಸಾರ್ವಜನಿಕರಿಗಲ್ಲ ಎಂದು ಹೇಳುವ ಜನರು, ಗಾಳಿಮಳೆಗೆ ಮರಗಳು ಬೀಳುವುದಕ್ಕೆ ಮುಂಚೆಯೇ ಅವುಗಳನ್ನು ತೆರವುಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮೆಸ್ಕಾಂ ಇಲಾಖೆ ತುರ್ತಾಗಿ ಗಮನಹರಿಸಿ, ಗಾಳಿಮಳೆಗೆ ಮುರಿದು ಬೀಳಲು ಸಿದ್ಧವಾಗಿ ನಿಂತಿರುವ ಮರಗಳನ್ನು ತೆರವುಗೊಳಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
    1
    ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಪರ್ಪುಂಜದಲ್ಲಿ ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸದೆ ಇರುವ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ವಿದ್ಯಮಾನವನ್ನು ಮೆಸ್ಕಾಂ ಇಲಾಖೆಯ "ಜಾಣಕುರುಡಿಗೆ ಹಿಡಿದ ಕನ್ನಡಿ" ಎಂದು ವಿಡಿಯೋ ಮೂಲಕ ಬಿಂಬಿಸಲಾಗಿದೆ.

ಕಳೆದ ಎರಡು ವರ್ಷಗಳಿಂದಲೂ ಈ ಮರಗಳು ಮಳೆಗಾಲದಲ್ಲಿ ಯಾವುದೇ ಕ್ಷಣದಲ್ಲಿ ಮುರಿದು ವಿದ್ಯುತ್ ಕಂಬಗಳ ಮೇಲೆ ಬೀಳುವ ಭೀತಿ ಇದೆ. ಕುಂಬ್ರ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಪ್ರತಿದಿನ ಹತ್ತಾರು ಬಾರಿ ಇದೇ ರಸ್ತೆಯಲ್ಲಿ ಸಂಚರಿಸಿದರೂ, ಕಣ್ಣಿಗೆ ಸ್ಪಷ್ಟವಾಗಿ ಕಾಣುವ ರೀತಿಯಲ್ಲಿದ್ದರೂ ಸಹ ಈ ಅಪಾಯವನ್ನು ಗಮನಿಸದಿರುವುದು ವಿಪರ್ಯಾಸ ಎಂದು ವರದಿಯಲ್ಲಿ ತಿಳಿಸಲಾಗಿದೆ. ಮಳೆಗಾಲಕ್ಕೆ ಇಲಾಖೆಯ ಸಿದ್ಧತೆಗಳ ಬಗ್ಗೆಯೇ ಇದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮರಗಳು ಬಿದ್ದು ವಿದ್ಯುತ್ ಕಂಬಗಳು ತುಂಡಾದರೆ ಅದು ಮೆಸ್ಕಾಂನವರಿಗೆ ಆಗುವ ನಷ್ಟವೇ ಹೊರತು ಸಾರ್ವಜನಿಕರಿಗಲ್ಲ ಎಂದು ಹೇಳುವ ಜನರು, ಗಾಳಿಮಳೆಗೆ ಮರಗಳು ಬೀಳುವುದಕ್ಕೆ ಮುಂಚೆಯೇ ಅವುಗಳನ್ನು ತೆರವುಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮೆಸ್ಕಾಂ ಇಲಾಖೆ ತುರ್ತಾಗಿ ಗಮನಹರಿಸಿ, ಗಾಳಿಮಳೆಗೆ ಮುರಿದು ಬೀಳಲು ಸಿದ್ಧವಾಗಿ ನಿಂತಿರುವ ಮರಗಳನ್ನು ತೆರವುಗೊಳಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
    user_ವಿನೊದ್
    ವಿನೊದ್
    ಪುತ್ತೂರು, ದಕ್ಷಿಣ ಕನ್ನಡ, ಕರ್ನಾಟಕ•
    7 hrs ago
  • ಚಿಕ್ಕನಾಯಕನಹಳ್ಳಿ ತಾಲೂಕಿನ ರೈತರು ದಶಕಗಳಿಂದ ಕಾಯುತ್ತಿರುವ ಹೇಮಾವತಿ ನೀರಾವರಿ ಯೋಜನೆ ಇನ್ನೂ ಸಂಪೂರ್ಣವಾಗಿ ಸಾಕಾರಗೊಳ್ಳದ ಕಾರಣ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿದ್ದಾರೆ. ಭೌತಿಕ ಹೋರಾಟಗಳ ಜೊತೆಗೆ, ಈಗ ತಮ್ಮ ಅಳಲನ್ನು ದೈವಿಕ ಶಕ್ತಿಯ ಮೊರೆ ಹೋಗುವ ಮೂಲಕ ತೋಡಿಕೊಳ್ಳುತ್ತಿದ್ದಾರೆ. ಯೋಜನೆ ಮಂಜೂರಾಗಿ ದಶಕಗಳೇ ಕಳೆದಿದ್ದರೂ, ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿರುವುದು ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ನೀರಿನ ಮೂಲಗಳಿಲ್ಲದೆ ಅಂತರ್ಜಲ ಮಟ್ಟ ಭೀಕರವಾಗಿ ಕುಸಿದಿದ್ದು, ಸಾವಿರಾರು ಅಡಿ ಬೋರ್‌ವೆಲ್ ಕೊರೆದರೂ ನೀರು ಸಿಗುತ್ತಿಲ್ಲ. ಇದರಿಂದ ಬೆಳೆಗಳನ್ನು ಉಳಿಸಿಕೊಳ್ಳಲು ರೈತರಿಗೆ ದೊಡ್ಡ ಸವಾಲಾಗಿದೆ; ಹೊಲಗಳಲ್ಲಿ ಬೆಳೆ ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೇವಲ ಮಳೆಯನ್ನೇ ನಂಬಿ ಕುಳಿತುಕೊಳ್ಳದೆ, ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಒತ್ತಾಯಿಸಿ ರೈತರು ಅನೇಕ ಹೋರಾಟಗಳನ್ನು ನಡೆಸಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದರೂ ಸಮಸ್ಯೆ ಬಗೆಹರಿಯುತ್ತಿಲ್ಲ. ಈ ಹತಾಶ ಪರಿಸ್ಥಿತಿಯಲ್ಲಿ, ನಂಬಿಕೆಯ ದಾರಿಯನ್ನು ಹಿಡಿದ ರೈತರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮೊರೆ ಹೋಗಿದ್ದಾರೆ. ರಾಯರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಹೇಮಾವತಿ ನೀರು ತಮ್ಮ ಭಾಗದ ಕೆರೆಗಳಿಗೆ ಬೇಗ ಹರಿಯುವಂತೆ ಹಾಗೂ ರೈತರ ಬದುಕು ಹಸನಾಗುವಂತೆ ಪ್ರಾರ್ಥಿಸಿದ್ದಾರೆ. ಸ್ಥಳೀಯ ರೈತ ಮುಖಂಡರು ನೀಡಿರುವ ಮಾಹಿತಿ ಪ್ರಕಾರ, ಅಧಿಕಾರಿಗಳು ಹೇಮಾವತಿ ಯೋಜನೆಯ ಕೆಲಸವನ್ನು ಬಹುಬೇಗ ಮುಗಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ರೈತರ ಸಮಸ್ಯೆಗಳನ್ನು ಚರ್ಚಿಸಲು ಜೂನ್ 5 ರಂದು ಶಾವಿಗೆ ಹಳ್ಳಿಯಲ್ಲಿ ಸಭೆಯನ್ನು ಕರೆಯಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ರೈತರಿಗೆ ಕರೆ ನೀಡಲಾಗಿದೆ. ಸರ್ಕಾರ ಮತ್ತು ಜನಪ್ರತಿನಿಧಿಗಳು ಇನ್ನು ಮುಂದಾದರೂ ಎಚ್ಚೆತ್ತುಕೊಂಡು, ಚಿಕ್ಕನಾಯಕನಹಳ್ಳಿ ತಾಲೂಕಿನ ಜನರ ನೀರಿನ ದಾಹವನ್ನು ತಣಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
    1
    ಚಿಕ್ಕನಾಯಕನಹಳ್ಳಿ ತಾಲೂಕಿನ ರೈತರು ದಶಕಗಳಿಂದ ಕಾಯುತ್ತಿರುವ ಹೇಮಾವತಿ ನೀರಾವರಿ ಯೋಜನೆ ಇನ್ನೂ ಸಂಪೂರ್ಣವಾಗಿ ಸಾಕಾರಗೊಳ್ಳದ ಕಾರಣ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿದ್ದಾರೆ. ಭೌತಿಕ ಹೋರಾಟಗಳ ಜೊತೆಗೆ, ಈಗ ತಮ್ಮ ಅಳಲನ್ನು ದೈವಿಕ ಶಕ್ತಿಯ ಮೊರೆ ಹೋಗುವ ಮೂಲಕ ತೋಡಿಕೊಳ್ಳುತ್ತಿದ್ದಾರೆ.

ಯೋಜನೆ ಮಂಜೂರಾಗಿ ದಶಕಗಳೇ ಕಳೆದಿದ್ದರೂ, ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿರುವುದು ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ನೀರಿನ ಮೂಲಗಳಿಲ್ಲದೆ ಅಂತರ್ಜಲ ಮಟ್ಟ ಭೀಕರವಾಗಿ ಕುಸಿದಿದ್ದು, ಸಾವಿರಾರು ಅಡಿ ಬೋರ್‌ವೆಲ್ ಕೊರೆದರೂ ನೀರು ಸಿಗುತ್ತಿಲ್ಲ. ಇದರಿಂದ ಬೆಳೆಗಳನ್ನು ಉಳಿಸಿಕೊಳ್ಳಲು ರೈತರಿಗೆ ದೊಡ್ಡ ಸವಾಲಾಗಿದೆ; ಹೊಲಗಳಲ್ಲಿ ಬೆಳೆ ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೇವಲ ಮಳೆಯನ್ನೇ ನಂಬಿ ಕುಳಿತುಕೊಳ್ಳದೆ, ಕಾಮಗಾರಿಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಒತ್ತಾಯಿಸಿ ರೈತರು ಅನೇಕ ಹೋರಾಟಗಳನ್ನು ನಡೆಸಿದ್ದಾರೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದರೂ ಸಮಸ್ಯೆ ಬಗೆಹರಿಯುತ್ತಿಲ್ಲ.

ಈ ಹತಾಶ ಪರಿಸ್ಥಿತಿಯಲ್ಲಿ, ನಂಬಿಕೆಯ ದಾರಿಯನ್ನು ಹಿಡಿದ ರೈತರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮೊರೆ ಹೋಗಿದ್ದಾರೆ. ರಾಯರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಹೇಮಾವತಿ ನೀರು ತಮ್ಮ ಭಾಗದ ಕೆರೆಗಳಿಗೆ ಬೇಗ ಹರಿಯುವಂತೆ ಹಾಗೂ ರೈತರ ಬದುಕು ಹಸನಾಗುವಂತೆ ಪ್ರಾರ್ಥಿಸಿದ್ದಾರೆ. ಸ್ಥಳೀಯ ರೈತ ಮುಖಂಡರು ನೀಡಿರುವ ಮಾಹಿತಿ ಪ್ರಕಾರ, ಅಧಿಕಾರಿಗಳು ಹೇಮಾವತಿ ಯೋಜನೆಯ ಕೆಲಸವನ್ನು ಬಹುಬೇಗ ಮುಗಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ರೈತರ ಸಮಸ್ಯೆಗಳನ್ನು ಚರ್ಚಿಸಲು ಜೂನ್ 5 ರಂದು ಶಾವಿಗೆ ಹಳ್ಳಿಯಲ್ಲಿ ಸಭೆಯನ್ನು ಕರೆಯಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ರೈತರಿಗೆ ಕರೆ ನೀಡಲಾಗಿದೆ.

ಸರ್ಕಾರ ಮತ್ತು ಜನಪ್ರತಿನಿಧಿಗಳು ಇನ್ನು ಮುಂದಾದರೂ ಎಚ್ಚೆತ್ತುಕೊಂಡು, ಚಿಕ್ಕನಾಯಕನಹಳ್ಳಿ ತಾಲೂಕಿನ ಜನರ ನೀರಿನ ದಾಹವನ್ನು ತಣಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    12 hrs ago
  • ವಕ್ಫ್ ಮಂಡಳಿಯಲ್ಲಿ ಅಧಿಕಾರದ ಕೇಂದ್ರ ಸ್ಥಾನವನ್ನು ಆಕ್ರಮಿಸಿಕೊಂಡು, ಸಮುದಾಯದ ಬಡ ಮತ್ತು ದುರ್ಬಲ ವರ್ಗದವರಿಗೆ ಸೇವೆ ಸಲ್ಲಿಸದವರಿಗೆ ಇದೊಂದು ಪಾಠವಾಗಿದೆ. ಈ ಕುರಿತ ಸಂದೇಶವು ಭಾರತದಲ್ಲಿ ವೈರಲ್ ಆಗುತ್ತಿದೆ.
    1
    ವಕ್ಫ್ ಮಂಡಳಿಯಲ್ಲಿ ಅಧಿಕಾರದ ಕೇಂದ್ರ ಸ್ಥಾನವನ್ನು ಆಕ್ರಮಿಸಿಕೊಂಡು, ಸಮುದಾಯದ ಬಡ ಮತ್ತು ದುರ್ಬಲ ವರ್ಗದವರಿಗೆ ಸೇವೆ ಸಲ್ಲಿಸದವರಿಗೆ ಇದೊಂದು ಪಾಠವಾಗಿದೆ. ಈ ಕುರಿತ ಸಂದೇಶವು ಭಾರತದಲ್ಲಿ ವೈರಲ್ ಆಗುತ್ತಿದೆ.
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    9 hrs ago
  • ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಶಿವಮೊಗ್ಗದ ಭದ್ರಾವತಿಯಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಭದ್ರಾವತಿಯ ಶಾಸಕ ಸಂಗಮೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಸಹೋದರ ಹಾಗೂ ಭದ್ರಾವತಿ ಪಿಎಲ್‌ಡಿ ಅಧ್ಯಕ್ಷ ಬಿ.ಕೆ. ಶಿವಕುಮಾರ್ ಅವರು ಹೈಕಮಾಂಡ್‌ಗೆ ಬಲವಾಗಿ ಆಗ್ರಹಿಸಿದ್ದಾರೆ. ನಗರದ ಹುತ್ತಾ ಕಾಲೋನಿಯಲ್ಲಿರುವ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಿ.ಕೆ. ಶಿವಕುಮಾರ್, ಶಾಸಕ ಸಂಗಮೇಶ್ ಅವರು ಭದ್ರಾವತಿಯಿಂದ ನಾಲ್ಕು ಬಾರಿ ಗೆದ್ದಿದ್ದಾರೆ ಎಂದು ತಿಳಿಸಿದರು. ಭದ್ರಾವತಿಯ ಸಮಗ್ರ ಅಭಿವೃದ್ಧಿಗೆ ಸಚಿವ ಸ್ಥಾನವು ಅತ್ಯಂತ ಮುಖ್ಯವಾಗಿದ್ದು, ಜಿಲ್ಲೆಯಲ್ಲಿ ಸಂಗಮೇಶ್ ಹಿರಿಯ ಶಾಸಕರಾಗಿದ್ದಾರೆ ಎಂದು ಅವರು ಪ್ರತಿಪಾದಿಸಿದರು. ನಮ್ಮಂತೆ ಬೇರೆಯವರೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರೂ, ನಮ್ಮ ಶಾಸಕರು ಹಿರಿಯರಾಗಿರುವುದರಿಂದ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಪ್ರಸ್ತುತ ಭದ್ರಾವತಿ ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದು, ಸಚಿವ ಸ್ಥಾನ ಸಿಕ್ಕರೆ ನಗರ ಇನ್ನಷ್ಟು ವೇಗವಾಗಿ ಪ್ರಗತಿ ಸಾಧಿಸುತ್ತದೆ ಎಂದು ಬಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ರಾಜ್ಯದ ಏಳು ತಾಲೂಕುಗಳಲ್ಲಿ ಎಲ್ಲ ತಾಲೂಕುಗಳಿಗೆ ಸಚಿವ ಸ್ಥಾನ ದೊರೆತಿದ್ದರೂ, ನಾಲ್ಕು ಬಾರಿ ಶಾಸಕರಾದ ಸಂಗಮೇಶ್ ಅವರಿಗೆ ಭದ್ರಾವತಿಯಿಂದ ಇದುವರೆಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬುದನ್ನು ಅವರು ಗಮನ ಸೆಳೆದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕೆಂದು ಬಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
    1
    ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಶಿವಮೊಗ್ಗದ ಭದ್ರಾವತಿಯಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಭದ್ರಾವತಿಯ ಶಾಸಕ ಸಂಗಮೇಶ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಸಹೋದರ ಹಾಗೂ ಭದ್ರಾವತಿ ಪಿಎಲ್‌ಡಿ ಅಧ್ಯಕ್ಷ ಬಿ.ಕೆ. ಶಿವಕುಮಾರ್ ಅವರು ಹೈಕಮಾಂಡ್‌ಗೆ ಬಲವಾಗಿ ಆಗ್ರಹಿಸಿದ್ದಾರೆ.

ನಗರದ ಹುತ್ತಾ ಕಾಲೋನಿಯಲ್ಲಿರುವ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಬಿ.ಕೆ. ಶಿವಕುಮಾರ್, ಶಾಸಕ ಸಂಗಮೇಶ್ ಅವರು ಭದ್ರಾವತಿಯಿಂದ ನಾಲ್ಕು ಬಾರಿ ಗೆದ್ದಿದ್ದಾರೆ ಎಂದು ತಿಳಿಸಿದರು. ಭದ್ರಾವತಿಯ ಸಮಗ್ರ ಅಭಿವೃದ್ಧಿಗೆ ಸಚಿವ ಸ್ಥಾನವು ಅತ್ಯಂತ ಮುಖ್ಯವಾಗಿದ್ದು, ಜಿಲ್ಲೆಯಲ್ಲಿ ಸಂಗಮೇಶ್ ಹಿರಿಯ ಶಾಸಕರಾಗಿದ್ದಾರೆ ಎಂದು ಅವರು ಪ್ರತಿಪಾದಿಸಿದರು. ನಮ್ಮಂತೆ ಬೇರೆಯವರೂ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರೂ, ನಮ್ಮ ಶಾಸಕರು ಹಿರಿಯರಾಗಿರುವುದರಿಂದ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಸ್ತುತ ಭದ್ರಾವತಿ ಸಾಕಷ್ಟು ಅಭಿವೃದ್ಧಿ ಕಾಣುತ್ತಿದ್ದು, ಸಚಿವ ಸ್ಥಾನ ಸಿಕ್ಕರೆ ನಗರ ಇನ್ನಷ್ಟು ವೇಗವಾಗಿ ಪ್ರಗತಿ ಸಾಧಿಸುತ್ತದೆ ಎಂದು ಬಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ರಾಜ್ಯದ ಏಳು ತಾಲೂಕುಗಳಲ್ಲಿ ಎಲ್ಲ ತಾಲೂಕುಗಳಿಗೆ ಸಚಿವ ಸ್ಥಾನ ದೊರೆತಿದ್ದರೂ, ನಾಲ್ಕು ಬಾರಿ ಶಾಸಕರಾದ ಸಂಗಮೇಶ್ ಅವರಿಗೆ ಭದ್ರಾವತಿಯಿಂದ ಇದುವರೆಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬುದನ್ನು ಅವರು ಗಮನ ಸೆಳೆದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕೆಂದು ಬಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    19 hrs ago
  • ಸುಳ್ಯ ಮಂಡಲದ ವತಿಯಿಂದ ಪ್ರಧಾನಮಂತ್ರಿಯವರ 134ನೇ ಮನ್ ಕೀ ಬಾತ್ ಕಾರ್ಯಕ್ರಮದ ವೀಕ್ಷಣೆ ಹಾಗೂ ಕಾರ್ಯಕರ್ತರ ಸಭೆಯು ಇಂದು ಶಾಸಕರ ನಿವಾಸ ಮುರುಳ್ಯದಲ್ಲಿ ನಡೆಯಿತು. ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸತೀಶ್ ಕುಂಪಲ ಅವರು, ಕಳೆದ ಅವಧಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಸುಳ್ಯ ಮಂಡಲವು 100% ವೀಕ್ಷಣೆ ಮಾಡಿ ನಂ. 1 ಸ್ಥಾನವನ್ನು ಗಳಿಸಿತ್ತು ಎಂದು ಸ್ಮರಿಸಿದರು. ಈ ಬಾರಿಯೂ ಅದೇ ಫಲಿತಾಂಶವನ್ನು ನಿರೀಕ್ಷಿಸಲಾಗಿದ್ದು, ಜೂನ್ 5ರಿಂದ ಆರಂಭವಾಗುವ SIR ಕುರಿತು ವಿಶೇಷ ಗಮನ ಹರಿಸುವಂತೆ ಸಲಹೆ ನೀಡಿದರು. ಮತದಾರರಿಗೆ ಯಾವುದೇ ತೊಂದರೆಗಳಾಗದಂತೆ BLA2ಗಳು ಮತ್ತು ಕಾರ್ಯಕರ್ತರು ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ಅವರು ನಿರ್ದೇಶಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಪ್ರಧಾನಕಾರ್ಯದರ್ಶಿ ಯತೀಶ ಅರ್ವಾರ, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಮಂಡಲ‌ ಪ್ರಧಾನಕಾರ್ಯದರ್ಶಿ ವಿನಯ್ ಕಂದಡ್ಕ, ಮಹಿಳಾ ಮೊರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ, ಒಬಿಸಿ ಮೊರ್ಚಾ ಅಧ್ಯಕ್ಷ ಗಿರೀಶ ಪೈಲಾಜೆ, ಯುವಮೊರ್ಚಾ ಅಧ್ಯಕ್ಷ ಶ್ರಿಕಾಂತ್ ಮಾವಿನಕಟ್ಟೆ, ಮಂಡಲ ಕೋಶಾಧಿಕಾರಿ ಶುಭೋದ್ ಶೆಟ್ಟಿ ಮೇನಾಲ, ಮಂಡಲದ ಪ್ರಮುಖರಾದ ಎ.ವಿ ತೀರ್ಥರಾಮ, ವೆಂಕಟ್ ದಂಬೆಕೋಡಿ, ಹರೀಶ ಕಂಜಿಪಿಲಿ, ಎಸ್.ಎನ್. ಮನ್ಮಥ, ಕೇಶವ ಭಟ್ ಮುಳಿಯ, ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಅನೂಪ್ ಬಿಳಿಮಲೆ, ಮಹಿಳಾ ಪ್ರಮುಖರಾದ ಶುಭದ ರೈ, ಸುರ್ವಣಿನಿ ಪಂಜ, ಪುಷ್ಪವತಿ ಕಳುವಾಜೆ ಸಹಿತ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಸುಳ್ಯ ಮಂಡಲದ ವತಿಯಿಂದ ಪ್ರಧಾನಮಂತ್ರಿಯವರ 134ನೇ ಮನ್ ಕೀ ಬಾತ್ ಕಾರ್ಯಕ್ರಮದ ವೀಕ್ಷಣೆ ಹಾಗೂ ಕಾರ್ಯಕರ್ತರ ಸಭೆಯು ಇಂದು ಶಾಸಕರ ನಿವಾಸ ಮುರುಳ್ಯದಲ್ಲಿ ನಡೆಯಿತು. ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸತೀಶ್ ಕುಂಪಲ ಅವರು, ಕಳೆದ ಅವಧಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಸುಳ್ಯ ಮಂಡಲವು 100% ವೀಕ್ಷಣೆ ಮಾಡಿ ನಂ. 1 ಸ್ಥಾನವನ್ನು ಗಳಿಸಿತ್ತು ಎಂದು ಸ್ಮರಿಸಿದರು. ಈ ಬಾರಿಯೂ ಅದೇ ಫಲಿತಾಂಶವನ್ನು ನಿರೀಕ್ಷಿಸಲಾಗಿದ್ದು, ಜೂನ್ 5ರಿಂದ ಆರಂಭವಾಗುವ SIR ಕುರಿತು ವಿಶೇಷ ಗಮನ ಹರಿಸುವಂತೆ ಸಲಹೆ ನೀಡಿದರು. ಮತದಾರರಿಗೆ ಯಾವುದೇ ತೊಂದರೆಗಳಾಗದಂತೆ BLA2ಗಳು ಮತ್ತು ಕಾರ್ಯಕರ್ತರು ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ಅವರು ನಿರ್ದೇಶಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಪ್ರಧಾನಕಾರ್ಯದರ್ಶಿ ಯತೀಶ ಅರ್ವಾರ, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಮಂಡಲ‌ ಪ್ರಧಾನಕಾರ್ಯದರ್ಶಿ ವಿನಯ್ ಕಂದಡ್ಕ, ಮಹಿಳಾ ಮೊರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ, ಒಬಿಸಿ ಮೊರ್ಚಾ ಅಧ್ಯಕ್ಷ ಗಿರೀಶ ಪೈಲಾಜೆ, ಯುವಮೊರ್ಚಾ ಅಧ್ಯಕ್ಷ ಶ್ರಿಕಾಂತ್ ಮಾವಿನಕಟ್ಟೆ, ಮಂಡಲ ಕೋಶಾಧಿಕಾರಿ ಶುಭೋದ್ ಶೆಟ್ಟಿ ಮೇನಾಲ, ಮಂಡಲದ ಪ್ರಮುಖರಾದ ಎ.ವಿ ತೀರ್ಥರಾಮ, ವೆಂಕಟ್ ದಂಬೆಕೋಡಿ, ಹರೀಶ ಕಂಜಿಪಿಲಿ, ಎಸ್.ಎನ್. ಮನ್ಮಥ, ಕೇಶವ ಭಟ್ ಮುಳಿಯ, ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಅನೂಪ್ ಬಿಳಿಮಲೆ, ಮಹಿಳಾ ಪ್ರಮುಖರಾದ ಶುಭದ ರೈ, ಸುರ್ವಣಿನಿ ಪಂಜ, ಪುಷ್ಪವತಿ ಕಳುವಾಜೆ ಸಹಿತ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    5 hrs ago
  • ಭದ್ರಾವತಿ ನಗರದಲ್ಲಿ ಅನೈತಿಕ ಚಟುವಟಿಕೆಯೊಂದು ಪೊಲೀಸರ ದಾಳಿಯಿಂದ ಬಯಲಿಗೆ ಬಂದಿದೆ. ಸಿದ್ದಾಪುರ ಬೈಪಾಸ್ ಸಮೀಪದ ಪಿ.ಎಸ್ ಬಾರ್ ಹಿಂಭಾಗದಲ್ಲಿರುವ ಹಳೇ ಬಂಡಾರಹಳ್ಳಿಯ ತಗಡಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನ್ಯೂಟೌನ್ ಠಾಣೆ ಪೊಲೀಸರು ದಾಳಿ ನಡೆಸಿದರು. ದಾಳಿಯ ವೇಳೆ, ಮನೆಯಲ್ಲಿ ನಾಲ್ವರು ಮಹಿಳೆಯರು ಪತ್ತೆಯಾಗಿದ್ದು, ಅಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ದೃಢಪಟ್ಟಿದೆ. ಪೊಲೀಸರ ಪ್ರಕಾರ, ದಿವಂಗತ ಪುಟ್ಟಮಾಯಮ್ಮ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದುಕೊಂಡಿದ್ದ ರಾಬರ್ಟ್ ರವಿ ಎಂಬಾತ ಹಣದ ಆಮಿಷವೊಡ್ಡಿ ಯುವತಿಯರನ್ನು ಕರೆಸಿ ಈ ದಂಧೆ ನಡೆಸುತ್ತಿದ್ದನು. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ರಾಬರ್ಟ್ ರವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಸಬ್‌ಇನ್ಸ್‌ಪೆಕ್ಟರ್ ರಮೇಶ್ ಮಾಹಿತಿ ನೀಡಿದ್ದಾರೆ.
    1
    ಭದ್ರಾವತಿ ನಗರದಲ್ಲಿ ಅನೈತಿಕ ಚಟುವಟಿಕೆಯೊಂದು ಪೊಲೀಸರ ದಾಳಿಯಿಂದ ಬಯಲಿಗೆ ಬಂದಿದೆ. ಸಿದ್ದಾಪುರ ಬೈಪಾಸ್ ಸಮೀಪದ ಪಿ.ಎಸ್ ಬಾರ್ ಹಿಂಭಾಗದಲ್ಲಿರುವ ಹಳೇ ಬಂಡಾರಹಳ್ಳಿಯ ತಗಡಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನ್ಯೂಟೌನ್ ಠಾಣೆ ಪೊಲೀಸರು ದಾಳಿ ನಡೆಸಿದರು.

ದಾಳಿಯ ವೇಳೆ, ಮನೆಯಲ್ಲಿ ನಾಲ್ವರು ಮಹಿಳೆಯರು ಪತ್ತೆಯಾಗಿದ್ದು, ಅಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ದೃಢಪಟ್ಟಿದೆ. ಪೊಲೀಸರ ಪ್ರಕಾರ, ದಿವಂಗತ ಪುಟ್ಟಮಾಯಮ್ಮ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದುಕೊಂಡಿದ್ದ ರಾಬರ್ಟ್ ರವಿ ಎಂಬಾತ ಹಣದ ಆಮಿಷವೊಡ್ಡಿ ಯುವತಿಯರನ್ನು ಕರೆಸಿ ಈ ದಂಧೆ ನಡೆಸುತ್ತಿದ್ದನು.

ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ರಾಬರ್ಟ್ ರವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಸಬ್‌ಇನ್ಸ್‌ಪೆಕ್ಟರ್ ರಮೇಶ್ ಮಾಹಿತಿ ನೀಡಿದ್ದಾರೆ.
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.