ಪ್ರವಾದಿ ಹಜರತ್ ಮುಹಮ್ಮದ್ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಪ್ರವಾದಿ ಹಜರತ್ ಮಹಮ್ಮದ್ (ಸ.ಅ.) ಅವರ ಜೀವನ, ಆದರ್ಶ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಅವರ ಸಂದೇಶ ಕೇವಲ ಮುಸ್ಲಿಮರಿಗೆ ಸೀಮಿತವಾಗಿರದೆ, ಸಕಲ ಸೃಷ್ಟಿಯ ಮೇಲಿನ ಕರುಣೆ, ಪ್ರೀತಿ, ಕ್ಷಮೆ ಹಾಗೂ ಸಹೋದರತ್ವವನ್ನು ಸಾರುತ್ತದೆ ಎಂದು ಬೆಳಗಾವಿ ಜಮೀಯತೆ ಉಲಮಾ ಕಾರ್ಯದರ್ಶಿ ಹಜರತ್ ಮೌಲಾನಾ ಮಹಮ್ಮದ್ ಆರೀಫ್‌ಸಾಬ್ ಇನಾಮಿ ಹೇಳಿದರು. ನಗರದ ಉರ್ದು ಸೆಂಟ್ರಲ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ಹಜರತ್ ಮಹಮ್ಮದ್ ಪೈಗಂಬರ್ (ಸ.ಅ.) ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರವಾದಿ ಮಹಮ್ಮದ್ ಅವರನ್ನು ಅಲ್ಲಾಹನು ಕೇವಲ ಮನುಷ್ಯರಿಗಷ್ಟೇ ಅಲ್ಲದೆ, ಪ್ರಾಣಿ-ಪಕ್ಷಿಗಳು ಸೇರಿದಂತೆ ಸಕಲ ಸೃಷ್ಟಿಗಳಿಗೂ ಕರುಣೆಯಾಗಿ ಕಳುಹಿಸಿದ್ದಾನೆ ಎಂದು ಹೇಳಿದರು. ತಾಯಿಫ್‌ನಲ್ಲಿ ಪ್ರವಾದಿ ಮುಹಮ್ಮದ್ ಅವರ ಮೇಲೆ ಕಲ್ಲು ತೂರಿ ಹಲ್ಲೆ ನಡೆಸಿದ ಸಂದರ್ಭದಲ್ಲೂ ಅವರು ಪ್ರತೀಕಾರದ ಮನೋಭಾವ ತೋರಲಿಲ್ಲ. ತಮ್ಮನ್ನು ನೋಯಿಸಿದವರಿಗೂ ಮಾರ್ಗದರ್ಶನ ದೊರೆಯಲಿ ಎಂದು ಪ್ರಾರ್ಥಿಸಿದರು. ಇದು ಅವರ ಕ್ಷಮೆ, ಸಹನೆ ಹಾಗೂ ಮಾನವೀಯತೆಯ ಪ್ರತೀಕವಾಗಿದೆ ಎಂದರು. ಪ್ರವಾದಿ ಮುಹಮ್ಮದ್ ಅವರ ಬೋಧನೆಗಳಲ್ಲಿ ಯಾವುದೇ ಸಮುದಾಯದ ಮೇಲೆ ಅನ್ಯಾಯಕ್ಕೆ ಅವಕಾಶವಿಲ್ಲ. ದೌರ್ಜನ್ಯ ಹಾಗೂ ಅಸಮಾನತೆ ಮಿತಿ ಮೀರಿದಾಗ ನ್ಯಾಯದ ಪರವಾಗಿ ನಿಲ್ಲುವ ಸಂದೇಶವನ್ನು ಅವರು ನೀಡಿದ್ದಾರೆ. ಮಹಿಳೆಯರಿಗೆ ಗೌರವ ಮತ್ತು ಹಕ್ಕುಗಳನ್ನು ನೀಡುವ ಮೂಲಕ ಸಮಾಜದಲ್ಲಿ ಅವರ ಸ್ಥಾನಮಾನವನ್ನು ಎತ್ತಿಹಿಡಿದರು ಎಂದು ತಿಳಿಸಿದರು. ಮುಸ್ಲಿಂ ಧರ್ಮ ತಲವಾರಿನಿಂದ ಜನಿಸಿಲ್ಲ. ಪ್ರವಾದಿ ಮುಹಮ್ಮದ್ ಅವರ ಉತ್ತಮ ವ್ಯಕ್ತಿತ್ವ, ಸತ್ಯವಂತಿಕೆ, ಪ್ರಾಮಾಣಿಕತೆ, ಕರುಣೆ ಹಾಗೂ ಮಾನವೀಯತೆಯ ಸಂದೇಶದಿಂದ ಜನರ ಹೃದಯಗಳನ್ನು ಗೆದ್ದಿದೆ. ಭೂಮಿ ಇರುವವರೆಗೂ ಮುಸ್ಲಿಂ ಧರ್ಮದ ಸಂದೇಶವೂ ಮುಂದುವರಿಯಲಿದೆ ಎಂದು ಹೇಳಿದರು. ದೇಶದಲ್ಲಿ ಧರ್ಮ, ಜಾತಿ, ಭಾಷೆಯ ಭೇದ ಮರೆತು ಭಾತೃತ್ವ ಹಾಗೂ ಸೌಹಾರ್ದತೆಯಿಂದ ಬದುಕುವ ವಾತಾವರಣ ನಿರ್ಮಾಣವಾಗಬೇಕು. ವಿವಿಧ ಬಣ್ಣ ಮತ್ತು ಪರಿಮಳದ ಹೂಗಳು ಒಂದಾಗಿ ತೋಟದ ಸೌಂದರ್ಯ ಹೆಚ್ಚಿಸುವಂತೆ, ವಿವಿಧ ಧರ್ಮಗಳ ಜನರು ಪ್ರೀತಿ ಹಾಗೂ ಸಹೋದರತ್ವದಿಂದ ಬದುಕಿದಾಗ ದೇಶದ ಶಕ್ತಿ ಹೆಚ್ಚುತ್ತದೆ ಎಂದರು. ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಕ್ಬರ್‌ಸಾಬ್ ಬಬರ್ಚಿ ಮಾತನಾಡಿ ಈದ್ ಮಿಲಾದ್‌ನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ ಸಮಾಜಮುಖಿ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು. ಡಿಜೆ, ಕುಣಿತ ಹಾಗೂ ಅನಗತ್ಯ ಖರ್ಚಿನ ಬದಲು ಬಡವರಿಗೆ ನೆರವು, ಅನ್ನದಾನ ಹಾಗೂ ಆರೋಗ್ಯ ಸೇವೆಯಂತಹ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಕಮಿಟಿ ವತಿಯಿಂದ ಈಗಾಗಲೇ 150ಕ್ಕೂ ಹೆಚ್ಚು ಜನರಿಗೆ ಕಣ್ಣಿನ ಹಾಗೂ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದು ತಿಳಿಸಿದರು. ಕೃಷ್ಣ ಗೌಡ ಪಾಟೀಲ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಮೀಯತೆ ಉಲಮಾ ಕಮಿಟಿ ಅಧ್ಯಕ್ಷ ಮೌಲಾನಾ ಇನಾಯತುಲ್ಲಾಸಾಬ್ ಪಿರಜಾದೆ, ಪೀರಸಾಬ ಕೌತಾಳ,ಮೌಲಾನಾ ಅಬ್ದುಲ್ ರಹೀಮ್ ಚಂದುನವರ, ಆಸೀಫ್ ದಂಡಿನ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಭಾಷಾಸಾಬ್ ಮಲ್ಲಸಮುದ್ರ ನಿರ್ವಹಿಸಿದರು.

- ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ1
- ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ1
- ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.1
- ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.4
- ಇಳಕಲ್ ನಗರದಲ್ಲಿ ಟಾಕ್ಸಿಕ್ ಸಿನಿಮಾ ಭರ್ಜರಿ ಓಪನಿಂಗ್ ; ಅಭಿಮಾನಿಗಳಿಂದ ಉತ್ತಮ ಪ್ರಶಂಸೆ. ಇಳಕಲ್ ನಗರದಲ್ಲಿ ಟಾಕ್ಸಿಕ್ ಸಿನಿಮಾ ಭರ್ಜರಿ ಓಪನಿಂಗ್ ಪಡೆದಿದೆ. ನಗರದ ಶ್ರೀನಿವಾಸ್ ಚಿತ್ರಮಂದಿರದಲ್ಲಿ ಮೊದಲನೇ ಶೋ ದಿಂದ ಸಂಜೆಯ ಶೋ ವರೆಗೂ ಹೌಸ್ ಫುಲ್ ಪ್ರದರ್ಶನ ಕಂಡಿತು. ಟಿಕೆಟ್ ಸಿಗದೇ ಕೆಲವು ಅಭಿಮಾನಿಗಳು, ಮಂತರದ ನೋಡಿದರಾಯ್ತು ಎಂದು ವಾಪಸಾದ ಘಟನೆಗಳು ನಡೆದವು.1
- ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ಗುಳೇದಗುಡ್ಡ ಪಟ್ಟಣದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ ಗುಳೇದಗುಡ್ಡ: ಪಟ್ಟಣದಲ್ಲಿ ಹಜರತ್ ಮಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ನಿಮಿತ್ತವಾಗಿ ಬುಧವಾರ ಪವಿತ್ರ ಈದ್ ಮಿಲಾದ್ ಹಬ್ಬದ ಅದ್ದೂರಿ ಮೆರವಣಿಗೆ ನಡೆಯಿತು. ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಆಚರಿಸಲಾಗುವ ಈದ್ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆ ಪಟ್ಟಣದ ಭಾಗವಾನ್ ಪೇಟೆಯಿಂದ ಆರಂಭವಾಗಿ ಪವಾರ್ ಕ್ರಾಸ್, ಪುರಸಭೆ, ಸರಾಫಬಜಾರ್, ಕಂಠಿಪೇಟೆ, ಗಚ್ಚಿನಕಟ್ಟಿ, ಚೌಬಜಾರ, ಅರಳಿಕಟ್ಟಿ ಮೂಲಕ ಹಾಯ್ದು ಭಾಗವಾನ್ ಪೇಟೆಗೆ ತಲುಪಿತು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಹಾಗೂ ಸಮಾಜದ ಮುಖಂಡರಾದ ಮುಬಾರಕ್ ಮಂಗಳೂರು, ಅಂಜುಮನ್ ಕಮೀಟಿ ಅಧ್ಯಕ್ಷ ರಜಾಕ್ ಕುದರಿ, ಸಾಧನಿ ಭಾಷಾ, ಮಶಾಕ್ ನಲವತ್ತವಾಡ, ಜಾವಿದ್ ಮೊಮಿನ್, ಜಿಲಾನಿ ಮುಜಾಹಿದ್, ರಫಿಕ್ ಕಲ್ಬುರ್ಗಿ, ದೇವರಾಜ ಕಟ್ಟಿಮನಿ, ಗೋವಿಂದ ರಾಠೋಡ, ರಫಿಕ್ ಮಕನದಾರ, ಮೋದಿನಸಾಬ್ ಸದರಿ, ರೀಯಾಜ್ ಚೊಳಚಗುಡ್ಡ, ಗುಲಾಮ್ ಹುಸೇನ್ ಇಲ್ಲಕಲ್, ಅಲ್ಲಾಸಾಬ ದೋಟೆಗಾರ ಸೇರಿದಂತೆ ಸಮಾಜದ ಮುಖಂಡರು ಇದ್ದರು. ಮೆರವಣಿಗೆಯಲ್ಲಿ ಸಮಾಜದ ಧರ್ಮ ಮುಖ್ಯಗುರುಗಳಾದ ಮುಪ್ತಿ ಸಕಾಫಿ ಅಬೂಬಕರ್ ಅವರಿಗೆ ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮುಬಾರಕ್ ಮಂಗಳೂರ ಅವರು ಸನ್ಮಾನಿಸಿದರು.2
- ನೋಡಿ ಕಾರೊಂದು ಕೆರೆಯೊಳಗೆ ಉರುಳಿಬಿದ್ದಿದೆ. ನೀರಿನೊಳಗೆ ಮುಳುಗುತ್ತಿದ್ದ ಕಾರಿನಲ್ಲಿದ್ದವರನ್ನು ಸ್ಥಳೀಯರು ತಕ್ಷಣ ಕಾರಿನೊಳಗಿದ್ದವರನ್ನು ರಕ್ಷಿಸಿದ್ದಾರೆ..1
- ಧಾರವಾಡ ಉತ್ತರಾದಿಮಠದ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ಧಾರವಾಡ ಉತ್ತರಾದಿಮಠದ ಶ್ರೀ ಹಯಗ್ರೀವದೇವರ ಸಪ್ತರಾತ್ರೋತ್ಸವದ ಅಂಗವಾಗಿ ಬುಧವಾರ ಸಂಜೆ ಎಮ್ಮಿಕೇರಿಯಿಂದ ಶ್ರೀಮಠದವರೆಗೆ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ನಡೆಯಿತು. ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಜನಾ ಮಂಡಳಿ ಸದಸ್ಯೆಯರು ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಹಾಡುತ್ತ ಸಾಗಿದರು. ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಪಂ. ಪ್ರಹ್ಲಾದಾಚಾರ್ಯ ಗಲಗಲಿ, ಆರ್.ಎಂ. ಕುಲಕರ್ಣಿ, ಪಂ. ಕೇಶವಾಚಾರ್ಯ ಕೆರೂರ, ಜಯತೀರ್ಥಾಚಾರ್ಯ ಗಲಗಲಿ, ಹನುಮಂತ ಕೊಟಬಾಗಿ, ಶ್ರೀಹರಿ ಕೊಪ್ಪರ, ರವೀಂದ್ರ ದೇಶಪಾಂಡೆ, ಅಶೋಕ ಚಚಡಿ, ಸುರೇಶಾಚಾರ್ಯ ರಾಯಚೂರ, ದೇಶಮುಖ ಸೇರಿದಂತೆ ಹಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.1