Shuru
Apke Nagar Ki App…
ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಸಿರವಾರ: ಗಣೇಶ ಮೂರ್ತಿ ತರುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಮೃತಪಟ್ಟಿದ್ದ ಸಿರವಾರ ಪಟ್ಟಣದ ಯುವಕ ಪ್ರೇಮ್ ಸುಂದರ್ ಅವರ ಸ್ಮರಣಾರ್ಥದ ಪ್ರಯುಕ್ತ ಸಿರವಾರ ಪಟ್ಟಣದಲ್ಲಿ ಮಂಗಳವಾರ ಸಂಜೆ ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮಾಡುವ ಮೂಲಕ ಅಗಲಿದ ಚೇತನಕ್ಕೆ ನಮನ ಸಲ್ಲಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ವಾಲ್ಮೀಕಿ ವೃತ್ತದ ವರೆಗೆ ನಡೆಯಿತು. ಪ್ರೇಮ್ ಸುಂದರ ಅವರ ಸರಳತೆ, ನಡೆ, ನುಡಿ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿದರು. ಪ್ರೇಮ್ ಸುಂದರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಈ ವೇಳೆ ಪಟ್ಟಣದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.
Mallikarjun Athnoor
ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಸಿರವಾರ: ಗಣೇಶ ಮೂರ್ತಿ ತರುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಮೃತಪಟ್ಟಿದ್ದ ಸಿರವಾರ ಪಟ್ಟಣದ ಯುವಕ ಪ್ರೇಮ್ ಸುಂದರ್ ಅವರ ಸ್ಮರಣಾರ್ಥದ ಪ್ರಯುಕ್ತ ಸಿರವಾರ ಪಟ್ಟಣದಲ್ಲಿ ಮಂಗಳವಾರ ಸಂಜೆ ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮಾಡುವ ಮೂಲಕ ಅಗಲಿದ ಚೇತನಕ್ಕೆ ನಮನ ಸಲ್ಲಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ವಾಲ್ಮೀಕಿ ವೃತ್ತದ ವರೆಗೆ ನಡೆಯಿತು. ಪ್ರೇಮ್ ಸುಂದರ ಅವರ ಸರಳತೆ, ನಡೆ, ನುಡಿ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿದರು. ಪ್ರೇಮ್ ಸುಂದರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಈ ವೇಳೆ ಪಟ್ಟಣದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.
More news from ಕರ್ನಾಟಕ and nearby areas
- ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಸಿರವಾರ: ಗಣೇಶ ಮೂರ್ತಿ ತರುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಮೃತಪಟ್ಟಿದ್ದ ಸಿರವಾರ ಪಟ್ಟಣದ ಯುವಕ ಪ್ರೇಮ್ ಸುಂದರ್ ಅವರ ಸ್ಮರಣಾರ್ಥದ ಪ್ರಯುಕ್ತ ಸಿರವಾರ ಪಟ್ಟಣದಲ್ಲಿ ಮಂಗಳವಾರ ಸಂಜೆ ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮಾಡುವ ಮೂಲಕ ಅಗಲಿದ ಚೇತನಕ್ಕೆ ನಮನ ಸಲ್ಲಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ವಾಲ್ಮೀಕಿ ವೃತ್ತದ ವರೆಗೆ ನಡೆಯಿತು. ಪ್ರೇಮ್ ಸುಂದರ ಅವರ ಸರಳತೆ, ನಡೆ, ನುಡಿ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿದರು. ಪ್ರೇಮ್ ಸುಂದರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಈ ವೇಳೆ ಪಟ್ಟಣದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.1
- ಯಾದಗಿರಿ-ರಾಯಚೂರು ಹೆದ್ದಾರಿಯ ಅವೈಜ್ಞಾನಿಕ ಟೋಲ್ ತೆರವಿಗೆ ಉಮೇಶ್ ಕೆ. ಮುನ್ನಾಳ್ ಖಡಕ್ ಆಗ್ರಹ ಯಾದಗಿರಿ-ರಾಯಚೂರು ಹೆದ್ದಾರಿಯ ಆರ್. ಹೊಸಳ್ಳಿ-ನಾಗಲಾಪುರ ಮಧ್ಯದಲ್ಲಿರುವ ಟೋಲ್ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದು, ಸಮರ್ಪಕ ವಿದ್ಯುತ್ ದೀಪಗಳು ಹಾಗೂ ಸುರಕ್ಷತಾ ಸೂಚನೆಗಳ ಕೊರತೆಯಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುನ್ನಾಳ್ ಆರೋಪಿಸಿದರು. ಸ್ಥಳಕ್ಕೆ ಭೇಟಿ ನೀಡಿ ರೈತರು ಹಾಗೂ ವಾಹನ ಸವಾರರೊಂದಿಗೆ ಚರ್ಚಿಸಿದ ಅವರು, ಟೋಲ್ ಅನ್ನು ತಕ್ಷಣ ತೆರವುಗೊಳಿಸಿ ಮುಂದಿನ ಅವಘಡಗಳನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈಗಾಗಲೇ ಹಲವು ಜೀವಗಳು ಬಲಿಯಾಗಿವೆ ಎಂದು ಹೇಳಿದ ಅವರು, ಸರ್ಕಾರ ನಿರ್ಲಕ್ಷ್ಯ ಮುಂದುವರಿಸಿದರೆ ಇದೇ ಸ್ಥಳದಲ್ಲಿ ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.1
- ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿ: ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಪತ್ತು ಸಭೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಸ್ಕಿ ಶಾಸಕ **ಆರ್. ಬಸನಗೌಡ ತುರುವಿಹಾಳ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳನ್ನು ಯುವಜನರಿಗೆ ಪರಿಚಯಿಸುವುದು ಅಗತ್ಯವಾಗಿದ್ದು, ಯುವಕರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಯುವಕರು ಹಾಗೂ ಸಾರ್ವಜನಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.1
- ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ವಿಗ್ರಹಕ್ಕೆ ಆರತಿ ಮಾಡಿದರು. ಲಿಂಗಸುಗೂರು : ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಪರಮ ಪೂಜ್ಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ಚತುರ್ಥಿ ದಿನದ ಹಂಗವಾಗಿ ವಿಘ್ನವಿನಾಶಕ ಶ್ರೀ ವಿನಾಯಕನ ವಿಗ್ರಹಕ್ಕೆ ಸಾಂಪ್ರದಾಯಕ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು.1
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.4
- ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.1
- ಅವೈಜ್ಞಾನಿಕವಾಗಿ ಟೋಲ್ ಗೇಟ್ ನಿರ್ಮಾಣ ಮಾಡಿದ್ದು ತೆರವುಗೊಳಿಸಲು ಆಗ್ರಹ ಅವೈಜ್ಞಾನಿಕವಾಗಿ ಟೋಲ್ ತುರ್ತಾಗಿ ತೆರವುಗೊಳಿಸಿ ಮುಂದಾಗುವ ಅವಘಡಗಳನ್ನು ತಪ್ಪಿಸಲು ಸರ್ಕಾರಗಳು ಮುಂದಾಗಬೇಕು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಒತ್ತಾಯ. ಅವೈಜ್ಞಾನಿಕವಾಗಿ ಟೋಲ್‌ನಿಂದ ಸಾಕಷ್ಟು ಬಡ ಚಾಲಕರು ಜೀವ ಬಲಿಯಾಗಿದ್ದು ಇನ್ನಷ್ಟು ಜೀವ ಬಲಿಯಾಗಬೇಕು ? ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪಿಸಿದ್ದಾರೆ. ಯಾದಗಿರಿ : ಬಡ ವಾಹನ ಚಾಲಕರ ನಿರಂತರ ಜೀವ ತೆಗೆಯುತ್ತಿರುವ ಯಾದಗಿರಿ ರಾಯಚೂರು ಹೆದ್ದಾರಿಗೆ ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲ್‌ನ್ನು ತುರ್ತಾಗಿ ತೆರವುಗೊಳ್ಳಿಸಿ ಇಂದೇ ಆದ ಅನಾವುತಗಳನ್ನು ಇನ್ನು ಮುಂದೇ ಅನಾವುತಗಳನ್ನು ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ ಯಾದಗಿರಿ ತಾಲ್ಲೂಕಿನ ಆರ್.ಹೊಸಳ್ಳಿ ಮತ್ತು ನಾಗಲಾಪುರ ಮಧ್ಯದಲ್ಲಿ ಬರುವ ಯಾದಗಿರಿ ರಾಯಚೂರು ಹೋಗುವ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲ್ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಬೇಟಿ ನೀಡಿ ಪರಿಶೀಲಿಸಿದ ನಂತರ ರೈತರ ಮತ್ತು ವಾಹನ ಸವಾರರ ಜೊತೆ ಚರ್ಚಿಸಿ ನಂತರ ದೀಡಿರ್‌ನ ಸ್ಥಳದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಈ ಟೋಲ್‌ನಲ್ಲಿ ವಿದ್ಯುತ್ ಲೈಟ್, ಸ್ಟೀಕರ್ ಸರಿಯಾಗಿ ಅಳವಡಸದೆ ಅವೈಜ್ಞಾನಿಕವಾಗಿ ನಿರ್ಮಿಸಿ ಈ ಟೋಲ್‌ನಲ್ಲಿ ಈಗಾಗಲೇ ಸಾಕಷ್ಟು ಜೀವಗಳು ಬಲಿಯಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರ ಇಲ್ಲಿವರೆಗೆ ಯಾವುದೇ ಕ್ರಮ ಕೈಗೊಳ್ಳದೇ ದಿವ್ಯ ನಿರ್ಲಕ್ಷವಹಿಸಿರುವುದು ಇದು ನಾಚೀಗೇಡಿನ ಸಂಗತಿ ಎಂದು ದಿನ ನಿತ್ಯ ಈ ರಸ್ತೆಯಲ್ಲಿ ಸಾವಿರಾರೂ ವಾಹನಗಳು ಸಂಚಾರ ಮಾಡುತ್ತಿದ್ದು ಅವೈಜ್ಞಾನಿಕವಾಗಿ ನಿರ್ಮಿಸಿದ ಟೋಲನ ಕಾರಣ ಬಡವ ಜೀವಗಳು ಬಲಿಯಾಗುತ್ತಿದ್ದು ಸಂಬAಧಪಟ್ಟ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತು ಇನ್ನೆಷ್ಟು ಬಡಜೀವಿಗಳನ್ನು ಬಲಿಪಶು ಮಾಡುತ್ತಿದ್ದಿರಿ ಎಂದು ಕಾರವಾಗಿ ಪ್ರಶ್ನಿಸಿದರು. ತಕ್ಷಣ ಟೋಲ್‌ನ್ನು ತೆರವುಗೊಳ್ಳಿಸಿ ಮುಂದಾಗುವ ಅವಗಡಗಳನ್ನು ತಪ್ಪಿಸಲು ಸರ್ಕಾರಗಳು ಮುಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಈ ಟೋಲ್ ಸ್ಥಳದಲ್ಲೇ ಮುಖ್ಯ ರಸ್ತೆ ತಡೆದ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸರ್ಕಾರಗಳಿಗೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದೇ ಸಂದರ್ಬದಲ್ಲಿ ಮಲ್ಲೇಶಿ, ಪವನ. ತಿಪ್‌ಣ್ಣ, ಬಸಲಿಂಗಪ್ಪ, ಹಣಮಂತ, ಮರಲಿಂಗಪ್ಪ, ಮಹಾದೇವಪ್ಪ ಮೋನಪ್ಪ ಮಲ್ಲಪ್ಪ ಚಂದ್ರು ಸಿದ್ದು ತಿಮ್ಮಪ್ಪ ಮಲ್ಲಪ್ಪ ಆನಂದ ಭೀಮಪ್ಪ ಮಲ್ಲಪ್ಪ ಸಾಬು ಮಲ್ಲಪ್ಪ ಸೇರಿದಂತೆ ಅನೇಕು ಇದ್ದರು2
- ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಮಸ್ಕಿ: ಪಟ್ಟಣದ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು ಗಣೇಶ ಮೂರ್ತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು, ಗೌರಿ ಗಣೇಶ ಹಬ್ಬವು ಜನರಲ್ಲಿ ಭಕ್ತಿ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಭಾವನೆ ಮೂಡಿಸುವ ಪ್ರಮುಖ ಹಬ್ಬವಾಗಿದೆ. ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು. ಬಸವೇಶ್ವರನಗರದ ಗಣೇಶೋತ್ಸವ ಸಮಿತಿ ವತಿಯಿಂದ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ಭಕ್ತರು ಉಪಸ್ಥಿತರಿದ್ದರು.1