ಕೆಲವು ಮುಖಂಡರು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸಚಿವರು ಮತ್ತು ಶಾಸಕರು ಏಕಾಏಕಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಆದರೆ ಜಂಗಮಕೋಟೆಯಲ್ಲಿ ಸಭೆ ನಡೆಸಿ, ಎಲ್ಲಾ ರೈತರನ್ನೂ ಕರೆಸಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂಬುದು ವಾಸ್ತವ. ಈ ಸಂಗತಿಯನ್ನು ಕಡೆಗಣಿಸಿ ಶಾಸಕರ ಬಗ್ಗೆ ತಪ್ಪು ಪ್ರಚಾರ ಮಾಡುವುದು ಸರಿಯಲ್ಲ.ರೈತರ ಹೋರಾಟ ಆರಂಭದಲ್ಲಿ ನ್ಯಾಯಸಮ್ಮತವಾಗಿತ್ತು. ಆದರೆ ಸಂಸದ ಸುಧಾಕರ್ ಅವರ ಮನೆಗೆ ತೆರಳಿ ಅವರನ್ನು ಭೇಟಿ ಮಾಡಿದ ಬಳಿಕ ಈ ಹೋರಾಟಕ್ಕೆ ರಾಜಕೀಯ ಬಣ್ಣ ಹಚ್ಚಲಾಗಿದೆ ಎಂಬ ಪ್ರಶ್ನೆ ಎದುರಾಗಿದೆ. ಇದು ನಿಜವಾಗಿಯೂ ರೈತರ ಹೋರಾಟವೇ ಅಥವಾ ರಾಜಕೀಯ ಪ್ರೇರಿತ ಹೋರಾಟವೇ ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಮೂಡಿವೆ.ಇನ್ನೊಂದೆಡೆ, ರೈತರು ಯಾವುದೇ ರಾಜಕೀಯ ನಾಯಕರ ಪ್ರಭಾವಕ್ಕೆ ಒಳಗಾಗದೆ ಸ್ವತಂತ್ರವಾಗಿ ಹೋರಾಟ ನಡೆಸುತ್ತಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಇದೇ ವೇಳೆ ರೈತರ ಮನವಿಗೆ ಸ್ಪಂದಿಸಿ ಕೃಷಿ ಭೂಮಿಯನ್ನು ಸಚಿವರು ಮತ್ತು ಶಾಸಕರು ಉಳಿಸುವ ಕ್ರಮ ಕೈಗೊಂಡಿರುವುದು ಗಮನಾರ್ಹ.ಸತ್ಯ ಪರಿಸ್ಥಿತಿ ಕಣ್ಣಮುಂದೆ ಇದ್ದರೂ ಅನಗತ್ಯ ಆರೋಪಗಳನ್ನು ಮಾಡುವುದು ತಪ್ಪು. ತಾಲೂಕಿನ ಜನರು ಬುದ್ಧಿವಂತರಾಗಿದ್ದು, ಸರಿ-ತಪ್ಪುಗಳನ್ನು ಸ್ಪಷ್ಟವಾಗಿ ಅರಿತು ಗಮನಿಸುತ್ತಿದ್ದಾರೆ. ಆದರೆ ಈ ವಾಸ್ತವವನ್ನು ಕೆಲವರು ಅರ್ಥಮಾಡಿಕೊಳ್ಳದೇ ಇರುವುದು ವಿಷಾದಕರ ಎಂದು ಜನಾಭಿಪ್ರಾಯ ಪಟ್ಟಿದ್ದಾರೆ

- ಪವನ್ ಕಲ್ಯಾಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಂದ ವಿಶೇಷ ಪೂಜೆ:- ಬಾಗೇಪಲ್ಲಿ:-ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಾಗೇಪಲ್ಲಿ ಅವರ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪಟ್ಟಣದ ಪ್ರಸಿದ್ಧ ಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜನಸೇನಾ ಪಕ್ಷದ ಮುಖಂಡ ಹಾಗೂ ವಕೀಲರಾದ ನರಸಿಂಹ ಮೂರ್ತಿ ಮಾತನಾಡಿ ಪಟ್ಟಣದ ಜಡಲ ಭೈರವೇಶ್ವರ ದೇವಾಲಯದಲ್ಲಿ ಪವನ್ ಕಲ್ಯಾಣ್ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ತದನಂತರ ದೇವಾಲಯದ ಮುಂದೆ ತೆಂಗಿನಕಾಯಿ ಒಡೆದು ಪವನ್ ಕಲ್ಯಾಣ್ ಅವರು ಬೇಗನೇ ಚೇತರಿಸಿಕೊಂಡು ಸಕ್ರಿಯ ರಾಜಕೀಯಕ್ಕೆ ಮರಳಲಿ ಎಂದು ಅಭಿಮಾನಿಗಳು ಪಟ್ಟಣದ ಭೈರವೇಶ್ವರ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳು ಮತ್ತು ಇತರ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ದೀಪಾರಾಧನೆ ಮತ್ತು ಪ್ರಾರ್ಥನೆಗಳನ್ನು ಮಾಡಿದರು. ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದರು. ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಶನಿವಾರ ಸಂಜೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಚೇತರಿಸಿಕೊಳ್ಳುತ್ತಿರುವ ಅವರಿಗೆ 10 ದಿನಗಳ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ. ಎಂದು ಹೇಳಿದರು. ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತ ಸಂಬಂಧಿತ ಸಭೆ ನಡೆಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಹಠಾತ್ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ನಂತರ ವೈದ್ಯರ ತಂಡವು ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಶಿಫಾರಸು ಮಾಡಿತು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ ಎಂದು ಹೇಳಿದರು. ಆದ್ದರಿಂದ ಇಂದು ಬಾಗೇಪಲ್ಲಿ ಪಟ್ಟಣದಲ್ಲಿ ಪವನ್ ಕಲ್ಯಾಣ್ ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಹೋಮಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಮೃತ ಕುಮಾರ್, ರಾಮು.ವಿ.ಅಜಯ್, ಮಂಜುನಾಥ್,ಅರುಣ್ ಕೆ.ಎನ್ ಹಾಗೂ ಸಾರ್ವಜನಿಕರು ಹಾಜರಿದ್ದರು.1
- ನೆಲಮಂಗಲ ಬೆಂಕಿ ಪೊಟ್ಟಣಕ್ಕಾಗಿ ಬಾರ್ ಸಪ್ಲೈಯರ್ ಗೆ ಚಾಕು ಇರಿದಿದ್ದ ಪ್ರಕರಣ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಬಂಧನ ಕಳೆದ ಏ.11 ರಂದು ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ನಡೆದಿದ್ದ ಘಟನೆ ಸಪ್ತಗಿರಿ ಬಾರ್ ನಲ್ಲಿ ಮ್ಯಾಚ್ ಬಾಕ್ಸ್ ತಡವಾಗಿ ನೀಡಿದಕ್ಕೆ ಗಲಾಟೆ ಆರೋಪಿ ಪಾವಗಡದ ಮೊಹಮ್ಮದ್ ಸುಫಿಯಾನ್ (20) ಧಾರವಾಡದ ಮೂಲದ ಬಾರ್ ಸಫ್ಲೈಯರ್ ಸಂಜುಗೆ ಚಾಕು ಇರಿತ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸದ್ಯ ಆರೋಪಿಯನ್ನ ಬಂಧಿಸಿರುವ ದಾಬಾಸ್ ಪೇಟೆ ಪೊಲೀಸರು ಆರೋಪಿ ಮೊಹಮ್ಮದ್ ಪರಪ್ಪನ ಅಗ್ರಹಾರಕ್ಕೆ ಅಟ್ಟಿರೋ ಪೊಲೀಸರು.2
- Post by Vv Vv1
- ನಗರೇನಹಳ್ಳಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ನಗರೇನಹಳ್ಳಿ ಗ್ರಾಮದಲ್ಲಿ ಸುಮಾರು 30 ಲಕ್ಷ ರೂ. ಆರ್‌ಡಿಪಿಆರ್ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಿಸುವ ಕಾಮಗಾರಿಯ ಭೂಮಿಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಲಾಯಿತು1
- ಬಸವನಗುಡಿಯಲ್ಲಿ ಅಗ್ನಿ ಅವಘಡ, ಆತಂಕ ಟೆಂಟ್‌ಗಳಿಗೆ ಬೆಂಕಿ, ದಟ್ಟ ಹೊಗೆ ವ್ಯಾಪ್ತಿ1
- ನಾರಿಶಕ್ತಿ ವಂದನಾ ಮಸೂದೆ ಮಂಡನೆ ವಿರುದ್ಧ ಮತ ಚಲಾಯಿಸಿದ ಕಾಂಗ್ರೇಸ್ ಮಿತ್ರ ಪಕ್ಷಗಳ ನಡೆ ಖಂಡಿಸಿ ಬೃಹತ್ ಪ್ರತಿಭಟನೆ1
- Post by Chand Pasha1
- ಬಿರಿಯಾನಿ–ಸೀರೆಗೆ ಜನರ ನೂಕುನುಗ್ಗಲು ಟೇಕಲ್ ಕಾರ್ಯಕ್ರಮದಲ್ಲಿ ಗೊಂದಲ, ನಿಯಂತ್ರಣಕ್ಕೆ ಹರಸಾಹಸ1