ನಮ್ಮ ಭಾಗದ ಲಕ್ಷ್ಯಾಂತರ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಅಳವಡಿ ಕಾರ್ಯ ನಡೆಯುತ್ತಿದ್ದು, ಅವುಗಳನ್ನು ಕಾಲಮಿತಿಯೊಳಗೆ ಅಳವಡಿಸಿ, ರೈತರಿಗೆ ಅನುಕೂಲ ಮಾಡಿಕೊಡಲಾಗುವುದು. ನೂತನ ಕ್ರಸ್ಟ್ ಗೇಟಗಳ ಅಳವಡಿಕೆ ಕಾರ್ಯವನ್ನು ಪರಿಶೀಲಿಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿ, ಮಾತನಾಡಿದೆನು. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ ಅಳವಡಿಸುವ ಕುರಿತಂತೆ ಚಳಿಗಾಲ ಅಧಿವೇಶನಕ್ಕೂ ಪೂರ್ವದಲ್ಲಿ ಕೆ.ಎನ್.ಎನ್.ಎಲ್ ಹಾಗೂ ತುಂಗಭದ್ರಾ ಮಂಡಳಿಯ ಅಧಿಕಾರಿಗಳು ಮತ್ತು ಕ್ರಸ್ಟ್ ಗೇಟ್ ಅಳವಡಿಕೆ ಕಂಪನಿಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ನಂತರ ಈ ಕೆಲಸವನ್ನು ಪ್ರಾರಂಭಿಸಲಾಗಿತ್ತು. ಅದರಂತೆ ತುಂಗಭದ್ರಾ ಆಣೆಕಟ್ಟಿನ ನೂತನ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯವು ಪ್ರಗತಿಯಲ್ಲಿದ್ದು, ಇಂದು ಗೇಟ್ ಸಂಖ್ಯೆ 18ರ ಕೆಲಸವು ಪೂರ್ಣಗೊಂಡಿರುತ್ತದೆ. ಕ್ರಸ್ಟ್ ಗೇಟಗಳ ಎರೆಕ್ಷನ್ ಮತ್ತು ಡಿಸಮೆಟಲಿಂಗ್ ಕಾರ್ಯಕ್ಕೆ ತಲಾ ಎರಡು ತಂಡಗಳಾಗಿ ಕಾರ್ಯನಿರ್ವಹಿಸುತ್ತಿವೆ. ಮೊದಲ ಬಾರಿಗೆ ಗೇಟ್ ಸಂಖ್ಯೆ 18ರಿಂದ ಕೆಲಸ ಆರಂಭಿಸಿದ್ದು, ಇದನ್ನು ಪೂರ್ಣಗೊಳಿಸಲು 8 ದಿನಗಳನ್ನು ತೆಗೆದುಕೊಂಡಿದ್ದಾರೆ. ಗೇಟ್ ಸಂಖ್ಯೆ 15ರ ಕೆಲಸವು ಸಹ ಪೂರ್ಣಗೊಳ್ಳುವ ಹಂತದಲ್ಲಿದೆ. ಆರಂಭದಲ್ಲಿ ತಿಂಗಳಲ್ಲಿ 6 ಗೇಟ್ ಅಳವಡಿಸುವುದಾಗಿ ಕಂಪನಿಯವರು ಹೇಳಿದ್ದರು. ಈಗ ಒಂದು ತಿಂಗಳಲ್ಲಿ 8 ಗೇಟ್‌ಗಳನ್ನು ಅಳವಡಿಸುವುದಾಗಿ ಅವರು ಹೇಳುತ್ತಿದ್ದಾರೆ. ತುಂಗಭದ್ರಾ ಜಲಾಶಯದ ಎಲ್ಲಾ 33 ನೂತನ ಕ್ರಸ್ಟ್ ಗೇಟ್‌ಗಳನ್ನು ಅಳವಡಿಸಲು ಜೂನ್ ತಿಂಗಳೊಳಗಾಗಿ ಪೂರ್ಣಗೊಳಿಸಲು ಟೈಮ್ ಬಾಂಡ್ ನೀಡಲಾಗಿದ್ದು, ಮೇ ಮಾಹೆಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಟೆಂಡರ್ ಪಡೆದ ಕಂಪನಿಯವರು ತಿಳಿಸಿದ್ದಾರೆ. ಎಲ್ಲಾ 33 ಕ್ರಸ್ಟ್ ಗೇಟ್‌ಗಳನ್ನು ಬದಲಾಯಿಸಲು ಒಟ್ಟು 54 ಕೋಟಿ ರೂ.ಗಳ ವೆಚ್ಚದಲ್ಲಿ ಟೆಂಡರ್ ಕರೆದು ಕೆಲಸ ಆರಂಭಿಸಲಾಗಿದೆ. ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯಕ್ಕಾಗಿ ಈಗಾಗಲೇ ಆಂದ್ರಪ್ರದೇಶ ರಾಜ್ಯದಿಂದ 20 ಕೋಟಿ ರೂ. ನೀಡಿದ್ದಾರೆ. ನಮ್ಮ ರಾಜ್ಯದ ಪಾಲು 10 ಕೋಟಿ ರೂ.ಗಳನ್ನು ಸಹ ಟಿಬಿ ಬೋರ್ಡ್ಗೆ ಈಗಾಗಲೇ ನೀಡಲಾಗಿದೆ. ತೆಲಂಗಾಣ ರಾಜ್ಯದವರು ಸಹ ತಮ್ಮ ಪಾಲಿನ ಮೊತ್ತವನ್ನು ನೀಡಲಿದ್ದಾರೆ. ಈಗಾಗಲೇ 15 ಗೇಟ್‌ಗಳ ಫ್ಯಾಬ್ರಿಕೇಶನ್ ಪೂರ್ಣಗೊಂಡಿದ್ದು, ಅಳವಡಿಕೆ ಮಾತ್ರ ಬಾಕಿಯಿದೆ. 8 ಗೇಟುಗಳು ಫ್ಯಾಬ್ರಿಕೇಶನ್ ಹಂತದಲ್ಲಿದ್ದು, ಹೊಸಪೇಟೆ ಮತ್ತು ಗದಗ ಜಿಲ್ಲೆಯಲ್ಲಿ ತಲಾ 4 ಗೇಟ್‌ಗಳ ಪೈಕಿ ತಲಾ ಎರಡು ಗೇಟ್‌ಗಳು ಇನ್ನೂ ಎರಡು ದಿನಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಇದರ ಜೊತೆಗೆ ಆಯಾ ಗೇಟ್‌ಗಳ ಡಿಸಮೆಟಲಿಂಗ್ ಪೂರ್ಣಗೊಂಡಿದೆ ಮತ್ತು ಇತರೆ ಎಲ್ಲಾ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದಕ್ಕಾಗಿ ನಮ್ಮ ಸರ್ಕಾರವು ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ನಮ್ಮ ಸರ್ಕಾರದ ಅಧಿಕಾರಿಗಳು ಮತ್ತು ಟಿಬಿ ಬೋರ್ಡಿನ ಅಧಿಕಾರಿಗಳು ಸಹ ಇದಕ್ಕಾಗಿ ಶ್ರಮವಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಟಿಬಿ ಬೋರ್ಡ್ ಅಧಿಕ್ಷಕ ಅಭಿಯಂತರರಾದ ನಾರಾಯಣ ನಾಯ್ಕ, ಸೆಕ್ಷನ್ ಅಧಿಕಾರಿಗಳಾದ ಜಿ. ಕಿರಣ ಮತ್ತು ಪಂಪಾಪತಿ ಡಿ.ಕೆ., ಕೆ.ಎನ್.ಎನ್.ಎಲ್ ಎಇಇ ಧರ್ಮರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಮ್ಮ ಭಾಗದ ಲಕ್ಷ್ಯಾಂತರ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಅಳವಡಿ ಕಾರ್ಯ ನಡೆಯುತ್ತಿದ್ದು, ಅವುಗಳನ್ನು ಕಾಲಮಿತಿಯೊಳಗೆ ಅಳವಡಿಸಿ, ರೈತರಿಗೆ ಅನುಕೂಲ ಮಾಡಿಕೊಡಲಾಗುವುದು. ನೂತನ ಕ್ರಸ್ಟ್ ಗೇಟಗಳ ಅಳವಡಿಕೆ ಕಾರ್ಯವನ್ನು ಪರಿಶೀಲಿಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿ, ಮಾತನಾಡಿದೆನು. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್ ಅಳವಡಿಸುವ ಕುರಿತಂತೆ ಚಳಿಗಾಲ ಅಧಿವೇಶನಕ್ಕೂ ಪೂರ್ವದಲ್ಲಿ ಕೆ.ಎನ್.ಎನ್.ಎಲ್ ಹಾಗೂ ತುಂಗಭದ್ರಾ ಮಂಡಳಿಯ ಅಧಿಕಾರಿಗಳು ಮತ್ತು ಕ್ರಸ್ಟ್ ಗೇಟ್ ಅಳವಡಿಕೆ ಕಂಪನಿಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ನಂತರ ಈ ಕೆಲಸವನ್ನು ಪ್ರಾರಂಭಿಸಲಾಗಿತ್ತು. ಅದರಂತೆ ತುಂಗಭದ್ರಾ ಆಣೆಕಟ್ಟಿನ ನೂತನ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯವು ಪ್ರಗತಿಯಲ್ಲಿದ್ದು, ಇಂದು ಗೇಟ್ ಸಂಖ್ಯೆ 18ರ ಕೆಲಸವು ಪೂರ್ಣಗೊಂಡಿರುತ್ತದೆ. ಕ್ರಸ್ಟ್
ಗೇಟಗಳ ಎರೆಕ್ಷನ್ ಮತ್ತು ಡಿಸಮೆಟಲಿಂಗ್ ಕಾರ್ಯಕ್ಕೆ ತಲಾ ಎರಡು ತಂಡಗಳಾಗಿ ಕಾರ್ಯನಿರ್ವಹಿಸುತ್ತಿವೆ. ಮೊದಲ ಬಾರಿಗೆ ಗೇಟ್ ಸಂಖ್ಯೆ 18ರಿಂದ ಕೆಲಸ ಆರಂಭಿಸಿದ್ದು, ಇದನ್ನು ಪೂರ್ಣಗೊಳಿಸಲು 8 ದಿನಗಳನ್ನು ತೆಗೆದುಕೊಂಡಿದ್ದಾರೆ. ಗೇಟ್ ಸಂಖ್ಯೆ 15ರ ಕೆಲಸವು ಸಹ ಪೂರ್ಣಗೊಳ್ಳುವ ಹಂತದಲ್ಲಿದೆ. ಆರಂಭದಲ್ಲಿ ತಿಂಗಳಲ್ಲಿ 6 ಗೇಟ್ ಅಳವಡಿಸುವುದಾಗಿ ಕಂಪನಿಯವರು ಹೇಳಿದ್ದರು. ಈಗ ಒಂದು ತಿಂಗಳಲ್ಲಿ 8 ಗೇಟ್‌ಗಳನ್ನು ಅಳವಡಿಸುವುದಾಗಿ ಅವರು ಹೇಳುತ್ತಿದ್ದಾರೆ. ತುಂಗಭದ್ರಾ ಜಲಾಶಯದ ಎಲ್ಲಾ 33 ನೂತನ ಕ್ರಸ್ಟ್ ಗೇಟ್‌ಗಳನ್ನು ಅಳವಡಿಸಲು ಜೂನ್ ತಿಂಗಳೊಳಗಾಗಿ ಪೂರ್ಣಗೊಳಿಸಲು ಟೈಮ್ ಬಾಂಡ್ ನೀಡಲಾಗಿದ್ದು, ಮೇ ಮಾಹೆಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಟೆಂಡರ್ ಪಡೆದ ಕಂಪನಿಯವರು ತಿಳಿಸಿದ್ದಾರೆ. ಎಲ್ಲಾ 33 ಕ್ರಸ್ಟ್ ಗೇಟ್‌ಗಳನ್ನು ಬದಲಾಯಿಸಲು ಒಟ್ಟು 54
ಕೋಟಿ ರೂ.ಗಳ ವೆಚ್ಚದಲ್ಲಿ ಟೆಂಡರ್ ಕರೆದು ಕೆಲಸ ಆರಂಭಿಸಲಾಗಿದೆ. ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯಕ್ಕಾಗಿ ಈಗಾಗಲೇ ಆಂದ್ರಪ್ರದೇಶ ರಾಜ್ಯದಿಂದ 20 ಕೋಟಿ ರೂ. ನೀಡಿದ್ದಾರೆ. ನಮ್ಮ ರಾಜ್ಯದ ಪಾಲು 10 ಕೋಟಿ ರೂ.ಗಳನ್ನು ಸಹ ಟಿಬಿ ಬೋರ್ಡ್ಗೆ ಈಗಾಗಲೇ ನೀಡಲಾಗಿದೆ. ತೆಲಂಗಾಣ ರಾಜ್ಯದವರು ಸಹ ತಮ್ಮ ಪಾಲಿನ ಮೊತ್ತವನ್ನು ನೀಡಲಿದ್ದಾರೆ. ಈಗಾಗಲೇ 15 ಗೇಟ್‌ಗಳ ಫ್ಯಾಬ್ರಿಕೇಶನ್ ಪೂರ್ಣಗೊಂಡಿದ್ದು, ಅಳವಡಿಕೆ ಮಾತ್ರ ಬಾಕಿಯಿದೆ. 8 ಗೇಟುಗಳು ಫ್ಯಾಬ್ರಿಕೇಶನ್ ಹಂತದಲ್ಲಿದ್ದು, ಹೊಸಪೇಟೆ ಮತ್ತು ಗದಗ ಜಿಲ್ಲೆಯಲ್ಲಿ ತಲಾ 4 ಗೇಟ್‌ಗಳ ಪೈಕಿ ತಲಾ ಎರಡು ಗೇಟ್‌ಗಳು ಇನ್ನೂ ಎರಡು ದಿನಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಇದರ ಜೊತೆಗೆ ಆಯಾ ಗೇಟ್‌ಗಳ ಡಿಸಮೆಟಲಿಂಗ್ ಪೂರ್ಣಗೊಂಡಿದೆ
ಮತ್ತು ಇತರೆ ಎಲ್ಲಾ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದಕ್ಕಾಗಿ ನಮ್ಮ ಸರ್ಕಾರವು ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ನಮ್ಮ ಸರ್ಕಾರದ ಅಧಿಕಾರಿಗಳು ಮತ್ತು ಟಿಬಿ ಬೋರ್ಡಿನ ಅಧಿಕಾರಿಗಳು ಸಹ ಇದಕ್ಕಾಗಿ ಶ್ರಮವಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಟಿಬಿ ಬೋರ್ಡ್ ಅಧಿಕ್ಷಕ ಅಭಿಯಂತರರಾದ ನಾರಾಯಣ ನಾಯ್ಕ, ಸೆಕ್ಷನ್ ಅಧಿಕಾರಿಗಳಾದ ಜಿ. ಕಿರಣ ಮತ್ತು ಪಂಪಾಪತಿ ಡಿ.ಕೆ., ಕೆ.ಎನ್.ಎನ್.ಎಲ್ ಎಇಇ ಧರ್ಮರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
- 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...1
- ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.1
- ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುವ ತಾಲೂಕಿನ ಮೈಲಾಪುರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ಅಲ್ಲದೆ ಜಿಲ್ಲಾ ಕೇಂದ್ರವಾಗಿ 15 ವರ್ಷ ಗತಿಸಿದ್ದರು ಈ ದೇವಸ್ಥಾನಕ್ಕೆ ಬರತ್ಕಂತ ಭಕ್ತಾಧಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾಡಲಿತ ವಿಫಲವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶಕೆ. ಮುದ್ನಾಳ ಅವರು ಆರೋಪಿಸಿದ್ದಾರೆ ಮೈಲಾರ ಮಲ್ಲಯ್ಯನ ದರ್ಶನ ಪಡೆದ ನಂತರ ಎಲ್ಲಾ ಪ್ರಮುಖ ಸ್ಥಳಗಳಿಗೆ ಸಂಚರಿಸಿ ಪರೀಶೀಲಸಿದ ನಂತರ ಮಾತನಾಡಿದ ಅವರು ಯಾದಗಿರಿ ಜಿಲ್ಲೆಯಲ್ಲಿ ಎರಡು ಎ ಗ್ರೇಡ್ ದೇವಸ್ಥಾನಗಳ ಪೈಕಿ ಮೈಲಾಪುರ ಒಂದಾಗಿದ್ದು, ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ, ಪ್ರೇಕ್ಷಣೀಯ ಸ್ಥಳದಲ್ಲಿ ಮೂಲಸೌಕಯ್ಯ ವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು ಪ್ರತಿ ವರ್ಷ ಸಂಕ್ರಾಮಣದಲ್ಲಿ ಜಾತ್ರೆಯನ್ನು ಹೊರತು ಪಡೆಸಿ ಪ್ರತಿ ರವಿವಾರ ಮತ್ತು ಪ್ರತಿ ಅಮವಾಸ್ಯೆದಂದು ಇಲ್ಲಿಗೆ ಬರುವ ಭಕ್ತಾದಿಗಳ ಸಂಖ್ಯೆ, ದೇವಸ್ಥಾನದ ಆದಾಯ ಹೆಚ್ಚುತಿದ್ದರೂ ಮೂಲ ಸೌಕರ್ಯ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಹೆಚ್ಚುತ್ತಿಲ್ಲ. ಬರುವ ಸಾರ್ವಜನಿಕರ ಸೌಲಭ್ಯಕ್ಕಾಗಿ ಶಾಶ್ವತ ಪರಿಹಾರ ಮಾಡದೇ ತಾತ್ಕಲಿಕ ಪರಿಹಾರಕ್ಕೆ ಮುಂದಾಗುತ್ತಿರುವುದು ಬೇಸರ ವ್ಯಕ್ತಪಡಿಸಿದರು. ಇದೇ ಸಂದರ್ಬದಲ್ಲಿ ಪವನ ಮಲ್ಲೇಶಿ, ರಾಜಪ್ಪ ಹಣಮಂತ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು1
- ಯಶಸ್ವಿಯಾಗಿ ಜರುಗಿದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಕಾರ್ಯಕ್ರಮ1
- *ಬೆಳಗಾವಿ ಬ್ರೇಕಿಂಗ್* ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು. ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ. ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ. ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ. ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ. ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ. ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ. ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು. ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ. ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ. ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ. ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್. ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು. ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!1
- ಇಡೀ ರಾಜ್ಯದಲ್ಲಿ ಅಥಣಿ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಸೂಕ್ತ ಕ್ರಮ ಕೈಗೊಳ್ಳಬೇಕು : ಬೆಳಗಾವಿ ಎಸ್.ಪಿ ಕೆ. ರಾಮರಾಜನ್. ಅಥಣಿ: ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರಿಗಾದರೂ ಅಪಘಾತ ಮಾಡಿ ಘಟನೆಯಲ್ಲಿ ಸಾವುಗಳು ಸಂಭವಿಸಿದರೆ ಅಂತಹ ವಾಹನ ಚಾಲಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ನಡುವೆ ಉತ್ತಮ ಸಂವಹನ ಮಾನವೀಯ ಭದ್ರತೆಗಾಗಿ ಅತ್ಯಂತ ಮುಖ್ಯ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.) ಕೆ ರಾಮರಾಜನ್ ಹೇಳಿದರು. ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ರವಿವಾರ ನಿಯೋಜಿತ ಭೇಟಿ ನೀಡಿದ ನೂತನವಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹಾರೂಗೇರಿ, ಐಗಳಿ ಪೊಲೀಸ್ ಠಾಣೆಗಳಿಗೆ ಠಾಣೆಗಳಲ್ಲಿ ಇರುವ ವಾಸ್ತವ ಸ್ಥಿತಿಗತಿ, ವ್ಯವಸ್ಥೆ, ಸಾರ್ವಜನಿಕರೊಂದಿಗೆ ಪೊಲೀಸರ ನಡುವಳಿಕೆ, ಹಲವು ಕಡತಗಳನ್ನು ಪರಿಶೀಲನೆ ನಡೆಸಿ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಎಸ್.ಪಿ ಕೆ ರಾಮರಾಜನ್ ಕಾನೂನು ಎಲ್ಲರಿಗೂ ಸಮಾನ ಯಾರೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಯಾವುದೇ ರಾಜಿ ಸಂಧಾನ ಮಾಡದೆ ದೂರಿನ ಅನ್ವಯ ಎಫ್ ಐ ಆರ್ ದಾಖಲಿಸಬೇಕು. ಇಡೀ ರಾಜ್ಯದಲ್ಲಿ ಅಥಣಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನುಬಾಹಿರ ಯಾವುದೇ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಅಕ್ರಮ ಮಧ್ಯ ಮಾರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಗಳು ಕಂಡುಬರುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸಬೇಕು, ಹಣದ ಆಸೆಗಾಗಿ ವಂಚಕರ ಬಲೆಗೆ ಬೀಳಬಾರದು ಅಂತಹ ಯಾವುದೇ ಸಂದೇಹ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇಲ್ಲಿರುವ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇರುವುದು ಕಂಡು ಬಂದಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಥಣಿಗೆ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆ ಬೇಡಿಕೆ ಇದ್ದು, ಈ ಕುರಿತು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಹೇಳಿದರು. ಈ ವೇಳೆ ಅಥಣಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ಸಿಪಿಐ ಸಂತೋಷ ಹಳ್ಳೂರ, ಪಿ ಎಸ್ ಐ ಗಿರಿಮಲ್ಲಪ್ಪ ಉಪ್ಪಾರ, ಅಥಣಿ ಪೊಲೀಸ್ ಉಪ ವಿಭಾಗದ ಪಿಎಸ್‌ಐ, ಎ ಎಸ್ ಐ, ಎಲ್ಲ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.2
- ರಾಜ್ಯದಲ್ಲಿ ಸಂಕ್ರಾಂತಿಯ ನಂತರ ರಾಜಕೀಯ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿ ನಗರದಲ್ಲಿ ಇಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಪ್ರತಿಕ್ರಿಯೆ ನೀಡಿ ನಮ್ಮಲ್ಲಿ ಯಾವುದೇ ರಾಜಕೀಯ ಕ್ರಾಂತಿ ಇಲ್ಲಾ. ಇದೆಲ್ಲ ಕೇವಲ ಮಾಧ್ಯಮದಲ್ಲಿ ಮಾತ್ರ ಎಂದು ಹೇಳಿದರು.1
- ಪ್ರಧಾನಿ ಮೋದಿ ಅವರ ವಿರುದ್ಧ ಅಸಂಬದ್ಧ ಪದ ಬಳಕೆ ಕ್ರಮಕ್ಕೆ ಆಗ್ರಹ ಅಥಣಿ : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಅಸಂಬದ್ದ ಪದ ಬಳಕೆ ಮಾಡಿರುವ ಅಥಣಿ ವ್ಯಾಪಾರಿ ವಿರುದ್ಧ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ SP ಅವರಿಗೆ ಅಥಣಿ ಬಿಜೆಪಿ ವತಿಯಿಂದ ಅಥಣಿ ಪಟ್ಟಣಕ್ಕೆ ಆಗಮಿಸಿದ ಬೆಳಗಾವಿ ಜಿಲ್ಹಾ ಪೊಲೀಸ್ ವರಿಷ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.1
- Post by Udaysingh Patel1