Shuru
Apke Nagar Ki App…
ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಐದು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಮುನಿಲಕ್ಷ್ಮಮ್ಮ,ಇಂದು ಕಲ್ಲಹಳ್ಳಿ ಗ್ರಾಮದ ದೊಡ್ಡ ಕೆರೆಯಲ್ಲಿ ಶವವಾಗಿ ಪತ್ತೆ..!
Md mansoor
ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಐದು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಮುನಿಲಕ್ಷ್ಮಮ್ಮ,ಇಂದು ಕಲ್ಲಹಳ್ಳಿ ಗ್ರಾಮದ ದೊಡ್ಡ ಕೆರೆಯಲ್ಲಿ ಶವವಾಗಿ ಪತ್ತೆ..!
More news from Karnataka and nearby areas
- ಶಿಷ್ಟಾಚಾರ ಮರೆತ ಹುಮನಾಬಾದ್ ಶಾಸಕ: ಸರ್ಕಾರಿ ಅನುದಾನದ ಶಾಲಾ ಕಟ್ಟಡ ಭೂಮಿ ಪೂಜೆ ವೇಳೆ ಹೈಡ್ರಾಮಾ!#JB_NEWS_KANNADA1
- ಪ್ರಧಾನಿ ಮೋದಿ ಶಿಸ್ತಿನ ಸಿಪಾಯಿ, ನಾವೂ ಅವರ ಹಾದಿಯಲ್ಲೇ ಸಾಗೋಣ: ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರ ಗೌಡ. ಶಿಡ್ಲಘಟ್ಟ: "ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿಯಲ್ಲಿ ಶಿಸ್ತು ಮತ್ತು ಕಾರ್ಯಕರ್ತನಿಗೆ ಮೊದಲ ಆದ್ಯತೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೂ, ಇಂದಿಗೂ ತಮ್ಮನ್ನು ಒಬ್ಬ ಸಾಮಾನ್ಯ ಕಾರ್ಯಕರ್ತ ಎಂದು ಕರೆದುಕೊಳ್ಳುತ್ತಾರೆ. ಅವರ ಇದೇ ಸರಳತೆ ಮತ್ತು ಕರ್ತವ್ಯನಿಷ್ಠೆ ನಮಗೆಲ್ಲರಿಗೂ ದಾರಿದೀಪ" ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸೀಕಲ್ ರಾಮಚಂದ್ರ ಗೌಡ ತಿಳಿಸಿದರು. ಶಿಡ್ಲಘಟ್ಟ ನಗರದ ಸೇವಾ ಸೌದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಂಘಟನಾ ಪರ್ವ ಮತ್ತು ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಘಟನೆಯಲ್ಲಿ ಯುವ ನಾಯಕತ್ವದ ಪ್ರಾಮುಖ್ಯತೆಯ ಬಗ್ಗೆ ಒತ್ತಿ ಹೇಳಿದರು. "ರಾಷ್ಟ್ರ ಮಟ್ಟದಲ್ಲಿ ನಿತಿನ್ ನವೀನ್ ಅವರಂತಹ ಯುವ ನಾಯಕರಿಗೆ ಜವಾಬ್ದಾರಿ ನೀಡಿರುವುದು ಪಕ್ಷಕ್ಕೆ ಹೊಸ ಕಳೆ ತಂದಿದೆ. ಅದೇ ಮಾದರಿಯಲ್ಲಿ ನಮ್ಮ ಜಿಲ್ಲೆಯ ಪ್ರತಿ ಹಳ್ಳಿಯಲ್ಲೂ ಯುವಕರನ್ನು ಪಕ್ಷದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕಿದೆ" ಎಂದರು. "ಸಂಘಟನಾ ಪರ್ವವು ಕೇವಲ ಮೇಲ್ಮಟ್ಟದ ಸಭೆಗಳಿಗೆ ಸೀಮಿತವಾಗಬಾರದು. ನಾವು ಪ್ರತಿ ಮಂಡಲ ಮತ್ತು ಬೂತ್ ಮಟ್ಟಕ್ಕೆ ಹೋಗಿ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕಿದೆ. ಇದಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ಜನರಂತೆ ಒಟ್ಟು ಒಂಬತ್ತು ತಂಡಗಳನ್ನು ಈಗಾಗಲೇ ಸಜ್ಜುಗೊಳಿಸಲಾಗಿದೆ. ಈ ತಂಡಗಳು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಪಕ್ಷದ ಸಿದ್ಧಾಂತ ಮತ್ತು ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲಿವೆ" ಎಂದು ಸೀಕಲ್ ರಾಮಚಂದ್ರ ಗೌಡ ವಿವರಿಸಿದರು. ಸಭೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿದ ಅವರು, "ಬಿಜೆಪಿ ಎಂದರೆ ಕೇವಲ ಅಧಿಕಾರಕ್ಕಾಗಿ ಇರುವ ಪಕ್ಷವಲ್ಲ, ಇದು ದೇಶ ಕಟ್ಟುವ ಸಂಘಟನೆ. ಬೂತ್ ಮಟ್ಟದಲ್ಲಿ ನಾವು ಎಷ್ಟು ಗಟ್ಟಿಯಾಗುತ್ತೇವೆಯೋ ಅಷ್ಟು ಸುಲಭವಾಗಿ ನಾವು ಜನರ ಸಮಸ್ಯೆಗಳಿಗೆ ಸ್ಪಂದಿಸಬಹುದು. ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸಿ, ಬಿಜೆಪಿಯನ್ನು ಅಜೇಯ ಶಕ್ತಿಯನ್ನಾಗಿ ರೂಪಿಸೋಣ" ಎಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳಿಧರ್, ಜಿಲ್ಲಾ ಕಾರ್ಯದರ್ಶಿ ಅಶೋಕ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ, ಜಿಲ್ಲಾ ಎಲ್ಲಾ ಮಂಡಲ ಅಧ್ಯಕ್ಷರುಗಳು ಪ್ರಧಾನ ಕಾರ್ಯದರ್ಶಿಗಳು ಕಾರ್ಯದರ್ಶಿಗಳು ಇನ್ನು ಮುಂತಾದವರು ಹಾಜರಿದ್ದರು. ವರದಿ ನಂದಿ ರಾಜೇಶ್ ಶಿಡ್ಲಘಟ್ಟ1
- ಚಂದ್ರ ಗ್ರಹಣ ಹಿನ್ನೆಲೆ ಘಾಟಿ ಸುಬ್ರಹ್ಮಣ್ಯ ದೇವಾಲಯ ಕ್ಲೋಸ್1
- ಕಾನೂನಿಗೆ ಹೆದರಿ ಓಡಿ ಹೋಗಿರುವ ಮುತ್ಯಾನ ಬೆಂಬಲಕ್ಕೆ ನಿಂತ ಸಚಿವ ಶರಣಗೌಡ ಪಾಟೀಲ್ ದರ್ಶನಾಪುರ, ಮುತ್ಯನದ್ದು ತಪ್ಪಿಲ್ಲ, ಅದನ್ನು ದೇಶಕ್ಕೆ ತೋರಿಸಿದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳದ್ದು ತಪ್ಪು ಎಂದು ಹೇಳಿದ್ದಾರೆ1
- ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಸದೃಶ್ಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಭದ್ರತಾ ಕಾರಣಗಳಿಂದಾಗಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಕಷ್ಟದಲ್ಲಿ ಬಳ್ಳಾರಿಯ ಪ್ರವಾಸಿಗರು: ದುಬೈಗೆ ಪ್ರವಾಸಕ್ಕೆ ತೆರಳಿದ್ದ ಬಳ್ಳಾರಿ ನಗರದ ಶಾಸಕ ಭರತ್ ರೆಡ್ಡಿ ಸೇರಿದಂತೆ ಬಳ್ಳಾರಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಪ್ರವಾಸಿಗರು ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ. ವಿಮಾನಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ತಾಯ್ನಾಡಿಗೆ ಮರಳಲು ಸಾಧ್ಯವಾಗದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಶಾಸಕರಿಂದ ವಿಡಿಯೋ ಸಂದೇಶ: ಈ ಪರಿಸ್ಥಿತಿಯ ನಡುವೆಯೇ ಶಾಸಕ ಭರತ್ ರೆಡ್ಡಿ ಅವರು ದುಬೈನಿಂದ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ತಾವು, ತಮ್ಮ ಕುಟುಂಬಸ್ಥರು ಹಾಗೂ ಬಳ್ಳಾರಿಯ ಸುಮಾರು 35ಕ್ಕೂ ಹೆಚ್ಚು ನಿವಾಸಿಗಳು ಸದ್ಯಕ್ಕೆ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ಶೀಘ್ರದಲ್ಲೇ ಮರಳುವ ಆಶಯ ವ್ಯಕ್ತಪಡಿಸಿದ್ದಾರೆ.1
- Post by ಗಿರೀಶ್ B2
- *ಚಿಂತಾಮಣಿಯ ಕಲ್ಲಪಲ್ಲಿ ಕೆರೆಯಲ್ಲಿ ವೃದ್ಧೆಯ ಶವ ಪತ್ತೆ:* ಸಾವಿನ ಬಗ್ಗೆ ಮೂಡಿದ ಹಲವು ಅನುಮಾನಗಳು! ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ 70 ವರ್ಷದ ವೃದ್ಧೆಯೊಬ್ಬರ ಶವ ಇಂದು ಕಲ್ಲಪಲ್ಲಿಯ ದೊಡ್ಡ ಕೆರೆಯಲ್ಲಿ ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೃತ ಮಹಿಳೆಯನ್ನು ಕಲ್ಲಪಲ್ಲಿ ಗ್ರಾಮದ ನಿವಾಸಿ ಮುನ್ನಿಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ. ಮನೆಯಿಂದ ನಾಪತ್ತೆಯಾಗಿದ್ದ ಮುನ್ನಿಲಕ್ಷ್ಮಮ್ಮ ಅವರಿಗಾಗಿ ಕುಟುಂಬದವರು ಕಳೆದ ಐದು ದಿನಗಳಿಂದ ಎಲ್ಲೆಡೆ ತೀವ್ರ ಹುಡುಕಾಟ ನಡೆಸಿದ್ದರು. ಅಂತಿಮವಾಗಿ ಇಂದು ಪೊಲೀಸ್ ಠಾಣೆಗೆ ದೂರು ನೀಡಲು ಕುಟುಂಬಸ್ಥರು ನಿರ್ಧರಿಸಿದ್ದರು. ಆದರೆ ಅಷ್ಟರಲ್ಲೇ ಗ್ರಾಮದ ದೊಡ್ಡ ಕೆರೆಯಲ್ಲಿ ಮಹಿಳೆಯ ಶವ ತೇಲುತ್ತಿರುವುದು ಕಂಡುಬಂದಿದೆ. ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಹಾಗೂ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಡಿವೈಎಸ್‌ಪಿ ಮುರಳೀಧರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 20 ಅಡಿ ಆಳವಿರುವ ಈ ಕೆರೆಯಲ್ಲಿ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಇದು ಅಕಸ್ಮಾತ್ ಆಗಿ ನಡೆದ ದುರಂತವೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ನಿಗೂಢ ಸತ್ಯವಿದೆಯೇ ಎಂಬುದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ. ವರದಿ:-ಸೀನ. ಟಿ ಚಿಂತಾಮಣಿ2
- ಶಿಷ್ಟಾಚಾರ ಉಲ್ಲಂಘನೆ ಆರೋಪ: ಸಚಿವ ಈಶ್ವರ್ ಖಂಡ್ರೆ ವಿರುದ್ಧ ಶಾಸಕ ಸಿದ್ದು ಪಾಟೀಲ್ ಕಿಡಿ #JB_NEWS_KANNADA #bidar #humnabad1
- ವಿಜ್ಞಾನ ಮೇಳದಿಂದ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಕುತೂಹಲ ಮತ್ತು ಕಲಿಕೆ: ಸಾಂದೀಪನಿ ಶಾಲೆಯಲ್ಲಿ ವಿಜ್ಞಾನ ಹಬ್ಬ. ದೊಡ್ಡಬಳ್ಳಾಪುರ : ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಮೇಲೆಕೋಟೆ ಗ್ರಾಮದ ಸಾಂದೀಪನಿ ಶಾಲೆಯಲ್ಲಿ ಇಂದು ವಿಜ್ಞಾನ ಮೇಳವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು. ಈ ಮೇಳದಲ್ಲಿ ಶಾಲೆಯ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ತಾವೇ ಸ್ವತಃ ಸಿದ್ಧಪಡಿಸಿದ ವಿವಿಧ ಮಾದರಿಗಳನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದರು. ಮೊದಲಿಗೆ ಟೇಪ್ ಕತ್ತರಿಸುವ ಮೂಲಕ ಶಾಲೆಯ ಕಾರ್ಯದರ್ಶಿ ಶಂಕರ್ ಹಾಗೂ ಪೋಷಕರು ಉದ್ಘಾಟಿಸಿದರು. ಕಾರ್ಯಕ್ರಮದ ಕುರಿತು ಮಾತನಾಡಿದ ಶಿಕ್ಷಕಿ ನಾಗಶ್ರೀ ಅವರು, "ಇಂದಿನ ವಿಜ್ಞಾನ ಮೇಳದಿಂದ ವಿದ್ಯಾರ್ಥಿಗಳು ಕೇವಲ ಪುಸ್ತಕದ ಜ್ಞಾನವನ್ನಷ್ಟೇ ಅಲ್ಲದೆ, ಪ್ರಾಯೋಗಿಕವಾಗಿ ಅನೇಕ ವಿಷಯಗಳನ್ನು ಕಲಿತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದು ಮಾದರಿಯನ್ನು ಹೇಗೆ ಸಿದ್ಧಪಡಿಸಬೇಕು, ಅದಕ್ಕೆ ಬೇಕಾದ ಸಂಪರ್ಕಗಳನ್ನು ಹೇಗೆ ನೀಡಬೇಕು ಮತ್ತು ಐ-ಫಾರ್ವರ್ಡ್ ತಂತ್ರಜ್ಞಾನದ ಬಳಕೆಯ ಬಗ್ಗೆ ಆಳವಾದ ಜ್ಞಾನವನ್ನು ಪಡೆದುಕೊಂಡಿದ್ದಾರೆ," ಎಂದು ಹಂಚಿಕೊಂಡರು. "ಮಾದರಿಗಳ ಮೂಲಕ ಶಿಕ್ಷಣ ನೀಡಿದಾಗ ಅದು ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೀರ್ಘಕಾಲ ಉಳಿಯುತ್ತದೆ. ವಿದ್ಯಾರ್ಥಿಗಳು ತಾವು ಸಿದ್ಧಪಡಿಸಿದ ವಿಷಯಗಳನ್ನು ಪೋಷಕರಿಗೆ ಪದೇ ಪದೇ ವಿವರಿಸುವುದರಿಂದ, ಆ ಪರಿಕಲ್ಪನೆಗಳು ಅವರ ಮೆದುಳಿನಲ್ಲಿ ಅಚ್ಚೊತ್ತಿದಂತಾಗುತ್ತವೆ. ಇದು ಅವರ ಮುಂದಿನ ಉನ್ನತ ಶಿಕ್ಷಣಕ್ಕೆ ಭದ್ರ ಬುನಾದಿಯಾಗಲಿದೆ," ಎಂದು ಅವರು ಅಭಿಪ್ರಾಯಪಟ್ಟರು. ಈ ಬಾರಿಯ ಮೇಳದಲ್ಲಿ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಎಲೆಕ್ಟ್ರಾನಿಕ್ ವಸ್ತುಗಳು ಹೇಗೆ ಕೆಲಸ ಮಾಡುತ್ತವೆ ಮತ್ತು ಅವುಗಳನ್ನು ಎಚ್ಚರಿಕೆಯಿಂದ ಹೇಗೆ ನಿರ್ವಹಿಸಬೇಕು ಎಂಬುದನ್ನು ಮಕ್ಕಳು ಕಲಿತುಕೊಂಡಿದ್ದಾರೆ. ವಿಜ್ಞಾನ ಮೇಳಕ್ಕೆ ಭೇಟಿ ನೀಡಿದ್ದ ಪೋಷಕರು ಮಕ್ಕಳ ಸೃಜನಶೀಲತೆಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಣ ಸಂಸ್ಥೆಯ ಮಾರ್ಗದರ್ಶಕ ಚಂದ್ರಶೇಖರ್ ಅವರು, ಇಂದಿನ ದಿನಗಳಲ್ಲಿ ಮಕ್ಕಳಿಗೆ ಕೇವಲ ಅಂಕಗಳಿಗಿಂತ ಕೌಶಲ ಮುಖ್ಯವಾಗಿದೆ ಎಂದರು. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ 1ನೇ ತರಗತಿಯಿಂದಲೇ ಕೋಡಿಂಗ್, ರೋಬೋಟಿಕ್ಸ್, ಕೃತಕ ಬುದ್ಧಿ (AI) ಮತ್ತು ಸುಧಾರಿತ ಇಂಗ್ಲಿಷ್ ಸಂವಹನ ಕಲೆಗಳನ್ನು ಕಲಿಸಲಾಗುತ್ತಿದೆ. ಈ ವರ್ಷ ಪೂರ್ತಿ ವಿದ್ಯಾರ್ಥಿಗಳು ತರಗತಿಯಲ್ಲಿ ಕಲಿತ ಜ್ಞಾನವನ್ನು ಪ್ರಾಯೋಗಿಕ ಮಾದರಿಗಳ ಮೂಲಕ ಇಲ್ಲಿ ಪ್ರಸ್ತುತಪಡಿಸಿದ್ದಾರೆ. ಪ್ರದರ್ಶನದಲ್ಲಿ ಪುಟಾಣಿ ಮಕ್ಕಳು ಕೆಮಿಕಲ್ ಪ್ರಯೋಗಗಳು ಮತ್ತು ರೋಬೋಟಿಕ್ಸ್ ಮಾದರಿಗಳನ್ನು ಪ್ರದರ್ಶಿಸಿ ಬೆರಗುಗೊಳಿಸಿದರು. ವಿಶೇಷವಾಗಿ ಹಿರಿಯ ವಿದ್ಯಾರ್ಥಿಗಳು ಇಂದಿನ ಐಟಿ ಲೋಕದಲ್ಲಿ ಬಳಕೆಯಾಗುವ HTML, Java ಮತ್ತು Python ನಂತಹ ಪ್ರೋಗ್ರಾಮಿಂಗ್ ಭಾಷೆಗಳ ಕುರಿತು ಮಾಹಿತಿ ನೀಡುವ ಮೂಲಕ ತಮ್ಮ ತಾಂತ್ರಿಕ ಜ್ಞಾನವನ್ನು ಸಾಬೀತುಪಡಿಸಿದರು. ಶಾಲಾ ಹಂತದಲ್ಲೇ ಮಕ್ಕಳಿಗೆ ಇಂತಹ ಭಾಷೆಗಳ ಬೇಸಿಕ್ಸ್ ಕಲಿಸುವುದು ಅವರ ಭವಿಷ್ಯದ ವೃತ್ತಿಜೀವನಕ್ಕೆ ದೊಡ್ಡ ಬುನಾದಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಶಾಲೆಯಿಂದ ಹೋಗುವಾಗ ಕಿಡ್ನಾಪರ್ಸ್ ನಿಂದ ನಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದನ್ನು ಡೆಮೋ ಮುಖಾಂತರ ತೋರಿಸಿದರು. ನಂತರ ಮಾತಾಡಿದ ಪೋಷಕರೊಬ್ಬರು ಕಳೆದ ಎರಡು ವರ್ಷಗಳಿಂದ ತಮ್ಮ ಮಕ್ಕಳು ಇದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಶಾಲೆಯ ಶೈಕ್ಷಣಿಕ ಗುಣಮಟ್ಟದ ಬಗ್ಗೆ ನಮಗೆ ಹೆಚ್ಚಿನ ವಿಶ್ವಾಸವಿದೆ ಎಂದು ಅವರು ತಿಳಿಸಿದರು. ಶಾಲೆಯ ಉತ್ತಮ ಪರಿಸರ ಮತ್ತು ಕಲಿಕಾ ಪದ್ಧತಿಯಿಂದಾಗಿ ಸುಮಾರು 10 ಕಿಲೋಮೀಟರ್ ದೂರದಿಂದಲೂ ಮಕ್ಕಳನ್ನು ಈ ಶಾಲೆಗೆ ಕಳುಹಿಸಿಕೊಡುತ್ತಿದ್ದೇವೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಸಾಂದೀಪನಿ ಶಾಲೆಯ ಪ್ರಧಾನ ಕಾರ್ಯದರ್ಶಿ ಶಂಕರ್, ಹಾಗೂ ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು.1