ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಕಲ್ಮಠದ ಗುರು ಭವನದಲ್ಲಿ ಜುಲೈ 19 ರಂದು ಒಂದು ದಿನದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಅರುಣ್ ಚಂದಾ ಅವರು ಮಾನ್ವಿ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ. ಈ ಕಾರ್ಯಾಗಾರವನ್ನು ವೀರಶೈವ ಲಿಂಗಾಯತ ಮಹಾಸಭಾದ ಮಾಧ್ಯಮ ಸಮಿತಿ, ಖಾಸಗಿ ಕಾಲೇಜುಗಳ ಉಪನ್ಯಾಸಕರ ಸಂಘ, ಭೀಮರಾಯ ಸ್ಟಡಿ ಸರ್ಕಲ್ ಹಾಗೂ ದಿಕ್ಕೂಚಿ ಸ್ಪರ್ಧಾತ್ಮಕ ಪರೀಕ್ಷಾ ಮಾಸಪತ್ರಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದೆ. ಕಾರ್ಯಾಗಾರದಲ್ಲಿ ದಿಕ್ಸೂಚಿ ಸ್ಪರ್ಧಾತ್ಮಕ ಮಾಸ ಪತ್ರಿಕೆಯ ಸಂಪಾದಕ ಎ.ಟಿ. ಪಾಟೀಲ, ಮೈಸೂರಿನ ಖ್ಯಾತ ಲೇಖಕ ನೇ.ತಿ. ಸೋಮಶೇಖರ್ ಹಾಗೂ ಧಾರವಾಡದ ರಾಜರತ್ನ ಅಕಾಡೆಮಿಯ ಜಗದೀಶ ಸೇರಿದಂತೆ ಹಲವು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ದತೆ ಮಾಡಿಕೊಳ್ಳುವ ಕುರಿತು ಅಗತ್ಯ ಮಾಹಿತಿ ನೀಡಲಿದ್ದಾರೆ. ಖಾಸಗಿ ಕಾಲೇಜುಗಳ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಈರಣ್ಣ ಮರ್ಲಟ್ಟಿ ಮಾತನಾಡಿ, ತಾಲ್ಲೂಕಿನ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಪರ್ಧಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಉಚಿತ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ದೂರವಾಣಿ ಸಂಖ್ಯೆಗಳಾದ 8431546405, 9902134999 ಹಾಗೂ 9845085161 ಕ್ಕೆ ಸಂಪರ್ಕಿಸಬಹುದಾಗಿದೆ. ಈ ಸುದ್ದಿಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಮಹಾಸಭಾದ ಮಾಧ್ಯಮ ಸಮಿತಿ ಅಧ್ಯಕ್ಷ ರಾಜಶೇಖರ ಸ್ವಾಮಿ, ಗೌರವಾಧ್ಯಕ್ಷ ಎಂ.ಬಿ.ಸಿದ್ದರಾಮ ಸ್ವಾಮಿ ಮತ್ತು ಉಪನ್ಯಾಸಕರ ಸಂಘದ ಅಧ್ಯಕ್ಷ ಆಂಜನೇಯ ನಾಯಕ ನಸಲಾಪುರ ಉಪಸ್ಥಿತರಿದ್ದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಕಲ್ಮಠದ ಗುರು ಭವನದಲ್ಲಿ ಜುಲೈ 19 ರಂದು ಒಂದು ದಿನದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಅರುಣ್ ಚಂದಾ ಅವರು ಮಾನ್ವಿ ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ. ಈ ಕಾರ್ಯಾಗಾರವನ್ನು ವೀರಶೈವ ಲಿಂಗಾಯತ ಮಹಾಸಭಾದ ಮಾಧ್ಯಮ ಸಮಿತಿ, ಖಾಸಗಿ ಕಾಲೇಜುಗಳ ಉಪನ್ಯಾಸಕರ ಸಂಘ, ಭೀಮರಾಯ ಸ್ಟಡಿ ಸರ್ಕಲ್ ಹಾಗೂ ದಿಕ್ಕೂಚಿ ಸ್ಪರ್ಧಾತ್ಮಕ ಪರೀಕ್ಷಾ ಮಾಸಪತ್ರಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದೆ. ಕಾರ್ಯಾಗಾರದಲ್ಲಿ ದಿಕ್ಸೂಚಿ ಸ್ಪರ್ಧಾತ್ಮಕ ಮಾಸ ಪತ್ರಿಕೆಯ ಸಂಪಾದಕ ಎ.ಟಿ. ಪಾಟೀಲ, ಮೈಸೂರಿನ ಖ್ಯಾತ ಲೇಖಕ ನೇ.ತಿ. ಸೋಮಶೇಖರ್ ಹಾಗೂ ಧಾರವಾಡದ ರಾಜರತ್ನ ಅಕಾಡೆಮಿಯ ಜಗದೀಶ ಸೇರಿದಂತೆ ಹಲವು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ದತೆ ಮಾಡಿಕೊಳ್ಳುವ ಕುರಿತು ಅಗತ್ಯ ಮಾಹಿತಿ ನೀಡಲಿದ್ದಾರೆ. ಖಾಸಗಿ ಕಾಲೇಜುಗಳ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಈರಣ್ಣ ಮರ್ಲಟ್ಟಿ ಮಾತನಾಡಿ, ತಾಲ್ಲೂಕಿನ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಪರ್ಧಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಉಚಿತ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ದೂರವಾಣಿ ಸಂಖ್ಯೆಗಳಾದ 8431546405, 9902134999 ಹಾಗೂ 9845085161 ಕ್ಕೆ ಸಂಪರ್ಕಿಸಬಹುದಾಗಿದೆ. ಈ ಸುದ್ದಿಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಮಹಾಸಭಾದ ಮಾಧ್ಯಮ ಸಮಿತಿ ಅಧ್ಯಕ್ಷ ರಾಜಶೇಖರ ಸ್ವಾಮಿ, ಗೌರವಾಧ್ಯಕ್ಷ ಎಂ.ಬಿ.ಸಿದ್ದರಾಮ ಸ್ವಾಮಿ ಮತ್ತು ಉಪನ್ಯಾಸಕರ ಸಂಘದ ಅಧ್ಯಕ್ಷ ಆಂಜನೇಯ ನಾಯಕ ನಸಲಾಪುರ ಉಪಸ್ಥಿತರಿದ್ದರು.
- ಕರ್ನಾಟಕ ಸರ್ಕಾರವು ಹೊರಡಿಸಿರುವ ಶಾಶ್ವತ ನಿವಾಸ ಪ್ರಮಾಣಪತ್ರದ ಅಧಿಸೂಚನೆಯು ದೇಶದ ಆಂತರಿಕ ಭದ್ರತೆ ಮತ್ತು ಸಂವಿಧಾನಕ್ಕೆ ನೇರ ಧಕ್ಕೆ ತರುವಂತದ್ದಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗಂಭೀರ ವಿಷಯದಲ್ಲಿ ಕೇಂದ್ರ ಗೃಹ ಇಲಾಖೆಯು ತಕ್ಷಣವೇ ಹಸ್ತಕ್ಷೇಪ ಮಾಡಬೇಕು ಎಂದು ಆಗ್ರಹಿಸಿದರು. ಭಾರತದ ಸಂವಿಧಾನವು ದೇಶದ ಎಲ್ಲಾ ನಾಗರಿಕರಿಗೂ ಏಕರೂಪದ ಏಕ ಪೌರತ್ವವನ್ನು ನೀಡಿದೆ. ಆದರೆ, ಇದಕ್ಕೆ ವಿರುದ್ಧವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಪ್ರತ್ಯೇಕವಾಗಿ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಮುಂದಾಗಿರುವುದು ಕಾನೂನುಬಾಹಿರ ಮತ್ತು ಸಂವಿಧಾನ ವಿರೋಧಿ ಹೆಜ್ಜೆಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳಲ್ಲಿ ಕೇವಲ ಸ್ಥಳೀಯ ಕಂದಾಯ ಅಧಿಕಾರಿಗಳ ಪರಿಶೀಲನೆ ಹಾಗೂ ಸ್ಥಳೀಯ ದಾಖಲೆಗಳ ಆಧಾರದ ಮೇಲೆ ಮಾತ್ರ ಈ ಪ್ರಮಾಣಪತ್ರ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಸಡಿಲ ನಿಯಮಗಳಿಂದಾಗಿ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರು ಅಥವಾ ನುಸುಳುಕೋರರು ಕೂಡ ಅತ್ಯಂತ ಸುಲಭವಾಗಿ ಈ ಪ್ರಮಾಣಪತ್ರವನ್ನು ಪಡೆದುಕೊಳ್ಳುವ ದೊಡ್ಡ ಅಪಾಯವಿದೆ. ಇದು ದೇಶದ ಆಂತರಿಕ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಗೆ ದೊಡ್ಡ ಕಂಟಕವಾಗಿ ಪರಿಣಮಿಸಲಿದ್ದು, ಸರ್ಕಾರದ ಈ ನಿರ್ಧಾರವು ಅಕ್ರಮ ವಲಸೆಗೆ ರೆಡ್ ಕಾರ್ಪೆಟ್ ಹಾಸಿದಂತಾಗಲಿದೆ ಎಂದು ಅವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.2
- ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮುಂಗಾರು ಮಳೆ ಕೈಕೊಟ್ಟು ಭೀಕರ ಬರಗಾಲದ ಛಾಯೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಸಕಾಲಕ್ಕೆ ಮಳೆ ಬಂದು ನಾಡು ಸುಭಿಕ್ಷವಾಗಲಿ ಎಂದು ಆಶಿಸಿ ಕತ್ತೆಗಳ ಮದುವೆಯನ್ನು ಅತ್ಯಂತ ವಿಜೃಂಭಣೆ ಹಾಗೂ ಅದ್ದೂರಿಯಾಗಿ ನೆರವೇರಿಸಲಾಗಿದೆ. ಗ್ರಾಮೀಣ ಭಾಗದ ವಿಶಿಷ್ಟ ಜನಪದ ನಂಬಿಕೆಯಂತೆ, ಮಳೆ ದೇವರಾದ ವರುಣ ದೇವನನ್ನು ಒಲಿಸಿಕೊಳ್ಳಲು ಸಾರ್ವಜನಿಕರು ಹಾಗೂ ರೈತ ಬಾಂಧವರು ಒಗ್ಗೂಡಿ ಈ ವಿಶಿಷ್ಟ ಆಚರಣೆಯನ್ನು ಹಮ್ಮಿಕೊಂಡಿದ್ದರು. ಊರಿನ ಗೌಡರ ಮನೆಯಲ್ಲಿ ಶಾಸ್ತ್ರೋಕ್ತವಾಗಿ ಜರುಗಿದ ಈ ಕಲ್ಯಾಣ ಮಹೋತ್ಸವಕ್ಕೆ ಮಹಾದೇವ ಗೌಡರು ಹಾಗೂ ಪ್ರವೀಣ ಗೌಡರು ಪೂಜೆ ಸಲ್ಲಿಸಿದರು. ಮಲ್ಲಿಕಾರ್ಜುನ ಮಠಪತಿ, ಗಿರೀಶ ಜೋಶಿ ಹಾಗೂ ಅಪ್ಪಯ್ಯ ಹಿರೇಮಠ ಅವರ ನೇತೃತ್ವದಲ್ಲಿ ಸಾಮಾನ್ಯ ಮದುವೆಯಂತೆಯೇ ಸಕಲ ಸಂಪ್ರದಾಯಗಳೊಂದಿಗೆ ಕತ್ತೆಗಳ ವಿವಾಹ ಕಾರ್ಯ ನೆರವೇರಿತು. ಕತ್ತೆಗಳಿಗೆ ಮಂಗಲ ಸ್ನಾನ ಮಾಡಿಸಿ, ಅರಿಶಿನ-ಕುಂಕುಮ ಹಚ್ಚಿ, ನೂತನ ವಸ್ತ್ರ ಹಾಗೂ ಹೂವಿನ ಹಾರಗಳಿಂದ ಶೃಂಗರಿಸಲಾಗಿತ್ತು. ಮಂಗಲ ವಾದ್ಯಗಳ ಭಿನ್ನ ಧ್ವನಿ ಹಾಗೂ ಮಂತ್ರಘೋಷಗಳ ನಡುವೆ ಕತ್ತೆಗಳ ಮದುವೆ ಶಾಸ್ತ್ರೋಕ್ತವಾಗಿ ಸಂಪನ್ನಗೊಂಡಿತು. ಮದುವೆಯ ನಂತರ ಶೃಂಗರಿತ ಕತ್ತೆಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅತ್ಯಂತ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಗ್ರಾಮಸ್ಥರು, ಮಹಿಳೆಯರು ಹಾಗೂ ಯುವಕರು ಸಂಭ್ರಮದಿಂದ ಪಾಲ್ಗೊಂಡಿದ್ದರು. 'ಹೊತ್ತ ಬಂದಾಗ ಕತ್ತೆ ಕಾಲು ಹಿಡಿಯಬೇಕು' ಎಂಬ ಗಾದೆ ಮಾತಿನಂತೆ, ಗ್ರಾಮದ ಅಗಸಿಯಲ್ಲಿ ಪ್ರವೀಣ ಗೌಡರು ಹಾಗೂ ಖಂಡೇರಾವ ಘೋರ್ಪಡೆ ಅವರು ಕತ್ತೆಗಳ ಕಾಲನ್ನು ಹಿಡಿದು ವರುಣ ದೇವನು ಪ್ರಸನ್ನನಾಗಿ ಸಕಾಲಕ್ಕೆ ಉತ್ತಮ ಮಳೆ ಕರುಣಿಸಲಿ ಎಂದು ಭಕ್ತಿಭಾವದಿಂದ ಪ್ರಾರ್ಥಿಸಿದರು. ಬರಗಾಲ ಎದುರಾದಾಗ ಕತ್ತೆಗಳ ಮದುವೆ ಮಾಡುವ ಮೂಲಕ ಪ್ರಕೃತಿ ಮಾತೆಯನ್ನು ಬೇಡಿಕೊಳ್ಳುವುದು ಹಿರಿಯರ ಕಾಲದಿಂದಲೂ ನಡೆದುಬಂದ ಸಂಪ್ರದಾಯವಾಗಿದ್ದು, ಇದರಿಂದ ಸದ್ಯದಲ್ಲೇ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಲಿದೆ ಎಂದು ಗ್ರಾಮಸ್ಥರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಅಪೂರ್ವ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ಸಿದರಾಯ ತೋಡಕರ, ಅಸ್ಲಾಂ ಮುಲ್ಲಾ, ಅಶೋಕ ಪೂಜಾರಿ, ರಾಮಣ್ಣ ಮಗದುಮ್ಮ, ಆರ್ ಎಂ ಪಾಟೀಲ, ಚಿದಾನಂದ ಜಾಲಿಹಾಳ ಸೇರಿದಂತೆ ಹಲವು ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು ಎಂದು ವಿಶೇಷ ಪ್ರತಿನಿಧಿ ಮಹೇಶ್ ಶರ್ಮಾ ವರದಿ ಮಾಡಿದ್ದಾರೆ.1
- ಯಾದಗಿರಿಯಲ್ಲಿ ವ್ಯಕ್ತಿಯೊಬ್ಬರು ತಾವು ಸಾವಯವ ವಸ್ತುಗಳನ್ನು ಬಳಕೆ ಮಾಡುತ್ತಿರುವುದಾಗಿ ತಿಳಿಸಿದ್ದು, ಇತರರಿಗೂ ಸಹ ಇವುಗಳನ್ನು ಬಳಸುವಂತೆ ಪ್ರೋತ್ಸಾಹಿಸಿದ್ದಾರೆ. ನಮ್ಮ ಭೂಮಿಗಾಗಿ ಸಾವಯವ ವಸ್ತುಗಳನ್ನು ಬಳಕೆ ಮಾಡಿ ಎಂದು ಕರೆ ನೀಡಿರುವ ಇವರು, ಆಸಕ್ತರು ಸಂಪರ್ಕಿಸಲು 9008959177 ಮೊಬೈಲ್ ಸಂಖ್ಯೆಯನ್ನು ಹಂಚಿಕೊಂಡಿದ್ದಾರೆ.1
- ಯಾದಗಿರಿ ಜಿಲ್ಲೆಯಾದ್ಯಂತ ಮನೆಗಳು, ದ್ವಿಚಕ್ರ ವಾಹನಗಳು, ದನ-ಕರುಗಳು ಹಾಗೂ ಕುರಿಗಳ ಕಳ್ಳತನ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಲು ಅನುಭವಿ ಹಾಗೂ ನುರಿತ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಜಾನುವಾರುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಅವುಗಳನ್ನು ಕಳವು ಮಾಡಿ ಮಾರಾಟ ಮಾಡುವ ಸಂಘಟಿತ ಜಾಲ ಕಾರ್ಯನಿರ್ವಹಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ರೈತರು ಭಯದ ನೆರಳಿನಲ್ಲಿ ಬದುಕುವಂತಾಗಿದೆ. ಇತ್ತೀಚೆಗೆ ಬಳಿಚಕ್ರ ಗ್ರಾಮದಲ್ಲಿ ಮಧ್ಯರಾತ್ರಿ ಸುಮಾರು 3 ಗಂಟೆಯವರೆಗೆ ಜೀವದ ಹಂಗು ತೊರೆದು ಬೈಕ್ ಕಳ್ಳನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾಹಸಮಯ ಘಟನೆಯನ್ನು ಉಲ್ಲೇಖಿಸಿರುವ ಉಮೇಶ್ ಮುದ್ನಾಳ, ಅಲ್ಲಿಂದ ಪರಾರಿಯಾಗಿರುವ ಇತರ ಆರೋಪಿಗಳನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೆಳಮಟ್ಟದ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡುವಂತೆ ಒತ್ತಾಯಿಸಲಾಗಿದ್ದು, ಈ ಮನವಿಯ ಪ್ರತಿಯನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರು, ಕಲಬುರಗಿ ಪ್ರಾದೇಶಿಕ ಆಯುಕ್ತರು ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮಕ್ಕಾಗಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ವೀರಭದ್ರಪ್ಪ, ಪರಸಪ್ಪ, ಈರಪ್ಪಗೌಡ, ಮಲ್ಲಿಕಾರ್ಜುನ, ಸಾಯಿಬಣ್ಣ, ಗನ್ ಶಾಮ್, ಆಕಾಶ, ಅಕ್ರಮ, ನಯಿಮ್, ಅಜೀಜ್, ವೆಂಕಟೇಶ, ಅಯ್ಯಣ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.1
- ಕುಷ್ಟಗಿಯ ಹಳೆ ಪ್ರವಾಸಿ ಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಖ್ಯಾತ ಗಾಯಕಿ ಎಸ್. ಜಾನಕಿ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಹಾಗೂ ಭಾವಪೂರ್ಣ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರಗೌಡ ಮಾಲಿ ಪಾಟೀಲ ಅವರು, ಸುಮಾರು 17 ಭಾಷೆಗಳಲ್ಲಿ ತಮ್ಮ ಮಧುರ ಕಂಠದಿಂದ ಹಾಡಿ ಪದ್ಮಶ್ರೀ ಪ್ರಶಸ್ತಿ, ರಾಷ್ಟ್ರೀಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದ ಗಾನ ಕೋಗಿಲೆ ಎಸ್. ಜಾನಕಿ ಅಮ್ಮನವರು ನಮ್ಮನ್ನು ಬಿಟ್ಟು ಅಗಲಿದ್ದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಕಂಬನಿ ಮಿಡಿದರು. ಶ್ರದ್ಧಾಂಜಲಿ ಸಭೆಯಲ್ಲಿ ಎಸ್. ಜಾನಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ, ಒಂದು ನಿಮಿಷದ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ರಾಜ್ಯ ಹಾಗೂ ದೇಶದ ಜನರ ಮನಗಳಲ್ಲಿ ನೆಲೆಸಿದ್ದ ಜಾನಕಮ್ಮನ ನೆನಪುಗಳು ಮಾತ್ರ ಈಗ ನಮಗೆ ಉಳಿದಿದ್ದು, ಅವರ ತತ್ವಗಳನ್ನು ಸಮಾಜದ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಗಣ್ಯರು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಹನಮಂತಪ್ಪ ಈಟಿಯವರ್, ಮಾಜಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಟರಾಜ ಸೋನಾರ್, ಸಾಹಿತಿ ಕುಮಾರಸ್ವಾಮಿ ಹಿರೇಮಠ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶರಣಪ್ಪ ವಣಗೇರಿ ಉಪಸ್ಥಿತರಿದ್ದು ಮಾತನಾಡಿದರು. ಇದೇ ಸಂದರ್ಭದಲ್ಲಿ ಶರಣಪ್ಪ ಲೈನದ್, ಇಮಾಮಸಾಬ ಗರಡಿಮನಿ, ಬುಡ್ನೆಸಾಬ ಕಲಾದಗಿ, ಪರಶಿವಮೂರ್ತಿ ದೋಟಿಹಾಳ, ಪವಾಡೆಪ್ಪ ಚೌಡ್ಕಿ ಹಾಗೂ ದೇವರಾಜ ವಿಶ್ವಕರ್ಮ ಸೇರಿದಂತೆ ಹಲವರು ಪಾಲ್ಗೊಂಡು ಶ್ರದ್ಧಾಂಜಲಿ ಅರ್ಪಿಸಿದರು.3
- ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಭದ್ರ ಜಲಾಶಯಕ್ಕೆ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇಂದು ಬರೋಬ್ಬರಿ 21,000 ಕ್ಯುಸೆಕ್ ನೀರು ಹರಿದು ಬಂದಿದೆ. ಕಳೆದ ಒಂದು ತಿಂಗಳಿಂದ ನೀರಿನ ಕೊರತೆಯಿಂದ ತೀವ್ರ ಆತಂಕದಲ್ಲಿದ್ದ ಜಲಾಶಯ ವ್ಯಾಪ್ತಿಯ ರೈತರಿಗೆ ಈ ಸುದ್ದಿ ದೊಡ್ಡ ಸಂತಸ ತಂದಿದೆ. ಜಲಾಶಯದ ನೀರಿನ ಮಟ್ಟ ಅತ್ಯಂತ ವೇಗವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಗಾರು ಬೆಳೆಗಳಿಗೆ ನೀರು ಬಿಡುಗಡೆ ಮಾಡುವ ಕುರಿತು ಚರ್ಚಿಸಲು ಸರ್ಕಾರ ತಕ್ಷಣವೇ ನೀರಾವರಿ ಸಲಹಾ ಸಮಿತಿ (ICC) ಸಭೆ ಕರೆಯಬೇಕು ಎಂದು ರೈತ ಸಂಘಟನೆಗಳು ತೀವ್ರವಾಗಿ ಆಗ್ರಹಿಸಿವೆ. ಜಲಾಶಯದ ನೀರಿನ ಮಟ್ಟ 65 ರಿಂದ 70 ಟಿಎಂಸಿ ತಲುಪಿ, ತಮ್ಮ ಬೆಳೆಗಳಿಗೆ ಸಮರ್ಪಕವಾಗಿ ನೀರು ದೊರೆಯಲಿ ಎಂಬುದು ಸದ್ಯ ರೈತರ ನಿರೀಕ್ಷೆಯಾಗಿದೆ.1
- ಫ್ಲಿಪ್‌ಕಾರ್ಟ್/ಮಿಂತ್ರಾ ಡೆಲಿವರಿ ಏಜೆಂಟ್ ಒಬ್ಬರು ಪಾರ್ಸೆಲ್ ನೀಡಲು ಬಂದಾಗ, ಮನೆಯ ವಾಶ್‌ರೂಮ್ ಬಳಸಲು ಕೇಳಿದ್ದಾರೆ. ಅಪರಿಚಿತರನ್ನು ಫ್ಲಾಟ್ ಒಳಗೆ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿ, ಅನೇಕ ಬಾರಿ ವಿನಯದಿಂದ ನಿರಾಕರಿಸಿದರೂ ಮತ್ತು ತುರ್ತು ಪರಿಸ್ಥಿತಿಯಿದ್ದರೆ ಪಕ್ಕದ ಮನೆಯ ಪುರುಷ ನೆರೆಹೊರೆಯವರನ್ನು ಕೇಳುವಂತೆ ಸಲಹೆ ನೀಡಿದರೂ ಆತ ಕೇಳಲಿಲ್ಲ. ಈ ಸ್ಪಷ್ಟ ನಿರಾಕರಣೆಯನ್ನು ಲೆಕ್ಕಿಸದೆ, ಆತ ತನ್ನ ಚಪ್ಪಲಿಯನ್ನು ತೆಗೆದು ಅನುಮತಿಯಿಲ್ಲದೆ ಬಲವಂತವಾಗಿ ಮನೆಯೊಳಗೆ ಪ್ರವೇಶಿಸಿದ್ದಾನೆ. ಇದರಿಂದ ತೀವ್ರವಾಗಿ ಭಯಗೊಂಡ ನಿವಾಸಿ, ತನ್ನ ಸುರಕ್ಷತೆಗಾಗಿ ಮೊಬೈಲ್ ಕ್ಯಾಮೆರಾವನ್ನು ಆನ್ ಮಾಡಿಕೊಂಡು, ಯಾವುದೇ ಅನಾಹುತ ಸಂಭವಿಸಿದರೆ ತಕ್ಷಣ ಹೊರಗೆ ಓಡಿ ಸಹಾಯ ಪಡೆಯಲು ಅನುಕೂಲವಾಗುವಂತೆ ಮುಖ್ಯ ಬಾಗಿಲನ್ನು ತೆರೆದೇ ಇಟ್ಟಿದ್ದಾರೆ.1