Shuru
Apke Nagar Ki App…
ದನ ಕಳ್ಳತನಕ್ಕೆ ಸಂಬಂಧಿಸಿದಂತೆ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ವಿಟ್ಲ ಪೊಲೀಸ್ ಠಾಣಾ ಸರಹದ್ದಿನ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ ಒಟ್ಟು 4 ದನಗಳು ಕಳ್ಳತನವಾಗಿದ್ದರ ಬಗ್ಗೆ ಗಣೇಶ ರೈ ಎಂಬುವವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣಾ ಅ.ಕ್ರ 169/2025 ರಂತೆ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಲಾಗಿ ದಿನಾಂಕ:08-01-2026 ರಂದು ಪ್ರಕರಣದ ಆರೋಪಿಯಾದ ಝುಲ್ಫಾನ್ ಮಾಲಿಕ್ ಉಳ್ಳಾಲ್, ಪ್ರಾಯ: 30 ವರ್ಷ, ಕೋಡಿ, ಉಳ್ಳಾಲ ಗ್ರಾಮ ಮತ್ತು ತಾಲೂಕು, ಮಂಗಳೂರು, ಎಂಬುವವರನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟ್ ಡಿಗೆ ತೆಗೆದುಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.
Shamsheer Budoli
ದನ ಕಳ್ಳತನಕ್ಕೆ ಸಂಬಂಧಿಸಿದಂತೆ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ವಿಟ್ಲ ಪೊಲೀಸ್ ಠಾಣಾ ಸರಹದ್ದಿನ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ ಒಟ್ಟು 4 ದನಗಳು ಕಳ್ಳತನವಾಗಿದ್ದರ ಬಗ್ಗೆ ಗಣೇಶ ರೈ ಎಂಬುವವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣಾ ಅ.ಕ್ರ 169/2025 ರಂತೆ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಲಾಗಿ ದಿನಾಂಕ:08-01-2026 ರಂದು ಪ್ರಕರಣದ ಆರೋಪಿಯಾದ ಝುಲ್ಫಾನ್ ಮಾಲಿಕ್ ಉಳ್ಳಾಲ್, ಪ್ರಾಯ: 30 ವರ್ಷ, ಕೋಡಿ, ಉಳ್ಳಾಲ ಗ್ರಾಮ ಮತ್ತು ತಾಲೂಕು, ಮಂಗಳೂರು, ಎಂಬುವವರನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟ್ ಡಿಗೆ ತೆಗೆದುಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.
More news from Dakshina Kannada and nearby areas
- ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ ಕರಾವಳಿ ಪ್ರಗತಿಯೇ ನಮ್ಮ ಸಂಕಲ್ಪ: ಡಿಸಿಎಂ ಡಿ.ಕೆ. ಶಿವಕುಮಾರ್ ಕರಾವಳಿ ಎಂದರೆ ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ. ದೈವ, ದೇವಾಲಯ, ಶಕ್ತಿದೇವತೆಗಳ ಪ್ರವಾಸಿ ಕ್ಷೇತ್ರ. ವ್ಯಾಪಾರಿಗಳ ನಿಧಿ, ಪ್ರವಾಸಿಗರ ಸ್ವರ್ಗ. ಇಷ್ಟೆಲ್ಲಾ ವಿಶೇಷತೆ ಇರುವಾಗ ಈ ಭಾಗದ ಪ್ರವಾಸೋದ್ಯಮದಲ್ಲಿ ನಾವು ಯಾಕೆ ಹಿಂದುಳಿದಿದ್ದೇವೆ ಎಂಬುದು ಅರ್ಥವಾಗುತ್ತಿಲ್ಲ. ಈ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರಲ್ಲಿ ತಿಳಿಸಿದರು. “ನಮ್ಮಲ್ಲಿ 320 ಕಿ ಮೀ ಕರಾವಳಿ ಪ್ರದೇಶವಿದೆ. ಇಲ್ಲಿ ಪ್ರಕೃತಿ ಸಂಪತ್ತಿನ ಜೊತೆಗೆ, ಈ ಭಾಗದ ಹಿರಿಯರು ದೇಶಕ್ಕೆ ಅನೇಕ ಬ್ಯಾಂಕುಗಳನ್ನು ಕೊಟ್ಟಿದ್ದಾರೆ. ಬ್ಯಾಂಕುಗಳಲ್ಲಿ ಶಿಸ್ತು ಕೊಟ್ಟ ಜನ ನೀವು. ಪ್ರಪಂಚದಾದ್ಯಂತ ಈ ಕರಾವಳಿ ಭಾಗದ ಜನ ಕೆಲಸ ಮಾಡುತ್ತಿದ್ದಾರೆ. ಇದು ಶೈಕ್ಷಣಿಕ ಕೇಂದ್ರವೂ ಆಗಿದೆ. ಇಲ್ಲಿರುವಷ್ಟು ಮೆಡಿಕಲ್, ಇಂಜಿನಿಯರ್, ಪಿಯುಸಿ ಕಾಲೇಜು ಬೇರೆ ಯಾವುದೇ ಜಿಲ್ಲೆಯಲ್ಲಿ ಇಲ್ಲ. ನೀವು ಹೆಚ್ಚು ಮಾನವ ಸಂಪನ್ಮೂಲವನ್ನು ತಯಾರು ಮಾಡುತ್ತಿದ್ದೀರಿ. ಆದರೂ ಈ ಭಾಗದ ಪ್ರತಿಭಾವಂತ ಜನರು ಬೆಂಗಳೂರು, ಮುಂಬೈ ಸೇರಿದಂತೆ ಪ್ರಪಂಚದ ಮೂಲೆ ಮೂಲೆಗೆ ಹೋಗುತ್ತಿದ್ದಾರೆ” ಎಂದು ತಿಳಿಸಿದರು. “ಈ ಭಾಗದಲ್ಲಿ ಸುಂದರ ಸಮುದ್ರ ತೀರವಿದೆ. ಗೋವಾ ಹಾಗೂ ನಮಗೆ ಇರುವ ವ್ಯತ್ಯಾಸವೇನು? ಅಲ್ಲಿರುವ ಸೌಂದರ್ಯ ನಮ್ಮಲ್ಲೂ ಇವೆ. ಆದರೆ ಅವುಗಳನ್ನು ಬಳಸಿಕೊಳ್ಳುವಲ್ಲಿ ನಾವು ಎಡವಿದ್ದೇವೆ. ಏಳೆಂಟು ತಿಂಗಳ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಪ್ರವಾಸೋದ್ಯಮ ನೀತಿ ಬಗ್ಗೆ ಚರ್ಚೆ ಮಾಡಲಾಯಿತು. ಆಗ ಪ್ರವಾಸೋದ್ಯಮ ಅಂತಿಮ ನೀತಿಯನ್ನು ತಡೆ ಹಿಡಿಯುವಂತೆ ಹೇಳಿದೆ. ಕರಾವಳಿ ಭಾಗದಲ್ಲಿ ನಾವು ಪ್ರವಾಸೋದ್ಯಮ ನೀತಿ ರೂಪಿಸಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಣೆ ಮಾಡಬೇಕಾದರೆ ಇಲ್ಲಿರುವ ಅಡಚಣೆ ಹೇಗೆ ಸರಿಪಡಿಸಬಹುದು. ಕಾನೂನು ಚೌಕಟ್ಟಿನಲ್ಲಿ ನಿವಾರಣೆ ಮಾಡಿ ನೂತನ ನೀತಿ ತರಬೇಕು ಎಂದು ಹೇಳಿದೆ” ಎಂದರು. "ಬಹಳಷ್ಟು ಮಂದಿ ವಿದೇಶದಲ್ಲಿ ಇರುವವರು, ಮುಂಬೈ, ಬೆಂಗಳೂರಿನಲ್ಲಿ ನೆಲೆಸಿರುವ ಉದ್ಯಮಿಗಳು ತಮ್ಮ ಸ್ವಂತ ಊರಲ್ಲಿ ಏನಾದರೂ ಮಾಡಬೇಕು ಎನ್ನುವ ಆಸಕ್ತಿ ಹೊಂದಿದ್ದಾರೆ. ಅವರುಗಳು ಸರ್ಕಾರದಿಂದ ಅನುಕೂಲ ಮಾಡಿಕೊಟ್ಟರೆ ಬಂಡವಾಳ ಹೂಡುವುದಾಗಿ ತಿಳಿಸಿದ್ದಾರೆ. ಈ ಕಾರಣಕ್ಕೆ ನಾನು ವಿಧಾನಸಭೆ ಸೇರಿದಂತೆ ಹಲವಾರು ಕಡೆ ಇದರ ಬಗ್ಗೆ ಮಾತನಾಡಿದ್ದೇನೆ" ಎಂದರು. "ಇಲ್ಲಿ ಖಾಸಗಿಯವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಸರ್ಕಾರ ಒಂದಷ್ಟು ಮೂಲಸೌಕರ್ಯಗಳನ್ನು ಒದಗಿಸಿಕೊಡುತ್ತದೆ. ಜೊತೆಗೆ ಅನುಕೂಲತೆ, ಅನಾನುಕೂಲತೆ, ಸಮಸ್ಯೆಗಳನ್ನ ಚರ್ಚೆ ನಡೆಸಬೇಕಿದೆ. ಈ ಭಾಗದ ಎಲ್ಲಾ ಶಾಸಕರ ಬಳಿ ಈ ಬಗ್ಗೆ ಮಾತನಾಡಿದ್ದೇನೆ. ಎಲ್ಲರೂ ಬಹಳ ಆಸಕ್ತಿ ತೋರಿದ್ದಾರೆ" ಎಂದರು. “ಈ ಬಗ್ಗೆ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಜೊತೆ ಚರ್ಚೆ ಮಾಡಿದಾಗ ಮಂಗಳೂರಿನಲ್ಲೇ ಈ ವಿಚಾರವಾಗಿ ಚರ್ಚೆ ಮಾಡೋಣ ಎಂದು ಹೇಳಿದರು. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚೆಸುವುಗು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ನಂಬಿದ್ದೇನೆ. ಹೀಗಾಗಿ ಇಂದು ನಿಮ್ಮ ಜೊತೆ ಚರ್ಚೆ ಮಾಡಲು ಬಂದಿದ್ದೇನೆ. ನಮ್ಮ ಈ ಪ್ರಯತ್ನಕ್ಕೆ ನಾವು ಕೈಜೊಡಿಸುತ್ತೇವೆ ಎಂದು ಪಕ್ಷಾತೀತವಾಗಿ ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಈ ಭಾಗದ ಅಭಿವೃದ್ಧಿ ಮಾಡಲು ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಿ, ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಿ ಎಲ್ಲರೂ ಬೆಳೆಯುವಂತಾಗಲಿ ಎಂಬುದು ಎಲ್ಲರ ಇಚ್ಛಾಶಕ್ತಿಯಾಗಿದೆ. ಇಲ್ಲಿ ರಾಜಕೀಯ ಮುಖ್ಯವಲ್ಲ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಅದು ಶಾಶ್ವತವಾಗಿ ಉಳಿಯಲಿದೆ” ಎಂದರು. “ನಾನು ಸಹಕಾರಿ ಸಚಿವನಾಗಿದ್ದಾಗ, ಈ ಎರಡು ಜಿಲ್ಲೆಗಳ ಬ್ಯಾಂಕುಗಳು ಸಾಲ ವಸೂಲಾತಿಯಲ್ಲಿ 90% ಯಶಸ್ವಿಯಾಗುತ್ತಿದ್ದನ್ನು ನೋಡಿದ್ದೇನೆ. ಇಂತಹ ಶಿಸ್ತುಬದ್ಧ ಜನರ ಜ್ಞಾನ ಸಂಪತ್ತು ಸರಿಯಾಗಿ ಬಳಸಿಕೊಳ್ಳಲು ಈ ಸಭೆ ಕರೆದಿದ್ದೇನೆ. ” “ಈ ಭಾಗಕ್ಕೆ ಮತ್ತೆ ಮರುಜೀವ ನೀಡಲು ಈ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಅಗತ್ಯವಿದೆ. ಈ ಭಾಗ ರಾತ್ರಿ 7ರ ನಂತರ ಸ್ತಬ್ಧವಾಗುತ್ತದೆ ಎಂದು ನಾನು ಈ ಹಿಂದೆ ಹೇಳಿದ್ದೇನೆ. ಕೆಲವರು ಸ್ವಾಗತಿಸಿದರು, ಕೆಲವರು ಟೀಕಿಸಿದರು. ನನ್ನ ಮಾತನ್ನು ಸುಳ್ಳು ಮಾಡುವ ಛಲ ಬರಲಿ ಎಂದು ನಾನು ಟೀಕೆ ಮಾಡಿದ್ದೆ. ಇಂದು ನಾನು ಎಲ್ಲಾ ಉದ್ಯಮದವರನ್ನು ಈ ಸಮಾವೇಶಕ್ಕೆ ಆಹ್ವಾನಿಸಿದ್ದೇನೆ. ನಿಮ್ಮ ಅಭಿಪ್ರಾಯ ಸ್ವೀಕರಿಸಲು ನಾವು ಬದ್ಧವಾಗಿದ್ದೇವೆ. ನೀವು ಮುಕ್ತವಾಗಿ ನಿಮ್ಮ ಸಲಹೆಗಳನ್ನು ನೀಡಿ, ನಿಮ್ಮ ಸಲಹೆ ಅಭಿಪ್ರಾಯಗಳನ್ನು ಒಟ್ಟು ಸೇರಿಸಿ ಹಣಕಾಸು ಸ್ಥಿತಿಗೆ ಅನುಗುಣವಾಗಿ ನಾವು, ಸಿಎಂ, ಪ್ರವಾಸೋದ್ಯಮ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಚರ್ಚೆ ಮಾಡಿ ಸಚಿವ ಸಂಪುಟದ ಮುಂದೆ ಪ್ರಸ್ತಾಪ ಮಾಡುತ್ತೇವೆ” ಎಂದರು. ವರದಿ: ಶಂಶೀರ್ ಬುಡೋಳಿ1
- ಭದ್ರಾವತಿ: ನಗರದ ಹಿರಿಯ ಹೋರಾಟ ಗಾರ, ಸಿಪಿಐ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಡಿ.ಸಿ ಮಾಯಣ್ಣ(92) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಕೆಲವು ದಿನಗಳಿಂದ ಅನಾ ರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕರ್ತವ್ಯ ನಿವೃತ್ತಿ ಹೊಂದಿದ್ದರು. ಆರಂಭದಿಂದಲೂ ಕಾರ್ಮಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದು, ಪ್ರಸ್ತುತ ಸಿಪಿಐ ರಾಜ್ಯ ಸಮಿತಿ ಸದಸ್ಯ ರಾಗಿದ್ದರು. ಕಾರ್ಮಿಕ ಹೋರಾಟಗಳಲ್ಲಿ ಮಾತ್ರವಲ್ಲದೆ ಪ್ರಗತಿಪರ ಸಂಘಟನೆಗಳ ಬಹುತೇಕ ಹೋರಾಟಗಳಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ನಗರದ ವಿವಿಧ ರಾಜಕೀಯ ಪಕ್ಷಗಳ, ಪ್ರಗತಿಪರ ಹಾಗು ದಲಿತ ಮತ್ತು ಕಾರ್ಮಿಕ ಸಂಘಟನೆಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಕಾರ್ಮಿಕ ಹೋರಾಟಗಾರು, ಕಾರ್ಮಿಕ ವರ್ಗದವರು, ಡಿ.ಸಿ ಮಾಯಣ್ಣ ಅಭಿಮಾನಿ ಬಳಗದವರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗಣ್ಯರು ಜಾತಿ-ಬೇಧ, ಪಕ್ಷ ಬೇಧ ಮರೆತು ಸಂತಾಪ ಸೂಚಿಸಿದ್ದಾರೆ. ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಯಿಂದ ಡಿ.ಸಿ.ಮಾಯಣ್ಣನವರ ಹಿರಿಯೂರಿನ ನಿವಾಸದವರೆಗೂ ಡಿ.ಸಿ ಮಾಯಣ್ಣನವರ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಡಿ.ಸಿ ಮಾಯಣ್ಣನವರ ಅಂತ್ಯ ಸಂಸ್ಕಾರ ಶನಿವಾರ ಸಂಜೆ ಹಿರಿಯೂರಿನ ಅವರ ತೋಟದಲ್ಲಿ ನೆರವೇರಲಿದೆ.2
- *ಭಾರತ ನಲ್ಲಿ ವೈರಲ್*1
- ಹಿರಿಯೂರು ತಾಲೂಕಿನ ಹಿಂಡಸ್‌ಕಟ್ಟೆ ಬಳಿ ಈಚರ್ ಲಾರಿ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಯುವಕರು ದುರ್ಮರಣ ಹೊಂದಿರುವ ಘಟನೆ ಶನಿವಾರ ರಾತ್ರಿ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಈ ಅಪಘಾತ ನಡೆದು ನಂಜಯ್ಯನಕೊಟ್ಟಿಗೆ ಗ್ರಾಮದ ವಿಶ್ವನಾಥ್, ನಂಜುಂಡಿ, ರಾಹುಲ್ ಹಾಗೂ ಯಶ್ವಂತ್ ಎಂಬ ನಾಲ್ವರು ಪ್ರಾಣ ತೆತ್ತಿದ್ದು ಘಟನೆ ಮಾಸುವ ಕೆಲೆವೇ ಗಂಟೆಗಳ ಅಂತರದಲ್ಲಿ ಮತ್ತೆ ಚಿತ್ರದುರ್ಗ ನಗರದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ1
- ಚಿತ್ರದುರ್ಗ ಬ್ರೇಕಿಂಗ್ ಎರಡು ಕಡೆ ಪ್ರತ್ಯೇಕ ಅಪಘಾತ ಆರು ಜನ ಸಾವು ಮೂವರಿಗೆ ಗಂಭೀರ ಗಾಯ.. ಚಿತ್ರದುರ್ಗ ಜಿಲ್ಲೆಯಲ್ಲಿ ಶನಿವಾರ ಎರಡು ಕಡೆ ಭೀಕರ ಅಪಘಾತವಾಗಿದ್ದ 6 ಜನ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿರಿಯೂರಿನ ತಾಲ್ಲೂಕಿ ಹಿಂಡಾಸ್ ಕಟ್ಟೆ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದಾರೆ ಹಿರಿಯೂರು ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಿತ್ರದುರ್ಗ ಸಮೀಪ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವಾ ಕಾರು ಡಿಕ್ಕಿಯಾಗಿ 2 ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.. ಚಿತ್ರದುರ್ಗದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಇನ್ನೋವಾ ಚಾಲಕ ರಾಕೇಶ್ (40) ಕಮಲ್ ಹರಿಬಾಬ್ ಪಾಟೀಲ್ (65) ಮೃತಪಟ್ಟಿದ್ದಾರೆ. ಮೃತರು ಮಹಾರಾಷ್ಟ್ರದ ಕೊಲ್ಲಾಪುರ ಮೂಲದವರು ಎಂದು ತಿಳಿದು ಬಂದಿದೆ. ಇದೆ ಕಾರಿನಲ್ಲಿದ್ದ DYSP ವೈಷ್ಣವಿ ಪಾಟೀಲ್, ಕುಸುಮ, ಪೊಲೀಸ್ ಪೇದೆ ಉದಯ್ ಸಿಂಗ್ ಗಾಯಾಗೊಂಡಿದ್ದಾರೆ.DYSP ವೈಷ್ಣವಿ ಪಾಟೀಲ್ ತಾಯಿ ಮತ್ತು ಚಿಕ್ಕಮ್ಮನ ಜೊತೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಮಹಾರಾಷ್ಟ್ರಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಈ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ DYSP ದಿನಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..1
- Post by ದಯಾನಂದ ಡಿ ಎಚ್1
- ಯತ್ತಂಬಾಡಿ ಪ್ರಾಥಮಿಕ ಶಾಲೆಯನ್ನು ರಾಜ್ಯದಲ್ಲೇ ಮಾದರಿ ಶಾಲೆ ಮಾಡುವ ಗುರಿ ನಮ್ಮದು , ಉದ್ಯಮಿ ಹೇಮಂತ್. ಹಲಗೂರು:- ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವುಗಳು ಮುಂದಾಗಿದ್ದೇವೆ .ಯತ್ತಂಬಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಜಿಲ್ಲೆ ಯಲ್ಲೇ ಅಲ್ಲ ರಾಜ್ಯದಲ್ಲೇ ನಾನು ಮತ್ತು ನಮ್ಮ ಸ್ನೇಹಿತರು ಸೇರಿ ಮಾದರಿ ಶಾಲೆಯನ್ನಾಗಿ ಮಾಡುವ ಗುರಿಯನ್ನಾಗಿ ಇಟ್ಟುಕೊಂಡಿದ್ದೇವೆ .ಎಂದು ಬೆಂಗಳೂರಿನ ಉದ್ಯಮಿ ಹೇಮಂತ್ ತಿಳಿಸಿದರು. ಸಮೀಪದ ಯತ್ತಂಬಾಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಎಂಬ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ, ಈಗ ಸರ್ಕಾರಿ ಶಾಲೆ ಎಂದರೆ ಅದು ಸರ್ಕಾರಕ್ಕೆ ಸೇರಿದ ಶಾಲೆ, ಸರ್ಕಾರ ಎಂದರೆ ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರ ,ಜೆಡಿಎಸ್ ಸರ್ಕಾರ ಎಂಬ ಭಾವನೆ ಇದೆ. ಇದನ್ನೆಲ್ಲಾ ಹೊರತುಪಡಿಸಿ ಈ ಶಾಲೆ ನಮ್ಮ ಶಾಲೆ ,ನಮ್ಮೆಲ್ಲರ ಶಾಲೆ ಎಂಬ ಗೌರವ ನಮ್ಮಲ್ಲಿ ಬೆಳೆಯಬೇಕು. ಜಯರಾಮು ರವರ ಮೂಲಕ ನಾವು ಈ ಊರಿಗೆ ಕಾಲಿಟ್ಟಿದ್ದೇವೆ ಈ ಊರಿಗೂ ನಮಗೂ ಒಂದು ಋಣಾನುಬಂಧ ಬೆಳೆದಿದೆ .ಈ ಶಾಲೆಯಲ್ಲಿ ನಮಗೊಂದು ಸ್ಥಾನ ಸಿಕ್ಕಿದೆ ಅದು ಉಳಿಯಬೇಕಿದ್ದರೆ ಈ ಶಾಲೆ ಅತ್ಯುನ್ನತ ಮಟ್ಟಕ್ಕೆ ತಲುಪಬೇಕಾದರೆ ಏನೇನುಅಗತ್ಯವಿದೆ ಅದನ್ನೆಲ್ಲ ನಾವು ಪೂರೈಸಲು ಸಿದ್ಧರಿದ್ದೇವೆ. ನಮ್ಮ ಸಂಪಾದನೆಯ ಒಂದು ಭಾಗವನ್ನು ಮೀಸಲಿಟ್ಟುಈ ಶಾಲೆಯನ್ನು ಜಿಲ್ಲೆಯಲ್ಲಿ ಅತ್ಯುತ್ತಮ ಶಾಲೆಯಾಗಿಮಾಡಲು ನನ್ನ ಸ್ನೇಹಿತರ ಸಹಕಾರ ಇದೆ ಎಂಬ ಭಾವನೆಯಿಂದ ಮಾತು ಕೊಡುತ್ತೇನೆ. ಪೋಷಕರೆ ನಿಮ್ಮ ಸಹಕಾರ ನಿಮ್ಮ ಮಕ್ಕಳಿಗೆ ಇರಲಿ, ಗುರುಗಳಿಗೂ ಇರಲಿ ಈ ಮಕ್ಕಳನ್ನು ಉನ್ನತ ಮಟ್ಟದಲ್ಲಿ ನೋಡಲು ಬಯಸುತ್ತೇವೆ. ಇತರ ಶಾಲೆಗಳಿಗೂ ಇದು ಒಂದು ಮಾದರಿ ಶಾಲೆ ಆಗಬೇಕು ಹಾಗೆ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಮತ್ತೋರ್ವ ಉದ್ದಮಿ, ಜಯ ರಾಮು ಮಾತನಾಡುತ್ತಾ, ಹಳ್ಳಿಯಲ್ಲಿ ಬಹುತೇಕ ಸರ್ಕಾರಿ ಶಾಲೆಗಳು ಮುಚ್ಚುವಂತ ಪರಿಸ್ಥಿತಿ ಬಂದಿದೆ ,ಅಂತಹ ಸಂದರ್ಭದಲ್ಲಿ ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಮನೆ ತುಂಬಿಸಿಕೊಳ್ಳುವ ಸುಗ್ಗಿ ಹಬ್ಬಸಂಕ್ರಾಂತಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ನಮ್ಮ ಕಣ್ಮನ ತುಂಬಿಸಿದ ಇಲ್ಲಿಯ ಶಿಕ್ಷಕ ವೃಂದ ಮತ್ತು ಮಕ್ಕಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಹಳ್ಳಿಯ ಶಾಲೆಗಳಲ್ಲಿ ಓದಿ ವಿದ್ಯಾವಂತರಾಗಿ ಪಟ್ಟಣಗಳಲ್ಲಿ ಉದ್ಯೋಗ ನಿಮಿತ್ತ ಒತ್ತಡದ ಜೀವನ ನಡೆಸುತ್ತಿರುವ ನನ್ನ ಕುಟುಂಬದವರು ಮತ್ತು ಸಹೋದ್ಯೋಗಿಗಳನ್ನು ಕರೆತಂದು ಇಲ್ಲಿ ಸಮಯ ಕಳೆದದ್ದಕ್ಕೆ ಅವರಿಗೂ ಧನ್ಯವಾದಗಳು. ದೂರದ ಬೆಟ್ಟ ನುಣ್ಣಗೆ ಎಂದು ಪೋಷಕರು ತಮ್ಮ ಮಕ್ಕಳನ್ನು ಹಳ್ಳಿ ಶಾಲೆ ಬಿಟ್ಟು ಪಟ್ಟಣದ ಆಂಗ್ಲ ಮಾಧ್ಯಮದ ಶಾಲೆಗಳಿಗೆ ಸೇರಿಸುತ್ತಿರುವುದರಿಂದ ಹಳ್ಳಿ ಶಾಲೆಗಳು ಮುಚ್ಚಲ್ಪಡುತ್ತಿವೆ ಆದುದರಿಂದ ನಾವು ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೈಜೋಡಿಸೋಣ ಎಂದರು. ಶಾಲೆಯ ಮೈದಾನದಲ್ಲಿ ನಿರ್ಮಿಸಲ್ಪಟ್ಟ ಧಾನ್ಯಗಳ ಒಕ್ಕಣೆಯ ಕಣ, ಹೂವಿನಿಂದ ಅಲಂಕರಿಸಿದಧಾನ್ಯಗಳ ರಾಶಿ, ರಟ್ಟಿನಲ್ಲಿ ನಿರ್ಮಿಸಲಾದ ಹಳ್ಳಿಮನೆ, ನೀರು ಸೇದುವ ಬಾವಿ, ಎತ್ತಿನ ಬಂಡಿ ,ಒಣ ಹುಲ್ಲಿನ ಮೆದೆ, ಮೊರಗಳಲ್ಲಿ ತುಂಬಿಟ್ಟ ಅವರೆಕಾಯಿ, ಕಡಲೆಕಾಯಿ, ಸಿಹಿ ಗೆಣಸು, ಹೆಂಗಸು ಮತ್ತುಗಂಡಸಿನ ಚಿತ್ರವನ್ನು ಬಿಡಿಸಿರುವ ಮಡಿಕೆಗಳು, ಪಕ್ಷಿಗಳಿಂದ ಧಾನ್ಯವನ್ನು ಸಂರಕ್ಷಿಸಲು ಹೊಲಗಳಲ್ಲಿರಿಸುವ ಬೆದರು ಬೊಂಬೆಗಳು,ಎಳ್ಳು ಬೆಲ್ಲ ಕೊಬ್ಬರಿ ಮಿಶ್ರಣ, ಪೂಜಾ ಸಾಮಗ್ರಿಗಳು ಒಟ್ಟಾರೆ ಶಾಲೆಯ ಆವರಣ ಹಳ್ಳಿಯ ಸೊಬಗನ್ನು ಪ್ರತಿಬಿಂಬಿಸುತ್ತಿತ್ತು. ಇದೇ ಸಂದರ್ಭದಲ್ಲಿ ಯತ್ತಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ, ಪುಟ್ಟಸ್ವಾಮಾಚಾರಿ, ಸಿ ಆರ್. ಪಿ .ಶಿಕ್ಷಕ ರೇವಣ್ಣ ಹಾಗೂ ಬೆಂಗಳೂರಿನ ಉದ್ಯಮಿಗಳಾದ ಜಯರಾಮು ಶಿವಕುಮಾರ್, ವೀರಣ್ಣ, ಹೇಮಂತ್ ಮತ್ತು ಇತರರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯ ಶಿಕ್ಷಕ ವಿಶ್ವನಾಥ ಸೇರದಂತೆ ಶಿಕ್ಷಕ ವೃಂದ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ರಮೇಶ್, ಉಪಾಧ್ಯಕ್ಷರಾದ ಸೋಮಶೇಖರ್, ಶಿವಲಿಂಗೇಗೌಡ, ಕೆಂಚೇಗೌಡ, ಕೆಂಪೇಗೌಡ, ಕೆಂಪರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು. ಯತ್ತಂಬಾಡಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಗ್ಗಿ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದು.1
- ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. "ಮನರೇಗಾ ಉಳಿಸಿ ಅಭಿಯಾನವನ್ನು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚೆ ಮಾಡಲು ಎರಡು ದಿನ ವಿಶೇಷ ಅಧಿವೇಶನ ಕರೆಯುವ ಆಲೋಚನೆ ಸಹ ಇದೆ. ಆಮೂಲಕ ಇದರಿಂದ ಗ್ರಾಮೀಣ ಪ್ರದೇಶದ ಮೇಲೆ ಹೇಗೆ ದುಷ್ಪರಿಣಾಮ ಬೀರಲಿದೆ ಎಂದು ಜನರಲ್ಲಿ ಅರಿವು ಮೂಡಿಸಲಾಗುವುದು. ಜ.6ರಿಂದ ಫೆ.2ರವರೆಗೆ ತಾಲ್ಲೂಕು ಮಾಟ್ಟದಲ್ಲಿ ಪಂಚಾಯತಿ ಸದಸ್ಯರನ್ನು, ಫಲಾನುಭವಿ ಕಾರ್ಮಿಕರುಗಳನ್ನು ಒಳಗೊಂಡು ಪಾದಯಾತ್ರೆ ನಡೆಸಲಾಗುವುದು. ನರೇಗಾ ಯೋಜನೆ ಫಲಾನುಭವಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಇದರ ಬಗ್ಗೆ ಅರಿವು ಮೂಡಿಸಲಾಗುವುದು. ಮತ್ತೆ ನರೇಗಾವನ್ನು ಮರುಸ್ಥಾಪಿಸುವ ತನಕ ಹೋರಾಟ ಮಾಡಲಾಗುವುದು" ಎಂದು ವಿವರಿಸಿದರು. ಅಸ್ಸಾಂ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಕೇಳಿದಾಗ, "ಪಕ್ಷ ನನಗೆ ಜವಾಬ್ದಾರಿ ನೀಡಿದ್ದು, ಇದರ ಬಗ್ಗೆ ಪಕ್ಷದ ನಾಯಕರ ಬಳಿ ಚರ್ಚೆ ನಡೆಸುತ್ತೇನೆ" ಎಂದರು. ಎಸ್.ಪಿ ಮತ್ತು ಕಮಿಷನರ್ ವರ್ಗಾವಣೆ ಹಿಂದೆ ಕಾಂಗ್ರೆಸ್ ನಾಯಕರೇ ಇದ್ದಾರೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ, "ದಿನಾ ಆರೋಪ ಮಾಡ್ತಾ ಇರಲಿ, ದಿನಾ ಆರೋಪ ಕೇಳುತ್ತಾ ಇರೋಣ" ಎಂದರು. ರಾಜ್ಯಪಾಲರು ಮೂರು ಮಸೂದೆಗಳನ್ನು ವಾಪಸ್ ಕಳುಹಿಸಿರುವ ಬಗ್ಗೆ ಕೇಳಿದಾಗ, "ಸಂಜೆ ಮುಖ್ಯಮಂತ್ರಿಯವರು ಬರುತ್ತಾರೆ ಅವರ ಬಳಿ ಕೇಳಿ" ಎಂದರು. ವರದಿ: ಶಂಶೀರ್ ಬುಡೋಳಿ1