ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ .. ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ ತಕ್ಷಣ ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..
ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ .. ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ ತಕ್ಷಣ ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..
- *ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆ *ಕ್ರೀಡೆ: ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪದ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದಿನಾಂಕ:28-07- 2026 ರಂದು ಚಳ್ಳಕೆರೆ ನಗರದ ಬಿಸಿನೀರು ಮುದ್ದಪ್ಪ ಸರ್ಜಾರಿ ಪ್ರೌಢಶಾಲೆಯ ಅವನದ ಬಯಲು ರಂಗ ಮಂದಿರದ ಮುಂಭಾಗದಲ್ಲಿ ನಡೆದ ನಾಯಕನಹಟ್ಟಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ:ನಿತೀಶ್ ಮತ್ತು ತಂಡ ಕಬಡ್ಡಿ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆ ಕ್ರೀಡಾಪಟುಗಳಾಗಿದ್ದಾರೆ ವಿನಯ್ ಕುಮಾರ್ ಮತ್ತು ತಂಡ ವಾಲಿಬಾಲ್ ಕ್ರೀಡೆಯಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ *ಖೋ ಖೋ* ದ್ವಿತೀಯ: ತ್ರಿಶಾ ಮತ್ತು ತಂಡ *ಎತ್ತರ ಜಿಗಿತ* ತೃತೀಯ : ಮೇಘನಾ *400 ಮೀಟರ್ ಓಟ* ತೃತೀಯ: ತಿಪ್ಪೇಸ್ವಾಮಿ ಎಲ್ಲಾ ಕ್ರೀಡಾಪಟುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಕೆ.ಎಸ್. ಕೆ.ಎಸ್,ಮುಖ್ಯ ಶಿಕ್ಷಕಕರಾದ ನಿರ್ಮಲ B, ಎಸ್ ಡಿ ಎಂ ಸಿ ಅಧ್ಯಕ್ಷರಾದ ಕಾಟಯ್ಯ , ಶಿಕ್ಷಕರಾದ ನಾಗಭೂಷಣ್, B.P ಹಾಗೂ ಊರಿನ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.1
- ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ಜೋಗಿಮಟ್ಟಿ ರಸ್ತೆಯಲ್ಲಿ ಮರಹತ್ಯೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಮಾಸ್ತಮ್ಮ ಮಹಾದ್ವಾರದ ಬಳಿ ಬೆಳೆದಿದ್ದ ನೆರಳೆ ಮರವನ್ನು ದುಷ್ಕರ್ಮಿಗಳು ಕಡಿದಿದ್ದ ಹಿನ್ನೆಲೆಯಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಆರು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ದಿನ ಹಾಕಿದ್ದ ಗಿಡಗಳು ಇಂದು ಫಸಲು ಬಿಡುತ್ತಿದ್ದವು. ಆದರೆ ಇದನ್ನು ಕಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು FIR ದಾಖಲಿಸಲು ಆಗ್ರಹಿಸಿದರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಗೋಪ್ಯಾನಾಯ್ಕ ಅವರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿ ಪ್ರಭುಶಂಕರ್ ಮತ್ತು ಸಿಬ್ಬಂದಿ ಗಳು ಆಗಮಿಸಿ ಮಹಜರು ಮಾಡಿದರು. ಇದೇ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷರಾದ ಮಾಲತೇಶ್ ಅರಸ್ , ಜೋಗಿಮಟ್ಟಿ ಗೆಳೆಯರ ಬಳದ ಮಾರ್ಗದರ್ಶಕ ರಾಜಣ್ಣ , ಮಾಜಿ ಅಧ್ಯಕ್ಷರಾದ ರವಿಕುಮಾರ್, ರಾಘವೇಂದ್ರ, ಕಾರ್ಯದರ್ಶಿ ಮಂಜುನಾಥ್ , ರವಿಬಡಗಿ ಇತರರು ಇದ್ದರು. ಬೈಟ್: ರಾಜಣ್ಣ2
- ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್ - ವಿಜಯನಗರ ಜಿಲ್ಲೆ ಕೂಡ್ಲಿಗಿ *ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಕ್ಷ ಭಲವರ್ಧನೆಗೆ ಎಲ್ಲರೂ ಶಿಸ್ಥು , ಹಾಗೂ ಸಂಘಟನಾತ್ಮಕ ಮನೋಭಾವ ಬಳೆಸಿಕೊಳ್ಳಬೇಕೆಂದು. ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು , ಹಾಗೂ ಮಾಜಿ ಶಾಸಕರಾದ ಶಿರಾಜ್ ಶೇಖ್ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಜರುಗಿದ ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್ ಬೆಂಗಳೂರು: ಬೆಂಗಳೂರು ನಗರವನ್ನು ತ್ಯಾಜ್ಯಮುಕ್ತ ಹಾಗೂ ಸುಂದರ ನಗರವನ್ನಾಗಿ ನಿರ್ಮಿಸುವ ಉದ್ದೇಶದಿಂದ, ಇಂದು ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು.1
- ಚಿಕ್ಕನಾಯಕನಹಳ್ಳಿಯಲ್ಲಿ ಹೇಮಾವತಿ ನೀರಿಗಾಗಿ ನಡೆಯುತ್ತಿರುವ ಅಹೋರಾತ್ರಿ ಧರಣೀಯ ಎರಡನೇ ದಿನದ ರಾತ್ರಿಲ್ಲೂ ಕೂಡ ಅರಿತರು ಜಗ್ಗದೆ ಧರಣಿ ಮುಂದುವರಿಸುತ್ತಿರುವುದು1
- ಬಿದರೆಕೆರೆ-ಬೇಡತ್ತೂರು ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡಲು ಒತ್ತಾಯ ಮಧುಗಿರಿ ತಾಲೂಕಿನಲ್ಲಿ ನಡೆಯುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯಲ್ಲಿ ಬಿದರೆಕೆರೆ ಬೇಡತ್ತೂರು ಗ್ರಾಮದ ರೈಲ್ವೆ ನಿಲ್ದಾಣಕ್ಕೆ ಮಿಡಿಗೇಶಿ ಹೆಸರಿಡುವಂತೆ, ಬಿಜೆಪಿ ಒಬಿಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಮಿಡಿಗೇರ್ ಶ್ರೀ ಕೃಷ್ಣಮೂರ್ತಿ ಇವತ್ತಾಯಿಸಿದ್ದಾರೆ2
- ಜಮ್ಮೇನಹಳ್ಳಿ ಗ್ರಾಮದ ಜಮೀನಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಹೆಣ್ಣು ಚಿರತೆಗಳು ಜಮ್ಮೇನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಜೋಡಿ ಹೆಣ್ಣು ಚಿರತೆಗಳು ಮೃತಪಟ್ಟಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ಸಮೀಪದ ಸಿಡಿಗೆರೆ ಹೋಬಳಿಯ ಜಮ್ಮೇನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಒಂದು ವರ್ಷದೊಳಗಿನ ಎರಡು ಹೆಣ್ಣು ಚಿರತೆಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರೈತರು ಜಮೀನಿಗೆ ತೆರಳಿದ ವೇಳೆ ಎರಡು ಚಿರತೆಗಳು ಚಲನೆಯಿಲ್ಲದೆ ಬಿದ್ದಿರುವುದನ್ನು ಗಮನಿಸಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ವಲಯ ಅರಣ್ಯಾಧಿಕಾರಿ ರಾಮಚಂದ್ರಪ್ಪ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಚಿರತೆಗಳ ಮರಣದ ನಿಖರ ಕಾರಣ ತಿಳಿದುಬಂದಿಲ್ಲ. ವಿಷಪ್ರಾಶನ, ವಿದ್ಯುತ್ ಸ್ಪರ್ಶ ಅಥವಾ ಇತರ ಕಾರಣಗಳಿಂದ ಸಾವು ಸಂಭವಿಸಿರಬಹುದೇ ಎಂಬ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ಎರಡೂ ಚಿರತೆಗಳ ಮರಣೋತ್ತರ ಪರೀಕ್ಷೆ ನಡೆಸಿ, ಅಗತ್ಯ ಮಾದರಿಗಳನ್ನು ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.1
- ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರು ಬದಲಾವಣೆ .ರೈತ ಸಮುದಾಯ ಭವನ ಎಂದು ನಾಮಫಲಕ. ಚಳ್ಳಕೆರೆ :ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರೈತ ಸಮುದಾಯ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ ಎನ್ನುವ ಆರೋಪ ಹಿನ್ನೆಲೆಯಲ್ಲಿ ಎಪಿಎಂಸಿ ಆಡಳಿತ ಕಚೇರಿಗೆ ಭೇಟಿ ನೀಡಿದ್ದ ಉಪ ವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ದಾಖಲೆಗಳನ್ನು ಪರಿಶೀಲನೆ ಮಾಡಿದರು. ಈ ವೇಳೆ ಮಾಹಿತಿ ನೀಡಿದ ಎಪಿಎಂಸಿ ಕಾರ್ಯದರ್ಶಿ ಜೆ. ಪ್ರಭು, ಕೃಷಿ ಮಾರಾಟ ಇಲಾಖೆ ನಿಯಮದಡಿ ಅನುಪಯುಕ್ತವಾಗಿ ಉಳಿದಿದ್ದ ರೈತ ಸಮುದಾಯ ಭವನವನ್ನು ಹರಾಜು ಪ್ರಕ್ರಿಯೆಯಲ್ಲಿ 2026 ರಿಂದ ಅನ್ವಯ ಆಗುವ ರೀತಿಯಲ್ಲಿ ಬಿ. ವೆಂಕಟೇಶ್ ದಳವಾಯಿ ಎಂಬುವರಿಗೆ 55 ತಿಂಗಳ ಅವದಿಗೆ ಲೀಜಿಗೆ ನೀಡಲಾಗಿದೆ. ಇದರ ಬಾಬ್ತು ಮಾನಸಿ 34 ಸಾವಿರ ಕಟ್ಟಬೇಕು. 11 ತಿಂಗಳಿಗೊಮ್ಮೆ ಲೈಸೆನ್ಸ್ ನವೀಕರಣ ಮಾಡಿಕೊಳ್ಳಬೇಕು. 33 ತಿಂಗಳಿಗೊಮ್ಮೆ ಮಾಸಿಕ ಬಾಡಿಗೆ ಹಣದಲ್ಲಿ ಶೇ.5 ರಷ್ಟು ಹೆಚ್ಚಳ ಮಾಡುವ ಷರತ್ತುಗಳು ವಿಧಿಸಿ ನೀಡಲಾಗಿದೆ ಎಂದು ತಿಳಿಸಿದರು. ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರೈತ ಭವನವನ್ನು ಖಾಸಗಿ ವ್ಯಕ್ತಿಗೆ ನೀಡಲಾಗಿದೆ. ಸಮುದಾಯ ಭವನ ಬದಲಿಗೆ, ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಎಂದು ಹೆಸರು ಬೆರಸಿರುವ ಬಗ್ಗೆ ರಾಜ್ಯ ರೈತ ಸಂಘ, ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಗಂಭೀರವಾಗಿ ಆರೋಪ ಮಾಡಲಾಗಿತ್ತು. ಈ ಬೆನ್ನಲ್ಲೇ ಬಾಡಿಗೆ ಪಡೆದಿದ್ದ ಬಿ. ವೆಂಕಟೇಶ್ ದಳವಾಯಿ ಅವರಿಗೆ ನೋಟಿಸ್ ಜಾರಿ ಮಾಡಿ, ತಕ್ಷಣವೇ ಸಣ್ಣ ತಿಪ್ಪಯ್ಯ ಕಲ್ಯಾಣ ಮಂಟಪ ಹೆಸರನ್ನು ಬದಲಾಯಿಸಿ, ಮೊದಲಿನಂತೆ ರೈತ ಸಮುದಾಯ ಭವನ ಎಂದು ಬರೆಸಿರುವುದಾಗಿ ದಾಖಲೆ ಸಹಿತ ಉಪ ವಿಭಾಗಾಧಿಕಾರಗಳಿಗೆ ಮಾಹಿತಿ ನೀಡಿದ್ದಾರೆ.1
- ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ_ವಿಜಯನಗರ ಜಿಲ್ಲೆ ಕೂಡ್ಲಿಗಿ *ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ*_ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಜುಲೈ 31ರಂದು , ಉಪ ಆರೋಗ್ಯಕೇಂದ್ರದಲ್ಲಿ ಡಿ ದರ್ಜೆ ನೌಕರರಾದ RNK ನಿಜಲಿಂಗಪ್ಪರವರಿಗೆ. ವಯೋ ನಿವೃತ್ತಿ ಹೊಂದಿದ RNK ನಿಜಲಿಂಗಪ್ಪರವರನ್ನು , ಆರೋಗ್ಯ ಸಿಬ್ಬಂದಿ ಹಾಗೂ ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು , ಅವರನ್ನು ಸನ್ಮಾನಿಸಿ ಗೌರವ ಪೂರ್ವಕವಾಗಿ ಬಿಳ್ಕೊಟ್ಟರು. ಮೂಲತಃ ಕೊಟ್ಟೂರು ರಾಂಪುರ ಗ್ರಾಮದವರಾದ , ನಿಜಲಿಂಗಪ್ಪರವರು. ಕಳೆದ ಮೂರು ದಶಕಗಳ ಹಿಂದೆಯೇ , ಬಳ್ಳಾರಿಯ ರೇಷ್ಮೆ ಇಲಾಖೆಯಲ್ಲಿ. ಮಾಸಿಕ ಭತ್ಯೆ ಹೊರಗುತ್ತಿಗೆ ಆಧಾರದಂತೆ , ಹತ್ತು ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಕರ್ಥವ್ಯೆ ನಿರ್ವಹಿಸಿದ್ದರು. ತದನಂತರ ಆರೊಗ್ಯ ಇಲಾಖೆಯಲ್ಲಿ ಕೆಲ ವರ್ಷಗಳ ಕಾಲ , ಹೊರಗುತ್ತಿಗೆ ಡಿ ದರ್ಜೆ ನೌಕರಾಗಿ ಕರ್ಥವ್ಯ ನಿರ್ವಹಿಸಿದರು. ನಂತರ ವಷ್ಠೆ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ , ಖಾಯಂ ನೌಕರರಾಗಿ ಗುರುತಿಸಿಕೊಂಡು ಮೂರುವರೆ ದಶಕಗಳ ಕಾಲ ಡಿ ದರ್ಜೆ ನೌಕರರಾರಿ ಕರ್ಥವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ್ದಾರೆ. ನಿಜಲಿಂಪ್ಪರವರು ಚಿಕ್ಕಜೋಗಳ್ಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ , 1998 ರಿಂದ ಸೇವೆ ಆರಂಭಿಸಿ ಜುಲೈ 31 2026 ರವರೆಗೆ. ಅಂದರೆ ಸತತ 34 ವರ್ಷಗಳ ಕಾಲ , ಚಿಕ್ಕಜೋಗಿಹಳ್ಳಿ ಉಪ ಆರೋಗ್ಯಕೇಂದ್ರದಲ್ಲಿ ಸೇವೆ ಸಲ್ಪಿಸಿದ್ದಾರೆ. 31 7 2026ರಂದು , ಅವರು ವಯೋ ನಿವೃತ್ತಿ ಹೊಂದಿರುತ್ತಾರೆ. ಅವರ ಸಾರ್ಥಕ ಸೇವೆ ಹಾಗೂ ಸನ್ನಡತೆ ಮೆಚ್ಚಿದ , ಆರೋಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು. ಮತ್ತು ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ , ವಿವಿದ ಸಂಘಟನೆಗಳ ಪದಾಧಿಕಾರಿಗಳು. ನಿಜಲಿಂಗಪ್ಪರವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ , ಅಭಿಮಾನದಿಂದ ಹಾರೈಸಿ ಸರಳ ಬೀಳ್ಕೊಡುಗೆ ಸಮಾರಂಭದ ಮೂಲಕ ಬೀಳ್ಕೊಟ್ಟಿದ್ದಾರೆ. ಡಾ ॥ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಮದ್ ಸಾಧಿಕ್ ರವರು ಮಾತನಾಡಿ , ನಿಜಲಿಂಗಪ್ಪರವರು ಸಜ್ಜನ ಪ್ರಾಮಾಣಿಕ ನೌಕರರಾಗಿದ್ದರು. ಅವರು ಕಿಂಚಿತ್ತು ಯಾವುದೇ ದೋಷರೋಪಗಳಿಲ್ಲದೆ , ನಿಷ್ಕಳಂಕದಿಂದ ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದು. ನಿಜಲಿಂಗಪ್ಪರವರ ಸಾರ್ಥಕ ಸೇವೆಗಾಗಿ , ಅವರನ್ನು ಅವರ ಮಡದಿಯೊಡಗೂಡಿ ತಾವು ಗೌರವಿಸಿ ಸನ್ಮಾನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅವರಿಗೆ ಮುಂದಿನ ಆರೋಗ್ಯ ಆಯಸ್ಸು ಸುಖಮಯವಾಗಿರಲೆಂದು , ತಾವು ದೇವರಲ್ಲಿ ಕೋರುವುದಾಗಿ ಅವರು ತಿಳಿಸಿದ್ದಾರೆ. ವಿಷ್ಣು ಸೇನಾ ಸಮಿತಿ ಮುಖಂಡರಾದ ಜನನಾಯಕ ಕುರಿಹಟ್ಟಿ ಓಬಣ್ಣ , ಮಲಿಯಪ್ಪ , ರಾಜು ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರು. ಮತ್ತು ಆರೊಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು ಉಪಸ್ಥಿತರಿದ್ದು. ನಿಜಲಿಂಗಪ್ಪರವರಿಗೆ ನಿವೃತ್ತಿ ಜೀವನ , ಸುಖಮಯವಾಗಿರಲೆಂದು ಶುಭ ಹಾರೈಸಿದ್ದಾರೆ. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*3