logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪ್ಲಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ, ಗುಟ್ಕಾ ಉಗಿದರೆ 1000 ದಂಡ ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್‍ನಲ್ಲಿರುವ ಹಾನಿಕಾರಕ ರಾಸಾಯನಿಕಗಳು ಬಿಸಿ ಆಹಾರಕ್ಕೆ ಸೇರಿ ಕ್ಯಾನ್ಸರ್ ರೋಗಕ್ಕೆ ಕಾರಣವಾಗುತ್ತಿದೆ. ಹೋಟೆಲ್, ಕ್ಯಾಂಟೀನ್‍ಗಳಿಂದ ಹೆಚ್ಚಾಗಿ ಕಾರ್ಮಿಕರು ಅಥವಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಬಿಸಿ ಆಹಾರ ಪದಾರ್ಥಗಳನ್ನು ಕೊಂಡೊಯ್ಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಕವರ್, ನ್ಯೂಸ್ ಪೇಪರ್ ಗಳಲ್ಲಿ ಬಿಸಿ ಆಹಾರ ಪದಾರ್ಥಕ್ಕೆ ಪ್ಲಾಸ್ಟಿಕ್ ಬಳಕೆ ಕಡ್ಡಾಯವಾಗಿ ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್, ತಂಬಾಕು ಸೇವನೆ ನಿಷೇಧ, ಎಚ್ಚರಿಕೆಯ ಫಲಕ ಇಲ್ಲದೆ ಇರುವುದು, ಅಂಗಡಿ, ಹೋಟೆಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರ್ ಲೈಟರ್, ಬೆಂಕಿ ಪೊಟ್ಟಣಗಳನ್ನು ಇಟ್ಟರೆ ಅವರಿಗೆ ದಂಡ ವಿಧಿಸಬೇಕು. ತಂಬಾಕು ಬ್ರಾಂಡ್ ಹೆಸರಿನೊಂದಿಗೆ ಜಾಹಿರಾತು ಫಲಕಗಳು ಅಥವಾ ಯಾವುದೇ ರೀತಿಯಲ್ಲಿ ತಂಬಾಕು ಉತ್ಪನ್ನಗಳ ಪ್ರಚಾರ, 21 ವರ್ಷದೊಳಗಿನವರಿಗೆ ತಂಬಾಕು ಮಾರಾಟ ಮಾಡಿದರೆ, ಚಿಲ್ಲರೆ ಅಂಗಡಿಗಳಲ್ಲಿ ಸಿಗರೇಟ್, ತಂಬಾಕು ಉತ್ಪನ್ನಗಳ ಪ್ರದರ್ಶನ ಮಾಡಿದರೆ ದಂಡ ವಿಧಿಸಲು ಅಪರ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. ಶಾಲಾ ಕಾಲೇಜುಗಳ 100 ಮೀಟರ್ ಅಂತರದೊಳಗೆ ತಂಬಾಕು ಮಾರಾಟ ಮಾಡುವವರ ಬಗ್ಗೆ ಶಾಲಾ-ಕಾಲೇಜುಗಳ ಮುಖ್ಯಸ್ಥರು ನಿಗಾವಹಿಸಬೇಕು. ಅಂತಹ ಅಂಗಡಿಗಳ ಪಟ್ಟಿಯನ್ನು ತಮ್ಮ ವ್ಯಾಪಿಯಲ್ಲಿರುವ ಸ್ಥಳಿಯಾಡಳಿತಕ್ಕೆ ಮತ್ತು ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಸಲ್ಲಿಸಬೇಕು. ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಜಿಲ್ಲೆಯಲ್ಲಿ ತಂಬಾಕು ಮಾರಾಟ ಮತ್ತು ಸೇವನೆಯನ್ನು ನಿಯಂತ್ರಿಸಬಹುದು ಎಂದು ರಾಜು ಕೆ. ತಿಳಿಸಿದರು. ಶಾಲಾ ಕಾಲೇಜುಗಳಲ್ಲಿ 100 ಮೀಟರ್ ಅಂತರದೊಳಗೆ ತಂಬಾಕು ಮಾರಾಟ ನಿಷೇಧ ಬೋರ್ಡ್ ಕಡ್ಡಾಯವಾಗಿ ಹಾಕಬೇಕು ಮತ್ತು ತಂಬಾಕು ಉತ್ಪನ್ನಗಳನ್ನು ಬಳಸದಂತೆ ಸೂಕ್ತ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ತಂಬಾಕಿಗೆ ಸಂಬಂಧಿಸಿದಂತೆ ಜಾಹೀರಾತು ಫಲಕಗಳು ಕಂಡು ಬಂದಿದ್ದು, ತಂಬಾಕು ನಿಯಂತ್ರಣ ಕಾಯ್ದೆ ಪ್ರಕಾರ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ತಂಬಾಕಿನ ಅಪಾಯಕ್ಕೆ ಸಿಲುಕುವ ರಿಕ್ಷಾ ಚಾಲಕರು, ಕಟ್ಟಡ ಕಾರ್ಮಿಕರು, ಪೌರ ಕಾರ್ಮಿಕರು ಇರುವ ಸ್ಥಳಕ್ಕೆ ಹೋಗಿ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವಿಸಿದವರಿಗೆ ಮತ್ತು ಗುಟ್ಕಾ ಜಗಿದು ಉಗಿಯುವವರಿಗೆ 1000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಅಂಗಡಿಗಳಲ್ಲಿ ಚಿಲ್ಲರೆ ಸಿಗರೇಟ್ ಮಾರಾಟ ಮಾಡಲು ಅವಕಾಶವಿಲ್ಲ. ಇದನ್ನು ಉಲ್ಲಂಘಿಸಿದ ಅಂಗಡಿಗಳಿಗೂ ದಂಡ ವಿಧಿಸಲಾಗುವುದು. ಕೋಟ್ಪಾ ಕಾರ್ಯಾಚರಣೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 2,587 ಪ್ರಕರಣ ದಾಖಲಾಗಿದ್ದು, ರೂ 3.89 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ತಂಬಾಕಿಗೆ ಸಂಬಂಧಿಸಿದಂತೆ ಸುಮಾರು 52 ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗಿದೆ. ತಂಬಾಕು ಉತ್ಪನ್ನ ಪ್ಯಾಕ್‍ನಲ್ಲಿ ಆರೋಗ್ಯ ಎಚ್ಚರಿಕೆಯ ಚಿತ್ರಗಳು ಶೇ.85 ಕ್ಕಿಂತ ಕಡಿಮೆ ಅಳತೆಯಲ್ಲಿದ್ದರೆ ಮತ್ತು ಹಳೆಯದಾದ ಎಚ್ಚರಿಕೆಯ ಚಿತ್ರಗಳನ್ನು ಹಾಕಿದರೆ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನವೀನ್‍ಚಂದ್ರ ಕುಲಾಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳು ಉಪಸ್ಥಿತರಿದ್ದರು.

on 11 March
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•

More news from ಕರ್ನಾಟಕ and nearby areas
  • ಮೈಸೂರು ನಾ ನರಸಿಂಹರಾಜ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ
    1
    ಮೈಸೂರು ನಾ  ನರಸಿಂಹರಾಜ  ಕ್ಷೇತ್ರದಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    21 hrs ago
  • ಬನ್ನೂರು: ತಾಲೂಕಿನ ಬನ್ನೂರು ಹೋಬಳಿಯ ಬಿ.ಸಿ ಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆಯಾದ ಹುಚ್ಚಮ್ಮ ದೇವಿಯ ದೊಡ್ಡ ಹಬ್ಬ ಭಕ್ತಿಭಾವ, ಸಂಪ್ರದಾಯ ಮತ್ತು ಗ್ರಾಮೀಣ ಸಂಸ್ಕೃತಿಯ ಸೊಬಗಿನೊಂದಿಗೆ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆಯಿಂದಲೇ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ಹಬ್ಬದ ಪ್ರಮುಖ ಅಂಗವಾಗಿ ಗ್ರಾಮದ ಮಹಿಳೆಯರು 70 ಕ್ಕೂ ಹೆಚ್ಚು ಮಡಿಕೆಗಳಲ್ಲಿ ಪವಿತ್ರ ನೀರನ್ನು ತಂದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಹುಚ್ಚಮ್ಮ ದೇವಿಯ ಉತ್ಸವ ಮೂರ್ತಿಗೆ ಗ್ರಾಮ ಸುತ್ತ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು, ನಾದಸ್ವರ, ಪೂಜಾ ಘೋಷಣೆಗಳು ಮತ್ತು ಭಕ್ತರ ಜಯಘೋಷಗಳಿಂದ ಗ್ರಾಮದೆಲ್ಲೆಡೆ ಭಕ್ತಿಮಯ ವಾತಾವರಣ ನಿರ್ಮಾಣವಾಯಿತು. ದೇವಿಗೆ ಹರಕೆ ತೀರಿಸುವ ಸಲುವಾಗಿ ಭಕ್ತರು ಸ್ವಯಂಪ್ರೇರಿತವಾಗಿ ಸುಮಾರು 500 ಕುರಿಗಳನ್ನು ಸಮರ್ಪಿಸಿದರು. ಪ್ರತಿಯೊಂದು ಕುರಿಯ ಅಂದಾಜು ಬೆಲೆ ₹12,000 ಆಗಿದ್ದು, ಒಟ್ಟು ಮೌಲ್ಯ ಸುಮಾರು ₹60 ಲಕ್ಷ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭಕ್ತರು ನೀಡಿದ ಈ ಕುರಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು. ಹಬ್ಬದ ವಿಶೇಷ ಆಕರ್ಷಣೆಯಾಗಿ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಯಿತು. ಭಕ್ತರಿಗಾಗಿ ಸುಮಾರು 12 ಟನ್ ಮಟನ್ ಸಾಂಬಾರ್ ಹಾಗೂ ರಾಗಿ ಮುದ್ದೆ ತಯಾರಿಸಿ 1000 ಕ್ಕೂ ಹೆಚ್ಚು ಜನರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು. ಗ್ರಾಮಸ್ಥರು, ಹಾಗೂ ಮಹಿಳಾ ಯಾರು ಸಹ ಅಡುಗೆ ತಯಾರಿ ಭಾಗವಹಿಸಿ ದ್ದರು. ಅಡುಗೆ ವ್ಯವಸ್ಥೆ ಸುಸೂತ್ರವಾಗಿ ನಡೆಯಿತು. ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಏಕತೆ, ಸಹಕಾರ ಮತ್ತು ಭಕ್ತಿಯ ಪ್ರತಿರೂಪ ಕಾಣಿಸಿಕೊಂಡಿತು. ದೂರದ ಊರುಗಳಿಂದ ಆಗಮಿಸಿದ ಭಕ್ತರು ದೇವಿಯ ಆಶೀರ್ವಾದ ಪಡೆದು ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪರಂಪರೆ ಮತ್ತು ಜನಪದ ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿರುವ ಹುಚ್ಚಮ್ಮ ದೇವಿ ಹಬ್ಬ ಗ್ರಾಮೀಣ ಬದುಕಿನ ಸಾಂಸ್ಕೃತಿಕ ವೈಭವವನ್ನು ಮತ್ತೊಮ್ಮೆ ಸಾರಿತು. ಗ್ರಾಮಸ್ಥರ ಒಗ್ಗಟ್ಟು ಹಾಗೂ ಭಕ್ತರ ಅಪಾರ ಭಕ್ತಿ ಈ ವರ್ಷದ ಹುಚ್ಚಮ್ಮ ದೇವಿ ದೊಡ್ಡ ಹಬ್ಬವನ್ನು ವಿಶೇಷವಾಗಿ ಮೆರಗುಗೊಳಿಸಿತು.
    1
    ಬನ್ನೂರು: ತಾಲೂಕಿನ ಬನ್ನೂರು ಹೋಬಳಿಯ ಬಿ.ಸಿ ಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆಯಾದ ಹುಚ್ಚಮ್ಮ ದೇವಿಯ ದೊಡ್ಡ ಹಬ್ಬ ಭಕ್ತಿಭಾವ, ಸಂಪ್ರದಾಯ ಮತ್ತು ಗ್ರಾಮೀಣ ಸಂಸ್ಕೃತಿಯ ಸೊಬಗಿನೊಂದಿಗೆ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆಯಿಂದಲೇ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.
ಹಬ್ಬದ ಪ್ರಮುಖ ಅಂಗವಾಗಿ ಗ್ರಾಮದ ಮಹಿಳೆಯರು 70 ಕ್ಕೂ ಹೆಚ್ಚು ಮಡಿಕೆಗಳಲ್ಲಿ ಪವಿತ್ರ ನೀರನ್ನು ತಂದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಹುಚ್ಚಮ್ಮ ದೇವಿಯ ಉತ್ಸವ ಮೂರ್ತಿಗೆ ಗ್ರಾಮ ಸುತ್ತ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು, ನಾದಸ್ವರ, ಪೂಜಾ ಘೋಷಣೆಗಳು ಮತ್ತು ಭಕ್ತರ ಜಯಘೋಷಗಳಿಂದ ಗ್ರಾಮದೆಲ್ಲೆಡೆ ಭಕ್ತಿಮಯ ವಾತಾವರಣ ನಿರ್ಮಾಣವಾಯಿತು.
ದೇವಿಗೆ ಹರಕೆ ತೀರಿಸುವ ಸಲುವಾಗಿ ಭಕ್ತರು ಸ್ವಯಂಪ್ರೇರಿತವಾಗಿ ಸುಮಾರು 500 ಕುರಿಗಳನ್ನು ಸಮರ್ಪಿಸಿದರು. ಪ್ರತಿಯೊಂದು ಕುರಿಯ ಅಂದಾಜು ಬೆಲೆ ₹12,000 ಆಗಿದ್ದು, ಒಟ್ಟು ಮೌಲ್ಯ ಸುಮಾರು ₹60 ಲಕ್ಷ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭಕ್ತರು ನೀಡಿದ ಈ ಕುರಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು.
ಹಬ್ಬದ ವಿಶೇಷ ಆಕರ್ಷಣೆಯಾಗಿ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಯಿತು. ಭಕ್ತರಿಗಾಗಿ ಸುಮಾರು 12 ಟನ್ ಮಟನ್ ಸಾಂಬಾರ್ ಹಾಗೂ ರಾಗಿ ಮುದ್ದೆ ತಯಾರಿಸಿ 1000 ಕ್ಕೂ ಹೆಚ್ಚು ಜನರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು. ಗ್ರಾಮಸ್ಥರು,  ಹಾಗೂ ಮಹಿಳಾ ಯಾರು ಸಹ ಅಡುಗೆ ತಯಾರಿ ಭಾಗವಹಿಸಿ ದ್ದರು. ಅಡುಗೆ ವ್ಯವಸ್ಥೆ ಸುಸೂತ್ರವಾಗಿ ನಡೆಯಿತು.
ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಏಕತೆ, ಸಹಕಾರ ಮತ್ತು ಭಕ್ತಿಯ ಪ್ರತಿರೂಪ ಕಾಣಿಸಿಕೊಂಡಿತು. ದೂರದ ಊರುಗಳಿಂದ ಆಗಮಿಸಿದ ಭಕ್ತರು ದೇವಿಯ ಆಶೀರ್ವಾದ ಪಡೆದು ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪರಂಪರೆ ಮತ್ತು ಜನಪದ ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿರುವ ಹುಚ್ಚಮ್ಮ ದೇವಿ ಹಬ್ಬ ಗ್ರಾಮೀಣ ಬದುಕಿನ ಸಾಂಸ್ಕೃತಿಕ ವೈಭವವನ್ನು ಮತ್ತೊಮ್ಮೆ ಸಾರಿತು.
ಗ್ರಾಮಸ್ಥರ ಒಗ್ಗಟ್ಟು ಹಾಗೂ ಭಕ್ತರ ಅಪಾರ ಭಕ್ತಿ ಈ ವರ್ಷದ ಹುಚ್ಚಮ್ಮ ದೇವಿ ದೊಡ್ಡ ಹಬ್ಬವನ್ನು ವಿಶೇಷವಾಗಿ ಮೆರಗುಗೊಳಿಸಿತು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    8 hrs ago
  • ಹೊಳಲ್ಕೆರೆ ಪಟ್ಟಣದ ಇಂಡೇನ್ ಏಜೆನ್ಸಿಯ ಗ್ರಾಹಕರು ಒಂದು ತಿಂಗಳ ಹಿಂದೆ ಗ್ಯಾಸ್ ಬುಕ್ ಮಾಡಿದರು ಸಹ ಏಜೆನ್ಸಿ ಅವರು ಗ್ರಾಮಗಳಿಗೆ ತೆರಳಿ ಸಿಲಿಂಡರ್ ಗಳನ್ನು ನೀಡುತ್ತಿಲ್ಲ, ದಿನನಿತ್ಯ ಹೊಳಲ್ಕೆರೆ ತಾಲೂಕಿನ ಗಡಿಭಾಗದ ಸಾಸಲುಹಳ್ಳ, ರಾಮೇನಹಳ್ಳಿ, ತುಪ್ಪದಹಳ್ಳಿ, ರಾಮಘಟ್ಟ,ಕೆಂಚಾಪುರ,ಬಿ,ಜಿ ಹಳ್ಳಿ,ತಾಳ್ಯ, ಅಂದನೂರು, ರಾಮಗಿರಿ, ಟಿ ,ನೂಲೆನೂರು, ಲಿಂಗದಹಳ್ಳಿ, ಹೊಳಲ್ಕೆರೆ ಪಟ್ಟಣ ಹೊರಕೆದೇವಪುರ,ಎಲ್ಲಾ ಗ್ರಾಮಗಳಿಂದ ಗ್ರಾಹಕರು ಅಡುಗೆಗೆ ಸಿಲಿಂಡರ್ ಇಲ್ಲದೇ ಅಖಿಲ್ ಇಂಡಿಯನ್ ಏಜೆನ್ಸಿ ಆಫೀಸ್ ಮುಂದೆ ಬರುತ್ತಿದ್ದಾರೆ.
    1
    ಹೊಳಲ್ಕೆರೆ ಪಟ್ಟಣದ ಇಂಡೇನ್ ಏಜೆನ್ಸಿಯ ಗ್ರಾಹಕರು ಒಂದು ತಿಂಗಳ ಹಿಂದೆ ಗ್ಯಾಸ್ ಬುಕ್ ಮಾಡಿದರು ಸಹ ಏಜೆನ್ಸಿ ಅವರು ಗ್ರಾಮಗಳಿಗೆ ತೆರಳಿ ಸಿಲಿಂಡರ್ ಗಳನ್ನು ನೀಡುತ್ತಿಲ್ಲ, ದಿನನಿತ್ಯ ಹೊಳಲ್ಕೆರೆ ತಾಲೂಕಿನ ಗಡಿಭಾಗದ ಸಾಸಲುಹಳ್ಳ, ರಾಮೇನಹಳ್ಳಿ, ತುಪ್ಪದಹಳ್ಳಿ, ರಾಮಘಟ್ಟ,ಕೆಂಚಾಪುರ,ಬಿ,ಜಿ ಹಳ್ಳಿ,ತಾಳ್ಯ, ಅಂದನೂರು, ರಾಮಗಿರಿ, ಟಿ ,ನೂಲೆನೂರು, ಲಿಂಗದಹಳ್ಳಿ, ಹೊಳಲ್ಕೆರೆ ಪಟ್ಟಣ ಹೊರಕೆದೇವಪುರ,ಎಲ್ಲಾ ಗ್ರಾಮಗಳಿಂದ ಗ್ರಾಹಕರು ಅಡುಗೆಗೆ ಸಿಲಿಂಡರ್ ಇಲ್ಲದೇ ಅಖಿಲ್ ಇಂಡಿಯನ್ ಏಜೆನ್ಸಿ ಆಫೀಸ್ ಮುಂದೆ ಬರುತ್ತಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
  • ಹನೂರು : ಪಟ್ಟಣದ ಲೋಕಉಪಯೋಗಿ ಅತಿಥಿಗೃಹದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ರೂಪ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿತ್ತು. ನಂತರ ಜಿಲ್ಲಾಧಿಕಾರಿ ಶ್ರೀ ರೂಪ ಅವರು ಮಾಧ್ಯಮದವರ ಜೊತೆ ಮಾತನಾಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ಇಂದು ಹನೂರು ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದು ಜಿಲ್ಲೆಯಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ, ಅದರ ಬಗ್ಗೆ ಯಾವ ರೀತಿ ಕ್ರಮ ತೆಗೆದುಕೊಂಡಿದ್ದೇವೆ, ಮುಂದೆ ಯಾವ ರೀತಿ ಕ್ರಮ ವಹಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು. ನಾಳೆ ಮುಖ್ಯಮಂತ್ರಿಗಳ ನಿರ್ದೇಶನದಂತೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ಕರೆದಿದ್ದು, ಹನೂರು ತಾಲೂಕಿನ 21 ಗ್ರಾಮ್ ಪಂಚಾಯತಿ ವ್ಯಾಪ್ತಿಯ 31 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದ್ದು, ಆ ಗ್ರಾಮಗಳಿಗೆ ಈಗಾಗಲೇ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಅಪಾರ ಜಿಲ್ಲಾಧಿಕಾರಿ ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಹನೂರು ತಹಸಿಲ್ದಾರ್ ಚೈತ್ರ, ಇ ಓ ಉಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
    4
    ಹನೂರು : ಪಟ್ಟಣದ ಲೋಕಉಪಯೋಗಿ ಅತಿಥಿಗೃಹದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ರೂಪ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿತ್ತು.
ನಂತರ ಜಿಲ್ಲಾಧಿಕಾರಿ ಶ್ರೀ ರೂಪ ಅವರು  ಮಾಧ್ಯಮದವರ ಜೊತೆ ಮಾತನಾಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ಇಂದು ಹನೂರು ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದು  ಜಿಲ್ಲೆಯಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ, ಅದರ ಬಗ್ಗೆ ಯಾವ ರೀತಿ ಕ್ರಮ ತೆಗೆದುಕೊಂಡಿದ್ದೇವೆ, ಮುಂದೆ ಯಾವ ರೀತಿ ಕ್ರಮ ವಹಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.
ನಾಳೆ ಮುಖ್ಯಮಂತ್ರಿಗಳ ನಿರ್ದೇಶನದಂತೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ಕರೆದಿದ್ದು, ಹನೂರು ತಾಲೂಕಿನ 21 ಗ್ರಾಮ್ ಪಂಚಾಯತಿ ವ್ಯಾಪ್ತಿಯ 31 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದ್ದು, ಆ ಗ್ರಾಮಗಳಿಗೆ ಈಗಾಗಲೇ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಪಾರ ಜಿಲ್ಲಾಧಿಕಾರಿ  ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಹನೂರು ತಹಸಿಲ್ದಾರ್ ಚೈತ್ರ, ಇ ಓ ಉಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    12 hrs ago
  • ಕೊಳ್ಳೇಗಾಲ. ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದಂದು ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕರ ಮಾಡದೇ ಅಪಮಾನ ಎಸಗಿರುವುದನ್ನು ಖಂಡಿಸಿ ಮನವಿ ಸಲ್ಲಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಹಾಗೂ ಪದಾಧಿಕಾರಿಗಳು ಜಮಾಯಿಸಿ ಶಿರೆಸ್ತದಾರ್ ಕೃಪಕಾರ್ ರವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಮಾತನಾಡಿ ಪ್ರಜಾಪ್ರಭುತ್ವದ ಪಿತಾಮಹ, ರಾಷ್ಟ್ರನಾಯಕ ಡಾ. ಅಂಬೇಡ್ಕರ್‌ರವರ 135ನೇ ಜಯಂತಿಯನ್ನು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳ ಗೌರವ ಪೂರ್ವಕವಾಗಿ ಆಚರಣೆ ಮಾಡುತ್ತೀರುವುದು ನಮ್ಮೇಲ್ಲರಿಗೂ ತಿಳಿದಿರುವು ನಿಮಗೂ ಸಹ ತಿಳಿದಿಲಿದೆ. ಆದರೆ ಕೊಳ್ಳೇಗಾಲ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಕೂಡ ಆಚರಣೆ ಮಾಡಿದೆ ಆದರೆ ಕೆಲವು ತಾಲ್ಲೂಕಿನ ವಿವಿಧ ಇಲಾಖೆಗಳು ನಿಯಮ ವಾಗಿ ದೀಪಾಲಂಕರ ಮಾಡದೆ, ಕಾಟಚಾರಕ್ಕೆ ಜಯಂತಿಯನ್ನು ಮಾಡಿರುತ್ತಾರೆ, ಹಾಗಾಗಿ ಇಂತವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ, ಉಪಾಧ್ಯಕ್ಷರು ಮೊಹಮ್ಮದ್ ಅಬ್ಜಲ್, ಯೂನುಸ್ ಪಾಷ, ಪ್ರಧಾನ ಕಾರ್ಯದರ್ಶಿ ನಾಗರಾಜು, ಚೇತನ್, ಚಂದನ್ ಇದ್ದರು.
    1
    ಕೊಳ್ಳೇಗಾಲ. ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದಂದು ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕರ ಮಾಡದೇ ಅಪಮಾನ ಎಸಗಿರುವುದನ್ನು ಖಂಡಿಸಿ ಮನವಿ ಸಲ್ಲಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಹಾಗೂ ಪದಾಧಿಕಾರಿಗಳು ಜಮಾಯಿಸಿ ಶಿರೆಸ್ತದಾರ್ ಕೃಪಕಾರ್ ರವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಮಾತನಾಡಿ ಪ್ರಜಾಪ್ರಭುತ್ವದ ಪಿತಾಮಹ, ರಾಷ್ಟ್ರನಾಯಕ ಡಾ. ಅಂಬೇಡ್ಕರ್‌ರವರ 135ನೇ ಜಯಂತಿಯನ್ನು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳ ಗೌರವ ಪೂರ್ವಕವಾಗಿ ಆಚರಣೆ ಮಾಡುತ್ತೀರುವುದು ನಮ್ಮೇಲ್ಲರಿಗೂ ತಿಳಿದಿರುವು ನಿಮಗೂ ಸಹ ತಿಳಿದಿಲಿದೆ. ಆದರೆ ಕೊಳ್ಳೇಗಾಲ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಕೂಡ ಆಚರಣೆ ಮಾಡಿದೆ ಆದರೆ ಕೆಲವು ತಾಲ್ಲೂಕಿನ ವಿವಿಧ ಇಲಾಖೆಗಳು ನಿಯಮ ವಾಗಿ ದೀಪಾಲಂಕರ ಮಾಡದೆ, ಕಾಟಚಾರಕ್ಕೆ ಜಯಂತಿಯನ್ನು ಮಾಡಿರುತ್ತಾರೆ, ಹಾಗಾಗಿ ಇಂತವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ, ಉಪಾಧ್ಯಕ್ಷರು ಮೊಹಮ್ಮದ್ ಅಬ್ಜಲ್, ಯೂನುಸ್ ಪಾಷ, ಪ್ರಧಾನ ಕಾರ್ಯದರ್ಶಿ ನಾಗರಾಜು, ಚೇತನ್, ಚಂದನ್ ಇದ್ದರು.
    user_ಎನ್. ನಟರಾಜ್
    ಎನ್. ನಟರಾಜ್
    Kollegal, Chamarajanagara•
    13 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    19 hrs ago
  • ಚಳ್ಳಕೆರೆ ನಗರದಲ್ಲಿ ಕಬ್ಬಿಣದ ಅದಿರು ಸಾಗಣೆ ಲಾಲಗಳಿಂದ ಉಂಟಾಗುತ್ತಿರುವ ಧೂಳು ಮತ್ತು ರಸ್ತೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಕರ್ನಾಟಕ ರಕ್ಷಣಾ ವೇಧಿಕೆ ಚಳ್ಳಕೆರೆ ಘಟಕದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಿಂದ ಹೆಗ್ಡೆರೆ ಪಾಗದಲ್ಲಿರುವ ಕಬ್ಬಿಣದ ಕಾರ್ಖಾನೆಗೆ ಕಬ್ಬಿಣದ ಅದಿರನ್ನು ಸಾಗಿಸುವ ನೂರಾರು ಟಿಪ್ಪರ್ ಲಾರಿಗಳು ಪ್ರತಿದಿನ ಸಂಚಣಸುತ್ತಿವೆ. ಆದರೆ ಈ ಲಾದಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅದಿರನ್ನು ಸಾಗಿಸುತ್ತಿರುವುದರಿಂದ ನಗರದ ಬೆಂಗಳೂರು ರಸ್ತೆಯಲ್ಲಿ ಭಾರೀ ಪ್ರಮಾಣದ ಕೆಂಪು ಧೂಳು ಎಳುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
    1
    ಚಳ್ಳಕೆರೆ ನಗರದಲ್ಲಿ ಕಬ್ಬಿಣದ ಅದಿರು ಸಾಗಣೆ ಲಾಲಗಳಿಂದ ಉಂಟಾಗುತ್ತಿರುವ ಧೂಳು ಮತ್ತು ರಸ್ತೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಕರ್ನಾಟಕ ರಕ್ಷಣಾ ವೇಧಿಕೆ ಚಳ್ಳಕೆರೆ ಘಟಕದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಿಂದ ಹೆಗ್ಡೆರೆ ಪಾಗದಲ್ಲಿರುವ ಕಬ್ಬಿಣದ ಕಾರ್ಖಾನೆಗೆ ಕಬ್ಬಿಣದ ಅದಿರನ್ನು ಸಾಗಿಸುವ ನೂರಾರು ಟಿಪ್ಪರ್ ಲಾರಿಗಳು ಪ್ರತಿದಿನ ಸಂಚಣಸುತ್ತಿವೆ. ಆದರೆ ಈ ಲಾದಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅದಿರನ್ನು ಸಾಗಿಸುತ್ತಿರುವುದರಿಂದ ನಗರದ ಬೆಂಗಳೂರು ರಸ್ತೆಯಲ್ಲಿ ಭಾರೀ ಪ್ರಮಾಣದ ಕೆಂಪು ಧೂಳು ಎಳುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.