ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ* * ಚಿಕ್ಕಬಳ್ಳಾಪುರ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರು ಹೇಳಿದರು. ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ ಜಿಲ್ಲಾಪಂಚಾಯಿತಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆದ "ಗ್ರಾಮಪಂಚಾಯಿತಿ ಮಟ್ಟದ ಮಹಿಳೆಯರ ಮಕ್ಕಳ ರಕ್ಷಣಾ ಕಾವಲುಸಮಿತಿ ಸದಸ್ಯರಿಗೆ ಸಾಮರ್ಥ್ಯ ಬಲವರ್ಧನೆ ಪೋಕ್ಸೋ, ಬಾಲ್ಯ ವಿವಾಹ ನಿಷೇದ ಕಾಯ್ದೆ"ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಮೇಲಿನ ಅಪರಾಧ ಕೃತ್ಯಗಳನ್ನು ತಡೆಗಟ್ಟುವುದು ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ; ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ಪಂಚಾಯತ್ ರಾಜ್ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಗ್ರಾಮ ಮಟ್ಟದಲ್ಲಿಯೇ ಅಪಾಯದಲ್ಲಿರುವ ಮಕ್ಕಳನ್ನು ಗುರುತಿಸಿ ರಕ್ಷಣೆ ನೀಡಬೇಕು ಎಂದು ಹೇಳಿದರು. ಅನಾಥ ಮಕ್ಕಳು, ಏಕ ಪೋಷಕರ ಮಕ್ಕಳು, ಒಡೆದ ಕುಟುಂಬಗಳಲ್ಲಿರುವ ಮಕ್ಕಳು ಹಾಗೂ ಇತರೆ ದುರ್ಬಲ ಪರಿಸ್ಥಿತಿಯಲ್ಲಿರುವ ಮಕ್ಕಳನ್ನು ಗ್ರಾಮ ಮಟ್ಟದಲ್ಲಿಯೇ ಗುರುತಿಸಿ, ಅವರ ಸುರಕ್ಷತೆ ಮತ್ತು ಕಲ್ಯಾಣದ ಬಗ್ಗೆ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ರಕ್ಷಣಾ ಸಮಿತಿಯ ಸದಸ್ಯರು ವಿಶೇಷ ನಿಗಾವಹಿಸಬೇಕು ಎಂದು ಸೂಚಿಸಿದರು. ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿಯಾಗಿದ್ದು, ಆರಂಭಿಕ ಹಂತದಲ್ಲಿಯೇ ಸಮಸ್ಯೆಗಳನ್ನು ಗುರುತಿಸಿದರೆ ಅನೇಕ ದುರಂತಗಳನ್ನು ತಡೆಯಬಹುದು ಎಂದು ಹೇಳಿದರು. ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೆಲವೆಡೆ ಮಕ್ಕಳ ಮೇಲೆ ಸ್ವಂತ ತಂದೆ-ತಾಯಿ, ಸಹೋದರರು ಹಾಗೂ ಆಪ್ತ ಬಂಧುಗಳಿಂದಲೇ ದೌರ್ಜನ್ಯ ನಡೆಯುತ್ತಿರುವ ಘಟನೆಗಳು ಸಮಾಜದ ನೈತಿಕ ಮೌಲ್ಯಗಳ ಕುಸಿತವನ್ನು ಪ್ರತಿಬಿಂಬಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. "ಮಕ್ಕಳು ತಮ್ಮ ಮನೆಯಲ್ಲಿಯೇ ಸುರಕ್ಷಿತರಾಗಿಲ್ಲ ಎಂಬ ಪರಿಸ್ಥಿತಿ ಕೆಲವೆಡೆ ನಿರ್ಮಾಣವಾಗಿರುವುದು ಅತ್ಯಂತ ವಿಷಾದನೀಯ. ಕುಟುಂಬದೊಳಗಿನ ಅಪರಾಧಗಳನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಕಾನೂನಿನ ಅರಿವು ಮೂಡಿಸುವುದರ ಜೊತೆಗೆ, ಅಪರಾಧಿಗಳಿಗೆ ಶಿಕ್ಷೆಯಾಗಿ ಕಾನೂನಿನ ಬಗ್ಗೆ ಭಯ ಹುಟ್ಟಿಸುವಂತಹ ವಾತಾವರಣ ನಿರ್ಮಾಣವಾಗಬೇಕು. ಗ್ರಾಮ ಮಟ್ಟದಲ್ಲಿ ಎಲ್ಲ ಇಲಾಖೆಗಳು ಹಾಗೂ ಸಮುದಾಯದ ಸಹಭಾಗಿತ್ವದೊಂದಿಗೆ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು" ಎಂದು ಅವರು ಕರೆ ನೀಡಿದರು. ತರಬೇತಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ರಕ್ಷಣಾ ಸಮಿತಿ ಸದಸ್ಯರಿಗೆ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ, ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಗ್ರಾಮ ಮಟ್ಟದಲ್ಲಿ ಮಕ್ಕಳ ರಕ್ಷಣೆಗಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಮಕ್ಕಳ ಸುರಕ್ಷತೆಗಾಗಿ ಸಮನ್ವಯದ ಕಾರ್ಯವೈಖರಿ ಮತ್ತು ಸಮುದಾಯದ ಸಕ್ರಿಯ ಪಾಲ್ಗೊಳ್ಳುವಿಕೆಯೇ ಪರಿಣಾಮಕಾರಿ ಪರಿಹಾರ ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ಒತ್ತಿಹೇಳಲಾಯಿತು. ಕಾರ್ಯಕ್ರಮದ ಅಂಗವಾಗಿ ಬಾಲ್ಯ ವಿವಾಹ ತಡೆ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಿದ್ಧಪಡಿಸಲಾದ ವಿಶೇಷ ಗೋಡೆ ಫಲಕಗಳನ್ನು ವೇದಿಕೆಯ ಗಣ್ಯರು ಉದ್ಘಾಟಿಸಿದರು. ಈ ಜಾಗೃತಿ ಫಲಕಗಳನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅಳವಡಿಸಿ, ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆಯಡಿ ಮಕ್ಕಳ ಹಕ್ಕುಗಳು, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸಂಶಯಾಸ್ಪದ ಪ್ರಕರಣಗಳನ್ನು ತಕ್ಷಣವೇ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಈ ವೇಳೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತೀಕ್ ಪಾಷಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದ ರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಮೇಶ್,ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್,ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಮುನಿನಾರಾಯಣಸ್ವಾಮಿ ಇತರರು ಇದ್ದರು.

- “World Sees India Through Bengaluru”: DK Shivakumar Highlights Tech Capital’s Growth and Culture Before PM Modi In PM Modi’s Presence, DK Shivakumar Invokes Bengaluru’s Pride, Climate, and Cultural Legacy1
- ಕೆಆರ್ ಪುರದಲ್ಲಿ ಕಾವೇರಿ ಪುತ್ಥಳಿಗೆ ಹೂವಿನ ಹಾರಹಾಕಿ ಕಾರ್ಯಕರ್ತರ ಜೊತೆ ಕರವೇ ಪ್ರವೀಣ್ ಶೆಟ್ಟಿ ಪಂಜಿನ ಮೆರವಣಿಗೆ1
- ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ ಸುವರ್ಣ ವಿರುದ್ಧ ಪ್ರತಿಭಟನೆ ಬೆಂಗಳೂರು:ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದಿದ್ದ ಶಾಸಕ ಯಶ್ ಪಾಲ್ ಆನಂದ ಸುವರ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.ಶಾಸಕರನ್ನು ಬಂಧಿಸುವಂತೆ ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆ ಮುಂದೆ ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ ಮತ್ತು ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಂದು ಒತ್ತಾಯಿಸಿದ್ದು,ಕಾನೂನು ಕ್ರಮ ತಗೆದುಕೊಳ್ಳದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.ಅಲ್ಲದೇ ದೊಡ್ಡಬಳ್ಳಾಪುರ ನಗರ ಪೋಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎನ್ನುವುದಕ್ಕೆ ಸಾಕ್ಷಿ ಕೊಡಲಿ.ಇಲ್ಲದೇ ಹೋದರಲ್ಲಿ ಮಾನ ನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.1
- 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ! | ರಾಜ್ಯದಲ್ಲಿ ಹೆಚ್ಚುತ್ತಿರುವ ಸರ್ವಿಕಲ್ ಕ್ಯಾನ್ಸರ್ ಪ್ರಕರಣಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಮಹತ್ವದ ಅಭಿಯಾನ ಆರಂಭಿಸಿದೆ. 14 ವರ್ಷದೊಳಗಿನ ಹೆಣ್ಣುಮಕ್ಕಳು ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ HPV ಲಸಿಕೆ ನೀಡಲಾಗುತ್ತಿದೆ. ಈ ಲಸಿಕೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಪರಿಣಾಮಕಾರಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಅಭಿಯಾನದ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದು, ಪೋಷಕರು ಹಾಗೂ ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಹೆಚ್ಚಿನ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. #Hashtags #HPVVaccine #CervicalCancer #HealthDepartment #UTKhader #KarnatakaNews #HealthNews #WomenHealth #FreeVaccine #KannadaNews #BreakingNews #ASNNews24Kannada #ViralNews #karnataka1
- ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಸಚಿವ ಕೆ ಹೆಚ್ ಮುನಿಯಪ್ಪ. ಅಮಿಟಿ ಯೂನಿವರ್ಸಿಟಿ ಕಾಲೇಜುನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ. ದೇವನಹಳ್ಳಿ. ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಸಚಿವ ಕೆ ಹೆಚ್ ಮುನಿಯಪ್ಪ. ಅಮಿಟಿ ಯೂನಿವರ್ಸಿಟಿ ಕಾಲೇಜುನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ. ಡ್ರಗ್ಸ್ ಬೇಡ ಬ್ರೊ ಎಂದು ಜಾಗೃತಿ ಮೂಡಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲೀಸ್ ಇಲಾಖೆ. ಯುವಕರು ಮಾದಕ ವಸ್ತುಗಳಿಂದ ದೂರವಿದ್ದು ನೋಡಿ ಕೊಳ್ಳುವುದು ಶೈಕ್ಷಣಿಕ ಸಂಸ್ಥೆ ಹಾಗೂ ಸಮಾಜದ ಜವಾಬ್ದಾರಿ. ಮಕ್ಕಳು ದೇಶದ ಆಸ್ತಿ,ನಮ್ಮ ದೇಶದ ಅಭಿವೃದ್ಧಿ ವಿದ್ಯಾರ್ಥಿಗಳ ಕೈಯಲ್ಲಿ ಇದೆ. ಡ್ರಗ್ಸ್ ಪೇಡ್ಲರ್ ಗಳು ಹೆಚ್ಚು ವಿದ್ಯಾರ್ಥಿಗಳೇನೆ ಟಾರ್ಗೆಟ್ ಮಾಡುವುದು. ಶಾಲಾ ಕಾಲೇಜು ಬಳಿ ಹೆಚ್ಚು ನಿಗಾ ವಹಿಸಿ ಎಂದು ಜಿಲ್ಲಾ ಎಸ್,ಪಿ ಗೆ ಸೂಚನೆ ನೀಡಿದ ಸಚಿವ ಕೆ ಹೆಚ್ ಮುನಿಯಪ್ಪ ಮಾದಕ ವ್ಯಾಸನ ಮುಕ್ತ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಅಮಿಟಿ ಯೂನಿವರ್ಸಿಟಿ.3
- ಮುಖ್ಯಮಂತ್ರಿಗಳು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದು1
- ಮಚ್ಚು ಹಿಡಿದು ಏರಿಯಾದಲ್ಲಿ ಪುಂಡಾಟ! ಪುಡಿ ರೌಡಿಯನ್ನು ವಶಕ್ಕೆ ಪಡೆದ ಪೊಲೀಸರು! ಮಚ್ಚು ಹಿಡಿದು ಏರಿಯಾದಲ್ಲಿ ಪುಂಡಾಟ! ಪುಡಿ ರೌಡಿಯನ್ನು ವಶಕ್ಕೆ ಪಡೆದ ಪೊಲೀಸರು!1