logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಹತ್ತಿರ ಸುಮಾರು ₹2.5 ಕೋಟಿ ವೆಚ್ಚದ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು ಚಳ್ಳಕೆರೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ. ರಘುಮೂರ್ತಿ ನೆರವೇರಿಸಿದ್ದಾರೆ. ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದ ಶಾಸಕರು ಬಳಿಕ ಮಾತನಾಡಿದರು. ಈ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಯನ್ನು ಚಳ್ಳಕೆರೆ ನಗರಸಭೆಯ ಕೆರೆ ಅಭಿವೃದ್ಧಿ ಶುಲ್ಕದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ನಗರಸಭಾ ವ್ಯಾಪ್ತಿಯ ಸೂಜಿಮಲ್ಲೇಶ್ವರ ನಗರದಿಂದ ಕಾಟಪ್ಪನಹಟ್ಟಿ ವರೆಗೆ ಈ ಕಾಮಗಾರಿ ನಡೆಯಲಿದೆ. ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ಪೌರಾಯುಕ್ತರಾದ ಡಾ. ನಾಗವೇಣಿ, ಕೆ.ಯು.ಡಬ್ಲೂ.ಎಸ್.ಡಿ.ಬಿ. ಕಾರ್ಯಪಾಲಕ ಅಭಿಯಂತರರಾದ ಮಲ್ಲೇಶ್ ನಾಯ್ಕ್, ಎಇಇ ಕುಸುಮ, ಎಇ ಒಬನಾಯಕ, ಇಂಜಿನಿಯರ್‌ಗಳಾದ ಲೋಕೇಶ್, ಚೇತನ್, ತಿಪ್ಪೇಸ್ವಾಮಿ, ವೆಂಕಟೇಶಲು ಹಾಗೂ ರುದ್ರಮುನಿ ಉಪಸ್ಥಿತರಿದ್ದರು. ಇವರೊಂದಿಗೆ ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷ ಆರ್. ಪ್ರಸನ್ನಕುಮಾರ್, ಕೆಪಿಸಿಸಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಉಪಾಧ್ಯಕ್ಷ ಸಿಟಿ ಶ್ರೀನಿವಾಸ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ನಗರಸಭೆ ಮಾಜಿ ಸದಸ್ಯರಾದ ರಾಘವೇಂದ್ರ, ರಮೇಶ್ ಗೌಡ, ಪ್ರಕಾಶ್, ಮಲ್ಲಿಕಾರ್ಜುನ, ಚಳ್ಳಕೇರಪ್ಪ ಸೇರಿದಂತೆ ಪ್ರಮುಖ ಮುಖಂಡರಾದ ಸೈಯದ್, ಅತೀಕ್ ಕುರ್ ರೆಹಮಾನ್, ಮುಜೀಬ್ ವುಲ್ಲಾ, ಗೋವಿಂದರಾಜು, ಪ್ರಹ್ಲಾದ್, ಕೃಷ್ಣಮೂರ್ತಿ, ವೀರಭದ್ರ, ಎಂಬ. ಭಾಗ್ಯಮ್ಮ, ರಾಜೇಶ್ವರಿ, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

4 hrs ago
user_Suresh Belagere
Suresh Belagere
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
4 hrs ago

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಹತ್ತಿರ ಸುಮಾರು ₹2.5 ಕೋಟಿ ವೆಚ್ಚದ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು ಚಳ್ಳಕೆರೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ. ರಘುಮೂರ್ತಿ ನೆರವೇರಿಸಿದ್ದಾರೆ. ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದ ಶಾಸಕರು ಬಳಿಕ ಮಾತನಾಡಿದರು. ಈ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಯನ್ನು ಚಳ್ಳಕೆರೆ ನಗರಸಭೆಯ ಕೆರೆ ಅಭಿವೃದ್ಧಿ ಶುಲ್ಕದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ನಗರಸಭಾ ವ್ಯಾಪ್ತಿಯ ಸೂಜಿಮಲ್ಲೇಶ್ವರ ನಗರದಿಂದ ಕಾಟಪ್ಪನಹಟ್ಟಿ ವರೆಗೆ ಈ ಕಾಮಗಾರಿ ನಡೆಯಲಿದೆ. ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ಪೌರಾಯುಕ್ತರಾದ ಡಾ. ನಾಗವೇಣಿ, ಕೆ.ಯು.ಡಬ್ಲೂ.ಎಸ್.ಡಿ.ಬಿ. ಕಾರ್ಯಪಾಲಕ ಅಭಿಯಂತರರಾದ ಮಲ್ಲೇಶ್ ನಾಯ್ಕ್, ಎಇಇ ಕುಸುಮ, ಎಇ ಒಬನಾಯಕ, ಇಂಜಿನಿಯರ್‌ಗಳಾದ ಲೋಕೇಶ್, ಚೇತನ್, ತಿಪ್ಪೇಸ್ವಾಮಿ, ವೆಂಕಟೇಶಲು ಹಾಗೂ ರುದ್ರಮುನಿ ಉಪಸ್ಥಿತರಿದ್ದರು. ಇವರೊಂದಿಗೆ ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷ ಆರ್. ಪ್ರಸನ್ನಕುಮಾರ್, ಕೆಪಿಸಿಸಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಉಪಾಧ್ಯಕ್ಷ ಸಿಟಿ ಶ್ರೀನಿವಾಸ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಶಶಿಧರ, ನಗರಸಭೆ ಮಾಜಿ ಸದಸ್ಯರಾದ ರಾಘವೇಂದ್ರ, ರಮೇಶ್ ಗೌಡ, ಪ್ರಕಾಶ್, ಮಲ್ಲಿಕಾರ್ಜುನ, ಚಳ್ಳಕೇರಪ್ಪ ಸೇರಿದಂತೆ ಪ್ರಮುಖ ಮುಖಂಡರಾದ ಸೈಯದ್, ಅತೀಕ್ ಕುರ್ ರೆಹಮಾನ್, ಮುಜೀಬ್ ವುಲ್ಲಾ, ಗೋವಿಂದರಾಜು, ಪ್ರಹ್ಲಾದ್, ಕೃಷ್ಣಮೂರ್ತಿ, ವೀರಭದ್ರ, ಎಂಬ. ಭಾಗ್ಯಮ್ಮ, ರಾಜೇಶ್ವರಿ, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

More news from ಕರ್ನಾಟಕ and nearby areas
  • ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರತ್ಯೇಕ ಗುಂಪುಗಳಾಗಿ ಒಡೆದು ಹೋಗಿರುವ ಎಲ್ಲಾ ರೈತ ಸಂಘಟನೆಗಳು ಒಗ್ಗೂಡಿ, ಒಂದೇ ಜಿಲ್ಲಾ ಸಮಿತಿಯನ್ನು ರಚಿಸಲು ತೀರ್ಮಾನಕ್ಕೆ ಬಂದಿವೆ. ಮಧ್ಯ ಕರ್ನಾಟಕ ಭಾಗದ ಚಿತ್ರದುರ್ಗದಲ್ಲಿ ರೈತ ಸಂಘಟನೆಗಳೆಲ್ಲವೂ ಒಂದಾಗಿವೆ ಎಂಬ ಬಲವಾದ ಸಂದೇಶವನ್ನು ರವಾನಿಸುವ ಅಗತ್ಯವಿದೆ ಎಂದು ರೈತ ಮುಖಂಡ ಕೆ.ಟಿ. ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ, ಜಿಲ್ಲಾ ಮಟ್ಟದ ಒಂದೇ ಸಂಘಟನೆಯನ್ನು ಅಸ್ತಿತ್ವಕ್ಕೆ ತರುವ ಕುರಿತು ಚರ್ಚಿಸಲು ಎಪಿಎಂಸಿಯ ರೈತ ಭವನದಲ್ಲಿ ವಿಶೇಷ ಸಭೆಯನ್ನು ಕರೆಯಲಾಗಿದ್ದು, ಈ ಮಹತ್ವದ ಸಭೆಗೆ ಎಲ್ಲರೂ ತಪ್ಪದೇ ಆಗಮಿಸಬೇಕು ಎಂದು ಕೆ.ಟಿ. ತಿಪ್ಪೇಸ್ವಾಮಿ ಅವರು ಕಳಕಳಿಯ ಆಗ್ರಹ ಮಾಡಿದ್ದಾರೆ.
    1
    ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರತ್ಯೇಕ ಗುಂಪುಗಳಾಗಿ ಒಡೆದು ಹೋಗಿರುವ ಎಲ್ಲಾ ರೈತ ಸಂಘಟನೆಗಳು ಒಗ್ಗೂಡಿ, ಒಂದೇ ಜಿಲ್ಲಾ ಸಮಿತಿಯನ್ನು ರಚಿಸಲು ತೀರ್ಮಾನಕ್ಕೆ ಬಂದಿವೆ. ಮಧ್ಯ ಕರ್ನಾಟಕ ಭಾಗದ ಚಿತ್ರದುರ್ಗದಲ್ಲಿ ರೈತ ಸಂಘಟನೆಗಳೆಲ್ಲವೂ ಒಂದಾಗಿವೆ ಎಂಬ ಬಲವಾದ ಸಂದೇಶವನ್ನು ರವಾನಿಸುವ ಅಗತ್ಯವಿದೆ ಎಂದು ರೈತ ಮುಖಂಡ ಕೆ.ಟಿ. ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ, ಜಿಲ್ಲಾ ಮಟ್ಟದ ಒಂದೇ ಸಂಘಟನೆಯನ್ನು ಅಸ್ತಿತ್ವಕ್ಕೆ ತರುವ ಕುರಿತು ಚರ್ಚಿಸಲು ಎಪಿಎಂಸಿಯ ರೈತ ಭವನದಲ್ಲಿ ವಿಶೇಷ ಸಭೆಯನ್ನು ಕರೆಯಲಾಗಿದ್ದು, ಈ ಮಹತ್ವದ ಸಭೆಗೆ ಎಲ್ಲರೂ ತಪ್ಪದೇ ಆಗಮಿಸಬೇಕು ಎಂದು ಕೆ.ಟಿ. ತಿಪ್ಪೇಸ್ವಾಮಿ ಅವರು ಕಳಕಳಿಯ ಆಗ್ರಹ ಮಾಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಗಾನ ಸರಸ್ವತಿ ಎಸ್. ಜಾನಕಿ ಅವರು ವಿಧಿವಶರಾಗಿದ್ದಾರೆ. ಅವರ ಈ ಅಗಲಿಕೆಯು ಸಂಗೀತ ಲೋಕಕ್ಕೆ ತುಂಬಲಾರದಷ್ಟು ದೊಡ್ಡ ನಷ್ಟವನ್ನು ಉಂಟುಮಾಡಿದೆ.
    1
    ಗಾನ ಸರಸ್ವತಿ ಎಸ್. ಜಾನಕಿ ಅವರು ವಿಧಿವಶರಾಗಿದ್ದಾರೆ. ಅವರ ಈ ಅಗಲಿಕೆಯು ಸಂಗೀತ ಲೋಕಕ್ಕೆ ತುಂಬಲಾರದಷ್ಟು ದೊಡ್ಡ ನಷ್ಟವನ್ನು ಉಂಟುಮಾಡಿದೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಜಗಳೂರು ತಾಲ್ಲೂಕಿನ ಪ್ರಮುಖ ಯೋಜನೆಯಾದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತರಳುಬಾಳು ಹುಣ್ಣಿಮೆಯ ಸಂದರ್ಭದಲ್ಲಿ ಚಾಲನೆ ನೀಡಿದ್ದರು. ನಂತರದ ಅವಧಿಯಲ್ಲಿ ಸರ್ಕಾರ ಬದಲಾದಾಗ ಅನುದಾನದ ಕೊರತೆಯಿಂದ ಈ ಯೋಜನೆ ಕುಂಟುತ್ತಾ ಸಾಗಿತ್ತು. ಆದರೂ, ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ದಿಟೂರಿನಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹಸಿರು ನಿಶಾನೆ ತೋರಿದ ಪರಿಣಾಮವಾಗಿ, ಇಂದು ತಾಲ್ಲೂಕಿನಾದ್ಯಂತ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ಈ ಯೋಜನೆಯ ಯಶಸ್ಸಿನ ಹಿಂದೆ ಹಲವು ಶಾಸಕರ ಅವಿರತ ಶ್ರಮವಿದೆ. ಬಿಜೆಪಿ ಆಡಳಿತದಲ್ಲಿ ಎಸ್.ವಿ. ರಾಮಚಂದ್ರ, ಕಾಂಗ್ರೆಸ್ ಆಡಳಿತದಲ್ಲಿ ಹೆಚ್.ಪಿ. ರಾಜೇಶ್ ಹಾಗೂ ಪ್ರಸ್ತುತ ಆಡಳಿತದಲ್ಲಿ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರು ಈ ಯೋಜನೆಗೆ ವೇಗ ನೀಡಲು ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಜಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತುಂಗಭದ್ರೆಯ ನೀರು ವಿವಿಧ ಗ್ರಾಮಗಳ ಕೆರೆಗಳನ್ನು ತಲುಪುವ ಮೂಲಕ ತಾಲ್ಲೂಕು ಜಲಸಮೃದ್ಧಿಯನ್ನು ಕಾಣುತ್ತಿದೆ.
    2
    ಜಗಳೂರು ತಾಲ್ಲೂಕಿನ ಪ್ರಮುಖ ಯೋಜನೆಯಾದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತರಳುಬಾಳು ಹುಣ್ಣಿಮೆಯ ಸಂದರ್ಭದಲ್ಲಿ ಚಾಲನೆ ನೀಡಿದ್ದರು. ನಂತರದ ಅವಧಿಯಲ್ಲಿ ಸರ್ಕಾರ ಬದಲಾದಾಗ ಅನುದಾನದ ಕೊರತೆಯಿಂದ ಈ ಯೋಜನೆ ಕುಂಟುತ್ತಾ ಸಾಗಿತ್ತು. ಆದರೂ, ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ದಿಟೂರಿನಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಹಸಿರು ನಿಶಾನೆ ತೋರಿದ ಪರಿಣಾಮವಾಗಿ, ಇಂದು ತಾಲ್ಲೂಕಿನಾದ್ಯಂತ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ.

ಈ ಯೋಜನೆಯ ಯಶಸ್ಸಿನ ಹಿಂದೆ ಹಲವು ಶಾಸಕರ ಅವಿರತ ಶ್ರಮವಿದೆ. ಬಿಜೆಪಿ ಆಡಳಿತದಲ್ಲಿ ಎಸ್.ವಿ. ರಾಮಚಂದ್ರ, ಕಾಂಗ್ರೆಸ್ ಆಡಳಿತದಲ್ಲಿ ಹೆಚ್.ಪಿ. ರಾಜೇಶ್ ಹಾಗೂ ಪ್ರಸ್ತುತ ಆಡಳಿತದಲ್ಲಿ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರು ಈ ಯೋಜನೆಗೆ ವೇಗ ನೀಡಲು ಶ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ ಜಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ತುಂಗಭದ್ರೆಯ ನೀರು ವಿವಿಧ ಗ್ರಾಮಗಳ ಕೆರೆಗಳನ್ನು ತಲುಪುವ ಮೂಲಕ ತಾಲ್ಲೂಕು ಜಲಸಮೃದ್ಧಿಯನ್ನು ಕಾಣುತ್ತಿದೆ.
    user_Basavaraja B Press Reporter APB
    Basavaraja B Press Reporter APB
    Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
    22 hrs ago
  • ರಾಜ್ಯದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಅದರ ನೀರು ಇದೇ ಮೊದಲ ಬಾರಿಗೆ ಕೂಡ್ಲಿಗಿ ತಾಲೂಕಿಗೆ ತಲುಪಿದೆ. ರಾಜವಾಳ ಜಾಕ್‌ವೆಲ್ ಮೂಲಕ ಈ ನೀರನ್ನು ತಾಲೂಕಿಗೆ ಯಶಸ್ವಿಯಾಗಿ ಹರಿಸಲಾಗಿದ್ದು, ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ತಾಲೂಕಿನ ಪ್ರಮುಖ ಕೆರೆಗಳನ್ನು ತುಂಬಿಸುವ ಕಾರ್ಯ ಆರಂಭವಾಗಲಿದ್ದು, ಇದು ರೈತರಿಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ದೊಡ್ಡ ಆಶಾಕಿರಣವಾಗಿದೆ.
    1
    ರಾಜ್ಯದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮವಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಅದರ ನೀರು ಇದೇ ಮೊದಲ ಬಾರಿಗೆ ಕೂಡ್ಲಿಗಿ ತಾಲೂಕಿಗೆ ತಲುಪಿದೆ.

ರಾಜವಾಳ ಜಾಕ್‌ವೆಲ್ ಮೂಲಕ ಈ ನೀರನ್ನು ತಾಲೂಕಿಗೆ ಯಶಸ್ವಿಯಾಗಿ ಹರಿಸಲಾಗಿದ್ದು, ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ತಾಲೂಕಿನ ಪ್ರಮುಖ ಕೆರೆಗಳನ್ನು ತುಂಬಿಸುವ ಕಾರ್ಯ ಆರಂಭವಾಗಲಿದ್ದು, ಇದು ರೈತರಿಗೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ದೊಡ್ಡ ಆಶಾಕಿರಣವಾಗಿದೆ.
    user_AsnNews24Kannada
    AsnNews24Kannada
    Local News Reporter Kudligi, Bengaluru•
    2 hrs ago
  • ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ರಾಜವಾಳ ಬಳಿ ಕೂಡ್ಲಿಗಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಜಾಕ್‌ವೆಲ್ ಬಳಿ ಶನಿವಾರ ಪೈಪ್‌ಲೈನ್ ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ಪೈಪ್‌ಲೈನ್‌ ಒಡೆದು ಸೋರಿಕೆ ಉಂಟಾಗಿರುವುದರಿಂದ ಭಾರಿ ಪ್ರಮಾಣದ ನೀರು ಕೃಷಿ ಜಮೀನುಗಳಿಗೆ ಹರಿದು ಹೋಗಿದ್ದು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಇದರೊಂದಿಗೆ ಪಕ್ಕದ ವಿದ್ಯುತ್‌ ಘಟಕಕ್ಕೂ ನೀರು ನುಗ್ಗಿದೆ. ಕೂಡ್ಲಿಗಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಮೋಟಾರ್‌ಗಳನ್ನು ಮೊನ್ನೆಯಷ್ಟೇ ಆರಂಭಿಸಲಾಗಿತ್ತು ಎಂದು ಸಿಂಗಟಾಲೂರು ಯೋಜನೆ ಉಪ ವಿಭಾಗದ ಎಇಇ ರಾಘವೇಂದ್ರ ತಿಳಿಸಿದ್ದಾರೆ. ಪೈಪ್‌ಲೈನ್ ಸೋರಿಕೆಯಿಂದ ನೀರು ಪೋಲಾಗಿದ್ದು, ಈಗಾಗಲೇ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
    1
    ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ರಾಜವಾಳ ಬಳಿ ಕೂಡ್ಲಿಗಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಜಾಕ್‌ವೆಲ್ ಬಳಿ ಶನಿವಾರ ಪೈಪ್‌ಲೈನ್ ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ಪೈಪ್‌ಲೈನ್‌ ಒಡೆದು ಸೋರಿಕೆ ಉಂಟಾಗಿರುವುದರಿಂದ ಭಾರಿ ಪ್ರಮಾಣದ ನೀರು ಕೃಷಿ ಜಮೀನುಗಳಿಗೆ ಹರಿದು ಹೋಗಿದ್ದು, ಭತ್ತ ಸೇರಿದಂತೆ ಇನ್ನಿತರ ಬೆಳೆಗಳಿಗೆ ಹಾನಿಯಾಗಿದೆ. ಇದರೊಂದಿಗೆ ಪಕ್ಕದ ವಿದ್ಯುತ್‌ ಘಟಕಕ್ಕೂ ನೀರು ನುಗ್ಗಿದೆ.

ಕೂಡ್ಲಿಗಿ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಮೋಟಾರ್‌ಗಳನ್ನು ಮೊನ್ನೆಯಷ್ಟೇ ಆರಂಭಿಸಲಾಗಿತ್ತು ಎಂದು ಸಿಂಗಟಾಲೂರು ಯೋಜನೆ ಉಪ ವಿಭಾಗದ ಎಇಇ ರಾಘವೇಂದ್ರ ತಿಳಿಸಿದ್ದಾರೆ. ಪೈಪ್‌ಲೈನ್ ಸೋರಿಕೆಯಿಂದ ನೀರು ಪೋಲಾಗಿದ್ದು, ಈಗಾಗಲೇ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    4 hrs ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಸೋಲಾರ್ ಮತ್ತು ವಿಂಡ್ ಪವರ್ ಕಂಪನಿಗಳಿಂದ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ವಂಚನೆಯಾಗುತ್ತಿದೆ ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣದಲ್ಲಿ ತಾಲೂಕು ಆಡಳಿತ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿದೆ. ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರು, ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರಿದ್ದಾರೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕು ಆಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದಲ್ಲಿ ಸ್ಥಳೀಯ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳ ಆದಾಯದ ಕುರಿತು ಮೊದಲು ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ED), ಸಿಬಿಐ (CBI), ಸಿಒಡಿ (COD), ಎಸಿಬಿ (ACB) ಮತ್ತು ಆದಾಯ ತೆರಿಗೆ ಇಲಾಖೆಯ ಉನ್ನತಾಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಮತ್ತು ಅಗತ್ಯ ಸಾಕ್ಷ್ಯಗಳೊಂದಿಗೆ ಕಾನೂನು ಹೋರಾಟ ಮಾಡುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ದಲಿತ ಮುಖಂಡ ಸಂತೋಷಕುಮಾರ, ವಕೀಲ ಮತ್ತು ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಸೋಲಾರ್ ಮತ್ತು ವಿಂಡ್ ಪವರ್ ಕಂಪನಿಗಳಿಂದ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಕೋಟಿ ಕೋಟಿ ತೆರಿಗೆ ವಂಚನೆಯಾಗುತ್ತಿದೆ ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ಗಂಭೀರ ಆರೋಪ ಮಾಡಿದ್ದಾರೆ. ಈ ಹಗರಣದಲ್ಲಿ ತಾಲೂಕು ಆಡಳಿತ ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಲಾಗಿದೆ.

ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರು, ಕ್ಷೇತ್ರದಲ್ಲಿ ಅನೇಕ ಕಂಪನಿಗಳು ಅನಧಿಕೃತವಾಗಿ ತಲೆ ಎತ್ತಿದ್ದು, ಕಾನೂನು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿವೆ ಎಂದು ದೂರಿದ್ದಾರೆ. ಈ ಬಗ್ಗೆ ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಯಾವುದೇ ಶಿಸ್ತು ಕ್ರಮ ಕೈಗೊಂಡಿಲ್ಲ. ರೈತರಿಗೆ ಅನ್ಯಾಯವಾಗುತ್ತಿದ್ದರೂ ತಾಲೂಕು ಆಡಳಿತ ಮೌನವಾಗಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಈ ಹಗರಣದಲ್ಲಿ ಸ್ಥಳೀಯ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳ ಆದಾಯದ ಕುರಿತು ಮೊದಲು ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ, ಜಾರಿ ನಿರ್ದೇಶನಾಲಯ (ED), ಸಿಬಿಐ (CBI), ಸಿಒಡಿ (COD), ಎಸಿಬಿ (ACB) ಮತ್ತು ಆದಾಯ ತೆರಿಗೆ ಇಲಾಖೆಯ ಉನ್ನತಾಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಒಂದು ವೇಳೆ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಮತ್ತು ಅಗತ್ಯ ಸಾಕ್ಷ್ಯಗಳೊಂದಿಗೆ ಕಾನೂನು ಹೋರಾಟ ಮಾಡುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ದಲಿತ ಮುಖಂಡ ಸಂತೋಷಕುಮಾರ, ವಕೀಲ ಮತ್ತು ಹೋರಾಟಗಾರ ಸೂಲದಳ್ಳಿ ಬಸವರಾಜಪ್ಪ, ರೈತ ಸಂಘದ ಯುವ ಮುಖಂಡ ಬಾಣದ ಮಾರುತಿ ಮತ್ತು ವಿವಿಧ ಗ್ರಾಮಗಳ ರೈತರು ಹಾಗೂ ಮುಖಂಡರು ಉಪಸ್ಥಿತರಿದ್ದರು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    20 hrs ago
  • ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೆರಿಗೆ ವಾರ್ಡಿನಲ್ಲಿ ತೀವ್ರ ಅವ್ಯವಸ್ಥೆ ಇರುವುದು ಬೆಳಕಿಗೆ ಬಂದಿದೆ. ಇಲ್ಲಿನ ಹೆರಿಗೆ ವಾರ್ಡಿನ ಬಾತ್ ರೂಮ್ ನಲ್ಲಿ ಬಲ್ಬ್ ಹಾಳಾಗಿದ್ದು, ಬಾಣಂತಿಯರು ಕತ್ತಲೆಯಲ್ಲಿಯೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಹೆರಿಗೆ ವಾರ್ಡಿನಲ್ಲಿ ವಾಟರ್ ಫಿಲ್ಟರ್ ಕೆಟ್ಟು ಮೂರು ದಿನ ಕಳೆದಿದ್ದರೂ ಸಹ ಅದನ್ನು ದುರಸ್ತಿ ಮಾಡಿಸದೆ ನಿರ್ಲಕ್ಷ್ಯ ವಹಿಸಲಾಗಿದೆ. ಆಸ್ಪತ್ರೆಯ ವಾರ್ಡುಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ಕೆಟ್ಟು ಹೋಗಿರುವ ವಾಟರ್ ಫಿಲ್ಟರ್ ಅನ್ನು ತಕ್ಷಣವೇ ಸರಿಪಡಿಸುವಂತೆ ಡಾ. ಮಲ್ಲಿಕಾರ್ಜುನ್ ಅವರಿಗೆ ಕರೆ ಮಾಡಿ ಗಮನಕ್ಕೆ ತರಲಾಗಿದೆ. ಈ ಭೇಟಿಯ ಸಂದರ್ಭದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸಲ್ಮಾನ್, ರೂಪಾ ನಾರಾಯಣ್, ಅನಿತಾ ಚಂದ್ರು, ಮಂಜು ಹಾಗೂ ಐಸಾಕ್ ಲಿಂಕನ್ ಉಪಸ್ಥಿತರಿದ್ದರು. ಭದ್ರಾವತಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಕೊಠಡಿಗಳು ಕತ್ತಲೆಮಯವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.
    3
    ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೆರಿಗೆ ವಾರ್ಡಿನಲ್ಲಿ ತೀವ್ರ ಅವ್ಯವಸ್ಥೆ ಇರುವುದು ಬೆಳಕಿಗೆ ಬಂದಿದೆ. ಇಲ್ಲಿನ ಹೆರಿಗೆ ವಾರ್ಡಿನ ಬಾತ್ ರೂಮ್ ನಲ್ಲಿ ಬಲ್ಬ್ ಹಾಳಾಗಿದ್ದು, ಬಾಣಂತಿಯರು ಕತ್ತಲೆಯಲ್ಲಿಯೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಹೆರಿಗೆ ವಾರ್ಡಿನಲ್ಲಿ ವಾಟರ್ ಫಿಲ್ಟರ್ ಕೆಟ್ಟು ಮೂರು ದಿನ ಕಳೆದಿದ್ದರೂ ಸಹ ಅದನ್ನು ದುರಸ್ತಿ ಮಾಡಿಸದೆ ನಿರ್ಲಕ್ಷ್ಯ ವಹಿಸಲಾಗಿದೆ.

ಆಸ್ಪತ್ರೆಯ ವಾರ್ಡುಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ಕೆಟ್ಟು ಹೋಗಿರುವ ವಾಟರ್ ಫಿಲ್ಟರ್ ಅನ್ನು ತಕ್ಷಣವೇ ಸರಿಪಡಿಸುವಂತೆ ಡಾ. ಮಲ್ಲಿಕಾರ್ಜುನ್ ಅವರಿಗೆ ಕರೆ ಮಾಡಿ ಗಮನಕ್ಕೆ ತರಲಾಗಿದೆ. ಈ ಭೇಟಿಯ ಸಂದರ್ಭದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸಲ್ಮಾನ್, ರೂಪಾ ನಾರಾಯಣ್, ಅನಿತಾ ಚಂದ್ರು, ಮಂಜು ಹಾಗೂ ಐಸಾಕ್ ಲಿಂಕನ್ ಉಪಸ್ಥಿತರಿದ್ದರು. ಭದ್ರಾವತಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಕೊಠಡಿಗಳು ಕತ್ತಲೆಮಯವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    11 hrs ago
  • ಕಾಂಗ್ರೆಸ್ ನಾಯಕರು ತೀವ್ರವಾಗಿ ಭಯಭೀತರಾಗಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರಿಗೆ ಅಲ್ಪಸಂಖ್ಯಾತರ, ಬಡವರ ಇಲ್ಲವೇ ದಲಿತ ಮತಗಳು ಕೈತಪ್ಪುತ್ತವೆ ಎಂಬ ಭಯವಿಲ್ಲ. ಬದಲಿಗೆ, ರಾಹುಲ್ ಗಾಂಧಿ ಅವರು ಎರಡು ಪೌರತ್ವ ಹೊಂದಿದ್ದು, ಆ ಗುಟ್ಟು ರಟ್ಟಾದರೆ ಅವರ ಲೋಕಸಭಾ ಸದಸ್ಯತ್ವ ಕೈತಪ್ಪಿ ಹೋಗುತ್ತದೆ ಎಂಬ ಭಯ ರಾಹುಲ್ ಗಾಂಧಿ ಅವರಿಗೆ ಉಂಟಾಗಿದೆ. ಇದೇ ಕಾರಣಕ್ಕಾಗಿಯೇ ಅವರು ದೇಶದಾದ್ಯಂತ ಇಂತಹ ಗಲಾಟೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದಲ್ಲದೆ, SIRನಿಂದ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಗೋವಿಂದ ಕಾರಜೋಳ ಅವರು, ಕಾಂಗ್ರೆಸ್ ಮುಖಂಡರು ಭಯಭೀತರಾಗಿದ್ದಾರೆ ಎಂದು ಪಕ್ಷದ ವಿರುದ್ಧ ತೀವ್ರವಾಗಿ ಹರಿಹಾಯ್ದಿದ್ದಾರೆ.
    1
    ಕಾಂಗ್ರೆಸ್ ನಾಯಕರು ತೀವ್ರವಾಗಿ ಭಯಭೀತರಾಗಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರಿಗೆ ಅಲ್ಪಸಂಖ್ಯಾತರ, ಬಡವರ ಇಲ್ಲವೇ ದಲಿತ ಮತಗಳು ಕೈತಪ್ಪುತ್ತವೆ ಎಂಬ ಭಯವಿಲ್ಲ. ಬದಲಿಗೆ, ರಾಹುಲ್ ಗಾಂಧಿ ಅವರು ಎರಡು ಪೌರತ್ವ ಹೊಂದಿದ್ದು, ಆ ಗುಟ್ಟು ರಟ್ಟಾದರೆ ಅವರ ಲೋಕಸಭಾ ಸದಸ್ಯತ್ವ ಕೈತಪ್ಪಿ ಹೋಗುತ್ತದೆ ಎಂಬ ಭಯ ರಾಹುಲ್ ಗಾಂಧಿ ಅವರಿಗೆ ಉಂಟಾಗಿದೆ. ಇದೇ ಕಾರಣಕ್ಕಾಗಿಯೇ ಅವರು ದೇಶದಾದ್ಯಂತ ಇಂತಹ ಗಲಾಟೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದಲ್ಲದೆ, SIRನಿಂದ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಗೋವಿಂದ ಕಾರಜೋಳ ಅವರು, ಕಾಂಗ್ರೆಸ್ ಮುಖಂಡರು ಭಯಭೀತರಾಗಿದ್ದಾರೆ ಎಂದು ಪಕ್ಷದ ವಿರುದ್ಧ ತೀವ್ರವಾಗಿ ಹರಿಹಾಯ್ದಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.