"ಎಪಿಡಿ ಸಂಸ್ಥೆಯ ಸಮಾಜಮುಖಿ ಕಾರ್ಯ ಶ್ಲಾಘನೀಯ"-ಡಾ.ಸಂಗಣಗೌಡ ಕಲ್ಯಾಣ ವಾರ್ತೆ -ವಡಗೇರಾ ಗುರುವಾರದಂದು ಎಪಿಡಿ ಸಂಸ್ಥೆಯ ವತಿಯಿಂದ ವಡಗೇರಾ ಎಪಿಡಿ ಸಂಸ್ಥೆಯ ಕಚೇರಿಯಲ್ಲಿ ವಿಕಲಚೇತನರಿಗೆ ಅಗತ್ಯವಾದ ಸಾಧನ–ಸಲಕರಣೆಗಳನ್ನು ವಿತರಿಸಲಾಯಿತು.ಸಲಕರಣೆ ವಿತರಿಸಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಸಂಗಣ್ಣಗೌಡ ಮಾತನಾಡಿ, ಎಪಿಡಿ ಸಂಸ್ಥೆಯು ಹಲವು ಸಮಾಜಮುಖಿ ಕೆಲಸಗಳು ಹಮ್ಮಿಕೊಳ್ಳುತ್ತಿರುವ ಕಾರ್ಯ ಶ್ಲಾಘನೀಯ ಎಂದರು ಫಲಾನುಭವಿಗಳು ಈ ಸಾಧನ–ಸಲಕರಣೆಗಳ ಸದ್ಬಳಕೆ ಮಾಡಿಕೊಳ್ಳಬೇಕು.ಪೋಷಕರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ,ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದು ಸಲಹೆ ನೀಡಿದರು. ಐ.ಸಿ. ಟಿ.ಸಿ.ಕೌನ್ಸಿಲರ್ ವೆಂಕಟೇಶ್ ಮಾತನಾಡಿ,ಪ್ರತಿಯೊಬ್ಬರೂ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.ಕ್ಷಯರೋಗ (ಟಿ.ಬಿ),(ಎಚ್ಐವಿ) ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ವಹಿಸಿ,ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದರು.ಎಎಟಿ ಸಸ್ಮಿತಾ ಅವರು ವಿತರಿಸಲಾದ ಸಾಧನ–ಸಲಕರಣೆಗಳನ್ನು ಸರಿಯಾದ ರೀತಿಯಲ್ಲಿ ಬಳಸುವ ವಿಧಾನಗಳ ಕುರಿತು ಫಲಾನುಭವಿಗಳಿಗೆ ಮಾಹಿತಿ ನೀಡಿದರು.ಈ ಪಿಡಿ ಸಂಸ್ಥೆಯ ತಾಲೂಕು ಸಂಯೋಜಕ ರಮೇಶ್ ಕಟ್ಟಿಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಅಬ್ದುಲ್ ಚಿಗಾನೂರ,ಶರಣು ಪಡಶೆಟ್ಟಿ,ಡಾ.ಜಗದೀಶ್ವರಿ,ಶ್ರೀಚರಣ ತೇಜ,ಶರಣಮ್ಮ,ಎಂ.ಪಿ.ಅಂಜನಯ್ಯ, ಬಸವರಾಜ್,ನಾಗಪ್ಪ, ಉಜ್ಜನ ಗೌಡ ,ಚಂದ್ರಕಲಾ, ಮೌಲಾಲಿ,ವಿಜಯಲಕ್ಷ್ಮಿ, ತಸ್ಲೀಮ್,ಶಿವರಾಜ್,ಹರೀಶ್ವರ,ಅನ್ನಪೂರ್ಣ,ಎಎಟಿ,ಸತೀಶ್ ಹಾಗೂ ಕೆ.ಸುರೇಶ್ ಸೇರಿದಂತೆ ಎಪಿಡಿ ಸಂಸ್ಥೆಯ ಸಿಬ್ಬಂದಿ,ಫಲಾನುಭವಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
"ಎಪಿಡಿ ಸಂಸ್ಥೆಯ ಸಮಾಜಮುಖಿ ಕಾರ್ಯ ಶ್ಲಾಘನೀಯ"-ಡಾ.ಸಂಗಣಗೌಡ ಕಲ್ಯಾಣ ವಾರ್ತೆ -ವಡಗೇರಾ ಗುರುವಾರದಂದು ಎಪಿಡಿ ಸಂಸ್ಥೆಯ ವತಿಯಿಂದ ವಡಗೇರಾ ಎಪಿಡಿ ಸಂಸ್ಥೆಯ ಕಚೇರಿಯಲ್ಲಿ ವಿಕಲಚೇತನರಿಗೆ ಅಗತ್ಯವಾದ ಸಾಧನ–ಸಲಕರಣೆಗಳನ್ನು ವಿತರಿಸಲಾಯಿತು.ಸಲಕರಣೆ ವಿತರಿಸಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಸಂಗಣ್ಣಗೌಡ ಮಾತನಾಡಿ, ಎಪಿಡಿ ಸಂಸ್ಥೆಯು ಹಲವು ಸಮಾಜಮುಖಿ ಕೆಲಸಗಳು ಹಮ್ಮಿಕೊಳ್ಳುತ್ತಿರುವ ಕಾರ್ಯ ಶ್ಲಾಘನೀಯ ಎಂದರು ಫಲಾನುಭವಿಗಳು ಈ ಸಾಧನ–ಸಲಕರಣೆಗಳ ಸದ್ಬಳಕೆ ಮಾಡಿಕೊಳ್ಳಬೇಕು.ಪೋಷಕರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ,ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದು ಸಲಹೆ ನೀಡಿದರು. ಐ.ಸಿ. ಟಿ.ಸಿ.ಕೌನ್ಸಿಲರ್ ವೆಂಕಟೇಶ್ ಮಾತನಾಡಿ,ಪ್ರತಿಯೊಬ್ಬರೂ ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.ಕ್ಷಯರೋಗ (ಟಿ.ಬಿ),(ಎಚ್ಐವಿ) ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ವಹಿಸಿ,ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದರು.ಎಎಟಿ ಸಸ್ಮಿತಾ ಅವರು ವಿತರಿಸಲಾದ ಸಾಧನ–ಸಲಕರಣೆಗಳನ್ನು ಸರಿಯಾದ ರೀತಿಯಲ್ಲಿ ಬಳಸುವ ವಿಧಾನಗಳ ಕುರಿತು ಫಲಾನುಭವಿಗಳಿಗೆ ಮಾಹಿತಿ ನೀಡಿದರು.ಈ ಪಿಡಿ ಸಂಸ್ಥೆಯ ತಾಲೂಕು ಸಂಯೋಜಕ ರಮೇಶ್ ಕಟ್ಟಿಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಅಬ್ದುಲ್ ಚಿಗಾನೂರ,ಶರಣು ಪಡಶೆಟ್ಟಿ,ಡಾ.ಜಗದೀಶ್ವರಿ,ಶ್ರೀಚರಣ ತೇಜ,ಶರಣಮ್ಮ,ಎಂ.ಪಿ.ಅಂಜನಯ್ಯ, ಬಸವರಾಜ್,ನಾಗಪ್ಪ, ಉಜ್ಜನ ಗೌಡ ,ಚಂದ್ರಕಲಾ, ಮೌಲಾಲಿ,ವಿಜಯಲಕ್ಷ್ಮಿ, ತಸ್ಲೀಮ್,ಶಿವರಾಜ್,ಹರೀಶ್ವರ,ಅನ್ನಪೂರ್ಣ,ಎಎಟಿ,ಸತೀಶ್ ಹಾಗೂ ಕೆ.ಸುರೇಶ್ ಸೇರಿದಂತೆ ಎಪಿಡಿ ಸಂಸ್ಥೆಯ ಸಿಬ್ಬಂದಿ,ಫಲಾನುಭವಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
- ಬಂಗಿಕುಂಟಾ ರಸ್ತೆಯಲ್ಲಿ ಪೂಜಾ ಸಾಮಗ್ರಿ ಅಂಗಡಿಗೆ ಬೆಂಕಿ., ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ.. ರಾಯಚೂರು ನಗರದ ಬಂಗಿಕುಂಟಾ ಪ್ರದೇಶದಲ್ಲಿ ಪೂಜಾ ಸಾಮಗ್ರಿಗಳ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ. ಬಂಗಿಕುಂಟಾದಲ್ಲಿ ತಾಯಣ್ಣ ಎಂಬುವವರಿಗೆ ಸೇರಿದ ಟಿನ್ ಶಡ್‌ನಲ್ಲಿದ್ದ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಅಂಗಡಿಯಲ್ಲಿದ್ದ ಪೂಜಾ ಸಾಮಗ್ರಿಗಳು ಸೇರಿದಂತೆ ಬಹುತೇಕ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆಯಿಂದಾಗಿ ಅಂಗಡಿ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ತಾಯಣ್ಣ ಅವರು ಹೆಚ್ಚಿನ ಪ್ರಮಾಣದಲ್ಲಿ ಪೂಜಾ ಸಾಮಗ್ರಿಗಳನ್ನು ಖರೀದಿಸಿ ಅಂಗಡಿಯಲ್ಲಿ ಸ್ಟಾಕ್ ಇಟ್ಟುಕೊಂಡಿದ್ದರು. ಆದರೆ, ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಬ್ಬದ ವ್ಯಾಪಾರಕ್ಕಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳೆಲ್ಲವೂ ಬೆಂಕಿಗಾಹುತಿಯಾಗಿವೆ. ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಬೆಂಕಿ ಮತ್ತಷ್ಟು ವ್ಯಾಪಿಸದಂತೆ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಿದರು. ಘಟನೆ ಕುರಿತು ಸದರ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣದ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಅಗ್ನಿ ಅವಘಡದ ಕಾರಣ ಹಾಗೂ ನಷ್ಟದ ಪ್ರಮಾಣದ ಕುರಿತು ಪರಿಶೀಲನೆ ಮುಂದುವರಿದಿದೆ.2
- ಸಿಸಿ ರಸ್ತೆ ಕಾಮಾಗಾರಿ ವೇಳೆ ಐತಿಹಾಸಿಕ ಪುರಾತನ ಮೂರ್ತಿ ಪತ್ತೆ* ಸಿಸಿ ರಸ್ತೆ ಕಾಮಗಾರಿ ಮಾಡುವೆ ವೇಳೆಯಲ್ಲಿ ಐರಿಹಾಸಿಕ ಪುರಾತನದ ಮೂರ್ತಿ ಪತ್ತೆಯಾಗಿದ್ದು ಶ್ರೀ ಸೂರ್ಯನಾರಾಯಣ ದೇವರ ಶಿಲಾ ಮೂರ್ತಿ ಎಂದು ತಿಳಿದು ಬಂದಿದೆ.ರುಕ್ಮಿಣಿ - ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹೊಲಕುಂದಾ ಗ್ರಾಮದ ವಿಠ್ಠಲ ದೇವಸ್ಥಾನದ ಆವರಣದಲ್ಲಿನ ಸಿಸಿ ರಸ್ತೆ ಕಾಮಾಗಾರಿ ವೇಳೆ ಪತ್ತೆಯಾಗಿದೆ.2.1 ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ , ಎರಡೂ ಕೈಗಳಲ್ಲಿ ಕಮಲ ಹೂವುಗಳು ಹೊಂದಿರುವ ಮೂರ್ತಿಯಾಗಿದ್ದು, ಸಂಧ್ಯಾದೇವಿ, ಛಾಯಾದೇವಿ ಹಾಗೂ ಸಪ್ತ ಅಶ್ವಗಳ ಕೆತ್ತನೆ ಒಳಗೊಂಡಿದೆ. ಸಂಶೋಧಕರ ಪ್ರಾಥಮಿಕ ಅಭಿಪ್ರಾಯದಂತೆ ರಾಷ್ಟ್ರಕೂಟರ ಕಾಲದ ಶಿಲ್ಪ ಎನ್ನುವ ಸಾಧ್ಯತೆ ಇದೆ1
- ಜನಪ್ರತಿನಿಧಿಗಳ ನಿರ್ದೇಶನ ಜಾರಿಗೆ ಒತ್ತಾಯ: ಮಾನ್ವಿ ನಾಗರಿಕ ವೇದಿಕೆ ಒಂದು ವಾರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ಮಾನ್ವಿ ಪಟ್ಟಣದಲ್ಲಿ ವತಿಯಿಂದ ನಡೆಯುತ್ತಿರುವ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಬಂಧಿತ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಮಾನ್ವಿ ನಾಗರಿಕ ಹಿತ ರಕ್ಷಣಾ ವೇದಿಕೆ ಆರೋಪಿಸಿದೆ. ಸಭೆಯಲ್ಲಿ ನಿರ್ದೇಶನ, ಆದರೆ ಜಾರಿಯಿಲ್ಲ : ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯ ರಾದ ಎನ್. ಎಸ್. ಬೋಸರಾಜು ಮತ್ತು ಮಾನ್ಸಿ ಶಾಸಕರಾದ ಶ್ರೀ ಜಿ. ಹಂಪಯ್ಯ ನಾಯಕ ಸಾಹುಕಾರ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ 8 ಪ್ರಮುಖ ಬೇಡಿಕೆಗಳ ಕುರಿತು ಚರ್ಚಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾ ಗಿತ್ತು. ಆದರೆ ಆ ನಿರ್ದೇಶನಗಳು ಇದುವರೆಗೆ ಜಾರಿಯಾಗಿಲ್ಲ ಎಂದು ವೇದಿಕೆ ತಿಳಿಸಿದೆ. ಆಟೋ ನಗರದಿಂದ ಹೌಸಿಂಗ್ ಬೋರ್ಡ್ ವರೆಗೆ 2002ರಲ್ಲಿ ಭೂಸ್ವಾ ಧೀನ ಮಾಡಿಕೊಂಡ ಜಾಗದಲ್ಲಿ ತಕ್ಷಣ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಸರ್ವೇ ನಡೆಸಬೇಕು. ರಸ್ತೆ ಮಧ್ಯದಲ್ಲಿರುವ ಅಪಾಯಕಾರಿ ಹಾಗೂ ವಿಷಕಾರಿ ಮರಗಳನ್ನು ತೆರವುಗೊಳಿಸಬೇಕು. ರಸ್ತೆ ಅಗಲೀಕರಣ ಕಡಿಮೆ ಮಾಡಿರುವ ಸ್ಥಳಗಳನ್ನು ಮರುಪರಿಶೀಲಿಸಿ ಸರಿಪಡಿಸಬೇಕು. ಬಸವೇಶ್ವರ, ಅಂಬೇಡ್ಕರ್, ಗಾಂಧಿ ಜಿ, ವಾಲ್ಮೀಕಿ, ಮೇಜರ್ ಶಾನವಾ ಜ್ ಖಾನ್ ವೃತ್ತಗಳ ಅಗಲೀಕರಣ ಮತ್ತು ಸುಂದರೀಕರಣ ಕಾಮಗಾರಿ ಆರಂಭಿಸಬೇಕು. ವೈಜ್ಞಾನಿಕ ಡೈನೇ ಜ್ ವ್ಯವಸ್ಥೆ ನಿರ್ಮಿಸಿ ಮಳೆ ನೀರು ಸರಾಗವಾಗಿ ಮಾಡಬೇಕು. ಹರಿಯುವಂತೆ ಸಿಂಧನೂರು ಮಾದರಿಯಲ್ಲಿ ಭೂಗತ ವಿದ್ಯುತ್ ಕೇಬಲ್ ಅಳವಡಿಸಿ, ತೂಗು ತಂತಿ ತೆರವುಗೊಳಿಸಬೇಕು. ಕಾಮಗಾರಿಯ ಪ್ರತಿ ಹಂತದಲ್ಲೂ ನಾಗರಿಕ ವೇದಿಕೆಯೊಂದಿಗೆ ಸಮನ್ವಯ ಸಾಧಿಸಬೇಕು. 8. ವರದಿ: ನೀಡಿದ ನಿರ್ದೇಶನಗಳ ಅನುಷ್ಠಾನದ ಕುರಿತು ಲಿಖಿತ ಮಾಹಿತಿ ನೀಡಬೇಕು. ಸಭೆಯಲ್ಲಿ ಭರವಸೆಗಳು ಹಾಗೂ ನಿರ್ದೇ ಶನಗಳನ್ನು ನಿಗದಿತ ಕಾಲಮಿತಿಯಲ್ಲಿ ನೀಡಿದ ಅನುಷ್ಠಾನಗೊಳಿಸದಿದ್ದರೆ, ಒಂದು ವಾರದ ನಂತರ ಮಾನ್ವಿ ಜನತೆಯೊಂ ದಿಗೆ ಸೇರಿ ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಉಗ್ರ ಹೋರಾಟ ಹಮ್ಮಿ ಕೊಳ್ಳಲಾಗುವುದು ಎಂದು ಮಾನ್ವಿನಾಗರಿಕ ಹಿತ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ. ಈ ಕುರಿತು ತಹಸೀಲ್ದಾರರಿಗೆ ಲಿಖಿತ ಮನವಿಯನ್ನು ಸಲ್ಲಿಸಲಾಗಿದೆ. ಈ ವಿಳಂಬದಿಂದ ಉಂಟಾಗುವ ಎಲ್ಲಾ ಬೆಳವಣಿಗೆಗಳಿಗೆ ಆಡಳಿತ ವರ್ಗ ಹಾಗೂ ಸಂಬಂಧಿಸಿದ ಅಧಿಕಾರಿಗಳೇ ಹೊಣೆಗಾರರಾ ಗಿರುತ್ತಾರೆ ಎಂದು ವೇದಿಕೆ ತಿಳಿಸಿದೆ.3
- ಅಗಸ್ಟ್ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ. ಅಗಸ್ಟ್ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ ಅಫಜಲಪುರ, ಜು. 29: ಯುವ ವಿಕಾಸ ವೇದಿಕೆ ಅಫಜಲಪುರದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಲಾಗಿದೆ. ತಾಲೂಕಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಅಫಜಲಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಂ. ವೈ. ಪಾಟೀಲ ವಹಿಸಲಿದ್ದು, ಜೆ. ಎಂ. ಕೊರಬು ಉದ್ಘಾಟಿಸಲಿದ್ದಾರೆ. ಪೂಜ್ಯ ಡಾ. ಚನ್ನಮಲ್ಲ ಶಿವಾಚಾರ್ಯರು ಹಾಗೂ ಗೋಳಸಾರ ಕ್ಷೇತ್ರದ ಅಭಿನವ ಶ್ರೀ ಪುಂಡಲಿಂಗ ಶಿವಯೋಗಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ರಾಜ್ಯ ಮಟ್ಟದ ಈ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ₹51,000, ದ್ವಿತೀಯ ಸ್ಥಾನ ಪಡೆದವರಿಗೆ ₹25,000 ಹಾಗೂ ತೃತೀಯ ಸ್ಥಾನ ಪಡೆದವರಿಗೆ ₹15,000 ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಮುಖಂಡರು, ಗಣ್ಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ವಿಶೇಷವಾಗಿ ಧಾರವಾಡದ ಸ್ಪರ್ಧಾ ಜೀನಿಯಸ್ ಅಕಾಡೆಮಿ ಸಂಸ್ತಾಪಕರಾದ ಶ್ರೀ ಸಿದ್ದಣ್ಣ ದಳವಾಯಿ, ಹಾಗೂ ಇನ್ಸೈಟ್ ಐಎಎಸ್ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ಜೀ ಬಿ ವಿನಯಕುಮಾರ ಭಾಗವಹಿಸಲಿದ್ದು ಹಾಗಾಗಿ ವಿದ್ಯಾರ್ಥಿಗಳು ಈ ಅಪರೂಪದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಜಕರು ಕೋರಿದ್ದಾರೆ.1
- ಹೂ ಮಳೆ ಸುರಿದು ಪೊಲೀಸ್ ಅಧಿಕಾರಿಗೆ ಅದ್ದೂರಿಯಾಗಿ ಬೀಳ್ಕೋಡುಗೆ ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು. ಅಫಜಲಪುರ ತಾಲೂಕಿನ ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ.ಕಮಲು ಅವರಿಗೆ ಠಾಣಾ ಸಿಬ್ಬಂದಿಗಳು ಹೂ ಮಳೆ ಸುರಿದು ಅಭಿನಂದನೆ ಸಲ್ಲಿಸಿ ಅದ್ದೂರಿಯಾಗಿ ಬೀಲಕ್ಕೋಡುಗೆ ಮಾಡಿದರು.1
- ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ1
- ರಾಯಚೂರಿನಲ್ಲಿ ಆ.4 ರಂದು ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ: ಭಾವಚಿತ್ರ ಮೆರವಣಿಗೆ ರಾಯಚೂರು: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಾಯಚೂರು ಜಿಲ್ಲಾ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಆಗಸ್ಟ್ 4 ರಂದು ಆಚರಿಸಲಾಗುತ್ತದೆ ಎಂದು ಜಿಲ್ಲಾ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಹರವಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಬಸವ ವೃತ್ತದಿಂದ ಜಂಬಲದಿನ್ನಿ ರಂಗಮಂದಿರದವರೆಗೆ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ. ಬಳಿಕ ಬೆಳಿಗ್ಗೆ 11 ಗಂಟೆಗೆ ಜಂಬಲದಿನ್ನಿ ರಂಗಮಂದಿರದಲ್ಲಿ ಜಯಂತಿ ಅಂಗವಾಗಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಮಠಾಧೀಶರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸಮಾಜದ ಬಂಧುಗಳು, ಹಿತೈಷಿಗಳು, ಸಾರ್ವಜನಿಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು. ಸುದ್ದಿಗೊಷ್ಟಿಯಲ್ಲಿ ಗದೆಪ್ಪ ಎಂ, ಬಸವರಾಜ್, ಬಸವಂತ ರಾಯ, ಅಮರಪ್ಪ, ದೇವೇಂದ್ರಪ್ಪ ಸೇರಿದಂತೆ ಇತರರು ಇದ್ದರು.1
- ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ- ಡಿಜಿಪಿ ಅಲೋಕ್ ಕಲಬುರಗಿ ಸೆಂಟ್ರಲ್ ಜೈಲಿಗೆ ಡಿಜಿಪಿ ಅಲೋಕಕುಮಾರ ಭೇಟಿನೀಡಿ ಬಳಿಕ ಡಿಜಿಪಿ ಅಲೋಕಕುಮಾರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು.ಜೈಲಿನಿಂದ ಮೂವರು ಕೈದಿಗಳ ಪರಾರಿ ಘಟನೆ ಗಂಭೀರವಾಗಿ ಪರಿಗಣಿಸಲಾಗಿದೆ, ಈಗಾಗಲೇ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ, ಮಸ್ತಾನ್ ಬಂಧನಕ್ಕೆ ಹುಡುಕಾಟ ನಡೆಸ್ತಿದಾರೆ,ಘಟನೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ,ಜೈಲಿನ ಭದ್ರತೆ ಹೆಚ್ಚಿಸಲು ಅಧಿಕಾರಿಗಳ ಜೊತೆ ಚರ್ಚಿಸಿಲಾಗಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ,ಜೈಲಿನ ತಂತಿ ಬೇಲಿ ಸುಸ್ಥಿತಿಯಲ್ಲಿಡಲು ಸೂಚಿಸಲಾಗಿದೆ,ಜೈಲು ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದೆ. ಶೀಘ್ರದಲ್ಲೇ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲಾಗುವುದು, ಇನ್ನು ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದು ಹೇಳಿದರು1
- ಮಹಾನ್ ಗುರು ಎಚ್ ಟಿ ಕುಲಕರ್ಣಿ ಅವರಿಗೆ ಅನಂತ ಕೋಟಿ ನಮನಗಳು ಎಚ್ ಟಿ ಕುಲಕರ್ಣಿ ಗುರುಗಳ ಅಂತಿಮ ಸಂಸ್ಕಾರ1