ಖಾಕಿ ಸಮವಸ್ತ್ರ ಧರಿಸಿ ಸಮಾಜದ ರಕ್ಷಣೆಗೆ ನಿಂತ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳ ನಡುವೆ ಪ್ರೀತಿ ಚಿಗುರಿದ್ದು, ಇದೀಗ ಅವರಿಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸಮಾಜದ ಸಾಂಪ್ರದಾಯಿಕ ಕಟ್ಟುಪಾಡುಗಳನ್ನು ಮೀರಿ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿ ಮದುವೆಯಾಗಲು ನಿರ್ಧರಿಸಿರುವ ಈ ಅಪರೂಪದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪುಣೆಯ ಪಿಂಪ್ರಿ-ಚಿಂಚ್‌ವಾಡ್ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. 2018ರಲ್ಲಿ ಪೊಲೀಸ್ ಇಲಾಖೆಗೆ ಕಾನ್‌ಸ್ಟೆಬಲ್‌ಗಳಾಗಿ ಸೇರಿದ ಈ ಇಬ್ಬರು ಯುವತಿಯರ ನಡುವೆ ತರಬೇತಿಯ ಸಮಯದಲ್ಲಿ ಪರಿಚಯವಾಗಿ, ಕಾಲಕ್ರಮೇಣ ಆಪ್ತ ಸ್ನೇಹವಾಗಿ ಬದಲಾಯಿತು. ತರಬೇತಿ ಮುಗಿದ ನಂತರ ಇಬ್ಬರೂ ಒಟ್ಟಿಗೆ ಒಂದೇ ಮನೆಯಲ್ಲಿ ವಾಸಿಸಲು ಆರಂಭಿಸಿದರು. ಕಳೆದ ಮೂರು ವರ್ಷಗಳಿಂದ ಒಂದೇ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರಣ ಇವರ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಿ, ಪರಸ್ಪರ ಪ್ರೀತಿಸಲು ಆರಂಭಿಸಿದರು. ಇದೀಗ ತಮ್ಮ ಪ್ರೀತಿಯನ್ನು ದಾಂಪತ್ಯ ಜೀವನಕ್ಕೆ ಕೊಂಡೊಯ್ಯಲು ನಿರ್ಧರಿಸಿರುವ ಇವರು, ಪುಣೆಯ ಆಳಂದಿಯಲ್ಲಿ ವೈದಿಕ ವಿಧಿವಿಧಾನಗಳೊಂದಿಗೆ ವಿವಾಹವಾಗಲು ಮುಹೂರ್ತವನ್ನೂ ನಿಗದಿಪಡಿಸಿಕೊಂಡಿದ್ದಾರೆ. ಕುಟುಂಬಸ್ಥರ ವಿರೋಧ: ಕೈಚೆಲ್ಲಿದ ಪೊಲೀಸ್ ಅಧಿಕಾರಿಗಳು... ಈ ವಿವಾಹ ನಿರ್ಧಾರಕ್ಕೆ ಕುಟುಂಬದವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಓರ್ವ ಕಾನ್‌ಸ್ಟೆಬಲ್‌ನ ಕುಟುಂಬಸ್ಥರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಮದುವೆಯನ್ನು ತಡೆಯುವಂತೆ ಮನವಿ ಮಾಡಿದ್ದಾರೆ. ಆದರೆ, "ಇಬ್ಬರೂ ವಯಸ್ಕರಾಗಿದ್ದು, ತಮ್ಮ ವೈಯಕ್ತಿಕ ಜೀವನದ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕು ಅವರಿಗಿದೆ. ಕಾನೂನುಬದ್ಧವಾಗಿ ಇದರಲ್ಲಿ ಹಸ್ತಕ್ಷೇಪ ಮಾಡಲು ನಮಗೆ ಅಧಿಕಾರವಿಲ್ಲ" ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕಾನೂನು ಮಾನ್ಯತೆಗಾಗಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ... ಭಾರತದಲ್ಲಿ ಸಲಿಂಗ ವಿವಾಹಕ್ಕೆ ಇನ್ನೂ ಕಾನೂನುಬದ್ಧ ಮಾನ್ಯತೆ ಸಿಕ್ಕಿಲ್ಲ. ಈ ಕಾನೂನು ತೊಡಕುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಇಬ್ಬರಲ್ಲಿ ಒಬ್ಬರು ಪ್ರಸ್ತುತ ಲಿಂಗ ಬದಲಾವಣೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ವೈದ್ಯಕೀಯ ಪ್ರಕ್ರಿಯೆ ಸಂಪೂರ್ಣಗೊಂಡ ಬಳಿಕ, ದಂಪತಿಯಾಗಿ ತಮ್ಮ ಮದುವೆಯನ್ನು ಅಧಿಕೃತವಾಗಿ ನೋಂದಾಯಿಸಿಕೊಳ್ಳಲು (ರಿಜಿಸ್ಟರ್) ಅವರು ಯೋಜಿಸಿದ್ದಾರೆ. ಖಾಕಿ ವೃತ್ತಿಯಲ್ಲಿದ್ದುಕೊಂಡು ಸಮಾಜದ ಚೌಕಟ್ಟುಗಳನ್ನು ಮೀರಿ ನಿಂತಿರುವ ಈ ಇಬ್ಬರು ಮಹಿಳಾ ಸಿಬ್ಬಂದಿಯ ನಿರ್ಧಾರ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

- "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*1
- ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿದಿದೆ: ಜೆ.ಶರಣಪ್ಪ ಗೌಡ. ಸಿರವಾರ: ಟಿಎಲ್ಬಿಸಿ ಎಡದಂಡೆ ನಾಲೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ಮಂಗಳವಾರ ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ವಾಡಿಕೆಗಿಂತ ಮಳೆಯಾಗದ ಹಿನ್ನೆಲೆಯಲ್ಲಿ ಬರಗಾಲ ಉಂಟಾಗಿದೆ. ಬೆಳೆಗಳನ್ನು ಉಳಿಸಿಕೊಳ್ಳಲು ರೈತರ ಹರಸಾಹಸ ಪಡುವಂತಾಗಿದೆ ಎಂದರು. ರಾಯಚೂರು, ಮಾನ್ವಿ ಮತ್ತು ಸಿರವಾರ ತಾಲೂಕಿನ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹೋರಾಟದಲ್ಲಿ ಮಾಜಿ ಶಾಸಕರುಗಳಾದ ರಾಜಾ ವೆಂಕಟಪ್ಪ ನಾಯಕ, ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ರೈತ ಸಂಘದ ಮುಖಂಡ ಚಾಮರಸ ಮಾಲೀ ಪಾಟೀಲ್, ಹೋರಾಟಗಾರರಾದ ಶಂಕರಗೌಡ ಹರವಿ, ಎನ್. ಉದಯಕುಮಾರ್ ಸಾಹುಕಾರ, ಜೆ.ದೇವರಾಜ ಗೌಡ, ಅಮರೇಶ ಚಾಗಭಾವಿ, ನಾಗರಾಜ ಗೌಡ, ಸವಾರೆಪ್ಪ, ಬಡ್ಡ ಹನುಮಂತ, ರಾಜಪ್ಪ ಹೊನ್ನಟಗಿ, ಮಲ್ಲಪ್ಪ ದೊಡ್ಮನೆ, ದಾನಪ್ಪ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ರೈತರು ಪಾಲ್ಗೊಂಡಿದ್ದರು.2
- ಸಿಂಧನೂರು ಕ್ಷೇತ್ರದಲ್ಲಿ 43,115 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಸಿಂಧನೂರು: ರಾಷ್ಟ್ರೀಯ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಬಳಿಕ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 43,115 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ದೇಸಾಯಿ ತಿಳಿಸಿದ್ದಾರೆ. ಮಂಗಳವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರದಲ್ಲಿ 2,40,941 ಮತದಾರರಿದ್ದರು. ಪರಿಷ್ಕರಣೆ ವೇಳೆ ಮೃತಪಟ್ಟ 6,778, ಶಾಶ್ವತವಾಗಿ ಸ್ಥಳಾಂತರಗೊಂಡ 31,954, ಗೈರುಹಾಜರಿದ್ದ 1,555 ಹಾಗೂ ಡಬಲ್ ಮತದಾರರಾಗಿದ್ದ 2,805 ಮಂದಿಯ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇತರ ಕಾರಣಗಳಿಂದ 23 ಮತದಾರರ ಹೆಸರನ್ನೂ ಡಿಲೀಟ್ ಮಾಡಲಾಗಿದೆ. 2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಒಟ್ಟು 17.90ರಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ ನಗರ ವ್ಯಾಪ್ತಿಯಲ್ಲಿ 20,799 ಹಾಗೂ ಗ್ರಾಮೀಣ ಪ್ರದೇಶದಲ್ಲಿ 22,351 ಮತದಾರರ ಹೆಸರುಗಳು ಡಿಲೀಟ್ ಆಗಿವೆ. ಅರ್ಹ ಮತದಾರರ ಹೆಸರು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದರೆ, ನಿಗದಿತ 13 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಸಲ್ಲಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಕ್ಷೇತ್ರದಲ್ಲಿ 269 ಮತಗಟ್ಟೆಗಳಿದ್ದವು. 1,200ಕ್ಕೂ ಅಧಿಕ ಮತದಾರರಿರುವ ಕಾರಣ ಮಾಡಶಿರವಾರ, ಪಗಡದಿನ್ನಿ ಹಾಗೂ ಬೂದಿಹಾಳ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ವಿ.ಹೆಚ್.ಎ. ಆ್ಯಪ್ ಮೂಲಕ ಮತದಾರರ ಸೇರ್ಪಡೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅರುಣ್ ಕುಮಾರ್ ದೇಸಾಯಿ ಹೇಳಿದರು.1
- ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿ ಸಂಭ್ರಮದ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ ಕಾಳಗಿ: ತಾಲೂಕಿನ ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿರುವ ಸುಕ್ಷೇತ್ರ ಕನ್ನಡಗಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಮಾಸದ ಎರಡನೇ ಸೋಮವಾರ ಅಪಾರ ಭಕ್ತ ಸಮೂಹವು ಭಕ್ತಿಯಿಂದ ಕನ್ನಡಗಿ ಮಲ್ಲಿಕಾರ್ಜುನ ಮಾಹರಾಜ ಕೀ ಜೈ ಎಂಬ ಜಯಘೋಷಗಳನ್ನು ಕೂಗುತ್ತಾ ಮಲ್ಲಿಕಾರ್ಜುನ ಮೂರ್ತಿಯ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು. ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಎರಡನೇ ಸೋಮವಾರ ನಸುಕಿನ ಜಾವ ಕನ್ನಡಗಿ ಮಲ್ಲಿಕಾರ್ಜುನ ಮೂಲ ಕರ್ತೃ ಗದ್ದುಗೆಗೆ ಹಾಗೂ ದೇವಸ್ಥಾನವನ್ನು ವಿವಿಧ ಪುಷ್ಪಾಲಾಂಕರಗಳಿಂದ ಅಲಂಕಾರ ಮಾಡಲಾಗಿತ್ತು. ಮೂಲ ಕತೃ ಗದ್ದುಗೆಗೆ ಅರ್ಚಕರ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ, ಧಾರಾಭಿಷೇಕ, ಮಹಾ ಮಂಗಳಾರತಿ ಜರುಗಿತು. ಮಧ್ಯಾಹ್ನ ಹೇರೂರ (ಕೆ) ಗ್ರಾಮದ ಮುಖಂಡ ಬಸವರಾಜ ಪಾಟೀಲ ಹೇರೂರ ನೇತೃತ್ವದಲ್ಲಿ ಭಜನಾ ಮಂಡಳಿ ದೇವಸ್ಥಾನಕ್ಕೆ ತಲುಪುತ್ತಿದ್ದಂತೆ ಅಲಂಕೃತ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳ, ಭಜನೆ, ನಂದಿಕೋಲು, ಪುರವಂತರ ಕುಣಿತದೊಂದಿಗೆ ದೇವಸ್ಥಾನ ಸುತ್ತಲು ಐದು ಸುತ್ತು ಭವ್ಯ ಮೆರವಣಿಗೆ ಜರುಗಿತು. ಭಕ್ತರು 'ಕನ್ನಡಗಿ ಮಲ್ಲಿಕಾರ್ಜುನ ಮಹಾರಾಜ ಕೀ ಜೈ' ಎಂದು ಜಯಘೋಷ ಕೂಗುತ್ತಾ ಪಲ್ಲಕ್ಕಿ ಉತ್ಸವಕ್ಕೆ ಉತ್ತುತ್ತಿ, ಬಾಳೆ ಹಣ್ಣು, ನಾಣ್ಯ ಎಸೆದು ಭಕ್ತಿ ಸಮರ್ಪಿಸಿದರು. ವಿವಿಧ ಗ್ರಾಮಗಳಿಂದ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಪ್ರಸಾದ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಕಾಯಿಕರ್ಪೂರ ಮಾಡಿ, ನೈವೇದ್ಯ ಅರ್ಪಿಸಿದರು. ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಭಕ್ತ ಜಗಧೀಶ್ ಜವಳಿ ರಾಜನಾಳ ಅವರು ದೇವಸ್ಥಾನವನ್ನು ಸಂಪೂರ್ಣವಾಗಿ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿರುವುದು ನೇರೆದಿದ್ದ ಭಕ್ತರಿಗೆ ಆಕರ್ಷಿಣಿಯವಾಗಿತ್ತು. ದೇವಸ್ಥಾನ ಸಮಿತಿ ಅಧ್ಯಕ್ಷ ಸುಭಾಶ್ಚಂದ್ರ ಮಾಲಿಪಾಟೀಲ ಕನ್ನಡಗಿ, ಮುಖಂಡರಾದ ಬಸವರಾಜ ಪಾಟೀಲ ಹೇರೂರ, ಸಿದ್ದಣ್ಣ ತಳವಾರ, ಶಿವಕುಮಾರ್ ಪಾಟೀಲ ಹೇರೂರ, ವಿಜಯಕುಮಾರ್ ಪಾಟೀಲ, ಚನ್ನವೀರಪ್ಪ ಮಾಲಿಪಾಟೀಲ, ವಿಜಯಕುಮಾರ ಪೂಜಾರಿ, ಶಾಮರಾಯ ಕನ್ನಡಗಿ, ಗುರಲಿಂಗಪ್ಪ ಪಾಟೀಲ, ಮಲ್ಲಣ್ಣ ನಾಯಕೋಡಿ, ಶಾಂತಕುಮಾರ ತಳವಾರ, ಎಚ್.ಬಿ. ಪಾಟೀಲ, ಮಲ್ಲಿಕಾರ್ಜುನ ವಕೀಲರು ಹಾಗೂ ಕಲಬುರಗಿ, ಹೆರೂರ (ಕೆ), ನಾಗೂರ, ಶೆಳ್ಳಗಿ, ಸಾವತಖೇಡ, ಜೀವನ ಮಾರಡಗಿ, ಹೆಬ್ಬಾಳ ಸೇರಿದಂತೆ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಕಾಳಗಿ ಪೊಲೀಸ್ ಠಾಣೆ ಪಿಎಸ್‌ಐ ತಿಮ್ಮಯ್ಯ ಬಿ.ಕೆ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿತ್ತು.1
- ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.1
- ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಗುಂಡಣ್ಣ ಡಿಗ್ಗಿ ಮಾತುಗಳಿಗೆ ಸಭಿಕರಿಂದ ಭರ್ಜರಿ ಚಪ್ಪಾಳೆ, ನಗೆ1
- ವಿಜಯಪುರ ನಗರದಲ್ಲಿ ಮಂಗಳವಾರ ಈದ್ ಮಿಲಾದ ಅಂಗವಾಗಿ ಮುಸ್ಲೀಮ ಭಾಂದವರು ಭವ್ಯ ಮೆರೆವಣಿಗೆ ನಡೆಯತು1
- ಆ.26 ರಂದು ಅಖಿಲಭಾರತ ಕ್ರೈಸ್ತ ಮಹಾಸಭಾ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ- ರಾಮಕೃಷ್ಣ ಪ್ರಸಾದ ರಾಯಚೂರು : ಅಖಿಲ ಭಾರತ ಕ್ರೈಸ್ತ ಮಹಾಸಭಾದ ಜಿಲ್ಲಾಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆ.26 ರಂದು ನಗರದ ಪಂಡಿತ ಸಿದ್ದರಾಮ ರಂಗಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ರಾಮಕೃಷ್ಣ ಪ್ರಸಾದ.ಎಂ ಹೇಳಿದರು. ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ಅಂದು ಬೆಳಿಗ್ಗೆ ಆರ್‌ಟಿಓ ವೃತ್ತದಿಂದ ರಂಗಮಂದಿರದವರೆಗೆ ಬೈಕ್ ರ್ಯಾಲಿ ನಡೆಸಲಾಗುತ್ತದೆ. ನಂತರ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಮಹಾಸಭಾ ರಾಜ್ಯಾಧ್ಯಕ್ಷ ಪ್ರಜ್ವಲ್ ಸ್ವಾಮಿ ಆಗಮಿಸಲಿದ್ದಾರೆ. ಶಾಸಕರುಗಳಾದ ಡಾ.ಶಿವರಾಜ ಪಾಟೀಲ್, ಗ್ರಾಮೀಣ ಶಾಸಕ ದದ್ದಲ್ ಬಸನಗೌಡ, ಎ.ವಸಂತಕುಮಾರ, ಮಾಜಿ ಸಚಿವ ಎನ್.ಎಸ್.ಭೋಸರಾಜ, ಕೆ.ಶಿವನಗೌಡ ನಾಯಕ ಸೇರಿದಂತೆ ಅನೇಕ ರಾಜಕೀಯ ಗಣ್ಯರು, ವಿವಿಧ ಸಭಾಪಾಲಕರು, ಸಮಾಜಬಾಂಧವರು ಭಾಗವಹಿಸಲಿದ್ದಾರೆ ಎಂದರು. ಸಭಾಪಾಲಕ ಜಾನ್‌ವೆಸ್ಲಿ ಮಾತನಾಡಿ ಕ್ರೈಸ್ತ ಮಹಾಸಭಾದ ಕಾರ್ಯಕ್ರಮ ದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ರಾಜ್ಯ ಹಾಗೂ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದರು.1