logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ. ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ವಿಫಲ: ದಲಿತ ಸೇನೆ ಆರೋಪ. ಸಿರವಾರ: ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರು ಹಾಗೂ ಮಹಿಳೆಯರ ಮೇಲೆ ನಡೆದಿರುವ ಹತ್ಯೆ, ಅತ್ಯಾಚಾರ ಸೇರಿದಂತೆ ಗಂಭೀರ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸೇನೆಯ ಪದಾಧಿಕಾರಿಗಳು ಸಿರವಾರ ತಾಲೂಕು ಸಮಿತಿಯ ಪದಾಧಿಕಾರಿಗಳು ತಹಸೀಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಭಾರತ ದೇಶವು ಸ್ವಾತಂತ್ರ್ಯದ 80ನೇ ವರ್ಷದ ಹೊಸ್ತಿಲಲ್ಲಿದ್ದರೂ ದಲಿತರು, ಮಹಿಳೆಯರು ಹಾಗೂ ವಿಶೇಷವಾಗಿ ದಲಿತ ಮಹಿಳೆಯರಿಗೆ ಸುರಕ್ಷತೆ ಮತ್ತು ನೈಜ ಸ್ವಾತಂತ್ರ್ಯ ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಗಿದೆ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ 19 ವರ್ಷದ ದಲಿತ ಯುವತಿ ಬಹಿರ್ದೆಸೆಗೆ ತೆರಳಿದ್ದ ಸಂದರ್ಭದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿರುವುದು, ಲಿಂಗಸೂಗೂರು ತಾಲೂಕಿನ ಕರಡಕಲ್ ಗ್ರಾಮದ 35 ವರ್ಷದ ರಾಣೆಮ್ಮ ಅವರ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಆರೋಪ ಹಾಗೂ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಹತ್ಯೆ ಪ್ರಕರಣಗಳು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. “ಸರಣಿ ಘಟನೆಗಳಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಪರಾಧಿಗಳಿಗೆ ಕಾನೂನಿನ ಭಯವಿಲ್ಲದ ಪರಿಸ್ಥಿತಿ ಉಂಟಾಗದಂತೆ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ದಲಿತರು ಮತ್ತು ಮಹಿಳೆಯರಲ್ಲಿ ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸವನ್ನು ಪುನಃ ಮೂಡಿಸುವ ಅಗತ್ಯವಿದೆ” ಎಂದು ದಲಿತ ಸೇನೆ ಒತ್ತಾಯಿಸಿದೆ. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೂ ಕಡಿವಾಣ ಹಾಕಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ, ಮಹಿಳೆಯರು ಹಾಗೂ ದಲಿತ ಸಮುದಾಯದ ಜನರಿಗೆ ಅಗತ್ಯ ಭದ್ರತೆ ಒದಗಿಸಬೇಕು. ಗಂಭೀರ ಅಪರಾಧ ಪ್ರಕರಣಗಳ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆ ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ದಲಿತ ಸೇನೆ ಎಚ್ಚರಿಕೆ ನೀಡಿದೆ. ಈ ಸಂದರ್ಭದಲ್ಲಿ ದಲಿತ ಸೇನೆ ಸಿರವಾರ ತಾಲೂಕು ಅಧ್ಯಕ್ಷ ಎಂ.ಎಸ್. ರಾಜಪ್ಪ, ಗೌರವಾಧ್ಯಕ್ಷ ಜೆ. ದೇವರಾಜ್, ಉಪಾಧ್ಯಕ್ಷ ಜೆ. ಹನುಮೇಶ, ಡಿ.ಎಚ್. ಭೀಮಣ್ಣ, ಜೆ. ಭೀಮರಾಯ, ವಿರುಪಾಕ್ಷಿ ಜಗ್ಲಿ, ಪಕೀರಪ್ಪ ಕಡದಿನ್ನಿ, ಕಾರ್ಯದರ್ಶಿ ರಾಮು, ಸುನೀಲ್ ಕುಮಾರ್, ಮಿರಾಜುದ್ದೀನ್ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

16 hrs ago
user_Mallikarjun Athnoor
Mallikarjun Athnoor
ಸಿರ್ವಾರ, ರಾಯಚೂರು, ಕರ್ನಾಟಕ•
16 hrs ago
9bff80cc-e8aa-4369-8f6a-d1b82b8c1771

ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ. ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ವಿಫಲ: ದಲಿತ ಸೇನೆ ಆರೋಪ. ಸಿರವಾರ: ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರು ಹಾಗೂ ಮಹಿಳೆಯರ ಮೇಲೆ ನಡೆದಿರುವ ಹತ್ಯೆ, ಅತ್ಯಾಚಾರ ಸೇರಿದಂತೆ ಗಂಭೀರ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸೇನೆಯ ಪದಾಧಿಕಾರಿಗಳು ಸಿರವಾರ ತಾಲೂಕು ಸಮಿತಿಯ ಪದಾಧಿಕಾರಿಗಳು ತಹಸೀಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಭಾರತ ದೇಶವು ಸ್ವಾತಂತ್ರ್ಯದ 80ನೇ ವರ್ಷದ ಹೊಸ್ತಿಲಲ್ಲಿದ್ದರೂ ದಲಿತರು, ಮಹಿಳೆಯರು ಹಾಗೂ ವಿಶೇಷವಾಗಿ ದಲಿತ ಮಹಿಳೆಯರಿಗೆ ಸುರಕ್ಷತೆ ಮತ್ತು ನೈಜ ಸ್ವಾತಂತ್ರ್ಯ ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು

1c541281-07ee-4a1f-9f1e-408a6cbef3f4

ಅಸಮಾಧಾನ ವ್ಯಕ್ತಪಡಿಸಲಾಗಿದೆ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ 19 ವರ್ಷದ ದಲಿತ ಯುವತಿ ಬಹಿರ್ದೆಸೆಗೆ ತೆರಳಿದ್ದ ಸಂದರ್ಭದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿರುವುದು, ಲಿಂಗಸೂಗೂರು ತಾಲೂಕಿನ ಕರಡಕಲ್ ಗ್ರಾಮದ 35 ವರ್ಷದ ರಾಣೆಮ್ಮ ಅವರ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಆರೋಪ ಹಾಗೂ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಹತ್ಯೆ ಪ್ರಕರಣಗಳು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. “ಸರಣಿ ಘಟನೆಗಳಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಪರಾಧಿಗಳಿಗೆ ಕಾನೂನಿನ ಭಯವಿಲ್ಲದ ಪರಿಸ್ಥಿತಿ ಉಂಟಾಗದಂತೆ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ದಲಿತರು ಮತ್ತು ಮಹಿಳೆಯರಲ್ಲಿ ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸವನ್ನು ಪುನಃ ಮೂಡಿಸುವ ಅಗತ್ಯವಿದೆ” ಎಂದು ದಲಿತ ಸೇನೆ ಒತ್ತಾಯಿಸಿದೆ. ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೂ ಕಡಿವಾಣ ಹಾಕಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್

023c92f2-f041-4002-9316-07a60cf975bc

ಗಸ್ತು ಹೆಚ್ಚಿಸಿ, ಮಹಿಳೆಯರು ಹಾಗೂ ದಲಿತ ಸಮುದಾಯದ ಜನರಿಗೆ ಅಗತ್ಯ ಭದ್ರತೆ ಒದಗಿಸಬೇಕು. ಗಂಭೀರ ಅಪರಾಧ ಪ್ರಕರಣಗಳ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆ ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ದಲಿತ ಸೇನೆ ಎಚ್ಚರಿಕೆ ನೀಡಿದೆ. ಈ ಸಂದರ್ಭದಲ್ಲಿ ದಲಿತ ಸೇನೆ ಸಿರವಾರ ತಾಲೂಕು ಅಧ್ಯಕ್ಷ ಎಂ.ಎಸ್. ರಾಜಪ್ಪ, ಗೌರವಾಧ್ಯಕ್ಷ ಜೆ. ದೇವರಾಜ್, ಉಪಾಧ್ಯಕ್ಷ ಜೆ. ಹನುಮೇಶ, ಡಿ.ಎಚ್. ಭೀಮಣ್ಣ, ಜೆ. ಭೀಮರಾಯ, ವಿರುಪಾಕ್ಷಿ ಜಗ್ಲಿ, ಪಕೀರಪ್ಪ ಕಡದಿನ್ನಿ, ಕಾರ್ಯದರ್ಶಿ ರಾಮು, ಸುನೀಲ್ ಕುಮಾರ್, ಮಿರಾಜುದ್ದೀನ್ ಪಟೇಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಸಿರವಾರ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬ ಅದ್ಧೂರಿ ಆಚರಣೆ. ಗಮನ ಸೆಳೆದ ಡಿಜೆ, ಸ್ತಬ್ಧಚಿತ್ರ ಬೃಹತ್ ಮೆರವಣಿಗೆ. ಸಿರವಾರ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬ ಅದ್ಧೂರಿ ಆಚರಣೆ. ಗಮನ ಸೆಳೆದ ಡಿಜೆ, ಸ್ತಬ್ಧಚಿತ್ರ ಬೃಹತ್ ಮೆರವಣಿಗೆ. ಸಿರವಾರ: ಪಟ್ಟಣದಲ್ಲಿಂದು ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಸಡಗರ ಸಂಭ್ರಮದಿಂದ ಆಚರಿಸಿದರು. ಹಬ್ಬದ ಪ್ರಯುಕ್ತ ಪಟ್ಟಣದ ನೂರಾನಿ ಮಸೀದ್ ಯಿಂದ ಆರಂಭಗೊಂಡ ಮೆಕ್ಕಾ, ಮದೀನಗಳ ಸ್ತಬ್ಧಚಿತ್ರಗಳ ಬೃಹತ್ ಮೆರವಣಿಗೆಯು ಬಸವೇಶ್ವರ ವೃತ್ತ, ಬಸ್ ನಿಲ್ದಾಣ ತಲುಪಿ ನಂತರ ಪುನಃ ನೂರಾನಿ ಮಸೀದಿ ತಲುಪಿತು. ಇದೇ ವೇಳೆ ವಿಶೇಷ ಭೋಜನಕೂಟ ಏರ್ಪಡಿಸಿ ಸಡಗರ ಸಂಭ್ರಮದೊಂದಿಗೆ ಈದ್ ಮಿಲಾದ್ ಹಬ್ಬ ಆಚರಿದರು. ಅದ್ಧೂರಿ ಮೆರವಣಿಗೆ: ಇದೇ ವೇಳೆ ಡಿಜೆ ಮೆರವಣಿಗೆಯೊಂದಿಗೆ ಸ್ತಬ್ಧ ಚಿತ್ರಗಳ ಅದ್ಧೂರಿ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಹಿರಿಯರು, ಯುವಕರು ಇದ್ದರು.
    4
    ಸಿರವಾರ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬ ಅದ್ಧೂರಿ ಆಚರಣೆ. 

ಗಮನ ಸೆಳೆದ ಡಿಜೆ, ಸ್ತಬ್ಧಚಿತ್ರ ಬೃಹತ್ ಮೆರವಣಿಗೆ.
ಸಿರವಾರ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬ ಅದ್ಧೂರಿ ಆಚರಣೆ. 
ಗಮನ ಸೆಳೆದ ಡಿಜೆ, ಸ್ತಬ್ಧಚಿತ್ರ ಬೃಹತ್ ಮೆರವಣಿಗೆ.
ಸಿರವಾರ: ಪಟ್ಟಣದಲ್ಲಿಂದು ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಸಡಗರ ಸಂಭ್ರಮದಿಂದ ಆಚರಿಸಿದರು.
ಹಬ್ಬದ ಪ್ರಯುಕ್ತ ಪಟ್ಟಣದ ನೂರಾನಿ ಮಸೀದ್ ಯಿಂದ ಆರಂಭಗೊಂಡ ಮೆಕ್ಕಾ, ಮದೀನಗಳ ಸ್ತಬ್ಧಚಿತ್ರಗಳ ಬೃಹತ್ ಮೆರವಣಿಗೆಯು ಬಸವೇಶ್ವರ ವೃತ್ತ, ಬಸ್ ನಿಲ್ದಾಣ ತಲುಪಿ ನಂತರ  ಪುನಃ ನೂರಾನಿ ಮಸೀದಿ ತಲುಪಿತು.
ಇದೇ ವೇಳೆ ವಿಶೇಷ ಭೋಜನಕೂಟ ಏರ್ಪಡಿಸಿ ಸಡಗರ ಸಂಭ್ರಮದೊಂದಿಗೆ ಈದ್ ಮಿಲಾದ್ ಹಬ್ಬ ಆಚರಿದರು.
ಅದ್ಧೂರಿ ಮೆರವಣಿಗೆ: ಇದೇ ವೇಳೆ ಡಿಜೆ ಮೆರವಣಿಗೆಯೊಂದಿಗೆ ಸ್ತಬ್ಧ ಚಿತ್ರಗಳ ಅದ್ಧೂರಿ ಮೆರವಣಿಗೆ ನಡೆಯಿತು.
ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಹಿರಿಯರು, ಯುವಕರು ಇದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    1 hr ago
  • ಜಯರಾಜ್ ಅಧ್ಯಕ್ಷರು ರಕ್ಷಣಾ ವೇದಿಕೆ ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ
    1
    ಜಯರಾಜ್   ಅಧ್ಯಕ್ಷರು ರಕ್ಷಣಾ ವೇದಿಕೆ   ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    39 min ago
  • ಆಗಸ್ಟ್ 27ರಂದು ಬರಗಾಲ ಪ್ರಯುಕ್ತ ಹುಟ್ಟುಹಬ್ಬ ಆಚರಣೆ ಮಾಡದಿರುವುದಾಗಿ ನಿರ್ಧಾರ ಶ್ರೀಮತಿ ಕರೆಮ್ಮ ಜಿ ನಾಯಕ ದೇವದುರ್ಗ ಶಾಸಕರು
    1
    ಆಗಸ್ಟ್ 27ರಂದು ಬರಗಾಲ ಪ್ರಯುಕ್ತ ಹುಟ್ಟುಹಬ್ಬ ಆಚರಣೆ ಮಾಡದಿರುವುದಾಗಿ ನಿರ್ಧಾರ ಶ್ರೀಮತಿ ಕರೆಮ್ಮ ಜಿ ನಾಯಕ ದೇವದುರ್ಗ ಶಾಸಕರು
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    2 hrs ago
  • ಸಿಂಧನೂರು ಕ್ಷೇತ್ರದಲ್ಲಿ 43,115 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಸಿಂಧನೂರು: ರಾಷ್ಟ್ರೀಯ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಬಳಿಕ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 43,115 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ದೇಸಾಯಿ ತಿಳಿಸಿದ್ದಾರೆ. ಮಂಗಳವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರದಲ್ಲಿ 2,40,941 ಮತದಾರರಿದ್ದರು. ಪರಿಷ್ಕರಣೆ ವೇಳೆ ಮೃತಪಟ್ಟ 6,778, ಶಾಶ್ವತವಾಗಿ ಸ್ಥಳಾಂತರಗೊಂಡ 31,954, ಗೈರುಹಾಜರಿದ್ದ 1,555 ಹಾಗೂ ಡಬಲ್ ಮತದಾರರಾಗಿದ್ದ 2,805 ಮಂದಿಯ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇತರ ಕಾರಣಗಳಿಂದ 23 ಮತದಾರರ ಹೆಸರನ್ನೂ ಡಿಲೀಟ್ ಮಾಡಲಾಗಿದೆ. 2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಒಟ್ಟು 17.90ರಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ ನಗರ ವ್ಯಾಪ್ತಿಯಲ್ಲಿ 20,799 ಹಾಗೂ ಗ್ರಾಮೀಣ ಪ್ರದೇಶದಲ್ಲಿ 22,351 ಮತದಾರರ ಹೆಸರುಗಳು ಡಿಲೀಟ್ ಆಗಿವೆ. ಅರ್ಹ ಮತದಾರರ ಹೆಸರು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದರೆ, ನಿಗದಿತ 13 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಸಲ್ಲಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಕ್ಷೇತ್ರದಲ್ಲಿ 269 ಮತಗಟ್ಟೆಗಳಿದ್ದವು. 1,200ಕ್ಕೂ ಅಧಿಕ ಮತದಾರರಿರುವ ಕಾರಣ ಮಾಡಶಿರವಾರ, ಪಗಡದಿನ್ನಿ ಹಾಗೂ ಬೂದಿಹಾಳ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ವಿ.ಹೆಚ್.ಎ. ಆ್ಯಪ್ ಮೂಲಕ ಮತದಾರರ ಸೇರ್ಪಡೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅರುಣ್ ಕುಮಾರ್ ದೇಸಾಯಿ ಹೇಳಿದರು.
    1
    ಸಿಂಧನೂರು ಕ್ಷೇತ್ರದಲ್ಲಿ 43,115 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್
ಸಿಂಧನೂರು: ರಾಷ್ಟ್ರೀಯ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಬಳಿಕ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 43,115 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ದೇಸಾಯಿ ತಿಳಿಸಿದ್ದಾರೆ.
ಮಂಗಳವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರದಲ್ಲಿ 2,40,941 ಮತದಾರರಿದ್ದರು. ಪರಿಷ್ಕರಣೆ ವೇಳೆ ಮೃತಪಟ್ಟ 6,778, ಶಾಶ್ವತವಾಗಿ ಸ್ಥಳಾಂತರಗೊಂಡ 31,954, ಗೈರುಹಾಜರಿದ್ದ 1,555 ಹಾಗೂ ಡಬಲ್ ಮತದಾರರಾಗಿದ್ದ 2,805 ಮಂದಿಯ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇತರ ಕಾರಣಗಳಿಂದ 23 ಮತದಾರರ ಹೆಸರನ್ನೂ ಡಿಲೀಟ್ ಮಾಡಲಾಗಿದೆ.
2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಒಟ್ಟು 17.90ರಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ ನಗರ ವ್ಯಾಪ್ತಿಯಲ್ಲಿ 20,799 ಹಾಗೂ ಗ್ರಾಮೀಣ ಪ್ರದೇಶದಲ್ಲಿ 22,351 ಮತದಾರರ ಹೆಸರುಗಳು ಡಿಲೀಟ್ ಆಗಿವೆ.
ಅರ್ಹ ಮತದಾರರ ಹೆಸರು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದರೆ, ನಿಗದಿತ 13 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಸಲ್ಲಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ ಎಂದು ಅವರು ತಿಳಿಸಿದರು.
ಈ ಹಿಂದೆ ಕ್ಷೇತ್ರದಲ್ಲಿ 269 ಮತಗಟ್ಟೆಗಳಿದ್ದವು. 1,200ಕ್ಕೂ ಅಧಿಕ ಮತದಾರರಿರುವ ಕಾರಣ ಮಾಡಶಿರವಾರ, ಪಗಡದಿನ್ನಿ ಹಾಗೂ ಬೂದಿಹಾಳ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ವಿ.ಹೆಚ್.ಎ. ಆ್ಯಪ್ ಮೂಲಕ ಮತದಾರರ ಸೇರ್ಪಡೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅರುಣ್ ಕುಮಾರ್ ದೇಸಾಯಿ ಹೇಳಿದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    20 hrs ago
  • "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    1
    "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ 

ಕಲ್ಯಾಣ ವಾರ್ತೆ -ಯಾದಗಿರಿ 
ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. 
೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು.
*ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ 
೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು  ಕೋಲಿ ಸಮಾಜದ ಆಶಯವಾಗಿದೆ*-"
*ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    user_DR. S.S. NAYAK
    DR. S.S. NAYAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    17 hrs ago
  • ವಿಜಯಪುರ ನಗರದಲ್ಲಿ ಮಂಗಳವಾರ ಈದ್ ಮಿಲಾದ ಅಂಗವಾಗಿ ಮುಸ್ಲೀಮ ಭಾಂದವರು ಭವ್ಯ ಮೆರೆವಣಿಗೆ ನಡೆಯತು
    1
    ವಿಜಯಪುರ ನಗರದಲ್ಲಿ ಮಂಗಳವಾರ ಈದ್ ಮಿಲಾದ ಅಂಗವಾಗಿ ಮುಸ್ಲೀಮ ಭಾಂದವರು ಭವ್ಯ ಮೆರೆವಣಿಗೆ ನಡೆಯತು
    user_Sharanugouda Patil
    Sharanugouda Patil
    Muddebihal, Vijayapura•
    4 hrs ago
  • ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿದಿದೆ: ಜೆ.ಶರಣಪ್ಪ ಗೌಡ. ಸಿರವಾರ: ಟಿಎಲ್ಬಿಸಿ ಎಡದಂಡೆ ನಾಲೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ಮಂಗಳವಾರ ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ವಾಡಿಕೆಗಿಂತ ಮಳೆಯಾಗದ ಹಿನ್ನೆಲೆಯಲ್ಲಿ ಬರಗಾಲ ಉಂಟಾಗಿದೆ‌. ಬೆಳೆಗಳನ್ನು ಉಳಿಸಿಕೊಳ್ಳಲು ರೈತರ ಹರಸಾಹಸ ಪಡುವಂತಾಗಿದೆ ಎಂದರು‌. ರಾಯಚೂರು, ಮಾನ್ವಿ ಮತ್ತು ಸಿರವಾರ ತಾಲೂಕಿನ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹೋರಾಟದಲ್ಲಿ ಮಾಜಿ ಶಾಸಕರುಗಳಾದ ರಾಜಾ ವೆಂಕಟಪ್ಪ ನಾಯಕ, ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ರೈತ ಸಂಘದ ಮುಖಂಡ ಚಾಮರಸ ಮಾಲೀ ಪಾಟೀಲ್, ಹೋರಾಟಗಾರರಾದ ಶಂಕರಗೌಡ ಹರವಿ, ಎನ್‌. ಉದಯಕುಮಾರ್ ಸಾಹುಕಾರ, ಜೆ.ದೇವರಾಜ ಗೌಡ, ಅಮರೇಶ ಚಾಗಭಾವಿ, ನಾಗರಾಜ ಗೌಡ, ಸವಾರೆಪ್ಪ, ಬಡ್ಡ ಹನುಮಂತ, ರಾಜಪ್ಪ ಹೊನ್ನಟಗಿ, ಮಲ್ಲಪ್ಪ ದೊಡ್ಮನೆ, ದಾನಪ್ಪ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ರೈತರು ಪಾಲ್ಗೊಂಡಿದ್ದರು.
    2
    ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ.
ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ.
ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿದಿದೆ: ಜೆ.ಶರಣಪ್ಪ ಗೌಡ.
ಸಿರವಾರ: ಟಿಎಲ್ಬಿಸಿ ಎಡದಂಡೆ ನಾಲೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು  
ಖಂಡಿಸಿ ರೈತರು ಮಂಗಳವಾರ ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ವಾಡಿಕೆಗಿಂತ ಮಳೆಯಾಗದ ಹಿನ್ನೆಲೆಯಲ್ಲಿ ಬರಗಾಲ ಉಂಟಾಗಿದೆ‌. ಬೆಳೆಗಳನ್ನು ಉಳಿಸಿಕೊಳ್ಳಲು ರೈತರ ಹರಸಾಹಸ ಪಡುವಂತಾಗಿದೆ ಎಂದರು‌.
ರಾಯಚೂರು, ಮಾನ್ವಿ ಮತ್ತು ಸಿರವಾರ  ತಾಲೂಕಿನ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹೋರಾಟದಲ್ಲಿ ಮಾಜಿ ಶಾಸಕರುಗಳಾದ ರಾಜಾ ವೆಂಕಟಪ್ಪ ನಾಯಕ, ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ರೈತ ಸಂಘದ ಮುಖಂಡ ಚಾಮರಸ ಮಾಲೀ ಪಾಟೀಲ್, ಹೋರಾಟಗಾರರಾದ ಶಂಕರಗೌಡ ಹರವಿ, ಎನ್‌. ಉದಯಕುಮಾರ್ ಸಾಹುಕಾರ, ಜೆ.ದೇವರಾಜ ಗೌಡ, ಅಮರೇಶ ಚಾಗಭಾವಿ, ನಾಗರಾಜ ಗೌಡ, ಸವಾರೆಪ್ಪ, ಬಡ್ಡ ಹನುಮಂತ, ರಾಜಪ್ಪ ಹೊನ್ನಟಗಿ, ಮಲ್ಲಪ್ಪ ದೊಡ್ಮನೆ, ದಾನಪ್ಪ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ರೈತರು ಪಾಲ್ಗೊಂಡಿದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    17 hrs ago
  • ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ...... ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ. ತುರ್ವಿಹಾಳ: ಪಟ್ಟಣದ ಸರ್ವೆ ನಂ.14ರ ಶರಣಪ್ಪ ಮೆಗಳಡಕ್ಕಿ ಅವರ ಹೊಲದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಮೂರು ಎಮ್ಮೆ ಹಾಗೂ ಒಂದು ಆಕಳು ಮೃತಪಟ್ಟಿದ್ದು, ಎರಡು ಎಮ್ಮೆ ಮತ್ತು ನಾಲ್ಕು ಮೇಕೆರಗಳು ಗಾಯಗೊಂಡಿವೆ. ಘಟನೆಯಿಂದ ಸುಮಾರು 15 ಲಕ್ಷ ನಷ್ಟ ಸಂಭವಿಸಿದೆ ಎಂದು ಸಂತ್ರಸ್ತ ಶರಣಪ್ಪ ಮೆಗಳಡಕ್ಕಿ ತಿಳಿಸಿದ್ದಾರೆ. ವಿದ್ಯುತ್ ಅವಘಡದ ಪರಿಣಾಮ ಜಾನುವಾರುಗಳ ಸಾವಿನ ಜತೆಗೆ ಒಂದು ತೊಲೆ ಬಂಗಾರ ಹಾಗೂ 1.60 ಲಕ್ಷ ನಗದು ಹಣವೂ ನಷ್ಟವಾಗಿದೆ. ಜಾನುವಾರುಗಳ ಸಾವಿನಿಂದ ಹಾಗೂ ಇತರೆ ವಸ್ತುಗಳ ಹಾನಿಯಿಂದ ಕುಟುಂಬಕ್ಕೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ. ಆದ್ದರಿಂದ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಸೂಕ್ತವಾಗಿ ಪರಿಶೀಲಿಸಿ, ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಶರಣಪ್ಪ ಮೆಗಳಡಕ್ಕಿ ಮನವಿ ಮಾಡಿದ್ದಾರೆ. ಸ್ಥಳ ಪರಿಶೀಲನೆ: ಘಟನೆ ಕುರಿತು ಮಾಹಿತಿ ಪಡೆದ ತುರ್ವಿಹಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷ ಶರಣಪ್ಪ ಹೋಸಗೌಡರ್ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಜಾನುವಾರುಗಳು ಹಾಗೂ ಸ್ಥಳವನ್ನು ಪರಿಶೀಲಿಸಿದರು. ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದ ಅವರು, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ (ಆರ್‌ಐ) ಉಮಾಪತಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಕುರಿತು ಪರಿಶೀಲನೆ ನಡೆಸಿ, ಹಾನಿಯ ವಿವರಗಳನ್ನು ದಾಖಲಿಸಿಕೊಂಡರು.
    2
    ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ......
ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ.
ತುರ್ವಿಹಾಳ: ಪಟ್ಟಣದ ಸರ್ವೆ ನಂ.14ರ ಶರಣಪ್ಪ ಮೆಗಳಡಕ್ಕಿ ಅವರ ಹೊಲದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಮೂರು ಎಮ್ಮೆ ಹಾಗೂ ಒಂದು ಆಕಳು ಮೃತಪಟ್ಟಿದ್ದು, ಎರಡು ಎಮ್ಮೆ ಮತ್ತು ನಾಲ್ಕು ಮೇಕೆರಗಳು ಗಾಯಗೊಂಡಿವೆ. ಘಟನೆಯಿಂದ ಸುಮಾರು 15 ಲಕ್ಷ ನಷ್ಟ ಸಂಭವಿಸಿದೆ ಎಂದು ಸಂತ್ರಸ್ತ ಶರಣಪ್ಪ ಮೆಗಳಡಕ್ಕಿ ತಿಳಿಸಿದ್ದಾರೆ.
ವಿದ್ಯುತ್ ಅವಘಡದ ಪರಿಣಾಮ ಜಾನುವಾರುಗಳ ಸಾವಿನ ಜತೆಗೆ ಒಂದು ತೊಲೆ ಬಂಗಾರ ಹಾಗೂ 1.60 ಲಕ್ಷ ನಗದು ಹಣವೂ  ನಷ್ಟವಾಗಿದೆ. ಜಾನುವಾರುಗಳ ಸಾವಿನಿಂದ ಹಾಗೂ ಇತರೆ ವಸ್ತುಗಳ ಹಾನಿಯಿಂದ ಕುಟುಂಬಕ್ಕೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ. ಆದ್ದರಿಂದ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಸೂಕ್ತವಾಗಿ ಪರಿಶೀಲಿಸಿ, ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಶರಣಪ್ಪ ಮೆಗಳಡಕ್ಕಿ ಮನವಿ ಮಾಡಿದ್ದಾರೆ.
ಸ್ಥಳ ಪರಿಶೀಲನೆ: ಘಟನೆ ಕುರಿತು ಮಾಹಿತಿ ಪಡೆದ ತುರ್ವಿಹಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷ ಶರಣಪ್ಪ ಹೋಸಗೌಡರ್ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಜಾನುವಾರುಗಳು ಹಾಗೂ ಸ್ಥಳವನ್ನು ಪರಿಶೀಲಿಸಿದರು. ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದ ಅವರು, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ (ಆರ್‌ಐ) ಉಮಾಪತಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಕುರಿತು ಪರಿಶೀಲನೆ ನಡೆಸಿ, ಹಾನಿಯ ವಿವರಗಳನ್ನು ದಾಖಲಿಸಿಕೊಂಡರು.
    user_Mehboob Momin
    Mehboob Momin
    Photographer Sindhnur, Raichur•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.