ರೈತರ ಅನುಕೂಲಕ್ಕಾಗಿ ಸರ್ಕಾರದ ಯೋಜನೆ: ಶಾಸಕ ಭೀಮಸೇನ ಚಿಮ್ಮನಕಟ್ಟಿ ಗುಳೇದಗುಡ್ಡ: ತಾಲೂಕು ಕೇಂದ್ರವಾದ ಗುಳೇದಗುಡ್ಡ ಪಟ್ಟಣದಲ್ಲಿ ಕೃಷಿ ಇಲಾಖೆಯ ರೈತಸಂಪರ್ಕ ಕೇಂದ್ರ ಸ್ವಂತ ಕಟ್ಟಡ ನಿರ್ಮಿಸುವಂತೆ ರೈತರ ಬೇಡಿಕೆಯಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಭೂಮಿಯನ್ನು ಗುರುತಿಸಿ, ಎರಡು ಕೋಟಿ ರೂ.ವೆಚ್ಚದಲ್ಲಿ ರೈತ ಸಂಪರ್ಕ ಕೇಂದ್ರ ಹಾಗೂ ಗೋದಾಮು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಭೀಮಸೇನ ಚಿಮ್ಮಕಟ್ಟಿ ಹೇಳಿದರು. ಅವರು ಪಟ್ಟಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ ಹಾಗೂ ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಆರ್‌ಐಡಿಎಫ್ 31 ಯೋಜನೆ ಅಡಿಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ರೈತ ಸಂಪರ್ಕ ಕಟ್ಟಡ, ಗೋದಾಮು ನಿರ್ಮಾಣಕ್ಕೆ ಭೂಮಿಪೂಜೆಯನ್ನು ನೆರವೇರಿಸಿ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಬರಗಾಲ ಇದ್ದು, ಗುಳೇದಗುಡ್ಡ ತಾಲೂಕನ್ನು ಬರಪೀಡಿ ಎಂದು ಘೋಷಣೆಯಾಗಿದ್ದು, ಬರದಿಂದ ಸಂಕಷ್ಟ ಪಡುತ್ತಿರುವ ರೈತರಿಗೆ ನೆರವಾಗಲು ಸರ್ಕಾರ ಯೋಜನೆಗಳನ್ನು ತರುತ್ತಿದೆ ಎಂದರು. ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕ ಅಶೋಕ ತಿರಕನ್ನವರ, ತಾಲೂಕು ಕೃಷಿ ಅಧಿಕಾರಿ ಆನಂದ ಗೌಡರ, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಮಹಾಂತೇಶ ಹಟ್ಟಿ, ತಾಲೂಕು ಅಧ್ಯಕ್ಷ ಬನಪ್ಪ ಮೊಕಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ, ಸಿದ್ದು ಕೋಲಾರ, ರಾಜು ಸಂಗಮ, ಯಲಗುರ್ದಪ್ಪ ಗೌಡರ,ಮುಬಾರಕ್ ಮಂಗಳೂರ, ಫಕೀರಪ್ಪ ತಳವಾರ, ಬಸವರಾಜ ಜಂಗಮರ, ಶಿವಪ್ಪ ಹಾದಿಮನಿ, ಪರಸಪ್ಪ ಹುಲ್ಯಾಳ, ಸುರೇಶ ಕುರಿ, ಗೌಡಪ್ಪ ಗೌಡ್ರ, ಸಿದ್ದಪ್ಪ ಹಾಲಿಗೇರಿ, ಬಿ.ಡಿ. ಗೌಡರ, ಇಲಾಖೆ ಸಿಬ್ಬಂದಿ, ರೈತರು ಇದ್ದರು.

- ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್ ಎದುರು ಪ್ರತಿಭಟನೆ1
- 🌾ಗಜೇಂದ್ರಗಡ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ನಿರಂತರ ಶ್ರಮ… ನನ್ನನ್ನು ಕೆಲವರು ವಿರೋಧಿಸಿದ್ದು ನನ್ನ ವ್ಯಕ್ತಿತ್ವವನ್ನಲ್ಲ… ನನ್ನ ಸಾಮರ್ಥ್ಯವನ್ನು. ಅವರಲ್ಲಿ ಕೆಲವರು ನನ್ನಿಂದ ಅಧಿಕಾರದ ಲಾಭ ಪಡೆದವರೇ ಆಗಿದ್ದರು. “ಸ್ವತಂತ್ರವಾಗಿ ಇದ್ದು ಕೆಲಸ ಮಾಡಿ ತೋರಿಸು” ಎಂದು ನನಗೆ ಸವಾಲು. ಹಾಕಿದವರೂ ಇದ್ದಾರೆ. ನನ್ನಿಂದ ಉಚಿತವಾಗಿ ಸೇವೆ ಪಡೆದವರೂ ಇದ್ದಾರೆ. ನಾನು ಸಲ್ಲಿಸಿದ ಮನವಿಗಳನ್ನು “ಕಸದ ಬುಟ್ಟಿಗೆ ಹಾಕುತ್ತಾರೆ” ಎಂದು ವ್ಯಂಗ್ಯವಾಡಿದವರೂ ಇದ್ದಾರೆ. ಆದರೆ ಇಂದು ಅದೇ ಮನವಿಗಳು ಅಭಿವೃದ್ಧಿಯ ದಿಕ್ಕಿನಲ್ಲಿ ಹಾರುವ ಗಾಳಿಪಟಗಳಾಗಿವೆ. 🪁 ನನಗೆ ಸಾಕಷ್ಟು ತೊಂದರೆ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು. ಆದರೂ ಯಾವುದಕ್ಕೂ ಕುಗ್ಗದೆ, ಯಾರ ಮೇಲೂ ಅವಲಂಬಿತನಾಗದೆ, ನಿಷ್ಠೆಯಿಂದ… ಪ್ರಾಮಾಣಿಕವಾಗಿ…24 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದೆ. ಇಂದು ನನ್ನ ಮಾತಿಗಿಂತ ನನ್ನ ಕೆಲಸಗಳೇ ಉತ್ತರ ನೀಡುತ್ತಿವೆ. ಜನರ ಸಮಸ್ಯೆಗಳನ್ನು ಹೇಳುವುದು ಮಾತ್ರ ನನ್ನ ಕೆಲಸವಲ್ಲ; ಪರಿಹಾರ ಸಿಗುವವರೆಗೂ ಹೋರಾಡುವುದು ನನ್ನ ಜವಾಬ್ದಾರಿ. 🔥ನನ್ನನ್ನು ಎಷ್ಟೇ ತುಳಿದರೂ, ನನ್ನ ಶ್ರಮವನ್ನು ತಡೆಯಲು ಸಾಧ್ಯವಾಗಲಿಲ್ಲ. ಮಾತಿಗಿಂತ ಕೆಲಸವೇ ಮುಖ್ಯ — ಅದನ್ನು ನನ್ನ ಕಾರ್ಯಗಳ ಮೂಲಕ ತೋರಿಸುತ್ತಿದ್ದೇನೆ. — @Anil Karne Gajendragad1
- ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು4
- ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ1
- *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ: ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.2
- ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಯಿತು.4
- ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ವರದಿ ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು ಪೂರ್ವಭಾವಿ ಸಭೆ. ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು. ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.1
- ED. IT. ಯಾವಾಗ ಬೇಕಾದರೂ ನನ್ನ ಮನೆಗೆ ಬರಬಹುದು ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ: ಕೈ ಶಾಸಕರನ್ನು ಬಿಜೆಪಿಗೆ ಸೆಳೆಯುವ ಹುನ್ನಾರ ವಿಚಾರಕ್ಕೆ ಸಚಿವ ಕಾಶಪ್ಪನವರ ಪ್ರತಿಕ್ರಿಯಿಸಿದರು ಈ ಹಿಂದೆ ಬಿಜೆಪಿ ಕಾಂಗ್ರೆಸ್ನ 55 ಜನರ ಪಟ್ಟಿ ರೆಡಿ ಮಾಡಿತ್ತು ಕಾಂಗ್ರೆಸ್ ಶಾಸಕರ ಆಪರೇಷನ್ ಪಟ್ಟಿಯಲ್ಲಿ ನನ್ನ ಹೆಸರು ಇತ್ತು ಬಿಜೆಪಿ ಪಕ್ಷಕ್ಕೆ ಸೆಳೆಯುವುದು, ಬರೋಲ್ಲ ಅಂದರೆ ಹಿಡಿ ದಾಳಿ ಅಂಜಿಕೆ ಹಾಕುವುದು ಮಾಡಿದ್ದರು. ನಾ ಬಿಜೆಪಿಗರಿಗೆ ಹೇಳಿದ್ದೇನೆ ನನ್ನ ಮೇಲೆ ಇಡಿ ಐಟಿ ದಾಳಿ ಮಾಡಿದರು ಅಂಜಿಕೆ ಇಲ್ಲ ಎಂದು ಸಚಿವ ಕಾಶಪ್ಪನವರ ಬಾಗಲಕೋಟೆಯಲ್ಲಿ ಹೇಳಿದರು.1