ಆರ್ ಬಿಐ ಸ್ಥಾಪನೆಗೆ ಡಾ.ಬಿ.ಆರ್ ಅಂಬೇಡ್ಕರ್ ರವರು ಮುಖ್ಯ ಕಾರಣ.. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ರವರ ಆರ್ಥಿಕ ಚಿಂತನೆ ಕಾರ್ಯಕ್ರಮ ನಂಜನಗೂಡು: ಏಪ್ರಿಲ್ 1 ರಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಯಾದ ದಿನವಾಗಿದ್ದು, ಈ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ರವರು ಆರ್‌ಬಿಐ ಸ್ಥಾಪನೆಗೆ ನೀಡಿರುವ ಕೊಡುಗೆಗಳ ಸ್ಮರಣಾರ್ಥವಾಗಿ ಅರ್ಥಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಸಹಭಾಗಿತ್ವದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಆರ್ಥಿಕ ಚಿಂತನೆಗಳು ಎಂಬ ವಿಷಯದ ಬಗ್ಗೆ ನಂಜನಗೂಡು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ವಿ. ಷಣ್ಮುಗಂ ಮಾತನಾಡಿ, ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಂವಿಧಾನ ಶಿಲ್ಪಿ ಎಂಬ ಗುರುತಿನ ಹೊರತಾಗಿಯೂ, ಅವರು ಒಬ್ಬ ಶ್ರೇಷ್ಠ ಅರ್ಥಶಾಸ್ತ್ರಜ್ಞರಾಗಿದ್ದರು. 1926 ರಲ್ಲಿ ಬ್ರಿಟಿಷ್ ಸರ್ಕಾರವು ಭಾರತದ ಹಣಕಾಸು ವ್ಯವಸ್ಥೆಯನ್ನು ಸುಧಾರಿಸಲು ಹಿಲ್ಟನ್ ಯಂಗ್ ಆಯೋಗವನ್ನು (Hilton Young Commission) ನೇಮಿಸಿತ್ತು. ಈ ಆಯೋಗದ ಮುಂದೆ ಅಂಬೇಡ್ಕರ್ ಅವರು ನೀಡಿದ ಮಾರ್ಗಸೂಚಿಗಳು ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಆರ್‌ಬಿಐ ಸ್ಥಾಪನೆಯ ಪರಿಕಲ್ಪನೆ ಸಿದ್ಧವಾಯಿತು. ಅಂಬೇಡ್ಕರ್ ಅವರು ಬರೆದ "ದಿ ಪ್ರಾಬ್ಲಮ್ ಆಫ್ ದಿ ರೂಪಿ, ಇಟ್ಸ್ ಒರಿಜಿನ್ ಅಂಡ್ ಇಟ್ಸ್ ಸೊಲ್ಯೂಷನ್" (The Problem of the Rupee: Its Origin and Its Solution) ಎಂಬ ಸಂಶೋಧನಾ ಪ್ರಬಂಧವು ಆರ್‌ಬಿಐ ರಚನೆಗೆ ಭದ್ರ ಬುನಾದಿ ಹಾಕಿಕೊಟ್ಟಿತು. ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದರು. ದೇಶದ ಹಣದುಬ್ಬರ ನಿಯಂತ್ರಣ ಮತ್ತು ಕರೆನ್ಸಿ ನಿರ್ವಹಣೆಗಾಗಿ ಕೇಂದ್ರೀಯ ಬ್ಯಾಂಕ್‌ನ ಅವಶ್ಯಕತೆಯನ್ನು ಅವರು ಬಲವಾಗಿ ಪ್ರತಿಪಾದಿಸಿದ್ದರು. ಅಂಬೇಡ್ಕರ್ ಅವರು ನೀಡಿದ ವೈಜ್ಞಾನಿಕ ತತ್ವಗಳ ಆಧಾರದ ಮೇಲೆ ಏಪ್ರಿಲ್ 1, 1935 ರಂದು ಭಾರತೀಯ ರಿಸರ್ವ್ ಬ್ಯಾಂಕ್ ಕಾರ್ಯ ಆರಂಭ ಮಾಡಿತು. ಇವುಗಳ ಜೊತೆಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಹಣಕಾಸು ನೀತಿ, ರಾಜ್ಯಕೋಶ ನೀತಿ, ಕೃಷಿ ರಾಷ್ಟ್ರೀಕರಣ, ಭಾರತದಲ್ಲಿ ಸಣ್ಣ ಭೂ ಹಿಡುವಳಿಗಳ ಒಗ್ಗೂಡಿಸುವಿಕೆ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿರುವ ಪರಿಹಾರಗಳ ಕುರಿತು ಉಪನ್ಯಾಸ ನೀಡಿದರು. ಒಂದು ವೇಳೆ ಬಾಬಾ ಸಾಹೇಬ್ ಅಂಬೇಡ್ಕರ್ ಬದುಕಿರುವಾಗಲೇ ಅರ್ಥಶಾಸ್ತ್ರಕ್ಕೆ ನೊಬೆಲ್ ಬಹುಮಾನವನ್ನು ನೀಡುವಂತಿದ್ದರೆ ಎರಡು ಮೂರು ನೊಬೆಲ್ ಗಳು ಅವರಿಗೆ ಬರುತ್ತಿದ್ದವು ಎಂದು ಪ್ರತಿಪಾದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಕೆ ಕೆಂಪೇಗೌಡ ಮಾತನಾಡಿ, ಡಾ.ಬಿ.ಆರ್ ಅಂಬೇಡ್ಕರ್ ರವರು ಕೇವಲ ಸಂವಿಧಾನ ಬರೆಯುವುದರ ಜೊತೆಗೆ ಅವರೊಬ್ಬ ಉತ್ತಮ ಆರ್ಥಿಕ ಚಿಂತಕರಾಗಿದ್ದರು. ಅಂಬೇಡ್ಕರ್ ಅವರ ಆರ್ಥಿಕ ಚಿಂತನೆಗಳು ಮತ್ತು ಅವರ ಕೊಡುಗೆಗಳನ್ನು ಪ್ರತಿಯೊಬ್ಬರು ಸ್ಮರಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ. ಓ.ಜಿ ಬಸವಣ್ಣಗೌಡ, ಡಾ. ಆರ್. ಶ್ರೀನೇ ನಾಯಕ್, ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕರಾದ ಡಾ. ಡಿ.ಎಸ್. ಜಗದೀಶ್ ಡಿ.ಎಸ್, ಉಪನ್ಯಾಸಕರಾದ ಡಾ.ಬಿಎಸ್ ಸುಮಿತ್ರ, ವಸಂತ್ ಕುಮಾರ್ ಸೇರಿದಂತೆ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು.

- ನಂಜನಗೂಡು: ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಜಿಂಕೆ ಸಾವನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ನೇರಳೆ ಗೇಟ್ ಬಳಿ ನಡೆದಿದೆ. ನಂಜನಗೂಡು ಮತ್ತು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನೇರಳೆ ಗೇಟ್ ಬಳಿ ಜಿಂಕೆಯೊಂದು ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಯು ಸ್ಥಳದಲ್ಲಿಯೇ ಮೃತಪಟ್ಟಿದೆ. ಅಪರಿಚಿತ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ನೇರಳೆ ಗೇಟ್ ಬಳಿ ಜಿಂಕೆಗಳು ಹೆಚ್ಚಾಗಿ ರಸ್ತೆ ಅಪಘಾತದಿಂದ ಸಾವನ್ನಪ್ಪಿರುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಈ ಸ್ಥಳದಲ್ಲಿ ನಾಮಫಲಕ ಮತ್ತು ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ದಾಟುವ ವೇಳೆ ಈ ಘಟನೆ ನಡೆದಿದ್ದು, ಆ ಸ್ಥಳದಲ್ಲಿ ನಾಮಫಲಕ ಅಳವಡಿಸುವಂತೆ ವರದಿ ಸಲ್ಲಿಸುತ್ತೇನೆ ಎಂದು ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ತಿಳಿಸಿದ್ದಾರೆ.1
- *ಭಾರತ ನಲ್ಲಿ ವೈರಲ್*1
- EID HARMONY GATHERING HELD @ MILAN FUNCTION HALL IN MYSURU ORGANISED BY JAMAT E ISLAMI HIND MYSURU #kvnews1
- ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಯಾಗಿದ್ದು ಡಿಕ್ಕಿಯಾದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನೇರಳೆ ಗೇಟ್ ಬಳಿ ಸಂಭವಿಸಿದೆ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿನೀಡಿ ಪರಿಶೀಲನೆ ನೆಡೆಸಿದ್ದಾರೆ ಅಲ್ಲದೆ ಇತ್ತೀಚೆಗೆ ನೇರಳೆ ಗ್ರಾಮದ ಗೇಟ್ ಬಳಿ ಜಿಂಕೆಗಳು ಅಪಘಾತದಿಂದ ಹೆಚ್ಚು ಬಲಿಯಾಗುತ್ತಿದ್ದು ಈ ಜಾಗದಲ್ಲಿ ನಾಮಫಲಕ ಹಾಗೂ ಸ್ಪೀಡ್ ಬ್ರೇಕರ್ ಹಾಕುವಂತೆ ಸ್ಥಳೀಯು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.1
- ನಂತರ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯದರ್ಶಿ ಮುರುಡೇಶ್ವರ ಸ್ವಾಮಿ ಮಾತನಾಡಿ ನಡೆದಾಡುವ ದೇವರು ಎಂದೇ ಖ್ಯಾತಿರಾಗಿದ್ದ ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನ ದಂದು ನಾವು ಅವರ ಆದರ್ಶ ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ ಎಂದು ತಿಳಿಸಿದರು. ಮಹಾನ್ ಚೇತನ ಕಟ್ಟಿರುವ ಸಿದ್ದಗಂಗಾ ಮಠದಲ್ಲಿ ಇಂದಿಗೂ ಸಹ 10,000ಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಪಡೆಯುತ್ತಿದ್ದಾರೆ. ಅವರು ಹಾಕಿ ಕೊಟ್ಟಿರುವ ಕೊಟ್ಟಿರುವಂತಹ ಸನ್ಮಾ ರ್ಗದಲ್ಲಿ ನಾವೆಲ್ಲರೂ ಕೂಡ ನಡೆ ಯುತ್ತಿದ್ದೇವೆ. ಜತೆಗೆ ಅವರ ಮಾರ್ಗದರ್ಶನಗಳನ್ನ ನಮ್ಮ ಮಕ್ಕಳಲ್ಲಿ ನಾವು ಅಳವಡಿಸಿಕೊಳ್ಳಬೇಕು ಎಂದರು. ಮಜ್ಜಿಗೆ ಪಾನಕ ವಿತರಣೆ ಮಾಡಲಾಯಿತು. ಸಾಹಿತಿಗಳಾದ ದಿವ್ಯಾನಂದ ಮೂರ್ತಿ, ವೀರಶೈವ ಮಹಾಸಭ ತಾಲೂಕು ಖಚಿ ಜಗದೀಶ್, ಶಿವಕುಮಾರ್ ಸ್ವಾಮಿ, ರವಿ, ಅಜ್ಜಿಪುರ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್, ಗ್ರಾಮ ಲೆಕ್ಕಾಧಿಕಾರಿ ವಿನೋದ್, ವೀರಭದ್ರ ಸ್ವಾಮಿ, ಮಹದೇವಪ್ಪ, ಸೂಳೇರಿ ಪಾಳ್ಯ ಗ್ರಾ ಪಂ ಮಾಜಿ ಅಧ್ಯಕ್ಷೆ ಸುಧಾ, ಕೃಷ್ಣಮೂರ್ತಿ, ಜಯಣ್ಣ, ಅಂಗಿರಾಚಯ್ಯ ಉಪಸ್ಥಿತರಿದ್ದರು.4
- ಮಳವಳ್ಳಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಚಾಲನೆ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾ ಅಲ್ಪ ಸಂಖ್ಯಾತರ ಇಲಾಖೆ ಅಧಿಕಾರಿ ಮಧುಶ್ರೀ ಚಾಲನೆ * ಉಚಿತ ತರಬೇತಿ ಆರಂಭವಾಗಿದೆ- ಅಸಕ್ತರು ಕೂಡಲೇ ನೋಂದಣಿ ಮಾಡಿಸಿಕೊಳ್ಳುವಂತೆ ಕರೆ ಮಳವಳ್ಳಿ:ಸರ್ಕಾರಗಳು ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕರಿಗೆ ಯುವತಿಯರಿಗೆ ಸ್ವಾವಲಂಬನೆ ಜೀವನ ರೂಪಿಸುವುದಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ತರಬೇತಿ ಸಂಸ್ಥೆ ವತಿಯಿಂದ ಉಚಿತವಾಗಿ ಡ್ರೈವಿಂಗ್ ತರಬೇತಿಯನ್ನು ನೀಡಲಾಗುತ್ತಿದ್ದು ನಿರುದ್ಯೋಗಿ ಯುವತಿ ಯುವಕರು ಇದರ ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕವಾಗಿ ಪ್ರಗತಿ ಹೊಂದುವAತೆ ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಮಧುಶ್ರೀ ಹೇಳಿದರು. ಪಟ್ಟಣದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ನಿರುದ್ಯೋಗಿ ಯುವಕ ಯುವತಿಯರಿಗೆ ಚಾಲನೆ ತರಬೇತಿ ಕಾರ್ಯಗಾರಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಅಲ್ಪಸಂಖ್ಯಾತರ ಇಲಾಖೆ ನಿರುದ್ಯೋಗಿ ಯುವಕರಿಗೆ ಯುವತಿಯರಿಗೆ ಸ್ವಾವಲಂಬಿ ಜೀವನ ರೂಪಿಸಲು ಈ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು,ಪಲಾನುಭವಿಗಳು ಇದರ ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಅವರು ಕರೆ ನೀಡಿದರು ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಯುವತಿಯರು ಸಹ ಎಲ್ಲಾ ವೃತ್ತಿಯಲ್ಲಿ ಮುಂಚೂಣಿಯಲ್ಲಿದ್ದು, ನಗರ ಪ್ರದೇಶದಲ್ಲಿ ಮಹಿಳೆಯರು ಆಟೋ ಕಾರು ಬಸ್ ಚಾಲನೆ ಮಾಡುತ್ತಿದ್ದಾರೆ ಅವರಂತೆ ನೀವುಗಳು ಸಹ ಸರ್ಕಾರದ ಸೌಲಭ್ಯವನ್ನು ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸುವಂತೆ ಅವರು ಈ ಸಂದರ್ಬದಲ್ಲಿ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಜಗದೀಶ್ ಮಾತನಾಡಿ ಇಡೀ ದೇಶದಲ್ಲಿ ಮಳವಳ್ಳಿಯ ರಾಜ್ಯ ರಸ್ತೆ ಸಾರಿಗೆ ತರಬೇತಿ ಸಂಸ್ಥೆಯು ಮಾದರಿಯಾಗಿ ಯುವಕ ಯುವತಿಯರಿಗೆ ಚಾಲನೆ ತರಬೇತಿ ನೀಡುತ್ತಿದೆ ,ಇಲ್ಲಿ ತರಬೇತಿ ಪಡೆದವರು ಇಡೀ ದೇಶದ ಯಾವ ಭಾಗದಲ್ಲಾದರೂ, ಇಡೀ ವಿಶ್ವದ ಯಾವ ದೇಶದಲ್ಲಾದರೂ ಚಾಲನೆ ವೃತ್ತಿಯನ್ನು ಯಶಸ್ವಿಯಾಗಿ ಮಾಡಬಹುದಾಗಿದೆ. ಪ್ರಸ್ತುತವಾಗಿ ಚಾಲನೆ ವೃತ್ತಿಗೆ ಬಹಳ ಬೇಡಿಕೆ ಇದೆ.ಯುವಕ ,ಯುವತಿಯರು ಇಲ್ಲಿ ನೀಡುವ ತರಬೇತಿಯನ್ನು ಉತ್ತಮವಾಗಿ ಕಲಿತು, ತಮ್ಮ ವೃತ್ತಿಯನ್ನು ಯಶಸ್ವಿಯಾಗಿ ಮಾಡುವುದರೊಂದಿಗೆ ಇತರರಿಗೂ ಸಹ ಈ ವೃತ್ತಿ ತರಬೇತಿಯ ಸೌಲಭ್ಯದ ಮಾಹಿತಿ ನೀಡಿ ಅವರನ್ನು ತರಬೇತಿಗೆ ಸೇರಿಸಿ ತಾವು, ತಮ್ಮವರು, ತಮ್ಮ ಸುತ್ತಮುತ್ತಲಿನ ಜನರು ಸಹ ಆರ್ಥಿಕವಾಗಿ ಪ್ರಗತಿ ಹೊಂದಲು ನೀವೆಲ್ಲರೂ ಸಮಾಜಮುಖಿಯಾಗಿ ಕೆಲಸ ಮಾಡುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಎ.ಎಸ್.ಪ್ರಭಾಕರ್,ಚಾಲನಾ ತರಬೇತಿ ಸಂಸ್ಥೆಙ ಸಂತೋಷ್,ಇತರೆ ಸಿಬ್ಬಂದಿಗಳು ,ನಿರುದ್ಯೋಗಿ ಯುವಕರು,ಯುವತಿಯರು ಉಪಸ್ಥಿತರಿದ್ದರು.1
- ಮುತ್ತಶೆಟ್ಟಿಯೂರಿನಲ್ಲಿ ಮೂರು ಜಾನುವಾರುಗಳ ಅನುಮಾನಾಸ್ಪದ ಸಾವು ಹನೂರು ತಾಲೂಕಿನ ರಾಮಾಪುರ ಸಮೀಪದ ಮುತ್ತಶೆಟ್ಟಿಯೂರು ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಮೂರು ಜಾನುವಾರುಗಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಗ್ರಾಮದ ರಮೇಶ್ ಕೃಷ್ಣಪ್ಪ ಅವರಿಗೆ ಸೇರಿದ ಹಸುಗಳನ್ನು ಜಮೀನುಗಳ ಸಮೀಪದ ಬಯಲು ಪ್ರದೇಶಕ್ಕೆ ಮೇಯಲು ಬಿಡಲಾಗಿತ್ತು. ದಿಡೀರ್‌ವಾಗಿ ಕುಸಿದ ಹಸುಗಳು ಸ್ಥಳದಲ್ಲೇ ಮೃತಪಟ್ಟಿವೆ ಸ್ಥಳೀಯ ರೈತರು ತಕ್ಷಣ ನೀರು ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಫಲಕಾರಿಯಾಗಿರಲಿಲ್ಲ. ಸ್ಥಳಕ್ಕೆ ಆಗಮಿಸಿದ ಪಶು ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ಸಿದ್ದರಾಜು ಪರಿಶೀಲನೆ ನಡೆಸಿ, ಮಾತನಾಡಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ವಿಷಯುಕ್ತ ಆಹಾರ ತಿಂದಿರಬಹುದು. ಎಂದಿದ್ದಾರೆ,1
- *ಭಾರತ ನಲ್ಲಿ ವೈರಲ್*1