ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಲಕನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದರಕಲ್ ಗ್ರಾಮದಲ್ಲಿ ಅಕ್ರಮವಾಗಿ ಮಠ ನಿರ್ಮಿಸಲಾಗಿದೆ ಎಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ಬಿಡಿಎಸ್‌ಎಸ್) ಜಿಲ್ಲಾಧ್ಯಕ್ಷ ಶಿವಗೇಣಿ ಆರೋಪಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಸ್ವಯಂ ಘೋಷಿತ ಅವಧೂತ ರಾಜಯೋಗಿ ನಾಮದೇವಗೌಡ ವಿರುದ್ಧ ಸಮಗ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಲಿಖಿತ ದೂರು ನೀಡಿದ್ದರೂ, 15 ದಿನ ಕಳೆದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಫೋನ್ ಕರೆಗಳಿಗೆ ಸ್ಪಂದಿಸುತ್ತಿಲ್ಲ ಮತ್ತು ಕಚೇರಿಗೆ ಹಾಜರಾಗುತ್ತಿಲ್ಲ ಎಂದು ಆರೋಪಿಸಿದ ಅವರು, ನಾಮದೇವಗೌಡ ಅವರಿಗೆ ಪ್ರಭಾವಿ ರಾಜಕೀಯ ವ್ಯಕ್ತಿಗಳ ಬೆಂಬಲ ಇರುವುದರಿಂದಲೇ ಆಡಳಿತ ಮಂಡಳಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಮದರಕಲ್ ಗ್ರಾಮದಲ್ಲಿ ಕಳೆದ 8-9 ತಿಂಗಳ ಹಿಂದೆ ನಾಮದೇವಗೌಡ ಮಠ ಸ್ಥಾಪಿಸಿದ ನಂತರ ಜಾತಿ ವೈಷಮ್ಯ ಮತ್ತು ಕಲಹಗಳು ಹೆಚ್ಚಾಗಿವೆ ಎಂದು ಶಿವಗೇಣಿ ತಿಳಿಸಿದ್ದಾರೆ. ಅಲ್ಲದೆ, ಸರ್ವೇ ನಂ.9999ರ 12 ಎಕರೆ ಸರ್ಕಾರಿ ಗೈರಾಣು ಜಾಗವನ್ನು ಒತ್ತುವರಿ ಮಾಡಿ ಮಠ ನಿರ್ಮಿಸಲಾಗಿದೆ ಎಂದು ಆರೋಪಿಸಿರುವ ಅವರು, ಇಲ್ಲಿ ವಾಸಿಸುತ್ತಿದ್ದ ಬಡ ಕುಟುಂಬಗಳನ್ನು ತೆರವುಗೊಳಿಸಲಾಗಿದೆ ಎಂದಿದ್ದಾರೆ. ಈ ಜಾಗವನ್ನು ಸಾರ್ವಜನಿಕ ಬಳಕೆಗೆ ಮತ್ತು ಜಾನುವಾರುಗಳ ಮೇವಿಗಾಗಿ ಮರುಪಡೆಯುವಂತೆ ಹಾಗೂ ಅಕ್ರಮ ಮಠದಲ್ಲಿ ನಡೆಯಲಿರುವ ಜಾತ್ರೆಗೆ ಅನುಮತಿ ನೀಡದಂತೆ ಆಗ್ರಹಿಸಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಶಿವರಾಜಪ್ಪ, ರಾಮಲಿಂಗಪ್ಪ, ಗೋವಿಂದಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಸಾಮಾನುಗಳು ಬಂದಿದ್ದರೂ ರೈತರಿಗೆ ಸಿಗುತ್ತಿಲ್ಲ. ಸಾಮಾನುಗಳು ಬಂದಿದ್ದರೂ ಅವುಗಳನ್ನು ತಲುಪಿಸದ ಪೋಸ್ಟ್ ಆಫೀಸ್ ಅಧಿಕಾರಿಗಳ ವಿರುದ್ಧ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.1
- ಯಾದಗಿರಿ ಜಿಲ್ಲೆಯಾದ್ಯಂತ ಮನೆಗಳು, ದ್ವಿಚಕ್ರ ವಾಹನಗಳು, ದನ-ಕರುಗಳು ಹಾಗೂ ಕುರಿಗಳ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಜರುಗಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಬೀಗ ಹಾಕಿದ ಮನೆಗಳು, ಬೈಕ್‌ಗಳು ಹಾಗೂ ಜಾನುವಾರುಗಳ ಕಳ್ಳತನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಾನುವಾರುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಅವುಗಳನ್ನು ಕಳವು ಮಾಡಿ ಮಾರಾಟ ಮಾಡುವ ಸಂಘಟಿತ ಜಾಲ ಕಾರ್ಯನಿರ್ವಹಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ರೈತರು ಮತ್ತು ಸಾರ್ವಜನಿಕರು ಭಯದ ನಡುವೆಯೇ ಜೀವನ ನಡೆಸುವಂತಾಗಿದೆ. ಕಳ್ಳತನ ಪ್ರಕರಣಗಳಿಗೆ ಶಾಶ್ವತವಾಗಿ ಕಡಿವಾಣ ಹಾಕಲು ಅನುಭವಿ ಹಾಗೂ ನುರಿತ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ, ಸಂಘಟಿತ ಕಳ್ಳರ ಜಾಲವನ್ನು ಬೇರು ಸಮೇತ ಪತ್ತೆಹಚ್ಚಿ, ಆರೋಪಿಗಳನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಬಳಿಚಕ್ರ ಗ್ರಾಮದಲ್ಲಿ ಮಧ್ಯರಾತ್ರಿ ಸುಮಾರು 3 ಗಂಟೆಯವರೆಗೆ ಜೀವದ ಹಂಗು ತೊರೆದು ಬೈಕ್ ಕಳ್ಳತನಕ್ಕೆ ಬಂದಿದ್ದ ಒಬ್ಬ ಕಳ್ಳನನ್ನು ಗ್ರಾಮಸ್ಥರು ಧೈರ್ಯದಿಂದ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆಯನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ವೇಳೆ ಇತರ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗಾಗಿ ಸಮಗ್ರ ತನಿಖೆ ನಡೆಸಿ ಈ ಕೃತ್ಯದ ಹಿಂದಿರುವ ಜಾಲವನ್ನು ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆಯ ಕೆಳಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಈ ಮನವಿಯ ಪ್ರತಿಯನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರು, ಕಲಬುರಗಿ ಪ್ರಾದೇಶಿಕ ಆಯುಕ್ತರು ಹಾಗೂ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಮಾಹಿತಿಗಾಗಿ ಮತ್ತು ಅಗತ್ಯ ಕ್ರಮಕ್ಕಾಗಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ವೀರಭದ್ರಪ್ಪ, ಪರಸಪ್ಪ, ಈರಪ್ಪಗೌಡ, ಮಲ್ಲಿಕಾರ್ಜುನ, ಸಾಯಿಬಣ್ಣ, ಗನ್ ಶಾಮ್, ಆಕಾಶ, ಅಕ್ರಮ, ನಯಿಮ್, ಅಜೀಜ್, ವೆಂಕಟೇಶ, ಅಯ್ಯಣ್ಣ, ಬನ್ನಪ್ಪ ಶರಣಪ್ಪ, ಗಣೇಶ್, ಸಲಿಂ, ಮಹೇಶ್, ವಿನೋದ, ಮೌನೇಶ, ಅಜಯ, ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.1
- ಯಾದಗಿರಿ ಜಿಲ್ಲೆಯಲ್ಲಿ ಜನರ ನಿದ್ದೆಗೆಡಿಸಿದ್ದ ಒಬ್ಬ ಕಳ್ಳ ಕೊನೆಗೂ ಪೊಲೀಸ್ ವಶಕ್ಕೆ ಬಂದಿದ್ದಾನಾದರೂ, ಇನ್ನುಳಿದ ಹಲವು ಕಳ್ಳತನ ಪ್ರಕರಣಗಳ ಆರೋಪಿಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಳ್ಳತನದ ಪ್ರಕರಣಗಳಿಗೆ ತಕ್ಷಣವೇ ಕಡಿವಾಣ ಹಾಕಲು ವಿಶೇಷ ತನಿಖಾ ತಂಡವನ್ನು (SIT) ರಚಿಸುವಂತೆ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುತ್ನಾಳ್ ಅವರು ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್ಪಿ) ಮನವಿ ಮಾಡಿದ್ದಾರೆ. ಸಾರ್ವಜನಿಕರ ಭದ್ರತೆ ಹಾಗೂ ರೈತರ ಆಸ್ತಿಯ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕು ಎಂದು ಒತ್ತಾಯಿಸಿರುವ ಅವರು, ಉಳಿದ ಎಲ್ಲಾ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಸಂಘಟಿತ ಕಳ್ಳರ ಜಾಲವನ್ನು ಬೇರು ಸಮೇತ ಬಯಲಿಗೆಳೆದು ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಹಾಗೂ ರೈತರ ಆಸ್ತಿಗೆ ಶಾಶ್ವತ ರಕ್ಷಣೆ ಒದಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.1
- ಗುರುಮಠಕಲ್ ತಾಲೂಕಿನ ನೀಲಹಳ್ಳಿ ಮತ್ತು ಕಿಲ್ಲನಕೇರಾ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಅವರು, ಈ ಹಿಂದೆಯೇ ಅಧಿಕಾರಿಗಳು ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಈ ಕುರಿತು ಎಚ್ಚರಿಕೆ ನೀಡಿರುವ ಅವರು, ಬೇಡಿಕೆಗಳು ಈಡೇರದಿದ್ದಲ್ಲಿ ಜುಲೈ 16ರಂದು ಬೆಳಿಗ್ಗೆ 9 ಗಂಟೆಗೆ ಕಿಲ್ಲನಕೇರಾ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಈ ವೇಳೆ ಸ್ಥಳೀಯ ಗ್ರಾಮಸ್ಥರು ಮತ್ತು ಮಹಿಳೆಯರು ಉಪಸ್ಥಿತರಿದ್ದರು.4
- ಕಲಬುರಗಿ ಜಿಲ್ಲೆಯ ಸೇಡಂ ಇತಿಹಾಸದಲ್ಲೇ ಹೊಸ ಮೈಲಿಗಲ್ಲನ್ನು ಸ್ಥಾಪಿಸಲು ಪಿಎಸ್ಐ ಉಪೇಂದ್ರಕುಮಾರ ಅವರು ಮುಂದಾಗಿದ್ದು, ಪಟ್ಟಣದ ಗಲ್ಲಿ ಗಲ್ಲಿಯಲ್ಲೂ ಸಿಸಿ ಕ್ಯಾಮರಾ ಅಳವಡಿಸುವ ಕಾರ್ಯವು ಅತ್ಯಂತ ಜೋರಾಗಿ ನಡೆದಿದೆ. ಪಟ್ಟಣದ ಮುಖ್ಯ ರಸ್ತೆಗಳು ಸೇರಿದಂತೆ ರೆಹಮತನಗರ, ವೆಂಕಟೇಶ ನಗರ, ವಿದ್ಯಾನಗರ, ದೊಡ್ಡ ಅಗಸಿ ಹಾಗೂ ಸಣ್ಣ ಅಗಸಿ ಪ್ರದೇಶಗಳಲ್ಲಿ ಈ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಕಳ್ಳತನ, ಅಪಘಾತ, ದೌರ್ಜನ್ಯ ಹಾಗೂ ಸಂಚಾರದ ಮೇಲೆ ಹದ್ದಿನ ಕಣ್ಣಿಡಲು ಪೊಲೀಸರು ಸಜ್ಜಾಗುತ್ತಿದ್ದು, ಇದಕ್ಕಾಗಿ ಪಟ್ಟಣದಾದ್ಯಂತ ಒಟ್ಟು 80 ಕ್ಕೂ ಅಧಿಕ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಸೇಡಂ ಇತಿಹಾಸದಲ್ಲೇ ಇದೊಂದು ಹೊಸ ಪ್ರಯೋಗವಾಗಿದ್ದು, ಪ್ರತಿಯೊಂದು ಗಲ್ಲಿ ಗಲ್ಲಿಯಲ್ಲೂ ಸಿಸಿ ಕ್ಯಾಮರಾ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.1
- ರಾಯಚೂರಿನ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕ್ರಾಂತಿವೀರ ಬೆಳವಡಿ (ವಡ್ಡರ) ಯಲ್ಲಣ್ಣ ಸಂಘದ ಜಿಲ್ಲಾಧ್ಯಕ್ಷ ಈರಣ್ಣ ಅವರು ಮಾಹಿತಿ ನೀಡಿದ್ದು, ಜುಲೈ 16ರಂದು ಸಾರ್ವಜನಿಕ ಗ್ರಂಥಾಲಯಗಳಿಗೆ ಸ್ವಾತಂತ್ರ್ಯ ಹೋರಾಟಗಾರ ಶಬ್ದವೇದಿ ಬೆಳವಡಿ ವಡ್ಡರ ಯಲ್ಲಣ್ಣ ಅವರ ಜೀವನ ಚರಿತ್ರೆ ಪುಸ್ತಕಗಳನ್ನು ದೇಣಿಗೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಯುವಜನರಲ್ಲಿ ಇತಿಹಾಸದ ಅರಿವು ಮೂಡಿಸಿ, ದೇಶಭಕ್ತಿಯ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಂಘದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ ಹಾಗೂ ಗದಗ ಜಿಲ್ಲೆಗಳ ಎಲ್ಲಾ ತಾಲ್ಲೂಕು ಸಾರ್ವಜನಿಕ ಗ್ರಂಥಾಲಯಗಳಿಗೆ ಈ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುವುದು. ಸಂಗೊಳ್ಳಿ ರಾಯಣ್ಣರ ಸೈನ್ಯದ ಪ್ರಮುಖ ನಾಯಕರಾಗಿದ್ದ ಯಲ್ಲಣ್ಣ ಅವರ ಜೀವನ, ದೇಶಭಕ್ತಿ ಮತ್ತು ತ್ಯಾಗವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶ ಇದರದ್ದಾಗಿದೆ. ಶಬ್ದವೇದಿ ಬೆಳವಡಿ ವಡ್ಡರ ಯಲ್ಲಣ್ಣ ಅವರ ಸ್ವಾತಂತ್ರ್ಯ ಹೋರಾಟದ ಕೊಡುಗೆಯನ್ನು ಸರ್ಕಾರ ಅಧಿಕೃತವಾಗಿ ಗುರುತಿಸಬೇಕು, ಸರ್ಕಾರಿ ಕಾರ್ಯಕ್ರಮಗಳಲ್ಲಿ ಸೂಕ್ತ ಗೌರವ ನೀಡಬೇಕು ಹಾಗೂ ಅವರ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಘವು ಇದೇ ವೇಳೆ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಅಧ್ಯಕ್ಷ ತಿಮ್ಮಪ್ಪ, ನಗರಾಧ್ಯಕ್ಷ ಸಣ್ಣ ತಿಮ್ಮಾರೆಡ್ಡಿ, ಗೌರವಾಧ್ಯಕ್ಷ ಈರಣ್ಣ, ಸದಸ್ಯರಾದ ರಾಮಾಂಜಿನಯ್ಯ ಹಾಗೂ ತಿಮ್ಮಯ್ಯ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.1
- ರಾಯಚೂರು ತಾಲೂಕಿನ ಹಂಚಿನಾಳ ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಕೇವಲ 10 ರೂಪಾಯಿ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಮಹೇಶ್ ಮತ್ತು ನಾಗರಾಜ್ ಎಂಬುವರು ಪೆಟ್ರೋಲ್ ಹಾಕಿಸಿಕೊಳ್ಳಲು ಹೋದಾಗ ಈ ಗಲಾಟೆ ಆರಂಭವಾಗಿತ್ತು. ಅವರು ಬಂಕ್‌ನಲ್ಲಿ 110 ರೂಪಾಯಿ ಪೆಟ್ರೋಲ್ ಹಾಕಿಸಿಕೊಂಡು 100 ರೂಪಾಯಿ ಕೊಟ್ಟಿದ್ದರು. ಈ ಕೇವಲ 10 ರೂಪಾಯಿ ಹಣದ ಜಗಳವೇ ದೊಡ್ಡದಾಗಿ ಕೊಲೆಯಲ್ಲಿ ಮುಕ್ತಾಯವಾಗಿದೆ. ಮಹೇಶ್ ಎಂಬುವರ ಮೇಲೆ ಪೆಟ್ರೋಲ್ ಬಂಕ್ ಸಿಬ್ಬಂದಿ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಲು ಹೋದ ಮೇಘನಾಥ್ ಎಂಬ ಯುವಕನ ಮೇಲೆ ಬಂಕ್ ಸಿಬ್ಬಂದಿ ಸೇರಿದಂತೆ 13 ಜನರ ಗುಂಪು ಏಕಾಏಕಿ ಭೀಕರವಾಗಿ ಹಲ್ಲೆ ನಡೆಸಿದೆ. ಯುವಕರು ಕಟ್ಟಿಗೆಯಿಂದ ಮೇಘನಾಥ್ ತಲೆಗೆ ಬಲವಾಗಿ ಹೊಡೆದಿದ್ದು, ಅವರು ನೆಲದ ಮೇಲೆ ಬಿದ್ದರೂ ಬಿಡದೆ ಕ್ರೂರವಾಗಿ ಥಳಿಸಿದ್ದಾರೆ. ಈ ಭೀಕರ ಹಲ್ಲೆಯ ಸಿಸಿಟಿವಿ ದೃಶ್ಯಾವಳಿ ಹಾಗೂ ವಿಡಿಯೋ ಸದ್ಯ ಲಭ್ಯವಾಗಿದೆ. ಈ ಇಡೀ ಘಟನೆಗೆ ಸಂಬಂಧಿಸಿದಂತೆ ಸದ್ಯ ಇಡಕನೂರು ಪೊಲೀಸ್ ಠಾಣೆಯಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಸೇರಿದಂತೆ ಒಟ್ಟು 13 ಜನರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.1