ಗ್ರಾಮೀಣ ಕ್ಷೇತ್ರದ ಎಲ್ಲಾ ಸಮುದಾಯಗಳ ಅನುಕೂಲಕ್ಕಾಗಿ ಸಮುದಾಯ ಭವನಗಳ ನಿರ್ಮಾಣ: ಬಸವನಗೌಡ ದದ್ದಲ್ ಮಾನ್ವಿ: ತಾಲೂಕಿನ ಕುರ್ಡಿ ಗ್ರಾಮದ ಶ್ರೀ ಚನ್ನವೀರೇಶ್ವರ ಮಠದ ಆವರಣದಲ್ಲಿ ಕೆಕೆಆರ್‌ಡಿಬಿ ಮೈಕ್ರೋ ಯೋಜನೆಯಡಿ ಲೋಕೋಪಯೋಗಿ ಇಲಾಖೆಯಿಂದ ₹23 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಶ್ರೀ ಚನ್ನವೀರೇಶ್ವರ ಸಮುದಾಯ ಭವನವನ್ನು ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಎಲ್ಲಾ ಸಮುದಾಯಗಳ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಿಧ ಶುಭ ಸಮಾರಂಭಗಳನ್ನು ನಡೆಸಲು ಅನುಕೂಲವಾಗುವಂತೆ ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದೆ. ಕುರ್ಡಿ ಗ್ರಾಮಸ್ಥರ ಬೇಡಿಕೆಯಂತೆ ಈ ಸಮುದಾಯ ಭವನ ನಿರ್ಮಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ತಾಲೂಕಿನಲ್ಲಿ ಸಮರ್ಪಕವಾಗಿ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಬೆಳೆದಿರುವ ಹತ್ತಿ, ಜೋಳ, ಕಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿರುವ ಕುರಿತು ಸರ್ಕಾರದಿಂದ ಬೆಳೆ ನಷ್ಟದ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಗಣೇಶ ಚತುರ್ಥಿ ಹಬ್ಬವನ್ನು ಎಲ್ಲ ಸಮುದಾಯದವರು ಸೌಹಾರ್ದತೆ ಹಾಗೂ ಶಾಂತಿಯುತವಾಗಿ ಆಚರಿಸಬೇಕು ಎಂದು ಶಾಸಕ ಬಸವನಗೌಡ ದದ್ದಲ್ ಕರೆ ನೀಡಿದರು. ಬಿಚ್ಚಲಿ ಸಂಸ್ಥಾನ ಮಠದ ಶ್ರೀ ವೀರತಪಸ್ವಿ ವೀರಭದ್ರಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಜನರಲ್ಲಿ ಭಕ್ತಿ, ಭಾವನೆ ಹಾಗೂ ಉತ್ತಮ ಗುಣಗಳು ಕ್ಷೀಣಿಸಿದಾಗ ಭಗವಂತನು ಜನರನ್ನು ಪರೀಕ್ಷಿಸುವ ಸಂದರ್ಭಗಳು ಎದುರಾಗುತ್ತವೆ. ಪ್ರತಿಯೊಬ್ಬರೂ ಭಕ್ತಿಯಿಂದ ಭಗವಂತನನ್ನು ಪ್ರಾರ್ಥಿಸಿದಲ್ಲಿ ಸಮೃದ್ಧ ಮಳೆಯಾಗಿ ಉತ್ತಮ ಪರಿಸ್ಥಿತಿ ನಿರ್ಮಾಣವಾಗಲಿ ಎಂದು ಆಶಿಸಿದರು. ಈ ಕಾರ್ಯಕ್ರಮದಲ್ಲಿ ಪಂಪಾಪತಿ ಯಳಗುಂಚಿಮಠ, ಮಹಾಂತಯ್ಯಸ್ವಾಮಿ ಹಿರೇಮಠ, ನಾಗೇಂದ್ರಪ್ಪ ಮಟಮಾರಿ, ಪಂಚಯ್ಯ, ಗಡಿವಡೀಕೇಶ್ವರ ಮಠದ ಪಂಪಾಪತಿ ಶ್ರೀಗಳು, ಶರಣಬಸವ ತಾತಾ, ಲೋಕೋಪಯೋಗಿ ಇಲಾಖೆಯ ಕಿರಿಯ ಅಭಿಯಂತರ ಮಕ್ಸುದ್ ಅಲಿ, ಪಿಡಿಒ ಜಗದೀಶಸ್ವಾಮಿ, ಷಣ್ಮುಖಪ್ಪ ವಲ್ಕಂದಿನ್ನಿ, ಈರಣ್ಣ, ನರಸಿಂಹಲು ಉಡುಮಗಲ್, ತಿಮ್ಮಪ್ಪ, ಮೌನೇಶ ನಾಯಕ ದದ್ದಲ್, ಶರಣಪ್ಪದಿನ್ನಿ, ಶ್ರೀನಿವಾಸ, ಮಲ್ಲನಗೌಡ ಸೇರಿದಂತೆ ಗ್ರಾಮದ ಮುಖಂಡರು

- ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಸಿರವಾರ: ಗಣೇಶ ಮೂರ್ತಿ ತರುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಮೃತಪಟ್ಟಿದ್ದ ಸಿರವಾರ ಪಟ್ಟಣದ ಯುವಕ ಪ್ರೇಮ್ ಸುಂದರ್ ಅವರ ಸ್ಮರಣಾರ್ಥದ ಪ್ರಯುಕ್ತ ಸಿರವಾರ ಪಟ್ಟಣದಲ್ಲಿ ಮಂಗಳವಾರ ಸಂಜೆ ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮಾಡುವ ಮೂಲಕ ಅಗಲಿದ ಚೇತನಕ್ಕೆ ನಮನ ಸಲ್ಲಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ವಾಲ್ಮೀಕಿ ವೃತ್ತದ ವರೆಗೆ ನಡೆಯಿತು. ಪ್ರೇಮ್ ಸುಂದರ ಅವರ ಸರಳತೆ, ನಡೆ, ನುಡಿ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿದರು. ಪ್ರೇಮ್ ಸುಂದರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಈ ವೇಳೆ ಪಟ್ಟಣದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.1
- ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿ: ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಪತ್ತು ಸಭೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಸ್ಕಿ ಶಾಸಕ **ಆರ್. ಬಸನಗೌಡ ತುರುವಿಹಾಳ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳನ್ನು ಯುವಜನರಿಗೆ ಪರಿಚಯಿಸುವುದು ಅಗತ್ಯವಾಗಿದ್ದು, ಯುವಕರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಯುವಕರು ಹಾಗೂ ಸಾರ್ವಜನಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.1
- ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ವಿಗ್ರಹಕ್ಕೆ ಆರತಿ ಮಾಡಿದರು. ಲಿಂಗಸುಗೂರು : ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಪರಮ ಪೂಜ್ಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ಚತುರ್ಥಿ ದಿನದ ಹಂಗವಾಗಿ ವಿಘ್ನವಿನಾಶಕ ಶ್ರೀ ವಿನಾಯಕನ ವಿಗ್ರಹಕ್ಕೆ ಸಾಂಪ್ರದಾಯಕ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು.1
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.4
- ಯಾದಗಿರಿ-ರಾಯಚೂರು ಹೆದ್ದಾರಿಯ ಅವೈಜ್ಞಾನಿಕ ಟೋಲ್ ತೆರವಿಗೆ ಉಮೇಶ್ ಕೆ. ಮುನ್ನಾಳ್ ಖಡಕ್ ಆಗ್ರಹ ಯಾದಗಿರಿ-ರಾಯಚೂರು ಹೆದ್ದಾರಿಯ ಆರ್. ಹೊಸಳ್ಳಿ-ನಾಗಲಾಪುರ ಮಧ್ಯದಲ್ಲಿರುವ ಟೋಲ್ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದು, ಸಮರ್ಪಕ ವಿದ್ಯುತ್ ದೀಪಗಳು ಹಾಗೂ ಸುರಕ್ಷತಾ ಸೂಚನೆಗಳ ಕೊರತೆಯಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುನ್ನಾಳ್ ಆರೋಪಿಸಿದರು. ಸ್ಥಳಕ್ಕೆ ಭೇಟಿ ನೀಡಿ ರೈತರು ಹಾಗೂ ವಾಹನ ಸವಾರರೊಂದಿಗೆ ಚರ್ಚಿಸಿದ ಅವರು, ಟೋಲ್ ಅನ್ನು ತಕ್ಷಣ ತೆರವುಗೊಳಿಸಿ ಮುಂದಿನ ಅವಘಡಗಳನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈಗಾಗಲೇ ಹಲವು ಜೀವಗಳು ಬಲಿಯಾಗಿವೆ ಎಂದು ಹೇಳಿದ ಅವರು, ಸರ್ಕಾರ ನಿರ್ಲಕ್ಷ್ಯ ಮುಂದುವರಿಸಿದರೆ ಇದೇ ಸ್ಥಳದಲ್ಲಿ ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.1
- ಗಣೇಶ ಚತುರ್ಥಿ ಅಂಗವಾಗಿ ಕಾರಟಗಿಯಲ್ಲಿ ಸ್ಥಳೀಯ ಕಲಾವಿದರಿಂದ ತತ್ವಪದಗಳು2
- ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.1
- ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಮಸ್ಕಿ: ಪಟ್ಟಣದ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು ಗಣೇಶ ಮೂರ್ತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು, ಗೌರಿ ಗಣೇಶ ಹಬ್ಬವು ಜನರಲ್ಲಿ ಭಕ್ತಿ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಭಾವನೆ ಮೂಡಿಸುವ ಪ್ರಮುಖ ಹಬ್ಬವಾಗಿದೆ. ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು. ಬಸವೇಶ್ವರನಗರದ ಗಣೇಶೋತ್ಸವ ಸಮಿತಿ ವತಿಯಿಂದ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ಭಕ್ತರು ಉಪಸ್ಥಿತರಿದ್ದರು.1