Shuru
Apke Nagar Ki App…
ಕಲಬುರಗಿ ಜಿಲ್ಲೆಯ ಇಂಗನಕಲ್‌ನಲ್ಲಿ ಮಳೆಯ ಅಭಾವದ ಅಂಗವಾಗಿ, ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಾಂಪ್ರದಾಯಿಕ ಹಳ್ಳದ ಜಾತ್ರೆಯನ್ನು ಆಚರಿಸಲಾಗುತ್ತಿದೆ. ಈ ಜಾತ್ರೆಯನ್ನು ಜೈ ಬಜರಂಗಬಲಿ ಕಮಿಟಿ ಟ್ರಸ್ಟ್ ಅಧ್ಯಕ್ಷರಾದ ಪರಮೇಶ್ವರ ಬೆನಕಿನಪಳ್ಳಿ ತೋಟಪ್ಪಗೌಡ ಬಿರಾದಾರ ಅವರ ನೇತೃತ್ವದಲ್ಲಿ ನಡೆಸಲಾಗುತ್ತಿದೆ.
User1523
ಕಲಬುರಗಿ ಜಿಲ್ಲೆಯ ಇಂಗನಕಲ್‌ನಲ್ಲಿ ಮಳೆಯ ಅಭಾವದ ಅಂಗವಾಗಿ, ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಾಂಪ್ರದಾಯಿಕ ಹಳ್ಳದ ಜಾತ್ರೆಯನ್ನು ಆಚರಿಸಲಾಗುತ್ತಿದೆ. ಈ ಜಾತ್ರೆಯನ್ನು ಜೈ ಬಜರಂಗಬಲಿ ಕಮಿಟಿ ಟ್ರಸ್ಟ್ ಅಧ್ಯಕ್ಷರಾದ ಪರಮೇಶ್ವರ ಬೆನಕಿನಪಳ್ಳಿ ತೋಟಪ್ಪಗೌಡ ಬಿರಾದಾರ ಅವರ ನೇತೃತ್ವದಲ್ಲಿ ನಡೆಸಲಾಗುತ್ತಿದೆ.
More news from Kalaburagi and nearby areas
- ಕಲಬುರಗಿ ಜಿಲ್ಲೆಯ ಇಂಗನಕಲ್‌ನಲ್ಲಿ ಮಳೆಯ ಅಭಾವದ ಅಂಗವಾಗಿ, ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಾಂಪ್ರದಾಯಿಕ ಹಳ್ಳದ ಜಾತ್ರೆಯನ್ನು ಆಚರಿಸಲಾಗುತ್ತಿದೆ. ಈ ಜಾತ್ರೆಯನ್ನು ಜೈ ಬಜರಂಗಬಲಿ ಕಮಿಟಿ ಟ್ರಸ್ಟ್ ಅಧ್ಯಕ್ಷರಾದ ಪರಮೇಶ್ವರ ಬೆನಕಿನಪಳ್ಳಿ ತೋಟಪ್ಪಗೌಡ ಬಿರಾದಾರ ಅವರ ನೇತೃತ್ವದಲ್ಲಿ ನಡೆಸಲಾಗುತ್ತಿದೆ.1
- ಮುಂಗಾರು ಮಳೆಯ ಕೊರತೆಯಿಂದಾಗಿ ಕಾಳಗಿ ತಾಲೂಕಿನಲ್ಲಿ ಭೀಕರ ಬರಗಾಲ ಉಂಟಾಗಿದ್ದು, ರೈತರು ಬಿತ್ತನೆ ಮಾಡಿದ ಬೆಳೆಗಳು ಹಾಳಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣವೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಮತ್ತು ಬರಗಾಲ ಘೋಷಿಸಬೇಕು ಎಂದು ರೈತರು ತೀವ್ರವಾಗಿ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಳಗಿಯಲ್ಲಿ ಬರಗಾಲ ಘೋಷಣೆಗೆ ಆಗ್ರಹಿಸಿ ರೈತರು ಎತ್ತಿನ ಬಂಡಿಗಳು ಹಾಗೂ ಟ್ರ್ಯಾಕ್ಟರ್‌ಗಳೊಂದಿಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆದಿದ್ದಾರೆ.1
- ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಿಕ್ಷಕ ಹಾಗೂ ಸಾಹಿತಿ ಜಾವೀದ ಹುಸೇನ ಹವಲ್ದಾರ ಅವರಿಗೆ ೨೦೨೬ನೇ ಸಾಲಿನ ಪ್ರತಿಷ್ಠಿತ ರಾಜ್ಯ ಮಟ್ಟದ 'ಸಾಹಿತ್ಯ ರತ್ನ' ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ಸುವರ್ಣ ಕರ್ನಾಟಕ ಪ್ರೆಸ್ ಅಸೋಸಿಯೇಷನ್ ಹಾಗೂ ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಸ್ಥಾನದ ವತಿಯಿಂದ ಬೆಳಗಾವಿ ಜಿಲ್ಲೆಯ ಗೋಕಾಕದ ಮಯೂರ ಶಾಲೆಯ ಸಮೀಪದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಭವ್ಯ ಕಾರ್ಯಕ್ರಮದಲ್ಲಿ ಅವರ ಸಾಹಿತ್ಯ ಸೇವೆ ಮತ್ತು ಇತರ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ವಡೇರಹಟ್ಟಿಯ ಶ್ರೀ ಅಂಬಾ ದರ್ಶನ ಪೀಠದ ಪೀಠಾಧ್ಯಕ್ಷರಾದ ಪೂಜ್ಯ ಶ್ರೀ ನಾರಾಯಣ ಶರಣರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟಕರಾಗಿ ಸಚಿವ ರಮೇಶ ಎಲ್. ಜಾರಕಿಹೊಳಿ ಮತ್ತು ಅರಬಾವಿ ಶಾಸಕ ಬಾಲಚಂದ್ರ ಎಲ್. ಜಾರಕಿಹೊಳಿ ಭಾಗವಹಿಸಿದ್ದರು. ಸಿರಿ ಗನ್ನಡ ಮಹಿಳಾ ವೇದಿಕೆಯ ರಾಜ್ಯಾಧ್ಯಕ್ಷರಾದ ರಜನಿ ಅಶೋಕ ಜೀರಗ್ಯಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರೆ, ಗೌರವ ಉಪಸ್ಥಿತರಾಗಿ ಹಿರಿಯ ಸಾಹಿತಿ ಡಾ. ಸಿದ್ಧಣ್ಣ ಬಾಡಗಿ, ಡಾ. ಮಂಜುಳಾ ಪಾವಗಡ ಹಾಗೂ ಡಾ. ಪ್ರವೀಣ್ ಹಿರೇಮಠ್ ಸೇರಿದಂತೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಶುಭ ಸಂದರ್ಭದಲ್ಲಿ ಸುರಪುರ ಸಂಸ್ಥಾನದ ಅರಸರಾದ ರಾಜಾ ಕೃಷ್ಣಪ್ಪ ನಾಯಕ ಬಲವಂತ ಬಹರಿ ಬಹದ್ದೂರ್, ಸುರಪುರದ ಶೆಟ್ಟಿ ಶಾಲೆಯ ಅಧ್ಯಕ್ಷರಾದ ತಿರುಪತಿ ಎನ್. ಶೆಟ್ಟಿ, ಮುಖ್ಯೋಪಾಧ್ಯಾಯಿನಿ ರಾಜೇಶ್ವರಿ ಟಿ. ಶೆಟ್ಟಿ, ಶಿಕ್ಷಕ ವೃಂದ ಹಾಗೂ ನಾಡಿನ ಗಣ್ಯರು ಮತ್ತು ಸಾಹಿತಿಗಳು ಜಾವೀದ ಹುಸೇನ ಹವಲ್ದಾರ ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಕೋರಿದ್ದಾರೆ.1
- ಯಾದಗಿರಿ ಜಿಲ್ಲೆಯಾದ್ಯಂತ ಸಮರ್ಪಕ ಮಳೆಯ ಕೊರತೆಯಿಂದಾಗಿ ರೈತ ಸಮುದಾಯ ಆತಂಕಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ, ಗುರುಮಠಕಲ್ ವಲಯದ ರಾಮಸಮುದ್ರ ಗ್ರಾಮದ ಭಕ್ತರು ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆ ಸುರಿದು ಬೆಳೆಗಳು ಸಮೃದ್ಧಿಯಾಗಲಿ ಎಂಬ ಸಂಕಲ್ಪದೊಂದಿಗೆ ಗ್ರಾಮಸ್ಥರು ಯಾದಗಿರಿ ತಾಲೂಕಿನ ಮೈಲಾರಪುರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆ ನಡೆಸಿ ವಿಶೇಷ ಪೂಜೆ ಸಲ್ಲಿಸಿದರು. ಭಕ್ತರು ಗ್ರಾಮದಿಂದಲೇ ಭಜನೆ, ನಾಮಸ್ಮರಣೆ ಹಾಗೂ ದೇವರ ಕೀರ್ತನೆಗಳನ್ನು ಹಾಡುತ್ತಾ ಮೈಲಾರಪುರದವರೆಗೆ ಪಾದಯಾತ್ರೆ ನಡೆಸಿದರು. ದೇವಸ್ಥಾನ ತಲುಪಿದ ಬಳಿಕ ಮೈಲಾರಲಿಂಗೇಶ್ವರನ ಸನ್ನಿಧಿಯಲ್ಲಿ ಸಾಮೂಹಿಕ ಭಜನೆ ನಡೆಸಿ, ರಾಜ್ಯದಲ್ಲಿ ಉತ್ತಮ ಮಳೆಯಾಗಿ ಕೆರೆ-ಕಟ್ಟೆಗಳು ತುಂಬಲಿ, ಬೆಳೆಗಳು ಸಮೃದ್ಧಿಯಾಗಿ ಬೆಳೆಯಲಿ ಹಾಗೂ ಅನ್ನದಾತರ ಬದುಕು ಹಸನಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಳೆಯ ಅಭಾವದ ಈ ಸಂಕಷ್ಟದ ಸಮಯದಲ್ಲಿ ಸಾಂಪ್ರದಾಯಿಕ ನಂಬಿಕೆಯನ್ನು ಮುಂದುವರಿಸಿಕೊಂಡು ಹೋಗಿರುವ ಈ ಪೂಜೆಯಲ್ಲಿ ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.4
- ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಬೀದರ್ ನಗರದಲ್ಲಿ ಬಿಜೆಪಿಯಿಂದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.1
- ಕಾಳಗಿ ತಾಲೂಕಿನಲ್ಲಿ ಭೀಕರ ಬರಗಾಲ ಎದುರಾಗಿದ್ದು, ರೈತರು ತೀವ್ರ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಆದರೆ, ಇಲ್ಲಿನ ರಾಜಕೀಯ ನಾಯಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ರೈತರ ಕಷ್ಟಗಳ ಬಗ್ಗೆ ಗಮನಹರಿಸದೆ, ದಿನವಿಡೀ ಕೇವಲ ಆರ್'ಎಸ್ಎಸ್ ಬಗ್ಗೆಯೇ ಚಿಂತಿಸುತ್ತಿದ್ದಾರೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ. ಇದು ನಮ್ಮ ದುರ್ದೈವ ಎಂದು ಬೇಸರ ವ್ಯಕ್ತಪಡಿಸಿರುವ ರೈತರು, ರಾಜಕಾರಣಿಗಳು ತಮ್ಮ ಸ್ವಾರ್ಥ ರಾಜಕೀಯವನ್ನು ಬದಿಗಿಟ್ಟು ಸಂಕಷ್ಟದಲ್ಲಿರುವ ರೈತರಿಗೆ ಸಹಾಯ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, 'ಆರ್’ಎಸ್ಎಸ್ ಚಿಂತೆ ಬಿಟ್ಟು ರೈತರ ಚಿಂತೆ ಮಾಡಿ' ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ರೈತರು ನೇರವಾಗಿಯೇ ಟಾಂಗ್ ನೀಡಿದ್ದಾರೆ.1
- ಚೀನಾದಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ಸುಮಾರು 900 ಹಾವುಗಳು ಪರಾರಿಯಾಗಿವೆ. ಈ ಹಾವುಗಳು ಸಂತಾನೋತ್ಪತ್ತಿ ಕೇಂದ್ರದಿಂದ ಹೊರಬಂದಿವೆ ಎಂದು ತಿಳಿದುಬಂದಿದೆ.1