ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ವಿಶೇಷ ಪೂಜೆ ನೆರವೇರಿಸಿದ ಬಿಜಿಪಿ ಘಟಕ ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮೂರು ಮಂಡಲ ವತಿಯಿಂದ ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಇಂದು ಮೊಳಕಾಲ್ಮೂರಿನ ಶ್ರೀ ರಾಘವೇಂದ್ರ ಸ್ವಾಮಿ ಮಠ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು. ದೇಶದ ಅಭಿವೃದ್ಧಿ, ಜನಕಲ್ಯಾಣ ಮತ್ತು ವಿವಿಧ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಗಳ ಕುರಿತು ಮುಖಂಡರು ಮಾತನಾಡಿದರು. ಜನ್ಮದಿನದ ಅಂಗವಾಗಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹದ ವಾತಾವರಣ ಕಂಡುಬಂದಿದ್ದು, ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲದ ಪದಾಧಿಕಾರಿಗಳು, ಮುಖಂಡರು, ವಿವಿಧ ಮೋರ್ಚಾಗಳ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ದೇವಸ್ಥಾನದ ಆವರಣದಲ್ಲಿ ಭಕ್ತಿಭಾವದಿಂದ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಕಾರ್ಯಕ್ರಮದ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ಶ್ರೀರಾಮರೆಡ್ಡಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಪಿ.ಎಮ್.ಮಂಜುನಾಥ್ ಜಿಲ್ಲಾ ಮಹಿಳಾ ಮೊರ್ಚಾ ಅಧ್ಯಕ್ಷರಾದ ರೂಪ ವಿನಯ್ ಕುಮಾರ್ ಮತ್ತು ಹಿರಿಯ ಮುಖಂಡರಾದ ಜಿಂಕಲ್ ಬಸವರಾಜ್ ಮಂಡಲದ ಉಪಾಧ್ಯಕ್ಷರಾದ ಶಾಂತಾರಾಂ ಬಸಪತಿ , ವಿದ್ಯಾ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಭಾಕರ ನೇರ್ಲಹಳ್ಳಿ ಮತ್ತು ಹರೀಶ್ ಕಡೆತೋಟ ಕಾರ್ಯದರ್ಶಿ ಕಿರಣ್ ಗಾಯಕ್ವಾಡ್ ಮತ್ತು ಪಕ್ಷದ ವಕ್ತಾರರು ಶಾಂತವೀರಣ್ಣ ಓ.ಬಿ.ಸಿ.ಮೊರ್ಚ ಅಧ್ಯಕ್ಷರಾದ ಗಂಗಮೂರ್ತಿ ಮತ್ತು ಯುವ ಮೋರ್ಚಾ ಅಧ್ಯಕ್ಷರಾದ ಹೇಮಂತ್ ಕುಮಾರ್ ಹಾಗೂ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ತಿಪ್ಪೇಸ್ವಾಮಿ ಹಾಗೂ ಬಿ.ಮಂಜಣ್ಢ ಹಾಗೂ ಶುಭ ಪ್ರಥ್ವಿರಾಜ್ - ಹಾಗೂ ಮಹಿಳಾ ಮೊರ್ಚಾ ಮಾಜಿ ಅಧ್ಯಕ್ಷರು ಸರ್ವಮಂಗಳ ಮತ್ತು ಸಾಮಾಜಿಕ ಜಾಲತಾಣ ಸಹ ಸಂಚಾಲಕರಾದ ದೀಲಿಪ್ ಕುಮಾರ್ ಮತ್ತು ಪಕ್ಷದ ಮುಖಂಡರಾದ ರಾಮಾಂಜನೇಯ,ಮಲ್ಲಿಕಾರ್ಜುನ ಹಾಗೂ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು

- ಪ್ರಧಾನಿ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಿಸಿದ ಯುವ ಕಾಂಗ್ರೆಸ್: ತರಕಾರಿ ಮಾರಿ ಕೇಂದ್ರದ ವಿರುದ್ಧ ವಿನೂತನ ಪ್ರತಿಭಟನೆ ಚಳ್ಳಕೆರೆ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು 'ರಾಷ್ಟ್ರೀಯ ನಿರುದ್ಯೋಗ ದಿನ'ವನ್ನಾಗಿ ಆಚರಿಸುವ ಮೂಲಕ ಚಳ್ಳಕೆರೆ ವಿಧಾನಸಭಾ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಬೀದಿಬದಿಯಲ್ಲಿ ತರಕಾರಿ ಮಾರಾಟ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ನಗರದಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, 'ಯುವಕರಿಗೆ ಉದ್ಯೋಗ – ದೇಶದ ಯುವಶಕ್ತಿಗೆ ಭವಿಷ್ಯದ ಭರವಸೆ' ಎಂಬ ಘೋಷವಾಕ್ಯದಡಿ ಸರ್ಕಾರದ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಉನ್ನತ ವ್ಯಾಸಂಗ ಮಾಡಿದ ಯುವಕರಿಗೆ ಉದ್ಯೋಗವಿಲ್ಲದೆ ಬೀದಿಯಲ್ಲಿ ತರಕಾರಿ ಮಾರುವ ಪರಿಸ್ಥಿತಿ ಬಂದೊದಗಿದೆ ಎಂಬುದನ್ನು ಸಾಂಕೇತಿಕವಾಗಿ ಪ್ರದರ್ಶಿಸುವ ಮೂಲಕ ಕೇಂದ್ರದ ಗಮನ ಸೆಳೆಯುವ ಯತ್ನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಮುಖಂಡರು,ಕೇಂದ್ರ ಸರ್ಕಾರವು ದೇಶದ ಯುವಕರಿಗೆ ಉದ್ಯೋಗ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ದಿನೇ ದಿನೇ ನಿರುದ್ಯೋಗ ಸಮಸ್ಯೆ ಮಿತಿಮೀರುತ್ತಿದ್ದು, ಪದವಿ ಪಡೆದ ಯುವಕರು ಅನಿವಾರ್ಯವಾಗಿ ತರಕಾರಿ ಮಾರುವ ಹಾಗೂ ಕೂಲಿ ಕೆಲಸ ಮಾಡುವ ದುಸ್ಥಿತಿ ನಿರ್ಮಾಣವಾಗಿದೆ. ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಅಧಿಕಾರಕ್ಕೇರಿದ ಸರ್ಕಾರ, ಇದೀಗ ದೇಶದ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಪಟೇಲ್, ಉಪಾಧ್ಯಕ್ಷ ಎಸ್.ಜಿ. ವೀರೇಶ್, ಅಸೆಂಬ್ಲಿ ಪ್ರಧಾನ ಕಾರ್ಯದರ್ಶಿಗಳಾದ ಮಹಮ್ಮದ್ ಹರ್ಬರ್ಜ್, ಪುರುಷೋತ್ತಮ್, ಮಂಜುನಾಥ್ ಜಿ.ಕೆ., ನಿಂಗೇಗೌಡ, ಹರೀಶ್, ಅರುಣ್ ಯಾದವ್, ನಟರಾಜ್, ತಿರುಮಲೇಶ್, ಗಣೇಶ್, ಮನು ಚೌಳೂರು, ಪ್ರಭು, ಏಕಾಂತ್ ಸೇರಿದಂತೆ ಹಲವು ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು ಪಾಲ್ಗೊಂಡಿದ್ದರು.3
- ಗುಡೇಕೋಟೆ : ಆರೋಗ್ಯ ತಪಾಸಣೆಗೈದ ಹಾಗೂ ಒಳಗಾದ ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ - ತಾಲೂಕಿನ ಗುಡೇಕೋಟೆ *ಗುಡೇಕೋಟೆ : ಆರೋಗ್ಯ ತಪಾಸಣೆಗೈದ ಹಾಗೂ ಒಳಗಾದ ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*- ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು. ಆರೋಗ್ಯ ತಪಾಸಣೆಗೈದರು , ಹಾಗೂ ತಪಾಸಣೆಗೆೊಳಗಾದರು. ಅವರು ಜನಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಭಾಗಿಯಾಗಿದ ನಂತರ , ಆರೋಗ್ಯ ಸಿಬ್ಬಂದಿಯವರಲ್ಲಿ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಮತ್ತು ನೆರೆದಿದ್ದ ಹಲವರ ಆಪೇಕ್ಷೆಯ ಮೇರೆಗೆ , ಶಾಸಕರು ಹಲವರ ಕಣ್ಣು ಪರೀಕ್ಷೆ ಮಾಡಿ ಚಿಕಿತ್ಸೆ ಶಿಪಾರಸ್ಸು ಮಾಡಿದರು. ನಂತರ ಅವರು ಸಿ ವಿಟಮಿನ್ ಮಾತ್ರೆ ಸೇವನೆಯ ಮಹತ್ವವನ್ನು , ನೆರೆದವರಲ್ಲಿ ಜಾಗ್ರತೆ ಮೂಡಿಸಿದರು ಹಾಗೂ ಸ್ವತಃ ಅವರೇ ಮಾತ್ರೆ ಸೇವೆನ ಮಾಡಿ ಪ್ರೋತ್ಸಾಹಿಸಿದರು. ಇದಕ್ಕೂ ಮುನ್ನ ಅವರು ಎಸ್ಡಿ ಎಮ್ಸಿ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ , ಪ್ರೌಢ ಶಾಲಾ ಪ್ರಾಂಶುಪಾಲರಿಗೆ ಅಗತ್ಯ ಸಲಹೆ ಸೂಚನೆಗಳನ್ನು ನಿರ್ಧೇಶನಗಳನ್ನು ನೀಡಿದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಸಾರ್ವಜನಿಕ ಸ್ಪಂದನೆ ಕುರಿತು ದೂರು: ಪಟ್ಟಣ ಪಂಚಾಯತ್‌ಗೆ ಲೋಕಾಯುಕ್ತ ಭೇಟಿ ಕೂಡ್ಲಿಗಿ: ಪಟ್ಟಣ ಪಂಚಾಯತ್ ಕಚೇರಿಗೆ ಬುದುವಾರ ದಿಢೀರನೆ ವಿಜಯನಗರ–ಬಳ್ಳಾರಿ ವಿಭಾಗದ ಲೋಕಾಯುಕ್ತರು ಡಿವೈಎಸ್ಪಿ ಎಸ್.ಎಸ್.ಬೀಳಗಿ, ಚಿತ್ರದುರ್ಗ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಚಿತ್ರದುರ್ಗದ ಸಿಪಿಐಗಳಾದ ಬಸವರಾಜ ಪಾಟೀಲ್, ಸುಮಾ ಗೊರೆಬಾಳ ಸೇರಿದಂತೆ ಒಟ್ಟು ೧೬ ಸಿಬ್ಬಂದಿಯು ದಿಢೀರ್ ಆಗಮಿಸಿದ್ದರು. ಕಛೇರಿಗೆ ಸಂಬಂಧಿಸಿದ ಕಡತಗಳನ್ನು ಮುಖ್ಯಾಧಿಕಾರಿ ದಾದಾಪೀರ್ ಮೂಲಕ ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. ಪಟ್ಟಣ ಪಂಚಾಯತ್ ಕಚೇರಿಯ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ಭೇಟಿ ನಂತರ ಮಾಹಿತಿ ಕೇಳಲು, ದಾಖಲೆ ಪರಿಶೀಲಿಸಲು ಮುಂದಾಗಿದ್ದರಿಂದ ಪಪಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಾಕ್ ನೀಡಿದಂತಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದ ವೇಳೆ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್ ಸೇರಿ ನಾನಾ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ದಾಖಲೆ ಪರಿಶೀಲನೆಗೆ ಸಹಕರಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಾನಾ ದೂರು ಆಧರಿಸಿ ಲೋಕಾಯುಕ್ತದಲ್ಲಿ ಸ್ವಯಂ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಕೊಟ್ಟೂರು ಪಪಂ ಕಚೇರಿಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಖಲೆ ಪರಿಶೀಲನೆ ನಡೆಸಲಾಗಿದೆ ಎಂದು ಬಳ್ಳಾರಿ ಲೋಕಾಯುಕ್ತ ಡಿವೈಎಸ್ಪಿ ಎಸ್.ಎಸ್.ಬೀಳಗಿ ಅವರು ಮಾಹಿತಿ ತಿಳಿಸಿದರು.1
- ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.1
- ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ‘ಒಪಿಎಸ್’ ಜಾರಿ ಮುರಿತು ಶಶಿ ಹುಲಿಕುಂಟೆ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ‘ಒಪಿಎಸ್’ ಜಾರಿ ಮುರಿತು ಶಶಿ ಹುಲಿಕುಂಟೆ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಎನ್‌ಪಿಎಸ್ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಪದ್ಧತಿಯನ್ನು (OPS) ಶೀಘ್ರದಲ್ಲೇ ಆರನೇ ಗ್ಯಾರಂಟಿಯಾಗಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ತಿಳಿಸಿದ್ದಾರೆ. ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಂವಾದ ನಡೆಸಿ ತದ ನಂತರ ಹೊಳಲ್ಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, "ಹಿಂದೆ ಎನ್‌ಪಿಎಸ್ ಜಾರಿಗೆ ತಂದವರೇ ಇಂದು ವಾಪಸ್‌ಗೆ ಒತ್ತಾಯಿಸುತ್ತಿರುವುದು ಮೊಸಳೆ ಕಣ್ಣೀರು. ಕಾಂಗ್ರೆಸ್ ಪಕ್ಷವು ಎಲ್ಲರನ್ನೂ ಸಮಾನತೆಯಿಂದ ಕಾಣುವ ಅಭಿವೃದ್ಧಿಪರ ಪಕ್ಷವಾಗಿದೆ. ನಾನು ಕೇವಲ ಚುನಾವಣೆಗೆ ಸೀಮಿತವಾಗದೆ, ಈ ಭಾಗದ ಪದವೀಧರರ ಸಂಘಟನೆ, ಉದ್ಯೋಗ, ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಮೂಲಕ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇನೆ" ಎಂದರು. ರಾಜ್ಯ ಸರ್ಕಾರವು ಯುವಕರಿಗೆ ಉದ್ಯೋಗ ಕಲ್ಪಿಸಲು 75,000 ಹುದ್ದೆಗಳ ಭರ್ತಿಗೆ ಸಿದ್ಧತೆ ನಡೆಸಿದ್ದು, ಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ಆದೇಶಿಸಿದೆ. ಪೊಲೀಸ್, ಅರಣ್ಯ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೇಳಿದರು. "ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 1,20,000 ಹಾಗೂ ಹೊಳಲ್ಕೆರೆಯಲ್ಲಿ 4,300 ಮತದಾರರಿದ್ದಾರೆ. ಈ ಹಿಂದೆ ಗೆದ್ದ ಬಿಜೆಪಿ ಶಾಸಕರು ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂಬ ಆಕ್ರೋಶ ಮತದಾರರಲ್ಲಿದೆ. ನಾನು ಗೆದ್ದು ಬಂದರೆ ಪ್ರತಿ ತಿಂಗಳು ಕ್ಷೇತ್ರಕ್ಕೆ ಭೇಟಿ ನೀಡಿ ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಧವಿಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎ, ಜಯಪ್ಪ ತಾಲೂಕು ಮುಖಂಡರಾದ ನಾಗರಾಜಯ್ಯ, ರವಿಕುಮಾರ್, ಶಿವಕುಮಾರ್, ಚಂದ್ರಪ್ಪ, ಚಿತ್ತಪ್ಪ, ನಿವೃತ್ತ ನೌಕರರ ಸಂಘದ ಹೇಮಂತ್ ಗೌಡ, ವೆಂಕಟೇಶ್, ನೌಕರ ಸಂಘದ ಕಾರ್ಯದರ್ಶಿ ಶ್ರೀಧರ್, ಮೃತ್ಯುಂಜಯಪ್ಪ, ಮದ್ದೇರು ಶಿವಕುಮಾರ್, ಮಲ್ಲೇಶಪ್ಪ, ಉಪ್ಪರಿಗೇನಹಳ್ಳಿ ಹೇಮಂತ್ ಸೇರಿದಂತೆ ನೂರಾರು ಬೆಂಬಲಿಗರು ಉಪಸ್ಥಿತರಿದ್ದರು.1
- ಸರ್ವಧರ್ಮ ಸಮಾನತೆ ಸಾರುವ ದೇವನು ಒಬ್ಬನೇ ನಾಮ ಹಲವು ಸರ್ವ ಧರ್ಮ ಸಮಾನತೆ ಸಾರುವ. ಚಳ್ಳಕೆರೆ ನಗರದ ಮಹದೇವಿಯ ರಸ್ತೆಯ ಇಬ್ರಾಹಿಂಪುರ ಓಂ ಗಣಪತಿ ಯುವಕ ಬಳಗದ ವತಿಯಿಂದ ದೇವನು ಒಬ್ಬನೇ ನಾಮವು ಹಲವು ಎನ್ನುವ ವಿನಾಯಕನ ಪ್ರತಿಷ್ಠಾಪನೆ ಮಾಡಲಾಗಿತ್ತು.1
- ಮೈದಾನದ ರಕ್ಷಣೆಗಾಗಿ ಕಾಂಪೌಂಡ್ ಹಾಗೂ ಬೆಳಕಿಗಾಗಿ ಹೈಮಾಸ್ಕ್ ಲೈಟ್ ಅಳವಡಿಕೆಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಒತ್ತಾಯ1
- ಚಳ್ಳಕೆರೆ ಖಾಸಗಿ ಬಸ್ ನಿಲ್ದಾಣದ ಹಿಂಭಾಗ: ಶಕ್ತಿ ಬಾಲ ಗಣೇಶ ಯುವಕ ಸಂಘದಿಂದ ಶಾಲಾ ಮಕ್ಕಳಿಗೆ ನೆರವು ಚಳ್ಳಕೆರೆ: ನಗರದ ಖಾಸಗಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಶ್ರೀ ಶಕ್ತಿ ಬಾಲ ಗಣೇಶ ಯುವಕ ಸಂಘದ ವತಿಯಿಂದ, ಕನ್ನಡ ಶಾಲೆ ಹಾಗೂ ಬೆಳಕು ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳು ಹಾಗೂ ನೀರಿನ ಕ್ಯಾನ್ ವಿತರಿಸುವ ಅರ್ಥಪೂರ್ಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಬುಕ್, ಪೆನ್, ಪೆನ್ಸಿಲ್ ಸೇರಿದಂತೆ ಅಗತ್ಯ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಜೊತೆಗೆ, 'ಬೆಳಕು' ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗಾಗಿ ನೀರಿನ ಕ್ಯಾನ್‌ಗಳನ್ನು ಸಹ ಕೊಡುಗೆಯಾಗಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಕರವೇ (ಪ್ರವೀಣ್ ಶೆಟ್ಟಿ ಬಣ) ಗೌರವಾಧ್ಯಕ್ಷರಾದ ಸಿ. ಭೋಜರಾಜ, ಸುರಕ್ಷಾ ಪಾಲಿ ಕ್ಲಿನಿಕ್‌ನ ಬಿ. ಫರೀದ್ ಖಾನ್ ಉಪಸ್ಥಿತರಿದ್ದು, ಮಕ್ಕಳನ್ನು ಹುರಿದುಂಬಿಸಿದರು. ಶ್ರೀ ಶಕ್ತಿ ಬಾಲ ಗಣೇಶ ಯುವಕ ಸಂಘದ ಹಾಗೂ ಕರವೇ ಅಧ್ಯಕ್ಷರಾದ ಪಿ. ಮಂಜುನಾಥ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ದರ್ಶನ್ ಸಿ.ಬಿ., ಮಹಾಂತೇಶ್, ಈಶ್ವರ್, ಪಿ. ಕುಮಾರ್ ಹಾಗೂ ನಾಯಕನಹಟ್ಟಿ ಹೋಬಳಿ ಕರವೇ ಅಧ್ಯಕ್ಷರಾದ ಬೋರಣ್ಣ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.1