ಶಿವಮೊಗ್ಗ-5.50 ಲಕ್ಷ ರೂ ಬದಲು 55 ಸಾವಿರ ರೂ ಜಮೆ ಮಾಡಿದ ಬ್ಯಾಂಕ್: ಪರಿಹಾರ ನೀಡಲು ಆದೇಶ ಶಿವಮೊಗ್ಗ: ಚೆಕ್ ಹಣ ಜಮೆ ಮಾಡುವಾಗ ಸೇವಾ ನ್ಯೂನತೆ ಎಸಗಿದ ಪ್ರಕರಣದಲ್ಲಿ ಗ್ರಾಹಕನಿಗೆ ಸೂಕ್ತ ಪರಿಹಾರ ನೀಡುವಂತೆ ಕರ್ನಾಟಕ ಬ್ಯಾಂಕ್‌ಗೆ ಶಿವಮೊಗ್ಗದ ಗ್ರಾಹಕರ ನ್ಯಾಯಾಲಯ ಆದೇಶಿಸಿದೆ. ಜಿಲ್ಲೆಯ ಕಾಚಿನಕಟ್ಟೆ ಬಿ.ಎಂ.ನಾಗರಾಜ್ ಎಂಬವರು ಸಂತೇಕಡೂರು ಕೆನರಾ ಬ್ಯಾಂಕ್ ಶಾಖೆ, ಮಲ್ಲಿಗೆನಹಳ್ಳಿ ಲೀಡ್ ಬ್ಯಾಂಕ್ ಚೇರ್‌ಮನ್ ಮತ್ತು ಗೋಪಿ ಸರ್ಕಲ್ ಕರ್ನಾಟಕ ಬ್ಯಾಂಕ್ ಮುಖ್ಯ ಶಾಖೆ ವ್ಯವಸ್ಥಾಪಕರ ವಿರುದ್ಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಈ ಬಗ್ಗೆ ದೂರು ನೀಡಿದ್ದರು. ಕರ್ನಾಟಕ ಬ್ಯಾಂಕ್‌ನ 5.50 ಲಕ್ಷ ರೂ. ಚೆಕ್ ಅನ್ನು ಕೆನರಾ ಬ್ಯಾಂಕ್‌ಗೆ ಸಲ್ಲಿಸಲಾಗಿದ್ದು, ಆದರೆ ಖಾತೆಗೆ 55,000 ರೂ.ಗಳನ್ನು ಮಾತ್ರ ಜಮಾ ಮಾಡಿ ಸೇವಾ ನ್ಯೂನತೆ ಎಸಗಲಾಗಿದೆ ಎಂದು ತಿಳಿಸಿದ್ದರು. ದೂರುದಾರರು 2024ರ ಜುಲೈನಲ್ಲಿ ಕೆನರಾ ಬ್ಯಾಂಕ್‌ನ ತಮ್ಮ ಖಾತೆಗೆ ರೂ. 5.50 ಲಕ್ಷ ಮೊತ್ತ ಕರ್ನಾಟಕ ಬ್ಯಾಂಕ್ ಚೆಕ್ ಅನ್ನು ವರ್ಗಾವಣೆಗಾಗಿ ಸಲ್ಲಿಸಿದ್ದರು. ಆದರೆ, ಖಾತೆಯಲ್ಲಿ 55,000 ರೂ.ಗಳನ್ನು ಮಾತ್ರ ಜಮಾ ಮಾಡಲಾಗಿದೆ. ಈ ಕುರಿತು ಅನೇಕ ಸಲ ಪತ್ರ ವ್ಯವಹಾರ ಮಾಡಿ ಉಳಿದ ಮೊತ್ತ 4,95,000 ರೂ.ಗಳನ್ನು ಜಮಾ ಮಾಡುವಂತೆ ಕೇಳಿಕೊಂಡರೂ ಬ್ಯಾಂಕ್ನವರು ಯಾವುದೇ ಪ್ರತ್ಯುತ್ತರ ನೀಡದೆ ಸೇವಾ ನ್ಯೂನತೆ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ದೂರು ದಾಖಲಿಸಿಕೊಂಡ ಆಯೋಗವು ಮೂವರು ಎದುರುದಾರರಿಗೆ ನೋಟಿಸ್ ನೀಡಿತ್ತು. ಬಳಿಕ ಎದುರುದಾರರು ತಮ್ಮ ವಕೀಲರ ಮೂಲಕ ಹಾಜರಾಗಿ ಕೆನರಾ ಬ್ಯಾಂಕ್ ತಮ್ಮ ತಕರಾರಿನಲ್ಲಿ ದೂರುದಾರರ ಚೆಕ್ ಅನ್ನು ಕರ್ನಾಟಕ ಬ್ಯಾಂಕ್ ಶಾಖೆಗೆ ಮೊತ್ತವನ್ನು ಕಳುಹಿಸಲು ಸಲ್ಲಿಸಿದ್ದು, ಅಲ್ಲಿಂದ 55,000 ರೂ.ಗಳನ್ನು ಮಾತ್ರ ಕಳುಹಿಸಿದ್ದಾರೆ. ಉಳಿದ ಮೊತ್ತ ಕಳುಹಿಸಲು ಪತ್ರ ಸಲ್ಲಿಸಿದ್ದೇವೆ. ಆದ್ದರಿಂದ ಕೆನರಾ ಬ್ಯಾಂಕ್‌ನಿಂದ ಯಾವುದೇ ಪ್ರಮಾದ ಆಗಿಲ್ಲ ಎಂದು ವಾದಿಸಿದ್ದರು. ದೂರುದಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲಾತಿಗಳನ್ನು ಪರಿಶೀಲಿಸಿದ ಆಯೋಗ, ವಾದ ಆಲಿಸಿ, ಎದುರುದಾರರು ಚೆಕ್‌ನ ಪೂರ್ಣ ಮೊತ್ತವನ್ನು ಖಾತೆಗೆ ಜಮಾ ಮಾಡದೆ ಸೇವಾ ನ್ಯೂನತೆ ಎಸಗಿದ್ದಾರೆ ಎಂದು ತೀರ್ಮಾನಿಸಿದೆ. ಅಲ್ಲದೆ, ದೂರನ್ನು ಭಾಗಶಃ ಪುರಸ್ಕರಿಸಿ, ಎದುರುದಾರ ಕರ್ನಾಟಕ ಬ್ಯಾಂಕ್ ದೂರುದಾರರಿಗೆ ಚೆಕ್ ಅನ್ವಯದ ವ್ಯತ್ಯಾಸದ ಮೊತ್ತ 4,95,000 ರೂ.ಗೆ 21/02/2025ರಿಂದ ವಾರ್ಷಿಕ ಶೇ.6ರ ಬಡ್ಡಿ ಸೇರಿಸಿ ಪೂರ್ತಿ ಹಣವನ್ನು ಈ ಆದೇಶವಾದ 45 ದಿನಗಳೊಳಗಾಗಿ ಪಾವತಿಸಬೇಕು ಎಂದು ತಿಳಿಸಿದೆ. ತಪ್ಪಿದರೆ ವಾರ್ಷಿಕ ಶೇ.9ರ ಬಡ್ಡಿ ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಹಾಗೂ 25,000 ರೂ.ಗಳನ್ನು ಮಾನಸಿಕ ಹಿಂಸೆ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ ಈ ಆದೇಶವಾದ 45 ದಿನಗಳೊಳ ಗಾಗಿ ದೂರುದಾರರಿಗೆ ಪಾವತಿಸಬೇಕು. ಅದರಲ್ಲೂ ತಪ್ಪಿದ್ದಲ್ಲಿ ವಾರ್ಷಿಕ ಶೇ.9ರ ಬಡ್ಡಿ ಸೇರಿಸಿ, ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಸೂಚಿಸಿದೆ. ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಶಿವಣ್ಣ ಮತ್ತು ಸದಸ್ಯ ಬಿ.ಡಿ. ಯೋಗಾನಂದ ಭಾಂಡ್ಯ ಅವರಿದ್ದ ಪೀಠ ಆದೇಶ ನೀಡಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟಾರ್ ಗಂಗಾಧರ ನಾಯ್ಕ್ ಎಂ.ಟಿ. ತಿಳಿಸಿದ್ದಾರೆ.

- ಶಿವಮೊಗ್ಗ: ನಗರದಲ್ಲಿ ಜೀವ ತೆಗೆಯುತ್ತಿರುವ ಹಂಪ್ ಗಳ ಹಿಂದೆ ಇದೀಗ ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಪ್ರತ್ಯೇಕ ಪ್ರತ್ಯೇಕವಾಗಿಯೇ ಬೆನ್ನು ಬಿದ್ದು ಹಂಪ್ ಗಳ ನಿರ್ಮಾಣಗಳಲ್ಲಿ ಆಗಿರುವ ತಪ್ಪು ಹುಡುಕಿ ಸರಿ ಮಾಡುತ್ತಿವೆ. ಒಂದು ಕಡೆ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡರು ಶಿವಮೊಗ್ಗದ ಹಂಪ್ ಗಳನ್ನು ಹುಡುಕಿ ಪರಿಶೀಲಿಸುತ್ತಿ ದ್ದಾರೆ. ಮತ್ತೊಂದು ಕಡೆ ಪೊಲೀಸ್ ಇಲಾಖೆಯ ಎಸ್ ಪಿ ನಿಖಿಲ್ ಬಿ. ಮತ್ತು ಟ್ರಾಫಿಕ್ ಇನ್ಸ್ ಪೆಕ್ಟರ್ ದೇವರಾಜ್ ಸಿಬ್ಬಂದಿ ಗಳೊಂದಿಗೆ ಅವೈಜ್ಞಾನಿಕ ಹಂಪ್ ಗಳ ಹುಡುಕಾಟ ಆರಂಭಿಸಿ ಸ್ಥಳ ಪರಿಶೀಲಿಸಿ, ಸರಿ ಪಡಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿಸುವ ಉದ್ದೇಶದಿಂದ ಹಾಕಲಾದ ಹಂಪ್ ಗಳೇ ಜನರ ಜೀವಗಳ ಜೊತೆ ಆಟವಾಡಲಾರಂಭಿಸಿದ್ದು ಜನಾಕ್ರೋಶಕ್ಕೆ ಕಾರಣವಾಗುತ್ತಿದೆ. ಒಂದೆರಡು ಕಡೆ ಪ್ರಮುಖ ಜಾಗಗಳಲ್ಲಿ ಹಂಪ್ ಗಳನ್ನು ಹಾಕಲು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಜಂಟಿ ಕಾರ್ಯಾಚರಣೆ ಆರಂಭಿಸಿದಾಗ ಕೆಲವು ಕಡೆ ಜನರೇ ಒತ್ತಡ ಮಾಡಿ ಹಲವು ಕಡೆ ಹಂಪ್ ಗಳನ್ನು ಹಾಕಿಸಿಕೊಂಡಿದ್ದರು. ಅಪಘಾತ ಸಂಭವಿಸಿದ ರಸ್ತೆಗಳಲ್ಲಿರುವ ಹಂಪ್ ಗಳ ಬಳಿ ಎರಡೂ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲಿಸಿ ಅವುಗಳನ್ನು ತೆಗೆಸುವ ಅಥವಾ ಸರಿ ಮಾಡುವ ಕೆಲಸ ತಕ್ಷಣದಿಂದ ಮಾಡುತ್ತಿರುವುದರಿಂದ ಬಹಳಷ್ಟು ಜೀವಗಳು ಉಳಿಯುವುದರಲ್ಲಿ ಸಂದೇಹವಿಲ್ಲ.1
- ಭದ್ರಾವತಿ ತಾಲ್ಲೂಕು ಬಂಜಾರ ಸಂಘ ಹಾಗೂ ಸಮಾಜದ ವತಿಯಿಂದ ಅದ್ದೂರಿಯಾಗಿ ಶ್ರೀ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ1
- ತೀರ್ಥಹಳ್ಳಿ: ಪಟ್ಟಣದ ಹೃದಯ ಭಾಗದಲ್ಲಿ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯು ನಿನ್ನೆಯಿಂದ ನಡೆಯುತ್ತಿದ್ದು ಎರಡನೇ ದಿನವಾದ ಇಂದು ಬುಧವಾರದ ಶ್ರೀ ದೇವಿಯ ಅಲಂಕಾರ ಮತ್ತು ಪೂಜೆ2
- ದಾವಣಗೆರೆ : ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಜನರಲ್ಲಿ ಸುರಕ್ಷತೆ ಭಾವನೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ದಾವಣಗೆರೆ ನಗರದಲ್ಲಿ ಎಸ್ಪಿ ಶೇಖರ್ ಹೆಚ್ ಟಿ ಐಪಿಎಸ್ ರವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಪೊಲೀಸ್ ಫಥ ಸಂಚಲನವು ನಗರದ ಹೊಂಡದ ವೃತ್ತದಿಂದ ಆರಂಭವಾಗಿ ಅಂಬೇಡ್ಕರ್ ವೃತ್ತ, ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತಕ್ಕೆ ಮುಕ್ತಾಯವಾಗಿತು. ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತದಲ್ಲಿ ಸಮಾಪ್ತಿಯಾಯಿತು. ಪೊಲೀಸ್ ಪಥ ಸಂಚಲನದಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ ರವರು, ಪೊಲೀಸ್ ನಿರೀಕ್ಷಕರಾದ ಶ್ರೀ ವಸಂತ್, ಶ್ರೀ ಸುನೀಲ್ ಕುಮಾರ್, ಶ್ರೀಮತಿ ಶಿಲ್ಪಾ, ಶ್ರೀ ನಂಜುಂಡಸ್ವಾಮಿ, ಶ್ರೀ ಮಂಜುನಾಥ ಕುಪ್ಪೇಲೂರು, ಪಿ ಎಸ್ ಐ ರವರಾದ ಶ್ರೀ ರವಿನಾಯ್ಕ, ಶ್ರೀ ಸಚಿನ್, ಶ್ರೀ ಮತಿ ಶಕುಂತಲಾ ಇತರರು, ಆರ್ ಎ ಎಫ್ ತಂಡದ ಪೊಲೀಸ್ ನಿರೀಕ್ಷಕರಾದ ಶ್ರೀ ರಾಜು ಹಾಗೂ ಸಿಬ್ಬಂದಿಗಳು, ನಗರ ಪೊಲೀಸ್ ಹಾಗೂ ಡಿ ಎ ಆರ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು. ರಾಜು4
- ಚಳ್ಳಕೆರೆ ನಗರದ ಸೂಪರ್ ಮಾರ್ಟ್ ನಲ್ಲಿ ಅವದಿ ಮುಗಿದ ಆಹಾರ ಪದಾರ್ಥಗಳ ಮಾರಾಟಕ್ಕೆ ಗ್ರಾಹಕರು ಬೆಚ್ಚಿ ಬಿದ್ದಿದ್ದಾರೆ. ನಗರದ ಚಿತ್ರದುರ್ಗ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಮೇಲ್ಭಾಗದ ಮೆಟ್ರೋ ಪ್ರೋರ್ಟ್ ಸೂಪರ್ ಮಾರ್ಕೇಟ್ ನಲ್ಲಿ ಅವಧಿ ಮುಗಿದ ದಿನಬಳಕೆಯ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ1
- ಚಿತ್ರದುರ್ಗ ರಸ್ತೆ ದಾಟುವ ವಿಚಾರಕ್ಕೆ ಬೈಕ್ ಸವಾರ ಹಾಗೂ KSRTC ಬಸ್ ಡ್ರೈವರ್ ಕಿರಿಕ್ ಮಾಡ್ಕೊಂಡು, ಇತರರಿಗೆ ತೊಂದರೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈಘಟನೆ ನಡೆದಿದೆ. ಚಿತ್ರದುರ್ಗ ಡಿಪೋದ Ksrtc ಬಸ್ ಚಿತ್ರದುರ್ಗದಿಂದ-ಪಾವಗಡಕ್ಕೆ ಹೊರಟಿತ್ತು. ಈ ವೇಳೆ ಬಿಗ್ ಬಾಸ್ ಹೋಟಲ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶವಾಗುವ ವೇಳೆ ಹೆದ್ದಾರಿಯಲ್ಲಿ ಬಂದ ಬೈಕ್ ಸವಾರನಿಗೆ ಬಸ್ ಎದುರಾಗಿದ್ದು, ಮೈಮೇಲೆ ಬರ್ತೀಯಾ ಅಂತಾ ಪರಸ್ಪರ ಬಸ್ ಕಂಡಕ್ಟರ್ ಹಾಗೂ ಬೈಕ್ ಸವಾರರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಹೆದ್ದಾರಿಯಲ್ಲಿ ವಾಹನಗಳು ಕ್ಯೂ ನಿಂತು ಇತರ ವಾಹನ ಸವಾರರಿಗೆ ಕಿರಿಕಿರಿ ಉಂಟಾಯ್ತು. ಈ ವೇಳೆ ಇತರ ಸವಾರರು ಕಂಡಕ್ಟರ್ ಹಾಗೂ ಬೈಕ್ ಸವಾರನಿಗೆ ತರಾಟೆಗೆ ತೆಗೆದುಕೊಂಡಿದ್ದು, ಇಬ್ಬರೂ ಅಲ್ಲಿಂದ ಕಾಲ್ಕಿತ್ತಿದ್ದಾರೆ.1
- 18/02/2026 ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಭಾರಿ ಜಾಲವೊಂದನ್ನು ಸಾರ್ವಜನಿಕರು ಭೇದಿಸಿದ್ದಾರೆ. ಸಿನಿಮೀಯ ಮಾದರಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಕಳ್ಳರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದ್ದು, ಉಳಿದ ಎಂಟು ಮಂದಿ ಪರಾರಿಯಾಗಿದ್ದಾರೆ. ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ವೇಳೆ ಜಾಗೃತರಾದ ಸಾರ್ವಜನಿಕರಿಂದ ಕಳ್ಳರ ಮೇಲೆ ದಾಳಿ.ಕಳ್ಳತನ ಮಾಡುವ ಉದ್ದೇಶಕ್ಕಾಗಿಯೇ ಈ ತಂಡವು ಸ್ವಂತ ಲಾರಿಯನ್ನು ಖರೀದಿಸಿ ಬಳಸಿರುವುದು ಬೆಳಕಿಗೆ ಬಂದಿದೆ. ಈ ಲಾರಿಯನ್ನು ಅವರು ಖರೀದಿಸಿದ್ದೇ ಅಥವಾ ಕಳ್ಳತನ ಮಾಡಿದ್ದೇ ಎಂಬುದು ತನಿಖೆಯಿಂದ ಹೊರಬರಬೇಕಿದೆ. ವಶಕ್ಕೆ ಪಡೆದ ಲಾರಿಯಲ್ಲಿ ಕದ್ದ ಮಾಲು: ಪೊಲೀಸರು ವಶಪಡಿಸಿಕೊಂಡ ಲಾರಿಯಲ್ಲಿ ಈ ಹಿಂದೆ ಕದ್ದಿದ್ದ ಡೀಸೆಲ್ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. ಸ್ಥಳದಿಂದ ಓಡಿ ಹೋದ ಉಳಿದ 8 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದ್ದ ಈ ಕಳ್ಳತನದ ಜಾಲ ಪತ್ತೆಯಾಗಿರುವುದು ವಾಹನ ಸವಾರರಲ್ಲಿ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಸದ್ಯ ಹಿರಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.1
- ಜಾನುಕೊಂಡ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಿಡಿಓ ಗೆ ಸದಸ್ಯನೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದು ವೀಡಿಯೋ ವೈರಲ್ ಆಗಿದೆ. ಇನ್ನೂ ಜಾನುಕೊಂಡ ಗ್ರಾಮ ಪಂಚಾಯತಿ ಸದಸ್ಯ ಚಂದ್ರು ಅವರು ಜಾನುಕೊಂಡ ಗ್ರಾಮ ಪಂಚಾಯಿತಿ ಪಿಡಿಒ ಮುಕುಂದ ಅವರಿಗೆ ಅಸಂಭ್ಯವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ವಿಡಿಯೋ ಎಲ್ಲೆಡೆ ವೈರಲಾಗುತ್ತಿದೆ1