logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ

2 hrs ago
user_ವೇದಾ ರಣ್ಯಾ
ವೇದಾ ರಣ್ಯಾ
ಮೈಸೂರು, ಮೈಸೂರು, ಕರ್ನಾಟಕ•
2 hrs ago

ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ

More news from ಕರ್ನಾಟಕ and nearby areas
  • All About,Greatfull and Thankful for Our #CEO #KarnatakaStateBoardOfAuqaf #Bengaluru for his Performance of Duty Regards *ಭಾರತ ನಲ್ಲಿ ವೈರಲ್*
    1
    All About,Greatfull and Thankful for Our #CEO #KarnatakaStateBoardOfAuqaf #Bengaluru for his Performance of Duty Regards 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    21 hrs ago
  • ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತ ಕೈಜೋಡಿಸಬೇಕು-ವೆಂಕಟೇಶ್ ಸಮಾಜವನ್ನು ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಯುವಜನತೆ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನಗಳಿಂದ ದೂರವಿರುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯವೆಂಕಟೇಶ್ ತಿಳಿಸಿದರು. ಇಂದು ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಡ್ಯ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಡ್ಯ. ಪೊಲೀಸ್‌ ಇಲಾಖೆ ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ಮ.ನಿ.ಪ್ರ.ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ* ವ್ಯಸನ ಮುಕ್ತ ದಿನಾಚರಣೆ ಮಾದಕ (ಡ್ರಗ್ಸ್) ವ್ಯಸನ ವಿರೋಧಿ, ಬಾಲ್ಯವಿವಾಹ, ಪೋಕೋ ಕಾಯ್ದೆ ಬಾಲಗರ್ಭಿಣಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು. ಮಾದಕ ವಸ್ತು ಬಳಕೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳಾಗುತ್ತದೆ. ಇಂದಿನ ಯುವ ಜನತೆ ಭಗತ್ ಸಿಂಗ್.ವಿವೇಕಾನಂದ. ಅಂಬೇಡ್ಕರ್ ರವರ ಆದರ್ಶವನ್ನು ಪಾಲಿಸಬೇಕು ಡ್ರಗ್ಸ್ ಮುಕ್ತ ಭಾರತಕ್ಕೆ ಯುವ ಜನತೆ ಸಂಕಲ್ಪ ಮಾಡಬೇಕು ಎಂದರು ಯುವಕರು ಯಾವುದೇ ರೀತಿಯ ಮಾದಕ ವಸ್ತುಗಳಿಗೆ ಬಲಿಯಾಗದೆ ಆರೋಗ್ಯಕರ, ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಜೀವನ ನಡೆಸುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು. ಡ್ರಗ್ಸ್ ಎಂಬ ಮಾದಕ ವಸ್ತುಗಳು ವಿಶ್ವದಾದ್ಯಂತ ಯುವಜನತೆಯ ಭವಿಷ್ಯವನ್ನು ಹಾಳುಮಾಡುತ್ತಿರುವ ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಬೆಳೆಯುತ್ತಿವೆ. ಕ್ಷಣಿಕ ಸುಖ ಮತ್ತು ದುಷ್ಟ ಸಹವಾಸದ ಕಾರಣದಿಂದ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತದೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಅತ್ಯಂತ ಕಷ್ಟಕರವಾಗಿರುವುದರಿಂದ ಪ್ರತಿಯೊಬ್ಬ ಯುವಕ-ಯುವತಿಯೂ ವ್ಯಸನಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು. ಮಾದಕ ವಸ್ತುಗಳು ಮಾನವನ ಮೆದುಳು, ನರಮಂಡಲ ಹಾಗೂ ದೇಹದ ವಿವಿಧ ಅಂಗಾಂಗಗಳ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಹಾಳುಮಾಡುತ್ತವೆ. ಆದ್ದರಿಂದ ಯುವಜನತೆ ವ್ಯಸನದ ದುಷ್ಪರಿಣಾಮಗಳ ಬಗ್ಗೆ ತಮ್ಮ ಸ್ನೇಹಿತರು, ಸಹಪಾಠಿಗಳು ಹಾಗೂ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಸಾಮಾಜಿಕ ಜವಾಬ್ದಾರಿಯನ್ನು ವಹಿಸಬೇಕು ಎಂದು ತಿಳಿಸಿದರು. ವ್ಯಸನಮುಕ್ತ ಮನಸ್ಸಿನಿಂದಲೇ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ. ದೈಹಿಕವಾಗಿ ಸದೃಢರಾಗಿದ್ದರೆ ಮಾನಸಿಕವಾಗಿಯೂ ಸದೃಢರಾಗಲು ಸಾಧ್ಯ. ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಡ್ರಗ್ಸ್ ಹಾಗೂ ಇತರೆ ದುಶ್ಚಟಗಳಿಂದ ಸಂಪೂರ್ಣವಾಗಿ ದೂರವಿರಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಶಾಲಾ-ಕಾಲೇಜುಗಳ ಸುತ್ತಮುತ್ತ ಅಥವಾ ಸಮಾಜದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟ ನಡೆಯುತ್ತಿರುವುದು ಕಂಡುಬಂದರೆ ಮೌನವಾಗಿರದೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕು. ಹದಿಹರೆಯದ ಮಕ್ಕಳು ವ್ಯಸನದ ಬಲೆಗೆ ಸಿಲುಕದಂತೆ ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಜಾಗರೂಕರಾಗಿರಬೇಕು ಎಂದು ತಿಳಿಸಿದರು. ಯುವಜನತೆ ವ್ಯಸನಮುಕ್ತ ಜೀವನವನ್ನು ಅಳವಡಿಸಿಕೊಂಡು ದೇಶಪ್ರೇಮ, ಕಾನೂನು ಪಾಲನೆ, ಪೋಷಕರಿಗೆ ಗೌರವ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ಯುವಕ-ಯುವತಿಯ ಸಂಕಲ್ಪದಿಂದಲೇ ಡ್ರಗ್ಸ್ ಮುಕ್ತ, ಆರೋಗ್ಯವಂತ ಹಾಗೂ ಸುರಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ವೆಂಕಟೇಶ್ ಅಭಿಪ್ರಾಯಪಟ್ಟರು. ಪ್ರಾಸ್ತವಿಕ ನುಡಿಗಳನ್ನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಎನ್. ಟಿ. ಯೋಗೇಶ್ ಮಾತನಾಡಿ ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಾಗೃತಿ ಹಾಗೂ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಭಿಕ್ಷೆಯ ರೂಪದಲ್ಲಿ ವ್ಯಸನ ಮುಕ್ತ ಮಾಡಲು ಪ್ರತಿಜ್ಞೆಯನ್ನು ಮಾಡಿದವರು ಮಹಾಂತ ಶಿವಯೋಗಿ ಸ್ವಾಮೀಜಿಗಳು ಅವರ ಜಯಂತಿ ಆಚರಣೆ ಆದರ್ಶನಿಯ ಎಂದರು. ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ನಿರ್ದೇಶಕ ಮಹದೇವ್ ರವರು ಮಾತನಾಡಿ ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವ ಯಾವುದೇ ದೌರ್ಜನ್ಯವನ್ನು ಸಮಾಜ ಮುಂದೆ ಧೈರ್ಯವಾಗಿ ಎದುರಿಸುವ ಸಾಮರ್ಥ್ಯವನ್ನು ರೂಡಿಸಿಕೊಳ್ಳಬೇಕು. ಹೊರಗೆ ಹೋದ ಹೆಣ್ಣು ಮಕ್ಕಳು ಜಾಗೃತಿಯಿಂದ ಇರುವುದು ಸೂಕ್ತ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಮೊಹಮದ್ ಸುಹೇಲ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದರ ಬಗ್ಗೆ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಧೂಮಪಾನ, ಮದ್ಯಪಾನ ಹಾಗೂ ಇತರೆ ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಡೋಪಮೀನ್ ಸೇರಿದಂತೆ ಕೆಲವು ರಾಸಾಯನಿಕಗಳ ಉತ್ಪತ್ತಿಯಾಗಿ ತಾತ್ಕಾಲಿಕ ಸಂತೋಷದ ಅನುಭವ ಉಂಟಾಗುತ್ತದೆ. ಆದರೆ ಇದೇ ಕ್ರಮೇಣ ಚಟವಾಗಿ ವ್ಯಕ್ತಿಯನ್ನು ವ್ಯಸನಕ್ಕೆ ದೂಡುತ್ತದೆ. ವ್ಯಸನವು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು. ಇಂದಿನ ಸ್ಪರ್ಧಾತ್ಮಕ ಜೀವನ, ಮಾನಸಿಕ ಒತ್ತಡ, ಆತಂಕ, ಸ್ನೇಹಿತರ ಪ್ರಭಾವ ಹಾಗೂ ಸಾಮಾಜಿಕ ಜಾಲತಾಣಗಳ ಪರಿಣಾಮದಿಂದ ಕೆಲ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ. ಯಾವುದೇ ಸಮಸ್ಯೆಗೆ ಮಾದಕ ವಸ್ತುಗಳು ಪರಿಹಾರವಲ್ಲ. ಒತ್ತಡ ನಿವಾರಣೆಗೆ ಯೋಗ, ಧ್ಯಾನ, ಕ್ರೀಡೆ, ಸಂಗೀತ, ಪುಸ್ತಕ ಓದು ಹಾಗೂ ಕುಟುಂಬದವರೊಂದಿಗೆ ಮುಕ್ತ ಸಂವಾದ ನಡೆಸುವಂತಹ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಸಂಪೂರ್ಣ ದೂರವಿದ್ದು ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣದತ್ತ ಗಮನಹರಿಸಬೇಕು. ಪೋಷಕರು ಮಕ್ಕಳ ವರ್ತನೆ, ಸ್ನೇಹ ಬಳಗ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ, ಯಾವುದೇ ಅನುಮಾನಾಸ್ಪದ ಲಕ್ಷಣಗಳು ಕಂಡುಬಂದರೆ ತಕ್ಷಣ ತಜ್ಞರ ಸಲಹೆ ಪಡೆಯಬೇಕು ಎಂದು ಅವರು ತಿಳಿಸಿದರು. ಇದೆ ಸಂದರ್ಭದಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಕೈಜೋಡಿಸುವುದಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು. ವೇದಿಕೆಯಲ್ಲಿ ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಪುಷ್ಪಲತಾ ಎಂ. ಸಿ.ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳಾದ ತಿಮ್ಮರಾಜು. ಸಿ ಡಬ್ಲ್ಯೂ ಸಿ ಅಧ್ಯಕ್ಷರಾದ ಸುಮಿತ್ರ. ಮುಖಂಡರಾದ ಚಿಕ್ಕಯ್ಯ. ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಬಿ. ಎಸ್. ಅನುಪಮಾ. ರಕ್ಷಣಾ ಅಧಿಕಾರಿ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    1
    ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತ ಕೈಜೋಡಿಸಬೇಕು-ವೆಂಕಟೇಶ್
ಸಮಾಜವನ್ನು ಡ್ರಗ್ಸ್ ಹಾಗೂ ಮಾದಕ ವಸ್ತುಗಳ ಹಾವಳಿಯಿಂದ ಮುಕ್ತಗೊಳಿಸಲು ಯುವಜನತೆ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನಗಳಿಂದ ದೂರವಿರುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯವೆಂಕಟೇಶ್ ತಿಳಿಸಿದರು.
ಇಂದು ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಡ್ಯ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಡ್ಯ. ಪೊಲೀಸ್‌ ಇಲಾಖೆ ಹಾಗೂ ಮಂಡ್ಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶ್ರೀ ಮ.ನಿ.ಪ್ರ.ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ* ವ್ಯಸನ ಮುಕ್ತ ದಿನಾಚರಣೆ
ಮಾದಕ (ಡ್ರಗ್ಸ್) ವ್ಯಸನ ವಿರೋಧಿ, ಬಾಲ್ಯವಿವಾಹ, ಪೋಕೋ ಕಾಯ್ದೆ ಬಾಲಗರ್ಭಿಣಿ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು.
ಮಾದಕ ವಸ್ತು ಬಳಕೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯ ಹಾಳಾಗುತ್ತದೆ. ಇಂದಿನ ಯುವ ಜನತೆ ಭಗತ್ ಸಿಂಗ್.ವಿವೇಕಾನಂದ. ಅಂಬೇಡ್ಕರ್ ರವರ ಆದರ್ಶವನ್ನು ಪಾಲಿಸಬೇಕು ಡ್ರಗ್ಸ್ ಮುಕ್ತ ಭಾರತಕ್ಕೆ ಯುವ ಜನತೆ ಸಂಕಲ್ಪ ಮಾಡಬೇಕು ಎಂದರು
ಯುವಕರು ಯಾವುದೇ ರೀತಿಯ ಮಾದಕ ವಸ್ತುಗಳಿಗೆ ಬಲಿಯಾಗದೆ ಆರೋಗ್ಯಕರ, ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಜೀವನ ನಡೆಸುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು.
ಡ್ರಗ್ಸ್ ಎಂಬ ಮಾದಕ ವಸ್ತುಗಳು ವಿಶ್ವದಾದ್ಯಂತ ಯುವಜನತೆಯ ಭವಿಷ್ಯವನ್ನು ಹಾಳುಮಾಡುತ್ತಿರುವ ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಬೆಳೆಯುತ್ತಿವೆ. ಕ್ಷಣಿಕ ಸುಖ ಮತ್ತು ದುಷ್ಟ ಸಹವಾಸದ ಕಾರಣದಿಂದ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತದೆ. ಒಮ್ಮೆ ವ್ಯಸನಕ್ಕೆ ಒಳಗಾದರೆ ಅದರಿಂದ ಹೊರಬರುವುದು ಅತ್ಯಂತ ಕಷ್ಟಕರವಾಗಿರುವುದರಿಂದ ಪ್ರತಿಯೊಬ್ಬ ಯುವಕ-ಯುವತಿಯೂ ವ್ಯಸನಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.
ಮಾದಕ ವಸ್ತುಗಳು ಮಾನವನ ಮೆದುಳು, ನರಮಂಡಲ ಹಾಗೂ ದೇಹದ ವಿವಿಧ ಅಂಗಾಂಗಗಳ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನೂ ಹಾಳುಮಾಡುತ್ತವೆ. ಆದ್ದರಿಂದ ಯುವಜನತೆ ವ್ಯಸನದ ದುಷ್ಪರಿಣಾಮಗಳ ಬಗ್ಗೆ ತಮ್ಮ ಸ್ನೇಹಿತರು, ಸಹಪಾಠಿಗಳು ಹಾಗೂ ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಸಾಮಾಜಿಕ ಜವಾಬ್ದಾರಿಯನ್ನು ವಹಿಸಬೇಕು ಎಂದು ತಿಳಿಸಿದರು.
ವ್ಯಸನಮುಕ್ತ ಮನಸ್ಸಿನಿಂದಲೇ ವ್ಯಸನಮುಕ್ತ ಸಮಾಜ ನಿರ್ಮಾಣ ಸಾಧ್ಯ. ದೈಹಿಕವಾಗಿ ಸದೃಢರಾಗಿದ್ದರೆ ಮಾನಸಿಕವಾಗಿಯೂ ಸದೃಢರಾಗಲು ಸಾಧ್ಯ. 
ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಡ್ರಗ್ಸ್ ಹಾಗೂ ಇತರೆ ದುಶ್ಚಟಗಳಿಂದ ಸಂಪೂರ್ಣವಾಗಿ ದೂರವಿರಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಶಾಲಾ-ಕಾಲೇಜುಗಳ ಸುತ್ತಮುತ್ತ ಅಥವಾ ಸಮಾಜದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟ ನಡೆಯುತ್ತಿರುವುದು ಕಂಡುಬಂದರೆ ಮೌನವಾಗಿರದೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕು. ಹದಿಹರೆಯದ ಮಕ್ಕಳು ವ್ಯಸನದ ಬಲೆಗೆ ಸಿಲುಕದಂತೆ ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಜಾಗರೂಕರಾಗಿರಬೇಕು ಎಂದು ತಿಳಿಸಿದರು.
ಯುವಜನತೆ ವ್ಯಸನಮುಕ್ತ ಜೀವನವನ್ನು ಅಳವಡಿಸಿಕೊಂಡು ದೇಶಪ್ರೇಮ, ಕಾನೂನು ಪಾಲನೆ, ಪೋಷಕರಿಗೆ ಗೌರವ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ಯುವಕ-ಯುವತಿಯ ಸಂಕಲ್ಪದಿಂದಲೇ ಡ್ರಗ್ಸ್ ಮುಕ್ತ, ಆರೋಗ್ಯವಂತ ಹಾಗೂ ಸುರಕ್ಷಿತ ಸಮಾಜ ನಿರ್ಮಾಣ ಸಾಧ್ಯ ಎಂದು ವೆಂಕಟೇಶ್ ಅಭಿಪ್ರಾಯಪಟ್ಟರು.
ಪ್ರಾಸ್ತವಿಕ ನುಡಿಗಳನ್ನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಎನ್. ಟಿ. ಯೋಗೇಶ್ ಮಾತನಾಡಿ ವ್ಯಸನ ಮುಕ್ತ ರಾಜ್ಯವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಾಗೃತಿ ಹಾಗೂ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಭಿಕ್ಷೆಯ ರೂಪದಲ್ಲಿ ವ್ಯಸನ ಮುಕ್ತ ಮಾಡಲು ಪ್ರತಿಜ್ಞೆಯನ್ನು ಮಾಡಿದವರು ಮಹಾಂತ ಶಿವಯೋಗಿ ಸ್ವಾಮೀಜಿಗಳು ಅವರ ಜಯಂತಿ ಆಚರಣೆ ಆದರ್ಶನಿಯ ಎಂದರು.
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ನಿರ್ದೇಶಕ ಮಹದೇವ್ ರವರು ಮಾತನಾಡಿ ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆಯುವ ಯಾವುದೇ ದೌರ್ಜನ್ಯವನ್ನು ಸಮಾಜ ಮುಂದೆ ಧೈರ್ಯವಾಗಿ ಎದುರಿಸುವ ಸಾಮರ್ಥ್ಯವನ್ನು ರೂಡಿಸಿಕೊಳ್ಳಬೇಕು. ಹೊರಗೆ ಹೋದ ಹೆಣ್ಣು ಮಕ್ಕಳು ಜಾಗೃತಿಯಿಂದ ಇರುವುದು ಸೂಕ್ತ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಮೊಹಮದ್ ಸುಹೇಲ್ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದರ ಬಗ್ಗೆ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಧೂಮಪಾನ, ಮದ್ಯಪಾನ ಹಾಗೂ ಇತರೆ ಮಾದಕ ವಸ್ತುಗಳ ಸೇವನೆಯಿಂದ ಮೆದುಳಿನಲ್ಲಿ ಡೋಪಮೀನ್ ಸೇರಿದಂತೆ ಕೆಲವು ರಾಸಾಯನಿಕಗಳ ಉತ್ಪತ್ತಿಯಾಗಿ ತಾತ್ಕಾಲಿಕ ಸಂತೋಷದ ಅನುಭವ ಉಂಟಾಗುತ್ತದೆ. ಆದರೆ ಇದೇ ಕ್ರಮೇಣ ಚಟವಾಗಿ ವ್ಯಕ್ತಿಯನ್ನು ವ್ಯಸನಕ್ಕೆ ದೂಡುತ್ತದೆ. ವ್ಯಸನವು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಜೀವನದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.
ಇಂದಿನ ಸ್ಪರ್ಧಾತ್ಮಕ ಜೀವನ, ಮಾನಸಿಕ ಒತ್ತಡ, ಆತಂಕ, ಸ್ನೇಹಿತರ ಪ್ರಭಾವ ಹಾಗೂ ಸಾಮಾಜಿಕ ಜಾಲತಾಣಗಳ ಪರಿಣಾಮದಿಂದ ಕೆಲ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ. ಯಾವುದೇ ಸಮಸ್ಯೆಗೆ ಮಾದಕ ವಸ್ತುಗಳು ಪರಿಹಾರವಲ್ಲ. ಒತ್ತಡ ನಿವಾರಣೆಗೆ ಯೋಗ, ಧ್ಯಾನ, ಕ್ರೀಡೆ, ಸಂಗೀತ, ಪುಸ್ತಕ ಓದು ಹಾಗೂ ಕುಟುಂಬದವರೊಂದಿಗೆ ಮುಕ್ತ ಸಂವಾದ ನಡೆಸುವಂತಹ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಸಂಪೂರ್ಣ ದೂರವಿದ್ದು ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣದತ್ತ ಗಮನಹರಿಸಬೇಕು. ಪೋಷಕರು ಮಕ್ಕಳ ವರ್ತನೆ, ಸ್ನೇಹ ಬಳಗ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ, ಯಾವುದೇ ಅನುಮಾನಾಸ್ಪದ ಲಕ್ಷಣಗಳು ಕಂಡುಬಂದರೆ ತಕ್ಷಣ ತಜ್ಞರ ಸಲಹೆ ಪಡೆಯಬೇಕು ಎಂದು ಅವರು ತಿಳಿಸಿದರು.
ಇದೆ ಸಂದರ್ಭದಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಕೈಜೋಡಿಸುವುದಾಗಿ ವಿದ್ಯಾರ್ಥಿಗಳಿಗೆ 
ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು.
ವೇದಿಕೆಯಲ್ಲಿ ವಾರ್ತಾ ಇಲಾಖೆಯ  ವಾರ್ತಾ ಸಹಾಯಕರಾದ ಪುಷ್ಪಲತಾ ಎಂ. ಸಿ.ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳಾದ ತಿಮ್ಮರಾಜು. ಸಿ ಡಬ್ಲ್ಯೂ ಸಿ ಅಧ್ಯಕ್ಷರಾದ ಸುಮಿತ್ರ. ಮುಖಂಡರಾದ ಚಿಕ್ಕಯ್ಯ. ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಬಿ. ಎಸ್. ಅನುಪಮಾ. ರಕ್ಷಣಾ ಅಧಿಕಾರಿ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    26 min ago
  • ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಳವಳ್ಳಿ : ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ 2026 - 27 ನೇ ಸಾಲಿ‌ನ ನೂತನ ಪದಾಧಿಕಾರಿ ಗಳ ಪದಗ್ರಹಣ ಸಮಾರಂಭ ಶುಕ್ರವಾರ ಜರುಗಿತು. ಮಧ್ಯಾಹ್ನ 1.30 ರ ಸಮಯದಲ್ಲಿ ಪಟ್ಟಣದ ಹೊರ ವಲಯದ ಮೂಗನ ಕೊಪ್ಪಲು ಗ್ರಾಮದ ಬಳಿ ನಡೆದ ಆಕರ್ಷಕ ಸಮಾ ರಂಭದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಲ. ಟಿ ಎಸ್ ಚಂದ್ರು, ಕಾರ್ಯದರ್ಶಿಯಾಗಿ ಈರೇಶ್, ಖಜಾಂಚಿಯಾಗಿ ಎನ್ ರವಿ, ಉಪಾಧ್ಯಕ್ಷರಾಗಿ ಗಿರೀಶ್, ರಾಜೇಶ್ ಗೌಡ, ಕ್ಲಬ್ ನ‌ ಕೋ ಆರ್ಡಿನೇಟರ್ ಆಗಿ ಅಣ್ಣೇಗೌಡರು, ಮೆಂಬರ್ ಶಿಫ್ ಛೇರ್ಮೆನ್ ಆಗಿ ಆರ್ ಎನ್ ಮಹೇಶ್, ಸರ್ವೀಸ್ ಛೇರ್ಮೆನ್ ಆಗಿ ಶಾಬುಲಿಂಗ ಸ್ವಾಮಿ, ಮಾರುಕಟ್ಟೆ ಹಾಗೂ ಕಮ್ಯೂನಿಕೇಷನ್ ಮುಖ್ಯಸ್ಥ ರಾಗಿ ರಘು, ನಿರ್ಧೇಶಕರಾಗಿ ಮಲ್ಲಿಕಾರ್ಜುಯ್ಯ, ಅಣ್ಣೇ ಗೌಡ್ರು, ಕೆ ಚಂದ್ರು ಎನ್ ನಂದೀಶ್ ಅಧಿಕಾರ ವಹಿಸಿ ಕೊಂಡರು. ಕ್ಲಬ್ ನ ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ. ಜಿ ಎ ರಮೇಶ್ ಅವರು ನೂತನ‌ ಪದಾಧಿಕಾರಿಗಳಿಗೆ ಪದಗ್ರಹಣ ಭೋದಿಸಿದರು. ಈ ವೇಳೆ ಮಾತನಾಡಿದ ಅವರು ಲಯನ್ಸ್ ಕ್ಲಬ್ ನ್ನು ಪ್ರತ್ಯೇಕ ವಿಭಾಗಗ ಳಾಗಿ ಮಾಡಿಕೊಂಡು ಸದಸ್ಯರ ಸಂಖ್ಯೆಗಳನ್ನು ಕಡಿಮೆ ಮಾಡಿ ಕೊಳ್ಳುವ ಬದಲಾಗಿ ಎಲ್ಲಾ ಕ್ಲಬ್ ಗಳು ಒಟ್ಟಾಗಿ ಸೇರಿದರೆ ಸದಸ್ಯ ರ ಬಲ ಹೆಚ್ಚಳದ ಜೊತೆಗೆ ದೊಡ್ಡ ಮಟ್ಟದಲ್ಲಿ ಕ್ಲಬ್ ನ ಸೇವಾ ಕಾರ್ಯಗಳನ್ನು ಸಹಕಾರಿಯಾಗುವುದರಿಂದ ಈ ನಿಟ್ಟಿನ ಎಲ್ಲಾ ಕ್ಲಬ್ ನ ಮುಖಂ ಡರು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಲ್ಟಿಪಲ್ ಕೌನ್ಸಿಲ್ ಛೇರ್ಮೆನ್ ಡಾ. ಎನ್ ಕೃಷ್ಣೇ ಗೌಡ ಅವರು ಕ್ಲಬ್ ನ ಸೇವಾ ಕಾರ್ಯಗಳು ಸದಸ್ಯರು ಹಾಗೂ ದಾನಿಗಳ ಧನಸಹಾಯದಿಂದ ನಡೆಯಬೇಕೆ ಹೊರತು ಯಾವುದೇ ಸರ್ಕಾರಿ ಹಾಗೂ ಸಂಸ್ಥೆಗಳ ನೆರವು ದೊರಕುವು ದಿಲ್ಲ ಹೀಗಾಗಿ ಸದಸ್ಯರು ತಮ್ಮ ದುಡಿಮೆಯ ಅಲ್ಪ ಭಾಗವನ್ನು ಸಂಸ್ಥೆಯ ಸೇವಾ ಚಟುವಟಿಕೆ ಗಳಿಗೆ ಮೀಸಲಿಡಬೇಕು ಎಂದರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟಿ ಎಸ್ ಚಂದ್ರು ಅವರು ಮಾತನಾಡಿ ತಮ್ಮ ಅಧಿಕಾರವ ಧಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಸಮಾಜ ಸೇವಾ ಕಾರ್ಯಗ ಳನ್ನು ನಡೆಸುವ ಗುರಿ ಹೊಂದಿದ್ದು ಇದಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ಕೋರಿದರು. ನೂತನ ಸದಸ್ಯರಿಗೆ ಜಿಲ್ಲಾ ಉಪ ರಾಜ್ಯಪಾಲರಾದ ಎಂ ಸಿದ್ದೇಗೌಡ ಪ್ರತಿಜ್ಞಾವಿಧಿ ಬೋಧಿಸಿ ಸ್ವಾಗತಿಸಿದರು. ಇದೇ ವೇಳೆ ಸಮಾಜ ಸೇವಕ ಚಿಕ್ಕ ಮರಿಗೌಡ ಅವರನ್ನು ಸನ್ಮಾನಿಸ ಲಾಯಿತು. ಆರ್ಗೆನಿಕ್ ಫಾರಂ ನ ಜಿಲ್ಲಾ ಛೇರ್ಮೆನ್ ಲ. ಅಣ್ಣೇಗೌಡ, ನಿರ್ಗಮಿತ ಅಧ್ಯಕ್ಷರಾದ ಮಂಚಯ್ಯ, ಜಿಲ್ಲಾ ಕೋ ಆರ್ಡಿನೇಟರ್ ಎಂ ವಿ ನಂದೀಶ್, ಜಯಕುಮಾರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.
    1
    ಪಟ್ಟಣದಲ್ಲಿ ನಡೆದ ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಮಳವಳ್ಳಿ : ಲಯನ್ಸ್ ಕ್ಲಬ್ ಆಫ್ ಮಳವಳ್ಳಿ ನಾಡಪ್ರಭು ಸಂಸ್ಥೆಯ  2026 - 27 ನೇ ಸಾಲಿ‌ನ ನೂತನ ಪದಾಧಿಕಾರಿ ಗಳ  ಪದಗ್ರಹಣ ಸಮಾರಂಭ ಶುಕ್ರವಾರ ಜರುಗಿತು. ಮಧ್ಯಾಹ್ನ 1.30 ರ ಸಮಯದಲ್ಲಿ ಪಟ್ಟಣದ ಹೊರ ವಲಯದ ಮೂಗನ ಕೊಪ್ಪಲು ಗ್ರಾಮದ ಬಳಿ ನಡೆದ ಆಕರ್ಷಕ ಸಮಾ ರಂಭದಲ್ಲಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಲ. ಟಿ ಎಸ್ ಚಂದ್ರು, ಕಾರ್ಯದರ್ಶಿಯಾಗಿ ಈರೇಶ್, ಖಜಾಂಚಿಯಾಗಿ ಎನ್ ರವಿ, ಉಪಾಧ್ಯಕ್ಷರಾಗಿ ಗಿರೀಶ್, ರಾಜೇಶ್ ಗೌಡ, ಕ್ಲಬ್ ನ‌ ಕೋ ಆರ್ಡಿನೇಟರ್ ಆಗಿ ಅಣ್ಣೇಗೌಡರು, ಮೆಂಬರ್ ಶಿಫ್ ಛೇರ್ಮೆನ್ ಆಗಿ ಆರ್ ಎನ್ ಮಹೇಶ್, ಸರ್ವೀಸ್ ಛೇರ್ಮೆನ್ ಆಗಿ ಶಾಬುಲಿಂಗ ಸ್ವಾಮಿ, ಮಾರುಕಟ್ಟೆ ಹಾಗೂ ಕಮ್ಯೂನಿಕೇಷನ್ ಮುಖ್ಯಸ್ಥ ರಾಗಿ ರಘು, ನಿರ್ಧೇಶಕರಾಗಿ ಮಲ್ಲಿಕಾರ್ಜುಯ್ಯ, ಅಣ್ಣೇ ಗೌಡ್ರು, ಕೆ ಚಂದ್ರು ಎನ್ ನಂದೀಶ್ ಅಧಿಕಾರ ವಹಿಸಿ ಕೊಂಡರು. ಕ್ಲಬ್ ನ ಮಾಜಿ ಜಿಲ್ಲಾ ರಾಜ್ಯಪಾಲರಾದ ಡಾ. ಜಿ ಎ ರಮೇಶ್ ಅವರು ನೂತನ‌ ಪದಾಧಿಕಾರಿಗಳಿಗೆ ಪದಗ್ರಹಣ ಭೋದಿಸಿದರು. ಈ ವೇಳೆ ಮಾತನಾಡಿದ ಅವರು ಲಯನ್ಸ್ ಕ್ಲಬ್ ನ್ನು ಪ್ರತ್ಯೇಕ ವಿಭಾಗಗ ಳಾಗಿ  ಮಾಡಿಕೊಂಡು ಸದಸ್ಯರ ಸಂಖ್ಯೆಗಳನ್ನು ಕಡಿಮೆ ಮಾಡಿ ಕೊಳ್ಳುವ ಬದಲಾಗಿ ಎಲ್ಲಾ ಕ್ಲಬ್ ಗಳು ಒಟ್ಟಾಗಿ ಸೇರಿದರೆ ಸದಸ್ಯ ರ ಬಲ ಹೆಚ್ಚಳದ ಜೊತೆಗೆ ದೊಡ್ಡ ಮಟ್ಟದಲ್ಲಿ ಕ್ಲಬ್ ನ ಸೇವಾ ಕಾರ್ಯಗಳನ್ನು ಸಹಕಾರಿಯಾಗುವುದರಿಂದ ಈ ನಿಟ್ಟಿನ ಎಲ್ಲಾ ಕ್ಲಬ್ ನ ಮುಖಂ ಡರು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮಲ್ಟಿಪಲ್ ಕೌನ್ಸಿಲ್ ಛೇರ್ಮೆನ್ ಡಾ. ಎನ್ ಕೃಷ್ಣೇ ಗೌಡ ಅವರು ಕ್ಲಬ್ ನ ಸೇವಾ  ಕಾರ್ಯಗಳು ಸದಸ್ಯರು ಹಾಗೂ ದಾನಿಗಳ ಧನಸಹಾಯದಿಂದ ನಡೆಯಬೇಕೆ ಹೊರತು ಯಾವುದೇ ಸರ್ಕಾರಿ ಹಾಗೂ ಸಂಸ್ಥೆಗಳ ನೆರವು ದೊರಕುವು ದಿಲ್ಲ ಹೀಗಾಗಿ ಸದಸ್ಯರು ತಮ್ಮ ದುಡಿಮೆಯ ಅಲ್ಪ ಭಾಗವನ್ನು ಸಂಸ್ಥೆಯ ಸೇವಾ ಚಟುವಟಿಕೆ ಗಳಿಗೆ ಮೀಸಲಿಡಬೇಕು ಎಂದರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಟಿ ಎಸ್ ಚಂದ್ರು ಅವರು ಮಾತನಾಡಿ ತಮ್ಮ ಅಧಿಕಾರವ ಧಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಸಮಾಜ ಸೇವಾ ಕಾರ್ಯಗ ಳನ್ನು ನಡೆಸುವ ಗುರಿ ಹೊಂದಿದ್ದು ಇದಕ್ಕೆ ಎಲ್ಲಾ ಸದಸ್ಯರು ಸಹಕಾರ ನೀಡಬೇಕೆಂದು ಕೋರಿದರು.  ನೂತನ ಸದಸ್ಯರಿಗೆ ಜಿಲ್ಲಾ ಉಪ ರಾಜ್ಯಪಾಲರಾದ ಎಂ ಸಿದ್ದೇಗೌಡ ಪ್ರತಿಜ್ಞಾವಿಧಿ ಬೋಧಿಸಿ ಸ್ವಾಗತಿಸಿದರು. ಇದೇ ವೇಳೆ ಸಮಾಜ ಸೇವಕ ಚಿಕ್ಕ ಮರಿಗೌಡ ಅವರನ್ನು ಸನ್ಮಾನಿಸ ಲಾಯಿತು.
ಆರ್ಗೆನಿಕ್ ಫಾರಂ ನ ಜಿಲ್ಲಾ ಛೇರ್ಮೆನ್ ಲ. ಅಣ್ಣೇಗೌಡ, ನಿರ್ಗಮಿತ ಅಧ್ಯಕ್ಷರಾದ ಮಂಚಯ್ಯ, ಜಿಲ್ಲಾ ಕೋ ಆರ್ಡಿನೇಟರ್ ಎಂ ವಿ ನಂದೀಶ್, ಜಯಕುಮಾರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    14 hrs ago
  • ಶಿವಪುರ ಪ್ರೌಢಶಾಲೆ ಕಟ್ಟಡಕ್ಕೆ ಉಚಿತವಾಗಿ ಬಣ್ಣಬಳಿದ ಸಮಾಜಸೇವಕರು ಮದ್ದೂರು 02:- ಹಲವು ವರ್ಷಗಳಿಂದ ಬಣ್ಣ ಕಾಣದೆ ಮಂಕಾಗಿದ್ದ ಶಿವಪುರ ಪ್ರೌಢಶಾಲೆ ವಿಭಾಗ (ಸರ್ಕಾರಿ ಪದವಿ ಪೂರ್ವ ಕಾಲೇಜು) ಕಟ್ಟಡಕ್ಕೆ ಸಮಾಜಸೇವಕರು ಉಚಿತವಾಗಿ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದು, ಗ್ರಾಮಸ್ಥರು ಹಾಗೂ ಶಿಕ್ಷಣಾಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಕಟ್ಟಡಕ್ಕೆ ಬಣ್ಣ ಬಳಿಯದ ಕಾರಣ ಶಾಲೆಯ ಸೌಂದರ್ಯ ಕುಂದಿತ್ತು. ಈ ಹಿನ್ನೆಲೆಯಲ್ಲಿ ಸಮಾಜಸೇವಕರಾದ ಸತೀಶ್ ಬಿಲ್ಡರ್, ಎಚ್.ಎಲ್. ಸತೀಶ್, ರೋಟರಿ ಅಧ್ಯಕ್ಷ ಎ. ಲೋಕೇಶ್, ಕಾರ್ಯದರ್ಶಿ ಪ್ರವೀಣ್ ಕೆ., ಮಾಜಿ ಅಧ್ಯಕ್ಷ ಚನ್ನಂಕೆಗೌಡ, ದೀಪಕ್ ಸೇರಿದಂತೆ ಅವರ ಸಹಕಾರದೊಂದಿಗೆ ಕೆಚ್ಚೆದೆಯ ವೀರ ಕನ್ನಡಿಗ ಯರಗನಹಳ್ಳಿ ಸ್ವಾಮಿ ಹಾಗೂ ಅವರ ತಂಡ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಶಾಲೆಗೆ ಉಚಿತವಾಗಿ ಬಣ್ಣ ಬಳಿದು ಮಾದರಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು. ಸರ್ಕಾರಿ ಶಾಲೆಗಳು ಸಮಾಜದ ಆಸ್ತಿಯಾಗಿದ್ದು, ಅವುಗಳ ಅಭಿವೃದ್ಧಿಗೆ ಸಾರ್ವಜನಿಕರು, ದಾನಿಗಳು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿದರೆ ಶಿಕ್ಷಣದ ಗುಣಮಟ್ಟ ಮತ್ತಷ್ಟು ವೃದ್ಧಿಯಾಗಲಿದೆ ಎಂದು ಅವರು ತಿಳಿಸಿದರು. ಶಾಲೆಯ ಅಭಿವೃದ್ಧಿಗೆ ಸ್ಥಳೀಯ ಸಮಾಜಸೇವಕರು ತೋರಿದ ಕಾಳಜಿ ಹಾಗೂ ಸೇವಾ ಮನೋಭಾವ ಇತರರಿಗೂ ಮಾದರಿಯಾಗಿದ್ದು, ಸರ್ಕಾರಿ ಶಾಲೆಗಳ ಬಗ್ಗೆ ಜನರಲ್ಲಿ ಮತ್ತಷ್ಟು ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯ ಮಹತ್ವದ್ದಾಗಿದೆ ಎಂದು ಗ್ರಾಮಸ್ಥರು ಪ್ರಶಂಸಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಆನಂದ್, ಮುರಳಿ, ರಾಜೇಶ್, ಕನ್ನಡತಿ ಶೀಲಾ, ಕೆಚ್ಚೆದೆಯ ವೀರ ಕನ್ನಡಿಗ ತಂಡದ ವತಿಯಿಂದ ಆಶಾ, ತನುಜಾ, ಇಮ್ರಾನ್, ಮುಸ್ಕಾನ್ , ಸೇರಿದಂತೆ ಹಲವು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
    1
    ಶಿವಪುರ ಪ್ರೌಢಶಾಲೆ ಕಟ್ಟಡಕ್ಕೆ  ಉಚಿತವಾಗಿ ಬಣ್ಣಬಳಿದ ಸಮಾಜಸೇವಕರು
ಮದ್ದೂರು 02:- ಹಲವು ವರ್ಷಗಳಿಂದ ಬಣ್ಣ ಕಾಣದೆ ಮಂಕಾಗಿದ್ದ ಶಿವಪುರ ಪ್ರೌಢಶಾಲೆ ವಿಭಾಗ (ಸರ್ಕಾರಿ ಪದವಿ ಪೂರ್ವ ಕಾಲೇಜು)  ಕಟ್ಟಡಕ್ಕೆ ಸಮಾಜಸೇವಕರು ಉಚಿತವಾಗಿ ಬಣ್ಣ ಬಳಿಯುವ ಮೂಲಕ ಹೊಸ ಮೆರುಗು ನೀಡಿದ್ದು, ಗ್ರಾಮಸ್ಥರು ಹಾಗೂ ಶಿಕ್ಷಣಾಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಕಟ್ಟಡಕ್ಕೆ ಬಣ್ಣ ಬಳಿಯದ ಕಾರಣ ಶಾಲೆಯ ಸೌಂದರ್ಯ ಕುಂದಿತ್ತು. ಈ ಹಿನ್ನೆಲೆಯಲ್ಲಿ ಸಮಾಜಸೇವಕರಾದ ಸತೀಶ್ ಬಿಲ್ಡರ್, ಎಚ್.ಎಲ್. ಸತೀಶ್, ರೋಟರಿ ಅಧ್ಯಕ್ಷ ಎ. ಲೋಕೇಶ್, ಕಾರ್ಯದರ್ಶಿ ಪ್ರವೀಣ್ ಕೆ., ಮಾಜಿ ಅಧ್ಯಕ್ಷ ಚನ್ನಂಕೆಗೌಡ, ದೀಪಕ್ ಸೇರಿದಂತೆ ಅವರ ಸಹಕಾರದೊಂದಿಗೆ ಕೆಚ್ಚೆದೆಯ ವೀರ ಕನ್ನಡಿಗ ಯರಗನಹಳ್ಳಿ ಸ್ವಾಮಿ ಹಾಗೂ ಅವರ ತಂಡ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಶಾಲೆಗೆ ಉಚಿತವಾಗಿ ಬಣ್ಣ ಬಳಿದು ಮಾದರಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.
ಸರ್ಕಾರಿ ಶಾಲೆಗಳು ಸಮಾಜದ ಆಸ್ತಿಯಾಗಿದ್ದು, ಅವುಗಳ ಅಭಿವೃದ್ಧಿಗೆ ಸಾರ್ವಜನಿಕರು, ದಾನಿಗಳು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿದರೆ ಶಿಕ್ಷಣದ ಗುಣಮಟ್ಟ ಮತ್ತಷ್ಟು ವೃದ್ಧಿಯಾಗಲಿದೆ ಎಂದು ಅವರು ತಿಳಿಸಿದರು.
ಶಾಲೆಯ ಅಭಿವೃದ್ಧಿಗೆ ಸ್ಥಳೀಯ ಸಮಾಜಸೇವಕರು ತೋರಿದ ಕಾಳಜಿ ಹಾಗೂ ಸೇವಾ ಮನೋಭಾವ ಇತರರಿಗೂ ಮಾದರಿಯಾಗಿದ್ದು, ಸರ್ಕಾರಿ ಶಾಲೆಗಳ ಬಗ್ಗೆ ಜನರಲ್ಲಿ ಮತ್ತಷ್ಟು ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯ ಮಹತ್ವದ್ದಾಗಿದೆ ಎಂದು ಗ್ರಾಮಸ್ಥರು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಆನಂದ್, ಮುರಳಿ, ರಾಜೇಶ್, ಕನ್ನಡತಿ ಶೀಲಾ, ಕೆಚ್ಚೆದೆಯ ವೀರ ಕನ್ನಡಿಗ ತಂಡದ ವತಿಯಿಂದ ಆಶಾ, ತನುಜಾ, ಇಮ್ರಾನ್, ಮುಸ್ಕಾನ್ , ಸೇರಿದಂತೆ ಹಲವು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
    user_Vanitha
    Vanitha
    ಮದ್ದೂರು, ಮಂಡ್ಯ, ಕರ್ನಾಟಕ•
    2 hrs ago
  • ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ನಗರದಲ್ಲಿ ಬಿಗಿ ಭದ್ರತೆ, ಸಂಚಾರಕ್ಕೆ ನಿರ್ಬಂಧ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ಹಾಗೂ ಮೋದಿ ಸಂಚರಿಸುವ ಮಾರ್ಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಶ್ವಾನದಳದ ಸಿಬ್ಬಂದಿಯಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಕಾರ್ಯಕ್ರಮ ನಡೆಯುವ ಪ್ರದೇಶದ ಅಕ್ಕಪಕ್ಕದ ಅಂಗಡಿಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂದ್ ಮಾಡಿಸಲಾಗಿದೆ. ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕೆಲವೆಡೆ ಸಾರ್ವಜನಿಕರ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಂಚಾರ ದಟ್ಟಣೆ ತಪ್ಪಿಸಲು ವಾಹನ ಸವಾರರಿಗಾಗಿ ಬದಲಿ ಮಾರ್ಗಗಳನ್ನು ಪೊಲೀಸರು ಸಿದ್ಧಪಡಿಸಿದ್ದು, ಸಾರ್ವಜನಿಕರು ನಿಗದಿತ ಮಾರ್ಗಗಳಲ್ಲಿ ಸಂಚರಿಸಿ ಪೊಲೀಸರಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
    1
    ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ನಗರದಲ್ಲಿ ಬಿಗಿ ಭದ್ರತೆ, ಸಂಚಾರಕ್ಕೆ ನಿರ್ಬಂಧ
ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ಹಾಗೂ ಮೋದಿ ಸಂಚರಿಸುವ ಮಾರ್ಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಶ್ವಾನದಳದ ಸಿಬ್ಬಂದಿಯಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ.
ಕಾರ್ಯಕ್ರಮ ನಡೆಯುವ ಪ್ರದೇಶದ ಅಕ್ಕಪಕ್ಕದ ಅಂಗಡಿಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂದ್ ಮಾಡಿಸಲಾಗಿದೆ. ಪ್ರಧಾನಿ ಸಂಚರಿಸುವ ಮಾರ್ಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕೆಲವೆಡೆ ಸಾರ್ವಜನಿಕರ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಸಂಚಾರ ದಟ್ಟಣೆ ತಪ್ಪಿಸಲು ವಾಹನ ಸವಾರರಿಗಾಗಿ ಬದಲಿ ಮಾರ್ಗಗಳನ್ನು ಪೊಲೀಸರು ಸಿದ್ಧಪಡಿಸಿದ್ದು, ಸಾರ್ವಜನಿಕರು ನಿಗದಿತ ಮಾರ್ಗಗಳಲ್ಲಿ ಸಂಚರಿಸಿ ಪೊಲೀಸರಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    5 hrs ago
  • ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು-ಡಾ. ಕುಮಾರ ಮಂಡ್ಯ-ವ್ಯಸನಮುಕ್ತ ಸಮಾಜವನ್ನು ನಿರ್ಮಿಸುವ ಹೊಣೆಗಾರಿಕೆ ಯುವ ಸಮೂಹದ ಮೇಲಿದೆ. ಯುವಜನತೆ ಸದೃಢ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಆರೋಗ್ಯಕರ ಹಾಗೂ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಸಾಧ್ಯ ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ಹೇಳಿದರು. ನಗರದ ತಾವರೆಕೆರೆ ಎಸ್.ಬಿ. ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈ ಭಾರತ್ (ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯ), ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಡ್ಯ ವಿಶ್ವವಿದ್ಯಾಲಯ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಎಸ್.ಬಿ. ಎಜುಕೇಷನ್ ಟ್ರಸ್ಟ್ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ "ನಶಾ ಮುಕ್ತ–ಯುವ ವಿಕಸಿತ ಭಾರತ" ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆ ದೇಶದ ಅಮೂಲ್ಯ ಆಸ್ತಿ ಮತ್ತು ರಾಷ್ಟ್ರದ ಭವಿಷ್ಯವಾಗಿದ್ದು, ಅವರ ಶಕ್ತಿ ಹಾಗೂ ಸಾಮರ್ಥ್ಯವನ್ನು ರಾಷ್ಟ್ರ ನಿರ್ಮಾಣದ ದಿಕ್ಕಿನಲ್ಲಿ ಬಳಸಿದಾಗ ಮಾತ್ರ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಸಾಧ್ಯವಾಗುತ್ತದೆ. ಮಾದಕ ವ್ಯಸನ, ದುಶ್ಚಟಗಳು ಹಾಗೂ ಅನಾರೋಗ್ಯಕರ ಜೀವನಶೈಲಿಯಿಂದ ದೂರವಿದ್ದು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಕರೆ ನೀಡಿದರು. ಯುವಕರು ತಮ್ಮ ಸುತ್ತಮುತ್ತಲಿನ ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಸಹಪಾಠಿಗಳಲ್ಲಿ ದುಶ್ಚಟಗಳಿಗೆ ಬಲಿಯಾಗುತ್ತಿರುವವರನ್ನು ಗುರುತಿಸಿ, ಅವರಿಗೆ ಜಾಗೃತಿ ಮೂಡಿಸಿ ಸರಿದಾರಿಗೆ ತರುವ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣವು ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ ಎಂದು ಹೇಳಿದರು. ಮನುಷ್ಯನ ಜೀವನ ಅತ್ಯಂತ ಅಮೂಲ್ಯವಾದದ್ದು. ಕ್ಷಣಿಕ ಸುಖಕ್ಕಾಗಿ ಮಾದಕ ವಸ್ತುಗಳಿಗೆ ಬಲಿಯಾಗದೆ, ಜೀವನದಲ್ಲಿ ಉನ್ನತ ಗುರಿಗಳನ್ನು ಹೊಂದಿ ಶಿಕ್ಷಣ, ಸಾಹಿತ್ಯ ಹಾಗೂ ಉತ್ತಮ ಪುಸ್ತಕಗಳ ಅಧ್ಯಯನದ ಮೂಲಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಉತ್ತಮ ಚಿಂತನೆ ಮತ್ತು ಸಕಾರಾತ್ಮಕ ಮನೋಭಾವವೇ ಯಶಸ್ವಿ ಜೀವನದ ಅಡಿಪಾಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ವಿ.ಜೆ. ಶೋಭಾರಾಣಿ ಅವರು ವಿದ್ಯಾರ್ಥಿಗಳು ಹಾಗೂ ಯುವಜನತೆ ಯಾವುದೇ ಕಾರಣಕ್ಕೂ ಮಾದಕ ವ್ಯಸನ ಸೇರಿದಂತೆ ಕೆಟ್ಟ ಅಭ್ಯಾಸಗಳಿಗೆ ಬಲಿಯಾಗಬಾರದು ಎಂದು ಕಿವಿಮಾತು ಹೇಳಿದರು. ದೈಹಿಕ ಹಾಗೂ ಮಾನಸಿಕ ಒತ್ತಡ, ತಪ್ಪು ಸ್ನೇಹ ಬಳಗ ಮತ್ತು ಕುತೂಹಲದಿಂದ ಕೆಲವರು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಾರೆ. ಆದರೆ ಅದರ ದುಷ್ಪರಿಣಾಮಗಳು ವ್ಯಕ್ತಿ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಆದ್ದರಿಂದ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ, ಆರ್ಥಿಕ ಹಾಗೂ ಸಾಮಾಜಿಕ ಹಾನಿಗಳ ಬಗ್ಗೆ ಯುವಜನತೆಯಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು Karnataka State Police ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಂಡು, ಅದರಲ್ಲಿರುವ 'Drugs Free Karnataka' ವಿಭಾಗದ ಮೂಲಕ ಡ್ರಗ್ಸ್ ಸೇವನೆ, ಅಕ್ರಮ ಸಾಗಾಣಿಕೆ ಅಥವಾ ಮಾರಾಟಕ್ಕೆ ಸಂಬಂಧಿಸಿದ ಮಾಹಿತಿಯನ್ನು ಗೌಪ್ಯವಾಗಿ ಹಂಚಿಕೊಳ್ಳಬಹುದು. ಸಾರ್ವಜನಿಕರ ಸಹಕಾರದಿಂದಲೇ ಡ್ರಗ್ಸ್ ಜಾಲವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷರಾದ ಮೀರಾ ಶಿವಲಿಂಗಯ್ಯ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಮನುಜಶ್ರೀ, ಮೈ ಭಾರತ್ ಮಂಡ್ಯ ಜಿಲ್ಲಾ ಯುವ ಅಧಿಕಾರಿಗಳಾದ ಶ್ರುತಿ ಎಸ್ ರವರು ಉಪಸ್ಥಿತರಿದ್ದರು.
    1
    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು-ಡಾ. ಕುಮಾರ
ಮಂಡ್ಯ-ವ್ಯಸನಮುಕ್ತ ಸಮಾಜವನ್ನು ನಿರ್ಮಿಸುವ ಹೊಣೆಗಾರಿಕೆ ಯುವ ಸಮೂಹದ ಮೇಲಿದೆ. ಯುವಜನತೆ ಸದೃಢ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಆರೋಗ್ಯಕರ ಹಾಗೂ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಸಾಧ್ಯ ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ  ರವರು ಹೇಳಿದರು.
ನಗರದ ತಾವರೆಕೆರೆ ಎಸ್.ಬಿ. ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈ ಭಾರತ್ (ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯ), ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಡ್ಯ ವಿಶ್ವವಿದ್ಯಾಲಯ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಎಸ್.ಬಿ. ಎಜುಕೇಷನ್ ಟ್ರಸ್ಟ್ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ "ನಶಾ ಮುಕ್ತ–ಯುವ ವಿಕಸಿತ ಭಾರತ" ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನತೆ ದೇಶದ ಅಮೂಲ್ಯ ಆಸ್ತಿ ಮತ್ತು ರಾಷ್ಟ್ರದ ಭವಿಷ್ಯವಾಗಿದ್ದು, ಅವರ ಶಕ್ತಿ ಹಾಗೂ ಸಾಮರ್ಥ್ಯವನ್ನು ರಾಷ್ಟ್ರ ನಿರ್ಮಾಣದ ದಿಕ್ಕಿನಲ್ಲಿ ಬಳಸಿದಾಗ ಮಾತ್ರ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಸಾಧ್ಯವಾಗುತ್ತದೆ. ಮಾದಕ ವ್ಯಸನ, ದುಶ್ಚಟಗಳು ಹಾಗೂ ಅನಾರೋಗ್ಯಕರ ಜೀವನಶೈಲಿಯಿಂದ ದೂರವಿದ್ದು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಕರೆ ನೀಡಿದರು.
ಯುವಕರು ತಮ್ಮ ಸುತ್ತಮುತ್ತಲಿನ ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಸಹಪಾಠಿಗಳಲ್ಲಿ ದುಶ್ಚಟಗಳಿಗೆ ಬಲಿಯಾಗುತ್ತಿರುವವರನ್ನು ಗುರುತಿಸಿ, ಅವರಿಗೆ ಜಾಗೃತಿ ಮೂಡಿಸಿ ಸರಿದಾರಿಗೆ ತರುವ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣವು ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ ಎಂದು ಹೇಳಿದರು.
ಮನುಷ್ಯನ ಜೀವನ ಅತ್ಯಂತ ಅಮೂಲ್ಯವಾದದ್ದು. ಕ್ಷಣಿಕ ಸುಖಕ್ಕಾಗಿ ಮಾದಕ ವಸ್ತುಗಳಿಗೆ ಬಲಿಯಾಗದೆ, ಜೀವನದಲ್ಲಿ ಉನ್ನತ ಗುರಿಗಳನ್ನು ಹೊಂದಿ ಶಿಕ್ಷಣ, ಸಾಹಿತ್ಯ ಹಾಗೂ ಉತ್ತಮ ಪುಸ್ತಕಗಳ ಅಧ್ಯಯನದ ಮೂಲಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಉತ್ತಮ ಚಿಂತನೆ ಮತ್ತು ಸಕಾರಾತ್ಮಕ ಮನೋಭಾವವೇ ಯಶಸ್ವಿ ಜೀವನದ ಅಡಿಪಾಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ವಿ.ಜೆ. ಶೋಭಾರಾಣಿ ಅವರು ವಿದ್ಯಾರ್ಥಿಗಳು ಹಾಗೂ ಯುವಜನತೆ ಯಾವುದೇ ಕಾರಣಕ್ಕೂ ಮಾದಕ ವ್ಯಸನ ಸೇರಿದಂತೆ ಕೆಟ್ಟ ಅಭ್ಯಾಸಗಳಿಗೆ ಬಲಿಯಾಗಬಾರದು ಎಂದು ಕಿವಿಮಾತು ಹೇಳಿದರು.
ದೈಹಿಕ ಹಾಗೂ ಮಾನಸಿಕ ಒತ್ತಡ, ತಪ್ಪು ಸ್ನೇಹ ಬಳಗ ಮತ್ತು ಕುತೂಹಲದಿಂದ ಕೆಲವರು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಾರೆ. ಆದರೆ ಅದರ ದುಷ್ಪರಿಣಾಮಗಳು ವ್ಯಕ್ತಿ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಆದ್ದರಿಂದ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ, ಆರ್ಥಿಕ ಹಾಗೂ ಸಾಮಾಜಿಕ ಹಾನಿಗಳ ಬಗ್ಗೆ ಯುವಜನತೆಯಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು Karnataka State Police ಆ್ಯಪ್ ಅನ್ನು ಡೌನ್‌ಲೋಡ್ ಮಾಡಿಕೊಂಡು, ಅದರಲ್ಲಿರುವ 'Drugs Free Karnataka' ವಿಭಾಗದ ಮೂಲಕ ಡ್ರಗ್ಸ್ ಸೇವನೆ, ಅಕ್ರಮ ಸಾಗಾಣಿಕೆ ಅಥವಾ ಮಾರಾಟಕ್ಕೆ ಸಂಬಂಧಿಸಿದ ಮಾಹಿತಿಯನ್ನು ಗೌಪ್ಯವಾಗಿ ಹಂಚಿಕೊಳ್ಳಬಹುದು. ಸಾರ್ವಜನಿಕರ ಸಹಕಾರದಿಂದಲೇ ಡ್ರಗ್ಸ್ ಜಾಲವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷರಾದ ಮೀರಾ ಶಿವಲಿಂಗಯ್ಯ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಮನುಜಶ್ರೀ, ಮೈ ಭಾರತ್ ಮಂಡ್ಯ ಜಿಲ್ಲಾ ಯುವ ಅಧಿಕಾರಿಗಳಾದ ಶ್ರುತಿ ಎಸ್ ರವರು ಉಪಸ್ಥಿತರಿದ್ದರು.
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    31 min ago
  • ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ. ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು. ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.
    4
    ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್
    ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ
ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್
ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ
ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ.  ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು.
ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು.             
ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    4 hrs ago
  • ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ  ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ದ ಪ್ರತಿಭಟನೆ ನಡೆಸಿದರು.  ಕಾವೇರಿ ನೀರು ನಿಯಂತ್ರಣ ಸಮಿತಿ,ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ ಚಾಮರಾಜನಗರ ತಾಲೂಕು ಅಧ್ಯಕ್ಷ ಆರ್. ರಾಘವೇಂದ್ರ, ಯಳಂದೂರು ತಾಲೂಕು ಅಧ್ಯಕ್ಷ, ಕುಮಾರ ಬೂದಂಬಳ್ಳಿಮೋಳೆ , ಮಹಿಳಾ ಘಟಕ ಅಧ್ಯಕ್ಷೆ ಶೋಭ, ಸಂತೆಮರಹಳ್ಳಿ ಹೋಬಳಿ ಅಧ್ಯಕ್ಷ ಇರ್ಫಾನ್, ಜಿಲ್ಲಾ ಗೌರವಾಧ್ಯಕ್ಷ ಇದ್ರಿಸ್ಪಾಷ, ಜಿಲ್ಲಾ ಉಪಾಧ್ಯಕ್ಷ ತೌಸಿಫ್, ಮುಬಾರಕ್ ತಾಲೂಕು ಗೌರವಾಧ್ಯಕ್ಷ ಸುಂದರ ರಾಮಸಮುದ್ರ, ಕೊಳ್ಳೇಗಾಲ ಮುಖಂಡರು ಸುಂದರ ಶಾಸ್ತ್ರಿ ತಾಲೂಕು ಉಪಾಧ್ಯಕ್ಷ ಯೋಗೇಶ್ , ಅಪ್ರೋಜ್ ಪಾಷ ಸಂತೆಮರಳ್ಳಿ ಹೋಬಳಿ ಉಪಾಧ್ಯಕ್ಷ ಮನೋಜ್ ತಾಲೂಕು ಕಾರ್ಯದರ್ಶಿ ಮಹೇಶ್. ಪ್ರಮೋದ್ ಉಮೇಶ್ ಎಚ್ .ಎಮ್. ಹೊಸಪುರ ಮಲ್ಲೇಶ್ ಗಟ್ಟವಾಡಿ ಗುರು, ಕೆಬ್ಬೆಪುರ ಆಕಾಶ್, ಲೋಕೇಶ್ ಬುದಂಬಳ್ಳಿ ಮೋಳೆ ನಟರಾಜ್ , ಸ್ವಾಮಿ ಸ್ವೀಟ್, ಮಧು ಮಂಗಲ, ಯಸ್ವಂತ್, ಪ್ರಸಾದ್, ಬಸವಣ್ಣ ಇತರರು ಭಾಗವಹಿಸಿದ್ದರು.
    4
    ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ
ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ  ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ದ ಪ್ರತಿಭಟನೆ ನಡೆಸಿದರು.  ಕಾವೇರಿ ನೀರು ನಿಯಂತ್ರಣ ಸಮಿತಿ,ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. 
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ  ಚಾಮರಾಜನಗರ ತಾಲೂಕು ಅಧ್ಯಕ್ಷ ಆರ್. ರಾಘವೇಂದ್ರ,   ಯಳಂದೂರು ತಾಲೂಕು ಅಧ್ಯಕ್ಷ, ಕುಮಾರ  ಬೂದಂಬಳ್ಳಿಮೋಳೆ , ಮಹಿಳಾ ಘಟಕ ಅಧ್ಯಕ್ಷೆ ಶೋಭ, ಸಂತೆಮರಹಳ್ಳಿ ಹೋಬಳಿ ಅಧ್ಯಕ್ಷ ಇರ್ಫಾನ್, ಜಿಲ್ಲಾ  ಗೌರವಾಧ್ಯಕ್ಷ  ಇದ್ರಿಸ್ಪಾಷ,  ಜಿಲ್ಲಾ ಉಪಾಧ್ಯಕ್ಷ ತೌಸಿಫ್, ಮುಬಾರಕ್ ತಾಲೂಕು ಗೌರವಾಧ್ಯಕ್ಷ  ಸುಂದರ ರಾಮಸಮುದ್ರ, ಕೊಳ್ಳೇಗಾಲ ಮುಖಂಡರು ಸುಂದರ ಶಾಸ್ತ್ರಿ ತಾಲೂಕು
ಉಪಾಧ್ಯಕ್ಷ ಯೋಗೇಶ್ ,  ಅಪ್ರೋಜ್ ಪಾಷ ಸಂತೆಮರಳ್ಳಿ ಹೋಬಳಿ ಉಪಾಧ್ಯಕ್ಷ ಮನೋಜ್ ತಾಲೂಕು ಕಾರ್ಯದರ್ಶಿ ಮಹೇಶ್. ಪ್ರಮೋದ್  ಉಮೇಶ್ ಎಚ್ .ಎಮ್. ಹೊಸಪುರ  ಮಲ್ಲೇಶ್ ಗಟ್ಟವಾಡಿ ಗುರು, ಕೆಬ್ಬೆಪುರ ಆಕಾಶ್,  ಲೋಕೇಶ್ ಬುದಂಬಳ್ಳಿ ಮೋಳೆ ನಟರಾಜ್ , ಸ್ವಾಮಿ ಸ್ವೀಟ್, ಮಧು ಮಂಗಲ, ಯಸ್ವಂತ್,  ಪ್ರಸಾದ್, ಬಸವಣ್ಣ ಇತರರು ಭಾಗವಹಿಸಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.