Shuru
Apke Nagar Ki App…
ಹಾವೇರಿ ಜಿಲ್ಲಾ ಪೊಲೀಸ್ ವತಿಯಿಂದ ದಿನಾಂಕ: 31.07.2026 ರಂದು ಸೇವಾ ನಿವೃತ್ತಿ ಹೊಂದಿದ ಶ್ರೀ ಪರಶುರಾಮ ನಿರೂಳ್ಳಿ, ಪಿಎಸ್‌ಐ ಹಾಗೂ ಶ್ರೀಮತಿ ಆರ್ ಹೆಚ್ ಹದ್ಲಿ, ಮಹೆಚ್‌ಸಿ ರವರುಗಳು ತಮ್ಮ ಸೇವಾ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಆತ್ಮೀಯ ಬೀಳ್ಕೊಡುಗೆ ನೀಡಿ ಗೌರವಿಸಲಾಯಿತು.
ಸುನೀಲ್ ಲ್ ಬೆಟಗೇರಿ
ಹಾವೇರಿ ಜಿಲ್ಲಾ ಪೊಲೀಸ್ ವತಿಯಿಂದ ದಿನಾಂಕ: 31.07.2026 ರಂದು ಸೇವಾ ನಿವೃತ್ತಿ ಹೊಂದಿದ ಶ್ರೀ ಪರಶುರಾಮ ನಿರೂಳ್ಳಿ, ಪಿಎಸ್‌ಐ ಹಾಗೂ ಶ್ರೀಮತಿ ಆರ್ ಹೆಚ್ ಹದ್ಲಿ, ಮಹೆಚ್‌ಸಿ ರವರುಗಳು ತಮ್ಮ ಸೇವಾ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಆತ್ಮೀಯ ಬೀಳ್ಕೊಡುಗೆ ನೀಡಿ ಗೌರವಿಸಲಾಯಿತು.
More news from ಕರ್ನಾಟಕ and nearby areas
- ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್ - ವಿಜಯನಗರ ಜಿಲ್ಲೆ ಕೂಡ್ಲಿಗಿ *ಪ್ರತಿಯೊಬ್ಬರು ಪಕ್ಷದಲ್ಲಿ ಶಿಸ್ಥು ಸಂಘಟನೆ ಕಾಪಾಡಿಕೊಳ್ಳೋದು ಮುಖ್ಯ - ಕಾಂಗ್ರೇಸ್ ಜಿಲ್ಲಾಧ್ಯಕ್ಷ ಶಿರಾಜ್ ಶೇಖ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಕ್ಷ ಭಲವರ್ಧನೆಗೆ ಎಲ್ಲರೂ ಶಿಸ್ಥು , ಹಾಗೂ ಸಂಘಟನಾತ್ಮಕ ಮನೋಭಾವ ಬಳೆಸಿಕೊಳ್ಳಬೇಕೆಂದು. ಕಾಂಗ್ರೇಸ್ ಪಕ್ಷದ ವಿಜಯನಗರ ಜಿಲ್ಲಾಧ್ಯಕ್ಷರು , ಹಾಗೂ ಮಾಜಿ ಶಾಸಕರಾದ ಶಿರಾಜ್ ಶೇಖ್ ಕಾರ್ಯಕರ್ತರಿಗೆ ಕರೆ ನೀಡಿದರು. ಅವರು ಪಟ್ಟಣದ ಅನುಬಂಧ ಕಲ್ಯಾಣ ಮಂಟಪದಲ್ಲಿ , ಜುಲೈ 30 ರಂದು. ಕಾಂಗ್ರೆಸ್ ಪಕ್ಷದ ವಿವಿದ ವಿಭಾಗಗಳ ನಾಯಕರ ಆಯ್ಕೆ , ಹಾಗೂ ಪಕ್ಷ ಸಂಘಟನೆಗಾಗಿ ಆಯೋಜಿಸಲಾಗಿದ್ದ. ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಜರುಗಿದ ಸಂಘಟನೆ ಸೃಜನ ಅಭಿಯಾನದಲ್ಲಿ , ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿದರು. ಟಿಪಿಸಿಸಿ ಕಾರ್ಯದರ್ಶಿಗಳು ಹಾಗೂ ಎಐಸಿಸಿ ಸಲಹಾ ಸಮಿತಿಯ ಹಿರಿಯರು. ವೀಕ್ಷಕರಾದ ಪಕ್ಷದ ರಾಷ್ಟ್ರೀಯ ನಾಯಕರಾದ ಹರಕರ್ ವೇಣುಗೋಪಾಲ್ ರಾವ್ ಹಾಗೂ ಕೆಪಿಸಿಸಿ ಅಬ್ಜರ್ವರ್ ಗಳಾದ ಮರಿಯೋಜಿರಾವ್ , ಶ್ರೀಮತಿ ಆರತಿ ಚಂದ್ರಶೇಖರ್ , ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸುಭಾಷ್ ರಾಥೋಡ್ , ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು. ಜಿಲ್ಲಾ ಹಾಗೂ ತಾಲೂಕು ಮುಖಂಡರ ಅಭಿಪ್ರಾಯಗಳನ್ನು , ಸಲಹೆ ಸೂಸನೆಗಳನ್ನು ಆಲಿಸಲಾಯಿತು. ಪಕ್ಷದ ಸಂಘಟೆ ಭಲವರ್ಧೆನೆಗಾಗಿ , ಪ್ರಮುಖರು ಸದೀರ್ಘವಾಗಿ ಚರ್ಚಿಸಿದರು. ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ , ಕೂಡ್ಲಿಗಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಮ್ ಗುರುಸಿದ್ದನಗೌಡ , ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ಆಧ್ಯಕ್ಷ ಕೆ.ಜಿ.ಕಮಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು. ಪಕ್ಷದ ಅನೇಕ ಮುಖಂಡರು , ವಿವಿದ ವಿಭಾಗಗಳ ಪ್ರಮುಖರು , ಕ್ಷೇತ್ರದೆಲ್ಲೆಡೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- Press ಎಂದು ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಪತ್ರಕರ್ತರು ರಂದು ಪ್ರೆಸ್ ಬೋರ್ಡ್ ಹಾಕಿಕೊಳ್ಳುವ ನಕಲಿ ಪತ್ರಕರ್ತರ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ. ಪತ್ರಕರ್ತರು ಮತ್ತು ಮಾಧ್ಯಮಕ್ಕೆ ಸಂಬಂಧಿಸಿದವರು ತಮ್ಮ ಗುರುತಿಗಾಗಿ PRESS ಎಂಬ ನಾಮ ಫಲಕ ಹಾಕಿಸಿಕೊಂಡಿರುತ್ತಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಮತ್ತು ಮೀಡಿಯಾ ಸಂಬಂಧಿಸಿದವರು ಹೊರತು ಪಡಿಸಿ ಅನಾಮಧೇಯ ವ್ಯಕ್ತಿಗಳು ಸಹ ತಮ್ಮ ಮೋಟಾರ್ ಸೈಕಲ್ ಗಳ ಮೇಲೆ ಪ್ರೆಸ್ (PRESS) ಎಂಬ ಬೋರ್ಡ್ ಹಾಕಿಕೊಂಡು ವಾಹನಗಳಲ್ಲಿ ಚಲಿಸುತ್ತಿದ್ದು ಕಂಡು ಬಂದಿರುತ್ತದೆ.1
- ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ:* ***********" ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕೆ.ಇ.ಎ ಹೊರಡಿಸಿರುವ ನಿಷೇಧಿತ ವಸ್ತುಗಳು ಮತ್ತು ವಸ್ತ್ರ ಸಂಹಿತೆ ಪಾಲನೆ ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮೊದಲು ಅಭ್ಯರ್ಥಿಗಳಿಗೆ ಭದ್ರತಾ ತಪಾಸಣೆ ನಡೆಸಲಾಗುತ್ತದೆ. ಸಿಸಿಟಿವಿ ಕಣ್ಗಾವಲು ಮತ್ತು ಎಐ ಆಧಾರಿತ ಮುಖ ಚಹರೆ ಗುರುತಿಸುವಿಕೆ ಸೇರಿದಂತೆ ಬಹು ಗುರುತಿನ ಪರಿಶೀಲನೆಗೆ ಅಭ್ಯರ್ಥಿಗಳು ಒಳಪಡಬೇಕು. ಇದಕ್ಕೆ ಅನುವಾಗುವಂತೆ ಪರೀಕ್ಷೆ ಸಮಯಕ್ಕಿಂತ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಯಾವುದೇ ರೀತಿಯ ಪಠ್ಯ ಸಾಮಗ್ರಿಗಳು, ಚೀಟಿಗಳು, ಜಾಮಿಟ್ರಿ, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಪೇಪರ್, ಪೆನ್‍ಡ್ರೈವ್‍ಗಳು, ಎರೆಸೇರ್, ಲಾಗ್ ಟೇಬಲ್ ಸೇರಿದಂತೆ ಎಲೆಕ್ಟ್ರಾನಿಕ್ ಪೆನ್ ಸ್ಕ್ಯಾನರ್, ವಾಲೆಟ್, ಗಾಗಲ್ಸ್, ಕೈ ಚೀಲಗಳು, ಬೆಲ್ಟ್, ಮೈಕ್ರೋಚಿಪ್, ಕ್ಯಾಮೆರಾ, ಬ್ಲೂಟೂತ್ ಸಾಧನ, ಮುಂತಾದ ಸಂವಹನ ಸಾಧನಗಳನ್ನು ಮರೆಮಾಡುವ ಮೂಲಕ ನ್ಯಾಯೋಚಿತವಲ್ಲದ ವಿಧಾನಗಳಿಗೆ ಬಳಸಬಹುದಾದ ಇತರೆ ವಸ್ತುಗಳು, ಮೊಬೈಲ್, ಬ್ಲೂಟೂತ್, ಇಯರ್ ಪೋನ್, ಮೈಕ್ರೋಫೋನ್, ಪೇಜರ್ ಸೇರಿದಂತೆ ಆಧುನಿಕ ಸಂವಹನ ಸಾಧನಗಳು, ಯಾವುದೇ ರೀತಿಯ ಗಡಿಯಾರ, ಕೈ ಗಡಿಯಾರ, ಬಳೆ, ಕ್ಯಾಮರಾ, ತೆರೆದಿರುವ ಅಥವಾ ಪ್ಯಾಕ್ ಮಾಡಲಾದ ಯಾವುದೇ ಆಹಾರ ಪದಾರ್ಥಗಳು, ನೀರಿನ್ ಬಾಟೆಲ್ ನಿಷೇಧಿತ ವಸ್ತುಗಳಾಗಿವೆ. ಅಭ್ಯರ್ಥಿಗಳು ಉದ್ದ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಅರ್ಧ ತೋಳಿನ ಬಟ್ಟೆಗಳನ್ನು ಮಾತ್ರ ಧರಿಸಿರಬೇಕು. ಶಿರೋವಸ್ತ್ರ ಹಾಗೂ ಮುಖ ಮುಚ್ಚುವ ಉಡುಪುಗಳು, ಟೋಪಿ ಅಥವಾ ಯಾವುದೇ ರೀತಿಯ ತಲೆ ಹೊದಿಕೆಗಳನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವಂತಿಲ್ಲ. ಯಾವುದೇ ರೀತಿಯ ಲೋಹದ ವಸ್ತುಗಳು ಅಥವಾ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳಿಗೆ ಮೂಗುತಿ ಮತ್ತು ಮಂಗಳಸೂತ್ರಕ್ಕೆ ಮಾತ್ರ ವಿನಾಯಿತಿ ನೀಡಲಾಗಿದೆ. ಶೂ ಧರಿಸುವುದಕ್ಕೆ ಅವಕಾಶವಿರುವುದಿಲ್ಲ. ತೆಳುವಾದ ಅಡಿಭಾಗವಿರುವ ಸ್ಯಾಂಡಲ್ಸ್ ಅಥವಾ ಚಪ್ಪಲಿಗಳನ್ನು ಮಾತ್ರ ಧರಿಸಬೇಕು. ಶ್ರವಣ ಸಾಧನಗಳು ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಬಳಸುವ ವಿಶೇಷ ಚೇತನ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣ ಪತ್ರದೊಂದಿಗೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಶ್ರವಣ ಸಾಧನ ಅಥವಾ ಕಾಕ್ಲಿಯರ್ ಇಂಪ್‍ಲಾಂಟ್ ಸಾಧನಗಳೊಂದಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಇದರೊಂದಿಗೆ ಯಾವುದಾದರೂ ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಛಿಸುವವರು ಪರೀಕ್ಷೆ ಆರಂಭಕ್ಕೆ 2 ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು. ಅವರನ್ನು ಪ್ರತ್ಯೇಕವಾಗಿ ಪರಿಶೀಲನೆಗೆ ಒಳಪಡಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಆದರೆ ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ.2
- ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ನಿದ್ರಾದೇವಿ ಆವರಿಸಿದಾಗ ಇವೆಲ್ಲವನ್ನೂ ಮರೆತು ಎಂಥದೆ ಸ್ಥಳದಲ್ಲಿಯೂ ಸಹ ತನ್ನನ್ನು ತಾನು ಮರೆತು ನಿದ್ರೆಗೆ ಜಾರುವ ಕೆಲವು ವ್ಯಕ್ತಿಗಳು ಇದ್ದಾರೆ .. ಹೌದು ಆತ್ಮೀಯ ವೀಕ್ಷಕರೇ ಚಳ್ಳಕೆರೆ ನಗರದ ನೆಹರು ಸರ್ಕಲ್ ಬಳಿಯ ರಸ್ತೆಯ ಪಕ್ಕದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಒಬ್ಬ ವ್ಯಕ್ತಿ ಮೊಬೈಲ್ ಹಾಗೂ ಬ್ಯಾಗನ್ನು ಮರೆತು ನಿದ್ರೆ ಮಾಡುವುದು ಕಂಡು ಬಂತು ಅಲ್ಲಿ ತಕ್ಷಣ ಆ ವ್ಯಕ್ತಿಯನ್ನು ಎಚ್ಚರಿಸಿ ಮಾತನಾಡಿಸಿ ಮೊಬೈಲ್ ಹಾಗೂ ಬ್ಯಾಗ್ ಗಳ ಜೋಪಾನತೆಗೆ ಎಚ್ಚರಿಕೆಯನ್ನು ನೀಡಿಲಾಯ್ತು ಸಾರ್ವಜನಿಕ ಸ್ಥಳದಲ್ಲಿ ನಿದ್ರೆಗೆ ಜಾರುವ ವ್ಯಕ್ತಿಗಳಿಗೆ ಅತಿ ಹೆಚ್ಚು ದಣಿವು, ನಿದ್ರಾಹೀನತೆ ಅಥವಾ ಆರೋಗ್ಯದ ಸಮಸ್ಯೆ ಮತ್ತು ಮಧ್ಯದ ಪ್ರಭಾವ ಕಾರಣವಿರಬಹುದು. ಹೀಗೆ ನಿದ್ದೆ ಮಾಡುವ ವೇಳೆ ಅದರಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ನಿದ್ದೆ ಮಾಡುವ ವೇಳೆ ತುಂಬಾ ಜಾಗೃತೆ ವಹಿಸಬೇಕು ಮೊಬೈಲ್ ಬ್ಯಾಗ್ ಗಳು ಇತರೆ ವಸ್ತುಗಳನ್ನ ಕಾಣುವ ರೀತಿಯಲ್ಲಿ ಇಟ್ಟುಕೊಂಡು ನಿದ್ರೆ ಮಾಡಿದರೆ ಆ ವಸ್ತುಗಳು ಕಳೆದು ಹೋದರೆ ಯಾರು ಹೊಣೆ ಆಗ್ತಾರೆ ಅಲ್ವೇ ಸ್ನೇಹಿತರೇ..1
- "ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ , ಬಂಗೇರ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ಹೇಳಿದ ಯುವ ನಾಯಕ ಎಂ ಎಸ್ ಪಾಟೀಲ್" ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಬಿಸಲಹಳ್ಳಿ ಗ್ರಾಮದಲ್ಲಿ ರೈತರು ತಮ್ಮದೇ ಜಮೀನಿನಲ್ಲಿ ಬೆಳೆದ ಅಣಬೆ ಸೇವಿಸಿ ಅಸ್ವಸ್ಥಗೊಂಡಿದ್ದ ಬಂಗೇರ ಮನೆತನದ ಒಂದೇ ಕುಟುಂಬದ 9 ಜನರನ್ನು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ ಕ್ಷೇತ್ರದ ಬಿಜೆಪಿ ಯುವ ನಾಯಕರಾದ ಎಂ. ಎಸ್. ಪಾಟೀಲ ಅವರು ಹಿರಿಯ ವೈದ್ಯಾಧಿಕಾರಿಗಳಾದ ರಾಘವೇಂದ್ರ ರವರೊಂದಿಗೆ ಚರ್ಚಿಸಿ, ಅಗತ್ಯ ಚಿಕಿತ್ಸೆಯನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದರು. ಕುಟುಂಬದ ಎಲ್ಲ ಸದಸ್ಯರು ಆಸ್ಪತ್ರೆಯಲ್ಲಿ ಬೇಟಿಮಾಡಿ ಶೀಘ್ರವಾಗಿ ಗುಣಮುಖರಾಗಲೆಂದು ಧೈರ್ಯ ತುಂಬಿದರು. ಸಂದರ್ಬದಲ್ಲಿ ಶಿವಯೋಗಿ ಯಲಿಗಾರ್ ವೀರೇಶ್ ಹೇಡಿಯಲ, ಮಾಲತೇಶ ಇದ್ದರು.1
- ರೈತ ಆತ್ಮಹತ್ಯೆ, ಉಪತಹಶೀಲ್ದಾರ ಕಛೇರಿ ಎದುರು ಪರಿಹಾರಕ್ಕಾಗಿ ರೈತರ ಪ್ರತಿಭಟನೆ. ರೈತನ ಕುಟುಂಬಕ್ಕೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ರೈತ ಮಲ್ಲೇಶಪ್ಪ ತಳವಾರ ಆತ್ಮಹತ್ಯೆ ಮಾಡಿಕೊಂಡು ಮೃತರಾಗಿ 10 ತಿಂಗಳು ಕಳೆದರು ಸರ್ಕಾರದಿಂದ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. ತಕ್ಷಣ ಮೇಲಾಧಿಕಾರಿಗಳು ಪರಿಶೀಲಿಸಿ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಂಕಾಪುರ ಉಪತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕುಟುಂಬಕ್ಕೆ ಆಸರೆಯಾದ ರೈತ ಸಾಲಕ್ಕೆ ಸಿಲುಕಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮಕ್ಕಳು ಬದುಕು ಸಾಗಿಸುವುದು ಕಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಈ ವರೆಗೆ ಯಾವುದೇ ವರದಿ ಕಳುಹಿಸಿಲ್ಲ. ಅಧಿಕಾರಿಗಳ ನಿರ್ಲಕ್ಷತೆಯಿಂದ ಬಡ ಕುಟುಂಬಕ್ಕೆ ಪರಿಹಾರ ಮಂಜುರಾತಿ ವಿಳಂಬವಾಗಿದೆ. ಹೀಗಾಗಿ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಉಪತಹಶೀಲ್ದಾರ್ ಕಚೇರಿ ಬೀಗ ಹಾಕಿದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಹಾಗೂ ಸಿಬ್ಬಂದಿ ಹೂರಗೆ ಉಳಿಯಬೇಕಾಯಿತು. ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ದಾಖಲಾತಿ ಪಡೆಯಲು ಬಂದು ಮರಳಿ ಹೋಗಬೇಕಾಯಿತು. ಕೆಲವರು ಕಾದು ಬೇಸರಗೊಂಡರು. ಎಸ್.ಐ.ಆರ್ ಮಾಡುವ ನೌಕರರು ಸಹ ಕಾಯ್ದು ಕುಳಿತು ಮರಳಿ ಹೋದರು. ಹೀಗಾಗಿ ಕೆಲಸ ಕಾರ್ಯಗಳಿಗೆ ಅಡೆತಡೆಯಾಯಿತು. ಆದರೂ ರೈತರು ಮೇಲಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು. ಕೃಷಿ ಅಧಿಕಾರಿ ಶಿವಕುಮಾರ ಶಿಡೇನೂರ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸ್ಪಂದಿಸಿ ತಕ್ಷಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇನೆ. ರೈತನ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗುವಂತೆ ಮಾಡಲಾಗುತ್ತದೆ ಎಂದಾಗಿ ಪ್ರತಿಭಟನೆ ಹಿಂದರು. ರೈತ ಮುಖಂಡರಾದ ಶಶಿಧರ ಹೊಣ್ಣನ್ನವರ , ಶಿವಾನಂದ ತೊಂಡೂರ, ಉಮೇಶ ಗುಳೇದ, ಚಂದ್ರಣ್ಣ ಬೆಳವತ್ತಿ, ಶಂಕ್ರಣ್ಣ ಗಂಗಣ್ಣವರ, ಬಾಪುಗೌಡ ಪಾಟೀಲ, ದೇವಣ್ಣ ಹಳವಳ್ಳಿ, ಶಂಭಣ್ಣ ಕುರಗೋಡಿ, ಬಸವರಾಜ ನಾರಾಯಣಪುರ, ಚಂದ್ರಣ್ಣ ತಳವಾರ, ಮೃತ ರೈತನ ಪತ್ನಿ ಕವಿತಾ ಅವರ ಕುಟುಂಬದ ಸದಸ್ಯರು, ವಿವಿಧ ಗ್ರಾಮಗಳ ರೈತರು ಇದ್ದರು.1
- ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ_ವಿಜಯನಗರ ಜಿಲ್ಲೆ ಕೂಡ್ಲಿಗಿ *ಚಿಕ್ಕಜೋಗಿಹಳ್ಳಿ : ಮೂರು ವರೆ ದಶಕಗಳ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾದ RNK ನಿಜಲಿಂಗಪ್ಪ ರವರಿಗೆ , ಸಂಘಟನೆಗಳಿಂದ ಗೌರವ ಸನ್ಮಾನ - ಬೀಳ್ಕೊಡುಗೆ*_ವಿಜಯನಗರ ಜಿಲ್ಲೆ ಕೂಡ್ಲಿಗಿ : ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಜುಲೈ 31ರಂದು , ಉಪ ಆರೋಗ್ಯಕೇಂದ್ರದಲ್ಲಿ ಡಿ ದರ್ಜೆ ನೌಕರರಾದ RNK ನಿಜಲಿಂಗಪ್ಪರವರಿಗೆ. ವಯೋ ನಿವೃತ್ತಿ ಹೊಂದಿದ RNK ನಿಜಲಿಂಗಪ್ಪರವರನ್ನು , ಆರೋಗ್ಯ ಸಿಬ್ಬಂದಿ ಹಾಗೂ ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು , ಅವರನ್ನು ಸನ್ಮಾನಿಸಿ ಗೌರವ ಪೂರ್ವಕವಾಗಿ ಬಿಳ್ಕೊಟ್ಟರು. ಮೂಲತಃ ಕೊಟ್ಟೂರು ರಾಂಪುರ ಗ್ರಾಮದವರಾದ , ನಿಜಲಿಂಗಪ್ಪರವರು. ಕಳೆದ ಮೂರು ದಶಕಗಳ ಹಿಂದೆಯೇ , ಬಳ್ಳಾರಿಯ ರೇಷ್ಮೆ ಇಲಾಖೆಯಲ್ಲಿ. ಮಾಸಿಕ ಭತ್ಯೆ ಹೊರಗುತ್ತಿಗೆ ಆಧಾರದಂತೆ , ಹತ್ತು ವರ್ಷಗಳ ಕಾಲ ಡಿ ದರ್ಜೆ ನೌಕರರಾಗಿ ಕರ್ಥವ್ಯೆ ನಿರ್ವಹಿಸಿದ್ದರು. ತದನಂತರ ಆರೊಗ್ಯ ಇಲಾಖೆಯಲ್ಲಿ ಕೆಲ ವರ್ಷಗಳ ಕಾಲ , ಹೊರಗುತ್ತಿಗೆ ಡಿ ದರ್ಜೆ ನೌಕರಾಗಿ ಕರ್ಥವ್ಯ ನಿರ್ವಹಿಸಿದರು. ನಂತರ ವಷ್ಠೆ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ , ಖಾಯಂ ನೌಕರರಾಗಿ ಗುರುತಿಸಿಕೊಂಡು ಮೂರುವರೆ ದಶಕಗಳ ಕಾಲ ಡಿ ದರ್ಜೆ ನೌಕರರಾರಿ ಕರ್ಥವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ್ದಾರೆ. ನಿಜಲಿಂಪ್ಪರವರು ಚಿಕ್ಕಜೋಗಳ್ಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ , 1998 ರಿಂದ ಸೇವೆ ಆರಂಭಿಸಿ ಜುಲೈ 31 2026 ರವರೆಗೆ. ಅಂದರೆ ಸತತ 34 ವರ್ಷಗಳ ಕಾಲ , ಚಿಕ್ಕಜೋಗಿಹಳ್ಳಿ ಉಪ ಆರೋಗ್ಯಕೇಂದ್ರದಲ್ಲಿ ಸೇವೆ ಸಲ್ಪಿಸಿದ್ದಾರೆ. 31 7 2026ರಂದು , ಅವರು ವಯೋ ನಿವೃತ್ತಿ ಹೊಂದಿರುತ್ತಾರೆ. ಅವರ ಸಾರ್ಥಕ ಸೇವೆ ಹಾಗೂ ಸನ್ನಡತೆ ಮೆಚ್ಚಿದ , ಆರೋಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು. ಮತ್ತು ಡಾ ॥ ವಿಷ್ಣು ಸೇನಾ ಸಮಿತಿ ಸೇರಿದಂತೆ , ವಿವಿದ ಸಂಘಟನೆಗಳ ಪದಾಧಿಕಾರಿಗಳು. ನಿಜಲಿಂಗಪ್ಪರವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ , ಅಭಿಮಾನದಿಂದ ಹಾರೈಸಿ ಸರಳ ಬೀಳ್ಕೊಡುಗೆ ಸಮಾರಂಭದ ಮೂಲಕ ಬೀಳ್ಕೊಟ್ಟಿದ್ದಾರೆ. ಡಾ ॥ ವಿಷ್ಣು ಸೇನಾ ಸಮಿತಿ ಅಧ್ಯಕ್ಷರಾದ ಮಹಮದ್ ಸಾಧಿಕ್ ರವರು ಮಾತನಾಡಿ , ನಿಜಲಿಂಗಪ್ಪರವರು ಸಜ್ಜನ ಪ್ರಾಮಾಣಿಕ ನೌಕರರಾಗಿದ್ದರು. ಅವರು ಕಿಂಚಿತ್ತು ಯಾವುದೇ ದೋಷರೋಪಗಳಿಲ್ಲದೆ , ನಿಷ್ಕಳಂಕದಿಂದ ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದು. ನಿಜಲಿಂಗಪ್ಪರವರ ಸಾರ್ಥಕ ಸೇವೆಗಾಗಿ , ಅವರನ್ನು ಅವರ ಮಡದಿಯೊಡಗೂಡಿ ತಾವು ಗೌರವಿಸಿ ಸನ್ಮಾನಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅವರಿಗೆ ಮುಂದಿನ ಆರೋಗ್ಯ ಆಯಸ್ಸು ಸುಖಮಯವಾಗಿರಲೆಂದು , ತಾವು ದೇವರಲ್ಲಿ ಕೋರುವುದಾಗಿ ಅವರು ತಿಳಿಸಿದ್ದಾರೆ. ವಿಷ್ಣು ಸೇನಾ ಸಮಿತಿ ಮುಖಂಡರಾದ ಜನನಾಯಕ ಕುರಿಹಟ್ಟಿ ಓಬಣ್ಣ , ಮಲಿಯಪ್ಪ , ರಾಜು ಸೇರಿದಂತೆ. ವಿವಿದ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರು. ಮತ್ತು ಆರೊಗ್ಯ ಇಲಾಖಾಧಿಕಾರಿಗಳು ಸಿಬ್ಬಂದಿಯವರು ಉಪಸ್ಥಿತರಿದ್ದು. ನಿಜಲಿಂಗಪ್ಪರವರಿಗೆ ನಿವೃತ್ತಿ ಜೀವನ , ಸುಖಮಯವಾಗಿರಲೆಂದು ಶುಭ ಹಾರೈಸಿದ್ದಾರೆ. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*3
- ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ ಜಿಲ್ಲೆಯಲ್ಲಿ 10 ಸಾವಿರ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್. ಮಂಡ್ಯ : ಲೋಕಾ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್, 10 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಬಿದ್ದ ಬ್ರಷ್ಟ RI, ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು RI ಮಧುಸೂಧನ ಲೋಕಾಯುಕ್ತಕ್ಕೆ ಲಾಕ್ ಆಗಿದ್ದಾನೆ. ಜಮೀನು ದುರಸ್ತಿ ಹಾಗೂ ಪೋಡಿ ಕಾರ್ಯಕ್ಕೆ ಅರ್ಜಿ ಹಾಕಿದ್ದ ರೈತ ನಂಜುಂಡಸ್ವಾಮಿ, ಪೋಡಿ ಮಾಡಿಕೊಡಲು 10000 ಲಂಚಕ್ಕೆ ಬೇಡಿಕೆ ಇಟ್ಟಿದ್ದ RI ಮಧುಸೂದನ್ ಎನ್ನಲಾಗಿದೆ.1