ಕಣ್ಣನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು:ಮುಖಂಡ ಚಿದಾನಂದ ಸವದಿ ಅಥಣಿ: ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗ. ಕಣ್ಣನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಿದ್ದೆ ಆದಲ್ಲಿ ಬದುಕೆಲ್ಲ ಅಂಧಕಾರದಲ್ಲಿ ಕಳೆಯುವ ಅಪಾಯವಿದ್ದು, ಈ ಬಗ್ಗೆ ನಾವೆಲ್ಲರೂ ಜಾಗೃತಿ ವಹಿಸಬೇಕು ಎಂದು ಯುವ ಮುಖಂಡ ಚಿದಾನಂದ ಸವದಿ ಹೇಳಿದರು. ಅವರು ಅಥಣಿ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ತಾಲೂಕು ಆರೋಗ್ಯ ಇಲಾಖೆ, ಲಕ್ಷ್ಮಣ ಸವದಿ ಫೌಂಡೇಶನ್ ಹಾಗೂ ಟೆಕೆ ಐ ಕ್ಲಿನಿಕ್, ಸಾಂಗಲಿ ಇವರ ಆಶ್ರಯದಲ್ಲಿ ಶಾಸಕ ಲಕ್ಷ್ಮಣ ಸವದಿ ಅವರ 66ನೇ ಜನ್ಮದಿನದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಉಚಿತ ಕಣ್ಣಿನ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ದೇಹದ ಸೂಕ್ಷ್ಮ ಅಂಗವಾಗಿ ರುವ ಕಣ್ಣಿನ ಆರೋಗ್ಯ ಕಾಪಾಡಲು ಮತ್ತು ದೃಷ್ಟಿ ಸಮಸ್ಯೆ ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ, ಅಮೂಲ್ಯವಾದ ಕಣ್ಣುಗಳ ರಕ್ಷಣೆ ಬಗ್ಗೆಯೂ ಸದಾ ಎಚ್ಚರ ವಹಿಸಬೇಕು ಎಂದರು. ನನ್ನ ಹಾಗೂ ನಮ್ಮ ತಂದೆಯವರ ಜನ್ಮದಿನದ ನಿಮಿತ್ತ ಟಿಕೆ ನೇತ್ರ ಚಿಕಿತ್ಸಾ ಆಸ್ಪತ್ರೆಯ ಸಹಕಾರದಿಂದ ಅನೇಕ ಉಚಿತ ಶಿಬಿರಗಳನ್ನು ನಡೆಸುವ ಮೂಲಕ ಸಾವಿರಾರು ಜನರ ಅಂಧತ್ವ ಸಮಸ್ಯೆಯನ್ನ ನಿವಾರಿಸಲಾಗಿದ್ದು, ಈ ಸಾಮಾಜಿಕ ಸೇವೆ ನಮಗೆ ಬಹಳಷ್ಟು ಖುಷಿ ತಂದಿದೆ ಎಂದು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ ಮಾತನಾಡಿ, ಅಥಣಿ ಮತ ಕ್ಷೇತ್ರದ ಶಾಸಕರಾಗಿರುವ ಲಕ್ಷ್ಮಣಸವದಿ ತಾಲೂಕಿನ ಬಡ ಜನತೆಗೆ ಉಚಿತ ಹಾಗೂ ಉತ್ತಮ ಆರೋಗ್ಯ ಸೇವೆಗಳು ದೊರಕಬೇಕು ಎಂಬ ಉದ್ದೇಶದಿಂದ ಅನೇಕ ಸೌಲಭ್ಯಗಳನ್ನ ಒದಗಿಸಿದ್ದಾರೆ. ಸುಮಾರು 27 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ಮಾಣ ಕಾರ್ಯ ಪ್ರಗತಿ ಹಂತದಲ್ಲಿದ್ದು, ಇದರಿಂದ ತಾಲೂಕಿನಜನತೆಗೆ ಬಹಳಷ್ಟು ಅನುಕೂಲವಾಗಲಿದೆ. ಶಾಸಕರ ಜನ್ಮದಿನದ ನಿಮಿತ್ತ ಅನೇಕ ವರ್ಷಗಳಿಂದ ನೇತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗುತ್ತಿದ್ದು, ಇದರಿಂದ ಸಾವಿರಾರು ಜನರಿಗೆ ಶಸ್ತ್ರಚಿಕಿತ್ಸೆ ಮೂಲಕ ಅಂಧತ್ವ ನಿವಾರಣೆ ಮಾಡಲಾಗಿದೆ. ಶಾಸಕರ ಈ ಜನಪರ ಕಾಳಜಿಯನ್ನು ಪ್ರಶಂಶಿಸಿದರು. ನಂತರ 300ಕ್ಕೂ ಅಧಿಕ ಅಂಧತ್ವ ಸಮಸ್ಯೆ ಇರುವ ಜನರಿಗೆ ಚಿಕಿತ್ಸೆ ನೀಡಲಾಯಿತು. 250 ಜನರಿಗೆ ಮೋತಿ ಬಿಂದು ಶಸ್ತ್ರ ಚಿಕಿತ್ಸೆಗಾಗಿ ಸಾಂಗ್ಲಿ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಯುವ ಮುಖಂಡ ಬೀರಪ್ಪ ಯಕ್ಕಂಚಿ, ಟೆಕೆ ನೇತ್ರ ಚಿಕಿತ್ಸಾಲಯದ ಡಾ.ಆಕಾಶ ಎಂ. ಹಾಗೂ ಅಥಣಿ ಸಾರ್ವಜನಿಕ ಆಸ್ಪತ್ರೆಯ ನೇತ್ರ ತಜ್ಞ ಡಾ.ರಮೇಶ ಹುಲಕುಂದ, ಮಿಲಿಂದ್ ಸಲಗರ, ಮಹಾಂತೇಶ ಟಕ್ಕಣ್ಣವರ, ಪ್ರಕಾಶ ನರಟ್ಟಿ, ರಮೇಶ ಸಜ್ಜನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

- Post by Omprakash rajkumar khot4
- ತೆರದಾಳ ಪಟ್ಟಣದ ಲಾಡ್ಜ್ ಒಂದರಲ್ಲಿ ಇಬ್ಬರಿಗೆ ಅಗ್ನಿ ಅವಘಡ ಇಬ್ಬರೂ ಸ್ಥಿತಿ ಚಿಂತಾಜನಕ1
- ಮುಧೋಳ : ಸಮೀಪದ ಸೈದಾಪುರ ಕ್ರಾಸ್ ಬಳಿ ಎಥೆನಾಲ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮುಂಜಾಗ್ರತಾ ಕ್ರಮ ಕೈಗೊಂಡು ಎಥೆನಾಲ್ ಸೋರಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. 16ಚಕ್ರದ ಬೃಹತ್ ಗಾತ್ರದ ಲಾರಿ ಸಮೀಪದ ಸಕ್ಕರೆ ಕಾರ್ಖಾನೆಯಿಂದ ಎಥೆನಾಲ್ ತುಂಬಿಕೊಂಡು ತಮಿಳುನಾಡು ಕಡೆಗೆ ಹೊರಟಿತ್ತು ಎಂಬ ಮಾಹಿತಿ ಇದೆ. ಸ್ಥಳಕ್ಕೆ ಮುಧೋಳ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಯಾವುದೇ ರೀತಿಯ ಜೀವಹಾನಿ ಸಂಭವಿಸಿಲ್ಲ. ಮಹಾಲಿಂಗಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.4
- Post by Manohar megeri5
- ಸೂರಿ ಅಣ್ಣಾ ಚಿತ್ರ ತಂಡದಿಂದ ಪತ್ರಿಕಾ...1
- ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.3
- ಬೆಳಗಾಂವ ಜಿಲ್ಲಾ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದ ಸಾರ್ವಜನಿಕರು ರಾಮದುರ್ಗ ತಾಲೂಕಿಗೆ ಬಂದಂತ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ ತಮ್ಮ ಅಳಿಲನ್ನು ಮಾಧ್ಯಮದವರ ಮುಂದೆ ಹೇಳಿಕೊಂಡರು. ಹೊಸಕೋಟೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಬ್ಬ ಡಾಕ್ಟರ್ ಇದ್ದು ಎರಡು ವರ್ಷದಿಂದ ಅವರ ಸೇವೆ ಒಳ್ಳೆ ತರಹ ಮಾಡುತ್ತಾ ಬಂದಿದ್ದು ಹೊಸಕೋಟೆ ಗ್ರಾಮದ ಸುತ್ತು ಮುತ್ತಿಲಿನ ಹಳ್ಳಿಗಳಿಗೆ ಇವರ ಸೇವೆ ಅಚ್ಚುಮೆಚ್ಚಿಗೆ ಪಾತ್ರರಾಗಿದ್ದಾರೆ. ಈಗ ಸರ್ಕಾರದವರು ಇವರನ್ನು ವರ್ಗಾವಣೆ ಮಾಡಿದ್ದಕ್ಕೆ ಹೊಸಕೋಟೆ ಗ್ರಾಮಸ್ಥರು ಅವರನ್ನು ವರ್ಗಾವಣೆ ಮಾಡದಂತೆ ಮನವಿ ಸಲ್ಲಿಸಿ ತಮ್ಮ ಅನಿಸಿಕೆಗಳನ್ನು ಮಾಧ್ಯಮದವರು ಮುಂದೆ ಹೇಳಿಕೊಂಡು ಅವರನ್ನು ವರ್ಗಾವಣೆ ಮಾಡಿದಲ್ಲಿ ಜಿಲ್ಲಾಮಟ್ಟದಲ್ಲಿ ಸತ್ಯಾಗ್ರಹ ಮಾಡಲಾಗುವುದೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.1
- ಸರ್ಕಾರಿ ಆಸ್ಪತ್ರೆ ಡಿ.ದರ್ಜೆ ಹೊರಗುತ್ತಿಗೆ ನೌಕರರು ಮರು ನೇಮಕ.DHO ಮಂಜುನಾಥ ಮಾಹಿತಿ1