Shuru
Apke Nagar Ki App…
Mustakim .KUDACHI .news
More news from ಕರ್ನಾಟಕ and nearby areas
- Post by Mustakim .KUDACHI .news1
- ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಧಾರವಾಡ ಶಾರದಾ ಸ್ಕೂಲ್ ಬಳಿಯ ರಸ್ತೆಯಲ್ಲಿ ಭೀಮ ನಡಿಗೆ ಶೀಘ್ರ ನೇಮಕಾತಿ ಕಡೆಗೆ ಹೋರಾಟದ ಭಾಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲು ಆಗಮಿಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಸಂವಿಧಾನ ವಿರೋಧಿ ನಡೆಯನ್ನು ಸರ್ಕಾರ ಅನುಸರಿಸುತ್ತಿದೆ. ಉದ್ಯೋಗಾಕಾಂಕ್ಷಿಗಳ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನ ಮಾಡುತ್ತಿದೆ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾಲಾರ್ಪಣೆ ಮಾಡಲು ಬೀಡುತ್ತಿಲ್ಲ, ನಾವು ಜೈಲಿನಿಂದಲೇ ಹೋರಾಟ ನಡೆಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.1
- Post by Nitin 9071795156 press reporte3
- Post by @april14news1
- ಮಹಾನ್ ವ್ಯಕ್ತಿಗಳನ್ನು ಜಾತಿಯ ಬಣ್ಣ ಬಳಿದು ಸಂಕುಚಿತ ದೃಷ್ಟಿಯಿಂದ ನೋಡುವ ಭಾವನೆ ಹೋಗಬೇಕು. ಅಥಣಿ :ಈ ನಾಡಿನಲ್ಲಿ ಬಸವಣ್ಣನಂತ ವರು ಮಹಾನ್ ಸಮಾಜ ಪರಿವರ್ತಕರು ಈ ನಾಡಿನಲ್ಲಿ ಜನಿಸಿ ಮೇಲು, ಕೀಳು,ಹೋಗಲಾಡಿಸಲು ಯತ್ನಿಸಿದರು.ಇಂದು ಮಹಾನ್ ವ್ಯಕ್ತಿಗಳನ್ನು ಜಾತಿಯ ಬಣ್ಣ ಬಳಿದು ಸಂಕುಚಿತ ದೃಷ್ಟಿಯಿಂದ ನೋಡುವ ಭಾವನೆ ಹೋಗಬೇಕು. ಅಂಬೇಡ್ಕರ್ ಚಿಂತನೆಗಳನ್ನು ಇಂದು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಕಳವಳ ವ್ಯಕ್ತಪಡಿಸಿದರು. ಅವರು ಅಥಣಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಸಮಸ್ತ ತಾಲೂಕು ಆಡಳಿತದ ಸಂಯುಕ್ತ ಆಶ್ರಯದಲ್ಲಿ 135 ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.ಶಿಕ್ಷಣವು ಹಾಲಿನಂತೆ, ಅದನ್ನು ಕುಡಿದವನು ಘರ್ಜಿಸಲೇಬೇಕು" ಎಂಬ ಅವರ ಮಾತು ಇಂದಿನ ದಿನ ನಾವು ಎಷ್ಟು ಜನರಿಗೆ ಗುಣಮಟ್ಟದ ಶಿಕ್ಷಣ ನೀಡಿದ್ದೇವೆ.ಶಿಕ್ಷಣ ಮತ್ತು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ ಮಾತ್ರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂಬುದನ್ನು ಅಂಬೇಡ್ಕರ್ ಅಂದೇ ಮನಗಂಡಿದ್ದರು. ಇಂದು ಪ್ರತಿಯೊಬ್ಬ ದಲಿತರು ಬಾಬಾಸಾಹೇಬರ ಆಶಯದಂತೆ ಶಿಕ್ಷಣ, ಸಂಘಟನೆ ಗುರಿ ಈಡೇರಿಸಲು ನೀವೆಲ್ಲ ನಿಮ್ಮ ಮಕ್ಕಳಿಗೆ ಶಿಕ್ಷಣ ನೀಡಿ.ಶೀಘ್ರ 1 ಕೋಟಿ ರೂ ಗಳ ವೆಚ್ಚದಲ್ಲಿ ಡಿಜಿಟಲ್ ಲೈಬ್ರರಿ ಆರಂಭ ಮಾಡುತ್ತೇವೆ.ಓದುವ ಮಕ್ಕಳು ಕಡಿಮೆ ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಊಟ ಮಾಡಿ ಲೈಬ್ರರಿಯಲ್ಲಿ ಅಭ್ಯಾಸ ಮಾಡಲಿ. ಈಗಾಗಲೇ ನಮ್ಮ ಮಕ್ಕಳಿಗೆ ಪಶು ವೈದ್ಯಕೀಯ ಮಹಾವಿದ್ಯಾಲಯ ಆರಂಭವಾಗಿದೆ , ಕೃಷಿ ಕಾಲೇಜು ಶೀಘ್ರದಲ್ಲಿ ಆರಂಭವಾಗಲಿದೆ. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ನಾವು ಜಾರಿಗೆ ತರಬೇಕು ಎಂದು ಹೇಳಿದ ಅವರು ಬರುವ ಜೂನ್ ನಲ್ಲಿ ಕೊಟ್ಟಲಗಿ, ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಹಾಗೂ ಬಸವೇಶ್ವರಏತ ನೀರಾವರಿ ಯೋಜನೆ ಮುಖ್ಯಮಂತ್ರಿಗಳ ಮೂಲಕ ಉದ್ಘಾಟನೆ ಹಾಗೂ ಕೃಷಿ ಕಾಲೇಜು ಭೂಮಿ ಪೂಜೆ ನೇರವೆ ರಿಸಲಾಗುವುದು. ಐದು ಕಡೆಯಲ್ಲಿ 110 ಕೆ ವಿ ವಿದ್ಯುತ್ ಕೇಂದ್ರ ಆರಂಭಿಸಲಾಗುವುದು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು, ಪಟ್ಟಣದಲ್ಲಿ 260 ಕಿಮಿ ಕೇಬಲ್ ಮೂಲಕ ವಿದ್ಯುತ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಬರುವ ದಿನಮಾನದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ತರುವ ಕೆಲಸ ಮಾಡೋಣ ಎಂದು ಹೇಳಿದರು. ಈ ವೇಳೆ ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ,ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ಉಪನ್ಯಾಸಕರಾಗಿ ಆಗಮಿಸಿದ ಸುಭಾಸ ನಾಟಿಕಾರ, ಪಂಚಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಸಿದ್ದಾರ್ಥ ಸಿಂಗೆ ಮಾತನಾಡಿ ದರು. ಈ ವೇಳೆ ದತ್ತಾ ವಾಸ್ಟರ್, ತಹಸೀಲ್ದಾರ್ ಸಿದರಾಯ ಭೋಸಗಿ, ಪ್ರಶಾಂತ ಮುನ್ನೊಳಿ, ಶಿವಾನಂದ ಕಲ್ಲಾಪುರ, ಅಶೋಕ ಗುಡಿಮನಿ,ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು ಪರಶುರಾಮ ಪತ್ತಾರ, ಎಂ ಆರ್ ಮುಂಜೆ, ರಾವಸಾಬ ಐಹೊಳೆ, ಕಲ್ಲೇಶ ಮಡ್ಡಿ, ಬಸವರಾಜ ನಾಯಿಕ ಸೇರಿದಂತೆ ತಾಲೂಕಿನ ಸಮಸ್ತ ಜನತೆ ಉಪಸ್ಥಿತರಿದ್ದರು. ಈ ವೇಳೆಯಲ್ಲಿ ಎಸ್ ಎಸ್ ಎಲ್ ಸಿ, ಪಿ ಯು ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳಿಗೆ ಸನ್ಮಾನ ಮಾಡಲಾಯಿತು.4
- Post by Onlinetv24x71
- ಗದಗ ಏಪ್ರಿಲ್ 14: ಡಾ. ಅಂಬೇಡ್ಕರ್ ಹಾಗೂ ಡಾ. ಬಾಬುಜಿ ಅವರ ಜೀವನದ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರ ಜೀವನವೇ ಸ್ಪಷ್ಟಪಡಿಸುತ್ತದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು. ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಗದಗ-ಬೆಟಗೇರಿ ಇವರ ಸಂಯುಕ್ತ ಆಶ್ರಯದಲ್ಲಿ ಗದಗ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಡಾ. ಅಂಬೇಡ್ಕರ್ ಅವರು ಬಡವರ ಹಾಗೂ ಹಿಂದುಳಿದ ವರ್ಗಗಳ ಉನ್ನತಿಗಾಗಿ ತಮ್ಮ ಸಂಪೂರ್ಣ ಜೀವನವನ್ನು ಅರ್ಪಿಸಿದ್ದು, ಸಮಾನತೆ ಆಧಾರಿತ ಸಮಾಜ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಭಾರತೀಯ ಸಂವಿಧಾನವನ್ನು ರೂಪಿಸಿ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ಕಲ್ಪಿಸಿದ ಮಹತ್ವದ ವ್ಯಕ್ತಿತ್ವ ಅವರು ಎಂದು ಪ್ರಶಂಸಿಸಿದರು. ಅರ್ಥಶಾಸ್ತ್ರ, ಇತಿಹಾಸ ಹಾಗೂ ಮನಶಾಸ್ತ್ರ ಸೇರಿದಂತೆ ಹಲವು ವಿಷಯಗಳಲ್ಲಿ ಅಪಾರ ಜ್ಞಾನ ಹೊಂದಿದ್ದ ಡಾ. ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಸಮಿತಿಯ ಮುಖ್ಯಸ್ಥರಾಗಿ ನೇಮಿಸಲಾಗಿತ್ತು. ಜಾತಿ ಪದ್ಧತಿಯನ್ನು ನಿರ್ಮೂಲಗೊಳಿಸಿ ಸಮಾನತೆ ಸ್ಥಾಪನೆಗೆ ಅವರು ಕೈಗೊಂಡ ಪ್ರಯತ್ನಗಳು ಶ್ಲಾಘನೀಯ ಎಂದು ಹೇಳಿದರು. ಅಂಬೇಡ್ಕರ್ ಅವರ ಸೇವೆಯನ್ನು ಮನಗಂಡು ಅಂದಿನ ಪ್ರಧಾನಮಂತ್ರಿ ವಿ.ಪಿ. ಸಿಂಗ್ ಅವರು ಅವರಿಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು. ಇಂದಿನ ಪ್ರಧಾನಿ ನರೇಂದ್ರ ಮೊದಿ ಅವರ ಸರ್ಕಾರವೂ ಅವರ ಸ್ಮರಣಾರ್ಥ ಪಂಚತೀರ್ಥ ಕ್ಷೇತ್ರಗಳನ್ನು ಘೋಷಿಸಿ ಅಭಿವೃದ್ಧಿಪಡಿಸಿರುವುದನ್ನು ಅವರು ಉಲ್ಲೇಖಿಸಿದರು. ಸಂವಿಧಾನದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಅಳವಡಿಸಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರಿಗೆ ವಿವಿಧ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸಿದ ಮಹಾನ್ ನಾಯಕ ಡಾ. ಅಂಬೇಡ್ಕರ್ ಎಂದು ಹೇಳಿದರು. ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಎಂಬ ಅವರ ಮೂರು ಸೂತ್ರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಬಲ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ಎಸ್ ವಿ ಸಂಕನೂರ ಕರೆ ನೀಡಿದರು. ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರು, ರಾಷ್ಟ್ರ ಪ್ರಶಸ್ತಿ ವಿಜೇತರು ಹಾಗೂ ಜಿಲ್ಲಾ ಸಫಾಯಿ ಕರ್ಮಚಾರಿ ಸಮಿತಿ ಸದಸ್ಯರಾದ ಎಸ್.ಎನ್. ಬಳ್ಳಾರಿ ಅವರು ಉಪನ್ಯಾಸ ನೀಡುತ್ತಾ, ಡಾ. ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರು ಬಾಲ್ಯದಿಂದಲೇ ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿದ ಮಹಾನ್ ವ್ಯಕ್ತಿ ಎಂದು ಹೇಳಿದರು. ತಮ್ಮ ಬಾಲ್ಯದ ನೋವು ಮತ್ತು ಅನುಭವಗಳನ್ನು ಸಮಾಜದ ಇತರರು ಅನುಭವಿಸಬಾರದು ಎಂಬ ದೃಢ ಸಂಕಲ್ಪದಿಂದ ಅವರು ಸಮಾನತೆಗಾಗಿ ಜೀವನಪರ್ಯಂತ ಹಗಲಿರುಳು ಹೋರಾಡಿದರು ಎಂದು ವಿವರಿಸಿದರು. ಅಂಬೇಡ್ಕರ್ ಅವರ ತಂದೆಯ ಪ್ರೇರಣೆ ಅವರ ಜೀವನದಲ್ಲಿ ಮಹತ್ವದ ತಿರುವಾಗಿದ್ದು, ಬಾಲ್ಯದಲ್ಲೇ ದೃಢನಿಶ್ಚಯ ಬೆಳೆಸಲು ಕಾರಣವಾಯಿತು. ಕಷ್ಟಕರ ಪರಿಸ್ಥಿತಿಗಳ ನಡುವೆಯೂ ಶಿಕ್ಷಣದ ಮೂಲಕ ಅವರು ಎತ್ತರಕ್ಕೇರಿದ ರೀತಿಯನ್ನು ವಿವರಿಸಿ, ಅಸ್ಪೃಶ್ಯತೆ ವಿರುದ್ಧ ಅವರ ನಿರಂತರ ಹೋರಾಟವನ್ನು ಅವರು ಮನದಟ್ಟು ಮಾಡಿದರು. ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ನೀಡಿದ್ದು, ಬಡವರು ಮತ್ತು ಅಸ್ಪೃಶ್ಯರು ಸಹ ಉನ್ನತ ಹುದ್ದೆಗಳನ್ನು ಅಲಂಕರಿಸುವಂತಾಗಿದೆ. ಇಂತಹ ಅನೇಕ ಉದಾಹರಣೆಗಳನ್ನು ಇಂದಿನ ಸಮಾಜದಲ್ಲೇ ಕಾಣಬಹುದು ಎಂದು ಹೇಳಿದರು. ಎಚ್.ಸಿ.ಇ.ಎಸ್. ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಪ್ರೊ. ಡಿ.ಜಿ. ಜೋಗಣ್ಣನವರ ಅವರು ಡಾ. ಬಾಬು ಜಗಜೀವನ ರಾಮ್ ಅವರ ಕುರಿತು ಮಾತನಾಡಿ, ಅವರು ಮೃದು ಸ್ವಭಾವದವರಾಗಿದ್ದು, ಅಪ್ರತಿಮ ಹೋರಾಟಗಾರರಾಗಿದ್ದರು ಎಂದು ತಿಳಿಸಿದರು. ಅಂಬೇಡ್ಕರ್ ಹಾಗೂ ಬಾಬುಜಿ ಇಬ್ಬರೂ ಅಸ್ಪೃಶ್ಯತೆ ನಿವಾರಣೆಗೆ ನಮಗೆಲ್ಲ ಸ್ಪೂರ್ತಿದಾಯಕ ವ್ಯಕ್ತಿತ್ವಗಳಾಗಿದ್ದಾರೆ ಎಂದರು. ಡಾ. ಬಾಬುಜಿ ಅವರ ಬಾಲ್ಯ ಜೀವನ ಕಷ್ಟಕರವಾಗಿದ್ದು, ತಾಯಿಯನ್ನು ಕಳೆದುಕೊಂಡು ಸಂಕಷ್ಟಗಳಲ್ಲಿ ಬೆಳೆದ ಅವರು ಕಠಿಣ ಪರಿಶ್ರಮದಿಂದ ದೇಶದ ಉನ್ನತ ಸ್ಥಾನಗಳಿಗೆ ಏರಿದರು. ಅವರ ಜೀವನದ ವಿವಿಧ ಹಂತಗಳನ್ನು ವಿವರಿಸಿ, ಸಮಾಜದಲ್ಲಿ ಮಾನವೀಯತೆ ಬೆಳೆಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಇಂದಿನ ಸಮಾಜದಲ್ಲಿಯೂ ಅಸ್ಪೃಶ್ಯತೆ ಇನ್ನೂ ಅಸ್ತಿತ್ವದಲ್ಲಿದ್ದು, ಪ್ರತಿಯೊಬ್ಬರೂ ಮನುಷ್ಯರನ್ನು ಮನುಷ್ಯರಂತೆ ಕಾಣಬೇಕು ಎಂಬ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಮುಂದುವರಿಯಬೇಕು ಎಂಬುದನ್ನು ಡಾ. ಬಾಬು ಜಗಜೀವನ ರಾಮ್ ಅವರು ಒತ್ತಿ ಹೇಳಿದ್ದರು ಎಂದು ಉಲ್ಲೇಖಿಸಿದರು. ಕಾನೂನು ವಿದ್ಯಾರ್ಥಿ ಮಣಿಕಂಠ ಹಾದಿಮನಿ ಅವರು ಸಹ ವಿಶೇಷ ಉಪನ್ಯಾಸ ನೀಡಿ, ಡಾ. ಬಿ ಅಂಬೇಡ್ಕರ್ ಅವರು ದಲಿತ ನಾಯಕಕನಲ್ಲ ಅವರೋಬ್ಬ ಅಪ್ರತಿಮ ವಿಶ್ವನಾಯಕ ಎಂದು ಬಣ್ಣಿಸಿದರು. ಡಾ. ಅಂಬೇಡ್ಕರ್ ಅವರ ಕುರಿತಾದ ಪ್ರಭಂದ ಸಂಕಲನವನ್ನು ವಿದಾನ ಪರಿಷತ್ ಶಾಸಕ ಎಸ್ ವಿ ಸಂಕನೂರ ಸೇರಿದಂತೆ ವೇದಿಕೆಯಲ್ಲಿರುವ ಅತಿಥಿಗಳು ಬಿಡುಗಡೆ ಮಾಡಿದರು. ನಂತರ ಉತ್ತಮ ಕಾರ್ಯನಿರ್ಹಣೆ ಮಾಡಿದ ಪೌರಕಾರ್ಮಿಕರಿಗೆ ಸನ್ಮಾನಿಸಿದರು. ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸಂವಿಧಾನ ಪ್ರಸ್ತಾವನೆ ಬೋಧಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ.ನಂದಾ ಹಣಬರಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಪ್ರೊ.ಬಾಹುಬಲಿ ಜೈನರ ನಿರ್ವಹಣೆ ಮಾಡಿದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಪ್ರಮುಖರಾದ ಕೃಷ್ಣ ಗೌಡ ಪಾಟೀಲ, ಬಸವಾರಾಜ ಕಡೆಮನಿ, ಕೃಷ್ಣಾ ಪರಾಪೂರ, ಅಶೋಕ ಕುಡತಿನಿ, ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್.ಶ್ರೀಧರ್ , ಜಿಲ್ಲಾ ಪೊಲೀಸ ವರಿಷ್ಟಾದಿಕಾರಿ ರೋಹನ್ ಜಗದೀಶ್, ಜಿಪಂ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಆರ್, ಸಹಾಯಕ ಆಯುಕ್ತ ಗಂಗಪ್ಪ ಎಂ, ತಹಶಿಲ್ದಾರರ ಶ್ರೀನಿವಾಸ್ ಮೂರ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ.ನಂದಾ ಹಣಬರಟ್ಟಿ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಎಸ್ ಪವಾರ ಸೇರಿದಂತೆ ಇತರರು ಹಾಜರಿದ್ದರು. *ಮೆರವಣಿಗೆ* : ಡಾ. ಅಂಬೇಡ್ಕರ್ ಹಾಗೂ ಡಾ. ಬಾಬುಜೀ ಅವರ ಭಾವಚಿತ್ರಗಳ ಮೆರವಣಿಗೆಯು ಗದಗ ನಗರಸಭೆ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಗೌರವ ಮಾಲಾರ್ಪಣೆಯೊಂದಿಗೆ ಪ್ರಾರಂಭಗೊಂಡು ಮಹಾತ್ಮಾ ಗಾಂಧಿ ಸರ್ಕಲ್, ಮಹೇಂದ್ರಕರ್ ಸರ್ಕಲ್ , ಟಾಂಗಾ ಕೂಟ್ , ಬಸವೇಶ್ವರ ಸರ್ಕಲ್ , ಗುಜ್ಜರಬಸ್ತಿ , ಮುಳಗುಂದನಾಕಾ ಮಾರ್ಗವಾಗಿ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಬಂದು ತಲುಪಿತು.1
- ಧಾರವಾಡ: ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಧಾರವಾಡ ಹಾಶ್ಮೀ ನಗರದಲ್ಲಿರುವ ಹತ್ಯೆಯಾದ ಯೂಥ್ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ನಿವಾಸಕ್ಕೆ ಭೇಟಿ ನೀಡಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಫೈರೋಜ್ ಪಠಾಣ್ ಹತ್ಯೆ ಪ್ರಕರಣದಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಕುರಿತು ಪೊಲೀಸರು ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕುಟುಂಬ ಸದಸ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಈ ವೇಳೆ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.1