Shuru
Apke Nagar Ki App…
All About,Irregularities & One Man 5 Post by highly influential person in #DistrictWaqfAdvisoryCommittee #Mysuru *ಭಾರತ ನಲ್ಲಿ ವೈರಲ್*
Md Aleemulla Shariff
All About,Irregularities & One Man 5 Post by highly influential person in #DistrictWaqfAdvisoryCommittee #Mysuru *ಭಾರತ ನಲ್ಲಿ ವೈರಲ್*
More news from ಕರ್ನಾಟಕ and nearby areas
- All About,Irregularities & One Man 5 Post by highly influential person in #DistrictWaqfAdvisoryCommittee #Mysuru *ಭಾರತ ನಲ್ಲಿ ವೈರಲ್*1
- ನಂಜನಗೂಡು ತಾಲ್ಲೂಕಿನಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಬರ ಪರಿಶೀಲನೆ ನಂಜನಗೂಡು ತಾಲ್ಲೂಕಿನಲ್ಲಿ ಡಿಸಿಎಂ ಡಾ.ಜಿ. ಪರಮೇಶ್ವರ್ ಬರ ಪರಿಶೀಲನೆ ನಂಜನಗೂಡು: ತಾಲ್ಲೂಕಿನ ಚಿಕ್ಕ ಕವಲಂದೆ, ದೊಡ್ಡ ಕವಲಂದೆ ಹಾಗೂ ಗಟ್ಟವಾಡಿ ಗ್ರಾಮಗಳಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಬರ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಜೋಳ, ಸೂರ್ಯಕಾಂತಿ ಸೇರಿದಂತೆ ವಿವಿಧ ಬೆಳೆಗಳನ್ನು ರೈತರ ಜಮೀನುಗಳಿಗೆ ತೆರಳಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಉಪಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು. ಗಟ್ಟವಾಡಿ ಗ್ರಾಮದ ರೈತ ಮಹದೇವಪ್ಪ ಮತ್ತು ಶಿವಬಸಪ್ಪ ಅವರ ಜಮೀನಿಗೆ ಭೇಟಿ ನೀಡಿ ಬೆಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ಡಾ.ಜಿ. ಪರಮೇಶ್ವರ್ ಅವರು, ನಂಜನಗೂಡು ತಾಲೂಕಿನಲ್ಲಿ ಬರ ವೀಕ್ಷಣೆಗೆ ಬಂದಿದ್ದೇನೆ. ಮಳೆಯ ಕೊರತೆಯಿಂದ ಜೋಳ ಹಾಗೂ ಸೂರ್ಯಕಾಂತಿ ಸೇರಿದಂತೆ ಹಲವು ಬೆಳೆಗಳು ಒಣಗಿ ನಾಶವಾಗಿವೆ ಎಂದು ಹೇಳಿದರು. ರೈತರು ಸಾಲ ಮಾಡಿಕೊಂಡು ಸಾವಿರಾರು ರೂಪಾಯಿ ವೆಚ್ಚ ಮಾಡಿ ಬೆಳೆ ಬೆಳೆದಿದ್ದಾರೆ. ಆದರೆ ಮಳೆ ಇಲ್ಲದೆ ಬೆಳೆಗಳು ನಾಶವಾಗಿರುವುದರಿಂದ ರೈತರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಈ ಗಂಭೀರ ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ದೊಡ್ಡ ಕವಲಂದೆ ಭಾಗಕ್ಕೆ ನೀರಾವರಿ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಕೆಲಸ ಮಾಡಲಿದ್ದಾರೆ ಎಂದರು. ರೈತರ ಅಸಮಾಧಾನ ಇದೇ ವೇಳೆ ಪತ್ರಕರ್ತರು ಸ್ಮಶಾನ ಭೂಮಿ ಸಮಸ್ಯೆ ಕುರಿತು ಕಂದಾಯ ಸಚಿವರ ಗಮನ ಸೆಳೆಯಲು ಪ್ರಯತ್ನಿಸಿದರೂ, ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮುಂದುವರಿದರು. ಬರ ಪರಿಶೀಲನಾ ಪ್ರವಾಸವು ಕೇವಲ ಕೆಲವೇ ನಿಮಿಷಗಳಿಗೆ ಸೀಮಿತವಾಗಿದ್ದು, ರೈತರಿಗೆ ತಮ್ಮ ಸಮಸ್ಯೆಗಳನ್ನು ಸಂಪೂರ್ಣವಾಗಿ ವಿವರಿಸಲು ಅವಕಾಶ ದೊರೆಯಲಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ರೈತರನ್ನು ಉಪಮುಖ್ಯಮಂತ್ರಿಗಳ ಬಳಿ ತೆರಳಿ ಸಮಸ್ಯೆ ಹೇಳಲು ಅವಕಾಶ ನೀಡಲಿಲ್ಲ ಎಂಬ ಆರೋಪವೂ ರೈತರಿಂದ ಕೇಳಿಬಂದಿದೆ. “ಬರ ಪ್ರವಾಸವು ಕೇವಲ ನಾಮಕಾವಸ್ಥೆಗೆ ಮಾತ್ರ ಸೀಮಿತವಾಗಿದೆಯೇ?” ಎಂಬ ಪ್ರಶ್ನೆಯನ್ನು ರೈತರು ವ್ಯಕ್ತಪಡಿಸಿದ್ದು, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ತಹಶೀಲ್ದಾರ್ ಡಾ. ಸ್ಮಿತಾ ರಾಮು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ರವಿ, ಸಹಾಯಕ ಕೃಷಿ ನಿರ್ದೇಶಕ ರವಿ, ಕವಲಂದೆ ಉಪ ತಹಶೀಲ್ದಾರ್ ಕಿರಣ್ ಕುಮಾರ್, ರಾಜಸ್ವ ನಿರೀಕ್ಷಕ ಹೆನ್ರಿ ಡಿಸೋಜಾ, ಡಾ.ಜಿ. ಪರಮೇಶ್ವರ್ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸಿ. ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.4
- ಕೇಂದ್ರ ಸರ್ಕಾರದ ದ್ವೇಶ ರಾಜಕೀಯಾ ರಾಹುಲ್ ವಿರುದ್ದ FIR -ಕಾಂಗ್ರೆಸ್ ಆಕ್ರೋಶ ಮಂಡ್ಯ- ರಹುಲ್ ಗಾಂದಿ ವಿರುದ್ದ ದ್ವೇಶ ರಾಜಕೀಯ ಮಾಡುತ್ತಿರು ಕೇಂದ್ರ ಸರ್ಕಾರ ಸುಳ್ಳು FIR ದಾಖಲಿಸಿದ್ದು,ಕೂಡಲೆ ಅದನ್ನ ಹಿಂದೆಪಡೆಯಬೇಕು ಅಂತಆಗ್ರಹಿಸಿ ಕಾಂಗ್ರೆಸ‌್ ಮಂಡ್ಯಲ್ಲಿ ಪ್ರತಿಭಟನೆ ನಡೆಸಿತು.1
- ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕುಮಾರ್ ಸೂಚನೆ ಕೆ.ಆರ್.ಪೇಟೆ,ಸೆ.02: ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಗಂಭೀರ ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕುಡಿಯುವ ನೀರಿಗೆ ಅನುಧಾನದ ಕೊರತೆ ಇಲ್ಲ. ಸರ್ಕಾರವು ಕುಡಿಯುವ ನೀರಿಗೆ ಪ್ರತ್ಯೇಕ ಅಗತ್ಯ ಅನುಧಾನ ನೀಡಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದರು. ಅವರು ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಆಡಳಿತಾಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಕುಡಿಯುವ ನೀರಿನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು. ಕುಡಿಯುವ ನೀರಿಗೆ ಅನುಧಾನ ಕೊರತೆಯಿಲ್ಲ. ಸರ್ಕಾರವು ಕಡಿಯುವ ನೀರಿಗಾಗಿಯೇ ಪ್ರತ್ಯೇಕ ಅನುಧಾನ ಬಿಡುಗಡೆ ಮಾಡಿದೆ. ವಿದ್ಯುತ್ ಇಲಾಖೆ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಗಳು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಪೂರ್ಣ ಸಹಕಾರ ನೀಡಬೇಕು. ನಿರ್ಲಕ್ಷ್ಯ ಮಾಡಿದರೆ ಜಿಲ್ಲಾಡಳಿತವು ಇದಕ್ಕೆ ಗಂಭೀರವಾಗಿ ಪರಿಗಣಿಸಲಿದೆ. ಇದಕ್ಕೆ ಆಸ್ಪದ ಕೊಡದೇ ಕುಡಿಯುವ ನೀರಿಗೆ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಗ್ರಾಮ ಪಂಚಾಯಿತಿಗಳು ಬೇಸಿಗೆ ಮುಗಿಯುವ ತನಕ ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕೊಳವೆಬಾವಿ, ಪಂಪ್‌ಸೆಟ್ ಹಾಗೂ ಪೈಪ್‌ಲೈನ್‌ಗಳ ದುರಸ್ತಿಯನ್ನು ಮಾಡಿಸಲು ವಿಳಂಭ ಮಾಡಬಾರದು. ಅಗತ್ಯವಿರುವ ಕಡೆ ಪರ್ಯಾಯ ನೀರಿನ ಮೂಲಗಳನ್ನು ಗುರುತಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಅಪೂರ್ಣ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ದೊರೆಯುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದರು. ತಾಲ್ಲೂಕಿನ ಬರ ಪರಿಸ್ಥಿತಿ, ಕೆರೆ-ಕಟ್ಟೆಗಳಲ್ಲಿನ ನೀರಿನ ಸಂಗ್ರಹ, ಅಂತರ್ಜಲ ಮಟ್ಟ, ಬೆಳೆಗಳ ಸ್ಥಿತಿಗತಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಪರಿಶೀಲಿಸಿ, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಲ್ಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಶಾಸಕ ಹೆಚ್.ಟಿ.ಮಂಜು ಮಾತನಾಡಿ ವಸತಿ-ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಪ್ರತಿ ಗ್ರಾಮ ಪಂಚಾಯಿತಿ ವತಿಯಿಂದ ತಲಾ 5ಎಕರೆ ಗುರುತಿಸಿ ನಿವೇಶನ ಹಂಚಿಕೆ ಅವಕಾಶ ನೀಡುವಂತೆ ಕಳೆದ 3ವರ್ಷಗಳಿಂದ ತಿಳಿಸುತ್ತಿದ್ದರೂ ಸಹ ಇದು ಸಾಕಾರಗೊಳ್ಳುತ್ತಿಲ್ಲ. ಇದಕ್ಕೆ ಗ್ರಾಮಪಂಚಾಯಿತಿ ಆಡಳಿತ, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸರ್ವೆ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಅವರು ಸರಿಯಾಗಿ ಸ್ಪಂಧಿಸದೇ ಇರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಶಾಸಕರು ಕೂಡಲೇ ನೂತನ ತಹಸೀಲ್ದಾರ್ ಅವರು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಒಂದೆರಡು ತಿಂಗಳಲ್ಲಿ ಬಡವರಿಗೆ ನಿವೇಶನ ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರಿಗಳ ವಿರುದ್ದ ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳು ನಿವೇಶನ ಹಂಚಿಕೆಯ ಉದ್ದೇಶಕ್ಕಾಗಿ ಗ್ರಾಮವಾರು ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಸಹಕಾರ ನೀಡಬೇಕು. ಈ ವಿಷಯದ ಬಗ್ಗೆ ಹಿಂದಿನ ತಹಸೀಲ್ದಾರ್ ಅವರು ಸೂಕ್ತ ಗಮನ ಹರಿಸಲಿಲ್ಲ. ನೂತನ ತಹಸೀಲ್ದಾರ್ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿಕೊಡುವ ಮೂಲಕ ಶಾಸಕರ ನೇತೃತ್ವದಲ್ಲಿ ನಿವೇಶನ ಹಂಚಿಕೆಗೆ ತಾಲ್ಲೂಕು ಆಡಳಿತ ತುರ್ತು ಕ್ರಮ ವಹಿಸಬೇಕು. ಮುಂದಿನ ಸಭೆಯೊಳಗೆ ಈ ಬಗ್ಗೆ ಪ್ರಗತಿ ವರದಿ ನೀಡುವಂತೆ ನೂತನ ತಹಸೀಲ್ದಾರ್ ವಿ.ಶ್ರೇಯಸ್ ಅವರಿಗೆ ಸಲಹೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಯಶಸ್ಸಿಗೆ ಕೃಷಿ, ಪಶುಸಂಗೋಪನೆ, ನರೇಗಾ ಕಾಮಗಾರಿಗಳು, ಜಲ ಸಂರಕ್ಷಣೆ, ವಿದ್ಯುತ್ ಹಾಗೂ ಸಾರ್ವಜನಿಕರ ಇತರೆ ಸಮಸ್ಯೆಗಳ ಕುರಿತು ಪರಿಶೀಲಿಸಲಾಯಿತು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಹಂತದಲ್ಲಿಯೇ ತ್ವರಿತವಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸದರಿ ಸಭೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು ತಹಶೀಲ್ದಾರ್ ವಿ.ಶ್ರೇಯಸ್, ಜಿಲ್ಲಾ ಜಲಜೀವನ್ ಮಿಷನ್ ಯೋಜನೆಯ ಇಇ ಮನೋಜ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು. ಚಿತ್ರಶೀರ್ಷಿಕೆ:02.ಕೆ.ಆರ್.ಪಿ-01: ಕೆ.ಆರ್.ಪೇಟೆ: ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಶಾಸಕ ಹೆಚ್.ಟಿ.ಮಂಜು ಭಾಗವಹಿಸಿ ಮಾತನಾಡಿದರು. ==================================2
- ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ವಿದ್ಯುತ್ ಕಂಬಗಳ ಸ್ಥಳಾಂತರ ಕಾರಣ ಕಿರುಗಾವಲು ವ್ಯಾಪ್ತಿಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇ ಇ ಮಳವಳ್ಳಿ : ತಾಲ್ಲೂಕಿನ ಕಿರುಗಾವಲು ಸಂತೆಮಾಳ ರಸ್ತೆ ಅಗಲೀಕರಣ ಕಾರ್ಯ ನಡೆ ಯುತ್ತಿದ್ದು ವಿದ್ಯುತ್ ಕಂಬಗಳ ಸ್ಥಳಾಂತರಗೊಳಿಸಬೇಕಾಗಿರುವುದರಿಂದ ಸೆಪ್ಟಂಬರ್ 3 ರಂದು 66/11 ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮಾರ್ಗಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ. ಈ ಕುರಿತು ಬುಧವಾರ ಸಾಯಂಕಾಲ 4 ಗಂಟೆ ಸಮಯದಲ್ಲಿ ಪ್ರಕಟಣೆ ನೀಡಿರುವ ಚೆಸ್ಕಾಂನ ಮಳವಳ್ಳಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಟಿ ಪುಟ್ಟಸ್ವಾಮಿ ಅವರು ಸೆಪ್ಟಂಬರ್ 3 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ವರೆಗೆ ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಕಲ್ಕುಣಿ, ಕಿರುಗಾವಲು, ಡಿ ಜಿ ಕೊಪ್ಪಲು, ಚಿಕ್ಕಮಾಳಿಗೆಕೊಪ್ಪಲು, ಹೊನಗನಹಳ್ಳಿ, ಪುಟ್ಟೇಗೌಡನ ಕೊಪ್ಪಲು, ಬುಳ್ಳಿಕೆಂಪನದೊಡ್ಡಿ, ಮಿಕ್ಕೆರೆ, ಹಿಟ್ಟನಹಳ್ಳಿ ಕೊಪ್ಪಲು, ಹೊನಗನಹಳ್ಳಿ, ಚಿಕ್ಕಮುಲ ಗೂಡಿ ಹಾಗೂ ಸುತ್ತಮುತ್ತಲ ಗ್ರಾಮಗಳ ವಿದ್ಯುತ್ ಪೂರೈಕೆ ಯಲ್ಲಿ ಅಡಚಣೆ ಉಂಟಾಗ ಲಿದ್ದು ಗ್ರಾಹಕರು ಸಹಕರಿಸಬೇ ಕೆಂದು ಅವರು ಕೋರಿದ್ದಾರೆ.1
- ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟಣೆ ನಡೆದಿದೆ. ಯಳಂದೂರು ನ್ಯೂಸ್ ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು ಯಳಂದೂರು ತಾಲೂಕಿನ ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುದುವಾರ ಬೆಳಿಗ್ಗೆ ನಡೆದಿದೆ. ಬುದುವಾರ ಬೆಳಿಗ್ಗೆ 11ಗಂಟೆ ಸಮಯ ದಲ್ಲಿ ಯಳಂದೂರು ಪಟ್ಟಣ ದಿಂದ ಗುಂಬಳ್ಳಿ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ಸಮಯ ದಲ್ಲಿ . ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಆಟೊ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಚಾಲಕ ಸೇರಿದಂತೆ ಮೂವರು ಮಹಿಳೆಯರಿಗೆ ಗಾಯ ವಾಗಿದ್ದು ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಳು ಗಳನ್ನು ಆಂಬುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಪಟ್ಟಣದ ಆಸ್ಪತ್ರೆಗೆ ರವಾನಿಸಿದ್ದಾರೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.1
- ಚಾಮರಾಜನಗರ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆಗೆ ಮಲ್ಲೇಶ್ ಆಗ್ರಹ ವರದಿ: ಹೊಮ್ಮನಂಜುಂಡನಾಯಕ ಚಾಮರಾಜನಗರ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆಗೆ ಮಲ್ಲೇಶ್ ಆಗ್ರಹ ಚಾಮರಾಜನಗರ: ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡಬೇಕು ಎಂದು ಚಿಲಕವಾಡಿ ಮಲ್ಲೇಶ್ ಆಗ್ರಹಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರತಿ ಜಿಲ್ಲೆಯಲ್ಲೂ ಪೋಲಿಸ್ ದೂರು ಪ್ರಾಧಿಕಾರ ಇರುತ್ತದೆ. ಆದರೆ ಚಾಮರಾಜನಗರ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡುವಂತೆ ಇಲಾಖೆಯಲ್ಲಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಜಿಲ್ಲಾ ಮಟ್ಟದ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡಿ ಸಾರ್ವಜನಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಪೊಲೀಸ್ ದೂರು ಪ್ರಾಧಿಕಾರವು ಪೊಲೀಸರ ಗಂಭೀರ ದುರ್ನಡತೆ, ದೌರ್ಜನ್ಯ ವಿರುದ್ಧ . ಸಾರ್ವಜನಿಕರಿಂದ ದೂರು ಸ್ವೀಕರಿಸಿ ತನಿಖೆ ನಡೆಸುವ ಸ್ವಾಯತ, ಉನ್ನತಮಟ್ಟದ ಪಾಧಿಕಾರವಾಗಿದೆ. ಇದನ್ನು . ಜಿಲ್ಲೆಯಲ್ಲಿ ರಚನೆ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ನ್ಯಾಯ ಸಿಗುತ್ತದೆ. ತಪ್ಪಿಸ್ಥ ಪೊಲೀಸ ಅಧಿಕಾರಿಗಳಿಗೆ ಸಿಬ್ಬಂದಿ. ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ. ಅಮಾಯಕರಿಗೆ ನ್ಯಾಯ ದೊರೆಯುತ್ತದೆ ಎಂದರು. 2021 ಸಾಲಿನ ಗ್ರಾ.ಪಂ.ಚುನಾವಣೆಗೆ ಸಂಬಂಧಿಸಿದಂತೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾನು ಒಂದು ಅಟ್ರಾಸಿಟಿ ದೂರು ನೀಡಿದ ಉದ್ದೇಶದಿಂದ ನನ್ನ ವಿರುದ್ಧ ಒಂದು ಸುಳ್ಳು ಪ್ರತಿದೂರು ದಾಖಲಿಸಿ, ಪೋಲಿಸರು ಅಧಿಕಾರ ದುರುಪಯೋಗ ಮಾಡಿರುತ್ತಾರೆ. ಅಲ್ಲಿಂದ ಇಲ್ಲಿಯತನಕ ಮಾನವಹಕ್ಕು ಆಯೋಗ, ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಮಿತಿ ಇತರ ಮೇಲಾಧಿಕಾರಿಗಳಿಗೆ ನಾನು ದೂರು ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲೆಯ ಭ್ರಷ್ಟ ಪೋಲಿಸ್ ಒಂದೇ ಠಾಣೆಯಲ್ಲಿ ಎರಡು, ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಿಕೊಟ್ಟಿರುವುದು ಕಾರ್ಯಾಂಗ, ಶಾಸಕಾಂಗದ ಭ್ರಷ್ಟಾಚಾರವನ್ನು ಎತ್ತಿ ತೋರಿಸುತ್ತದೆ. ನನ್ನ ಮೇಲೆ ಸುಳ್ಳು ಪ್ರಕರಣ ದಾಖಲು... ಮಾಡಿದರು. ಅವೆಲ್ಲವನ್ನು ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಂಡಿದ್ದೇನೆ. ಆಗಾಗಿ ತಪ್ಪಿಸ್ಥ ಪೋಲಿಸ್. ಅಧಿಕಾರಿಗಳಿಗೆ ವಿರುದ್ಧ ಕ್ರಮ ಆಗಬೇಕು. ಜಿಲ್ಲೆಯಲ್ಲಿ ಪೊಲೀಸ್ ದೂರು ಪ್ರಾಧಿಕಾರ ರಚನೆ ಆಗಿಲ್ಲ. ಮೇಲಾಧಿಕಾರಿಗಳಾದ ಎಸ್‌ಪಿ, ಡಿಸಿ ಅವರು ಸಮಿತಿ ರಚನೆ ಮಾಡದೆ ಹ ಪೊಲೀಸ್ ಇಲಾಖೆಯಲ್ಲಿ ನಡೆಯುವ ದೌರ್ಜನ್ಯ, ದಬ್ಬಾಳಿಕೆಗಳನ್ನು ಮುಚ್ಚಿ ಹಾಕಿ, ಸಾರ್ವಜನಿಕರ ಮೇಲೆ ಸುಳ್ಳುಪ್ರಕರಣ ದಾಖಲು ಮಾಡುವುದು, ತಮ್ಮ ಅಧಿಕಾರಿಗಳನ್ನು ರಕ್ಷಣೆ ಮಾಡುವುದಕ್ಕಾಗಿ ಪ್ರಾಧಿಕಾರಿ ರಚನೆ ಮಾಡಿಲ್ಲ. ಗೃಹ ಸಚಿವರು ಇಲಾಖೆಯನ್ನು ಶುದ್ಧಗೊಳಿಸಿ ಸಾರ್ವಜನಿಕರ ಮೇಲೆ ಆಗುವ ಸುಳ್ಳು ಎಫ್‌ಐಆರ್‌ಗಳನ್ನು ಮರುಪರಿಶೀಲನೆಗೆ ಅವಕಾಶ ಕೊಡಬೇಕು. ಚಾಮರಾಜನಗರ ಜಿಲ್ಲೆಯಲ್ಲಿ ಪೊಲೀಸ್ ದೂರು ಪಾಧಿಕಾರಿ ರಚನೆ ಮಾಡಬೇಕು ಮಲ್ಲೇಶ್ ಒತ್ತಾಯಿಸಿದರು.3
- All About,Anchor requesting the common people to question the Responsible person for their Responsibilities *ಭಾರತ ನಲ್ಲಿ ವೈರಲ್*1