logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕನಕ ವಿದ್ಯಾಪೀಠ ಶಾಲೆಯಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಬದುಕು, ಬರಹ ಮತ್ತು ಸಾಹಿತ್ಯ ಅರಿವು ಕಾರ್ಯಕ್ರಮ ಗ್ರಾಮೀಣ ಭಾಗದಲ್ಲಿ ಕನ್ನಡ ಕಲರವ ‌ ಚಿತ್ತಾಪುರ: ತಾಲೂಕಿನ ನಾಲವಾರ ಹೋಬಳಿ ವ್ಯಾಪ್ತಿಯ ನಾಲವಾರ ಸ್ಟೇಷನ್‌ನಲ್ಲಿರುವ ಕನಕ ವಿದ್ಯಾಪೀಠ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಬದುಕು, ಬರಹ ಮತ್ತು ಸಾಹಿತ್ಯದ ಅರಿವು ಮೂಡಿಸುವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಆರಂಭದಲ್ಲಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಎಲ್ಲರೂ ವ್ಯಕ್ತಪಡಿಸಿದರು. ವೇದಿಕೆಯ ಮೇಲಿದ್ದ ಗಣ್ಯರನ್ನು ನಾಲವಾರ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಕನ್ನಡ ಶಾಲು ಹೊದಿಸಿ ಸತ್ಕರಿಸಿದರು. ಮಾಸ್ತಿ ಸಾಹಿತ್ಯದ ಕುರಿತು ವಿಶೇಷ ಉಪನ್ಯಾಸ ಯುವ ಕವಯಿತ್ರಿ ರೂಪಾ ಪೂಜಾರಿ ಅವರು ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಸಾಹಿತ್ಯ ಸಾಧನೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಮಾಸ್ತಿಯವರು ಸಣ್ಣ ಕಥೆಗಳ ರಚನೆಯನ್ನು ಪ್ರಧಾನ ಸಾಹಿತ್ಯ ಪ್ರಕಾರವನ್ನಾಗಿ ಆರಿಸಿಕೊಂಡಿದ್ದರು. ‘ಶ್ರೀನಿವಾಸ’ ಎಂಬ ಕಾವ್ಯನಾಮದಲ್ಲಿ ನೂರಾರು ಸಣ್ಣ ಕಥೆಗಳನ್ನು ಬರೆದು, ಹಲವಾರು ಕಥಾ ಸಂಕಲನಗಳನ್ನು ಪ್ರಕಟಿಸಿದರು. ಕಥೆ ಹೇಳುವ ಕಲೆಯಲ್ಲಿ ಅಪಾರ ಪ್ರಾವೀಣ್ಯತೆ ಹೊಂದಿದ್ದ ಮಾಸ್ತಿಯವರ ಕಥೆಗಳು ಓದುಗರ ಕಣ್ಣಿಗೆ ಕಟ್ಟಿದಂತಿರುತ್ತವೆ. ಅವರ ಪ್ರಸಿದ್ಧ ನೀಳ್ಗತೆಗಳಲ್ಲಿ ‘ಸುಬ್ಬಣ್ಣ’ ಪ್ರಮುಖವಾದುದು. ಅಪಾರ ಮಾನವೀಯ ಅಂತಃಕರಣವನ್ನು ತಮ್ಮ ಕಥೆಗಳಲ್ಲಿ ತುಳುಕಿಸಿದ ಅವರು, ವಿಶಿಷ್ಟವಾದ ಕಥನ ತಂತ್ರವನ್ನು ಬಳಸಿದರು. ಸಣ್ಣ ಕಥೆಗಳ ಜನಕರೆಂದೇ ಖ್ಯಾತಿ ಪಡೆದ ಮಾಸ್ತಿಯವರು, “ಕಥೆ ಹೇಳುವುದು ಒಂದು ಪುಣ್ಯದ ಕೆಲಸ” ಎಂದು ಭಾವಿಸಿದ್ದರು. ಕಥೆಗಳಷ್ಟೇ ಅಲ್ಲದೆ, ಕಾದಂಬರಿ, ಕಾವ್ಯ, ಜೀವನಚರಿತ್ರೆ, ನಾಟಕ ಮತ್ತು ಅನುವಾದ ಕ್ಷೇತ್ರಗಳಲ್ಲಿಯೂ ಮಾಸ್ತಿಯವರ ಕೊಡುಗೆ ಅಪಾರವಾಗಿದೆ. ‘ಭಾರತತೀರ್ಥ’, ‘ಆದಿಕವಿ ವಾಲ್ಮೀಕಿ’, ‘ಶ್ರೀರಾಮ ಪಟ್ಟಾಭಿಷೇಕ’ ಸೇರಿದಂತೆ ಅನೇಕ ಮಹತ್ವದ ಕೃತಿಗಳನ್ನು ರಚಿಸಿದ್ದಾರೆ. ರವೀಂದ್ರನಾಥ ಠಾಕೂರ್, ರಾಮಕೃಷ್ಣ ಪರಮಹಂಸರ ಜೀವನಚರಿತ್ರೆಗಳನ್ನು ಬರೆದಿರುವ ಮಾಸ್ತಿಯವರು, ಪುರಂದರದಾಸ, ಕನಕದಾಸ, ಅನಾರ್ಕಳಿ, ತಿರುಪಾಣಿ, ಶಿವಾಜಿ ಮೊದಲಾದ ವಿಷಯಗಳ ನಾಟಕಗಳನ್ನು ಹಾಗೂ ಷೇಕ್ಸ್‌ಪಿಯರ್ ಅವರ ನಾಟಕಗಳ ಅನುವಾದಗಳನ್ನೂ ಪ್ರಕಟಿಸಿದ್ದಾರೆ. ಮಾಸ್ತಿಯವರು ಬರೆದ ಪ್ರಮುಖ ಕಾದಂಬರಿಗಳಲ್ಲಿ ‘ಚಿಕವೀರ ರಾಜೇಂದ್ರ’ ಮತ್ತು ‘ಚನ್ನಬಸವನಾಯಕ’ ಪ್ರಮುಖವಾಗಿವೆ. ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತ ‘ಚಿಕವೀರ ರಾಜೇಂದ್ರ’ ಕಾದಂಬರಿಗಾಗಿ ಅವರಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿತು. ಅವರ ಆತ್ಮಕಥನ ‘ಭಾವ’ ಮೂರು ಸಂಪುಟಗಳಲ್ಲಿ ಪ್ರಕಟವಾಗಿದೆ. ‘ಕಾಕನಕೋಟೆ’ ಕೃತಿ ಚಲನಚಿತ್ರವಾಗಿಯೂ ಅತ್ಯಂತ ಜನಪ್ರಿಯತೆ ಪಡೆದು ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತು. ಮಾಸ್ತಿಯವರಿಗೆ ಹಲವು ಪ್ರತಿಷ್ಠಿತ ಗೌರವಗಳು ಲಭಿಸಿದ್ದವು. ಮೈಸೂರು ವಿಶ್ವವಿದ್ಯಾಲಯ ಮತ್ತು ಕರ್ನಾಟಕ ವಿಶ್ವವಿದ್ಯಾಲಯಗಳಿಂದ ಡಿ.ಲಿಟ್ ಪದವಿ, 1929ರಲ್ಲಿ ಬೆಳಗಾವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, 1946ರಲ್ಲಿ ದಕ್ಷಿಣ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಪದವಿ, 1953ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷತೆ, 1968ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಅವರನ್ನು ಅರಸಿ ಬಂದವು. ಜೀವನ ಪರ್ಯಂತ ಕನ್ನಡ ಸೇವೆ ಮಾಡಿದ ಮಾಸ್ತಿಯವರನ್ನು “ಮಾಸ್ತಿ ಎಂದರೆ ಕನ್ನಡದ ಆಸ್ತಿ” ಎಂದು ಗೌರವದಿಂದ ಕರೆಯಲಾಗುತ್ತದೆ. ಜೂನ್ 6, 1986ರಂದು ನಿಧನರಾದ ಮಾಸ್ತಿಯವರು ಹುಟ್ಟಿದ್ದು ಕೂಡ ಜೂನ್ 6ರಂದೇ ಎಂಬುದು ವಿಶೇಷವಾಗಿದೆ. ಎಷ್ಟೇ ಅಧಿಕಾರ ಮತ್ತು ಗೌರವಗಳು ದೊರೆತರೂ ತಮ್ಮ ಬಾಲ್ಯದ ಬಡತನವನ್ನು ಮರೆಯದೆ, ಅಧಿಕಾರದ ಮದವನ್ನು ತಲೆಗೆ ಏರಿಸಿಕೊಳ್ಳದೆ ಜನರಿಗಾಗಿ ಮತ್ತು ಕನ್ನಡ ಸಾಹಿತ್ಯಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಧೀಮಂತ ವ್ಯಕ್ತಿತ್ವ ಮಾಸ್ತಿಯವರದು. ಆದ್ದರಿಂದಲೇ ಅವರು ನಮ್ಮ ಕನ್ನಡದ ಆಸ್ತಿ ಹಾಗೂ ಹೆಮ್ಮೆಯ ಸಾಹಿತ್ಯದ ದಿಗ್ಗಜರು ಎಂದು ರೂಪಾ ಪೂಜಾರಿ ಅಭಿಪ್ರಾಯಪಟ್ಟರು. ರೈತರ ಸಂಕಷ್ಟ ಬಿಂಬಿಸಿದ ಕವನ ವಾಚನ ಶಿವಲೀಲಾ ತುನ್ನೂರ ಅವರು ರೈತರ ಸಂಕಷ್ಟವನ್ನು ಮನಮುಟ್ಟುವಂತೆ ಬಿಂಬಿಸುವ ಕವನವನ್ನು ವಾಚನ ಮಾಡಿದರು. “ರೈತರ ಮೇಲೆ ಮುನಿಸೇಕೆ ಓ ಮಳೆರಾಯ? ನೀ ಇಲ್ಲದೇ ಇದ್ದರೆ ಈ ರೈತರ ಪಾಡೇನು? ಓ ಮಳೆರಾಯ, ನೀ ಇಲ್ಲದೆ ಈ ಬೆಳೆಯ ಕಳೆಯೇ ಹೇಗೆ?” ಎಂಬ ಭಾವಪೂರ್ಣ ಸಾಲುಗಳ ಮೂಲಕ ಮಳೆಯ ಮಹತ್ವ ಹಾಗೂ ರೈತರ ಬದುಕಿನ ಸಂಕಷ್ಟವನ್ನು ಮನೋಜ್ಞವಾಗಿ ವ್ಯಕ್ತಪಡಿಸಿದರು. ರೈತರ ಬದುಕು ಮಳೆಯ ಮೇಲೆ ಎಷ್ಟು ಅವಲಂಬಿತವಾಗಿದೆ ಎಂಬ ಸಂದೇಶವನ್ನು ಕವನದ ಮೂಲಕ ಪರಿಣಾಮಕಾರಿಯಾಗಿ ಸಾರಿದರು. ಕಸಾಪ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸುವಂತೆ ಆಗ್ರಹ ನಾಲವಾರ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಸಿದ್ದು ಮಳಬಾ ಅವರು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳನ್ನು ನಡೆಸಲು ಸರ್ಕಾರ ಇಡೀ ರಾಜ್ಯಾದ್ಯಂತ ಸರ್ಕಾರಿ ಆವರಣಗಳಲ್ಲಿ ನಿರ್ಬಂಧ ಹೇರಬಾರದು ಎಂದು ಆಗ್ರಹಿಸಿದರು. ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಭಾಷೆಯ ಬೆಳವಣಿಗೆಗಾಗಿ ನಡೆಯುವ ಕಸಾಪ ಕಾರ್ಯಕ್ರಮಗಳಿಗೆ ಸರ್ಕಾರದ ಸಹಕಾರ ಅಗತ್ಯವಾಗಿದೆ. ಆದ್ದರಿಂದ ಇಂತಹ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರದೆ ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ರಣಧೀರ ಹೊಸ್ಮನಿ ಅವರು ಭಾಷಣ ಮಾಡಿದರು. ಆಶಯ ನುಡಿ ನಾಲವಾರ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕದ ಅಧ್ಯಕ್ಷರಾದ ಅಂಜುನಾಥ ಎಸ್. ನಾಯ್ಕಲ್ ಅವರು ಆಶಯ ನುಡಿಗಳನ್ನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆಯುವ ಕಾರ್ಯಕ್ರಮಗಳ ಮೂಲಕ ಪ್ರತಿಯೊಂದು ಗ್ರಾಮೀಣ ಮಟ್ಟದಲ್ಲಿಯೂ ಮಕ್ಕಳಲ್ಲಿ ಕನ್ನಡ ಸಾಹಿತ್ಯದ ಅರಿವು ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಹೇಳಿದರು. ಮಕ್ಕಳಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಆಸಕ್ತಿ ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನಮ್ಮ ಕೈಲಾದ ಸೇವೆಯನ್ನು ಕನ್ನಡ ನಾಡು-ನುಡಿಗಾಗಿ ಮಾಡಬೇಕು ಎಂದು ತಿಳಿಸಿದರು. ತಮ್ಮ ಮಾತಿನ ನಡುವೆ ಮಕ್ಕಳೊಂದಿಗೆ ಹಾಸ್ಯಮಯವಾಗಿ ಸಂವಾದ ನಡೆಸಿ ಮನರಂಜನೆಯನ್ನೂ ನೀಡಿದರು. ಅವರ ಸರಳ ಹಾಗೂ ಸ್ನೇಹಪರ ಮಾತುಗಳು ಮಕ್ಕಳಲ್ಲಿ ಸಂತೋಷ ಮೂಡಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು. ರಂಗೋಲಿ ಸ್ಪರ್ಧೆ ಕಾರ್ಯಕ್ರಮದ ಅಂಗವಾಗಿ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಸಿಂಧು ಪ್ರಥಮ ಸ್ಥಾನ ಹಾಗೂ ಜಾನ್ವೀ ದ್ವಿತೀಯ ಸ್ಥಾನ ಪಡೆದುಕೊಂಡರು. ವಿಜೇತರಿಗೆ ಪ್ರಮಾಣಪತ್ರ ಮತ್ತು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಹರಿಶ್ಚಂದ್ರ ಚವ್ಹಾಣ, ಇಬ್ರಾಹಿಂ ಸೇಠ, ಸಿದ್ದುಗೌಡ ಕುರಾಳ, ರಾಜೇಂದ್ರ ಎನ್. ಕೊಲ್ಲೂರು, ರೋಹಿತ ಸಾಹೇಬ್, ಮಲ್ಲೇಶಿ ಸೊಂಟೇನರ್ ಸೇರಿದಂತೆ ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸ್ವಾಗತ ಭಾಷಣವನ್ನು ಶಿಕ್ಷಕರಾದ ಉದಯಕುಮಾರ ನೆರವೇರಿಸಿದರು. ವಂದನಾರ್ಪಣೆಯನ್ನು ನಾಲವಾರ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಅರುಣಕುಮಾರ ಸುಣಗಾರ ನೆರವೇರಿಸಿದರು. ನಿರೂಪಣೆಯನ್ನು ನಾಲವಾರ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ. ಹಡಪದ, ಸುಗೂರ ಎನ್. ಅವರು ನಿರ್ವಹಿಸಿದರು. ಕನ್ನಡ ನಾಡು, ನುಡಿ ಮತ್ತು ಸಾಹಿತ್ಯದ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಕನ್ನಡದ ಬಗ್ಗೆ ಅಭಿಮಾನ ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ ಎಂಬ ಅಭಿಪ್ರಾಯ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.

12 hrs ago
user_Girish M Chatterkar
Girish M Chatterkar
Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
12 hrs ago
bd0b39da-db97-4eb5-9cab-0adc04f4d3ea

More news from ಕರ್ನಾಟಕ and nearby areas
  • "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    1
    "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ 

ಕಲ್ಯಾಣ ವಾರ್ತೆ -ಯಾದಗಿರಿ 
ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. 
೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು.
*ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ 
೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು  ಕೋಲಿ ಸಮಾಜದ ಆಶಯವಾಗಿದೆ*-"
*ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    user_DR. S.S. NAYAK
    DR. S.S. NAYAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    12 hrs ago
  • ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿದಿದೆ: ಜೆ.ಶರಣಪ್ಪ ಗೌಡ. ಸಿರವಾರ: ಟಿಎಲ್ಬಿಸಿ ಎಡದಂಡೆ ನಾಲೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ಮಂಗಳವಾರ ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ವಾಡಿಕೆಗಿಂತ ಮಳೆಯಾಗದ ಹಿನ್ನೆಲೆಯಲ್ಲಿ ಬರಗಾಲ ಉಂಟಾಗಿದೆ‌. ಬೆಳೆಗಳನ್ನು ಉಳಿಸಿಕೊಳ್ಳಲು ರೈತರ ಹರಸಾಹಸ ಪಡುವಂತಾಗಿದೆ ಎಂದರು‌. ರಾಯಚೂರು, ಮಾನ್ವಿ ಮತ್ತು ಸಿರವಾರ ತಾಲೂಕಿನ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹೋರಾಟದಲ್ಲಿ ಮಾಜಿ ಶಾಸಕರುಗಳಾದ ರಾಜಾ ವೆಂಕಟಪ್ಪ ನಾಯಕ, ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ರೈತ ಸಂಘದ ಮುಖಂಡ ಚಾಮರಸ ಮಾಲೀ ಪಾಟೀಲ್, ಹೋರಾಟಗಾರರಾದ ಶಂಕರಗೌಡ ಹರವಿ, ಎನ್‌. ಉದಯಕುಮಾರ್ ಸಾಹುಕಾರ, ಜೆ.ದೇವರಾಜ ಗೌಡ, ಅಮರೇಶ ಚಾಗಭಾವಿ, ನಾಗರಾಜ ಗೌಡ, ಸವಾರೆಪ್ಪ, ಬಡ್ಡ ಹನುಮಂತ, ರಾಜಪ್ಪ ಹೊನ್ನಟಗಿ, ಮಲ್ಲಪ್ಪ ದೊಡ್ಮನೆ, ದಾನಪ್ಪ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ರೈತರು ಪಾಲ್ಗೊಂಡಿದ್ದರು.
    2
    ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ.
ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ.
ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿದಿದೆ: ಜೆ.ಶರಣಪ್ಪ ಗೌಡ.
ಸಿರವಾರ: ಟಿಎಲ್ಬಿಸಿ ಎಡದಂಡೆ ನಾಲೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು  
ಖಂಡಿಸಿ ರೈತರು ಮಂಗಳವಾರ ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ವಾಡಿಕೆಗಿಂತ ಮಳೆಯಾಗದ ಹಿನ್ನೆಲೆಯಲ್ಲಿ ಬರಗಾಲ ಉಂಟಾಗಿದೆ‌. ಬೆಳೆಗಳನ್ನು ಉಳಿಸಿಕೊಳ್ಳಲು ರೈತರ ಹರಸಾಹಸ ಪಡುವಂತಾಗಿದೆ ಎಂದರು‌.
ರಾಯಚೂರು, ಮಾನ್ವಿ ಮತ್ತು ಸಿರವಾರ  ತಾಲೂಕಿನ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹೋರಾಟದಲ್ಲಿ ಮಾಜಿ ಶಾಸಕರುಗಳಾದ ರಾಜಾ ವೆಂಕಟಪ್ಪ ನಾಯಕ, ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ರೈತ ಸಂಘದ ಮುಖಂಡ ಚಾಮರಸ ಮಾಲೀ ಪಾಟೀಲ್, ಹೋರಾಟಗಾರರಾದ ಶಂಕರಗೌಡ ಹರವಿ, ಎನ್‌. ಉದಯಕುಮಾರ್ ಸಾಹುಕಾರ, ಜೆ.ದೇವರಾಜ ಗೌಡ, ಅಮರೇಶ ಚಾಗಭಾವಿ, ನಾಗರಾಜ ಗೌಡ, ಸವಾರೆಪ್ಪ, ಬಡ್ಡ ಹನುಮಂತ, ರಾಜಪ್ಪ ಹೊನ್ನಟಗಿ, ಮಲ್ಲಪ್ಪ ದೊಡ್ಮನೆ, ದಾನಪ್ಪ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ರೈತರು ಪಾಲ್ಗೊಂಡಿದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    11 hrs ago
  • ಸಿಂಧನೂರು ಕ್ಷೇತ್ರದಲ್ಲಿ 43,115 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಸಿಂಧನೂರು: ರಾಷ್ಟ್ರೀಯ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಬಳಿಕ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 43,115 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ದೇಸಾಯಿ ತಿಳಿಸಿದ್ದಾರೆ. ಮಂಗಳವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರದಲ್ಲಿ 2,40,941 ಮತದಾರರಿದ್ದರು. ಪರಿಷ್ಕರಣೆ ವೇಳೆ ಮೃತಪಟ್ಟ 6,778, ಶಾಶ್ವತವಾಗಿ ಸ್ಥಳಾಂತರಗೊಂಡ 31,954, ಗೈರುಹಾಜರಿದ್ದ 1,555 ಹಾಗೂ ಡಬಲ್ ಮತದಾರರಾಗಿದ್ದ 2,805 ಮಂದಿಯ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇತರ ಕಾರಣಗಳಿಂದ 23 ಮತದಾರರ ಹೆಸರನ್ನೂ ಡಿಲೀಟ್ ಮಾಡಲಾಗಿದೆ. 2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಒಟ್ಟು 17.90ರಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ ನಗರ ವ್ಯಾಪ್ತಿಯಲ್ಲಿ 20,799 ಹಾಗೂ ಗ್ರಾಮೀಣ ಪ್ರದೇಶದಲ್ಲಿ 22,351 ಮತದಾರರ ಹೆಸರುಗಳು ಡಿಲೀಟ್ ಆಗಿವೆ. ಅರ್ಹ ಮತದಾರರ ಹೆಸರು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದರೆ, ನಿಗದಿತ 13 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಸಲ್ಲಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಕ್ಷೇತ್ರದಲ್ಲಿ 269 ಮತಗಟ್ಟೆಗಳಿದ್ದವು. 1,200ಕ್ಕೂ ಅಧಿಕ ಮತದಾರರಿರುವ ಕಾರಣ ಮಾಡಶಿರವಾರ, ಪಗಡದಿನ್ನಿ ಹಾಗೂ ಬೂದಿಹಾಳ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ವಿ.ಹೆಚ್.ಎ. ಆ್ಯಪ್ ಮೂಲಕ ಮತದಾರರ ಸೇರ್ಪಡೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅರುಣ್ ಕುಮಾರ್ ದೇಸಾಯಿ ಹೇಳಿದರು.
    1
    ಸಿಂಧನೂರು ಕ್ಷೇತ್ರದಲ್ಲಿ 43,115 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್
ಸಿಂಧನೂರು: ರಾಷ್ಟ್ರೀಯ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಬಳಿಕ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 43,115 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ದೇಸಾಯಿ ತಿಳಿಸಿದ್ದಾರೆ.
ಮಂಗಳವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರದಲ್ಲಿ 2,40,941 ಮತದಾರರಿದ್ದರು. ಪರಿಷ್ಕರಣೆ ವೇಳೆ ಮೃತಪಟ್ಟ 6,778, ಶಾಶ್ವತವಾಗಿ ಸ್ಥಳಾಂತರಗೊಂಡ 31,954, ಗೈರುಹಾಜರಿದ್ದ 1,555 ಹಾಗೂ ಡಬಲ್ ಮತದಾರರಾಗಿದ್ದ 2,805 ಮಂದಿಯ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇತರ ಕಾರಣಗಳಿಂದ 23 ಮತದಾರರ ಹೆಸರನ್ನೂ ಡಿಲೀಟ್ ಮಾಡಲಾಗಿದೆ.
2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಒಟ್ಟು 17.90ರಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ ನಗರ ವ್ಯಾಪ್ತಿಯಲ್ಲಿ 20,799 ಹಾಗೂ ಗ್ರಾಮೀಣ ಪ್ರದೇಶದಲ್ಲಿ 22,351 ಮತದಾರರ ಹೆಸರುಗಳು ಡಿಲೀಟ್ ಆಗಿವೆ.
ಅರ್ಹ ಮತದಾರರ ಹೆಸರು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದರೆ, ನಿಗದಿತ 13 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಸಲ್ಲಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ ಎಂದು ಅವರು ತಿಳಿಸಿದರು.
ಈ ಹಿಂದೆ ಕ್ಷೇತ್ರದಲ್ಲಿ 269 ಮತಗಟ್ಟೆಗಳಿದ್ದವು. 1,200ಕ್ಕೂ ಅಧಿಕ ಮತದಾರರಿರುವ ಕಾರಣ ಮಾಡಶಿರವಾರ, ಪಗಡದಿನ್ನಿ ಹಾಗೂ ಬೂದಿಹಾಳ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ವಿ.ಹೆಚ್.ಎ. ಆ್ಯಪ್ ಮೂಲಕ ಮತದಾರರ ಸೇರ್ಪಡೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅರುಣ್ ಕುಮಾರ್ ದೇಸಾಯಿ ಹೇಳಿದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    14 hrs ago
  • ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿ ಸಂಭ್ರಮದ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ ಕಾಳಗಿ: ತಾಲೂಕಿನ ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿರುವ ಸುಕ್ಷೇತ್ರ ಕನ್ನಡಗಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಮಾಸದ ಎರಡನೇ ಸೋಮವಾರ ಅಪಾರ ಭಕ್ತ ಸಮೂಹವು‌ ಭಕ್ತಿಯಿಂದ ಕನ್ನಡಗಿ ಮಲ್ಲಿಕಾರ್ಜುನ ಮಾಹರಾಜ ಕೀ ಜೈ ಎಂಬ ಜಯಘೋಷಗಳನ್ನು ಕೂಗುತ್ತಾ ಮಲ್ಲಿಕಾರ್ಜುನ ಮೂರ್ತಿಯ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು. ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಎರಡನೇ ಸೋಮವಾರ ನಸುಕಿನ‌ ಜಾವ ಕನ್ನಡಗಿ ಮಲ್ಲಿಕಾರ್ಜುನ ಮೂಲ ಕರ್ತೃ ಗದ್ದುಗೆಗೆ ಹಾಗೂ ದೇವಸ್ಥಾನವನ್ನು ವಿವಿಧ ಪುಷ್ಪಾಲಾಂಕರಗಳಿಂದ ಅಲಂಕಾರ ಮಾಡಲಾಗಿತ್ತು. ಮೂಲ ಕತೃ ಗದ್ದುಗೆಗೆ ಅರ್ಚಕರ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ, ಧಾರಾಭಿಷೇಕ, ಮಹಾ ಮಂಗಳಾರತಿ ಜರುಗಿತು. ಮಧ್ಯಾಹ್ನ ಹೇರೂರ (ಕೆ) ಗ್ರಾಮದ ಮುಖಂಡ ಬಸವರಾಜ ಪಾಟೀಲ ಹೇರೂರ ನೇತೃತ್ವದಲ್ಲಿ ಭಜನಾ ಮಂಡಳಿ ದೇವಸ್ಥಾನಕ್ಕೆ ತಲುಪುತ್ತಿದ್ದಂತೆ ಅಲಂಕೃತ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳ, ಭಜನೆ, ನಂದಿಕೋಲು, ಪುರವಂತರ ಕುಣಿತದೊಂದಿಗೆ ದೇವಸ್ಥಾನ ಸುತ್ತಲು ಐದು ಸುತ್ತು ಭವ್ಯ ಮೆರವಣಿಗೆ ಜರುಗಿತು. ಭಕ್ತರು 'ಕನ್ನಡಗಿ ಮಲ್ಲಿಕಾರ್ಜುನ ಮಹಾರಾಜ ಕೀ ಜೈ' ಎಂದು ಜಯಘೋಷ ಕೂಗುತ್ತಾ ಪಲ್ಲಕ್ಕಿ ಉತ್ಸವಕ್ಕೆ ಉತ್ತುತ್ತಿ, ಬಾಳೆ ಹಣ್ಣು, ನಾಣ್ಯ ಎಸೆದು ಭಕ್ತಿ ಸಮರ್ಪಿಸಿದರು. ವಿವಿಧ ಗ್ರಾಮಗಳಿಂದ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಪ್ರಸಾದ,‌ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಕಾಯಿಕರ್ಪೂರ ಮಾಡಿ, ನೈವೇದ್ಯ ಅರ್ಪಿಸಿದರು. ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಭಕ್ತ ಜಗಧೀಶ್ ಜವಳಿ ರಾಜನಾಳ ಅವರು ದೇವಸ್ಥಾನವನ್ನು ಸಂಪೂರ್ಣವಾಗಿ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿರುವುದು ನೇರೆದಿದ್ದ ಭಕ್ತರಿಗೆ ಆಕರ್ಷಿಣಿಯವಾಗಿತ್ತು. ದೇವಸ್ಥಾನ ಸಮಿತಿ ಅಧ್ಯಕ್ಷ ಸುಭಾಶ್ಚಂದ್ರ ಮಾಲಿಪಾಟೀಲ ಕನ್ನಡಗಿ, ಮುಖಂಡರಾದ ಬಸವರಾಜ ಪಾಟೀಲ ಹೇರೂರ, ಸಿದ್ದಣ್ಣ ತಳವಾರ, ಶಿವಕುಮಾರ್ ಪಾಟೀಲ ಹೇರೂರ, ವಿಜಯಕುಮಾರ್ ಪಾಟೀಲ, ಚನ್ನವೀರಪ್ಪ ಮಾಲಿಪಾಟೀಲ, ವಿಜಯಕುಮಾರ ಪೂಜಾರಿ, ಶಾಮರಾಯ ಕನ್ನಡಗಿ, ಗುರಲಿಂಗಪ್ಪ ಪಾಟೀಲ, ಮಲ್ಲಣ್ಣ ನಾಯಕೋಡಿ, ಶಾಂತಕುಮಾರ ತಳವಾರ, ಎಚ್.ಬಿ. ಪಾಟೀಲ, ಮಲ್ಲಿಕಾರ್ಜುನ ವಕೀಲರು ಹಾಗೂ ಕಲಬುರಗಿ, ಹೆರೂರ (ಕೆ), ನಾಗೂರ, ಶೆಳ್ಳಗಿ, ಸಾವತಖೇಡ, ಜೀವನ ಮಾರಡಗಿ, ಹೆಬ್ಬಾಳ ಸೇರಿದಂತೆ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಕಾಳಗಿ ಪೊಲೀಸ್ ಠಾಣೆ ಪಿಎಸ್‌ಐ ತಿಮ್ಮಯ್ಯ ಬಿ.ಕೆ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿತ್ತು.
    1
    ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿ ಸಂಭ್ರಮದ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ
ಕಾಳಗಿ: ತಾಲೂಕಿನ ಬೆಣ್ಣೆತೋರಾ ಜಲಾಶಯ ದಂಡೆಯಲ್ಲಿರುವ ಸುಕ್ಷೇತ್ರ ಕನ್ನಡಗಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಮಾಸದ ಎರಡನೇ ಸೋಮವಾರ ಅಪಾರ ಭಕ್ತ ಸಮೂಹವು‌ ಭಕ್ತಿಯಿಂದ ಕನ್ನಡಗಿ ಮಲ್ಲಿಕಾರ್ಜುನ ಮಾಹರಾಜ ಕೀ ಜೈ ಎಂಬ ಜಯಘೋಷಗಳನ್ನು ಕೂಗುತ್ತಾ ಮಲ್ಲಿಕಾರ್ಜುನ ಮೂರ್ತಿಯ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು.
ಜಾತ್ರಾ ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಎರಡನೇ ಸೋಮವಾರ ನಸುಕಿನ‌ ಜಾವ ಕನ್ನಡಗಿ ಮಲ್ಲಿಕಾರ್ಜುನ ಮೂಲ ಕರ್ತೃ ಗದ್ದುಗೆಗೆ ಹಾಗೂ ದೇವಸ್ಥಾನವನ್ನು ವಿವಿಧ ಪುಷ್ಪಾಲಾಂಕರಗಳಿಂದ ಅಲಂಕಾರ ಮಾಡಲಾಗಿತ್ತು. ಮೂಲ ಕತೃ ಗದ್ದುಗೆಗೆ ಅರ್ಚಕರ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ, ಧಾರಾಭಿಷೇಕ, ಮಹಾ ಮಂಗಳಾರತಿ ಜರುಗಿತು.
ಮಧ್ಯಾಹ್ನ ಹೇರೂರ (ಕೆ) ಗ್ರಾಮದ ಮುಖಂಡ ಬಸವರಾಜ ಪಾಟೀಲ ಹೇರೂರ ನೇತೃತ್ವದಲ್ಲಿ ಭಜನಾ ಮಂಡಳಿ ದೇವಸ್ಥಾನಕ್ಕೆ ತಲುಪುತ್ತಿದ್ದಂತೆ ಅಲಂಕೃತ ಕನ್ನಡಗಿ ಮಲ್ಲಿಕಾರ್ಜುನ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳ, ಭಜನೆ, ನಂದಿಕೋಲು, ಪುರವಂತರ ಕುಣಿತದೊಂದಿಗೆ ದೇವಸ್ಥಾನ ಸುತ್ತಲು ಐದು ಸುತ್ತು ಭವ್ಯ ಮೆರವಣಿಗೆ ಜರುಗಿತು. ಭಕ್ತರು 'ಕನ್ನಡಗಿ ಮಲ್ಲಿಕಾರ್ಜುನ ಮಹಾರಾಜ ಕೀ ಜೈ' ಎಂದು ಜಯಘೋಷ ಕೂಗುತ್ತಾ ಪಲ್ಲಕ್ಕಿ ಉತ್ಸವಕ್ಕೆ ಉತ್ತುತ್ತಿ, ಬಾಳೆ ಹಣ್ಣು, ನಾಣ್ಯ ಎಸೆದು ಭಕ್ತಿ ಸಮರ್ಪಿಸಿದರು.
ವಿವಿಧ ಗ್ರಾಮಗಳಿಂದ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಪ್ರಸಾದ,‌ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಕಾಯಿಕರ್ಪೂರ ಮಾಡಿ, ನೈವೇದ್ಯ ಅರ್ಪಿಸಿದರು. ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಭಕ್ತ ಜಗಧೀಶ್ ಜವಳಿ ರಾಜನಾಳ ಅವರು ದೇವಸ್ಥಾನವನ್ನು ಸಂಪೂರ್ಣವಾಗಿ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿರುವುದು ನೇರೆದಿದ್ದ ಭಕ್ತರಿಗೆ ಆಕರ್ಷಿಣಿಯವಾಗಿತ್ತು.
ದೇವಸ್ಥಾನ ಸಮಿತಿ ಅಧ್ಯಕ್ಷ ಸುಭಾಶ್ಚಂದ್ರ ಮಾಲಿಪಾಟೀಲ ಕನ್ನಡಗಿ, ಮುಖಂಡರಾದ ಬಸವರಾಜ ಪಾಟೀಲ ಹೇರೂರ, ಸಿದ್ದಣ್ಣ ತಳವಾರ, ಶಿವಕುಮಾರ್ ಪಾಟೀಲ ಹೇರೂರ, ವಿಜಯಕುಮಾರ್ ಪಾಟೀಲ,   ಚನ್ನವೀರಪ್ಪ ಮಾಲಿಪಾಟೀಲ, ವಿಜಯಕುಮಾರ ಪೂಜಾರಿ, ಶಾಮರಾಯ ಕನ್ನಡಗಿ, ಗುರಲಿಂಗಪ್ಪ ಪಾಟೀಲ, ಮಲ್ಲಣ್ಣ ನಾಯಕೋಡಿ, ಶಾಂತಕುಮಾರ ತಳವಾರ, ಎಚ್.ಬಿ. ಪಾಟೀಲ, ಮಲ್ಲಿಕಾರ್ಜುನ ವಕೀಲರು ಹಾಗೂ ಕಲಬುರಗಿ, ಹೆರೂರ (ಕೆ), ನಾಗೂರ, ಶೆಳ್ಳಗಿ, ಸಾವತಖೇಡ, ಜೀವನ ಮಾರಡಗಿ, ಹೆಬ್ಬಾಳ ಸೇರಿದಂತೆ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಕಾಳಗಿ ಪೊಲೀಸ್ ಠಾಣೆ ಪಿಎಸ್‌ಐ ತಿಮ್ಮಯ್ಯ ಬಿ.ಕೆ ನೇತೃತ್ವದಲ್ಲಿ ಬಂದೋಬಸ್ತ್ ಒದಗಿಸಲಾಗಿತ್ತು.
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    19 hrs ago
  • ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಗುಂಡಣ್ಣ ಡಿಗ್ಗಿ ಮಾತುಗಳಿಗೆ ಸಭಿಕರಿಂದ ಭರ್ಜರಿ ಚಪ್ಪಾಳೆ, ನಗೆ
    1
    ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಗುಂಡಣ್ಣ ಡಿಗ್ಗಿ ಮಾತುಗಳಿಗೆ ಸಭಿಕರಿಂದ ಭರ್ಜರಿ ಚಪ್ಪಾಳೆ, ನಗೆ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    18 hrs ago
  • ಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿ ಸಿಂದಗಿ : ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಿ, ರೈತರ ನೆರವಿಗೆ ಧಾವಿಸಬೇಕು ಎಂದು ರೈತ ಹೋರಾಟಗಾರ ಪೀರು ಕೇರೂರ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು. ಅಲ್ಲದೆ, ಕೇಂದ್ರ ಸರ್ಕಾರವೂ ರೈತರ ನೆರವಿಗೆ ಬಂದು ಅಗತ್ಯ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ರಾಜಕೀಯ ಹಗ್ಗಜಗ್ಗಾಟದಲ್ಲಿ ರೈತರ ಸಮಸ್ಯೆಗಳನ್ನು ಮರೆತು ಕುಳಿತಿವೆ ಎಂದು ಪೀರು ಕೇರೂರ ಆರೋಪಿಸಿದರು. ರೈತರ ಸಂಕಷ್ಟಕ್ಕೆ ಸರ್ಕಾರಗಳು ಕೂಡಲೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪೀರು ಕೇರೂರ ಎಚ್ಚರಿಕೆ ನೀಡಿದರು.
    1
    ಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿ
ಸಿಂದಗಿ : ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಿ, ರೈತರ ನೆರವಿಗೆ ಧಾವಿಸಬೇಕು ಎಂದು ರೈತ ಹೋರಾಟಗಾರ ಪೀರು ಕೇರೂರ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು. ಅಲ್ಲದೆ, ಕೇಂದ್ರ ಸರ್ಕಾರವೂ ರೈತರ ನೆರವಿಗೆ ಬಂದು ಅಗತ್ಯ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ರಾಜಕೀಯ ಹಗ್ಗಜಗ್ಗಾಟದಲ್ಲಿ ರೈತರ ಸಮಸ್ಯೆಗಳನ್ನು ಮರೆತು ಕುಳಿತಿವೆ ಎಂದು ಪೀರು ಕೇರೂರ ಆರೋಪಿಸಿದರು.
ರೈತರ ಸಂಕಷ್ಟಕ್ಕೆ ಸರ್ಕಾರಗಳು ಕೂಡಲೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪೀರು ಕೇರೂರ ಎಚ್ಚರಿಕೆ ನೀಡಿದರು.
    user_NERA NUDI NEWS
    NERA NUDI NEWS
    ಸಿಂದಗಿ, ವಿಜಯಪುರ, ಕರ್ನಾಟಕ•
    22 hrs ago
  • ಕರ್ನಾಟಕದಲ್ಲಿ ಗಣಪತಿಗೆ ಮೆರವಣಿಗೆಗೆ ಡಿಜೆ ಅನುಮತಿ ಇಲ್ಲಾ ಎಂದ ಗೃಹ ಮಂತ್ರಿ ಪಿಯಾಂಕ :ಖರ್ಗೆ ವಿರುದ್ಧ ಬಿ ಜೆ ಪಿ ಮುಖಂಡರು ಗಣಪತಿಗೆ ಯಾಕೆ ಡಿಜಿ ಇಲ್ಲಾ ಗೃಹ ಮಂತ್ರಿಯ ರೆ ಮುಸಾಲ್ಮಾನರಿಗೆ ನಾಲಕ್ಕು ಐದು ಸಲಾ ಮೈಕ್ ಹಚ್ಚಿ ನಮಾಜ್ ಮಾಡುತ್ತಾರೆ ನಮಗ ಏಕೆ ಇಲ್ಲ ಹೇಳಿ ಗೃಹ ಮಂತ್ರಿ ಯರೆ ನಮಗೂ ಡಿಜಿ ಪರ್ಮಿಷನ್ ಕೊಡಬೇಕು ಇಲ್ಲಾಂದ್ರೆ ನಾವು ಬಿಡುವುದಿಲ್ಲ ಬಿಜೆಪಿ ಮುಖಂಡ ರಾಜ ಹೇಳಿಕೆ
    1
    ಕರ್ನಾಟಕದಲ್ಲಿ ಗಣಪತಿಗೆ ಮೆರವಣಿಗೆಗೆ ಡಿಜೆ ಅನುಮತಿ ಇಲ್ಲಾ ಎಂದ ಗೃಹ ಮಂತ್ರಿ ಪಿಯಾಂಕ :ಖರ್ಗೆ ವಿರುದ್ಧ ಬಿ ಜೆ ಪಿ ಮುಖಂಡರು
ಗಣಪತಿಗೆ ಯಾಕೆ ಡಿಜಿ ಇಲ್ಲಾ ಗೃಹ ಮಂತ್ರಿಯ ರೆ ಮುಸಾಲ್ಮಾನರಿಗೆ ನಾಲಕ್ಕು ಐದು  ಸಲಾ ಮೈಕ್ ಹಚ್ಚಿ ನಮಾಜ್ ಮಾಡುತ್ತಾರೆ ನಮಗ ಏಕೆ ಇಲ್ಲ ಹೇಳಿ ಗೃಹ ಮಂತ್ರಿ ಯರೆ ನಮಗೂ ಡಿಜಿ ಪರ್ಮಿಷನ್ ಕೊಡಬೇಕು  ಇಲ್ಲಾಂದ್ರೆ ನಾವು ಬಿಡುವುದಿಲ್ಲ ಬಿಜೆಪಿ ಮುಖಂಡ  ರಾಜ  ಹೇಳಿಕೆ
    user_Sharanugouda Patil
    Sharanugouda Patil
    Muddebihal, Vijayapura•
    9 hrs ago
  • ಆ.26 ರಂದು ಅಖಿಲಭಾರತ ಕ್ರೈಸ್ತ ಮಹಾಸಭಾ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ- ರಾಮಕೃಷ್ಣ ಪ್ರಸಾದ ರಾಯಚೂರು : ಅಖಿಲ ಭಾರತ ಕ್ರೈಸ್ತ ಮಹಾಸಭಾದ ಜಿಲ್ಲಾಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆ.26 ರಂದು ನಗರದ ಪಂಡಿತ ಸಿದ್ದರಾಮ ರಂಗಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ರಾಮಕೃಷ್ಣ ಪ್ರಸಾದ.ಎಂ ಹೇಳಿದರು. ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ಅಂದು ಬೆಳಿಗ್ಗೆ ಆರ್‌ಟಿಓ ವೃತ್ತದಿಂದ ರಂಗಮಂದಿರದವರೆಗೆ ಬೈಕ್ ರ್ಯಾಲಿ ನಡೆಸಲಾಗುತ್ತದೆ. ನಂತರ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಮಹಾಸಭಾ ರಾಜ್ಯಾಧ್ಯಕ್ಷ ಪ್ರಜ್ವಲ್ ಸ್ವಾಮಿ ಆಗಮಿಸಲಿದ್ದಾರೆ. ಶಾಸಕರುಗಳಾದ ಡಾ.ಶಿವರಾಜ ಪಾಟೀಲ್, ಗ್ರಾಮೀಣ ಶಾಸಕ ದದ್ದಲ್ ಬಸನಗೌಡ, ಎ.ವಸಂತಕುಮಾರ, ಮಾಜಿ ಸಚಿವ ಎನ್‌.ಎಸ್.ಭೋಸರಾಜ, ಕೆ.ಶಿವನಗೌಡ ನಾಯಕ ಸೇರಿದಂತೆ ಅನೇಕ ರಾಜಕೀಯ ಗಣ್ಯರು, ವಿವಿಧ ಸಭಾಪಾಲಕರು, ಸಮಾಜಬಾಂಧವರು ಭಾಗವಹಿಸಲಿದ್ದಾರೆ ಎಂದರು. ಸಭಾಪಾಲಕ ಜಾನ್‌ವೆಸ್ಲಿ ಮಾತನಾಡಿ ಕ್ರೈಸ್ತ ಮಹಾಸಭಾದ ಕಾರ್ಯಕ್ರಮ ದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ರಾಜ್ಯ ಹಾಗೂ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದರು.
    1
    ಆ.26 ರಂದು ಅಖಿಲಭಾರತ ಕ್ರೈಸ್ತ ಮಹಾಸಭಾ ಉದ್ಘಾಟನೆ, ಪದಾಧಿಕಾರಿಗಳ ಪದಗ್ರಹಣ- ರಾಮಕೃಷ್ಣ ಪ್ರಸಾದ
ರಾಯಚೂರು : ಅಖಿಲ ಭಾರತ ಕ್ರೈಸ್ತ ಮಹಾಸಭಾದ ಜಿಲ್ಲಾಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಆ.26 ರಂದು ನಗರದ ಪಂಡಿತ ಸಿದ್ದರಾಮ ರಂಗಮಂದಿರದಲ್ಲಿ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ರಾಮಕೃಷ್ಣ ಪ್ರಸಾದ.ಎಂ ಹೇಳಿದರು.
ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ಅಂದು ಬೆಳಿಗ್ಗೆ ಆರ್‌ಟಿಓ ವೃತ್ತದಿಂದ ರಂಗಮಂದಿರದವರೆಗೆ ಬೈಕ್ ರ್ಯಾಲಿ ನಡೆಸಲಾಗುತ್ತದೆ. ನಂತರ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಮಹಾಸಭಾ ರಾಜ್ಯಾಧ್ಯಕ್ಷ ಪ್ರಜ್ವಲ್ ಸ್ವಾಮಿ ಆಗಮಿಸಲಿದ್ದಾರೆ. ಶಾಸಕರುಗಳಾದ ಡಾ.ಶಿವರಾಜ ಪಾಟೀಲ್, ಗ್ರಾಮೀಣ ಶಾಸಕ ದದ್ದಲ್ ಬಸನಗೌಡ, ಎ.ವಸಂತಕುಮಾರ, ಮಾಜಿ ಸಚಿವ ಎನ್‌.ಎಸ್.ಭೋಸರಾಜ, ಕೆ.ಶಿವನಗೌಡ ನಾಯಕ ಸೇರಿದಂತೆ ಅನೇಕ ರಾಜಕೀಯ ಗಣ್ಯರು, ವಿವಿಧ ಸಭಾಪಾಲಕರು, ಸಮಾಜಬಾಂಧವರು ಭಾಗವಹಿಸಲಿದ್ದಾರೆ ಎಂದರು.
ಸಭಾಪಾಲಕ ಜಾನ್‌ವೆಸ್ಲಿ ಮಾತನಾಡಿ ಕ್ರೈಸ್ತ ಮಹಾಸಭಾದ ಕಾರ್ಯಕ್ರಮ ದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ರಾಜ್ಯ ಹಾಗೂ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.