ಮಾನ್ವಿ ಪಟ್ಟಣದ ವಿವಿಧ ಪೆಟ್ರೋಲ್ ಬಂಕ್‌ಗಳಿಗೆ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ತಾಲ್ಲೂಕಿನಾದ್ಯಂತ ಗೃಹಬಳಕೆ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲಾಗುವ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಹಾಗೂ ಡೀಸೆಲ್ ಸಾಕಷ್ಟು ಪ್ರಮಾಣದಲ್ಲಿ ಪೆಟ್ರೋಲ್ ಬಂಕ್‌ಗಳು ಮತ್ತು ಗ್ಯಾಸ್ ಏಜೆನ್ಸಿಗಳಲ್ಲಿ ಲಭ್ಯವಿದೆ ಎಂದು ಸ್ಪಷ್ಟಪಡಿಸಿದರು. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು. ಪೆಟ್ರೋಲ್ ಬಂಕ್ ಹಾಗೂ ಗ್ಯಾಸ್ ಏಜೆನ್ಸಿಗಳ ಮಾಲೀಕರು ಮತ್ತು ಎಲ್.ಪಿ.ಜಿ ವಿತರಕರು ಗ್ಯಾಸ್, ಪೆಟ್ರೋಲ್ ಅಥವಾ ಡೀಸೆಲ್ ಅನ್ನು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ, ಅವರ ಮಾರಾಟ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ತಹಶೀಲ್ದಾರ್ ಎಚ್ಚರಿಕೆ ನೀಡಿದರು. 'ನೋ ಸ್ಟಾಕ್' ಎಂದು ಬಿತ್ತಿಪತ್ರಗಳನ್ನು ಅಂಟಿಸಬಾರದು ಮತ್ತು ಮುಂಜಾಗ್ರತಾ ದಾಸ್ತಾನನ್ನು ಪರಿಗಣಿಸಿ ಸಾರ್ವಜನಿಕರಿಗೆ ಮಾರಾಟ ಮಾಡಬೇಕು ಎಂದು ನಿರ್ದೇಶಿಸಿದರು. ಕೃತಕ ಅಭಾವ ಸೃಷ್ಟಿಸುವುದು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸಂದೇಶಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದರು. ಈ ಪರಿಶೀಲನೆಯ ಸಂದರ್ಭದಲ್ಲಿ ಆಹಾರ ನಿರೀಕ್ಷಕ ದೇವರಾಜ ಅವರು ಉಪಸ್ಥಿತರಿದ್ದರು.
ಮಾನ್ವಿ ಪಟ್ಟಣದ ವಿವಿಧ ಪೆಟ್ರೋಲ್ ಬಂಕ್‌ಗಳಿಗೆ ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ತಾಲ್ಲೂಕಿನಾದ್ಯಂತ ಗೃಹಬಳಕೆ ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲಾಗುವ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಹಾಗೂ ಡೀಸೆಲ್ ಸಾಕಷ್ಟು ಪ್ರಮಾಣದಲ್ಲಿ ಪೆಟ್ರೋಲ್ ಬಂಕ್‌ಗಳು ಮತ್ತು ಗ್ಯಾಸ್ ಏಜೆನ್ಸಿಗಳಲ್ಲಿ ಲಭ್ಯವಿದೆ ಎಂದು ಸ್ಪಷ್ಟಪಡಿಸಿದರು. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು. ಪೆಟ್ರೋಲ್ ಬಂಕ್ ಹಾಗೂ ಗ್ಯಾಸ್ ಏಜೆನ್ಸಿಗಳ ಮಾಲೀಕರು ಮತ್ತು ಎಲ್.ಪಿ.ಜಿ ವಿತರಕರು ಗ್ಯಾಸ್, ಪೆಟ್ರೋಲ್ ಅಥವಾ ಡೀಸೆಲ್ ಅನ್ನು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ, ಅವರ ಮಾರಾಟ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ತಹಶೀಲ್ದಾರ್ ಎಚ್ಚರಿಕೆ ನೀಡಿದರು. 'ನೋ ಸ್ಟಾಕ್' ಎಂದು ಬಿತ್ತಿಪತ್ರಗಳನ್ನು ಅಂಟಿಸಬಾರದು ಮತ್ತು ಮುಂಜಾಗ್ರತಾ ದಾಸ್ತಾನನ್ನು ಪರಿಗಣಿಸಿ ಸಾರ್ವಜನಿಕರಿಗೆ ಮಾರಾಟ ಮಾಡಬೇಕು ಎಂದು ನಿರ್ದೇಶಿಸಿದರು. ಕೃತಕ ಅಭಾವ ಸೃಷ್ಟಿಸುವುದು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸಂದೇಶಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದರು. ಈ ಪರಿಶೀಲನೆಯ ಸಂದರ್ಭದಲ್ಲಿ ಆಹಾರ ನಿರೀಕ್ಷಕ ದೇವರಾಜ ಅವರು ಉಪಸ್ಥಿತರಿದ್ದರು.
- ಗುಳೇದಗುಡ್ಡ ಪಟ್ಟಣದ ತಹಶೀಲ್ದಾರರ ಕಚೇರಿಯಲ್ಲಿ ಶುಕ್ರವಾರ ನಡೆದ ತಾಲೂಕು ಮಟ್ಟದ ವಿಕಲಚೇತನರ ಕುಂದುಕೊರತೆ ಸಭೆಯಲ್ಲಿ, ತಹಶೀಲ್ದಾರ ಎಸ್.ಎಫ್. ಬೊಮ್ಮಣ್ಣವರ ಅವರು ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡಿದರು. ಸರಕಾರದ ಆದೇಶದಂತೆ, ಇಲಾಖೆಗಳಿಗೆ ನಿಗದಿಪಡಿಸಿದ ಒಟ್ಟು ಅನುದಾನದಲ್ಲಿ ಶೇಕಡಾ 5 ರಷ್ಟನ್ನು ಕಡ್ಡಾಯವಾಗಿ ಖರ್ಚು ಮಾಡಬೇಕು ಹಾಗೂ ಅಗತ್ಯ ಮಾಹಿತಿಯೊಂದಿಗೆ ಮುಂದಿನ ಸಭೆಗೆ ಹಾಜರಾಗಬೇಕು ಎಂದು ಅವರು ಸೂಚಿಸಿದರು. ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು ಮತ್ತು ಕಾಟಾಚಾರಕ್ಕೆ ಸಭೆಗೆ ಹಾಜರಾಗಬಾರದು ಎಂದು ಎಚ್ಚರಿಕೆ ನೀಡಿದರು. ವಿಕಲಚೇತನರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ಅಥವಾ ನೇರವಾಗಿ ತಮ್ಮನ್ನು ಸಂಪರ್ಕಿಸುವಂತೆ ತಹಶೀಲ್ದಾರರು ತಿಳಿಸಿದರು. ಇದುವರೆಗೆ ಮೂರು ತಿಂಗಳ ವಿಕಲಚೇತನರ ಪೋಷಣಾ ಭತ್ಯೆ ಅನುದಾನ ಜಮಾ ಆಗದಿರುವ ಬಗ್ಗೆ ಸಭೆಯಲ್ಲಿ ಗಮನ ಸೆಳೆಯಲಾಯಿತು. ಕೃಷಿ, ಪಶುಸಂಗೋಪನೆ, ಮತ್ತು ಹೆಸ್ಕಾಂ ಇಲಾಖೆಯವರು ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ನಿಯಮಾನುಸಾರ ವಿಕಲಚೇತನರಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಲಾಯಿತು. ಇದೇ ವೇಳೆ, ಬಸ್ ನಿಲ್ದಾಣದಲ್ಲಿ ವಿಶೇಷ ಶೌಚಾಲಯ ನಿರ್ಮಿಸಲು ಹಾಗೂ ಬಸ್‌ನಲ್ಲಿ ವಾಸಸ್ಥಳದಿಂದ 100 ಕಿ.ಮೀ. ಪ್ರಯಾಣಿಸಲು ಅವಕಾಶ ಕಲ್ಪಿಸಿ, ಮಾನವೀಯತೆಯಿಂದ ವರ್ತಿಸಲು ಮತ್ತು ನಿಗದಿಪಡಿಸಿದ ಆಸನದಲ್ಲಿ ಕೂರಲು ಅವಕಾಶ ಮಾಡಿಕೊಡುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಅಲ್ಲದೆ, ವಾರದಲ್ಲಿ ಒಂದು ದಿನ ಗುಳೇದಗುಡ್ಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಯುಡಿಐಡಿ ಮೆಡಿಕಲ್ ಕ್ಯಾಂಪ್ ನಡೆಸಲು ಕ್ರಮವಹಿಸುವಂತೆ ಸೂಚಿಸಲಾಯಿತು. ಈ ಸಭೆಗೆ ತಾಲ್ಲೂಕು ಪಂಚಾಯತ್, ಅರಣ್ಯ, ಖಜಾನೆ, ಪೊಲೀಸ್, ತೋಟಗಾರಿಕೆ, ಸಮಾಜ ಕಲ್ಯಾಣ ಸೇರಿದಂತೆ ಬಹುತೇಕ ಇಲಾಖೆಗಳ ಅಧಿಕಾರಿಗಳು ಗೈರು ಹಾಜರಾಗಿದ್ದರು. ಇದರಿಂದ ಆಕ್ರೋಶಗೊಂಡ ವಿಕಲಚೇತನರು, ಮುಂದಿನ ಸಭೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಜರಾಗದಿದ್ದರೆ ಸಭೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಮಾತನಾಡಿದ ವಿಕಲಚೇತನರ ಸಂಘದ ತಾಲ್ಲೂಕು ಅಧ್ಯಕ್ಷ ಹುಚ್ಚೇಶ ಯಂಡಿಗೇರಿ ಅವರು, ವಿಕಲಚೇತನರ ಕುಂದುಕೊರತೆ ಸಭೆಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಬೇಕು, ಇದು ಕಾಟಾಚಾರದ ಸಭೆಯಾಗಬಾರದು, ಹಾಗೂ ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದರೊಂದಿಗೆ ಗುಳೇದಗುಡ್ಡದಲ್ಲಿ ವಿಕಲಚೇತನರ ಸಮುದಾಯ ಭವನ ನಿರ್ಮಿಸುವಂತೆ ಒತ್ತಾಯಿಸಿದರು. ತಹಶೀಲ್ದಾರ ಬೊಮ್ಮಣ್ಣವರ ಅವರು, ಸಭೆಗೆ ಗೈರಾದ ಇಲಾಖಾ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಮತ್ತೊಮ್ಮೆ ಸೂಚಿಸಿದರು.4
- ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಪತ್ರಕರ್ತರು ತಮ್ಮ ಕುಟುಂಬಗಳಿಗೆ ಸುಸಜ್ಜಿತ ವಸತಿ ಸೌಕರ್ಯ ಕಲ್ಪಿಸುವಂತೆ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಹಿರಿಯ ಪತ್ರಕರ್ತ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಕೂಡ್ಲಿಗಿ ತಾಲೂಕಾಧ್ಯಕ್ಷರಾದ ಹುಡೇಂ ಕೃಷ್ಣಮೂರ್ತಿಯವರು ಈ ಮನವಿಯನ್ನು ಶಾಸಕರ ಪತ್ರಿಕಾಗೋಷ್ಠಿಯಲ್ಲಿ ತಾಲೂಕಿನ ಎಲ್ಲ ಪತ್ರಕರ್ತರ ಪರವಾಗಿ ಪ್ರಸ್ತುತಪಡಿಸಿದರು. ಪತ್ರಕರ್ತರಿಗೆ ಸರ್ಕಾರದಿಂದ ಪಟ್ಟಣದಲ್ಲಿ ನಿವೇಶನ ಸಮೇತ ವಸತಿ ಸಮುಚ್ಚಯಗಳನ್ನು ನಿರ್ಮಿಸಿಕೊಡುವಂತೆ ಅವರು ಒತ್ತಾಯಿಸಿದರು. ತಾಲೂಕಿನ ಐವತ್ತಕ್ಕೂ ಹೆಚ್ಚು ಪತ್ರಕರ್ತರಲ್ಲಿ ಬಹುತೇಕರು ಗ್ರಾಮೀಣ ಭಾಗಗಳಿಂದ ಕೇಂದ್ರಕ್ಕೆ ಬಂದು ಕರ್ತವ್ಯ ನಿರ್ವಹಿಸಿ ಮರಳಿ ಗ್ರಾಮಕ್ಕೆ ತೆರಳುತ್ತಿದ್ದು, ಪಟ್ಟಣದಲ್ಲಿ ವಸತಿ ರಹಿತರಾಗಿದ್ದಾರೆ ಎಂದು ಮನವಿಯಲ್ಲಿ ವಿವರಿಸಲಾಗಿದೆ. ಅರ್ಹ ವಸತಿ ರಹಿತ ಪತ್ರಕರ್ತರಿಗಾಗಿ ಸರ್ಕಾರದ ವಸತಿ ಯೋಜನೆಯಡಿ ಒಂದೆಡೆ ಸಾಮೂಹಿಕ ಮನೆಗಳನ್ನು ನಿರ್ಮಿಸಿ ವಸತಿ ಸಮುಚ್ಚಯಗಳನ್ನು ಕಟ್ಟಿಸಿಕೊಡಬೇಕೆಂಬುದು ಅವರ ಪ್ರಮುಖ ಬೇಡಿಕೆಯಾಗಿತ್ತು. ಪತ್ರಕರ್ತರು ತಮ್ಮ ಮನವಿಯೊಂದಿಗೆ, ಶಾಸಕರು ಸರ್ಕಾರದಿಂದ ವಸತಿಗಳನ್ನು ನಿರ್ಮಿಸಿದ್ದಲ್ಲಿ, ಆ ವಟಾರಕ್ಕೆ "ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ರವರ ವಟಾರ" ಎಂದು ಹೆಸರಿಟ್ಟು ಕೃತಜ್ಞಪೂರ್ವಕವಾಗಿ ಸ್ಮರಿಸುವುದಾಗಿ ಭರವಸೆ ನೀಡಿದರು. ಪತ್ರಕರ್ತರ ಮನವಿ ಆಲಿಸಿದ ಶಾಸಕ ಡಾ. ಎನ್.ಟಿ. ಶ್ರೀನಿವಾಸ್, ಸರ್ಕಾರದಲ್ಲಿ ಇದಕ್ಕೆ ಪ್ರತ್ಯೇಕ ಅವಕಾಶವಿರುವ ಸಾಧ್ಯತೆ ಕಡಿಮೆ ಎಂದು ತಿಳಿಸಿದರು. ಆದಾಗ್ಯೂ, ಸಂಬಂಧಪಟ್ಟ ಇಲಾಖೆಗಳು, ಸ್ಥಳೀಯ ಹಾಗೂ ತಾಲೂಕಾಡಳಿತದೊಂದಿಗೆ ಮತ್ತು ಉನ್ನತಾಧಿಕಾರಿಗಳೊಂದಿಗೆ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದರು. ಸ್ಥಳೀಯ ಹಾಗೂ ನಿರಾಶ್ರಿತ ಅರ್ಹ ಪತ್ರಕರ್ತರು ನಿಯಮಾನುಸಾರ ವಸತಿ ಸೌಕರ್ಯಕ್ಕಾಗಿ ಮನವಿ ಸಲ್ಲಿಸಿದರೆ, ಕಾನೂನಿನ ಪ್ರಕಾರ ವಸತಿ ಯೋಜನೆಗಳಡಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕರು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಭೀಮಣ್ಣ ಗಜಾಪುರ್ ಸೇರಿದಂತೆ ಪಟ್ಟಣ ಮತ್ತು ತಾಲೂಕಿನ ಅನೇಕ ಪತ್ರಕರ್ತರು ಉಪಸ್ಥಿತರಿದ್ದರು.4
- ವಿಜಯಪುರ/ಹುಬ್ಬಳ್ಳಿ: ಜಿ.ಎಸ್.ಸಿ.ಎಸ್.ಟಿ.ಇ.ಓ (GSCSTEO) ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಬೃಹತ್ ಸಮಾವೇಶವು ಅತ್ಯಂತ ಯಶಸ್ವಿಯಾಗಿ ಮತ್ತು ಐತಿಹಾಸಿಕವಾಗಿ ನೆರವೇರಿತು. ಸತತ ಎರಡನೇ ವರ್ಷವೂ ಇಂತಹ ಬೃಹತ್ ಸಮಾಜಮುಖಿ ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಾಗಿ ಆಯೋಜಿಸಿ, 650ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೆರವು ನೀಡಿದ ಸಂಘಟನೆಯ ಕಾರ್ಯವೈಖರಿಯನ್ನು ಗಣ್ಯರು ಮುಕ್ತಕಂಠದಿಂದ ಶ್ಲಾಘಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಚಿತ್ರದುರ್ಗದ ಶ್ರೀ ಜಗದ್ಗುರು ಚಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಶರಣರು ಹಾಗೂ ನೀಲಜಿ ಆಶ್ರಮದ ಶ್ರೀ ಪೂಜ್ಯ ಮಹಾದೇವ ಮಹಾರಾಜರು ವಹಿಸಿ ಆಶೀರ್ವಚನ ನೀಡಿದರು. ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕರಾದ ಶ್ರೀ ಪ್ರಸಾದ್ ಅಬ್ಬಯ್ಯ ಮತ್ತು ಬೆಳಗಾವಿಯ ಯುವ ಮುಖಂಡರಾದ ಶ್ರೀ ರಾಹುಲ್ ಸತೀಶ್ ಜಾರಕಿಹೊಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಚಿದಾನಂದ ಎಮ್. ಕಾಂಬಳೆ ಮತ್ತು ಸಂಘಟಕ ಶ್ರೀ ವಿಲಾಸ್ ಶಿವಪೂಜಿ ಅವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಸಮಾರಂಭದಲ್ಲಿ ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಇಷ್ಟು ಅದ್ದೂರಿ ಮತ್ತು ಶಿಸ್ತುಬದ್ಧ ಕಾರ್ಯಕ್ರಮ ಆಯೋಜಿಸಿದ್ದು ಐತಿಹಾಸಿಕ ದಾಖಲೆಯಾಗಿದೆ ಎಂದು ಬಣ್ಣಿಸಿದರು. ನೌಕರರ ಹಿತರಕ್ಷಣೆ ಮಾತ್ರವಲ್ಲದೆ, ವಧು-ವರರ ಕಲ್ಯಾಣ ಹಾಗೂ ವಿದ್ಯಾರ್ಥಿಗಳ ಉನ್ನತಿಗಾಗಿ ಸಂಘಟನೆ ಮಾಡುತ್ತಿರುವ ಕೆಲಸಗಳು ಮಾದರಿಯಾಗಿವೆ ಎಂದು ಶ್ಲಾಘಿಸಿದರು. ವಿವಿಧ ಜಿಲ್ಲೆಗಳಿಂದ ಬಂದಿದ್ದ ವಿದ್ಯಾರ್ಥಿಗಳು ಹಾಗೂ ಪಾಲಕರ ತಾಳ್ಮೆಯನ್ನು ಮೆಚ್ಚಿದ ಅವರು, ಮುಂದಿನ ವರ್ಷವೂ ಸಂಘಟನೆಯೊಂದಿಗೆ ಸದಾ ಇರುವುದಾಗಿ ಭರವಸೆ ನೀಡಿದರು. ಇದಲ್ಲದೆ, ಸಂಘಕ್ಕೆ ವೈಯಕ್ತಿಕವಾಗಿ ಧನಸಹಾಯ ಘೋಷಿಸಿದರು. ಸಮುದಾಯಕ್ಕಾಗಿ ಸಂಘವು ಮಾಡುತ್ತಿರುವ ನಿರಂತರ ಸೇವೆ ಹಾಗೂ ಸತತ 2ನೇ ವರ್ಷವೂ 650 ವಿದ್ಯಾರ್ಥಿಗಳಿಗೆ ಇಂತಹ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿರುವುದನ್ನು ಗಮನಿಸಿ, ಸಂಘದ ಮುಂದಿನ ಸ್ವಂತ ಸೌಲಭ್ಯಗಳಿಗಾಗಿ ಸರ್ಕಾರದಿಂದ ಒಂದು ಸಿಎ (Civic Amenity) ಸೈಟ್ ಮಂಜೂರು ಮಾಡಿಕೊಡಲಾಗುವುದು ಎಂದು ಶಾಸಕ ಶ್ರೀ ಪ್ರಸಾದ್ ಅಬ್ಬಯ್ಯ ಘೋಷಿಸಿದರು. ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಹೇಶ್ ಪೋತದಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀ ರಾಹುಲ್ ಭಾವಿದೊಡ್ಡಿ, ಹುಬ್ಬಳ್ಳಿ ನಿರ್ದೇಶಕರಾದ ಶ್ರೀ ಸುಭಾಷಚಂದ್ರ ನಾಟೀಕಾರ್, ಹಾರೂಗೇರಿ ಮುಖ್ಯಾಧಿಕಾರಿ ಶ್ರೀ ಬಸವರಾಜ ಮನಗೂಳಿ, ಹೆಸ್ಕಾಂ ಎಇಇ ಶ್ರೀ ರಾಜಶೇಖರ ಹಾದಿಮನಿ, ಕೆಬಿಜೆಎನ್‌ಎಲ್ ಎಇಇ ಶ್ರೀ ಪ್ರಕಾಶ್ ಕಾಂಬಳೆ ಉಪಸ್ಥಿತರಿದ್ದರು. ಇವರೊಂದಿಗೆ ವಿಜಯಪುರ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಪರಶುರಾಮ ಲಂಬು, ಜಿಲ್ಲಾಧ್ಯಕ್ಷರಾದ ಶ್ರೀ ರಾಜಶೇಖರ ಯಡಹಳ್ಳಿ, ಶ್ರೀ ದಿಲೀಪ ಪ್ರಭಾಕರ, ಶ್ರೀ ಉಮೇಶ ಸಿಂಗೆ, ಶ್ರೀ ರಮೇಶ ಗಂಜಾಳ ಹಾಗೂ ಸಂಘದ ನೂರಾರು ಪ್ರಮುಖ ಪದಾಧಿಕಾರಿಗಳು, ರಾಜ್ಯದ ವಿವಿಧ ಜಿಲ್ಲೆಗಳ ಸಾವಿರಾರು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.1
- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಬೆನ್ನಲ್ಲೇ ಕೋಟೆನಾಡು ಚಿತ್ರದುರ್ಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜಿಲ್ಲೆಯಲ್ಲಿ ಒಟ್ಟು ಐದು ಮಂದಿ ಶಾಸಕರು ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಶಾಸಕರಾದ ಟಿ. ರಘುಮೂರ್ತಿ, ಎನ್.ವೈ. ಗೋಪಾಲಕೃಷ್ಣ, ಬಿ.ಜಿ. ಗೋವಿಂದಪ್ಪ, ಕೆ.ಸಿ. ವೀರೇಂದ್ರ ಮತ್ತು ಎಂಎಲ್‌ಸಿ ಡಿ.ಟಿ. ಶ್ರೀನಿವಾಸ್ ಅವರ ನಡುವೆ ಮಂತ್ರಿಗಿರಿಗಾಗಿ ಜಿದ್ದಾಜಿದ್ದಿ ಸ್ಪರ್ಧೆ ಏರ್ಪಟ್ಟಿದೆ.1
- ಶಹಾಪುರ ನಗರದ ಹಳೆ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಪ್ರಯಾಣಿಕರು ತೀವ್ರ ಪರದಾಡುತ್ತಿದ್ದಾರೆ. ಪ್ರಯಾಣಿಕರ ಆಪಾದನೆಯ ಪ್ರಕಾರ, ಕುಳಿತುಕೊಳ್ಳಲು ಆಸನಗಳ ಕೊರತೆ ಮತ್ತು ಕುಡಿಯುವ ನೀರಿನ ಸಮಸ್ಯೆ ಅವರನ್ನು ತೀವ್ರವಾಗಿ ಬಾಧಿಸುತ್ತಿದೆ. ಬೇಸಿಗೆ ಕಾಲದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕ ಇಲ್ಲದಿರುವುದು ಹಾಗೂ ನಿಲ್ದಾಣದಲ್ಲಿ ಫ್ಯಾನ್‌ಗಳ ಅಲಭ್ಯತೆ ಸಮಸ್ಯೆಯನ್ನು ಮತ್ತಷ್ಟು ಉಲ್ಬಣಗೊಳಿಸಿದೆ. ಅಲ್ಲದೆ, ನಿಲ್ದಾಣದೊಳಗಿರುವ ಮಳಿಗೆಯವರು ಹೆಚ್ಚಿನ ಜಾಗವನ್ನು ಅತಿಕ್ರಮಿಸಿಕೊಂಡಿದ್ದರಿಂದ ಆವರಣ ಇಕ್ಕಟ್ಟಾಗಿದೆ. ಇಡೀ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಗಳು ಕಂಡುಬರುತ್ತಿದ್ದು, ಸ್ವಚ್ಛತೆ ಹಾಗೂ ಸುರಕ್ಷತೆಯ ಸಂಪೂರ್ಣ ಕೊರತೆಯಿಂದ ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.1
- ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬಮ್ಮನಜೋಗಿಯಲ್ಲಿ ಬುಧವಾರ ರಾತ್ರಿ ದುಷ್ಕರ್ಮಿಗಳು ಅಪು ಬಿರಾದಾರ ಅವರ ತೋಟದಲ್ಲಿದ್ದ ಬಾಳೆ ಗಿಡಗಳನ್ನು ಕಡಿದು ಹಾಕಿ ನಾಶಪಡಿಸಿದ್ದಾರೆ.1
- ಹುಬ್ಬಳ್ಳಿಯ ವಿದ್ಯಾನಗರ ವ್ಯಾಪ್ತಿಯಲ್ಲಿ ಯುವತಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಆಕೆ ಚಪ್ಪಲಿ ಏಟು ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾನಗರ ಶಿಗ್ಗಾವಿ ಫ್ಲಾಟ್‌ನಲ್ಲಿರುವ ಬಿಗ್ ಬಾಸ್ ಸಲೂನ್‌ನಲ್ಲಿ ಕೆಲಸ ಮಾಡುವ ಮುಸ್ಲಿಂ ಯುವಕನೊಬ್ಬ, ಯುವತಿಯ ಪ್ರಾಣ ತಿನ್ನುವಂತೆ ಪ್ರೀತಿಸಲು ಪೀಡಿಸುತ್ತಿದ್ದ ಎಂದು ವರದಿಯಾಗಿದೆ. ಈ ಯುವಕನ ಕಿರುಕುಳದಿಂದ ರೋಸಿಹೋದ ಸಂತ್ರಸ್ತ ಯುವತಿ ಮತ್ತು ಆಕೆಯ ಪೋಷಕರು ಸೇರಿ, ಆ ಯುವಕನಿಗೆ ಚಪ್ಪಲಿ ಏಟು ನೀಡಿದ್ದು ಮಾತ್ರವಲ್ಲದೆ, ತೀವ್ರವಾಗಿ ತಳಿದು ಧರ್ಮದ ದೆಟ್ ಹಾಕಿದ್ದಾರೆ.1