ಶಿಕಾರಿಪುರ. ತಾಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಹಾಗೂ ಶಾಸಕರಾದ ಬಿ. ವೈ. ವಿಜೇಂದ್ರ ಯಡಿಯೂರಪ್ಪ ಚಾಲನೆ. ಶಿಕಾರಿಪುರ ತಾಲ್ಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರು ಚಾಲನೆ ನೀಡಿ ಮಾತನಾಡಿ, ಯುವಶಕ್ತಿ – ಕ್ರೀಡಾಶಕ್ತಿ – ರಾಷ್ಟ್ರದ ಶಕ್ತಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ಮಹತ್ವದ ಸ್ಥಾನವಿದೆ. ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸೋಲು–ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ ಎಂದು ಹೇಳಿದರು. ಯುವ ಪ್ರತಿಭೆಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಶಿಕಾರಿಪುರ ತಾಲ್ಲೂಕಿಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಹನುಮಂತಪ್ಪ ಅವರು ಉಪಸ್ಥಿತರಿದ್ದರು.
ಶಿಕಾರಿಪುರ. ತಾಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಹಾಗೂ ಶಾಸಕರಾದ ಬಿ. ವೈ. ವಿಜೇಂದ್ರ ಯಡಿಯೂರಪ್ಪ ಚಾಲನೆ. ಶಿಕಾರಿಪುರ ತಾಲ್ಲೂಕು ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರು ಚಾಲನೆ ನೀಡಿ ಮಾತನಾಡಿ, ಯುವಶಕ್ತಿ – ಕ್ರೀಡಾಶಕ್ತಿ – ರಾಷ್ಟ್ರದ ಶಕ್ತಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ
ಮಹತ್ವದ ಸ್ಥಾನವಿದೆ. ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸೋಲು–ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ ಎಂದು ಹೇಳಿದರು. ಯುವ ಪ್ರತಿಭೆಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಶಿಕಾರಿಪುರ ತಾಲ್ಲೂಕಿಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ತಾಲ್ಲೂಕು ಬಿಜೆಪಿ ಅಧ್ಯಕ್ಷರಾದ ಹನುಮಂತಪ್ಪ ಅವರು ಉಪಸ್ಥಿತರಿದ್ದರು.
- ಶಿಕಾರಿಪುರ. 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ. ಶಿಕಾರಿಪುರ. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಹುಸೇನ್ ಅಧ್ಯಕ್ಷ ಶಿರಾಳಕೊಪ್ಪ ಮಾತನಾಡಿ, ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು. ಜಕೀ ಅಹ್ಮದ್ ಆಫ್ರಿದಿ ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ, ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ವಿತರಣೆ ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ, ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು, ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಿಸುವುದು ಎಂದರು. ಇದೇ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸಿಬ್ ಗತ್ ಉಲ್ಲಾ ಕಾರ್ಯಕರ್ತರು,ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು,ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು ಅಬ್ದುಲ್ ಕಬೀರ್ ಕಾರ್ಯಕರ್ತರು, ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ ಉಪಸ್ಥಿತರಿದ್ದರು.1
- ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ. ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ ಕರ್ನಾಟಕದ ರಾಜ್ಯದ 1,576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಗುರುತಿಸಿರುವುದರಿಂದ ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ. ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ. ಈ ವಿಚಾರವನ್ನು ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಶ್ರೀ ಆರ್.ವಿ. ದೇಶಪಾಂಡೆ, ಶಾಸಕ ಮಿತ್ರರಾದ ಶ್ರೀ ಭೀಮಣ್ಣ ಟಿ. ನಾಯಕ್, ಶ್ರೀ ಟಿ.ಡಿ. ರಾಜೇಗೌಡ, ಶ್ರೀ ಎಚ್. ಡಿ. ತಮ್ಮಯ್ಯ ಹಾಗೂ ಶ್ರೀ ಎ.ಎಸ್. ಪೊನ್ನಣ್ಣ ಅವರು ಸದನದ ಒಳಗೂ ಮತ್ತು ಹೊರಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ. ಸರ್ಕಾರ ಈ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದೆ. ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅನಗತ್ಯವಾಗಿ ಮಲೆನಾಡು ಭಾಗದ ರೈತರಲ್ಲಿ ಆತಂಕ ಸೃಷ್ಟಿಸುತ್ತಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅತ್ಯಂತ ಮಹತ್ವದ ಈ ವಿಷಯದ ಕುರಿತು ಚರ್ಚೆಗೆ ಮುಂದಾಗುವ ಬದಲು ಗದ್ದಲ ನಡೆಸಿ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು. ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತವರು. ಅವರ ಆಶಯಗಳನ್ನು ಎತ್ತಿಹಿಡಿಯುವುದೇ ನನ್ನ ಗುರಿ. ಅವರ ಮಾರ್ಗದಲ್ಲಿಯೇ ನಾನು ನಡೆಯುತ್ತಿದ್ದೇನೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ.1
- ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.4
- ಗುಟ್ಕಾ ನಿಷೇಧ ತಡೆಯಲು ಚನ್ನಗಿರಿ ಯಿಂದ ದಾವಣಗೆರೆ ಗೆ ದಿನಾಂಕ 26/8/2026 ರಿಂದ 28/8/2026 ರಾ ವರೆಗೆ ಬೃಹತ್ ಪಾದ ಯಾತ್ರೆ ಮಾಡುತ್ತಿರುವ ಮಾಡಳ್ ಮಲ್ಲಿಕಾರ್ಜುನ ರವರು ಮತ್ತು ರೈತರು1
- ಈದ್ ಮಿಲಾದ್ ಸಂಭ್ರಮದ ಆಚರಣೆ : ರಕ್ತದಾನ, ಅನ್ನದಾನ ಸೇರಿದಂತೆ ವಿವಿಧ ಸೇವಾ ಕಾರ್ಯಗಳು. ಯುವ ಮುಖಂಡ ಬಿ.ಎಸ್ ಗಣೇಶ್ ಬಾಗಿ ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ದೇಶಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪ ಸಾವಿರಾರು ಮಂದಿಗೆ ಮಜ್ಜಿಗೆ ವಿತರಿಸಲಾಯಿತು. ಯುವ ಮುಖಂಡ ಬಿ.ಎಸ್ ಗಣೇಶ್ ಸೇವಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಸೇವಾ ಕಾರ್ಯವನ್ನು ಅಭಿನಂದಿಸಿದರು. ಇದೆ ಸಂದರ್ಭದಲ್ಲಿ ಬಡಮಹಿಳೆಯರಿಗೆ ಸೀರೆ ಮತ್ತು ರವಿಕೆ ವಿತರಿಸಲಾಯಿತು. ಅನ್ನದಾನ, ತಂಪು ಪಾನೀಯ ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳು ಜರುಗಿದವು. ಮಧ್ಯಾಹ್ನ ಸುಮಾರು ೩.೩೦ ಸಮಯಕ್ಕೆ ಹೊಳೆಹೊನ್ನೂರು ವೃತ್ತದಿಂದ ಮರ್ಕಜೀ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಅಯೂಬ್ ಖಾನ್‌ರವರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಆರಂಭಗೊಂಡಿತು. ಮೆರವಣಿಗೆಯಲ್ಲಿ ಮಹಮ್ಮದ್ ಫೈಗಂಬರರ ಜನ್ಮಸ್ಥಳ ಮೆಕ್ಕಾ-ಮದೀನಾ ಮಾದರಿಗಳು, ಹಸಿರು ದ್ವಜಗಳು ಎಲ್ಲೆಡೆ ರಾರಾಜಿಸುತ್ತಿದ್ದವು. ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು. ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಮಹಾತ್ಮಗಾಂಧಿ ವೃತ್ತ ಮೂಲಕ ಸಾದತ್ ದರ್ಗಾವರೆಗೂ ಮೆರವಣಿಗೆ ನಡೆಯಿತು. ನಗರದ ವಿವಿಧೆಡೆಗಳ ಮಸೀದಿಗಳ ಧರ್ಮಗುರುಗಳು, ಆಡಳಿತ ಮಂಡಳಿಯವರು, ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ಮೆರವಣಿಗೆ ಹಿನ್ನಲೆಯಲ್ಲಿ ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಹಬ್ಬದ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹೆಚ್ಚಿನ ಅಲಂಕಾರ ಕೈಗೊಳ್ಳಲಾಗಿತ್ತು. ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು3
- ಉತ್ತಮ ಗುಣಮಟ್ಟದ ಆಹಾರ ಸೇವಿಸಿ ಕಿಡ್ನಿ(ಮೂತ್ರಪಿಂಡ)ಖಾಯಿಲೆಯಿಂದ ದೂರವಿರಿ : ಡಾ.ಪ್ರಮೋದ್ ಕುಮಾರ್ ಜಗಳೂರು.25 ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮೂತ್ರಪಿಂಡ ಖಾಯಿಲೆಗೆ ಸಂಬಂಧಿಸಿದ ವೈಧ್ಯ ರೋಗಿಗಳ ಡೈಯಾಲೀಸಿಸ್ ಕೇಂದ್ರಕ್ಕೆ ಇತ್ತಿಚೇಗೆ ಭೇಟಿ ನೀಡಿ ಕಿಡ್ನಿ ವೈಪಲ್ಯ ರೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲೀಸಿಸ್ ಕೇಂದ್ರ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡುತ್ತಿದ್ದು ಸಿಬ್ಬಂದಿಗಳು ಸಹ ರೋಗಿಗಳ ಮಧ್ಯೆ ಉತ್ತಮ ಬಾಂಧವ್ಯ ಹೊಂದಿದ್ದು ರೋಗಿಗಳು ಸಹ ಇವರ ಜೊತೆ ಸಹಕಾರ ನೀಡುವುದರಿಂದ ಯಾವುದೇ ತೊಂದೆರೆಯಿಲ್ಲ ಎಂದರು. ಜಿಲ್ಲೆಯಾದ್ಯಂತ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಲ್ಲಿ ಖಾಸಗಿ ಕಂಪನಿಯಿಂದ ನಡೆಯುತ್ತಿರುವ ಡಯಾಲೀಸ್ ಕೇಂದ್ರಗಳು ನಡೆಯುತ್ತಿವೆ ನಾವು ರೋಗಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕೆಂದರು. ಕಿಡ್ನಿ ವೈಫ್ಯಲ್ಯಕ್ಜೆ ಮುಖ್ಯ ಲಕ್ಷಣಗಳು :ಕಿಡ್ನಿ ಸ್ಟೋನ್ (ಮೂತ್ರಪಿಂಡದ ಕಲ್ಲು) ಇರುವಾಗ ಬೆನ್ನು, ಪಾರ್ಶ್ವ ಅಥವಾ ಹೊಟ್ಟೆಯ ಕೆಳಭಾಗದಲ್ಲಿ ತೀವ್ರವಾದ ಮತ್ತು ಅಲೆ ಅಲೆಯಾದ ನೋವು ಕಾಣಿಸಿಕೊಳ್ಳುವುದು ಮುಖ್ಯ ಲಕ್ಷಣವಾಗಿದೆ ಎಂದರು. ಮೂತ್ರಪಿಂಡದ ಕಲ್ಲುಗಳು ಮೂತ್ರಪಿಂಡದಲ್ಲಿ ಉಪ್ಪು ಮತ್ತು ಖನಿಜಗಳ ಗಟ್ಟಿಯಾದ ನಿಕ್ಷೇಪಗಳಾಗಿವೆ. ಈ ಕಲ್ಲುಗಳು ಸಾಮಾನ್ಯವಾಗಿ ಮೂತ್ರನಾಳವನ್ನು ಚಲಿಸಿದಾಗ ಅಥವಾ ಅಡ್ಡಿಪಡಿಸಿದಾಗ ಅಪಾರ ನೋವನ್ನು ಉಂಟುಮಾಡುತ್ತವೆ. ಮೂತ್ರಪಿಂಡದ ಕಲ್ಲುಗಳು ಗಾತ್ರದಲ್ಲಿ ಭಿನ್ನವಾಗಿರುತ್ತವೆ. ಕೆಲವು ಕಲ್ಲುಗಳು ಕೆಲವು ಮಿಮೀ ಗಾತ್ರದಲ್ಲಿರಬಹುದು, ಇನ್ನು ಕೆಲವು ಇಂಚುಗಳಷ್ಟು ಬೆಳೆಯಬಹುದು. ಕಿಡ್ನಿ ಕಲ್ಲುಗಳು ಸಾಕಷ್ಟು ಸಮಾನವಾಗಿ ಹರಡುತ್ತವೆ ಮತ್ತು ಪುರುಷರು ಮತ್ತು ಮಹಿಳೆಯರ ಮೇಲೆ ಪರಿಣಾಮ ಬೀರುತ್ತವೆ. ಕಿಡ್ನಿ ಕಲ್ಲುಗಳನ್ನು ನಾಲ್ಕು ಪ್ರಮುಖ ವಿಧಗಳಾಗಿ ವಿಂಗಡಿಸಬಹುದು- ಕ್ಯಾಲ್ಸಿಯಂ ಕಲ್ಲುಗಳು, ಯೂರಿಕ್ ಆಸಿಡ್ ಕಲ್ಲುಗಳು, ಸ್ಟ್ರುವೈಟ್ ಕಲ್ಲುಗಳು ಮತ್ತು ಸಿಸ್ಟೈನ್ ಕಲ್ಲುಗಳು ಲಕ್ಷಣಗಳು ಎದ್ದು ಕಾಣುತ್ತವೆಂದರು. ಬೆನ್ನು, ಹೊಟ್ಟೆ ಅಥವಾ ಬದಿಯಲ್ಲಿ ನೋವು ಮೂತ್ರಪಿಂಡದ ಕಲ್ಲಿನ ನೋವು - ಇದನ್ನು ಮೂತ್ರಪಿಂಡದ ಕೊಲಿಕ್ ಎಂದೂ ಕರೆಯುತ್ತಾರೆ - ಇದು ಊಹಿಸಬಹುದಾದ ಅತ್ಯಂತ ತೀವ್ರವಾದ ನೋವಿನ ವಿಧಗಳಲ್ಲಿ ಒಂದಾಗಿದೆ ಎಂದರು. ಮೂತ್ರಪಿಂಡದ ಕಲ್ಲಿನ ನೋವು ಹೆಚ್ಚಾಗಿ ಇದ್ದಕ್ಕಿದ್ದಂತೆ ಪ್ರಾರಂಭವಾಗುತ್ತದೆ. ಕಲ್ಲು ಚಲಿಸಿದಂತೆ ನೋವು ಸ್ಥಳ ಮತ್ತು ತೀವ್ರತೆಯನ್ನು ಬದಲಾಯಿಸುತ್ತದೆ. ನೋವು ಆಗಾಗ್ಗೆ ಅಲೆಗಳಲ್ಲಿ ಬಂದು ಹೋಗುತ್ತದೆ, ಮೂತ್ರನಾಳವು ಕಲ್ಲನ್ನು ಹೊರಗೆ ತಳ್ಳಲು ಪ್ರಯತ್ನಿಸುವಾಗ ಸಂಕುಚಿತಗೊಳ್ಳುವುದರಿಂದ ಇದು ಇನ್ನಷ್ಟು ಹದಗೆಡುತ್ತದೆ. ಪ್ರತಿಯೊಂದು ಅಲೆಯು ಕೆಲವು ನಿಮಿಷಗಳ ಕಾಲ ಇರುತ್ತದೆ, ಕಣ್ಮರೆಯಾಗಬಹುದು ಮತ್ತು ನಂತರ ಮತ್ತೆ ಬರಬಹುದು ಎಂದರು.2
- ರಸ್ತೆಗೆ ಚಾಚಿದ ಕಳ್ಳೆ ಬೈಕ್ ಸವಾರರು ಸ್ವಲ್ಪ ಯಾಮಾರಿದರೆ ಕಳ್ಳೆಯೋಳಗೆ ಬೈಕ್.1
- ಕೆಲವೇ ದಿನಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿತ್ರದುರ್ಗ ಕೆರೆಗಳಿಗೆ ನೀರು ತುಂಬಿಸುವ ಕೆಲಸ ನಡೆಯುತ್ತದೆ. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ ರಘುಮೂರ್ತಿ1