ಆರು ದಿನ ಪೂರೈಸಿದ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ಸರಣಿ ಉಪವಾಸ ಆರು ದಿನ ಪೂರೈಸಿದ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ಸರಣಿ ಉಪವಾಸ ಕುಲಪತಿ–ಕುಲಸಚಿವರ ನಿರ್ಲಕ್ಷ್ಯಕ್ಕೆ ಅಧ್ಯಾಪಕರ ಆಕ್ರೋಶ ಶಿಗ್ಗಾವಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಗೊಳಿಸಿರುವ 8 ವಿಷಯಗಳನ್ನು ಮರುಸ್ಥಾಪಿಸಬೇಕು ಹಾಗೂ ಕಳೆದ 10 ತಿಂಗಳ ಬಾಕಿ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರು ನಡೆಸುತ್ತಿರುವ ಸರಣಿ ಉಪವಾಸ ಸತ್ಯಾಗ್ರಹ ಆರು ದಿನ ಪೂರೈಸಿದೆ. ತಿಂಗಳುಗಟ್ಟಲೆ ವೇತನ ಪಾವತಿಸದೆ ಬೋಧನಾ ಕಾರ್ಯ ನಿರ್ವಹಿಸುತ್ತಿರುವ ತಾತ್ಕಾಲಿಕ ಅಧ್ಯಾಪಕರು, ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಆರು ದಿನಗಳಿಂದ ಹೋರಾಟ ನಡೆಯುತ್ತಿದ್ದರೂ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಕುಲಸಚಿವರು ಪ್ರತಿಭಟನಾಕಾರರ ಸಮಸ್ಯೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ತಾತ್ಕಾಲಿಕ ಅಧ್ಯಾಪಕರು ಆರೋಪಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅಡಗಿದ್ದು, ಪಠ್ಯ ಚಟುವಟಿಕೆಗಳು, ಬೋಧನೆ, ಸಿಲೆಬಸ್ ಹಾಗೂ ವಿಷಯಗಳ ನಿರ್ವಹಣೆಗೆ ಸಂಬಂಧಿಸಿದ ಕನಿಷ್ಠ ಕ್ರಮಗಳನ್ನಾದರೂ ಆಡಳಿತ ಮಂಡಳಿ ಕೈಗೊಳ್ಳಬೇಕಾಗಿದೆ. ಆದರೆ ಪ್ರಮುಖ ವಿಷಯಗಳ ರದ್ದತಿ ಸೇರಿದಂತೆ ಹಲವು ನಿರ್ಧಾರಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದ ಮೇಲೆ ಪರಿಣಾಮ ಬೀರುವಂತಿವೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಇದೇ ವೇಳೆ, ಹೋರಾಟ ನಡೆಯುತ್ತಿರುವ ಸಂದರ್ಭದಲ್ಲಿ ಕುಲಸಚಿವರು ವಿಶ್ವವಿದ್ಯಾಲಯದಲ್ಲಿ ಸ್ಥಾನಿಕವಾಗಿ ಲಭ್ಯವಿಲ್ಲದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ತಾತ್ಕಾಲಿಕ ಅಧ್ಯಾಪಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿರುವ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರು, ಆಡಳಿತ ಮಂಡಳಿ ಕೂಡಲೇ ಮಾತುಕತೆಗೆ ಮುಂದಾಗಿ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಆರು ದಿನ ಪೂರೈಸಿದ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ಸರಣಿ ಉಪವಾಸ ಆರು ದಿನ ಪೂರೈಸಿದ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರ ಸರಣಿ ಉಪವಾಸ ಕುಲಪತಿ–ಕುಲಸಚಿವರ ನಿರ್ಲಕ್ಷ್ಯಕ್ಕೆ ಅಧ್ಯಾಪಕರ ಆಕ್ರೋಶ ಶಿಗ್ಗಾವಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಗೊಳಿಸಿರುವ 8 ವಿಷಯಗಳನ್ನು ಮರುಸ್ಥಾಪಿಸಬೇಕು ಹಾಗೂ ಕಳೆದ 10 ತಿಂಗಳ ಬಾಕಿ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರು ನಡೆಸುತ್ತಿರುವ ಸರಣಿ ಉಪವಾಸ ಸತ್ಯಾಗ್ರಹ ಆರು ದಿನ ಪೂರೈಸಿದೆ. ತಿಂಗಳುಗಟ್ಟಲೆ ವೇತನ ಪಾವತಿಸದೆ ಬೋಧನಾ ಕಾರ್ಯ ನಿರ್ವಹಿಸುತ್ತಿರುವ ತಾತ್ಕಾಲಿಕ ಅಧ್ಯಾಪಕರು, ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಆರು ದಿನಗಳಿಂದ ಹೋರಾಟ ನಡೆಯುತ್ತಿದ್ದರೂ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಕುಲಸಚಿವರು ಪ್ರತಿಭಟನಾಕಾರರ ಸಮಸ್ಯೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ತಾತ್ಕಾಲಿಕ ಅಧ್ಯಾಪಕರು ಆರೋಪಿಸಿದ್ದಾರೆ. ವಿಶ್ವವಿದ್ಯಾಲಯದಲ್ಲಿ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅಡಗಿದ್ದು, ಪಠ್ಯ ಚಟುವಟಿಕೆಗಳು, ಬೋಧನೆ, ಸಿಲೆಬಸ್ ಹಾಗೂ ವಿಷಯಗಳ ನಿರ್ವಹಣೆಗೆ ಸಂಬಂಧಿಸಿದ ಕನಿಷ್ಠ ಕ್ರಮಗಳನ್ನಾದರೂ ಆಡಳಿತ ಮಂಡಳಿ ಕೈಗೊಳ್ಳಬೇಕಾಗಿದೆ. ಆದರೆ ಪ್ರಮುಖ ವಿಷಯಗಳ ರದ್ದತಿ ಸೇರಿದಂತೆ ಹಲವು ನಿರ್ಧಾರಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದ ಮೇಲೆ ಪರಿಣಾಮ ಬೀರುವಂತಿವೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಇದೇ ವೇಳೆ, ಹೋರಾಟ ನಡೆಯುತ್ತಿರುವ ಸಂದರ್ಭದಲ್ಲಿ ಕುಲಸಚಿವರು ವಿಶ್ವವಿದ್ಯಾಲಯದಲ್ಲಿ ಸ್ಥಾನಿಕವಾಗಿ ಲಭ್ಯವಿಲ್ಲದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ತಾತ್ಕಾಲಿಕ ಅಧ್ಯಾಪಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ತಿಳಿಸಿರುವ ತಾತ್ಕಾಲಿಕ ಸಹಾಯಕ ಪ್ರಾಧ್ಯಾಪಕರು, ಆಡಳಿತ ಮಂಡಳಿ ಕೂಡಲೇ ಮಾತುಕತೆಗೆ ಮುಂದಾಗಿ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
- ಶಿವಮೊಗ್ಗ,: ತನು ಜ್ಯೂಸ್ ಸೆಂಟರ್ ಬೇಟಿ ನೀಡಿದ ಅಧಿಕಾರಿಗಳ ತಂಡ ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ತನು ಜ್ಯೂಸ್ ಸೆಂಟರ್ ಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದಾಗ ಕೊಳೆತ ಹಣ್ಣುಗಳನ್ನು ಶೇಖರಿಸಿಟ್ಟಿದ್ದ ಬ್ರಿಡ್ಜ್ ತಪಾಸಣೆ ಮಾಡಿದಾಗ ಸೇಬು, ಮೂಸಂಬಿ, ಕಲ್ಲಂಗಡಿ, ಅವಕೊಡ,ದ್ರಾಕ್ಷಿ, ಬಾಳೆಹಣ್ಣು, ಮಾವಿನಹಣ್ಣು , ಬೆಣ್ಣೆ ಹಣ್ಣು,ಹೀಗೆ ಹಲವಾರು ಹಣ್ಣುಗಳಿಂದ ಜ್ಯೂಸ್ ತಯಾರಿಸಿ ಸಾರ್ವಜನಿಕರಿಗೆ ಕೊಡುತ್ತಿರುವುದು ಕಂಡುಬಂದಿದ್ದು ಹಾಗೂ ಕೆಲವರು ಆಸ್ಪತ್ರೆಯ ರೋಗಿಗಳಿಗೂ ಸಹ ಇದೇ ಕೊಳೆತ ಹಣ್ಣಿನಿಂದ ಜ್ಯೂಸ್ ತೆಗೆದುಕೊಂಡು ಹೋಗಿರುವುದು ಕೂಡ ಗಮನಕ್ಕೆ ಬಂದಿರುವುದು ಕಂಡು ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ ಕೂಡಲೇ ಇದನ್ನು ಸೀಜ್ ಮಾಡಲಾಗಿದೆ. ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.1
- ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್! ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!1
- ಕೂಡ್ಲಿಗಿ ಪಪಂ : ಲೋಕಾಯುಕ್ತ ಭೇಟಿ -ಗಂಭೀರ ಪ್ರಕರಣಗಳ ಕಡತಗಳ ಪರಿಶೀಲನೆ - ಪಟ್ಟಣ ಪಂಚಾಯ್ತಿ ಕಚೇರಿಗೆ ಲೋಕಯುಕ್ತ ಎಸ್ಪಿಯವರು ಭೇಟಿ *ಕೂಡ್ಲಿಗಿ ಪಪಂ : ಲೋಕಾಯುಕ್ತ ಭೇಟಿ -ಗಂಭೀರ ಪ್ರಕರಣಗಳ ಕಡತಗಳ ಪರಿಶೀಲನೆ*- ಪಟ್ಟಣ ಪಂಚಾಯ್ತಿ ಕಚೇರಿಗೆ ಲೋಕಯುಕ್ತ ಎಸ್ಪಿಯವರು ಭೇಟಿ ನೀಡಿದ್ದು , ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಖಂಡ ಬಳ್ಳಾರಿ ಲೋಕಾಯುಕ್ತ ಎಸ್ಪಿರವರು , ಇಂದು (ಸೆ 16) ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು. ಕೆಲ ಸಾರ್ವಜನಿಕ ಹಿತಾಸಕ್ತಿ ಮೇರೆಗೆ ಲೋಕಾಯುಕ್ತಕ್ಕೆ , ಬಂದಿರುವ ಗಂಭೀರ ಆರೋಪ ಹಾಗೂ ದೂರಗಳನ್ನಾಧರಿಸಿ. ಪ್ರಲಣಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಕೊಂಡಿದ್ದು , ಸದರಿ ಪ್ರಕರಣಗಳ ಕುರಿತು ಪರಾಮರ್ಶಿಸಿ ಕಡತ ಪರಿಶೀಲಿಸಿದ್ದಾರೆ. ಲೋಕಾಯುಕ್ತ ಎಸ್ಪಿಯವರೊಂದಿಗೆ , ಇಬ್ಬರು ಲೋಕಾ ಡಿವೈಎಸ್ಪಿ ರವರು. ಇಬ್ಬರು ಲೋಕಾ ಸಿಪಿಐ ಹಾಗೂ ಲೋಕಾ ಮುಖ್ಯ ಪೇದೆ ಲೋಕಾ ಪೇದೆಯವರು ಹಾಜರಿದ್ದರು. ಈ ಸಂದರ್ಭದಲ್ಲಿ ಕಾರ್ಮಿಕ ಹೋರಾಟಗಾರ , ಎಸ್ಡಿಎಮ್ಸಿ ರಾಜ್ಯ ಉಪಾಧ್ಯಕ್ಷ ಗುನ್ನಳ್ಳಿ ರಾಘವೇಂದ್ರರವರು. ಎಸ್ಪಿಯವರನ್ನು ಭೇಟಿಯಾಗಿ ವಸತಿ ಹಂಚಿಕೆಯಲ್ಲಾಗಿರುವ , ಭಾರೀ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸಂಬಂಧಿಸಿದಂತೆ ಪ್ರಕರಣವು , ನ್ಯಾಯಲಯದಲ್ಲಿ ವಿಚಾರ ಹಂತದಲ್ಲಿದ್ದರೂ ಕೂಡ. ಪಪಂ ಅಧಿಕಾರಿ ಹಾಗೂ ತಾಲೂಕಾಡಳಿತ , ನ್ಯಾಯಾಲಯದ ಆದೇಶ ಉಲ್ಲಂಘಿಸಲಾಗಿದೆ. ಪಟ್ಟ ವಿತರಣೆ ಮಾಡಿದ್ದಾರೆಂದು ದಾಖಲುಗಳ ಸಮೇತ ದೂರಿದರು. ವಸತಿ ಹಂಚಿಕೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ , ಮುಖ್ಯ ಕೆಲ ಕಡತಗಳು ಧಾಖಲುಗಳು ಪಪಂ ಕಚೇರಿಯಲ್ಲಿಯೇ ಇಲ್ಲವಾಗಿವೆ. ಕೆಲ ಪ್ರಮುಖ ದಾಖಲೆಗಳು , ನಾಪತ್ತೆಯಾಗಿದ್ದು ಇದರ ಹಿಂದೆ ಭಾರೀ ಹುನ್ನಾರವೇ ನಡೆದಿದೆ ಎಂದು ರಾಘವೇಂದ್ರ ಗಂಭೀರವಾಗಿ ದೂರಿದ್ದಾರೆ. ಮತ್ತು ಸಂಬಂಧಿಸಿದಂತೆ ಪಪಂ ಮುಖ್ಯಾಧಿಕಾರಿ , ಹಾಗೂ ತಾಲೂಕು ಜಿಲ್ಲಾಡಳಿತ ವಿರುದ್ಧ. ಲೋಕಾಯುಕ್ತ ಇಲಾಖಾ ಉನ್ನತಾಧಿಕಾರಿಗಳು , ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಸ್ವಯಂ ಪ್ರೇರಿತವಾಗಿ ನ್ಯಾಯಾಂಗ ಉಲ್ಲಂಘನೆ ಪ್ರಕರಣ ದಾಖಲಿಸಿಕೊಂಡು. ಅವರನ್ನು ಸೂಕ್ತ ತನಿಖೆಗೆ ಒಳಪಡಿಸಬೇಕೆಂದು ,ಹೋರಾಟಗಾರ ಗುನ್ನಳ್ಳಿ ರಾಘವೇಂದ್ರ ಲೋಕಾ ಅಧಿಕಾರಿಗೆ ಒತ್ತಾಯಿಸಿದ್ದಾರೆ. ಈ ಸಂದರ್ಭಲ್ಲಿ , ಕೆಲ ಹೋರಾಟಗಾರರು ಹಿರಿಯ ನಾಗರೀಕರು. ಪಟ್ಟಣ ಪಂಚಾಯ್ತಿ ಅಧಿಕಾರಿ ಹಾಗೂ ಸಿಬ್ಬಂದಿಯವರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಸಾರ್ವಜನಿಕ ಸ್ಪಂದನೆ ಕುರಿತು ದೂರು: ಪಟ್ಟಣ ಪಂಚಾಯತ್‌ಗೆ ಲೋಕಾಯುಕ್ತ ಭೇಟಿ ಕೂಡ್ಲಿಗಿ: ಪಟ್ಟಣ ಪಂಚಾಯತ್ ಕಚೇರಿಗೆ ಬುದುವಾರ ದಿಢೀರನೆ ವಿಜಯನಗರ–ಬಳ್ಳಾರಿ ವಿಭಾಗದ ಲೋಕಾಯುಕ್ತರು ಡಿವೈಎಸ್ಪಿ ಎಸ್.ಎಸ್.ಬೀಳಗಿ, ಚಿತ್ರದುರ್ಗ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಚಿತ್ರದುರ್ಗದ ಸಿಪಿಐಗಳಾದ ಬಸವರಾಜ ಪಾಟೀಲ್, ಸುಮಾ ಗೊರೆಬಾಳ ಸೇರಿದಂತೆ ಒಟ್ಟು ೧೬ ಸಿಬ್ಬಂದಿಯು ದಿಢೀರ್ ಆಗಮಿಸಿದ್ದರು. ಕಛೇರಿಗೆ ಸಂಬಂಧಿಸಿದ ಕಡತಗಳನ್ನು ಮುಖ್ಯಾಧಿಕಾರಿ ದಾದಾಪೀರ್ ಮೂಲಕ ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. ಪಟ್ಟಣ ಪಂಚಾಯತ್ ಕಚೇರಿಯ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ಭೇಟಿ ನಂತರ ಮಾಹಿತಿ ಕೇಳಲು, ದಾಖಲೆ ಪರಿಶೀಲಿಸಲು ಮುಂದಾಗಿದ್ದರಿಂದ ಪಪಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಾಕ್ ನೀಡಿದಂತಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದ ವೇಳೆ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್ ಸೇರಿ ನಾನಾ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ದಾಖಲೆ ಪರಿಶೀಲನೆಗೆ ಸಹಕರಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಾನಾ ದೂರು ಆಧರಿಸಿ ಲೋಕಾಯುಕ್ತದಲ್ಲಿ ಸ್ವಯಂ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಕೊಟ್ಟೂರು ಪಪಂ ಕಚೇರಿಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಖಲೆ ಪರಿಶೀಲನೆ ನಡೆಸಲಾಗಿದೆ ಎಂದು ಬಳ್ಳಾರಿ ಲೋಕಾಯುಕ್ತ ಡಿವೈಎಸ್ಪಿ ಎಸ್.ಎಸ್.ಬೀಳಗಿ ಅವರು ಮಾಹಿತಿ ತಿಳಿಸಿದರು.1
- ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು. ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.1
- 🚨 ಶಿವಮೊಗ್ಗದಲ್ಲಿ ಆಹಾರ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ; ಕೊಳೆತ ಹಣ್ಣು ಪತ್ತೆ, ಜ್ಯೂಸ್ ಸೆಂಟರ್ ಸೀಜ್! ಕೊಳೆತ ಹಣ್ಣು ಮಾರಾಟಕ್ಕೆ ಸಿದ್ಧತೆ? ಶಿವಮೊಗ್ಗದಲ್ಲಿ ತನು ಜ್ಯೂಸ್ ಸೆಂಟರ್ ಸೀಜ್1
- ಇ ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಗೌರಸಮುದ್ರ ಮಾರಮ್ಮ ದೊಡ್ಡ ಜಾತ್ರೆಯ ನಂತರ ಎರಡನೇ ದಿನ ಸಿಡಿ ಉತ್ಸವ ನಡೆಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತದೆ ಇಂದು ಗೌರಸಮುದ್ರ ಮಾರಮ್ಮ ದೇವಸ್ಥಾನದ ಆವರಣದಲ್ಲಿ ಸಿಡಿ ಉತ್ಸವಕ್ಕೆ ವಿಘ್ನ! ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದ ಶ್ರೀ ಮಾರಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಗೆ ಸಿಡಿ ಉತ್ಸವ ನಡೆಯಬೇಕಿತ್ತು. ಸಿಡಿ ಉತ್ಸವದಲ್ಲಿ ಭಾಗವಹಿಸಲು ಕೋನಸಾಗರ ಗ್ರಾಮದ ಭಕ್ತರು ಬರಿಗಾಲಿನಲ್ಲಿ ನಡೆದುಕೊಂಡು ಗೌರಸಮುದ್ರಕ್ಕೆ ಆಗಮಿಸಿದ್ದರು. ಇನ್ನೇನು ಸಿಡಿ ಉತ್ಸವ ಆರಂಭವಾಗಬೇಕು ಎನ್ನುವಷ್ಟರಲ್ಲೇ… ಸಿಡಿ ಮರದ ತುಂಡೊಂದು ಮುರಿದು ಬಿದ್ದಿದೆ! ಬಹುಶಹ ಸಿಡಿ ಮರ ಹಳೆಯದಾಗಿದ್ದು ಇದರಿಂದ ಮುರಿದು ಬಿದ್ದಿರುವ ಶಂಕೆ ವ್ಯಕ್ತವಾಗಿದೆ ಇದರಿಂದ ಸಿಡಿ ಉತ್ಸವಕ್ಕೆ ವಿಘ್ನ ಎದುರಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಮತ್ತೊಮ್ಮೆ ಸಿಡಿ ಮರವನ್ನು ಸರಿಪಡಿಸಿ ಕಟ್ಟುವ ಪ್ರಯತ್ನ ನಡೆಸಲಾಗಿದ್ದು, ಮತ್ತೆ ಸಮಸ್ಯೆ ಉಂಟಾಗಿದ್ದು ಹಿನ್ನೆಲೆಯಲ್ಲಿ ಭಕ್ತರು ಆತಂಕಗೊಂಡಿದ್ದಾರೆ. ಗೌರಸಮುದ್ರ ಮಾರಮ್ಮದೇವಿಯ ಜಾತ್ರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಿಡಿ ಮರ ತುಂಡಾಗಿ ಉತ್ಸವಕ್ಕೆ ವಿಘ್ನ ಉಂಟಾಗಿದೆ ಎಂದು ಗ್ರಾಮದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂದರ್ಭದಲ್ಲಿ ಯಾವುದೇ ಅಪಾಯವಾಗಿಲ್ಲ. ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.1
- ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಅವರು ಇಂದು ಗೌರಸಮದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಇಡೀ ದಕ್ಷಿಣ ಭಾರತದಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು ಈ ದೇವಿಯ ಜಾತ್ರೆ ಮುಖಾಂತರ ಭಕ್ತಾದಿಗಳಿಂದ ಸಲ್ಲುವಂತಹ ಪ್ರತಿಯೊಂದು ಸಂಕಲ್ಪಗಳು ಈ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿಯನ್ನು ಜಗನ್ಮಾತೆಯಾದ ಮಾರಮ್ಮ ದೇವಿ ಕರುಣಿಸಲಿ ಇದರ ಮುಖಾಂತರ ಈ ಭಾಗದ ಜನ ಜೀವನದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಬದಲಾವಣೆ ತರಲಿ ಎಂದು ಆಶಿಸಿದರು ಸಂದರ್ಭದಲ್ಲಿ ಜಿಲ್ಲಾ ದಿಶಾ ಕಮಿ ಟಿಯ ಸದಸ್ಯ ಹೊನ್ನೂರ್ ಗೋವಿಂದಪ್ಪ ಬಿಜೆಪಿ ಮುಖಂಡರಾದ ಶ್ರೀನಿವಾಸ್ ಪ್ರದೀಪ್ ಕುಮಾರ್ ವಕೀಲರದ ಶಶಿ ಕುಮಾರ್ ಮಾಜಿ ಪ್ರದಾನ ಜಿ ಟಿ ಮಾರಣ್ಣ ಮುಂತಾದವರು ಹಾಜರಿದ್ದರು1
- ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ4