ಕರ್ನಾಟಕದ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ, ಮುಂಬೈನ ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯ ಸರ್ಕಾರದ ಸೌಮ್ಯತೆಗೊಳಪಡುವ ಎಲ್ಲಾ ವಿದ್ಯುತ್ ವಿತರಣಾ ಕಂಪನಿಗಳ ವ್ಯಾಪ್ತಿಯಲ್ಲಿ ಸಮಾನಾಂತರ ವಿತರಣಾ ಕಾರ್ಯಕ್ಕೆ ಪರವಾನಗಿ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ (KERC) ಅರ್ಜಿ ಸಲ್ಲಿಸಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬೆಸ್ಕಾಂ ನೌಕರರ ಸಂಘ, ಈ ಖಾಸಗಿ ಅರ್ಜಿಯನ್ನು ರಾಜ್ಯದ ಜನತೆಗೆ ಮಾರಕ ಎಂದು ಕರೆದಿದ್ದು, ಸರ್ಕಾರವು ಕೂಡಲೇ ಅದನ್ನು ತಿರಸ್ಕರಿಸಬೇಕೆಂದು ಆಗ್ರಹಿಸಿದೆ. ಸಂಘವು, ರಾಷ್ಟ್ರದ ಸಂವಿಧಾನ ಶಿಲ್ಪಿ ಮತ್ತು ಜನಪರ ಕಾಳಜಿಯ ದೂರದರ್ಶಿತ್ವದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು 1942-43ರಲ್ಲಿಯೇ ವಿದ್ಯುಚ್ಛಕ್ತಿ, ನೀರು ಮತ್ತು ಲೋಕೋಪಯೋಗಿ ಮೊದಲಾದ ಜನಸೇವಾ ಚಟುವಟಿಕೆಗಳು ಸರ್ಕಾರದ ಹಿಡಿತದಲ್ಲಿಯೇ ಇರಬೇಕು, ಲಾಭ ಗಳಿಕೆಯ ಖಾಸಗಿ ಸಂಸ್ಥೆಗಳಿಗೆ ನೀಡಬಾರದು ಎಂದು ತಿಳಿಸಿದ್ದರು ಎಂಬುದನ್ನು ನೆನಪಿಸಿದೆ. ಅವರು ಈ ಉದ್ದೇಶಕ್ಕಾಗಿಯೇ ಕೇಂದ್ರ ವಿದ್ಯುಚ್ಛಕ್ತಿ ಪ್ರಾಧೀಕಾರ ಮತ್ತು ರಾಜ್ಯ ವಿದ್ಯುಚ್ಛಕ್ತಿ ಮಂಡಳಿಗಳ ಸ್ಥಾಪನೆಗೆ ಬುನಾದಿ ಹಾಕಿದ್ದರು. ಇಂತಹ ಅಪೂರ್ವವಾದ ಜನಪರ ಸೇವೆಯನ್ನು ಖಾಸಗಿ ಸಂಸ್ಥೆಗೆ ನೀಡುವುದು ಜನವಿರೋಧಿ ನೀತಿಯಾಗುತ್ತದೆ ಎಂದು ಸಂಘ ಹೇಳಿದೆ. ವಿದ್ಯುತ್ ಕಾಯ್ದೆ 2003ರ ಕಲಂ 14 ಮತ್ತು 15ರ ಅಡಿಯಲ್ಲಿ ಖಾಸಗಿ ಕಂಪನಿಗಳಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡಿದರೆ ಪ್ರಮುಖ ಅನಾನುಕೂಲಗಳು ಸಂಭವಿಸಲಿವೆ ಎಂದು ಮನವಿ ಮಾಡಿದೆ. ಬೆಸ್ಕಾಂ ನೌಕರರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ನರಸಿಂಹಮೂರ್ತಿ ಮಾತನಾಡಿ, ಖಾಸಗಿ ಕಂಪನಿಗಳು ಲಾಭದ ಉದ್ದೇಶದಿಂದ ಕೆಲಸ ಮಾಡುತ್ತವೆ. ಇದರಿಂದ ಸಾಮಾನ್ಯ ಜನರಿಗೆ ಮತ್ತು ಬಡ ವರ್ಗದವರಿಗೆ ವಿದ್ಯುತ್ ದರ ಹೆಚ್ಚಾಗುತ್ತದೆ. ಇದು ಸಾರ್ವಜನಿಕ ಉದ್ಯೋಗ ಭದ್ರತೆಗೆ ಆತಂಕವನ್ನುಂಟುಮಾಡುತ್ತದೆ ಮತ್ತು ನಿರುದ್ಯೋಗಿ ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಸಿಗುವುದಿಲ್ಲ. ಖಾಸಗಿ ಕಂಪನಿಗಳಿಗೆ ವಹಿಸಿದರೆ, ಬಡ, ಮಧ್ಯಮ ಹಾಗೂ ದೀನ ದಲಿತರಿಗೆ ಮೀಸಲಾತಿ ಇಲ್ಲದೆ ತೊಂದರೆಯಾಗುತ್ತದೆ. ಸಣ್ಣ ಮತ್ತು ಮಧ್ಯಮ ಗುಡಿ ಕೈಗಾರಿಕೆಗಳಿಗೆ ವಿದ್ಯುತ್ ದರ ಹೆಚ್ಚಳವಾದರೆ ಕೈಗಾರಿಕೆಗಳ ಬೆಳವಣಿಗೆ ಕುಂಠಿತವಾಗುತ್ತದೆ. ಹಲವು ವರ್ಷಗಳ ಕಾಲ ಸಾರ್ವಜನಿಕರ ಹಣದಿಂದ ನಿರ್ಮಿಸಿದ ವಿದ್ಯುತ್ ಜಾಲ ಮತ್ತು ಮೂಲಸೌಕರ್ಯಗಳನ್ನು ಖಾಸಗಿ ಕಂಪನಿಗಳಿಗೆ ಒಪ್ಪಿಸುವುದು ನ್ಯಾಯಸಮ್ಮತವಲ್ಲ ಎಂದು ಅವರು ಹೇಳಿದರು. ಖಾಸಗಿ ಕಂಪನಿಗಳು ನಗರ ಮತ್ತು ಲಾಭದಾಯಕ ಪ್ರದೇಶಗಳಿಗೆ ಮಾತ್ರ ಸೇವೆ ನೀಡುವ ಸಾಧ್ಯತೆಯಿದ್ದು, ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳು ನಿರ್ಲಕ್ಷ್ಯಕ್ಕೊಳಗಾಗಬಹುದು. ಖಾಸಗಿ ಸಂಸ್ಥೆಗಳು ಹೆಚ್ಚಿನ ಲಾಭಕ್ಕಾಗಿ ವಿದ್ಯುತ್ ದರಗಳನ್ನು ಹೆಚ್ಚಿಸುವ ಅಪಾಯವಿದ್ದು, ಇದು ಸಾಮಾನ್ಯ ಜನರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸರ್ಕಾರಿ ಕಂಪನಿಗಳು ಜನರಿಗೆ, ಮಾಧ್ಯಮಕ್ಕೆ, ಕಾನೂನಿಗೆ ಮತ್ತು ಜನ ಪ್ರತಿನಿಧಿಗಳಿಗೆ ಉತ್ತರದಾಯಿತ್ವ ಹೊಂದಿರುತ್ತವೆ. ಆದರೆ, ಖಾಸಗಿ ಕಂಪನಿಗಳಲ್ಲಿ ಸಾರ್ವಜನಿಕ ಉತ್ತರದಾಯಿತ್ವಕ್ಕೆ ಅವಕಾಶವಿರುವುದಿಲ್ಲ. ಗ್ರಾಮೀಣ ಮೂಲಸೌಕರ್ಯದ ನಿರ್ಲಕ್ಷ್ಯ ಮತ್ತು ಮಲೆನಾಡು, ಕರಾವಳಿ ಹಾಗೂ ಹಿಂದುಳಿದ ಗ್ರಾಮೀಣ ಭಾಗಗಳಲ್ಲಿ ಖಾಸಗಿ ಸಂಸ್ಥೆಗಳು ವಿದ್ಯುತ್ ಸೇವೆಗಳನ್ನು ನೀಡುವುದು ಕಷ್ಟವಾಗುತ್ತದೆ. ಸಾರ್ವಜನಿಕ ಹಣದಿಂದ ನಿರ್ಮಿಸಿರುವ ವಿದ್ಯುತ್ ಗ್ರಿಡ್, ಕಂಬಗಳು ಮತ್ತು ಮೂಲಸೌಕರ್ಯಗಳನ್ನು ಖಾಸಗಿ ಸಂಸ್ಥೆಗೆ ನೀಡುವುದು ಜನರ ಹಣದ ದುರುಪಯೋಗವಾಗಲಿದೆ. ಖಾಸಗಿ ಕಂಪನಿಗಳು ಗ್ರಾಹಕರಿಗೆ ಮತ್ತು ರೈತರ ನೀರಾವರಿ ಯೋಜನೆಗಳಿಗೆ ಉಚಿತ ವಿದ್ಯುತ್ ಅಥವಾ ರಿಯಾಯಿತಿ ದರದಲ್ಲಿ ವಿದ್ಯುತ್ ಪೂರೈಸುವುದಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿ ಕೃಷಿಗೆ ಅಪಾಯಕಾರಿಯಾಗುತ್ತದೆ ಮತ್ತು ಅಗತ್ಯ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುತ್ತದೆ ಎಂದು ನರಸಿಂಹಮೂರ್ತಿ ವಿವರಿಸಿದರು. ವಿದ್ಯುತ್ ದೇಶದ ಭದ್ರತೆ ಮತ್ತು ಜನರ ಬದುಕಿಗೆ ಅತ್ಯಗತ್ಯವಾಗಿದೆ, ಇದನ್ನು ಖಾಸಗಿ ಕಂಪನಿಗೆ ಲಾಭದ ಉದ್ದೇಶದ ಅಧೀನಕ್ಕೆ ನೀಡುವುದು ರಾಜ್ಯದ ಮತ್ತು ಒಕ್ಕೂಟ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕೆ ಮಾರಕವಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. ಎ.ಇ.ಇ. ಎಂ.ಸಿರಾಜಶೇಖರ್ ಅವರು ಕೂಡ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ವಿತರಣೆ ನೀಡಿದರೆ ಗ್ರಾಹಕರಿಗೆ ಹೊಡೆತ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ಧರಣೇಶ್, ಕಾರ್ಯದರ್ಶಿ ಅತ್ಯುತ್ ಎಸ್ ಕೆ, ಸಹಾಯಕ ಲೆಕ್ಕಾಧಿಕಾರಿ ನರಸಿಂಹಯ್ಯ ಹಾಗೂ ಎಲ್ಲ ಉಪ ವಿಭಾಗದ ಶಾಖಾಧಿಕಾರಿಗಳು, ಗುತ್ತಿಗೆದಾರರು, ನೌಕರರ ಸಂಘದ ಸದಸ್ಯರುಗಳು ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು. ಕರ್ನಾಟಕದ ಜನರ ಹಿತಾಸಕ್ತಿ, ರೈತರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ವಿದ್ಯುತ್ ಕಂಪನಿಗಳನ್ನು ಸರ್ಕಾರದ ಅಧೀನದಲ್ಲಿ ಉಳಿಸಿಕೊಳ್ಳುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು.
ಕರ್ನಾಟಕದ ಪ್ರಮುಖ ದಿನಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ, ಮುಂಬೈನ ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯ ಸರ್ಕಾರದ ಸೌಮ್ಯತೆಗೊಳಪಡುವ ಎಲ್ಲಾ ವಿದ್ಯುತ್ ವಿತರಣಾ ಕಂಪನಿಗಳ ವ್ಯಾಪ್ತಿಯಲ್ಲಿ ಸಮಾನಾಂತರ ವಿತರಣಾ ಕಾರ್ಯಕ್ಕೆ ಪರವಾನಗಿ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ (KERC) ಅರ್ಜಿ ಸಲ್ಲಿಸಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬೆಸ್ಕಾಂ ನೌಕರರ ಸಂಘ, ಈ ಖಾಸಗಿ ಅರ್ಜಿಯನ್ನು ರಾಜ್ಯದ ಜನತೆಗೆ ಮಾರಕ ಎಂದು ಕರೆದಿದ್ದು, ಸರ್ಕಾರವು ಕೂಡಲೇ ಅದನ್ನು ತಿರಸ್ಕರಿಸಬೇಕೆಂದು ಆಗ್ರಹಿಸಿದೆ. ಸಂಘವು, ರಾಷ್ಟ್ರದ ಸಂವಿಧಾನ ಶಿಲ್ಪಿ ಮತ್ತು ಜನಪರ ಕಾಳಜಿಯ ದೂರದರ್ಶಿತ್ವದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು 1942-43ರಲ್ಲಿಯೇ ವಿದ್ಯುಚ್ಛಕ್ತಿ, ನೀರು ಮತ್ತು ಲೋಕೋಪಯೋಗಿ ಮೊದಲಾದ ಜನಸೇವಾ ಚಟುವಟಿಕೆಗಳು ಸರ್ಕಾರದ ಹಿಡಿತದಲ್ಲಿಯೇ ಇರಬೇಕು, ಲಾಭ ಗಳಿಕೆಯ ಖಾಸಗಿ ಸಂಸ್ಥೆಗಳಿಗೆ ನೀಡಬಾರದು ಎಂದು ತಿಳಿಸಿದ್ದರು ಎಂಬುದನ್ನು ನೆನಪಿಸಿದೆ. ಅವರು ಈ ಉದ್ದೇಶಕ್ಕಾಗಿಯೇ ಕೇಂದ್ರ ವಿದ್ಯುಚ್ಛಕ್ತಿ ಪ್ರಾಧೀಕಾರ ಮತ್ತು ರಾಜ್ಯ ವಿದ್ಯುಚ್ಛಕ್ತಿ ಮಂಡಳಿಗಳ ಸ್ಥಾಪನೆಗೆ ಬುನಾದಿ ಹಾಕಿದ್ದರು. ಇಂತಹ ಅಪೂರ್ವವಾದ ಜನಪರ ಸೇವೆಯನ್ನು ಖಾಸಗಿ ಸಂಸ್ಥೆಗೆ ನೀಡುವುದು ಜನವಿರೋಧಿ ನೀತಿಯಾಗುತ್ತದೆ ಎಂದು ಸಂಘ ಹೇಳಿದೆ. ವಿದ್ಯುತ್ ಕಾಯ್ದೆ 2003ರ ಕಲಂ 14 ಮತ್ತು 15ರ ಅಡಿಯಲ್ಲಿ ಖಾಸಗಿ ಕಂಪನಿಗಳಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡಿದರೆ ಪ್ರಮುಖ ಅನಾನುಕೂಲಗಳು ಸಂಭವಿಸಲಿವೆ ಎಂದು ಮನವಿ ಮಾಡಿದೆ. ಬೆಸ್ಕಾಂ ನೌಕರರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ
ನರಸಿಂಹಮೂರ್ತಿ ಮಾತನಾಡಿ, ಖಾಸಗಿ ಕಂಪನಿಗಳು ಲಾಭದ ಉದ್ದೇಶದಿಂದ ಕೆಲಸ ಮಾಡುತ್ತವೆ. ಇದರಿಂದ ಸಾಮಾನ್ಯ ಜನರಿಗೆ ಮತ್ತು ಬಡ ವರ್ಗದವರಿಗೆ ವಿದ್ಯುತ್ ದರ ಹೆಚ್ಚಾಗುತ್ತದೆ. ಇದು ಸಾರ್ವಜನಿಕ ಉದ್ಯೋಗ ಭದ್ರತೆಗೆ ಆತಂಕವನ್ನುಂಟುಮಾಡುತ್ತದೆ ಮತ್ತು ನಿರುದ್ಯೋಗಿ ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಸಿಗುವುದಿಲ್ಲ. ಖಾಸಗಿ ಕಂಪನಿಗಳಿಗೆ ವಹಿಸಿದರೆ, ಬಡ, ಮಧ್ಯಮ ಹಾಗೂ ದೀನ ದಲಿತರಿಗೆ ಮೀಸಲಾತಿ ಇಲ್ಲದೆ ತೊಂದರೆಯಾಗುತ್ತದೆ. ಸಣ್ಣ ಮತ್ತು ಮಧ್ಯಮ ಗುಡಿ ಕೈಗಾರಿಕೆಗಳಿಗೆ ವಿದ್ಯುತ್ ದರ ಹೆಚ್ಚಳವಾದರೆ ಕೈಗಾರಿಕೆಗಳ ಬೆಳವಣಿಗೆ ಕುಂಠಿತವಾಗುತ್ತದೆ. ಹಲವು ವರ್ಷಗಳ ಕಾಲ ಸಾರ್ವಜನಿಕರ ಹಣದಿಂದ ನಿರ್ಮಿಸಿದ ವಿದ್ಯುತ್ ಜಾಲ ಮತ್ತು ಮೂಲಸೌಕರ್ಯಗಳನ್ನು ಖಾಸಗಿ ಕಂಪನಿಗಳಿಗೆ ಒಪ್ಪಿಸುವುದು ನ್ಯಾಯಸಮ್ಮತವಲ್ಲ ಎಂದು ಅವರು ಹೇಳಿದರು. ಖಾಸಗಿ ಕಂಪನಿಗಳು ನಗರ ಮತ್ತು ಲಾಭದಾಯಕ ಪ್ರದೇಶಗಳಿಗೆ ಮಾತ್ರ ಸೇವೆ ನೀಡುವ ಸಾಧ್ಯತೆಯಿದ್ದು, ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳು ನಿರ್ಲಕ್ಷ್ಯಕ್ಕೊಳಗಾಗಬಹುದು. ಖಾಸಗಿ ಸಂಸ್ಥೆಗಳು ಹೆಚ್ಚಿನ ಲಾಭಕ್ಕಾಗಿ ವಿದ್ಯುತ್ ದರಗಳನ್ನು ಹೆಚ್ಚಿಸುವ ಅಪಾಯವಿದ್ದು, ಇದು ಸಾಮಾನ್ಯ ಜನರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸರ್ಕಾರಿ ಕಂಪನಿಗಳು ಜನರಿಗೆ, ಮಾಧ್ಯಮಕ್ಕೆ, ಕಾನೂನಿಗೆ ಮತ್ತು ಜನ ಪ್ರತಿನಿಧಿಗಳಿಗೆ ಉತ್ತರದಾಯಿತ್ವ ಹೊಂದಿರುತ್ತವೆ. ಆದರೆ, ಖಾಸಗಿ ಕಂಪನಿಗಳಲ್ಲಿ ಸಾರ್ವಜನಿಕ ಉತ್ತರದಾಯಿತ್ವಕ್ಕೆ ಅವಕಾಶವಿರುವುದಿಲ್ಲ. ಗ್ರಾಮೀಣ ಮೂಲಸೌಕರ್ಯದ ನಿರ್ಲಕ್ಷ್ಯ ಮತ್ತು ಮಲೆನಾಡು, ಕರಾವಳಿ ಹಾಗೂ ಹಿಂದುಳಿದ ಗ್ರಾಮೀಣ ಭಾಗಗಳಲ್ಲಿ ಖಾಸಗಿ ಸಂಸ್ಥೆಗಳು ವಿದ್ಯುತ್ ಸೇವೆಗಳನ್ನು ನೀಡುವುದು ಕಷ್ಟವಾಗುತ್ತದೆ.
ಸಾರ್ವಜನಿಕ ಹಣದಿಂದ ನಿರ್ಮಿಸಿರುವ ವಿದ್ಯುತ್ ಗ್ರಿಡ್, ಕಂಬಗಳು ಮತ್ತು ಮೂಲಸೌಕರ್ಯಗಳನ್ನು ಖಾಸಗಿ ಸಂಸ್ಥೆಗೆ ನೀಡುವುದು ಜನರ ಹಣದ ದುರುಪಯೋಗವಾಗಲಿದೆ. ಖಾಸಗಿ ಕಂಪನಿಗಳು ಗ್ರಾಹಕರಿಗೆ ಮತ್ತು ರೈತರ ನೀರಾವರಿ ಯೋಜನೆಗಳಿಗೆ ಉಚಿತ ವಿದ್ಯುತ್ ಅಥವಾ ರಿಯಾಯಿತಿ ದರದಲ್ಲಿ ವಿದ್ಯುತ್ ಪೂರೈಸುವುದಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿ ಕೃಷಿಗೆ ಅಪಾಯಕಾರಿಯಾಗುತ್ತದೆ ಮತ್ತು ಅಗತ್ಯ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುತ್ತದೆ ಎಂದು ನರಸಿಂಹಮೂರ್ತಿ ವಿವರಿಸಿದರು. ವಿದ್ಯುತ್ ದೇಶದ ಭದ್ರತೆ ಮತ್ತು ಜನರ ಬದುಕಿಗೆ ಅತ್ಯಗತ್ಯವಾಗಿದೆ, ಇದನ್ನು ಖಾಸಗಿ ಕಂಪನಿಗೆ ಲಾಭದ ಉದ್ದೇಶದ ಅಧೀನಕ್ಕೆ ನೀಡುವುದು ರಾಜ್ಯದ ಮತ್ತು ಒಕ್ಕೂಟ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕೆ ಮಾರಕವಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. ಎ.ಇ.ಇ. ಎಂ.ಸಿರಾಜಶೇಖರ್ ಅವರು ಕೂಡ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ವಿತರಣೆ ನೀಡಿದರೆ ಗ್ರಾಹಕರಿಗೆ ಹೊಡೆತ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ಧರಣೇಶ್, ಕಾರ್ಯದರ್ಶಿ ಅತ್ಯುತ್ ಎಸ್ ಕೆ, ಸಹಾಯಕ ಲೆಕ್ಕಾಧಿಕಾರಿ ನರಸಿಂಹಯ್ಯ ಹಾಗೂ ಎಲ್ಲ ಉಪ ವಿಭಾಗದ ಶಾಖಾಧಿಕಾರಿಗಳು, ಗುತ್ತಿಗೆದಾರರು, ನೌಕರರ ಸಂಘದ ಸದಸ್ಯರುಗಳು ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು. ಕರ್ನಾಟಕದ ಜನರ ಹಿತಾಸಕ್ತಿ, ರೈತರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ವಿದ್ಯುತ್ ಕಂಪನಿಗಳನ್ನು ಸರ್ಕಾರದ ಅಧೀನದಲ್ಲಿ ಉಳಿಸಿಕೊಳ್ಳುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು.
- ಮಳವಳ್ಳಿ ತಾಲೂಕಿನ ಭೀಮನಹಳ್ಳಿ ಬಳಿ, ಭೀಮನಹಳ್ಳಿ ಮತ್ತು ಹಿಟ್ಟನಹಳ್ಳಿ ಕೊಪ್ಪಲು ಮಾರ್ಗಮಧ್ಯದಲ್ಲಿ 34 ವರ್ಷದ ಯುವಕ ಮಹೇಶ್ ಅವರನ್ನು ಕಿಡಿಗೇಡಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಿರುಗವಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಭೀಮನಹಳ್ಳಿ ಗ್ರಾಮದ ಮರಿಯಯ್ಯ ಮತ್ತು ಪುಟ್ಟ ಚೆನ್ನಮ್ಮ ದಂಪತಿಯ ಪುತ್ರರಾದ ಮಹೇಶ್ ಅವರೇ ಕೊಲೆಯಾದ ಯುವಕ. ಮಂಗಳವಾರ ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದ ಇವರನ್ನು ಸ್ನೇಹಿತರು ಕರೆದುಕೊಂಡು ಹೋಗಿ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಘಟನೆ ಬೆಳಕಿಗೆ ಬಂದಿದ್ದು, ಮಹೇಶ್ ಅವರನ್ನು ಬೈಕ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ದಾರಿಯಲ್ಲಿ ಬೈಕ್‌ನ ಪೆಟ್ರೋಲ್ ಖಾಲಿಯಾಗಿ ನಿಂತ ಸಂದರ್ಭದಲ್ಲಿ ಈ ಪ್ರಕರಣ ಬಹಿರಂಗಗೊಂಡಿದೆ. ಕೊಲೆಯಾದ ಮಹೇಶ್ ಅವರು ಮದುವೆಯಾಗಿದ್ದು, ಇಬ್ಬರು ಹೆಣ್ಣುಮಕ್ಕಳನ್ನು ಹೊಂದಿದ್ದರು. ಈ ಘಟನೆ ಕಾಡ್ಗಿಚ್ಚಿನಂತೆ ಹರಡಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರು ಬೆಚ್ಚಿಬಿದ್ದಿದ್ದಾರೆ. ಕಿರುಗಾವಲು ಪೊಲೀಸರ ತಂಡ ಈಗಾಗಲೇ ಆರೋಪಿಗಳನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದೆ. ಕೊಲೆಯಾದ ಯುವಕನ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಇಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.1
- ಭಾರತದಲ್ಲಿ ವೈರಲ್ ಆಗಿರುವ ಒಂದು ಸಂದೇಶವು, ವಿದ್ವಾಂಸರು ಮತ್ತು ಉಲೇಮಾಗಳು ಸ್ಥಳೀಯ ರಾಜಕಾರಣಿಗಳ ರಾಜಕೀಯ ನಿರ್ಧಾರಗಳಿಗೆ ಬಲಿಯಾಗಬಾರದು ಎಂದು ಸ್ಪಷ್ಟವಾಗಿ ಮನವಿ ಮಾಡಿದೆ.1
- ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಶಬರಿಮಲೆ ದರ್ಶನಕ್ಕೆ ತೆರಳುತ್ತಿದ್ದಾರೆ.1
- ರಾಜ್ಯದ MBBS ಪದವೀಧರರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ದೊರೆತಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHC) ಸೇವೆ ಸಲ್ಲಿಸಲು ಇಚ್ಛಿಸುವ ವೈದ್ಯರಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಇದು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ಕೈಗೊಂಡ ಮಹತ್ವದ ನಿರ್ಧಾರವಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗಿದ್ದು, ಆಸಕ್ತ ವೈದ್ಯರು ನೇರವಾಗಿ DHO (ಜಿಲ್ಲಾ ಆರೋಗ್ಯ ಅಧಿಕಾರಿ) ಕಚೇರಿಗೆ ಅರ್ಜಿ ಸಲ್ಲಿಸಬಹುದು. ವಾಕ್-ಇನ್ ಇಂಟರ್ವ್ಯೂ ಮೂಲಕ ನೇಮಕಾತಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವಾರದೊಳಗೆ ಉದ್ಯೋಗ ದೊರೆಯಲಿದೆ. ಅಲ್ಲದೆ, ಈ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬ ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಸರ್ಕಾರ ಎಚ್ಚರಿಕೆ ನೀಡಿದೆ.1
- ಬೆಂಗಳೂರಿನಲ್ಲಿ ಅಬೀಬಾ ಟೆಂಟ್ ಹೌಸ್ ಬಾಡಿಗೆ ಆಧಾರದ ಮೇಲೆ ಸೇವೆಗಳನ್ನು ಒದಗಿಸುತ್ತಿದೆ. ಸೇವೆಗಳನ್ನು ಪಡೆಯಲು ಆಸಕ್ತಿ ಇರುವವರು 7760976887 ಅಥವಾ 9900619376 ಸಂಖ್ಯೆಗಳಿಗೆ ಸಂಪರ್ಕಿಸಬಹುದು.1
- ಕರವೇ ಸ್ವಾಭಿಮಾನಿ ಸೇನೆಯ ಕೆಆರ್ ಪೇಟೆ ಘಟಕದ ಸಮೀರ್ ಮತ್ತು ಅವರ ತಂಡ ಎಂಡಿ ಅಲೀಮ್ ಉಲ್ಲಾ ಷರೀಫ್ ಅವರ ಕಚೇರಿಗೆ ಭೇಟಿ ನೀಡಿದೆ. ಈ ಭೇಟಿಗಾಗಿ ಸಮೀರ್ ಮತ್ತು ಅವರ ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಗಿದೆ.1
- ಕ್ರಿಯೇಟರ್ ಸೋನು ತೀವ್ರ ದುಃಖ ವ್ಯಕ್ತಪಡಿಸಿದ್ದು, ತಮ್ಮ ಜೀವನದಲ್ಲಿ ಹಿಂದೆಂದೂ ಇಷ್ಟು ಅತ್ತಿರಲಿಲ್ಲ ಎಂದು ಹೇಳಿದ್ದಾರೆ. ಅವರ ಈ ದುಃಖಕ್ಕೆ ನಿಖರ ಕಾರಣವೇನು ಎಂಬುದು ಮಾತ್ರ ತಿಳಿದುಬಂದಿಲ್ಲ.1
- ಚಳ್ಳಕೆರೆ: ಆಧುನಿಕ ಭಗೀರಥ ಎಂದು ಖ್ಯಾತಿ ಪಡೆದಿರುವ ಮತ್ತು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಅದನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ ಶಾಸಕ ಟಿ. ರಘುಮೂರ್ತಿ ಅವರಿಗೆ ಈ ಬಾರಿಯಾದರೂ ಸಚಿವ ಸ್ಥಾನ ನೀಡಬೇಕು ಎಂದು ಈಡಿಗ ಸಮುದಾಯದ ಮುಖಂಡ ಹಾಗೂ ನಗರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಟಿ. ಮಲ್ಲಿಕಾರ್ಜುನ ಒತ್ತಾಯಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ, ಶಾಸಕ ರಘುಮೂರ್ತಿ ಅವರು ಕ್ಷೇತ್ರದಿಂದ ಮೂರು ಬಾರಿ ಗೆಲುವು ಸಾಧಿಸಿ ಅಭಿವೃದ್ಧಿ ಹರಿಕಾರರಾಗಿದ್ದಾರೆ. ಅವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಇಡೀ ರಾಜ್ಯವೇ ಗಮನಿಸುತ್ತಿದೆ. ಅವರಲ್ಲಿ ಇನ್ನಷ್ಟು ಅಭಿವೃದ್ಧಿ ಯೋಜನೆಗಳಿದ್ದು, ಮಂತ್ರಿ ಸ್ಥಾನ ನೀಡಿದರೆ ಅವುಗಳನ್ನು ಸಾಕಾರಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ, ತಮ್ಮ ಈಡಿಗ ಸಮುದಾಯದ ವತಿಯಿಂದ ಶಾಸಕ ಟಿ. ರಘುಮೂರ್ತಿ ಅವರಿಗೆ ಮಂತ್ರಿ ಸ್ಥಾನವನ್ನು ಕೊಡಲೇಬೇಕು ಎಂದು ಮಲ್ಲಿಕಾರ್ಜುನ ತೀವ್ರವಾಗಿ ಒತ್ತಾಯಿಸಿದ್ದಾರೆ.1
- ದೊಡ್ಡಬಳ್ಳಾಪುರ-ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿ 648ರ ಲಕ್ಷ್ಮೀಪುರ ಗೇಟ್ ಬಳಿ ಲಾರಿ ಚಾಲಕನ ಅಜಾಗರೂಕತೆಯಿಂದಾಗಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ಭಯಾನಕ ಘಟನೆಯ ದೃಶ್ಯಗಳು ಹೆದ್ದಾರಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡು ಮೊದಲು ಮುಂದಿದ್ದ ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಟ್ರಾಕ್ಟರ್‌ಗೆ ಡಿಕ್ಕಿ ಹೊಡೆದ ನಂತರ ಲಾರಿ ಮತ್ತೊಂದು ರಸ್ತೆಗೆ ನುಗ್ಗಿ, ಎದುರುಗಡೆಯಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೂ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್, ಟ್ರಾಕ್ಟರ್, ಲಾರಿ ಹಾಗೂ ಬೊಲೆರೊ ವಾಹನಗಳ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್‌ನಲ್ಲಿ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.2