ಬಿಜೆಪಿ-ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಕಾರ್ಯಕರ್ತರು ಲಿಂಗಸುಗೂರು.ಸೆ.15- ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತೊರೆದ ನೂರಾರು ಕಾರ್ಯಕರ್ತರು ಹಾಗೂ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ತಾಲೂಕಿನ ರಾಂಪುರು, ಹಲ್ಕಾವಟಗಿ ಮತ್ತು ರೊಡಲಬಂಡ ಗ್ರಾಮಗಳ ಬಿಜೆಪಿ-ಜೆಡಿಎಸ್ ನ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪೂರು ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಇದು ಚುನಾವಣೆಯ ಕಾಲವಲ್ಲ, ಬದಲಾವಣೆಯ ಪರ್ವ. ಜನರ ನಂಬಿಕೆಯೇ ಕಾಂಗ್ರೆಸ್ ಬಲ. ಪಕ್ಷಕ್ಕೆ ಬಂದ ಎಲ್ಲರಿಗೂ ಸೂಕ್ತ ಗೌರವ ನೀಡಲಾಗುವುದು. ಅಭಿವೃದ್ಧಿಯ ಹಾದಿಯಲ್ಲಿ ಎಲ್ಲರೂ ಜೊತೆಯಾಗಿ ಸಾಗೋಣ" ಎಂದರು. ಸೇರ್ಪಡೆಗೊಂಡ ಪ್ರಮುಖರಾದ ಮಮ್ಮದ್, ಪರಶುರಾಮ್, ಮಹಾತೇಶ ಪಾಟೀಲ್ ರಾಂಪುರ್, ಅಯ್ಯನಗೌಡ ರಾಂಪುರ್, ಬಸನಗೌಡ ರಾಂಪುರ್, ಸಾಗರಗೌಡ, ಬಸವರಾಜ ಘರಸಂಗಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಮುಖಂಡರಾದ ಭೂಪನಗೌಡ ಕರಡಕಲ್ ಬಸವರಾಜಗೌಡ ಗಣೇಕಲ್, ಪಾಮಯ್ಯ ಮುರಾರಿ, ಅಮರೇಶ್ ಮೇದನಪುರ್, ರಾಮನಗೌಡ, ಚಂದ್ರಶೇಖರ್ ಪಾಟೀಲ್, ಬಸಣ್ಣ ಜವಳಿಗೇರಿ, ಸಂಗನಗೌಡ, ಜಗದೀಶ್ ಗೌಡ, ಪ್ರಕಾಶ್ ಕುರಿ ಹಾಗೂ ವಿಧಾನ ಪರಿಷತ್ ಸದಸ್ಯರ ಆಪ್ತ ಸಹಾಯಕ ಚನ್ನರೆಡ್ಡಿ ಬಿರಾದರ್ ಸೇರಿ ಮುಖಂಡರು ಇದ್ದರು.
ಬಿಜೆಪಿ-ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಕಾರ್ಯಕರ್ತರು ಲಿಂಗಸುಗೂರು.ಸೆ.15- ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತೊರೆದ ನೂರಾರು ಕಾರ್ಯಕರ್ತರು ಹಾಗೂ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ತಾಲೂಕಿನ ರಾಂಪುರು, ಹಲ್ಕಾವಟಗಿ ಮತ್ತು ರೊಡಲಬಂಡ ಗ್ರಾಮಗಳ ಬಿಜೆಪಿ-ಜೆಡಿಎಸ್ ನ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ್ ಬಯ್ಯಾಪೂರು ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಇದು ಚುನಾವಣೆಯ ಕಾಲವಲ್ಲ, ಬದಲಾವಣೆಯ ಪರ್ವ. ಜನರ ನಂಬಿಕೆಯೇ ಕಾಂಗ್ರೆಸ್ ಬಲ. ಪಕ್ಷಕ್ಕೆ ಬಂದ
ಎಲ್ಲರಿಗೂ ಸೂಕ್ತ ಗೌರವ ನೀಡಲಾಗುವುದು. ಅಭಿವೃದ್ಧಿಯ ಹಾದಿಯಲ್ಲಿ ಎಲ್ಲರೂ ಜೊತೆಯಾಗಿ ಸಾಗೋಣ" ಎಂದರು. ಸೇರ್ಪಡೆಗೊಂಡ ಪ್ರಮುಖರಾದ ಮಮ್ಮದ್, ಪರಶುರಾಮ್, ಮಹಾತೇಶ ಪಾಟೀಲ್ ರಾಂಪುರ್, ಅಯ್ಯನಗೌಡ ರಾಂಪುರ್, ಬಸನಗೌಡ ರಾಂಪುರ್, ಸಾಗರಗೌಡ, ಬಸವರಾಜ ಘರಸಂಗಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಮುಖಂಡರಾದ ಭೂಪನಗೌಡ ಕರಡಕಲ್ ಬಸವರಾಜಗೌಡ ಗಣೇಕಲ್, ಪಾಮಯ್ಯ ಮುರಾರಿ, ಅಮರೇಶ್ ಮೇದನಪುರ್, ರಾಮನಗೌಡ, ಚಂದ್ರಶೇಖರ್ ಪಾಟೀಲ್, ಬಸಣ್ಣ ಜವಳಿಗೇರಿ, ಸಂಗನಗೌಡ, ಜಗದೀಶ್ ಗೌಡ, ಪ್ರಕಾಶ್ ಕುರಿ ಹಾಗೂ ವಿಧಾನ ಪರಿಷತ್ ಸದಸ್ಯರ ಆಪ್ತ ಸಹಾಯಕ ಚನ್ನರೆಡ್ಡಿ ಬಿರಾದರ್ ಸೇರಿ ಮುಖಂಡರು ಇದ್ದರು.
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.4
- ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ1
- ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು4
- ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಕರ್ನಾಟಕದ ಅತ್ಯಂತ ಸುಪ್ರಸಿದ್ದ ತಾಣಗಳು ದಕ್ಷಿಣ ಭಾರತದಲ್ಲೇ ಅತ್ಯಂತ ಅಭೂತಪೂರ್ವವಾದ ಮಹಾಶಿಲಾ ತಾಣವೆಂದರೆ ರಾಜನಕೊಲ್ಲೂರು. ಇಲ್ಲಿ ಅನೇಕ ಬಗೆಯ ಮರಳುಗಲ್ಲಿನ ಮಹಾಶಿಲೆಗಳು ಇವೆ. ಡೋಲ್ಡನ್‌ಗಳೆಂಬ ಜಾವಡಿಗೆ ಆಧಾರವಾಗಿ ನಿಂತ ಬದಿಯ ಚಪ್ಪಡಿಗಳುಳ್ಳ ಆಯತಾಕಾರದ ರಚನೆಗಳನ್ನು ಡೋಲೈನ್ ಗಳೆಂದು ಕರೆಯುತ್ತಾರೆ. ಇಲ್ಲಿ ಕಾಣುವ ವಿವಿಧ ಬಗೆಗಳನ್ನು ಗಮನಿಸಿ, ಕೆಲವಕ್ಕೆ ಮೂರು ಅಥವಾ ನಾಲ್ಕು ಬದಿಗಳಿವೆ. ಹಾಗೂ ಸಣ್ಣ ಕಿಟಕಿ-ರಂಧ್ರವು ಅದರಲ್ಲಿ ಇರಬಹುದು ಅಥವಾ ಇಲ್ಲದಿರಬಹುದು. ಡೋಲೈನ್‌ಗಳ ಮಧ್ಯೆ ಇರುವ ಭಾಗಶಃ ಹೂತಿರುವ, ಡಬ್ಬಿ ಆಕಾರದ ರಚನೆಗಳನ್ನು ಸಿಸ್ಟ್‌ಗಳೆಂದು ಕರೆಯುತ್ತಾರೆ. ಸಿಸ್ಟ್ ತನ್ನೊಳಗೇ ಕುಸಿದು ಬೀಳದಂತೆ ತಡೆಗಟ್ಟುವ ರೀತಿಯಲ್ಲಿ, ರಾಜನಕೊಲ್ಲೂರಿನ ಎಲ್ಲ ಸಿಸ್ಟ್‌ಗಳಲ್ಲೂ ಅದರ ಬದಿಯ ಉದ್ದನೆಯ ಚಪ್ಪಡಿಗಳು, ಸ್ವಲ್ಪ ಚಿಕ್ಕ ಚಪ್ಪಡಿಗಳಿಗಿಂತ ಮುಂದಕ್ಕೆ ಚಾಚಿವೆ.1
- ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮೂಲಕ ಪ್ರೇಮ್ ಸುಂದರ್ ಗೆ ನಮನ ಸಲ್ಲಿಕೆ. ಸಿರವಾರ: ಗಣೇಶ ಮೂರ್ತಿ ತರುವ ವೇಳೆ ವಿದ್ಯುತ್ ಅವಘಡ ಸಂಭವಿಸಿ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ಮೃತಪಟ್ಟಿದ್ದ ಸಿರವಾರ ಪಟ್ಟಣದ ಯುವಕ ಪ್ರೇಮ್ ಸುಂದರ್ ಅವರ ಸ್ಮರಣಾರ್ಥದ ಪ್ರಯುಕ್ತ ಸಿರವಾರ ಪಟ್ಟಣದಲ್ಲಿ ಮಂಗಳವಾರ ಸಂಜೆ ಮೇಣದ ಬತ್ತಿ ಹಚ್ಚಿ ಮೆರವಣಿಗೆ ಮಾಡುವ ಮೂಲಕ ಅಗಲಿದ ಚೇತನಕ್ಕೆ ನಮನ ಸಲ್ಲಿಸಲಾಯಿತು. ಪಟ್ಟಣದ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ವಾಲ್ಮೀಕಿ ವೃತ್ತದ ವರೆಗೆ ನಡೆಯಿತು. ಪ್ರೇಮ್ ಸುಂದರ ಅವರ ಸರಳತೆ, ನಡೆ, ನುಡಿ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿದರು. ಪ್ರೇಮ್ ಸುಂದರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಈ ವೇಳೆ ಪಟ್ಟಣದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.1
- *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ: ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.2
- ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್ ಎದುರು ಪ್ರತಿಭಟನೆ1
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ4