ನೀರಿಗಾಗಿ ರೈತರ ಅನಿರ್ದಿಷ್ಟಾವಧಿ ಹೋರಾಟಕ್ಕೆ ರಾಜಾ ವೆಂಕಟಪ್ಪ ನಾಯಕ ದೊರೆ ಬೆಂಬಲ ಸಿರವಾರ : ಸಿರವಾರ ಪಟ್ಟಣದ ಕರ್ನಾಟಕ ನೀರಾವರಿ ನಿಗಮದ ಕರ್ನಾಟಕ ಎಡದಂಡೆ ಕಾಲುವೆ ಉಪ ವಿಭಾಗ ಕಚೇರಿ ಆವರಣದಲ್ಲಿ ಸಿರವಾರ ತಾಲೂಕಿನ ರೈತರು ಹಮ್ಮಿಕೊಂಡಿರುವ ನೀರಿಗಾಗಿ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ದೊರೆ ಅವರು ಭಾಗವಹಿಸಿ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜಾ ವೆಂಕಟಪ್ಪ ನಾಯಕ ದೊರೆ, ಸಿರವಾರ ಹಾಗೂ ಮಾನ್ವಿ ತಾಲೂಕಿನ ಕೆಳಭಾಗದ ರೈತರು ಮಳೆ ಇಲ್ಲದೆ ಸಂಕಷ್ಟದಲ್ಲಿದ್ದು, ಕೃಷಿ ಚಟುವಟಿಕೆಗಳಿಗೆ ನೀರಿನ ಅವಶ್ಯಕತೆ ತೀವ್ರವಾಗಿದೆ. ರೈತರ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ನಿಗದಿತ ತೀರ್ಮಾನದಂತೆ ಕೆಳಭಾಗದ ರೈತರಿಗೆ ನೀರು ಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರೈತರ ನ್ಯಾಯಯುತ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು. ರೈತರಿಗೆ ನೀರು ದೊರೆಯುವವರೆಗೂ ಅವರ ಹೋರಾಟಕ್ಕೆ ಬೆಂಬಲವಾಗಿ ನಿಲ್ಲುತ್ತೇನೆ. ಅಗತ್ಯವಾದರೆ ರೈತರೊಂದಿಗೆ ಸೇರಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಅವರು ಎಚ್ಚರಿಕೆ ನೀಡಿದರು. ನೀರಿನ ಸಮಸ್ಯೆಯಿಂದ ರೈತರು ಸಂಕಷ್ಟಕ್ಕೀಡಾಗಿರುವ ಸಂದರ್ಭದಲ್ಲಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿ, ತಕ್ಷಣ ಸೂಕ್ತ ಕ್ರಮ ಕೈಗೊಂಡು ರೈತರಿಗೆ ನೀರು ಒದಗಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಸಿರವಾರ ತಾಲೂಕಿನ ವಿವಿಧ ಗ್ರಾಮಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ನೀರಿಗಾಗಿ ರೈತರ ಅನಿರ್ದಿಷ್ಟಾವಧಿ ಹೋರಾಟಕ್ಕೆ ರಾಜಾ ವೆಂಕಟಪ್ಪ ನಾಯಕ ದೊರೆ ಬೆಂಬಲ ಸಿರವಾರ : ಸಿರವಾರ ಪಟ್ಟಣದ ಕರ್ನಾಟಕ ನೀರಾವರಿ ನಿಗಮದ ಕರ್ನಾಟಕ ಎಡದಂಡೆ ಕಾಲುವೆ ಉಪ ವಿಭಾಗ ಕಚೇರಿ ಆವರಣದಲ್ಲಿ ಸಿರವಾರ ತಾಲೂಕಿನ ರೈತರು ಹಮ್ಮಿಕೊಂಡಿರುವ ನೀರಿಗಾಗಿ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ದೊರೆ ಅವರು ಭಾಗವಹಿಸಿ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ
ಮಾತನಾಡಿದ ರಾಜಾ ವೆಂಕಟಪ್ಪ ನಾಯಕ ದೊರೆ, ಸಿರವಾರ ಹಾಗೂ ಮಾನ್ವಿ ತಾಲೂಕಿನ ಕೆಳಭಾಗದ ರೈತರು ಮಳೆ ಇಲ್ಲದೆ ಸಂಕಷ್ಟದಲ್ಲಿದ್ದು, ಕೃಷಿ ಚಟುವಟಿಕೆಗಳಿಗೆ ನೀರಿನ ಅವಶ್ಯಕತೆ ತೀವ್ರವಾಗಿದೆ. ರೈತರ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ನಿಗದಿತ ತೀರ್ಮಾನದಂತೆ ಕೆಳಭಾಗದ ರೈತರಿಗೆ ನೀರು ಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರೈತರ ನ್ಯಾಯಯುತ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು. ರೈತರಿಗೆ ನೀರು ದೊರೆಯುವವರೆಗೂ ಅವರ ಹೋರಾಟಕ್ಕೆ ಬೆಂಬಲವಾಗಿ
ನಿಲ್ಲುತ್ತೇನೆ. ಅಗತ್ಯವಾದರೆ ರೈತರೊಂದಿಗೆ ಸೇರಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಅವರು ಎಚ್ಚರಿಕೆ ನೀಡಿದರು. ನೀರಿನ ಸಮಸ್ಯೆಯಿಂದ ರೈತರು ಸಂಕಷ್ಟಕ್ಕೀಡಾಗಿರುವ ಸಂದರ್ಭದಲ್ಲಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿ, ತಕ್ಷಣ ಸೂಕ್ತ ಕ್ರಮ ಕೈಗೊಂಡು ರೈತರಿಗೆ ನೀರು ಒದಗಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಸಿರವಾರ ತಾಲೂಕಿನ ವಿವಿಧ ಗ್ರಾಮಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
- ಸಿರವಾರ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬ ಅದ್ಧೂರಿ ಆಚರಣೆ. ಗಮನ ಸೆಳೆದ ಡಿಜೆ, ಸ್ತಬ್ಧಚಿತ್ರ ಬೃಹತ್ ಮೆರವಣಿಗೆ. ಸಿರವಾರ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬ ಅದ್ಧೂರಿ ಆಚರಣೆ. ಗಮನ ಸೆಳೆದ ಡಿಜೆ, ಸ್ತಬ್ಧಚಿತ್ರ ಬೃಹತ್ ಮೆರವಣಿಗೆ. ಸಿರವಾರ: ಪಟ್ಟಣದಲ್ಲಿಂದು ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಸಡಗರ ಸಂಭ್ರಮದಿಂದ ಆಚರಿಸಿದರು. ಹಬ್ಬದ ಪ್ರಯುಕ್ತ ಪಟ್ಟಣದ ನೂರಾನಿ ಮಸೀದ್ ಯಿಂದ ಆರಂಭಗೊಂಡ ಮೆಕ್ಕಾ, ಮದೀನಗಳ ಸ್ತಬ್ಧಚಿತ್ರಗಳ ಬೃಹತ್ ಮೆರವಣಿಗೆಯು ಬಸವೇಶ್ವರ ವೃತ್ತ, ಬಸ್ ನಿಲ್ದಾಣ ತಲುಪಿ ನಂತರ ಪುನಃ ನೂರಾನಿ ಮಸೀದಿ ತಲುಪಿತು. ಇದೇ ವೇಳೆ ವಿಶೇಷ ಭೋಜನಕೂಟ ಏರ್ಪಡಿಸಿ ಸಡಗರ ಸಂಭ್ರಮದೊಂದಿಗೆ ಈದ್ ಮಿಲಾದ್ ಹಬ್ಬ ಆಚರಿದರು. ಅದ್ಧೂರಿ ಮೆರವಣಿಗೆ: ಇದೇ ವೇಳೆ ಡಿಜೆ ಮೆರವಣಿಗೆಯೊಂದಿಗೆ ಸ್ತಬ್ಧ ಚಿತ್ರಗಳ ಅದ್ಧೂರಿ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಹಿರಿಯರು, ಯುವಕರು ಇದ್ದರು.4
- ಜಯರಾಜ್ ಅಧ್ಯಕ್ಷರು ರಕ್ಷಣಾ ವೇದಿಕೆ ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ1
- ಆಗಸ್ಟ್ 27ರಂದು ಬರಗಾಲ ಪ್ರಯುಕ್ತ ಹುಟ್ಟುಹಬ್ಬ ಆಚರಣೆ ಮಾಡದಿರುವುದಾಗಿ ನಿರ್ಧಾರ ಶ್ರೀಮತಿ ಕರೆಮ್ಮ ಜಿ ನಾಯಕ ದೇವದುರ್ಗ ಶಾಸಕರು1
- ಸಿಂಧನೂರು ಕ್ಷೇತ್ರದಲ್ಲಿ 43,115 ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಸಿಂಧನೂರು: ರಾಷ್ಟ್ರೀಯ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಬಳಿಕ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 43,115 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ದೇಸಾಯಿ ತಿಳಿಸಿದ್ದಾರೆ. ಮಂಗಳವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರದಲ್ಲಿ 2,40,941 ಮತದಾರರಿದ್ದರು. ಪರಿಷ್ಕರಣೆ ವೇಳೆ ಮೃತಪಟ್ಟ 6,778, ಶಾಶ್ವತವಾಗಿ ಸ್ಥಳಾಂತರಗೊಂಡ 31,954, ಗೈರುಹಾಜರಿದ್ದ 1,555 ಹಾಗೂ ಡಬಲ್ ಮತದಾರರಾಗಿದ್ದ 2,805 ಮಂದಿಯ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇತರ ಕಾರಣಗಳಿಂದ 23 ಮತದಾರರ ಹೆಸರನ್ನೂ ಡಿಲೀಟ್ ಮಾಡಲಾಗಿದೆ. 2025ರ ಮತದಾರರ ಪಟ್ಟಿಗೆ ಹೋಲಿಸಿದರೆ ಒಟ್ಟು 17.90ರಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಈ ಪೈಕಿ ನಗರ ವ್ಯಾಪ್ತಿಯಲ್ಲಿ 20,799 ಹಾಗೂ ಗ್ರಾಮೀಣ ಪ್ರದೇಶದಲ್ಲಿ 22,351 ಮತದಾರರ ಹೆಸರುಗಳು ಡಿಲೀಟ್ ಆಗಿವೆ. ಅರ್ಹ ಮತದಾರರ ಹೆಸರು ವಿವಿಧ ಕಾರಣಗಳಿಂದ ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದರೆ, ನಿಗದಿತ 13 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಸಲ್ಲಿಸಿ ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶವಿದೆ ಎಂದು ಅವರು ತಿಳಿಸಿದರು. ಈ ಹಿಂದೆ ಕ್ಷೇತ್ರದಲ್ಲಿ 269 ಮತಗಟ್ಟೆಗಳಿದ್ದವು. 1,200ಕ್ಕೂ ಅಧಿಕ ಮತದಾರರಿರುವ ಕಾರಣ ಮಾಡಶಿರವಾರ, ಪಗಡದಿನ್ನಿ ಹಾಗೂ ಬೂದಿಹಾಳ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ವಿ.ಹೆಚ್.ಎ. ಆ್ಯಪ್ ಮೂಲಕ ಮತದಾರರ ಸೇರ್ಪಡೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅರುಣ್ ಕುಮಾರ್ ದೇಸಾಯಿ ಹೇಳಿದರು.1
- ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.4
- ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ.... ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ. -----------------1
- ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಸಿರವಾರ: ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಸಿರವಾರದಲ್ಲಿ ಪ್ರತಿಭಟನೆ. ಅಕ್ರಮ ನೀರಾವರಿ ತಡೆಗಟ್ಟುವಲ್ಲಿ ಆಡಳಿತ ಯಂತ್ರ ಕುಸಿದಿದೆ: ಜೆ.ಶರಣಪ್ಪ ಗೌಡ. ಸಿರವಾರ: ಟಿಎಲ್ಬಿಸಿ ಎಡದಂಡೆ ನಾಲೆಯ ಕೆಳಭಾಗಕ್ಕೆ ಸಲಹಾ ಸಮಿತಿಯ ಸಭೆಯ ನಿರ್ಣಯದಂತೆ ಸಮರ್ಪಕವಾಗಿ ನೀರು ಹರಿಸುತ್ತಿಲ್ಲ. ನೀರು ನಿರ್ವಹಣೆ ಮಾಡದ ನೀರಾವರಿ ಇಲಾಖೆಯ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯವನ್ನು ಖಂಡಿಸಿ ರೈತರು ಮಂಗಳವಾರ ಪಟ್ಟಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮೇಲ್ಬಾಗದಲ್ಲಿ ಅನಧಿಕೃತ ನೀರಾವರಿ ತಡೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ. ಅಕ್ರಮ ನೀರು ಕಬಳಿಕೆ ಮಾಡುವವರ ಮೇಲೆ ಕಾನೂನು ಕ್ರಮ ಆಗುತ್ತಿಲ್ಲ. ಅಧಿಕಾರಿಗಳು ಅನಧಿಕೃತ ದಂಧೆ ತಡೆಗಟ್ಟಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ವಾಡಿಕೆಗಿಂತ ಮಳೆಯಾಗದ ಹಿನ್ನೆಲೆಯಲ್ಲಿ ಬರಗಾಲ ಉಂಟಾಗಿದೆ. ಬೆಳೆಗಳನ್ನು ಉಳಿಸಿಕೊಳ್ಳಲು ರೈತರ ಹರಸಾಹಸ ಪಡುವಂತಾಗಿದೆ ಎಂದರು. ರಾಯಚೂರು, ಮಾನ್ವಿ ಮತ್ತು ಸಿರವಾರ ತಾಲೂಕಿನ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹೋರಾಟದಲ್ಲಿ ಮಾಜಿ ಶಾಸಕರುಗಳಾದ ರಾಜಾ ವೆಂಕಟಪ್ಪ ನಾಯಕ, ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ರೈತ ಸಂಘದ ಮುಖಂಡ ಚಾಮರಸ ಮಾಲೀ ಪಾಟೀಲ್, ಹೋರಾಟಗಾರರಾದ ಶಂಕರಗೌಡ ಹರವಿ, ಎನ್. ಉದಯಕುಮಾರ್ ಸಾಹುಕಾರ, ಜೆ.ದೇವರಾಜ ಗೌಡ, ಅಮರೇಶ ಚಾಗಭಾವಿ, ನಾಗರಾಜ ಗೌಡ, ಸವಾರೆಪ್ಪ, ಬಡ್ಡ ಹನುಮಂತ, ರಾಜಪ್ಪ ಹೊನ್ನಟಗಿ, ಮಲ್ಲಪ್ಪ ದೊಡ್ಮನೆ, ದಾನಪ್ಪ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ರೈತರು ಪಾಲ್ಗೊಂಡಿದ್ದರು.2
- ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ...... ವಿದ್ಯುತ್ ಅವಘಡಕ್ಕೆ:- ಮೂರು ಎಮ್ಮೆ ಹಾಗೂ ಒಂದು ಆಕಳು ಬಲಿ. ತುರ್ವಿಹಾಳ: ಪಟ್ಟಣದ ಸರ್ವೆ ನಂ.14ರ ಶರಣಪ್ಪ ಮೆಗಳಡಕ್ಕಿ ಅವರ ಹೊಲದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಮೂರು ಎಮ್ಮೆ ಹಾಗೂ ಒಂದು ಆಕಳು ಮೃತಪಟ್ಟಿದ್ದು, ಎರಡು ಎಮ್ಮೆ ಮತ್ತು ನಾಲ್ಕು ಮೇಕೆರಗಳು ಗಾಯಗೊಂಡಿವೆ. ಘಟನೆಯಿಂದ ಸುಮಾರು 15 ಲಕ್ಷ ನಷ್ಟ ಸಂಭವಿಸಿದೆ ಎಂದು ಸಂತ್ರಸ್ತ ಶರಣಪ್ಪ ಮೆಗಳಡಕ್ಕಿ ತಿಳಿಸಿದ್ದಾರೆ. ವಿದ್ಯುತ್ ಅವಘಡದ ಪರಿಣಾಮ ಜಾನುವಾರುಗಳ ಸಾವಿನ ಜತೆಗೆ ಒಂದು ತೊಲೆ ಬಂಗಾರ ಹಾಗೂ 1.60 ಲಕ್ಷ ನಗದು ಹಣವೂ ನಷ್ಟವಾಗಿದೆ. ಜಾನುವಾರುಗಳ ಸಾವಿನಿಂದ ಹಾಗೂ ಇತರೆ ವಸ್ತುಗಳ ಹಾನಿಯಿಂದ ಕುಟುಂಬಕ್ಕೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ. ಆದ್ದರಿಂದ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಘಟನೆ ಕುರಿತು ಸೂಕ್ತವಾಗಿ ಪರಿಶೀಲಿಸಿ, ನಿಯಮಾನುಸಾರ ಪರಿಹಾರ ನೀಡಬೇಕು ಎಂದು ಶರಣಪ್ಪ ಮೆಗಳಡಕ್ಕಿ ಮನವಿ ಮಾಡಿದ್ದಾರೆ. ಸ್ಥಳ ಪರಿಶೀಲನೆ: ಘಟನೆ ಕುರಿತು ಮಾಹಿತಿ ಪಡೆದ ತುರ್ವಿಹಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷ ಶರಣಪ್ಪ ಹೋಸಗೌಡರ್ ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟ ಜಾನುವಾರುಗಳು ಹಾಗೂ ಸ್ಥಳವನ್ನು ಪರಿಶೀಲಿಸಿದರು. ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದ ಅವರು, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ (ಆರ್‌ಐ) ಉಮಾಪತಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಕುರಿತು ಪರಿಶೀಲನೆ ನಡೆಸಿ, ಹಾನಿಯ ವಿವರಗಳನ್ನು ದಾಖಲಿಸಿಕೊಂಡರು.2