logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತಾಲೂಕು ಆರೋಗ್ಯ ಅಧಿಕಾರಿಗಳ ತಂಡವು ನಕಲಿ ವೈದ್ಯನ ಮನೆಯ ಮೇಲೆ ದಿಢೀರ್ ದಾಳಿ ನಡೆಸಿದೆ.

4 hrs ago
user_Md mansoor
Md mansoor
Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
4 hrs ago

ತಾಲೂಕು ಆರೋಗ್ಯ ಅಧಿಕಾರಿಗಳ ತಂಡವು ನಕಲಿ ವೈದ್ಯನ ಮನೆಯ ಮೇಲೆ ದಿಢೀರ್ ದಾಳಿ ನಡೆಸಿದೆ.

More news from Karnataka and nearby areas
  • ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದವರ ವಿರುದ್ಧ ಪ್ಯಾಂಥರ್ ಸೇನಾ ನೇರ ಸವಾಲು ಹಾಕಿದ್ದು, ಅವರಿಗೆ ಬಹಿರಂಗ ಸವಾಲು ಎಸೆದಿದೆ.
    1
    ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದವರ ವಿರುದ್ಧ ಪ್ಯಾಂಥರ್ ಸೇನಾ ನೇರ ಸವಾಲು ಹಾಕಿದ್ದು, ಅವರಿಗೆ ಬಹಿರಂಗ ಸವಾಲು ಎಸೆದಿದೆ.
    user_JB NEWS ಕನ್ನಡ
    JB NEWS ಕನ್ನಡ
    Kolar, Karnataka•
    12 hrs ago
  • ಅಬೀಬಾ ಟೆಂಟ್ ಹೌಸ್ ಬೆಂಗಳೂರಿನ PMR ಪ್ರದೇಶದಲ್ಲಿ ಸೇವೆಗಳನ್ನು ಒದಗಿಸುತ್ತದೆ. ಸೇವೆಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಥವಾ ಸಂಪರ್ಕಿಸಲು, 7760976887 ಮತ್ತು 9900619376 ಸಂಖ್ಯೆಗಳಿಗೆ ಕರೆ ಮಾಡಬಹುದು.
    1
    ಅಬೀಬಾ ಟೆಂಟ್ ಹೌಸ್ ಬೆಂಗಳೂರಿನ PMR ಪ್ರದೇಶದಲ್ಲಿ ಸೇವೆಗಳನ್ನು ಒದಗಿಸುತ್ತದೆ. ಸೇವೆಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಥವಾ ಸಂಪರ್ಕಿಸಲು, 7760976887 ಮತ್ತು 9900619376 ಸಂಖ್ಯೆಗಳಿಗೆ ಕರೆ ಮಾಡಬಹುದು.
    user_Sahir sarakar
    Sahir sarakar
    Bengaluru South, Bengaluru Urban•
    23 hrs ago
  • ಮೈಸೂರಿನ ಬಾರ್‌ವೊಂದರಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿ ಅವಘಡದ ಹಿನ್ನೆಲೆಯಲ್ಲಿ, ಉಡುಪಿ ಅಬಕಾರಿ ಇಲಾಖೆಯು ಜಿಲ್ಲೆಯ ಸನ್ನದುದಾರರು ಹಾಗೂ ಬಾರ್ ಮಾಲೀಕರಿಗೆ ಅಗ್ನಿ ಸುರಕ್ಷತೆ ಕುರಿತು ತರಬೇತಿ ಕಾರ್ಯಾಗಾರವನ್ನು ಆಯೋಜಿಸಿತು. ಅಬಕಾರಿ ಇಲಾಖೆ ಆವರಣದಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಭಾಗವಹಿಸಿ, ಬೆಂಕಿ ಅವಘಡಗಳನ್ನು ತಡೆಗಟ್ಟುವ ಕ್ರಮಗಳು ಹಾಗೂ ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ, ಪ್ರತಿಯೊಂದು ಬಾರ್‌ನಲ್ಲಿ ಅಗ್ನಿ ಅವಘಡ ತಡೆಗಟ್ಟುವ ಪರಿಕರಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಮತ್ತು ಗ್ರಾಹಕರಿಗೆ ಸುಲಭವಾಗಿ ಕಾಣುವ ಸ್ಥಳಗಳಲ್ಲಿ ಅಗ್ನಿ ನಿರೋಧಕ ಸಾಧನಗಳನ್ನು ಇರಿಸಬೇಕು ಎಂದು ಸೂಚಿಸಲಾಯಿತು. ನಿಯಮಗಳ ಪಾಲನೆ ಕುರಿತು ಇಲಾಖೆ ಪರಿಶೀಲನೆ ನಡೆಸಲಿದ್ದು, ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಕಠಿಣ ಎಚ್ಚರಿಕೆ ನೀಡಲಾಗಿದೆ. ಅಬಕಾರಿ ಡಿಸಿ ಟಿ.ಎಂ. ಶ್ರೀನಿವಾಸ್ ಅವರು ಮಾಹಿತಿ ನೀಡಿ, ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಪ್ರತಿಯೊಬ್ಬ ಸನ್ನದುದಾರನ ಜವಾಬ್ದಾರಿ ಎಂದು ತಿಳಿಸಿದರು. ಜಿಲ್ಲೆಯ ಕೆಲವು ಬಾರ್‌ಗಳು ನಿಗದಿತ ಅವಧಿಗೂ ಮುನ್ನ ಹಾಗೂ ಅವಧಿ ಮೀರಿ ಕಾರ್ಯನಿರ್ವಹಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದ್ದು, ಕಳೆದ ಒಂದು ವರ್ಷದಲ್ಲಿ ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 500ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು. ನಿಗದಿತ ಸಮಯದ ಹೊರತಾಗಿ ಬಾರ್‌ಗಳನ್ನು ನಡೆಸದಂತೆ ಮಾಲೀಕರಿಗೆ ಕಠಿಣ ಎಚ್ಚರಿಕೆ ನೀಡಲಾಗಿದ್ದು, ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಯಿತು. ಇದೇ ರೀತಿ, ಹಲವು ಬಾರ್‌ಗಳಲ್ಲಿ ಮದ್ಯದ ದರದಲ್ಲಿ ವ್ಯತ್ಯಾಸ ಮಾಡಿ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ದೂರುಗಳು ಬಂದಿರುವ ಬಗ್ಗೆಯೂ ಮಾಹಿತಿ ನೀಡಲಾಯಿತು. ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ದರದಂತೆ ಮಾತ್ರ ಗ್ರಾಹಕರಿಂದ ಹಣ ಪಡೆಯಬೇಕು; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಲಾಯಿತು. ಜುಲೈ ತಿಂಗಳಿಂದ ಮದ್ಯ ಮಾರಾಟ ಪರವಾನಗಿ ನವೀಕರಣ ಪ್ರಕ್ರಿಯೆ ಆರಂಭವಾಗಲಿದ್ದು, ಈ ಬಾರಿ ಸಮಗ್ರ ಪರಿಶೀಲನೆ ನಡೆಸಿದ ಬಳಿಕವೇ ನವೀಕರಣಕ್ಕೆ ಅನುಮತಿ ನೀಡಲಾಗುವುದು ಎಂದು ಡಿಸಿ ಶ್ರೀನಿವಾಸ್ ತಿಳಿಸಿದರು. ಬಾರ್ ಮಾಲೀಕರು ಅಗ್ನಿ ಸುರಕ್ಷತೆಯನ್ನು ಕಡ್ಡಾಯವಾಗಿ ಅಳವಡಿಸಲು ಮತ್ತು ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಬಕಾರಿ ಇಲಾಖೆಯು ಎಚ್ಚರಿಕೆ ನೀಡಿದೆ.
    1
    ಮೈಸೂರಿನ ಬಾರ್‌ವೊಂದರಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿ ಅವಘಡದ ಹಿನ್ನೆಲೆಯಲ್ಲಿ, ಉಡುಪಿ ಅಬಕಾರಿ ಇಲಾಖೆಯು ಜಿಲ್ಲೆಯ ಸನ್ನದುದಾರರು ಹಾಗೂ ಬಾರ್ ಮಾಲೀಕರಿಗೆ ಅಗ್ನಿ ಸುರಕ್ಷತೆ ಕುರಿತು ತರಬೇತಿ ಕಾರ್ಯಾಗಾರವನ್ನು ಆಯೋಜಿಸಿತು. ಅಬಕಾರಿ ಇಲಾಖೆ ಆವರಣದಲ್ಲಿ ನಡೆದ ಈ ಕಾರ್ಯಾಗಾರದಲ್ಲಿ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಭಾಗವಹಿಸಿ, ಬೆಂಕಿ ಅವಘಡಗಳನ್ನು ತಡೆಗಟ್ಟುವ ಕ್ರಮಗಳು ಹಾಗೂ ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ, ಪ್ರತಿಯೊಂದು ಬಾರ್‌ನಲ್ಲಿ ಅಗ್ನಿ ಅವಘಡ ತಡೆಗಟ್ಟುವ ಪರಿಕರಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಮತ್ತು ಗ್ರಾಹಕರಿಗೆ ಸುಲಭವಾಗಿ ಕಾಣುವ ಸ್ಥಳಗಳಲ್ಲಿ ಅಗ್ನಿ ನಿರೋಧಕ ಸಾಧನಗಳನ್ನು ಇರಿಸಬೇಕು ಎಂದು ಸೂಚಿಸಲಾಯಿತು. ನಿಯಮಗಳ ಪಾಲನೆ ಕುರಿತು ಇಲಾಖೆ ಪರಿಶೀಲನೆ ನಡೆಸಲಿದ್ದು, ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಕಠಿಣ ಎಚ್ಚರಿಕೆ ನೀಡಲಾಗಿದೆ. 

ಅಬಕಾರಿ ಡಿಸಿ ಟಿ.ಎಂ. ಶ್ರೀನಿವಾಸ್ ಅವರು ಮಾಹಿತಿ ನೀಡಿ, ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಪ್ರತಿಯೊಬ್ಬ ಸನ್ನದುದಾರನ ಜವಾಬ್ದಾರಿ ಎಂದು ತಿಳಿಸಿದರು. ಜಿಲ್ಲೆಯ ಕೆಲವು ಬಾರ್‌ಗಳು ನಿಗದಿತ ಅವಧಿಗೂ ಮುನ್ನ ಹಾಗೂ ಅವಧಿ ಮೀರಿ ಕಾರ್ಯನಿರ್ವಹಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದ್ದು, ಕಳೆದ ಒಂದು ವರ್ಷದಲ್ಲಿ ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 500ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು. ನಿಗದಿತ ಸಮಯದ ಹೊರತಾಗಿ ಬಾರ್‌ಗಳನ್ನು ನಡೆಸದಂತೆ ಮಾಲೀಕರಿಗೆ ಕಠಿಣ ಎಚ್ಚರಿಕೆ ನೀಡಲಾಗಿದ್ದು, ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಯಿತು. ಇದೇ ರೀತಿ, ಹಲವು ಬಾರ್‌ಗಳಲ್ಲಿ ಮದ್ಯದ ದರದಲ್ಲಿ ವ್ಯತ್ಯಾಸ ಮಾಡಿ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ದೂರುಗಳು ಬಂದಿರುವ ಬಗ್ಗೆಯೂ ಮಾಹಿತಿ ನೀಡಲಾಯಿತು. ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ದರದಂತೆ ಮಾತ್ರ ಗ್ರಾಹಕರಿಂದ ಹಣ ಪಡೆಯಬೇಕು; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಲಾಯಿತು. ಜುಲೈ ತಿಂಗಳಿಂದ ಮದ್ಯ ಮಾರಾಟ ಪರವಾನಗಿ ನವೀಕರಣ ಪ್ರಕ್ರಿಯೆ ಆರಂಭವಾಗಲಿದ್ದು, ಈ ಬಾರಿ ಸಮಗ್ರ ಪರಿಶೀಲನೆ ನಡೆಸಿದ ಬಳಿಕವೇ ನವೀಕರಣಕ್ಕೆ ಅನುಮತಿ ನೀಡಲಾಗುವುದು ಎಂದು ಡಿಸಿ ಶ್ರೀನಿವಾಸ್ ತಿಳಿಸಿದರು. ಬಾರ್ ಮಾಲೀಕರು ಅಗ್ನಿ ಸುರಕ್ಷತೆಯನ್ನು ಕಡ್ಡಾಯವಾಗಿ ಅಳವಡಿಸಲು ಮತ್ತು ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಬಕಾರಿ ಇಲಾಖೆಯು ಎಚ್ಚರಿಕೆ ನೀಡಿದೆ.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    4 hrs ago
  • ಹಲಗೂರಿನಲ್ಲಿ ಸಾರ್ವಜನಿಕ ಸೇವಾ ದಿನದ ಪ್ರಯುಕ್ತ, ಜೆ.ಜೆ. ಪಬ್ಲಿಕ್ ಶಾಲಾ ವಿದ್ಯಾರ್ಥಿಗಳು ಮಂಗಳವಾರ ವಿವಿಧ ಸಾರ್ವಜನಿಕ ಸೇವಾ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಮತ್ತು ಕರ್ತವ್ಯಗಳ ಬಗ್ಗೆ ತಿಳಿದುಕೊಂಡರು. ಈ ಭೇಟಿಗಳ ಭಾಗವಾಗಿ, ವಿದ್ಯಾರ್ಥಿಗಳು ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ತೆರಳಿದಾಗ, ಅಲ್ಲಿನ ವ್ಯವಸ್ಥಾಪಕಿ ಪಿ. ಶಾಂತಲಾ ಅವರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವುದರ ಮಹತ್ವದ ಬಗ್ಗೆ ತಿಳಿಸಿದರು. ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುವಾಗ ಅಡೆತಡೆಗಳು ಸಾಮಾನ್ಯವಾದರೂ, ಸಾರ್ವಜನಿಕರೊಂದಿಗೆ ಸೌಹಾರ್ದಯುತವಾಗಿ ಮಾತನಾಡಿ ಅವರ ಸೇವೆ ಮಾಡುವುದು ತಮ್ಮ ಧ್ಯೇಯ ಎಂದು ಪಿ. ಶಾಂತಲಾ ವಿದ್ಯಾರ್ಥಿಗಳಿಗೆ ಸ್ಪಷ್ಟಪಡಿಸಿದರು. ಬ್ಯಾಂಕಿನಲ್ಲಿ ಕರ್ತವ್ಯ ನಿರ್ವಹಿಸುವ ಬಗ್ಗೆ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು ಮತ್ತು ಎಲ್ಲ ವಿದ್ಯಾರ್ಥಿಗಳಿಗೂ ಶುಭ ಕೋರಿದರು. ಗ್ರಾಮ ಪಂಚಾಯತಿ, ಸರ್ಕಾರಿ ಆಸ್ಪತ್ರೆ, ಬ್ಯಾಂಕುಗಳು, ನಾಡಕಚೇರಿ ಸೇರಿದಂತೆ ಇತರೆ ಕಚೇರಿಗಳಿಗೆ ಭೇಟಿ ನೀಡಿದ ವಿದ್ಯಾರ್ಥಿಗಳು, ಅಲ್ಲಿನ ಅಧಿಕಾರಿಗಳಿಗೆ ಸಾರ್ವಜನಿಕ ಸೇವಾ ದಿನದ ಶುಭಾಶಯ ಕೋರಿ, ಅವರ ಕೆಲಸದ ಬಗ್ಗೆ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಬ್ಯಾಂಕಿನ ಸಿಬ್ಬಂದಿ ಬಿ.ಕೆ. ಲಿಂಗರಾಜು ಅವರು ಮಾತನಾಡಿ, ಇಂದಿನ ವಿದ್ಯಾರ್ಥಿಗಳೇ ಮುಂದಿನ ಭವಿಷ್ಯತ್ತಿನ ಪ್ರಜೆಗಳು ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ನೈತಿಕ ಶಿಕ್ಷಣದ ಅವಶ್ಯಕತೆಯನ್ನು ಒತ್ತಿಹೇಳಿದ ಅವರು, ತಮ್ಮ ತಂದೆ-ತಾಯಿಗಳಿಗೆ, ಗುರು-ಹಿರಿಯರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದರು. ತಂತ್ರಜ್ಞಾನ ಹೆಚ್ಚಿದಂತೆ ಮೊಬೈಲ್ ಬಳಕೆ ಸಾಮಾನ್ಯವಾಗಿದ್ದರೂ, ಮೊಬೈಲ್‌ಗಳನ್ನು ಕೇವಲ ಒಳ್ಳೆಯ ವಿಷಯಗಳನ್ನು ಅರಿಯಲು ಮತ್ತು ವಿದ್ಯಾಭ್ಯಾಸಕ್ಕೆ ಪೂರಕವಾಗಿ ಬಳಸಬೇಕೇ ಹೊರತು ಯಾವುದೇ ಕೆಟ್ಟ ಉದ್ದೇಶಗಳಿಗೆ ಬಳಸಬಾರದು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಸಿಬ್ಬಂದಿಗಳಾದ ಜೂನಿಯರ್ ಅಸಿಸ್ಟೆಂಟ್, ಎಚ್.ಎನ್. ಮಹದೇವಸ್ವಾಮಿ, ಸಿ. ಪ್ರಭಾಕರ, ದಾಕ್ಷಾಯಿಣಿ, ಬಿ.ಕೆ. ನಿಂಗರಾಜು, ಶಿವರಾಜು, ಸಹಾಯಕರು ತೋಳಸಮ್ಮ, ರಂಜಿತಾ, ಪಿಗ್ಮಿ ಸಂಗ್ರಹಕರಾದ ಎಚ್.ಎನ್. ಪ್ರಸಾದ್, ಎಚ್.ಎನ್. ಮಹದೇವಸ್ವಾಮಿ, ಹಾಗೂ ಜೆ.ಜೆ. ಪಬ್ಲಿಕ್ ಶಾಲೆಯ ಶಿಕ್ಷಕಿ ಹೇಮಾ ಮತ್ತು ಮೇಲ್ವಿಚಾರಕ ಎಸ್. ವಿಕಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
    1
    ಹಲಗೂರಿನಲ್ಲಿ ಸಾರ್ವಜನಿಕ ಸೇವಾ ದಿನದ ಪ್ರಯುಕ್ತ, ಜೆ.ಜೆ. ಪಬ್ಲಿಕ್ ಶಾಲಾ ವಿದ್ಯಾರ್ಥಿಗಳು ಮಂಗಳವಾರ ವಿವಿಧ ಸಾರ್ವಜನಿಕ ಸೇವಾ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಮತ್ತು ಕರ್ತವ್ಯಗಳ ಬಗ್ಗೆ ತಿಳಿದುಕೊಂಡರು. ಈ ಭೇಟಿಗಳ ಭಾಗವಾಗಿ, ವಿದ್ಯಾರ್ಥಿಗಳು ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ತೆರಳಿದಾಗ, ಅಲ್ಲಿನ ವ್ಯವಸ್ಥಾಪಕಿ ಪಿ. ಶಾಂತಲಾ ಅವರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವುದರ ಮಹತ್ವದ ಬಗ್ಗೆ ತಿಳಿಸಿದರು.

ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುವಾಗ ಅಡೆತಡೆಗಳು ಸಾಮಾನ್ಯವಾದರೂ, ಸಾರ್ವಜನಿಕರೊಂದಿಗೆ ಸೌಹಾರ್ದಯುತವಾಗಿ ಮಾತನಾಡಿ ಅವರ ಸೇವೆ ಮಾಡುವುದು ತಮ್ಮ ಧ್ಯೇಯ ಎಂದು ಪಿ. ಶಾಂತಲಾ ವಿದ್ಯಾರ್ಥಿಗಳಿಗೆ ಸ್ಪಷ್ಟಪಡಿಸಿದರು. ಬ್ಯಾಂಕಿನಲ್ಲಿ ಕರ್ತವ್ಯ ನಿರ್ವಹಿಸುವ ಬಗ್ಗೆ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು ಮತ್ತು ಎಲ್ಲ ವಿದ್ಯಾರ್ಥಿಗಳಿಗೂ ಶುಭ ಕೋರಿದರು. ಗ್ರಾಮ ಪಂಚಾಯತಿ, ಸರ್ಕಾರಿ ಆಸ್ಪತ್ರೆ, ಬ್ಯಾಂಕುಗಳು, ನಾಡಕಚೇರಿ ಸೇರಿದಂತೆ ಇತರೆ ಕಚೇರಿಗಳಿಗೆ ಭೇಟಿ ನೀಡಿದ ವಿದ್ಯಾರ್ಥಿಗಳು, ಅಲ್ಲಿನ ಅಧಿಕಾರಿಗಳಿಗೆ ಸಾರ್ವಜನಿಕ ಸೇವಾ ದಿನದ ಶುಭಾಶಯ ಕೋರಿ, ಅವರ ಕೆಲಸದ ಬಗ್ಗೆ ಮಾಹಿತಿ ಪಡೆದರು.

ಇದೇ ಸಂದರ್ಭದಲ್ಲಿ ಬ್ಯಾಂಕಿನ ಸಿಬ್ಬಂದಿ ಬಿ.ಕೆ. ಲಿಂಗರಾಜು ಅವರು ಮಾತನಾಡಿ, ಇಂದಿನ ವಿದ್ಯಾರ್ಥಿಗಳೇ ಮುಂದಿನ ಭವಿಷ್ಯತ್ತಿನ ಪ್ರಜೆಗಳು ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ನೈತಿಕ ಶಿಕ್ಷಣದ ಅವಶ್ಯಕತೆಯನ್ನು ಒತ್ತಿಹೇಳಿದ ಅವರು, ತಮ್ಮ ತಂದೆ-ತಾಯಿಗಳಿಗೆ, ಗುರು-ಹಿರಿಯರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದರು. ತಂತ್ರಜ್ಞಾನ ಹೆಚ್ಚಿದಂತೆ ಮೊಬೈಲ್ ಬಳಕೆ ಸಾಮಾನ್ಯವಾಗಿದ್ದರೂ, ಮೊಬೈಲ್‌ಗಳನ್ನು ಕೇವಲ ಒಳ್ಳೆಯ ವಿಷಯಗಳನ್ನು ಅರಿಯಲು ಮತ್ತು ವಿದ್ಯಾಭ್ಯಾಸಕ್ಕೆ ಪೂರಕವಾಗಿ ಬಳಸಬೇಕೇ ಹೊರತು ಯಾವುದೇ ಕೆಟ್ಟ ಉದ್ದೇಶಗಳಿಗೆ ಬಳಸಬಾರದು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಸಿಬ್ಬಂದಿಗಳಾದ ಜೂನಿಯರ್ ಅಸಿಸ್ಟೆಂಟ್, ಎಚ್.ಎನ್. ಮಹದೇವಸ್ವಾಮಿ, ಸಿ. ಪ್ರಭಾಕರ, ದಾಕ್ಷಾಯಿಣಿ, ಬಿ.ಕೆ. ನಿಂಗರಾಜು, ಶಿವರಾಜು, ಸಹಾಯಕರು ತೋಳಸಮ್ಮ, ರಂಜಿತಾ, ಪಿಗ್ಮಿ ಸಂಗ್ರಹಕರಾದ ಎಚ್.ಎನ್. ಪ್ರಸಾದ್, ಎಚ್.ಎನ್. ಮಹದೇವಸ್ವಾಮಿ, ಹಾಗೂ ಜೆ.ಜೆ. ಪಬ್ಲಿಕ್ ಶಾಲೆಯ ಶಿಕ್ಷಕಿ ಹೇಮಾ ಮತ್ತು ಮೇಲ್ವಿಚಾರಕ ಎಸ್. ವಿಕಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    38 min ago
  • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹುಳಿಯಾರು ಭಾಗದಲ್ಲಿ ಆಯೋಜಿಸಲಿರುವ ಮದ್ಯವರ್ಜನ ಶಿಬಿರದ ಯಶಸ್ವಿ ಅನುಷ್ಠಾನಕ್ಕೆ ಸಾರ್ವಜನಿಕರು ಹಾಗೂ ಗಣ್ಯರ ಸಹಕಾರ ಅನಿವಾರ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹುಳಿಯಾರು ಯೋಜನಾಧಿಕಾರಿ ರಾಮಚಂದ್ರ ಕರೆ ನೀಡಿದರು. ಪಟ್ಟಣದಲ್ಲಿ ನಡೆದ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸತ್ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಒತ್ತಾಯಿಸಿದರು. ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಬಡವರ, ದೀನದಲಿತರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ. ರಾಜ್ಯದ ಪ್ರಮುಖ ಬ್ಯಾಂಕುಗಳ ಸಹಯೋಗದೊಂದಿಗೆ ಸಂಘಟನೆಗೆ ಸಾಲದ ವ್ಯವಹಾರಗಳನ್ನು ಒದಗಿಸುವ ಮೂಲಕ ಜನರ ಜೀವನಮಟ್ಟ ಸುಧಾರಿಸುವಲ್ಲಿ ಸಂಸ್ಥೆ ಯಶಸ್ವಿಯಾಗಿದೆ ಎಂದು ರಾಮಚಂದ್ರ ಹೆಮ್ಮೆಯಿಂದ ನುಡಿದರು. ಈ ಯೋಜನೆಯು ಕೇವಲ ಹಣಕಾಸಿನ ನೆರವಿಗೆ ಸೀಮಿತವಾಗಿರದೆ, ಸಮುದಾಯ ಅಭಿವೃದ್ಧಿ, ಜ್ಞಾನ ವಿಕಾಸ ಹಾಗೂ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಬಹುಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರಲ್ಲಿ ಮುಖ್ಯವಾಗಿ 'ಜನಜಾಗೃತಿ' ಕಾರ್ಯಕ್ರಮದಡಿ ಆಯೋಜಿಸುವ ಮದ್ಯವರ್ಜನ ಶಿಬಿರಗಳು ಕುಡಿತದ ವ್ಯಸನಕ್ಕೆ ಒಳಗಾದವರನ್ನು ಮುಕ್ತಗೊಳಿಸಿ, ಅವರ ಕುಟುಂಬಗಳಲ್ಲಿ ನೆಮ್ಮದಿ ಮೂಡಿಸುವ ಪವಿತ್ರ ಕೆಲಸವನ್ನು ಮಾಡುತ್ತಿವೆ ಎಂದು ವಿವರಿಸಿದರು. ಮಾದಕ ವಸ್ತು ಹಾಗೂ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕಾಗಿ 'ಸ್ವಾಸ್ಥ್ಯ ಸಂಕಲ್ಪ' ಕಾರ್ಯಕ್ರಮದಡಿ ಶಾಲಾ-ಕಾಲೇಜು ಮಟ್ಟದಲ್ಲಿ ತಂಬಾಕಿನಿಂದಾಗುವ ಹಾನಿ ಮತ್ತು ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ, ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ಶಿಬಿರದ ಮೂಲಕ ಕುಡಿತ ಬಿಟ್ಟವರನ್ನು ಒಟ್ಟುಗೂಡಿಸಿ, ಅವರಿಗೆ ಮರು-ಮಾರ್ಗದರ್ಶನ ನೀಡುವ ಕೆಲಸವನ್ನೂ ಮಾಡಲಾಗುತ್ತಿದೆ. ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಪೂಜ್ಯ ಹೆಗ್ಗಡೆಯವರು ಜನಜಾಗೃತಿ ಕಾರ್ಯಕ್ರಮಗಳ ಮೂಲಕ ಸಮಾಜ ಸುಧಾರಣೆಗೆ ಮುಂದಾಗಿದ್ದಾರೆ ಎಂದು ರಾಮಚಂದ್ರ ಹೇಳಿದರು. ಈ ವರ್ಷ ತಮ್ಮ ತಾಲೂಕಿನಲ್ಲಿ ಮದ್ಯವರ್ಜನ ಶಿಬಿರ ಆಯೋಜಿಸಲು ಸುವರ್ಣಾವಕಾಶ ದೊರೆತಿದ್ದು, ಈ ಸತ್ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
    1
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹುಳಿಯಾರು ಭಾಗದಲ್ಲಿ ಆಯೋಜಿಸಲಿರುವ ಮದ್ಯವರ್ಜನ ಶಿಬಿರದ ಯಶಸ್ವಿ ಅನುಷ್ಠಾನಕ್ಕೆ ಸಾರ್ವಜನಿಕರು ಹಾಗೂ ಗಣ್ಯರ ಸಹಕಾರ ಅನಿವಾರ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹುಳಿಯಾರು ಯೋಜನಾಧಿಕಾರಿ ರಾಮಚಂದ್ರ ಕರೆ ನೀಡಿದರು. ಪಟ್ಟಣದಲ್ಲಿ ನಡೆದ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸತ್ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಒತ್ತಾಯಿಸಿದರು.

ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಬಡವರ, ದೀನದಲಿತರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ. ರಾಜ್ಯದ ಪ್ರಮುಖ ಬ್ಯಾಂಕುಗಳ ಸಹಯೋಗದೊಂದಿಗೆ ಸಂಘಟನೆಗೆ ಸಾಲದ ವ್ಯವಹಾರಗಳನ್ನು ಒದಗಿಸುವ ಮೂಲಕ ಜನರ ಜೀವನಮಟ್ಟ ಸುಧಾರಿಸುವಲ್ಲಿ ಸಂಸ್ಥೆ ಯಶಸ್ವಿಯಾಗಿದೆ ಎಂದು ರಾಮಚಂದ್ರ ಹೆಮ್ಮೆಯಿಂದ ನುಡಿದರು.

ಈ ಯೋಜನೆಯು ಕೇವಲ ಹಣಕಾಸಿನ ನೆರವಿಗೆ ಸೀಮಿತವಾಗಿರದೆ, ಸಮುದಾಯ ಅಭಿವೃದ್ಧಿ, ಜ್ಞಾನ ವಿಕಾಸ ಹಾಗೂ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಬಹುಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರಲ್ಲಿ ಮುಖ್ಯವಾಗಿ 'ಜನಜಾಗೃತಿ' ಕಾರ್ಯಕ್ರಮದಡಿ ಆಯೋಜಿಸುವ ಮದ್ಯವರ್ಜನ ಶಿಬಿರಗಳು ಕುಡಿತದ ವ್ಯಸನಕ್ಕೆ ಒಳಗಾದವರನ್ನು ಮುಕ್ತಗೊಳಿಸಿ, ಅವರ ಕುಟುಂಬಗಳಲ್ಲಿ ನೆಮ್ಮದಿ ಮೂಡಿಸುವ ಪವಿತ್ರ ಕೆಲಸವನ್ನು ಮಾಡುತ್ತಿವೆ ಎಂದು ವಿವರಿಸಿದರು. ಮಾದಕ ವಸ್ತು ಹಾಗೂ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕಾಗಿ 'ಸ್ವಾಸ್ಥ್ಯ ಸಂಕಲ್ಪ' ಕಾರ್ಯಕ್ರಮದಡಿ ಶಾಲಾ-ಕಾಲೇಜು ಮಟ್ಟದಲ್ಲಿ ತಂಬಾಕಿನಿಂದಾಗುವ ಹಾನಿ ಮತ್ತು ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ, ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ಶಿಬಿರದ ಮೂಲಕ ಕುಡಿತ ಬಿಟ್ಟವರನ್ನು ಒಟ್ಟುಗೂಡಿಸಿ, ಅವರಿಗೆ ಮರು-ಮಾರ್ಗದರ್ಶನ ನೀಡುವ ಕೆಲಸವನ್ನೂ ಮಾಡಲಾಗುತ್ತಿದೆ.

ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಪೂಜ್ಯ ಹೆಗ್ಗಡೆಯವರು ಜನಜಾಗೃತಿ ಕಾರ್ಯಕ್ರಮಗಳ ಮೂಲಕ ಸಮಾಜ ಸುಧಾರಣೆಗೆ ಮುಂದಾಗಿದ್ದಾರೆ ಎಂದು ರಾಮಚಂದ್ರ ಹೇಳಿದರು. ಈ ವರ್ಷ ತಮ್ಮ ತಾಲೂಕಿನಲ್ಲಿ ಮದ್ಯವರ್ಜನ ಶಿಬಿರ ಆಯೋಜಿಸಲು ಸುವರ್ಣಾವಕಾಶ ದೊರೆತಿದ್ದು, ಈ ಸತ್ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    50 min ago
  • ಮಾಗಡಿ ಶಾಸಕ ಬಾಲಕೃಷ್ಣ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರ ಬಿಡದಿ ಟೌನ್ ಶಿಪ್ ವಿರೋಧಿ ಹೋರಾಟವನ್ನು ತೀವ್ರವಾಗಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಬಾಲಕೃಷ್ಣ, ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರ ಸೇರಿದಂತೆ ಹಲವೆಡೆ ಭೂಸ್ವಾಧೀನ ಪ್ರಕ್ರಿಯೆಗಳು ನಡೆಯುತ್ತಿದ್ದು, ಹಾಸನದಲ್ಲಿ ಐಐಟಿ ಕಾಲೇಜಿಗಾಗಿ 1800 ಎಕರೆ ಭೂಸ್ವಾಧೀನ ಮಾಡಿದ್ದರೂ, ಕುಮಾರಸ್ವಾಮಿ ಮತ್ತು ನಿಖಿಲ್ ಅವರು ಬೇರೆಲ್ಲೂ ಹೋರಾಟ ಮಾಡದೆ ಕೇವಲ ಬಿಡದಿಯಲ್ಲೇ ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಮುಖ್ಯಮಂತ್ರಿಯವರು ಚರ್ಚೆಗೆ ಸಮಯ ನಿಗದಿಪಡಿಸಿದ ನಂತರವೂ ಕುಮಾರಸ್ವಾಮಿ ಅವರು ಬೈರಮಂಗಲಕ್ಕೆ ಬರಲು ಹೇಳುವುದು ಅವರ ಬಾಲಿಶ ವರ್ತನೆಯನ್ನು ತೋರಿಸುತ್ತದೆ ಎಂದು ಬಾಲಕೃಷ್ಣ ಕಿಡಿಕಾರಿದ್ದಾರೆ. ಪ್ರಬುದ್ಧ ನಾಯಕನಿಗೆ ಇರಬೇಕಾದ ಕನಿಷ್ಠ ಜ್ಞಾನ ಕುಮಾರಸ್ವಾಮಿ ಅವರಿಗಿಲ್ಲ. ಬೈರಮಂಗಲದಲ್ಲಿ ಪ್ರತಿಭಟನೆಗೆ ಕರೆದು ಜನರನ್ನು ಒಟ್ಟುಗೂಡಿಸಿ, ಎರಡು ಕಡೆಯ ರೈತರ ಮಧ್ಯೆ ಮಾರಾಮಾರಿ ನಡೆದು ಕಾನೂನು ಸುವ್ಯವಸ್ಥೆ ಕೆಟ್ಟರೆ ಯಾರು ಹೊಣೆ ಎಂದು ಅವರು ಪ್ರಶ್ನಿಸಿದರು. ಬಿಡದಿಯಲ್ಲಿ ಕುಮಾರಸ್ವಾಮಿ ಅವರಿಗೆ 35 ಎಕರೆ ಜಾಗವಿದ್ದು, ಅದನ್ನು ಉಳಿಸಿಕೊಳ್ಳಲು ಈ ಹೋರಾಟ ಮಾಡುತ್ತಿದ್ದಾರೆಯೇ ಅಥವಾ ಶಿವಕುಮಾರ್ ಮುಖ್ಯಮಂತ್ರಿ ಆದ ಕಾರಣ ಅವರ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆಯೇ ಎಂದು ಶಾಸಕ ಬಾಲಕೃಷ್ಣ ಆಪಾದಿಸಿದ್ದಾರೆ. ಮೈಸೂರು, ಮಂಡ್ಯ, ಹಾರೋಹಳ್ಳಿಯಿಂದ ಜನರಿಗೆ ದುಡ್ಡುಕೊಟ್ಟು ಕರೆಸಿ ಪ್ರತಿಭಟನೆ ಮಾಡಿಸಲಾಗುತ್ತಿದೆ ಎಂದು ಆರೋಪಿಸಿದ ಬಾಲಕೃಷ್ಣ, ಕೇಂದ್ರ ಸಚಿವರಾಗಿ ಕುಮಾರಸ್ವಾಮಿ ರಾಜ್ಯದ ಜ್ವಲಂತ ಸಮಸ್ಯೆಗಳಾದ ಮೇಕೆದಾಟು, ಮಹದಾಯಿ ಯೋಜನೆಗಳಿಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಬಸ್ ಮಾಡಿಕೊಂಡು ಜನರನ್ನು ಕರೆಸಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅವರ ಹೋರಾಟದಿಂದ ರೈತರಿಗೆ ತೊಂದರೆಯಾಗುತ್ತಿದೆಯೇ ವಿನಃ ಪ್ರಯೋಜನವಾಗುತ್ತಿಲ್ಲ ಎಂದರು. ಸರ್ಕಾರವು ರೈತರೊಂದಿಗೆ ಚರ್ಚಿಸಿ, ಅವರ ಒಪ್ಪಿಗೆ ಪಡೆದು ಯೋಜನೆಯನ್ನು ಮುಂದುವರಿಸುತ್ತಿದೆ. ಕಂಪಯ್ಯನಪಾಳ್ಯದಲ್ಲಿ 570 ರೈತರ ಪೈಕಿ ಸುಮಾರು 500 ರೈತರು ಈಗಾಗಲೇ ಒಪ್ಪಿಗೆ ಪತ್ರ ನೀಡಿದ್ದಾರೆ ಎಂದು ಬಾಲಕೃಷ್ಣ ಮಾಹಿತಿ ನೀಡಿದ್ದಾರೆ. ಕುಮಾರಸ್ವಾಮಿ ಅವರು 2018ರಲ್ಲಿ ಇದೇ ಯೋಜನೆಯನ್ನು ತಮ್ಮ ಕನಸಿನ ಕೂಸು ಎಂದು ಕರೆದು, ರೈತರಿಗೆ 40% ಅಭಿವೃದ್ಧಿಪಡಿಸಿದ ಭೂಮಿ ಪರಿಹಾರ ನೀಡುವುದಾಗಿ ಹೇಳಿದ್ದರು. ಆದರೆ ಈಗ ಸರ್ಕಾರ 50% ಭೂಮಿ ಅಥವಾ ಎಕರೆಗೆ 2.50 ಕೋಟಿ ರೂ. ಪರಿಹಾರ ನೀಡಲು ಸಿದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೈರಮಂಗಲ ಕೆರೆಯು ಕಲುಷಿತಗೊಂಡಿದ್ದು, ಅಲ್ಲಿನ ರೈತರು ಗಲೀಜು ನೀರಿನಲ್ಲಿ ವ್ಯವಸಾಯ ಮಾಡುತ್ತಿದ್ದು, ಅದರ ಶುದ್ಧೀಕರಣಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಜಿಬಿಐಟಿ ಸಂಸ್ಥೆಯು ಕೆರೆಯ ನಿರ್ವಹಣೆಯನ್ನು ನೋಡಿಕೊಳ್ಳಲಿದೆ. ಸಣ್ಣ ರೈತರ ರಕ್ಷಣೆಗಾಗಿ ದುಬಾರಿ ಪರಿಹಾರ ನೀಡಲಾಗುತ್ತಿದ್ದು, 1 ಲಕ್ಷ ರೂ. ಸಾಲವನ್ನು 10 ಲಕ್ಷ ರೂ. ವರೆಗೆ ಏರಿಕೆ ಆಗಿದ್ದ ರೈತರಿಗೆ ಬ್ಯಾಂಕುಗಳೊಂದಿಗೆ ಒಟಿಎಸ್ ಮೂಲಕ ಅಸಲು ಕಟ್ಟಿಸಿ ಬಡ್ಡಿ ಮನ್ನಾ ಮಾಡಲು ಚರ್ಚೆ ನಡೆಸಲಾಗಿದೆ ಎಂದು ಬಾಲಕೃಷ್ಣ ತಿಳಿಸಿದರು. ಅಲ್ಲದೆ, ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಸಿಎಜಿ ವರದಿ ಬಂದಿರುವುದರಿಂದ, ಅರ್ಹ ಫಲಾನುಭವಿಗಳಿಗೆ ಮಾತ್ರ ಲಾಭ ಸಿಗುವಂತೆ ಎರಡು ತಿಂಗಳಲ್ಲಿ ಫಲಾನುಭವಿಗಳ ಪರಿಷ್ಕರಣೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು. ಬಿಡದಿ ಯೋಜನೆಗೆ ಬೆಂಬಲ ನೀಡುವ ಶಾಸಕರಿಗೆ ನಿವೇಶನ ನೀಡಲಾಗುತ್ತಿದೆ ಎಂಬ ಕುಮಾರಸ್ವಾಮಿ ಆರೋಪವನ್ನು ಬಾಲಕೃಷ್ಣ ಅವರು ತೀವ್ರವಾಗಿ ಖಂಡಿಸಿದರು. ಕೇಂದ್ರದ ಸಚಿವರಾಗಿ ಇಂತಹ ಕ್ಷುಲ್ಲಕ ಹೇಳಿಕೆ ನೀಡುವುದನ್ನು ಬಿಡಬೇಕು ಎಂದು ಮನವಿ ಮಾಡಿದ ಅವರು, ಕುಮಾರಸ್ವಾಮಿ ಅವರು ತಮ್ಮ ಆರೋಪವನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಸವಾಲು ಹಾಕಿದ್ದಾರೆ, ಇಲ್ಲವಾದರೆ ಕುಮಾರಸ್ವಾಮಿ ಅವರೇ ನಿವೃತ್ತಿ ಪಡೆಯಬೇಕೆಂದು ಕೇಳಿದರು. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದ ಬಳಿಕ ಕುಮಾರಸ್ವಾಮಿ ಅವರಿಗೆ ನಿದ್ದೆ ಬರುತ್ತಿಲ್ಲ, ಅವರು ರಾತ್ರಿಯಿಡೀ ಶಿವಕುಮಾರ್ ಅವರ ಬಗ್ಗೆಯೇ ಯೋಚಿಸುತ್ತಿರುತ್ತಾರೆ ಎಂದು ಬಾಲಕೃಷ್ಣ ಲೇವಡಿ ಮಾಡಿದರು. ತಮ್ಮ ಆಸ್ತಿ ತನಿಖೆಗೆ ಸಿದ್ಧರಿದ್ದು, ಕುಮಾರಸ್ವಾಮಿ ಅವರು ತಮ್ಮ ಸಂಪಾದನೆ ಹೇಗೆ ಎಂದು ಚರ್ಚೆಗೆ ಬರುತ್ತಾರೆಯೇ ಎಂದು ಅವರು ಸವಾಲೆಸೆದರು.
    1
    ಮಾಗಡಿ ಶಾಸಕ ಬಾಲಕೃಷ್ಣ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರ ಬಿಡದಿ ಟೌನ್ ಶಿಪ್ ವಿರೋಧಿ ಹೋರಾಟವನ್ನು ತೀವ್ರವಾಗಿ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಬಾಲಕೃಷ್ಣ, ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರ ಸೇರಿದಂತೆ ಹಲವೆಡೆ ಭೂಸ್ವಾಧೀನ ಪ್ರಕ್ರಿಯೆಗಳು ನಡೆಯುತ್ತಿದ್ದು, ಹಾಸನದಲ್ಲಿ ಐಐಟಿ ಕಾಲೇಜಿಗಾಗಿ 1800 ಎಕರೆ ಭೂಸ್ವಾಧೀನ ಮಾಡಿದ್ದರೂ, ಕುಮಾರಸ್ವಾಮಿ ಮತ್ತು ನಿಖಿಲ್ ಅವರು ಬೇರೆಲ್ಲೂ ಹೋರಾಟ ಮಾಡದೆ ಕೇವಲ ಬಿಡದಿಯಲ್ಲೇ ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಮುಖ್ಯಮಂತ್ರಿಯವರು ಚರ್ಚೆಗೆ ಸಮಯ ನಿಗದಿಪಡಿಸಿದ ನಂತರವೂ ಕುಮಾರಸ್ವಾಮಿ ಅವರು ಬೈರಮಂಗಲಕ್ಕೆ ಬರಲು ಹೇಳುವುದು ಅವರ ಬಾಲಿಶ ವರ್ತನೆಯನ್ನು ತೋರಿಸುತ್ತದೆ ಎಂದು ಬಾಲಕೃಷ್ಣ ಕಿಡಿಕಾರಿದ್ದಾರೆ. ಪ್ರಬುದ್ಧ ನಾಯಕನಿಗೆ ಇರಬೇಕಾದ ಕನಿಷ್ಠ ಜ್ಞಾನ ಕುಮಾರಸ್ವಾಮಿ ಅವರಿಗಿಲ್ಲ. ಬೈರಮಂಗಲದಲ್ಲಿ ಪ್ರತಿಭಟನೆಗೆ ಕರೆದು ಜನರನ್ನು ಒಟ್ಟುಗೂಡಿಸಿ, ಎರಡು ಕಡೆಯ ರೈತರ ಮಧ್ಯೆ ಮಾರಾಮಾರಿ ನಡೆದು ಕಾನೂನು ಸುವ್ಯವಸ್ಥೆ ಕೆಟ್ಟರೆ ಯಾರು ಹೊಣೆ ಎಂದು ಅವರು ಪ್ರಶ್ನಿಸಿದರು. ಬಿಡದಿಯಲ್ಲಿ ಕುಮಾರಸ್ವಾಮಿ ಅವರಿಗೆ 35 ಎಕರೆ ಜಾಗವಿದ್ದು, ಅದನ್ನು ಉಳಿಸಿಕೊಳ್ಳಲು ಈ ಹೋರಾಟ ಮಾಡುತ್ತಿದ್ದಾರೆಯೇ ಅಥವಾ ಶಿವಕುಮಾರ್ ಮುಖ್ಯಮಂತ್ರಿ ಆದ ಕಾರಣ ಅವರ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆಯೇ ಎಂದು ಶಾಸಕ ಬಾಲಕೃಷ್ಣ ಆಪಾದಿಸಿದ್ದಾರೆ. ಮೈಸೂರು, ಮಂಡ್ಯ, ಹಾರೋಹಳ್ಳಿಯಿಂದ ಜನರಿಗೆ ದುಡ್ಡುಕೊಟ್ಟು ಕರೆಸಿ ಪ್ರತಿಭಟನೆ ಮಾಡಿಸಲಾಗುತ್ತಿದೆ ಎಂದು ಆರೋಪಿಸಿದ ಬಾಲಕೃಷ್ಣ, ಕೇಂದ್ರ ಸಚಿವರಾಗಿ ಕುಮಾರಸ್ವಾಮಿ ರಾಜ್ಯದ ಜ್ವಲಂತ ಸಮಸ್ಯೆಗಳಾದ ಮೇಕೆದಾಟು, ಮಹದಾಯಿ ಯೋಜನೆಗಳಿಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಬಸ್ ಮಾಡಿಕೊಂಡು ಜನರನ್ನು ಕರೆಸಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅವರ ಹೋರಾಟದಿಂದ ರೈತರಿಗೆ ತೊಂದರೆಯಾಗುತ್ತಿದೆಯೇ ವಿನಃ ಪ್ರಯೋಜನವಾಗುತ್ತಿಲ್ಲ ಎಂದರು.

ಸರ್ಕಾರವು ರೈತರೊಂದಿಗೆ ಚರ್ಚಿಸಿ, ಅವರ ಒಪ್ಪಿಗೆ ಪಡೆದು ಯೋಜನೆಯನ್ನು ಮುಂದುವರಿಸುತ್ತಿದೆ. ಕಂಪಯ್ಯನಪಾಳ್ಯದಲ್ಲಿ 570 ರೈತರ ಪೈಕಿ ಸುಮಾರು 500 ರೈತರು ಈಗಾಗಲೇ ಒಪ್ಪಿಗೆ ಪತ್ರ ನೀಡಿದ್ದಾರೆ ಎಂದು ಬಾಲಕೃಷ್ಣ ಮಾಹಿತಿ ನೀಡಿದ್ದಾರೆ. ಕುಮಾರಸ್ವಾಮಿ ಅವರು 2018ರಲ್ಲಿ ಇದೇ ಯೋಜನೆಯನ್ನು ತಮ್ಮ ಕನಸಿನ ಕೂಸು ಎಂದು ಕರೆದು, ರೈತರಿಗೆ 40% ಅಭಿವೃದ್ಧಿಪಡಿಸಿದ ಭೂಮಿ ಪರಿಹಾರ ನೀಡುವುದಾಗಿ ಹೇಳಿದ್ದರು. ಆದರೆ ಈಗ ಸರ್ಕಾರ 50% ಭೂಮಿ ಅಥವಾ ಎಕರೆಗೆ 2.50 ಕೋಟಿ ರೂ. ಪರಿಹಾರ ನೀಡಲು ಸಿದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೈರಮಂಗಲ ಕೆರೆಯು ಕಲುಷಿತಗೊಂಡಿದ್ದು, ಅಲ್ಲಿನ ರೈತರು ಗಲೀಜು ನೀರಿನಲ್ಲಿ ವ್ಯವಸಾಯ ಮಾಡುತ್ತಿದ್ದು, ಅದರ ಶುದ್ಧೀಕರಣಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಜಿಬಿಐಟಿ ಸಂಸ್ಥೆಯು ಕೆರೆಯ ನಿರ್ವಹಣೆಯನ್ನು ನೋಡಿಕೊಳ್ಳಲಿದೆ. ಸಣ್ಣ ರೈತರ ರಕ್ಷಣೆಗಾಗಿ ದುಬಾರಿ ಪರಿಹಾರ ನೀಡಲಾಗುತ್ತಿದ್ದು, 1 ಲಕ್ಷ ರೂ. ಸಾಲವನ್ನು 10 ಲಕ್ಷ ರೂ. ವರೆಗೆ ಏರಿಕೆ ಆಗಿದ್ದ ರೈತರಿಗೆ ಬ್ಯಾಂಕುಗಳೊಂದಿಗೆ ಒಟಿಎಸ್ ಮೂಲಕ ಅಸಲು ಕಟ್ಟಿಸಿ ಬಡ್ಡಿ ಮನ್ನಾ ಮಾಡಲು ಚರ್ಚೆ ನಡೆಸಲಾಗಿದೆ ಎಂದು ಬಾಲಕೃಷ್ಣ ತಿಳಿಸಿದರು. ಅಲ್ಲದೆ, ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಸಿಎಜಿ ವರದಿ ಬಂದಿರುವುದರಿಂದ, ಅರ್ಹ ಫಲಾನುಭವಿಗಳಿಗೆ ಮಾತ್ರ ಲಾಭ ಸಿಗುವಂತೆ ಎರಡು ತಿಂಗಳಲ್ಲಿ ಫಲಾನುಭವಿಗಳ ಪರಿಷ್ಕರಣೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಬಿಡದಿ ಯೋಜನೆಗೆ ಬೆಂಬಲ ನೀಡುವ ಶಾಸಕರಿಗೆ ನಿವೇಶನ ನೀಡಲಾಗುತ್ತಿದೆ ಎಂಬ ಕುಮಾರಸ್ವಾಮಿ ಆರೋಪವನ್ನು ಬಾಲಕೃಷ್ಣ ಅವರು ತೀವ್ರವಾಗಿ ಖಂಡಿಸಿದರು. ಕೇಂದ್ರದ ಸಚಿವರಾಗಿ ಇಂತಹ ಕ್ಷುಲ್ಲಕ ಹೇಳಿಕೆ ನೀಡುವುದನ್ನು ಬಿಡಬೇಕು ಎಂದು ಮನವಿ ಮಾಡಿದ ಅವರು, ಕುಮಾರಸ್ವಾಮಿ ಅವರು ತಮ್ಮ ಆರೋಪವನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಸವಾಲು ಹಾಕಿದ್ದಾರೆ, ಇಲ್ಲವಾದರೆ ಕುಮಾರಸ್ವಾಮಿ ಅವರೇ ನಿವೃತ್ತಿ ಪಡೆಯಬೇಕೆಂದು ಕೇಳಿದರು. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದ ಬಳಿಕ ಕುಮಾರಸ್ವಾಮಿ ಅವರಿಗೆ ನಿದ್ದೆ ಬರುತ್ತಿಲ್ಲ, ಅವರು ರಾತ್ರಿಯಿಡೀ ಶಿವಕುಮಾರ್ ಅವರ ಬಗ್ಗೆಯೇ ಯೋಚಿಸುತ್ತಿರುತ್ತಾರೆ ಎಂದು ಬಾಲಕೃಷ್ಣ ಲೇವಡಿ ಮಾಡಿದರು. ತಮ್ಮ ಆಸ್ತಿ ತನಿಖೆಗೆ ಸಿದ್ಧರಿದ್ದು, ಕುಮಾರಸ್ವಾಮಿ ಅವರು ತಮ್ಮ ಸಂಪಾದನೆ ಹೇಗೆ ಎಂದು ಚರ್ಚೆಗೆ ಬರುತ್ತಾರೆಯೇ ಎಂದು ಅವರು ಸವಾಲೆಸೆದರು.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    5 hrs ago
  • ಕನಕಪುರ ದೇಗುಲ ಮಠಾಧ್ಯಕ್ಷರಾದ ಡಾ. ಶ್ರೀ ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಅಂತಿಮ ದರ್ಶನ ಕಾರ್ಯಕ್ರಮ ಮಂಗಳವಾರ ನಡೆಯಿತು. ಈ ದುಃಖದ ಸಂದರ್ಭದಲ್ಲಿ ರಾಜ್ಯಾದ್ಯಂತ ಸಹಸ್ರಾರು ಭಕ್ತರು, ಮಠಾಧೀಶರುಗಳು, ಹರಗುರು ಚರಮೂರ್ತಿಗಳು, ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು, ವಿವಿಧ ರಾಜಕೀಯ ಪಕ್ಷಗಳ ಗಣ್ಯರು, ಹಾಲಿ ಮತ್ತು ಮಾಜಿ ಕೇಂದ್ರ ಹಾಗೂ ರಾಜ್ಯ ಸಚಿವರುಗಳು, ಮತ್ತು ಹಾಲಿ ಹಾಗೂ ಮಾಜಿ ಶಾಸಕರುಗಳು ಆಗಮಿಸಿ ಅಂತಿಮ ದರ್ಶನ ಪಡೆದು ಭಕ್ತಿಪೂರ್ವಕ ಪ್ರಾರ್ಥನೆ ಸಲ್ಲಿಸಿದರು. ಕನಕಪುರ ದೇಗುಲ ಮಠದ ಆವರಣದಲ್ಲಿ ಪೂಜ್ಯರ ಅಂತಿಮ ದರ್ಶನಕ್ಕಾಗಿ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಭಕ್ತರು ಸರದಿ ಸಾಲಿನಲ್ಲಿ ನಿಂತು ತಮ್ಮ ನೆಚ್ಚಿನ ಶ್ರೀಗಳಿಗೆ ಪುಷ್ಪನಮನ ಸಲ್ಲಿಸಿ, ಪಾದಗಳಿಗೆ ಭಕ್ತಿಯ ಪ್ರಾರ್ಥನೆ ಸಲ್ಲಿಸಿ ತಮ್ಮ ದುಃಖವನ್ನು ವ್ಯಕ್ತಪಡಿಸಿದರು. ಸುತ್ತೂರಿನ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ರಂಭಾಪುರಿ ಶ್ರೀಗಳು ಸೇರಿದಂತೆ ನಾಡಿನ ಖ್ಯಾತ ಮಠಾಧೀಶರು, ಸಾವಿರಾರು ಹರಗುರು ಚರಮೂರ್ತಿಗಳು, ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಕೇಂದ್ರ ಹಾಗೂ ರಾಜ್ಯ ಸಚಿವರುಗಳು, ಮಾಜಿ ಮತ್ತು ಹಾಲಿ ಶಾಸಕರುಗಳು, ವಿವಿಧ ರಾಜಕೀಯ ಪಕ್ಷಗಳ ಸಾವಿರಾರು ಮುಖಂಡರುಗಳು, ಜೆ.ಎಸ್.ಎಸ್. ವಿದ್ಯಾಪೀಠದ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಹ ಪೂಜ್ಯರ ಅಂತಿಮ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು. ನಂತರ, ಕನಕಪುರದ ಪ್ರಮುಖ ರಸ್ತೆಗಳಲ್ಲಿ ಪೂಜ್ಯರ ಅಂತಿಮ ದರ್ಶನದ ಮೆರವಣಿಗೆಯನ್ನು ನಡೆಸಲಾಯಿತು. ತದನಂತರ, ಶ್ರೀ ದೇಗುಲ ಮಠದ ಆವರಣದಲ್ಲಿ ಮಠಾಧೀಶರುಗಳು, ಹರಗುರು ಚರಮೂರ್ತಿಗಳ ದಿವ್ಯ ಸಮ್ಮುಖದಲ್ಲಿ ಹಾಗೂ ಶ್ರೀ ಮಠದ ಡಾ. ಶ್ರೀ ಚನ್ನಬಸವಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ, ಶ್ರೀಮಠದ ಸಂಪ್ರದಾಯಬದ್ಧ ವಿಧಿವಿಧಾನಗಳ ಪ್ರಕಾರ ಪೂಜ್ಯರ ಪಾರ್ಥಿವ ಶರೀರಕ್ಕೆ ಅಂತಿಮ ಪೂಜೆ ಸಲ್ಲಿಸಿ ಅಂತಿಮ ವಿದಾಯ ಹೇಳಲಾಯಿತು.
    1
    ಕನಕಪುರ ದೇಗುಲ ಮಠಾಧ್ಯಕ್ಷರಾದ ಡಾ. ಶ್ರೀ ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಅಂತಿಮ ದರ್ಶನ ಕಾರ್ಯಕ್ರಮ ಮಂಗಳವಾರ ನಡೆಯಿತು. ಈ ದುಃಖದ ಸಂದರ್ಭದಲ್ಲಿ ರಾಜ್ಯಾದ್ಯಂತ ಸಹಸ್ರಾರು ಭಕ್ತರು, ಮಠಾಧೀಶರುಗಳು, ಹರಗುರು ಚರಮೂರ್ತಿಗಳು, ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು, ವಿವಿಧ ರಾಜಕೀಯ ಪಕ್ಷಗಳ ಗಣ್ಯರು, ಹಾಲಿ ಮತ್ತು ಮಾಜಿ ಕೇಂದ್ರ ಹಾಗೂ ರಾಜ್ಯ ಸಚಿವರುಗಳು, ಮತ್ತು ಹಾಲಿ ಹಾಗೂ ಮಾಜಿ ಶಾಸಕರುಗಳು ಆಗಮಿಸಿ ಅಂತಿಮ ದರ್ಶನ ಪಡೆದು ಭಕ್ತಿಪೂರ್ವಕ ಪ್ರಾರ್ಥನೆ ಸಲ್ಲಿಸಿದರು.

ಕನಕಪುರ ದೇಗುಲ ಮಠದ ಆವರಣದಲ್ಲಿ ಪೂಜ್ಯರ ಅಂತಿಮ ದರ್ಶನಕ್ಕಾಗಿ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಭಕ್ತರು ಸರದಿ ಸಾಲಿನಲ್ಲಿ ನಿಂತು ತಮ್ಮ ನೆಚ್ಚಿನ ಶ್ರೀಗಳಿಗೆ ಪುಷ್ಪನಮನ ಸಲ್ಲಿಸಿ, ಪಾದಗಳಿಗೆ ಭಕ್ತಿಯ ಪ್ರಾರ್ಥನೆ ಸಲ್ಲಿಸಿ ತಮ್ಮ ದುಃಖವನ್ನು ವ್ಯಕ್ತಪಡಿಸಿದರು. ಸುತ್ತೂರಿನ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ರಂಭಾಪುರಿ ಶ್ರೀಗಳು ಸೇರಿದಂತೆ ನಾಡಿನ ಖ್ಯಾತ ಮಠಾಧೀಶರು, ಸಾವಿರಾರು ಹರಗುರು ಚರಮೂರ್ತಿಗಳು, ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಕೇಂದ್ರ ಹಾಗೂ ರಾಜ್ಯ ಸಚಿವರುಗಳು, ಮಾಜಿ ಮತ್ತು ಹಾಲಿ ಶಾಸಕರುಗಳು, ವಿವಿಧ ರಾಜಕೀಯ ಪಕ್ಷಗಳ ಸಾವಿರಾರು ಮುಖಂಡರುಗಳು, ಜೆ.ಎಸ್.ಎಸ್. ವಿದ್ಯಾಪೀಠದ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಹ ಪೂಜ್ಯರ ಅಂತಿಮ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.

ನಂತರ, ಕನಕಪುರದ ಪ್ರಮುಖ ರಸ್ತೆಗಳಲ್ಲಿ ಪೂಜ್ಯರ ಅಂತಿಮ ದರ್ಶನದ ಮೆರವಣಿಗೆಯನ್ನು ನಡೆಸಲಾಯಿತು. ತದನಂತರ, ಶ್ರೀ ದೇಗುಲ ಮಠದ ಆವರಣದಲ್ಲಿ ಮಠಾಧೀಶರುಗಳು, ಹರಗುರು ಚರಮೂರ್ತಿಗಳ ದಿವ್ಯ ಸಮ್ಮುಖದಲ್ಲಿ ಹಾಗೂ ಶ್ರೀ ಮಠದ ಡಾ. ಶ್ರೀ ಚನ್ನಬಸವಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ, ಶ್ರೀಮಠದ ಸಂಪ್ರದಾಯಬದ್ಧ ವಿಧಿವಿಧಾನಗಳ ಪ್ರಕಾರ ಪೂಜ್ಯರ ಪಾರ್ಥಿವ ಶರೀರಕ್ಕೆ ಅಂತಿಮ ಪೂಜೆ ಸಲ್ಲಿಸಿ ಅಂತಿಮ ವಿದಾಯ ಹೇಳಲಾಯಿತು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    3 hrs ago
  • ಒಬ್ಬ ಯುವಕ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಬಸ್‌ನಲ್ಲಿ ಕೇಳಿಬಂದಿದೆ. ಈ ಘಟನೆಯನ್ನು ಗಮನಿಸಿದ ಸಹ ಪ್ರಯಾಣಿಕರು ಆ ಯುವಕನನ್ನು ತಕ್ಷಣ ತರಾಟೆಗೆ ತೆಗೆದುಕೊಂಡಿದ್ದಾರೆ.
    1
    ಒಬ್ಬ ಯುವಕ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಬಸ್‌ನಲ್ಲಿ ಕೇಳಿಬಂದಿದೆ. ಈ ಘಟನೆಯನ್ನು ಗಮನಿಸಿದ ಸಹ ಪ್ರಯಾಣಿಕರು ಆ ಯುವಕನನ್ನು ತಕ್ಷಣ ತರಾಟೆಗೆ ತೆಗೆದುಕೊಂಡಿದ್ದಾರೆ.
    user_Veega News Kannada
    Veega News Kannada
    Newspaper advertising department ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    46 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.