logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಘೋರ ಕೃತ್ಯ ಬೆಳಕಿಗೆ ಬಂದಿದ್ದು, ಬೇರೆ ಯುವತಿಯನ್ನು ಮದುವೆಯಾಗಲು ಹೊರಟಿದ್ದನ್ನು ಪ್ರಶ್ನಿಸಿದ ಲಿವಿಂಗ್ ರಿಲೇಶನ್‌ನಲ್ಲಿದ್ದ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಶವವನ್ನು ಮಹಾರಾಷ್ಟ್ರದ ಘಾಟ್‌ನಲ್ಲಿ ಎಸೆದಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಕ್ಕೇರಿ ತಾಲೂಕಿನ ರಾಜನಕಟ್ಟಿ ಗ್ರಾಮದ 33 ವರ್ಷದ ಬಸವರಾಜ್ ಕರ್ಣಾವರ್ ಈ ಕೃತ್ಯದ ಮುಖ್ಯ ಆರೋಪಿಯಾಗಿದ್ದಾನೆ. ವಂಟಮೂರಿ ಗ್ರಾಮದ 25 ವರ್ಷದ ಗಂಗವ್ವ ಹಂಚಿನಮನಿ ಎಂಬ ಯುವತಿಯನ್ನು ಬಸವರಾಜ್ ತನ್ನ ತಂದೆ ಯಲ್ಲಪ್ಪ ಮತ್ತು ಮಾವ ಲಗಮಪ್ಪ ಅವರೊಂದಿಗೆ ಸೇರಿಕೊಂಡು ರಾಡ್‌ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಹತ್ಯೆಯ ನಂತರ ಸಾಕ್ಷ್ಯ ನಾಶಪಡಿಸುವ ಸಲುವಾಗಿ ಆರೋಪಿಗಳು ಯುವತಿಯ ಶವವನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಚಂದಗಡ ತಾಲೂಕಿನ 'ತಿಲಾರಿ ಘಾಟ್' ಪ್ರದೇಶದ ದಟ್ಟ ಕಾಡಿನಲ್ಲಿ ಎಸೆದು ಬಂದಿದ್ದರು. ಮೇ 29ರಂದು ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಚಂದಗಡ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು. ರಸ್ತೆಯ ಸಿಸಿಟಿವಿ ದೃಶ್ಯಗಳು ಮತ್ತು ಟೋಲ್‌ಗೇಟ್ ದಾಖಲೆಗಳನ್ನು ಪರಿಶೀಲಿಸಿದಾಗ, ಮಹಿಳೆ ಕಾರಿನಲ್ಲಿ ತೆರಳಿದ್ದ ಪ್ರಮುಖ ಮಾಹಿತಿ ಲಭ್ಯವಾಯಿತು. ತಕ್ಷಣವೇ ವಾಹನದ ಸಂಖ್ಯೆಯನ್ನು ಪತ್ತೆಹಚ್ಚಿದ ಪೊಲೀಸರು ಆರೋಪಿಗಳ ಸುಳಿವು ಹಿಡಿದು ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನೆರವೇರಿಸಿದ್ದು, ಬಂಧಿತ ಮೂವರೂ ಆರೋಪಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

14 hrs ago
user_YSRmedia vijayanagaraupsates
YSRmedia vijayanagaraupsates
Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
14 hrs ago
ca9cb9cd-eba0-4d92-8de3-6943fdf5e603

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಘೋರ ಕೃತ್ಯ ಬೆಳಕಿಗೆ ಬಂದಿದ್ದು, ಬೇರೆ ಯುವತಿಯನ್ನು ಮದುವೆಯಾಗಲು ಹೊರಟಿದ್ದನ್ನು ಪ್ರಶ್ನಿಸಿದ ಲಿವಿಂಗ್ ರಿಲೇಶನ್‌ನಲ್ಲಿದ್ದ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ ಶವವನ್ನು ಮಹಾರಾಷ್ಟ್ರದ ಘಾಟ್‌ನಲ್ಲಿ ಎಸೆದಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಕ್ಕೇರಿ ತಾಲೂಕಿನ ರಾಜನಕಟ್ಟಿ ಗ್ರಾಮದ 33 ವರ್ಷದ ಬಸವರಾಜ್ ಕರ್ಣಾವರ್ ಈ ಕೃತ್ಯದ ಮುಖ್ಯ ಆರೋಪಿಯಾಗಿದ್ದಾನೆ. ವಂಟಮೂರಿ ಗ್ರಾಮದ 25 ವರ್ಷದ ಗಂಗವ್ವ ಹಂಚಿನಮನಿ ಎಂಬ ಯುವತಿಯನ್ನು ಬಸವರಾಜ್ ತನ್ನ ತಂದೆ ಯಲ್ಲಪ್ಪ ಮತ್ತು ಮಾವ ಲಗಮಪ್ಪ ಅವರೊಂದಿಗೆ ಸೇರಿಕೊಂಡು ರಾಡ್‌ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಹತ್ಯೆಯ ನಂತರ ಸಾಕ್ಷ್ಯ ನಾಶಪಡಿಸುವ ಸಲುವಾಗಿ ಆರೋಪಿಗಳು ಯುವತಿಯ ಶವವನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಚಂದಗಡ ತಾಲೂಕಿನ 'ತಿಲಾರಿ ಘಾಟ್' ಪ್ರದೇಶದ ದಟ್ಟ ಕಾಡಿನಲ್ಲಿ ಎಸೆದು ಬಂದಿದ್ದರು. ಮೇ 29ರಂದು ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಚಂದಗಡ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು. ರಸ್ತೆಯ ಸಿಸಿಟಿವಿ ದೃಶ್ಯಗಳು ಮತ್ತು ಟೋಲ್‌ಗೇಟ್ ದಾಖಲೆಗಳನ್ನು ಪರಿಶೀಲಿಸಿದಾಗ, ಮಹಿಳೆ ಕಾರಿನಲ್ಲಿ ತೆರಳಿದ್ದ ಪ್ರಮುಖ ಮಾಹಿತಿ ಲಭ್ಯವಾಯಿತು. ತಕ್ಷಣವೇ ವಾಹನದ ಸಂಖ್ಯೆಯನ್ನು ಪತ್ತೆಹಚ್ಚಿದ ಪೊಲೀಸರು ಆರೋಪಿಗಳ ಸುಳಿವು ಹಿಡಿದು ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನೆರವೇರಿಸಿದ್ದು, ಬಂಧಿತ ಮೂವರೂ ಆರೋಪಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

More news from ಕರ್ನಾಟಕ and nearby areas
  • ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ "ಗೃಹಲಕ್ಷ್ಮಿ" ಯೋಜನೆಯ ಫಲಾನುಭವಿಗಳು ಯಾವುದೇ ರೀತಿಯ ಊಹಾ ಪೋಹಗಳಿಗೆ, ಅಂತೆ ಕಂತೆಗಳಿಗೆ, ಅಥವಾ ಗಾಳಿ ಸುದ್ದಿಗಳಗೆ ಕಿವಿಗೊಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ. ಸರ್ಕಾರದ ಅಥವಾ ಇಲಾಖೆಯ ಅಧಿಕೃತ ಆದೇಶ ಹಾಗೂ ನಿರ್ದೇಶನಗಳು ಹೊರಡಿಸುವವರೆಗೆ ಫಲಾನುಭವಿಗಳು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಿಂದ ಈ ಕುರಿತು ಮಾಹಿತಿ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಧಿಕೃತ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ಸಾಕಷ್ಟು ಫಲಾನುಭವಿಗಳು ಕಂಪ್ಯೂಟರ್ ಸೆಂಟರ್‌ಗಳಿಗೆ ಹಾಗೂ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುತ್ತಿದ್ದಾರೆ. ಇದನ್ನು ಮನಗಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯು ಈ ಸಂಬಂಧ ಸ್ಪಷ್ಟನೆ ನೀಡಿ ಸುತ್ತೋಲೆ ಹೊರಡಿಸಿದೆ. ಅರ್ಹ ಫಲಾನುಭವಿಗಳು ಕಚೇರಿಗಳಿಗೆ ಅಥವಾ ಡಾಟಾ ಎಂಟ್ರಿ ಕಂಪ್ಯೂಟರ್ ಸೆಂಟರ್‌ಗಳಿಗೆ ಅನಗತ್ಯವಾಗಿ ಅಲೆದಾಡುವುದು ಅಥವಾ ಆತಂಕಪಡುವ ಅಗತ್ಯವಿಲ್ಲ ಎಂದು ಇಲಾಖೆ ತಿಳಿಸಿದೆ. ಯೋಜನೆಯ ಸೌಲಭ್ಯ ಹೊಂದದ ಅರ್ಹರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಪ್ರಸ್ತುತ ಅರ್ಜಿಗಳನ್ನು ಆಹ್ವಾನಿಸಿಲ್ಲ. ಸಂಬಂಧಿಸಿದಂತೆ ಅರ್ಹರಿಂದ ಅರ್ಜಿ ಆಹ್ವಾನಿಸಿ ಪ್ರಕಟಣೆ ಹೊರಡಿಸಿದ ನಂತರವೇ, ಸೌಲಭ್ಯ ಹೊಂದದೇ ಇರುವ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಅರ್ಹ ಫಲಾನುಭವಿಗಳು ಯಾವುದೇ ಗಾಸಿಪ್‌ಗಳಿಗೆ ಅಥವಾ ಗಾಳಿಸುದ್ದಿಗಳಿಗೆ ಕಿವಿಗೊಡಬಾರದು. ಈ ಉದ್ದೇಶಕ್ಕಾಗಿ ಕಂಪ್ಯೂಟರ್ ಸೆಂಟರ್‌ಗಳಿಗೆ ಹಾಗೂ ಇಲಾಖಾ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡಬಾರದು ಎಂದು ಇಲಾಖೆ ಹೇಳಿದೆ. ಯಾವುದೇ ರೀತಿಯಲ್ಲಿಯೂ ಆತಂಕಪಡುವ ಅಗತ್ಯವಿಲ್ಲ ಎಂದು ಪುನರುಚ್ಚರಿಸಿದ ಇಲಾಖೆ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯವು ಯಥಾವತ್ತಾಗಿ ಲಭ್ಯವಿರುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
    3
    ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ "ಗೃಹಲಕ್ಷ್ಮಿ" ಯೋಜನೆಯ ಫಲಾನುಭವಿಗಳು ಯಾವುದೇ ರೀತಿಯ ಊಹಾ ಪೋಹಗಳಿಗೆ, ಅಂತೆ ಕಂತೆಗಳಿಗೆ, ಅಥವಾ ಗಾಳಿ ಸುದ್ದಿಗಳಗೆ ಕಿವಿಗೊಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ. ಸರ್ಕಾರದ ಅಥವಾ ಇಲಾಖೆಯ ಅಧಿಕೃತ ಆದೇಶ ಹಾಗೂ ನಿರ್ದೇಶನಗಳು ಹೊರಡಿಸುವವರೆಗೆ ಫಲಾನುಭವಿಗಳು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಿಂದ ಈ ಕುರಿತು ಮಾಹಿತಿ ಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅನಧಿಕೃತ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ಸಾಕಷ್ಟು ಫಲಾನುಭವಿಗಳು ಕಂಪ್ಯೂಟರ್ ಸೆಂಟರ್‌ಗಳಿಗೆ ಹಾಗೂ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುತ್ತಿದ್ದಾರೆ. ಇದನ್ನು ಮನಗಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯು ಈ ಸಂಬಂಧ ಸ್ಪಷ್ಟನೆ ನೀಡಿ ಸುತ್ತೋಲೆ ಹೊರಡಿಸಿದೆ. ಅರ್ಹ ಫಲಾನುಭವಿಗಳು ಕಚೇರಿಗಳಿಗೆ ಅಥವಾ ಡಾಟಾ ಎಂಟ್ರಿ ಕಂಪ್ಯೂಟರ್ ಸೆಂಟರ್‌ಗಳಿಗೆ ಅನಗತ್ಯವಾಗಿ ಅಲೆದಾಡುವುದು ಅಥವಾ ಆತಂಕಪಡುವ ಅಗತ್ಯವಿಲ್ಲ ಎಂದು ಇಲಾಖೆ ತಿಳಿಸಿದೆ.

ಯೋಜನೆಯ ಸೌಲಭ್ಯ ಹೊಂದದ ಅರ್ಹರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಪ್ರಸ್ತುತ ಅರ್ಜಿಗಳನ್ನು ಆಹ್ವಾನಿಸಿಲ್ಲ. ಸಂಬಂಧಿಸಿದಂತೆ ಅರ್ಹರಿಂದ ಅರ್ಜಿ ಆಹ್ವಾನಿಸಿ ಪ್ರಕಟಣೆ ಹೊರಡಿಸಿದ ನಂತರವೇ, ಸೌಲಭ್ಯ ಹೊಂದದೇ ಇರುವ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಅರ್ಹ ಫಲಾನುಭವಿಗಳು ಯಾವುದೇ ಗಾಸಿಪ್‌ಗಳಿಗೆ ಅಥವಾ ಗಾಳಿಸುದ್ದಿಗಳಿಗೆ ಕಿವಿಗೊಡಬಾರದು.

ಈ ಉದ್ದೇಶಕ್ಕಾಗಿ ಕಂಪ್ಯೂಟರ್ ಸೆಂಟರ್‌ಗಳಿಗೆ ಹಾಗೂ ಇಲಾಖಾ ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡಬಾರದು ಎಂದು ಇಲಾಖೆ ಹೇಳಿದೆ. ಯಾವುದೇ ರೀತಿಯಲ್ಲಿಯೂ ಆತಂಕಪಡುವ ಅಗತ್ಯವಿಲ್ಲ ಎಂದು ಪುನರುಚ್ಚರಿಸಿದ ಇಲಾಖೆ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯವು ಯಥಾವತ್ತಾಗಿ ಲಭ್ಯವಿರುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    4 hrs ago
  • ಬಳ್ಳಾರಿಯ ಅಭಿವೃದ್ಧಿ ಹರಿಕಾರರು ಹಾಗೂ ಮಾಜಿ ಶಾಸಕರಾದ ಗಾಲಿ ಸೋಮಶೇಖರ್ ರೆಡ್ಡಿ ಅವರ ಜನ್ಮದಿನದ ಅಂಗವಾಗಿ, ಯುವ ಮುಖಂಡ ಹುಂಡೇಕರ್ ರಾಜೇಶ್ ಅವರ ನೇತೃತ್ವದಲ್ಲಿ ಕೊಲ್ಮಿ ಚೌಕ್ ವೃತ್ತ ಮತ್ತು ದೊಡ್ಡ ಮಾರ್ಕೆಟ್ ರಸ್ತೆಯಲ್ಲಿ ವಿಶೇಷ ಅನ್ನದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಗಾಲಿ ಸೋಮಶೇಖರ್ ರೆಡ್ಡಿ ಅವರು ಸ್ವತಃ ಆಗಮಿಸಿ ಚಾಲನೆ ನೀಡಿದರು ಹಾಗೂ ಸಾರ್ವಜನಿಕರೊಂದಿಗೆ ತಮ್ಮ ಜನ್ಮದಿನದ ಸಂಭ್ರಮವನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಸಾವಿರಾರು ಮಂದಿಗೆ ಅನ್ನದಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸ್ವಾಮಿ ನಾಯಕ್, ರಾಮಲಿ ನಾಯಕ್, ಹುಂಡೇಕರ್ ರಾಕೇಶ್, ದುರ್ಗಪ್ಪ, ಗಾದಿಲಿಂಗ, ರಾಮರೆಡ್ಡಿ, ದೇವರಾಜ್, ಹೊನ್ನೂರ್ ಸ್ವಾಮಿ, ಪವನ, ವಿನೋದ, ಜಗ್ಗ, ಮೆಹಬೂಬ್ ಸೇರಿದಂತೆ ಅನೇಕ ಮುಖಂಡರು ಹಾಗೂ ನೂರಾರು ಅಭಿಮಾನಿಗಳು ಭಾಗವಹಿಸಿ ಗಾಲಿ ಸೋಮಶೇಖರ್ ರೆಡ್ಡಿ ಅವರಿಗೆ ಶುಭಾಶಯ ಕೋರಿದರು.
    1
    ಬಳ್ಳಾರಿಯ ಅಭಿವೃದ್ಧಿ ಹರಿಕಾರರು ಹಾಗೂ ಮಾಜಿ ಶಾಸಕರಾದ ಗಾಲಿ ಸೋಮಶೇಖರ್ ರೆಡ್ಡಿ ಅವರ ಜನ್ಮದಿನದ ಅಂಗವಾಗಿ, ಯುವ ಮುಖಂಡ ಹುಂಡೇಕರ್ ರಾಜೇಶ್ ಅವರ ನೇತೃತ್ವದಲ್ಲಿ ಕೊಲ್ಮಿ ಚೌಕ್ ವೃತ್ತ ಮತ್ತು ದೊಡ್ಡ ಮಾರ್ಕೆಟ್ ರಸ್ತೆಯಲ್ಲಿ ವಿಶೇಷ ಅನ್ನದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಗಾಲಿ ಸೋಮಶೇಖರ್ ರೆಡ್ಡಿ ಅವರು ಸ್ವತಃ ಆಗಮಿಸಿ ಚಾಲನೆ ನೀಡಿದರು ಹಾಗೂ ಸಾರ್ವಜನಿಕರೊಂದಿಗೆ ತಮ್ಮ ಜನ್ಮದಿನದ ಸಂಭ್ರಮವನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಸಾವಿರಾರು ಮಂದಿಗೆ ಅನ್ನದಾನ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಸ್ವಾಮಿ ನಾಯಕ್, ರಾಮಲಿ ನಾಯಕ್, ಹುಂಡೇಕರ್ ರಾಕೇಶ್, ದುರ್ಗಪ್ಪ, ಗಾದಿಲಿಂಗ, ರಾಮರೆಡ್ಡಿ, ದೇವರಾಜ್, ಹೊನ್ನೂರ್ ಸ್ವಾಮಿ, ಪವನ, ವಿನೋದ, ಜಗ್ಗ, ಮೆಹಬೂಬ್ ಸೇರಿದಂತೆ ಅನೇಕ ಮುಖಂಡರು ಹಾಗೂ ನೂರಾರು ಅಭಿಮಾನಿಗಳು ಭಾಗವಹಿಸಿ ಗಾಲಿ ಸೋಮಶೇಖರ್ ರೆಡ್ಡಿ ಅವರಿಗೆ ಶುಭಾಶಯ ಕೋರಿದರು.
    user_A News24Kannada
    A News24Kannada
    Newsagent Ballari, Karnataka•
    13 hrs ago
  • ಗದಗ ಜಿಲ್ಲೆಯ ಕದಡಿ ಗ್ರಾಮದ ಮಲ್ಲಯ್ಯಜ್ಜನ ಕಟ್ಟೆ ಹತ್ತಿರ ಶನಿವಾರ ಬೆಳಿಗ್ಗೆ ಜನದಟ್ಟಣೆಯಿರುವ ವಸತಿ ಪ್ರದೇಶದಲ್ಲಿ ಬೃಹತ್ ನಾಗರ ಹಾವೊಂದು ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಮೂಡಿಸಿದೆ. ಹಾವು ಸಳ ಸಳನೆ ಬರುತ್ತಿರುವುದನ್ನು ಕಂಡ ಸಾರ್ವಜನಿಕರು ಭಯಭೀತರಾಗಿ ಕೆಲ ಹೊತ್ತು ನಿಂತು ನೋಡುತ್ತಿದ್ದರು. ಈ ವೇಳೆ, ಕೆಲವರು ಇದು ದೇವರ ಹಾವಿರಬಹುದೇ ಎಂದು ಪರಸ್ಪರ ಚರ್ಚಿಸತೊಡಗಿದರು. ತಕ್ಷಣವೇ ಅಲ್ಲಿಯೇ ಇದ್ದವರು ಒಬ್ಬ ಹಾವು ಹಿಡಿಯುವ ವ್ಯಕ್ತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮಾಹಿತಿ ತಿಳಿದು ಧಾವಿಸಿದ ಉರಗ ರಕ್ಷಕರು, ಮಣ್ಣಿನ ಗೋಡೆಯಲ್ಲಿ ಅಡಗಿಕೊಂಡಿದ್ದ ಹಾವನ್ನು ಹೊರಗೆಳೆದು ಜೀವಂತವಾಗಿ ಸೆರೆ ಹಿಡಿದು ನಂತರ ಅದನ್ನು ಹೊರ ವಲಯದಲ್ಲಿ ಬಿಟ್ಟು ಹೋಗಿದ್ದಾರೆ. ಈ ಪ್ರಸಂಗ ಗ್ರಾಮಸ್ಥರ ನಡುವೆ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉರಗ ರಕ್ಷಕರು, ಎಲ್ಲಿಯೇ ಹಾವು ಕಂಡರೂ ಯಾರೂ ಅವುಗಳನ್ನು ಬಡಿಯಬಾರದು, ಬದಲಿಗೆ ಉರಗ ರಕ್ಷಕರಿಗೆ ಅಥವಾ ಅರಣ್ಯ ಇಲಾಖೆಯವರಿಗೆ ತಿಳಿಸಿ ಅವುಗಳ ರಕ್ಷಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ. ಈ ಘಟನೆ ನಡೆದಾಗ ಗ್ರಾಮಸ್ಥರಾದ ಅಜ್ಜು ರಾಜೇಖಾನ್, ಪ್ರಕಾಶ ಕಮ್ಮಾರ, ಪ್ರವೀಣ ಚೋಳಪ್ಪನವರ, ನಬಿಸಾಬ ರಾಜೇಖಾನ ಸೇರಿದಂತೆ ಇತರರು ಉಪಸ್ಥಿತರಿದ್ದರು.
    2
    ಗದಗ ಜಿಲ್ಲೆಯ ಕದಡಿ ಗ್ರಾಮದ ಮಲ್ಲಯ್ಯಜ್ಜನ ಕಟ್ಟೆ ಹತ್ತಿರ ಶನಿವಾರ ಬೆಳಿಗ್ಗೆ ಜನದಟ್ಟಣೆಯಿರುವ ವಸತಿ ಪ್ರದೇಶದಲ್ಲಿ ಬೃಹತ್ ನಾಗರ ಹಾವೊಂದು ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಮೂಡಿಸಿದೆ. ಹಾವು ಸಳ ಸಳನೆ ಬರುತ್ತಿರುವುದನ್ನು ಕಂಡ ಸಾರ್ವಜನಿಕರು ಭಯಭೀತರಾಗಿ ಕೆಲ ಹೊತ್ತು ನಿಂತು ನೋಡುತ್ತಿದ್ದರು. ಈ ವೇಳೆ, ಕೆಲವರು ಇದು ದೇವರ ಹಾವಿರಬಹುದೇ ಎಂದು ಪರಸ್ಪರ ಚರ್ಚಿಸತೊಡಗಿದರು.

ತಕ್ಷಣವೇ ಅಲ್ಲಿಯೇ ಇದ್ದವರು ಒಬ್ಬ ಹಾವು ಹಿಡಿಯುವ ವ್ಯಕ್ತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮಾಹಿತಿ ತಿಳಿದು ಧಾವಿಸಿದ ಉರಗ ರಕ್ಷಕರು, ಮಣ್ಣಿನ ಗೋಡೆಯಲ್ಲಿ ಅಡಗಿಕೊಂಡಿದ್ದ ಹಾವನ್ನು ಹೊರಗೆಳೆದು ಜೀವಂತವಾಗಿ ಸೆರೆ ಹಿಡಿದು ನಂತರ ಅದನ್ನು ಹೊರ ವಲಯದಲ್ಲಿ ಬಿಟ್ಟು ಹೋಗಿದ್ದಾರೆ. ಈ ಪ್ರಸಂಗ ಗ್ರಾಮಸ್ಥರ ನಡುವೆ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉರಗ ರಕ್ಷಕರು, ಎಲ್ಲಿಯೇ ಹಾವು ಕಂಡರೂ ಯಾರೂ ಅವುಗಳನ್ನು ಬಡಿಯಬಾರದು, ಬದಲಿಗೆ ಉರಗ ರಕ್ಷಕರಿಗೆ ಅಥವಾ ಅರಣ್ಯ ಇಲಾಖೆಯವರಿಗೆ ತಿಳಿಸಿ ಅವುಗಳ ರಕ್ಷಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ. ಈ ಘಟನೆ ನಡೆದಾಗ ಗ್ರಾಮಸ್ಥರಾದ ಅಜ್ಜು ರಾಜೇಖಾನ್, ಪ್ರಕಾಶ ಕಮ್ಮಾರ, ಪ್ರವೀಣ ಚೋಳಪ್ಪನವರ, ನಬಿಸಾಬ ರಾಜೇಖಾನ ಸೇರಿದಂತೆ ಇತರರು ಉಪಸ್ಥಿತರಿದ್ದರು.
    user_ಪ್ರಕಾಶ ಗುದ್ನೇಪ್ಪನವರ.
    ಪ್ರಕಾಶ ಗುದ್ನೇಪ್ಪನವರ.
    Local News Reporter ಗದಗ, ಗದಗ, ಕರ್ನಾಟಕ•
    12 hrs ago
  • ಕನ್ನಡ ಚಿತ್ರರಂಗದ ಚಲನಚಿತ್ರ ನಟ ಹಾಗೂ ಹೋರಾಟಗಾರ ಚೇತನ್ ಅವರು ಇಳಕಲ್ ನಗರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಕರ್ನಾಟಕದಲ್ಲಿ ಹೊಸ ಪಕ್ಷ ಸ್ಥಾಪನೆ ಕುರಿತು ಸುದ್ದಿಗೋಷ್ಠಿ ನಡೆಸಿದರು. ಅವರ ಆಗಮನದ ಹಿನ್ನೆಲೆಯಲ್ಲಿ, ಚೇತನ್ ಅವರ ಅಭಿಮಾನಿಗಳು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ತಮ್ಮ ಅಭಿಮಾನ ಮೆರೆದರು. ಈ ಕಾರ್ಯಕ್ರಮದಲ್ಲಿ ಅವರ ಎಲ್ಲ ಅಭಿಮಾನಿಗಳು ಉಪಸ್ಥಿತರಿದ್ದರು.
    4
    ಕನ್ನಡ ಚಿತ್ರರಂಗದ ಚಲನಚಿತ್ರ ನಟ ಹಾಗೂ ಹೋರಾಟಗಾರ ಚೇತನ್ ಅವರು ಇಳಕಲ್ ನಗರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಕರ್ನಾಟಕದಲ್ಲಿ ಹೊಸ ಪಕ್ಷ ಸ್ಥಾಪನೆ ಕುರಿತು ಸುದ್ದಿಗೋಷ್ಠಿ ನಡೆಸಿದರು. ಅವರ ಆಗಮನದ ಹಿನ್ನೆಲೆಯಲ್ಲಿ, ಚೇತನ್ ಅವರ ಅಭಿಮಾನಿಗಳು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ತಮ್ಮ ಅಭಿಮಾನ ಮೆರೆದರು. ಈ ಕಾರ್ಯಕ್ರಮದಲ್ಲಿ ಅವರ ಎಲ್ಲ ಅಭಿಮಾನಿಗಳು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    13 hrs ago
  • ಚಿತ್ರದುರ್ಗ ಜಿಲ್ಲೆಯಲ್ಲಿ ನೀಟ್ ಪರೀಕ್ಷೆ ಬಿಗಿ ಭದ್ರತೆಯೊಂದಿಗೆ ಪ್ರಾರಂಭಗೊಂಡಿದೆ. ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಅಂತಿಮ ಹಂತದ ಸಿದ್ಧತೆಗಳ ಕುರಿತು ನೋಡಲ್ ಅಧಿಕಾರಿ ನಾಗಭೂಷಣ್ ಪ್ರತಿಕ್ರಿಯೆ ನೀಡಿದ್ದು, ಚಿತ್ರದುರ್ಗದಲ್ಲಿ ನೀಟ್ ಪರೀಕ್ಷೆಯನ್ನು ಬಿಗಿ ಭದ್ರತೆಯೊಂದಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3086 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಅಲ್ಲದೆ, ಚಿತ್ರದುರ್ಗದಲ್ಲಿ ಆರು ಕೇಂದ್ರಗಳು ಮತ್ತು ಚಳ್ಳಕೆರೆ ತಾಲ್ಲೂಕಿನಲ್ಲಿ ಆರು ಕೇಂದ್ರಗಳು ಸೇರಿದಂತೆ ಒಟ್ಟು ಹನ್ನೆರಡು ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ ಎಂದು ನಾಗಭೂಷಣ್ ಸ್ಪಷ್ಟಪಡಿಸಿದ್ದಾರೆ.
    1
    ಚಿತ್ರದುರ್ಗ ಜಿಲ್ಲೆಯಲ್ಲಿ ನೀಟ್ ಪರೀಕ್ಷೆ ಬಿಗಿ ಭದ್ರತೆಯೊಂದಿಗೆ ಪ್ರಾರಂಭಗೊಂಡಿದೆ. ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ಅಂತಿಮ ಹಂತದ ಸಿದ್ಧತೆಗಳ ಕುರಿತು ನೋಡಲ್ ಅಧಿಕಾರಿ ನಾಗಭೂಷಣ್ ಪ್ರತಿಕ್ರಿಯೆ ನೀಡಿದ್ದು, ಚಿತ್ರದುರ್ಗದಲ್ಲಿ ನೀಟ್ ಪರೀಕ್ಷೆಯನ್ನು ಬಿಗಿ ಭದ್ರತೆಯೊಂದಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3086 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಅಲ್ಲದೆ, ಚಿತ್ರದುರ್ಗದಲ್ಲಿ ಆರು ಕೇಂದ್ರಗಳು ಮತ್ತು ಚಳ್ಳಕೆರೆ ತಾಲ್ಲೂಕಿನಲ್ಲಿ ಆರು ಕೇಂದ್ರಗಳು ಸೇರಿದಂತೆ ಒಟ್ಟು ಹನ್ನೆರಡು ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದೆ ಎಂದು ನಾಗಭೂಷಣ್ ಸ್ಪಷ್ಟಪಡಿಸಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    27 min ago
  • ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಉಜ್ಜಿನಿ ಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ವಿಶ್ವಗುರು ಬಸವಣ್ಣನವರ ಜಯಂತಿ ಹಾಗೂ ದಿ. ಡಿ. ಸುಧಾಕರ್ ಅವರ ನುಡಿನಮನ ಕಾರ್ಯಕ್ರಮವನ್ನು ನಗರಂಗೆರೆ ಗ್ರಾಮಪಂಚಾಯಿತಿ ಮತ್ತು ಮೂರ್ತಿ ಇಂಎಸ್ಟೀಸ್ ಅಂಡ್ ಡೆವಲಪ್ಪರ್ಸ್ ಗ್ರೂಪ್ ವತಿಯಿಂದ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಮುಲು ಜಿಲ್ಲಾ ನಿರ್ದೇಶಕರಾದ ಬಿ.ಸಿ. ಸಂಜೀವಮೂರ್ತಿ ಅವರು, ಭಾರತದ ಸಂವಿಧಾನವು ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದೆ ಎಂದು ಹೇಳಿದರು. ತಾವು ಇಂದು ಈ ವೇದಿಕೆಯಲ್ಲಿ ನಿಂತು ಮಾತನಾಡುತ್ತಿದ್ದೇವೆ ಎಂದರೆ ಅದು ಡಾ. ಬಿ.ಆರ್. ಅಂಬೇಡ್ಕರ್ ಅವರ ದೊಡ್ಡ ಕೊಡುಗೆ ಎಂದು ಸಂಜೀವಮೂರ್ತಿ ನುಡಿದರು. ಡಾ. ಅಂಬೇಡ್ಕರ್ ಅವರು ಭಾರತೀಯ ಸಂವಿಧಾನದ ಶಿಲ್ಪಿ, ಶ್ರೇಷ್ಠ ಸಮಾಜ ಸುಧಾರಕ ಹಾಗೂ ಅರ್ಥಶಾಸ್ತ್ರಜ್ಞರಾಗಿದ್ದು, ಭಾರತದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಗೆ ಅವರ ಕೊಡುಗೆಗಳು ಅಪಾರವಾಗಿವೆ. ಅಂದು ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನವನ್ನು ರಚಿಸದಿದ್ದರೆ, ಇಂದು ಇಂತಹ ಕಾರ್ಯಕ್ರಮಗಳಲ್ಲಿ ನಿಂತು ಮಾತನಾಡಲು ಅವಕಾಶ ಸಿಗುತ್ತಿರಲಿಲ್ಲ. ಅವರು ಭಾರತೀಯ ಸಂವಿಧಾನದ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ೧೨ನೇ ಶತಮಾನದ ಶರಣರ ಕ್ರಾಂತಿಯ ಹರಿಕಾರ ಬಸವಣ್ಣನವರ ಸಿದ್ಧಾಂತವನ್ನು ಸ್ಮರಿಸಲಾಯಿತು. ಅವರ ತತ್ವಗಳು ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಮೇಲೆ ಆಧಾರಿತವಾಗಿವೆ. ಬಸವಣ್ಣನವರ ಮುಖ್ಯ ಗುರಿ ಜಾತಿ-ಭೇದ ಮತ್ತು ಲಿಂಗ ತಾರತಮ್ಯವನ್ನು ವಿರೋಧಿಸಿ, ಪ್ರತಿಯೊಬ್ಬರಿಗೂ ಸಮಾನವಾದ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಹಕ್ಕುಗಳನ್ನು ಒದಗಿಸುವುದಾಗಿತ್ತು. ಅವರು ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ಬಲವಾಗಿ ವಿರೋಧಿಸಿ, ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ, ನಡತೆಯಿಂದಲೇ ವ್ಯಕ್ತಿಯ ಮೌಲ್ಯ ನಿರ್ಧಾರವಾಗುತ್ತದೆ ಎಂದು ಪ್ರತಿಪಾದಿಸಿದರು. ಪ್ರತಿಯೊಬ್ಬರೂ ತಮ್ಮದೇ ಆದ ಪ್ರಾಮಾಣಿಕ ಕಾಯಕ ಮಾಡಬೇಕು, ದುಡಿಮೆಯೇ ದೈವತ್ವಕ್ಕೆ ಸಮಾನ ಎಂಬುದು ಬಸವಣ್ಣನವರ ನಂಬಿಕೆಯಾಗಿತ್ತು. ದಿ. ಡಿ. ಸುಧಾಕರ್ ಅವರು ಉತ್ತಮ ರಾಜಕಾರಣಿಯಾಗಿದ್ದರು ಮತ್ತು ಬಡ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ ರಾಜಕೀಯ ನಾಯಕರಾಗಿದ್ದರು ಎಂದು ಇದೇ ಸಂದರ್ಭದಲ್ಲಿ ನೆನಪಿಸಿಕೊಳ್ಳಲಾಯಿತು. ಈ ಮಹನೀಯರ ಜಯಂತಿ ಪ್ರಯುಕ್ತ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಆಟೋ ಹಾಗೂ ಟ್ರ್ಯಾಕ್ಟರ್ ಚಾಲಕರಿಗೆ ಉಚಿತವಾಗಿ ವಾಹನ ಚಾಲನಾ ಪರವಾನಗಿ ಕೊಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಆದಿಜಾಂಬುವಂತ ಮಠದ ಷಡಾಕ್ಷರಿಮುನಿ ಸ್ವಾಮೀಜಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್ ಕವಿ ಕೊರ್ಲಕುಂಟೆ ತಿಪ್ಪೇದಸ್ವಾಮಿ, ಬಿ.ಸಿ. ಸತೀಶ್ ಕುಮಾರ್, ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    1
    ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಉಜ್ಜಿನಿ ಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ವಿಶ್ವಗುರು ಬಸವಣ್ಣನವರ ಜಯಂತಿ ಹಾಗೂ ದಿ. ಡಿ. ಸುಧಾಕರ್ ಅವರ ನುಡಿನಮನ ಕಾರ್ಯಕ್ರಮವನ್ನು ನಗರಂಗೆರೆ ಗ್ರಾಮಪಂಚಾಯಿತಿ ಮತ್ತು ಮೂರ್ತಿ ಇಂಎಸ್ಟೀಸ್ ಅಂಡ್ ಡೆವಲಪ್ಪರ್ಸ್ ಗ್ರೂಪ್ ವತಿಯಿಂದ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಮುಲು ಜಿಲ್ಲಾ ನಿರ್ದೇಶಕರಾದ ಬಿ.ಸಿ. ಸಂಜೀವಮೂರ್ತಿ ಅವರು, ಭಾರತದ ಸಂವಿಧಾನವು ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದೆ ಎಂದು ಹೇಳಿದರು.

ತಾವು ಇಂದು ಈ ವೇದಿಕೆಯಲ್ಲಿ ನಿಂತು ಮಾತನಾಡುತ್ತಿದ್ದೇವೆ ಎಂದರೆ ಅದು ಡಾ. ಬಿ.ಆರ್. ಅಂಬೇಡ್ಕರ್ ಅವರ ದೊಡ್ಡ ಕೊಡುಗೆ ಎಂದು ಸಂಜೀವಮೂರ್ತಿ ನುಡಿದರು. ಡಾ. ಅಂಬೇಡ್ಕರ್ ಅವರು ಭಾರತೀಯ ಸಂವಿಧಾನದ ಶಿಲ್ಪಿ, ಶ್ರೇಷ್ಠ ಸಮಾಜ ಸುಧಾರಕ ಹಾಗೂ ಅರ್ಥಶಾಸ್ತ್ರಜ್ಞರಾಗಿದ್ದು, ಭಾರತದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಗೆ ಅವರ ಕೊಡುಗೆಗಳು ಅಪಾರವಾಗಿವೆ. ಅಂದು ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನವನ್ನು ರಚಿಸದಿದ್ದರೆ, ಇಂದು ಇಂತಹ ಕಾರ್ಯಕ್ರಮಗಳಲ್ಲಿ ನಿಂತು ಮಾತನಾಡಲು ಅವಕಾಶ ಸಿಗುತ್ತಿರಲಿಲ್ಲ. ಅವರು ಭಾರತೀಯ ಸಂವಿಧಾನದ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ೧೨ನೇ ಶತಮಾನದ ಶರಣರ ಕ್ರಾಂತಿಯ ಹರಿಕಾರ ಬಸವಣ್ಣನವರ ಸಿದ್ಧಾಂತವನ್ನು ಸ್ಮರಿಸಲಾಯಿತು. ಅವರ ತತ್ವಗಳು ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಮೇಲೆ ಆಧಾರಿತವಾಗಿವೆ. ಬಸವಣ್ಣನವರ ಮುಖ್ಯ ಗುರಿ ಜಾತಿ-ಭೇದ ಮತ್ತು ಲಿಂಗ ತಾರತಮ್ಯವನ್ನು ವಿರೋಧಿಸಿ, ಪ್ರತಿಯೊಬ್ಬರಿಗೂ ಸಮಾನವಾದ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಹಕ್ಕುಗಳನ್ನು ಒದಗಿಸುವುದಾಗಿತ್ತು. ಅವರು ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ಬಲವಾಗಿ ವಿರೋಧಿಸಿ, ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ, ನಡತೆಯಿಂದಲೇ ವ್ಯಕ್ತಿಯ ಮೌಲ್ಯ ನಿರ್ಧಾರವಾಗುತ್ತದೆ ಎಂದು ಪ್ರತಿಪಾದಿಸಿದರು. ಪ್ರತಿಯೊಬ್ಬರೂ ತಮ್ಮದೇ ಆದ ಪ್ರಾಮಾಣಿಕ ಕಾಯಕ ಮಾಡಬೇಕು, ದುಡಿಮೆಯೇ ದೈವತ್ವಕ್ಕೆ ಸಮಾನ ಎಂಬುದು ಬಸವಣ್ಣನವರ ನಂಬಿಕೆಯಾಗಿತ್ತು.

ದಿ. ಡಿ. ಸುಧಾಕರ್ ಅವರು ಉತ್ತಮ ರಾಜಕಾರಣಿಯಾಗಿದ್ದರು ಮತ್ತು ಬಡ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ ರಾಜಕೀಯ ನಾಯಕರಾಗಿದ್ದರು ಎಂದು ಇದೇ ಸಂದರ್ಭದಲ್ಲಿ ನೆನಪಿಸಿಕೊಳ್ಳಲಾಯಿತು. ಈ ಮಹನೀಯರ ಜಯಂತಿ ಪ್ರಯುಕ್ತ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಆಟೋ ಹಾಗೂ ಟ್ರ್ಯಾಕ್ಟರ್ ಚಾಲಕರಿಗೆ ಉಚಿತವಾಗಿ ವಾಹನ ಚಾಲನಾ ಪರವಾನಗಿ ಕೊಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಆದಿಜಾಂಬುವಂತ ಮಠದ ಷಡಾಕ್ಷರಿಮುನಿ ಸ್ವಾಮೀಜಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್ ಕವಿ ಕೊರ್ಲಕುಂಟೆ ತಿಪ್ಪೇದಸ್ವಾಮಿ, ಬಿ.ಸಿ. ಸತೀಶ್ ಕುಮಾರ್, ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಜುಲೈ 1 ರಂದು ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪಟ್ಟಣದ ಹಿರೇಮಠ ವಿದ್ಯಾಪೀಠ ಸಂಯುಕ್ತ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸ್ವಚ್ಛತಾ ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ ಮಾಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ, ವಿವಿಧ ಜಿಲ್ಲೆ ಮತ್ತು ತಾಲೂಕುಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ. ಅಲ್ಲದೆ, ನಾಗರಿಕರು, ಗಣ್ಯರು, ತಾಲೂಕಿನ ಪತ್ರಕರ್ತರು, ವಿವಿಧ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಆಡಳಿತ ಅಧಿಕಾರಿಗಳು, ಪೌರಕಾರ್ಮಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಮತ್ತು ಸಾರ್ವಜನಿಕರು ಸಹ ಪಾಲ್ಗೊಳ್ಳಲಿದ್ದಾರೆ.
    3
    ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಜುಲೈ 1 ರಂದು ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪಟ್ಟಣದ ಹಿರೇಮಠ ವಿದ್ಯಾಪೀಠ ಸಂಯುಕ್ತ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸ್ವಚ್ಛತಾ ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ ಮಾಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ, ವಿವಿಧ ಜಿಲ್ಲೆ ಮತ್ತು ತಾಲೂಕುಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ. ಅಲ್ಲದೆ, ನಾಗರಿಕರು, ಗಣ್ಯರು, ತಾಲೂಕಿನ ಪತ್ರಕರ್ತರು, ವಿವಿಧ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಆಡಳಿತ ಅಧಿಕಾರಿಗಳು, ಪೌರಕಾರ್ಮಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಮತ್ತು ಸಾರ್ವಜನಿಕರು ಸಹ ಪಾಲ್ಗೊಳ್ಳಲಿದ್ದಾರೆ.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    5 hrs ago
  • ಬಾದಾಮಿ ತಾಲೂಕಿನ ಕೆರೂರ್ ಪೊಲೀಸ್ ಠಾಣಾ ವ್ಯಾಪ್ತಿಯ ನರನೂರ ತಾಂಡಾ ಗ್ರಾಮದಲ್ಲಿ ಎಂಟನೇ ತರಗತಿ ಓದುತ್ತಿರುವ ಪ್ರಜ್ವಲ್ ಕುಮಾರ್ ಚವಾಣ್ ಎಂಬ ಅನಾಥ ವಿದ್ಯಾರ್ಥಿಯ ಮೇಲೆ ಭೀಕರ ಹಲ್ಲೆ ನಡೆದಿದೆ. ಕ್ರಿಕೆಟ್ ಆಡುವ ಸಂದರ್ಭದಲ್ಲಿ ಚಂಡು ಓರ್ವ ಅಜ್ಜಿಗೆ ತಗುಲಿದ ಕಾರಣ, ಆ ಅಜ್ಜಿಯ ಕುಟುಂಬಸ್ಥರು ವಿದ್ಯಾರ್ಥಿಯನ್ನು ಕಟ್ಟಿ ಹಾಕಿ ಚಪ್ಪಲಿ ಮತ್ತು ಕೈಗಳಿಂದ ಹಲ್ಲೆ ಮಾಡಿದ್ದಾರೆ. ಮೂಲಗಳ ಪ್ರಕಾರ, ಈ ಮಗು ತಂದೆ-ತಾಯಿ ಇಲ್ಲದ ಅನಾಥನಾಗಿದ್ದಾನೆ. ಈ ಹಲ್ಲೆಯಿಂದ ಗಾಯಗೊಂಡ ಮಗು ಸದ್ಯ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿನ ಪೋಷಕರು ಈ ಘಟನೆಯ ಬಗ್ಗೆ ತಕ್ಷಣ ವಿಚಾರಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಸೂಕ್ತ ದೂರು ಸಲ್ಲಿಸುವಂತೆ ಆಗ್ರಹಿಸಿದ್ದಾರೆ.
    3
    ಬಾದಾಮಿ ತಾಲೂಕಿನ ಕೆರೂರ್ ಪೊಲೀಸ್ ಠಾಣಾ ವ್ಯಾಪ್ತಿಯ ನರನೂರ ತಾಂಡಾ ಗ್ರಾಮದಲ್ಲಿ ಎಂಟನೇ ತರಗತಿ ಓದುತ್ತಿರುವ ಪ್ರಜ್ವಲ್ ಕುಮಾರ್ ಚವಾಣ್ ಎಂಬ ಅನಾಥ ವಿದ್ಯಾರ್ಥಿಯ ಮೇಲೆ ಭೀಕರ ಹಲ್ಲೆ ನಡೆದಿದೆ. ಕ್ರಿಕೆಟ್ ಆಡುವ ಸಂದರ್ಭದಲ್ಲಿ ಚಂಡು ಓರ್ವ ಅಜ್ಜಿಗೆ ತಗುಲಿದ ಕಾರಣ, ಆ ಅಜ್ಜಿಯ ಕುಟುಂಬಸ್ಥರು ವಿದ್ಯಾರ್ಥಿಯನ್ನು ಕಟ್ಟಿ ಹಾಕಿ ಚಪ್ಪಲಿ ಮತ್ತು ಕೈಗಳಿಂದ ಹಲ್ಲೆ ಮಾಡಿದ್ದಾರೆ. ಮೂಲಗಳ ಪ್ರಕಾರ, ಈ ಮಗು ತಂದೆ-ತಾಯಿ ಇಲ್ಲದ ಅನಾಥನಾಗಿದ್ದಾನೆ.

ಈ ಹಲ್ಲೆಯಿಂದ ಗಾಯಗೊಂಡ ಮಗು ಸದ್ಯ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿನ ಪೋಷಕರು ಈ ಘಟನೆಯ ಬಗ್ಗೆ ತಕ್ಷಣ ವಿಚಾರಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಸೂಕ್ತ ದೂರು ಸಲ್ಲಿಸುವಂತೆ ಆಗ್ರಹಿಸಿದ್ದಾರೆ.
    user_ಮುತ್ತಣ್ಣ ಯರಗೊಪ್ಪ, ಬಾದಾಮಿ
    ಮುತ್ತಣ್ಣ ಯರಗೊಪ್ಪ, ಬಾದಾಮಿ
    Local News Reporter ಬಾದಾಮಿ, ಬಾಗಲಕೋಟೆ, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.