Shuru
Apke Nagar Ki App…
BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...! BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...!
Veega News Kannada
BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...! BESCOM| ಅದು ನಮ್ಮದಲ್ಲ ನಾವು ಮಾಡಿಲ್ಲ ಕೆಪಿಟಿಸಿಎಲ್ ಅವರನ್ನ ಕೇಳಿ ಅಂತಾರೆ...!
More news from ಕರ್ನಾಟಕ and nearby areas
- ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಕಪ್ಪು ಬಾವುಟ ಪ್ರದರ್ಶನ ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದನ್ನು ಖಂಡಿಸಿ ಹಾಗೂ ಕರ್ನಾಟಕದ ವಿವಿಧ ಕನ್ನಡಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದ ಸಮೀಪ ಕಪ್ಪು ಬಾವುಟ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಲಿರುವ ವಾಟಾಳ್ ನಾಗರಾಜ್ ಅವರು, "ಕನ್ನಡಿಗರ ಕಣ್ಣೀರು ಕಾವೇರಿ ನೀರು. ರಾಜ್ಯದಲ್ಲೇ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಕಾವೇರಿ ನೀರು ನಿರ್ವಹಣಾ ಮಂಡಳಿಯ ತೀರ್ಪನ್ನು ಕರ್ನಾಟಕ ತೀವ್ರವಾಗಿ ತಿರಸ್ಕರಿಸಬೇಕು" ಎಂದು ಆಗ್ರಹಿಸಲಿದ್ದಾರೆ. ಪ್ರತಿಭಟನೆಯಲ್ಲಿ ಮಂಡಿಸಲಾಗುತ್ತಿರುವ ಪ್ರಮುಖ ಬೇಡಿಕೆಗಳು ಹೀಗಿವೆ: - ಕಾವೇರಿ ನೀರು ನಿರ್ವಹಣಾ ಮಂಡಳಿಯ ತೀರ್ಪು ತಿರಸ್ಕರಿಸಬೇಕು. - ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಬಾರದು. - ಮೇಕೆದಾಟು ಯೋಜನೆಯನ್ನು ತಕ್ಷಣ ಜಾರಿಗೊಳಿಸಬೇಕು. - ಮಹಾದಾಯಿ–ಕಳಸ ಬಂಡೂರಿ ಯೋಜನೆ ಕಾರ್ಯಗತಗೊಳಿಸಬೇಕು. - ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಬೆಳಗಾವಿ ಮಹಾನಗರ ಪಾಲಿಕೆ ಅಂಗೀಕರಿಸಬೇಕು. - ಎಂ.ಇ.ಎಸ್. ಸಂಘಟನೆಯನ್ನು ನಿಷೇಧಿಸಬೇಕು. - ಗಡಿನಾಡು ಬೆಳಗಾವಿ ಹಾಗೂ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. - ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು ಹಾಗೂ ಬ್ಯಾಂಕ್‌ಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಬೇಕು. - ಕನ್ನಡ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಸರ್ಕಾರಿ ಶಾಲೆಗಳನ್ನು ಖಾಸಗೀಕರಣ ಮಾಡಬಾರದು. - ಗಡಿನಾಡಿನ ಕನ್ನಡ ಶಾಲೆಗಳಿಗೆ ವಾರ್ಷಿಕ ₹500 ಕೋಟಿ ಅನುದಾನ ನೀಡಬೇಕು. - ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಬೇಕು. - ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಿ, ಪರಭಾಷೆಗಳ ದಬ್ಬಾಳಿಕೆಯನ್ನು ತಡೆಯಬೇಕು. - ಬಿಡದಿ ಉಪನಗರ ಯೋಜನೆ ಕೈಬಿಡಬೇಕು ಹಾಗೂ ಆನೇಕಲ್ ಮತ್ತು ಬಿಡದಿ ರೈತರ ಜಮೀನು ಸ್ವಾಧೀನ ಪ್ರಕ್ರಿಯೆಯನ್ನು ಹಿಂತೆಗೆದುಕೊಳ್ಳಬೇಕು. - ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಮರ್ಪಕ ಸ್ಥಾನಮಾನ ನೀಡಬೇಕು. - ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. - ಪೊಲೀಸ್ ಸಿಬ್ಬಂದಿಯನ್ನು ಅವರವರ ಮೂಲ ಜಿಲ್ಲೆಗಳಿಗೆ ವರ್ಗಾವಣೆ ಮಾಡಬೇಕು. ಇದೇ ವೇಳೆ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ಮುಂದೂಡಲ್ಪಟ್ಟಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಘೇರಾವ್ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಂಘಟನೆ ತಿಳಿಸಿದೆ. ಈ ಕಪ್ಪು ಬಾವುಟ ಪ್ರದರ್ಶನ ಕಾರ್ಯಕ್ರಮವನ್ನು ವರದಿ ಮಾಡಲು ತಮ್ಮ ಮಾಧ್ಯಮ ಸಂಸ್ಥೆಯ ವರದಿಗಾರರು ಹಾಗೂ ಛಾಯಾಗ್ರಾಹಕರನ್ನು ಕಳುಹಿಸಿಕೊಡುವಂತೆ ಕನ್ನಡ ಚಳವಳಿ ವಾಟಾಳ್ ಪಕ್ಷ ಮನವಿ ಮಾಡಿದೆ.1
- ಡಿಸಿಎಂ ನೀಡುವುದಕ್ಕೆ ಇನ್ನೂ ಕಾಲ ಮಿಂಚಿಲ್ಲ ಕಾದು ನೋಡೋಣ:ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರು:ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ಜನರಿಗೆ ಸಚಿವ ಸ್ಥಾನ ನೀಡಲಾಗಿದೆ .ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ .ಓಬಿಸಿ ಎಸ್ಸಿ ಎಸ್ಟಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ಸಿಕ್ಕಿದೆ.ಹೊಸಬರಿಗೆ ಅವಕಾಶ ಮಾಡಿಕೊಟ್ಟಿರುವುದರಿಂದ ಉಪಯೋಗವಾಗಲಿದೆ .ಡಿಸಿಎಂ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿತ್ತು ನೀಡಿಲ್ಲ ಇನ್ನು ಸಮಯಾವಕಾಶವಿದೆ.ಬೇರೆ ಬೇರೆ ಸಮುದಾಯಗಳಿಗೆ ಡಿಸಿಎಂ ಕೊಡಬೇಕು ಎಂಬುದರ ಬಗ್ಗೆ ಚರ್ಚೆಯಾಗಿತ್ತು.ಡಿಸಿಎಂ ನೀಡುವುದಕ್ಕೆ ಇನ್ನೂ ಕಾಲ ಮಿಂಚಿಲ್ಲ ಕಾದು ನೋಡೋಣ ಎಂದು ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ *ಬಿಜೆಪಿ ಜಿಲ್ಲಾಧ್ಯಕ್ಷರ ಸೀಕಲ್ ರಾಮಚಂದ್ರಗೌಡರಿಂದ ಸುದ್ದಿಗೋಷ್ಠಿ*1
- ಮಳೆ ಕೊರತೆಯಿಂದ ಬೆಳೆ ಹಾನಿ – ಕೊರಟಗೆರೆಯಲ್ಲಿ ರೈತರನ್ನು ಭೇಟಿ ಮಾಡಿ ಪರಿಸ್ಥಿತಿ ಪರಿಶೀಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ" ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ದುರ್ಗದಹಳ್ಳಿ, ವಡ್ಡರಹಳ್ಳಿ ಕ್ರಾಸ್ ಇರಕ ಸಂದ್ರ ಕಾಲೋನಿ ತಣ್ಣೆನಹಳ್ಳಿ ಜೋನಿಗರ ಹಳ್ಳಿ ತೋವಿನಕೆರೆ ಗ್ರಾಮಗಳಿಗೆ ಭೇಟಿ ನೀಡಿ ಮತ್ತು ಎಲೇರಾಂಪುರ ನರಸಿಹಂಗಿರಿ ಕ್ಷೇತ್ರ ಪೀಠಾಧ್ಯಕ್ಷರಾದ ಹನುಮಂತನಾಥಸ್ವಾಮೀಜಿಯವರನ್ನು ಭೇಟಿಮಾಡಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ. ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ರೈತರ ಸಮಸ್ಯೆಗಳನ್ನು ಆಲಿಸಿದರು. ರೈತರೊಂದಿಗೆ ನೇರವಾಗಿ ಸಂವಾದ ನಡೆಸಿದ ಅವರು, ಬೆಳೆ ನಷ್ಟದ ಕುರಿತು ಮಾಹಿತಿ ಪಡೆದು ಹೊಲಗಳ ಪರಿಸ್ಥಿತಿಯನ್ನು ವೀಕ್ಷಿಸಿದರು. ಈ ವೇಳೆ ರೈತರು ಮಳೆ ಅಭಾವದಿಂದ ಬೆಳೆಗಳು ಸಂಪೂರ್ಣವಾಗಿ ಒಣಗಿದ್ದು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದಾಗಿ ತಮ್ಮ ಅಳಲನ್ನು ವ್ಯಕ್ತಪಡಿಸಿದರು. ಸರ್ಕಾರ ತಕ್ಷಣವೇ ಬೆಳೆ ಹಾನಿ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರ ಹಾಗೂ ಪರಿಹಾರ ಧನವನ್ನು ಬಿಡುಗಡೆ ಮಾಡಬೇಕು ಎಂದು ರೈತರು ಮನವಿ ಮಾಡಿದರು. ರೈತರ ಮನವಿಯನ್ನು ಆಲಿಸಿದ ಬಿ.ವೈ. ವಿಜಯೇಂದ್ರ ಅವರು, ರೈತರ ಸಮಸ್ಯೆಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು, ಬೆಳೆ ಹಾನಿಗೆ ತುರ್ತು ಪರಿಹಾರ, ಬರ ಪರಿಹಾರ ಪ್ಯಾಕೇಜ್ ಹಾಗೂ ಅಗತ್ಯ ನೆರವು ನೀಡುವಂತೆ ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ಮತ್ತು ತುಮಕುರು ನಗರ ಶಾಸಕ ಶ್ಯೋತಿ ಗಣೇಶ್ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ರೈತರು ಉಪಸ್ಥಿತರಿದ್ದರು.1
- ಬಂಗಾರಪೇಟೆ ಸಚಿವ ಸ್ಥಾನ ಆಗ್ರಹಿಸಿ ಸ್ವ ಪಕ್ಷದ ವಿರುದ್ಧ ಗುಡುಗಿದ ಕಾಂಗ್ರೆಸ್ ಕಾರ್ಯಕರ್ತರು ಬಂಗಾರಪೇಟೆಯಲ್ಲಿ ಮೂರು ಬಾರಿ ಶಾಸಕರಾಗಿ, ಎರಡು ಬಾರಿ ನಿಗಮ ಮಂಡಳಿಯ ಅಧ್ಯಕ್ಷರಾಗಿ ಅಭಿವೃದ್ಧಿಯ ಪರ್ವಕ್ಕೆ ಮುನ್ನುಡಿ ಬರೆದಿದ್ದ ಶಾಸಕ ಎಸ್. ಎನ್. ನಾರಾಯಣಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡದೆ ವಂಚನೆ ಮಾಡಿದೆ ಎಂದು ಕಾಂಗ್ರೆಸ್ಸಿನ ಮುಖಂಡ ನಿಕಟ ಪೂರ್ವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಚಂದ್ರರೆಡ್ಡಿ ಆಕ್ರೋಶ ಹೊರ ಹಾಕಿದರು.ಪಟ್ಟಣದ ಸಂತೆ ಗೇಟ್ ಬಳಿ ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಶಾಸಕ ಎಸ್. ಎನ್ ನಾರಾಯಣಸ್ವಾಮಿ ರವರಿಗೆ ಸಚಿವ ಸ್ಥಾನ ಆಗ್ರಹಿಸಿ ಕರೆಯಲಾಗಿದ್ದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಅವರು ಶಾಸಕ ಎಸ್. ಎನ್ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ಕಟ್ಟಾಳು ಆಗಿದ್ದು, ಶಾಸಕರಾಗಿ, ನಿಗಮ ಮಂಡಳಿಯ ಅಧ್ಯಕ್ಷರಾಗಿ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ. ಈ ಬಾರಿ ಡಿ. ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವ ಭರವಸೆ ಕ್ಷೇತ್ರದ ಜನರಲ್ಲಿ ಇತ್ತು ಆದರೆ ಕಾಂಗ್ರೆಸ್ ಹೈಕಮಾಂಡ್ ಶಾಸಕರಿಗೆ ವಂಚನೆ ಮಾಡುವುದರ ಮೂಲಕ ಕೈ ತಪ್ಪುವಂತೆ ಮಾಡಿದೆ. ಇದರ ಪರಿಣಾಮ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅವನತಿಯತ್ತ ಸಾಗುತ್ತದೆ ಎಂದು ಹೇಳಿದರು. ಶಾಸಕರ ಮನವಿಗೆ ಸ್ಪಂದಿಸಿದ ಹೈಕಮಾಂಡ್ ಕೋಲಾರ ಜಿಲ್ಲೆಯ ಶಾಸಕರುಗಳಾದ ಕೊತ್ತೂರು ಮಂಜುನಾಥ್, ಮಾಲೂರು ಶಾಸಕ ನಂಜೇಗೌಡ, ಕೆ. ಜಿ.ಎಫ್ ಶಾಸಕಿ ರೂಪಕಲ ಶಶಿಧರ್ ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್, ನಜೀರ್ ಅಹಮ್ಮದ್ ರವರನ್ನು ಒಳಗೊಂಡ ನಿಯೋಗ ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ರವರನ್ನೂ ಭೇಟಿ ಮಾಡಿ ಸಚಿವ ಸಂಪುಟದಲ್ಲಿ ಕೋಲಾರ ಜಿಲ್ಲೆಗೆ ಪ್ರಾತಿನಿತ್ಯ ನೀಡಬೇಕು ಹಾಗೂ ಬಂಗಾರಪೇಟೆ ಕ್ಷೇತ್ರದ ಶಾಸಕ ಎಸ್. ಎನ್ ನಾರಾಯಣಸ್ವಾಮಿ ಅವರು ಮೂರು ಬಾರಿ ಶಾಸಕರಾಗಿದ್ದು ಅವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಮನವಿ ಮಾಡಲಾಗಿತ್ತು. ವಿಪರ್ಯಾಸ ಕಾಂಗ್ರೆಸ್ ಹೈಕಮಾಂಡ್ ಶಾಸಕರ ಮನವಿಗೆ ಸ್ಪಂದಿಸದೆ ನಿರ್ಲಕ್ಷ್ಯ ಧೋರಣೆ ಹೊಂದಿರುವುದು ಸಮಂಜಸವಲ್ಲ ಎಂದರು.1
- ದೇವನಹಳ್ಳಿ ವಿಮಾನ ನಿಕ್ದಾಣಕ್ಕೆ ಬರುತ್ತಲ್ಲೇ ಫೋನ್ ನಲ್ಲಿ ಬ್ಯುಸಿ ಆದ ಸುರ್ಜೇವಾಲ ಬೆಂಗಳೂರು:ರಾಜ್ಯಕ್ಕೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ದೇವನಹಳ್ಳಿ ವಿಮಾನ ನಿಕ್ದಾಣಕ್ಕೆ ಬರುತ್ತಲ್ಲೇ ಫೋನ್ ನಲ್ಲಿ ಬ್ಯುಸಿ ಆಗಿದರು. ಕ್ಷಣ ಕ್ಷಣಕ್ಕೂ ಸಂಪುಟ ಸಚಿವರ ಪಟ್ಟಿ ಬದಲಾವಣೆಯಾಗುತ್ತಿದೆ.ಇದೇ ವಿಚಾರವಾಗಿ ವಿಮಾನ ನಿಲ್ದಾಣಕ್ಕೆ ಬಂದ ಕೂಡಲೇ ಫೋನ್ ನಲ್ಲಿ ಬ್ಯುಸಿಯಾಗಿದ್ದು.ಸಚಿವರ ಪಟ್ಟಿ ಬದಲಾವಣೆ ವಿಚಾರವಾಗಿ ಸುರ್ಜೇವಾಲ ಮಾಹಿತಿ ಪಡೆಯುತ್ತಿದ್ದಾರೆ.ಸಂಪುಟದಲ್ಲಿ ಆಗುತ್ತಾ ಮತ್ತಷ್ಟು ಬದಲಾವಣೆ..? ಎಂಬ ಅನುಮಾನ ಮೂಡಿದೆ.ಎರಡನೇ ಪಟ್ಟಿ ಸಚಿವರಿಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸುರ್ಜೇವಾಲ ಆಗಮಿಸಿದರು.1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುಖ್ಯಮಂತ್ರಿಗಳು ಡಿ ಕೆ ಶಿವಕುಮಾರ್ ಮಾಜಿ ಸಚಿವರ ಬಗ್ಗೆ ಹೇಳಿದ್ದೇನೋ1
- ರಾತ್ರೋರಾತ್ರಿ ಪೊಲೀಸರ ಸ್ಪೆಷಲ್ ಡ್ರೈವ್ – ಪುಂಡರಿಗೆ ಖಡಕ್ ಎಚ್ಚರಿಕೆ ನೀಡಿದ ಡಿವೈಎಸ್ಪಿ ಉಮಾರಾಣಿ ನೆಲಮಂಗಲ ನಗರದಲ್ಲಿ ಹೆಚ್ಚುತ್ತಿರುವ ಗಲಾಟೆ, ಪುಂಡಾಟಿಕೆ ಹಾಗೂ ಸಾರ್ವಜನಿಕ ಶಾಂತಿ ಕದಡುವ ಘಟನೆಗಳ ಹಿನ್ನೆಲೆಯಲ್ಲಿ ಟೌನ್ ಪೊಲೀಸರು ಸೋಮವಾರ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿದರು. ಡಿವೈಎಸ್‌ಪಿ ಉಮಾರಾಣಿ ಅವರ ಮಾರ್ಗದರ್ಶನದಲ್ಲಿ ಟೌನ್ ಪೊಲೀಸ್ ಇನ್ಸ್‌ಪೆಕ್ಟರ್ ಭರತ್ ನೇತೃತ್ವದ ತಂಡ ನಗರದ ವಿವಿಧ ಬಾರ್‌ಗಳು, ಸಾರ್ವಜನಿಕ ಸ್ಥಳಗಳು ಹಾಗೂ ಪ್ರಮುಖ ಪ್ರದೇಶಗಳಲ್ಲಿ ದಿಢೀರ್ ಪರಿಶೀಲನೆ ನಡೆಸಿತು. ಕಾರ್ಯಾಚರಣೆ ವೇಳೆ ಬಾರ್‌ಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯನಿರ್ವಹಣೆ, ಸಿಬ್ಬಂದಿಯ ದಾಖಲೆಗಳು ಹಾಗೂ ಅಪ್ರಾಪ್ತ ವಯಸ್ಕರನ್ನು ಕೆಲಸಕ್ಕೆ ನಿಯೋಜಿಸಿರುವ ಬಗ್ಗೆ ತಪಾಸಣೆ ನಡೆಸಲಾಯಿತು. ಅಲ್ಲದೆ, ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರ ಸುಳಿವಿನ ಹಿನ್ನೆಲೆಯಲ್ಲಿ ಕೆಲ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಲಾಯಿತು. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಪುಡಿ ರೌಡಿಗಳ ಪುಂಡಾಟಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವರನ್ನು ಪೊಲೀಸ್ ಠಾಣೆಗೆ ಕರೆಸಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು. ಮುಂದಿನ ದಿನಗಳಲ್ಲಿ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಸೂಚನೆ ನೀಡಿದ ಪೊಲೀಸರು, ಕಾನೂನು ಸುವ್ಯವಸ್ಥೆ ಕಾಪಾಡಲು ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ತಿಳಿಸಿದರು.1