Shuru
Apke Nagar Ki App…
*"ಶ್ರೀಕೃಷ್ಣ ಜಯಂತಿ” ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಇದೇ 27 ರಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಕರೆಯಲಾಗಿದೆ * ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸೆಪ್ಟೆಂಬರ್ 4 ರಂದು “ಶ್ರೀಕೃಷ್ಣ ಜಯಂತಿ” ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಆಗಸ್ಟ್ 27 ರಂದು ಬೆಳಿಗ್ಗೆ 11.00 ಗಂಟೆಗೆ ಮಾನ್ಯ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ, ಮಾನ್ಯ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಸಭೆಗೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸುತ್ತಿದ್ದು, ಎಲ್ಲಾ ಸಮುದಾಯದ ಹಾಗೂಸಂಘ-ಸಂಸ್ಥೆಗಳ ಮುಖಂಡರು ಹಾಜರಾಗಲು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಎನ್.ಪ್ರಕಾಶ್
*"ಶ್ರೀಕೃಷ್ಣ ಜಯಂತಿ” ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಇದೇ 27 ರಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಕರೆಯಲಾಗಿದೆ * ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸೆಪ್ಟೆಂಬರ್ 4 ರಂದು “ಶ್ರೀಕೃಷ್ಣ ಜಯಂತಿ” ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಆಗಸ್ಟ್ 27 ರಂದು ಬೆಳಿಗ್ಗೆ 11.00 ಗಂಟೆಗೆ ಮಾನ್ಯ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ, ಮಾನ್ಯ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಸಭೆಗೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸುತ್ತಿದ್ದು, ಎಲ್ಲಾ ಸಮುದಾಯದ ಹಾಗೂಸಂಘ-ಸಂಸ್ಥೆಗಳ ಮುಖಂಡರು ಹಾಜರಾಗಲು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More news from Karnataka and nearby areas
- MBBS students felicitation function1
- *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*2
- ಭಾರತ ಸರ್ಕಾರದ ಎನ್ಐ- ಎಂಎಸ್ಎಂಇ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ಡಾ.ಕೆ. ನಾಗರಾಜ್ ನೇಮಕ ಭಾರತ ಸರ್ಕಾರದ ಎನ್ಐ- ಎಂಎಸ್ಎಂಇ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ಡಾ.ಕೆ. ನಾಗರಾಜ್ ನೇಮಕ ಕೋಲಾರ: ಕೇಂದ್ರ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಅಧೀನದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಮೈಕ್ರೋ, ಸ್ಮಾಲ್ ಆ್ಯಂಡ್ ಮೀಡಿಯಂ ಎಂಟರ್‌ಪ್ರೈಸಸ್ (ಎನ್ಐ-ಎಂಎಸ್ಎಂಇ)ನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ. ಕೆ. ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಉದ್ಯಮಶೀಲತೆ ಹಾಗೂ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಡಾ. ಕೆ. ನಾಗರಾಜ್ ಅವರು ಕಲ್ಲಂಡೂರು ಗ್ರಾಮದಲ್ಲಿ ಪ್ಲಾಟರಿ ಕ್ಲಸ್ಟರ್ ಮೂಲಕ ಉದ್ಯಮಶೀಲರಾಗಿ ಗುರುತಿಸಿಕೊಂಡಿದ್ದಾರೆ. ಸ್ಥಳೀಯವಾಗಿ ಉದ್ಯಮ ಚಟುವಟಿಕೆಗಳನ್ನು ಬೆಳೆಸುವುದರ ಜೊತೆಗೆ ಯುವಕರು ಹಾಗೂ ಗ್ರಾಮೀಣ ಭಾಗದ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕಾರ್ಯದಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿಗೆ ಸಂಬಂಧಿಸಿದ ನೀತಿ ರೂಪಿಸುವಿಕೆ, ಉದ್ಯಮಿಗಳಿಗೆ ಅಗತ್ಯವಾದ ಮಾರ್ಗದರ್ಶನ ಹಾಗೂ ಗ್ರಾಮೀಣ ಭಾಗದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಗವರ್ನಿಂಗ್ ಕೌನ್ಸಿಲ್‌ನಲ್ಲಿ ಡಾ. ನಾಗರಾಜ್ ಅವರ ಅನುಭವ ಸಹಕಾರಿಯಾಗಲಿದೆ ಕೇಂದ್ರ ಸರ್ಕಾರದ ಪ್ರಮುಖ ಸಂಸ್ಥೆಯ ಗವರ್ನಿಂಗ್ ಕೌನ್ಸಿಲ್‌ಗೆ ಕೋಲಾರ ತಾಲೂಕಿನ ಗ್ರಾಮೀಣ ಭಾಗದ ಉದ್ಯಮಿಯನ್ನು ಸದಸ್ಯರಾಗಿ ನೇಮಕ ಮಾಡಿರುವುದು ಜಿಲ್ಲೆಯ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ.1
- ಬಂಗಾರಪೇಟೆ ಗೃಹಜ್ಯೋತಿ ಪರಿಶೀಲನೆಗೆ ನಿರ್ಲಕ್ಷ್ಯ: ಆಸಿಡ್ ಬಾಟಲಿ ಹಿಡಿದು ಹೈಡ್ರಾಮಾ!ಬೆಸ್ಕಾಂ ಕಚೇರಿ ಮುಂದೆ ಮೂವರು ಜಿವಿಪಿಗಳ ಆತ್ಮಹತ್ಯೆ ಬೆದರಿಕೆ; ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಮನೆ ಪರಿಶೀಲನೆಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ಇಲಾಖೆಯ ಮೂವರು ಜಿವಿಪಿಗಳು ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹೈಡ್ರಾಮಾ ನಡೆದ ಘಟನೆ ಬೆಸ್ಕಾಂ ಕಚೇರಿ ಮುಂದೆ ನಡೆದಿದೆ. ಜಿವಿಪಿಗಳಾದ ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರು ಬೆಳಗ್ಗೆ ಸುಮಾರು 9.30ರ ವೇಳೆಗೆ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬೆಸ್ಕಾಂ ಇಲಾಖೆಯ ಸಿಬ್ಬಂದಿ ಮೂವರನ್ನು ಸಮಾಧಾನಪಡಿಸಿ, ಆಸಿಡ್ ಬಾಟಲಿಯನ್ನು ವಶಕ್ಕೆ ಪಡೆದರು. ಗೃಹಜ್ಯೋತಿ ಯೋಜನೆಯಡಿ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ನೈಜ ಸ್ಥಿತಿಗತಿ ಪರಿಶೀಲಿಸುವಂತೆ ಸರ್ಕಾರ ಬೆಸ್ಕಾಂಗೆ ಸೂಚಿಸಿದೆ. ಫಲಾನುಭವಿಗಳ ಪಟ್ಟಿಯೊಂದಿಗೆ ಮನೆಮನೆಗೆ ತೆರಳಿ ಪರಿಶೀಲನೆ ನಡೆಸಿ, ಅರ್ಹತೆ ಇಲ್ಲದಿರುವ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯ ದುರುಪಯೋಗವಾಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನೆಗೆ ಒತ್ತು ನೀಡಲಾಗಿದ್ದು, ಆಗಸ್ಟ್ 31ರೊಳಗೆ ಪರಿಶೀಲನೆ ಪೂರ್ಣಗೊಳಿಸುವ ಗುರಿ ನೀಡಲಾಗಿದೆ. ಘಟನೆ ಕುರಿತು ಬೆಸ್ಕಾಂ ಎಇಇ ಸುಕುಮಾರ್ ರಾಜು ಸ್ಪಷ್ಟನೆ ನೀಡಿ, ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನೆ ಕಾರ್ಯದಲ್ಲಿ ಈ ಮೂವರು ಜಿವಿಪಿಗಳು ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ ಎಂದು ಆರೋಪಿಸಿದರು. ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರಿಗೆ ತಲಾ 400ಕ್ಕೂ ಹೆಚ್ಚು ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸುವ ಜವಾಬ್ದಾರಿ ನೀಡಲಾಗಿತ್ತು. ಆದರೆ, ಈ ಪಟ್ಟಿಯಲ್ಲಿನ ಫಲಾನುಭವಿಗಳ ಪರಿಶೀಲನೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದು, ಗಣನೀಯ ಸಂಖ್ಯೆಯ ಫಲಾನುಭವಿಗಳ ಪರಿಶೀಲನೆ ಬಾಕಿ ಉಳಿದಿದೆ ಎಂದು ತಿಳಿಸಿದರು. ಸರ್ಕಾರ ನಿಗದಿಪಡಿಸಿರುವ ಗಡುವಿನೊಳಗೆ ಪರಿಶೀಲನೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಕಾರ್ಯದ ಪ್ರಗತಿ ಸಾಧಿಸುವಂತೆ ಜಿವಿಪಿಗಳಿಗೆ ಸೂಚಿಸಲಾಗಿತ್ತು. ಕರ್ತವ್ಯ ನಿರ್ವಹಣೆ ಕುರಿತು ಪ್ರಶ್ನಿಸಿದಾಗ ಈ ರೀತಿಯಾಗಿ ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಬೆದರಿಕೆ ಹಾಕಿರುವುದು ಸರಿಯಲ್ಲ ಎಂದು ಎಇಇ ಹೇಳಿದರು. ಇತ್ತ ಜಿವಿಪಿಗಳಾದ ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರು ಅಧಿಕಾರಿಗಳ ಆರೋಪವನ್ನು ತಳ್ಳಿಹಾಕಿದ್ದಾರೆ. ತಮಗೆ ನೀಡಲಾಗಿದ್ದ ಫಲಾನುಭವಿಗಳ ಪಟ್ಟಿಯಲ್ಲಿ ಸುಮಾರು ಶೇ.80ರಷ್ಟು ಮನೆಗಳ ಪರಿಶೀಲನೆ ಪೂರ್ಣಗೊಳಿಸಲಾಗಿದೆ. ಉಳಿದ ಫಲಾನುಭವಿಗಳ ಪೈಕಿ ಹಲವರು ಸ್ಥಳದಲ್ಲಿ ಸಿಗದಿರುವುದು, ಮನೆ ಬದಲಿಸಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಪರಿಶೀಲನೆ ಸಾಧ್ಯವಾಗುತ್ತಿಲ್ಲ. ಈ ಕುರಿತು ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದ್ದಾರೆ. ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಹಾಗೂ ಮಕ್ಕಳ ಶಿಕ್ಷಣದ ವೆಚ್ಚ ಭರಿಸಲು ತೊಂದರೆಯಾಗಿದೆ. ಇಲಾಖೆಯಲ್ಲಿನ ಆಂತರಿಕ ಸಮಸ್ಯೆಯಿಂದ ತಮ್ಮ ಮೇಲೆ ಹೆಚ್ಚಿನ ಕೆಲಸದ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಜಿವಿಪಿಗಳು ಆಸಿಡ್ ಬಾಟಲಿ ಹಿಡಿದಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಅಧಿಕಾರಿಗಳು ಅವರನ್ನು ಸಮಾಧಾನಪಡಿಸಿದರು. ಬಳಿಕ ಎಇಇ ಸುಕುಮಾರ್ ರಾಜು ಹಾಗೂ ಮೂವರು ಜಿವಿಪಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಕರ್ತವ್ಯ ನಿರ್ವಹಿಸದೆ ವೇತನ ಪಡೆಯುವುದು ಹೇಗೆ? ಅಗತ್ಯ ದಾಖಲೆಗಳನ್ನು ನೀಡದೆ ವೇತನ ಪಾವತಿಸಲು ಸಾಧ್ಯವೇ? ಎಂದು ಬೆಸ್ಕಾಂ ಎಇಇ ಸುಕುಮಾರ್ ರಾಜು ಪ್ರಶ್ನಿಸಿದರೆ, ಕೆಲಸ ಮಾಡಿದ್ದರೂ ಐದು ತಿಂಗಳಿಂದ ವೇತನ ನೀಡಿಲ್ಲ ಎಂದು ಜಿವಿಪಿಗಳು ಪ್ರತಿಯಾಗಿ ವಾದಿಸಿದರು. ಈ ಘಟನೆ ಇದೀಗ ಬೆಸ್ಕಾಂ ಇಲಾಖೆಯಲ್ಲಿನ ಕೆಲಸದ ಪ್ರಗತಿ ಹಾಗೂ ವೇತನ ಪಾವತಿ ವಿಚಾರವನ್ನು ಮುನ್ನೆಲೆಗೆ ತಂದಿದೆ. ಜಿವಿಪಿಗಳು ಕರ್ತವ್ಯ ನಿರ್ವಹಿಸಿಲ್ಲ ಎಂಬ ಅಧಿಕಾರಿಗಳ ಆರೋಪ ಹಾಗೂ ತಾವು ಕೆಲಸ ಮಾಡಿದ್ದರೂ ವೇತನ ನೀಡಿಲ್ಲ ಎಂಬ ಜಿವಿಪಿಗಳ ಆರೋಪವಾಗಿದೆ.1
- ಎಂ. ಶ್ರೀನಿವಾಸನ್ ಸ್ಮರಣಾರ್ಥ ಆ.27ರಂದು ಶ್ರೀನಿವಾಸಪುರದಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಸಹಾಯಧನ ಪ್ರತಿ ಹೋಬಳಿಯ ಇಬ್ಬರು ಬಡ ಎಸ್‌ಸಿ ವಿದ್ಯಾರ್ಥಿಗಳಿಗೆ ನೆರವು.1
- ಮುಳಬಾಗಿಲು: ಈದ್ ಮಿಲಾದ್ ಹಬ್ಬದ ಹಿನ್ನೆಲೆ ಎಸ್ಪಿ ಶ್ರೀಮತಿ ಕನ್ನಿಕಾ ಸಿಕ್ರಿವಾಲ್ ಅವರ ನೇತೃತ್ವದಲ್ಲಿ ಪೊಲೀಸರ ಪಥಸಂಚಲನ.!2
- ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ದೇವನಹಳ್ಳಿ :ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ ಟರ್ಮಿನಲ್-1ರಲ್ಲಿ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಕಟ್ಟೆಚ್ಚರ ಲಖನೌದಿಂದ ಬೆಂಗಳೂರಿಗೆ ಆಗಮಿಸಿದ 6E-231 ವಿಮಾನಕ್ಕೆ ಬಾಂಬ್ ಹುಸಿ ಬೆದರಿಕೆ ಕರೆ ಅನಾಮಧೇಯ ವ್ಯಕ್ತಿಯಿಂದ ಬಾಂಬ್ ಬೆದರಿಕೆ. ಬಾಂಬ್ ಬೆದರಿಕೆ ಮಾಹಿತಿ ಹಿನ್ನೆಲೆಯಲ್ಲಿ ಟರ್ಮಿನಲ್-1ರ ಟರ್ಮಿನಲ್ ಮ್ಯಾನೇಜರ್ ಕಚೇರಿಯಲ್ಲಿ BTAC ಸಭೆ ಬೆದರಿಕೆ ಆಧರಿಸಿ ಅಗತ್ಯ ಭದ್ರತಾ ಕ್ರಮವಹಿಸಿ ತಪಾಸಣೆ ವಿಮಾನ ಹಾಗೂ ಟರ್ಮಿನಲ್ ಪ್ರದೇಶದಲ್ಲಿ ಸಿಐಎಸ್ಎಫ್ ಸಿಬ್ಬಂದಿಯಿಂದ ತೀವ್ರ ಭದ್ರತೆ ಪರಿಶೀಲನೆ ಪ್ರಯಾಣಿಕರ ಸುರಕ್ಷತೆಗಾಗಿ ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರವಹಿಸಿ ನಿಗಾ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ3
- ಬೇಲೂರು : ವಿಪತ್ತು ನಿರ್ವಹಣೆ ಪೊಲೀಸ್, ಎನ್‌ಡಿಆರ್‌ಎಫ್ ಹೊಣೆ ಮಾತ್ರವಲ್ಲ: ಶಾಂತಿಲಾಲ್ ಜಾಟಿಯಾ.!2