Shuru
Apke Nagar Ki App…
66/11 ಕೆವಿ ವಿದ್ಯುತ್ ವಿತ ರಣಾ ಕೇಂದ್ರದಲ್ಲಿ ತುರ್ತು ಕಾರ್ಯ ನಿರ್ವಹಣೆ ಹಮ್ಮಿ ಕೊಂಡಿರುವುದರಿಂದನಾಳೆ ವಿದ್ಯುತ್ ವ್ಯತ್ಯಯ. ನಾಳೆ ವಿದ್ಯುತ್ ವ್ಯತ್ಯಯ ಹನೂರು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯ ಮಿತ ಹನೂರು ಉಪವಿಭಾಗ ವ್ಯಾಪ್ತಿಯಲ್ಲಿ ಬರುವ 66/11 ಕೆವಿ ವಿದ್ಯುತ್ ವಿತ ರಣಾ ಕೇಂದ್ರದಲ್ಲಿ ತುರ್ತು ಕಾರ್ಯ ನಿರ್ವಹಣೆ ಹಮ್ಮಿ ಕೊಂಡಿರುವುದರಿಂದ ನಾಳೆ ವಿದ್ಯುತ್ ವ್ಯತ್ಯಯ ವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ. ರಂಗ ಸ್ವಾಮಿ ತಿಳಿಸಿದ್ದಾರೆ. ಹನೂರು 66/11 ಕೆವಿ ವಿದ್ಯುತ್ ಸರಬರಾಜು ವಿತರಣಾ ಕೇಂದ್ರದಿಂದ ಹೊರ ಬರುವ ಹನೂರು ಟೌನ್ ಬಂಡಳ್ಳಿ ಎನ್.ಜೆ.ವೈ. ಫೀಡರ್ ವ್ಯಾಪ್ತಿಯ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ 10ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾಗಿ ಗ್ರಾಹಕರು ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಅವರು ಕೋರಿದ್ದಾರೆ..
ಉಸ್ಮಾನ್ ಖಾನ್
66/11 ಕೆವಿ ವಿದ್ಯುತ್ ವಿತ ರಣಾ ಕೇಂದ್ರದಲ್ಲಿ ತುರ್ತು ಕಾರ್ಯ ನಿರ್ವಹಣೆ ಹಮ್ಮಿ ಕೊಂಡಿರುವುದರಿಂದನಾಳೆ ವಿದ್ಯುತ್ ವ್ಯತ್ಯಯ. ನಾಳೆ ವಿದ್ಯುತ್ ವ್ಯತ್ಯಯ ಹನೂರು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯ ಮಿತ ಹನೂರು ಉಪವಿಭಾಗ ವ್ಯಾಪ್ತಿಯಲ್ಲಿ ಬರುವ 66/11 ಕೆವಿ ವಿದ್ಯುತ್ ವಿತ ರಣಾ ಕೇಂದ್ರದಲ್ಲಿ ತುರ್ತು ಕಾರ್ಯ ನಿರ್ವಹಣೆ ಹಮ್ಮಿ ಕೊಂಡಿರುವುದರಿಂದ ನಾಳೆ ವಿದ್ಯುತ್ ವ್ಯತ್ಯಯ ವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ. ರಂಗ ಸ್ವಾಮಿ ತಿಳಿಸಿದ್ದಾರೆ. ಹನೂರು 66/11 ಕೆವಿ ವಿದ್ಯುತ್ ಸರಬರಾಜು ವಿತರಣಾ ಕೇಂದ್ರದಿಂದ ಹೊರ ಬರುವ ಹನೂರು ಟೌನ್ ಬಂಡಳ್ಳಿ ಎನ್.ಜೆ.ವೈ. ಫೀಡರ್ ವ್ಯಾಪ್ತಿಯ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ 10ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾಗಿ ಗ್ರಾಹಕರು ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಅವರು ಕೋರಿದ್ದಾರೆ..
More news from ಕರ್ನಾಟಕ and nearby areas
- ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...1
- ಬುಧವಾರ ಮಧ್ಯಾಹ್ನ 12 ಗಂಟೆಯ ವೇಳೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಕೆಯ ನಂತರ ಚಿಕ್ಕಬಾಯಿ ಬೀಗ ಪ್ರಾರಂಭವಾಯಿತು. ಸಂಜೆ 4:00 ವರೆಗೆ 3 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಚಿಕ್ಕಬಾಯಿ ಬೀಗ ಹಾಕಿಸಿಕೊಂಡು ತಮ್ಮ ಹರಕೆ ಸಮರ್ಪಿಸಿದರು. 80ಕ್ಕೂ ಹೆಚ್ಚು ಅಧಿಕ ಭಕ್ತರು ಕಳೆದ ಒಂದು ವಾರಗಳಿಂದ ಮಾಲೆ ಹಾಕಿಸಿಕೊಂಡು ದೇವಸ್ಥಾನದಲ್ಲಿ ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆಯ ವೇಳೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ ಬುಧವಾರ ಬೆಳಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ ಉಪವಾಸವಿದ್ದು 30 ಅಡಿ ಉದ್ದದ ಬಾಯಿ ಬೀಗ ಹಾಕಿಸಿಕೊಂಡಿದ್ದರು ಈ ಪೈಕಿ 69 ಮಂದಿ ಪುರುಷರು ಹಾಗೂ 17 ಮಹಿಳೆಯರು ದೊಡ್ಡ ಬಾಯಿ ಬೀಗ ಹಾಕಿಸಿಕೊಂಡಿದ್ದದ್ದು ಆಚ್ಚರಿ ಮೂಡಿಸಿತು. ದೊಡ್ಡ ಬಾಯಿ ಬೀಗವನ್ನು ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರಂಭಿಸಲಾಯಿತು . ಭಕ್ತಾದಿಗಳು ಕಿಲೋಮೀಟರ್ ಗಟ್ಟಲೆ ಮೆರವಣಿಗೆ ನಡೆಸಿ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಗೆ ನಮಸ್ಕರಿಸಿ ತಮ್ಮ ಸೇವೆಯನ್ನು ಸಂಪನ್ನಗೊಳಿಸಿದರು.4
- ಮೈಸೂರು: ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಶಿಕ್ಷಕಿಯವರಾದ ಶ್ರೀಮತಿ ಎ.ಸಿ. ನೇತ್ರಾವತಿ ಹಾಗೂ ಶ್ರೀ ಎಂ.ಡಿ. ಗುರುಸ್ವಾಮಿ ದಂಪತಿಗಳ ಪುತ್ರರಾದ ಶ್ರೀ ಎಂ.ಜಿ. ನಾಗದೇವ ಅವರು 2026ನೇ ಸಾಲಿನ ಜೆಇಇ ಪರೀಕ್ಷೆಯಲ್ಲಿ ಶೇ. 99.97 ಅಂಕಗಳನ್ನು ಪಡೆದು ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅಪಾರ ಸಂತಸಕ್ಕೆ ಕಾರಣವಾಗಿದೆ. ಈ ಸಾಧನೆಯ ಹಿನ್ನೆಲೆ ಅವರ ಕುಟುಂಬ ವರ್ಗದವರು ವಿದ್ಯಾರ್ಥಿಗಳೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಉದ್ದೇಶದಿಂದ ವಿಶೇಷ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದರು. ಸುತ್ತೂರು ಜೆಎಸ್ಎಸ್ ವಸತಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ವಿಶೇಷ ಪ್ರಸಾದ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗದೇವ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಗ್ರಾಮೀಣ ಹಿನ್ನೆಲೆಯಲ್ಲೂ ಉತ್ತಮ ಮಾರ್ಗದರ್ಶನ ಮತ್ತು ಪರಿಶ್ರಮ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ನಾಗದೇವ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು. ಬಾಲ್ಯದಿಂದಲೇ ಅಧ್ಯಯನದಲ್ಲಿ ಆಸಕ್ತಿ ತೋರಿದ ಅವರು ನಿಯಮಿತ ಅಧ್ಯಯನ, ಪೋಷಕರ ಮಾರ್ಗದರ್ಶನ ಹಾಗೂ ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಉತ್ಸಾಹ ಮತ್ತು ಪ್ರೇರಣೆ ಮೂಡಿಸುವ ಉದ್ದೇಶದಿಂದ ಕುಟುಂಬ ವರ್ಗದವರು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿ ನಾಗದೇವ ಅವರ ಸಾಧನೆ ನಮಗೆಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಊಟವನ್ನು ವಿತರಿಸಿದರು. ನಾಗದೇವ ಅವರ ಸಾಧನೆಗೆ ಶಾಲೆಯ ಎಲ್ಲರೂ ಅಭಿನಂದನೆ ಸಲ್ಲಿಸಿ ಅವರ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.1
- *ಭಾರತ ನಲ್ಲಿ ವೈರಲ್*1
- ಇಸ್ರೇಲ್–ಇರಾನ್ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದ್ದು, ಮೈಸೂರಿನ ಹೋಟೆಲ್ ಉದ್ಯಮಕ್ಕೆ ಆತಂಕ ಉಂಟಾಗಿದೆ. ಈಗಾಗಲೇ ಕಳೆದ ಮೂರು ವಾರಗಳಲ್ಲಿ ಅನಿಲದ ಬೆಲೆ ಏರಿಕೆಯಾಗಿದೆ ಎಂದು ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಸುಮಾರು 1500 ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಈ ಉದ್ಯಮದ ಮೇಲೆ ಅವಲಂಬಿತರಿದ್ದಾರೆ. ಅನಿಲ ಪೂರೈಕೆ ಸಮಸ್ಯೆ ಮುಂದುವರಿದರೆ ಹಲವಾರು ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು ಎಂದು ಸಂಘ ಮನವಿ ಮಾಡಿದೆ.1
- ರಾಜ್ಯ ಸರ್ಕಾರದ ಇಬ್ಬಗೆ ನೀತಿಯಿಂದ ಕ್ರೋಧಗೊಂಡ ಒಳ ಮೀಸಲಾತಿ ಹೋರಾಟಗಾರರು ಇದೀಗ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದಾರೆ....1
- ಭಾಲ್ಕಿ :-ನಾಗಮೋಹನದಾಸ ವರದಿ ಧಿಕ್ಕರಿಸಿ, ಭಾಲ್ಕಿ ಪಟ್ಟಣದಲ್ಲಿ ಬೃಹತ ಪ್ರತಿಭಟನೆ ರ‍್ಯಾಲಿ.1
- ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಚಾರಿಸುವ ಮಾರ್ಗ ಆನೆ ತಲೆ ತಿಂಬ ಬಳಿ ಮತ್ತೆ ಚಿರತೆಯೊಂದು ಕಾಣಿಸಿಕೊಂಡಿದ್ದು ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಚರಿಸುವ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಯವಿತರಾಗಿದ್ದು, ಅರಣ್ಯ ಇಲಾಖೆಯವರು ಚಿರತೆಯನ್ನ ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.1