logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕನ್ನಡ ಸಾಹಿತ್ಯದ ಪ್ರತಿಭಾವಂತ ಕಾದಂಬರಿಕಾರ ಶ್ರೀಕೃಷ್ಣ ಆಲನಹಳ್ಳಿ ಅವರ ‘ಸಮಗ್ರ ಕಥೆಗಳು’ ಪ್ರಕಟಣೆ ಕನ್ನಡ ಸಾಹಿತ್ಯದಲ್ಲಿ ಗ್ರಾಮೀಣ ಬದುಕಿನ ಸೊಗಡನ್ನು, ಮಾನವ ಸಂಬಂಧಗಳ ಸೂಕ್ಷ್ಮತೆಯನ್ನು ಮತ್ತು ಪ್ರಕೃತಿಯ ಅಂತರಾಳವನ್ನು ಅಚ್ಚುಕಟ್ಟಾಗಿ ಹಿಡಿದಿಟ್ಟ ಸೂಕ್ಷ್ಮ ಸಂವೇದನೆಯ ಲೇಖಕರಲ್ಲಿ ಪ್ರಮುಖರು ಶ್ರೀಕೃಷ್ಣ ಆಲನಹಳ್ಳಿ. ಸಾಹಿತ್ಯ ಅಕಾಡಮಿ ಪ್ರಶಸ್ತಿಯನ್ನು ಪಡೆದ ಅತ್ಯಂತ ಕಿರಿಯ ಸಾಹಿತಿ ಎಂದು ದಾಖಲೆ ನಿರ್ಮಿಸಿರುವ ಅವರು ಕೇವಲ ನಾಲ್ಕು ದಶಕಗಳ ಬದುಕಿನಲ್ಲಿ ಕನ್ನಡ ಸಾಹಿತ್ಯಕ್ಕೆ ವಿಶಿಷ್ಟವಾದ ಕೊಡುಗೆಯನ್ನು ನೀಡಿದರು. ಕಾಡು (1972), ಪರಸಂಗದ ಗೆಂಡೆತಿಮ್ಮ (1978) ಮತ್ತು ಭುಜಂಗಯ್ಯನ ದಶಾವತಾರಗಳು (1982) ಎಂಬ ಅವರ ಕಾದಂಬರಿಗಳು ಕನ್ನಡ ಸಾಹಿತ್ಯದಲ್ಲಿ ಮೈಲುಗಲ್ಲುಗಳಾಗಿ ಗುರುತಿಸಲ್ಪಟ್ಟಿವೆ. ಅವರ  ಕೃತಿಗಳಲ್ಲಿ  ಬಹುತೇಕ ಕೃತಿಗಳು  ಚಲನಚಿತ್ರಗಳಾಗಿ ರೂಪಾಂತರಗೊಂಡು  ದೊಡ್ಡ ಪ್ರಭಾವ ಬೀರಿವೆ. ಕಥೆಗಾರರಾಗಿಯೂ, ಕವಿಯಾಗಿಯೂ ಗುರುತಿಸಿಕೊಂಡ ಆಲನಹಳ್ಳಿ ಅವರು ಮಣ್ಣಿನ ಹಾಡು, ಕಾಡು ಗಿಡದ ಹಾಡು ಪಾಡು, ಡೋಗ್ರಾ  ಪಹಾರಿ  ಪ್ರೇಮಗೀತೆಗಳು ಸೇರಿದಂತೆ ಹಲವಾರು ಕವನ ಸಂಕಲನಗಳನ್ನು  ರಚಿಸಿದ್ದಾರೆ. ಅವರ ‘ಮಣ್ಣಿನ ಹಾಡು’ ಕವನ  ಸಂಕಲನಕ್ಕಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದ್ದು, ಅವರ ನಿಧನಾನಂತರ 1989ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಹ ಲಭಿಸಿದೆ. ಅವರ ಕೃತಿಗಳು ಇಂಗ್ಲಿಷ್, ಜರ್ಮನ್, ರಷ್ಯನ್ ಸೇರಿದಂತೆ ಅನೇಕ ಭಾರತೀಯ ಭಾಷೆಗಳಿಗೂ ಅನುವಾದಗೊಂಡಿವೆ. ಇದೀಗ ಅವರ ಎಲ್ಲಾ ಕಥೆಗಳನ್ನು ಒಟ್ಟುಗೂಡಿಸಿದ “ಸಮಗ್ರ ಕಥೆಗಳು” ಎಂಬ ಪುಸ್ತಕ ಪ್ರಕಟವಾಗಿದೆ. ಈ ಕೃತಿಯಲ್ಲಿ ತಪ್ತ, ಫೀನಿಕ್ಸ್ ಮತ್ತು ಅಪೂರ್ಣ ಕಥೆಗಳು ಎಂಬ ಮೂರು ಕಥಾ ಗುಚ್ಛಗಳು ಸೇರಿ ಒಟ್ಟು 232 ಪುಟಗಳ ಸಂಕಲನ ರೂಪುಗೊಂಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ದೇವನೂರು ಮಹಾದೇವ ಅವರು, ಆಲನಹಳ್ಳಿ ಕೃಷ್ಣ ಅವರೊಂದಿಗಿನ  ತಮ್ಮ ಒಡನಾಟವನ್ನು ಮೆಲುಕು ಹಾಕುತ್ತಾ , ನವ್ಯ ಸಾಹಿತಿಗಳೊಂದಿಗೆ  ಆಪ್ತ ಒಡನಾಟ ಹೊಂದಿದ್ದ ಕೃಷ್ಣ  ತಮಗೂ  ಸಾಹಿತ್ಯ ರಚನೆಗೆ ಹುರಿದುಂಬಿಸಿಕೊಂಡಿದ್ದನ್ನು ಸ್ಮರಿಸಿದರು. ವಿದ್ಯಾರ್ಥಿ ಜೀವನದಲ್ಲೇ ಶ್ರೀಕೃಷ್ಣ ಆಲನಹಳ್ಳಿ ‘ಸಮೀಕ್ಷಕ’ ಎಂಬ ಸಾಹಿತ್ಯ ಪತ್ರಿಕೆಯನ್ನು ಆರಂಭಿಸಿದ್ದರು. ಆ ಕಾಲದಲ್ಲಿ ಯುವ ಸಾಹಿತಿಗಳ  ಸಾಹಿತ್ಯಿಕ  ಚಿಂತನೆಗಳಿಗೆ ವೇದಿಕೆಯಾಗಿದ್ದ ಆ  ಪತ್ರಿಕೆ ಸಾಹಿತ್ಯ ವಲಯದಲ್ಲಿ ವಿಶಿಷ್ಟ ಗಮನ ಸೆಳೆದಿತ್ತು ಎಂದು ಹೇಳಿದರು. ಈ ಕೃತಿಯನ್ನು ಅಮೂಲ್ಯ ಪುಸ್ತಕ ಪ್ರಕಾಶನದವರು  ಪ್ರಕಟಿಸಿದ್ದು, ಸುಧಾಕರ ದರ್ಬೆ ಮುಖಪುಟದ ವಿನ್ಯಾಸವನ್ನು ಮಾಡಿದ್ದಾರೆ,  ಒಳಪುಟಗಳ  ವಿನ್ಯಾಸವನ್ನು JRM ಡಿಸೈನ್ಸ್ ಅವರು ಮಾಡಿದ್ದಾರೆ.  ಈ ಸಂದರ್ಭದಲ್ಲಿ  ಆಲನಹಳ್ಳಿ ಕೃಷ್ಣ  ಅವರ ಪತ್ನಿ ವಿನುತಾ ಆಲನಹಳ್ಳಿ, ಪುತ್ರ ಪ್ರದ್ಯುಮ್ನ ಆಲನಹಳ್ಳಿ, ಪುತ್ರಿ ಕೃತಿಕಾ ಆಲನಹಳ್ಳಿ, ಅಳಿಯ ಕಣ್ಣನ್, ಪ್ರಕಾಶಕರಾದ ಕೃಷ್ಣ ಚೆಂಗಡಿ, ಕತೆಗಾರರಾದ ಶಿವಾಗ್ ಹಾಗೂ ಇತರರು ಉಪಸ್ಥಿತರಿದ್ದರು . ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟ ಗುರುತು ಮೂಡಿಸಿದ ಶ್ರೀಕೃಷ್ಣ ಆಲನಹಳ್ಳಿ ಅವರ ಕಥೆಗಳ ಸಮಗ್ರ ಸಂಕಲನ ಪ್ರಕಟವಾಗುತ್ತಿರುವುದು ಸಾಹಿತ್ಯಾಸಕ್ತರಿಗೆ ಸಂಭ್ರಮದ ಕ್ಷಣವಾಗಲಿದೆ.

21 hrs ago
user_ಹೊಂಗಿರಣ ನ್ಯೂಸ್
ಹೊಂಗಿರಣ ನ್ಯೂಸ್
Photographer Nanjangud, Mysuru•
21 hrs ago
3a3ef259-b8f5-4f50-a8d8-f32b2f1c5f8e

More news from ಕರ್ನಾಟಕ and nearby areas
  • ಇಸ್ರೇಲ್–ಇರಾನ್ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದ್ದು, ಮೈಸೂರಿನ ಹೋಟೆಲ್ ಉದ್ಯಮಕ್ಕೆ ಆತಂಕ ಉಂಟಾಗಿದೆ. ಈಗಾಗಲೇ ಕಳೆದ ಮೂರು ವಾರಗಳಲ್ಲಿ ಅನಿಲದ ಬೆಲೆ ಏರಿಕೆಯಾಗಿದೆ ಎಂದು ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಸುಮಾರು 1500 ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಈ ಉದ್ಯಮದ ಮೇಲೆ ಅವಲಂಬಿತರಿದ್ದಾರೆ. ಅನಿಲ ಪೂರೈಕೆ ಸಮಸ್ಯೆ ಮುಂದುವರಿದರೆ ಹಲವಾರು ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು ಎಂದು ಸಂಘ ಮನವಿ ಮಾಡಿದೆ.
    1
    ಇಸ್ರೇಲ್–ಇರಾನ್ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇದ್ದು, ಮೈಸೂರಿನ ಹೋಟೆಲ್ ಉದ್ಯಮಕ್ಕೆ ಆತಂಕ ಉಂಟಾಗಿದೆ. ಈಗಾಗಲೇ ಕಳೆದ ಮೂರು ವಾರಗಳಲ್ಲಿ ಅನಿಲದ ಬೆಲೆ ಏರಿಕೆಯಾಗಿದೆ ಎಂದು ಮೈಸೂರು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಸುಮಾರು 1500 ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, 25 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಈ ಉದ್ಯಮದ ಮೇಲೆ ಅವಲಂಬಿತರಿದ್ದಾರೆ. ಅನಿಲ ಪೂರೈಕೆ ಸಮಸ್ಯೆ ಮುಂದುವರಿದರೆ ಹಲವಾರು ಹೋಟೆಲ್‌ಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಗಮನಹರಿಸಬೇಕು ಎಂದು ಸಂಘ ಮನವಿ ಮಾಡಿದೆ.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    59 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    2 hrs ago
  • ಹನೂರು: ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಪ್ರಥಮ ಬಾರಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಅತ್ಯಂತ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು. ಮಂಗಳವಾರ ಮಧ್ಯಾಹ್ನ ಜರುಗಿದ ರಥೋತ್ಸವದಲ್ಲಿ ದೇವರನ್ನು ತೇರಿನಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಿಣಿ ಹಾಕಲಾಯಿತು. ರಥೋತ್ಸವ ಜರುಗುತ್ತಿದ್ದಂತೆ ಗರುಡ ಎರಡು ಬಾರಿ ಹಾರಾಡಿದ್ದು ವಿಶೇಷವಾಗಿತ್ತು. ನೆರೆದಿದ್ದ ಸಾವಿರಾರು ಭಕ್ತರು ಜಯ ಘೋಷ ಕೂಗಿದರು. ನೆರೆದಿದ್ದ ಭಕ್ತರು ಹಣ್ಣು ಜವನ ಎಸೆದು ಹರಕೆ ತೀರಿಸಿದರು.
    1
    ಹನೂರು: 
ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಪ್ರಥಮ ಬಾರಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಅತ್ಯಂತ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿಂದ ಜರುಗಿತು.
ಮಂಗಳವಾರ ಮಧ್ಯಾಹ್ನ  ಜರುಗಿದ ರಥೋತ್ಸವದಲ್ಲಿ ದೇವರನ್ನು ತೇರಿನಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಿಣಿ ಹಾಕಲಾಯಿತು. ರಥೋತ್ಸವ ಜರುಗುತ್ತಿದ್ದಂತೆ ಗರುಡ ಎರಡು ಬಾರಿ ಹಾರಾಡಿದ್ದು ವಿಶೇಷವಾಗಿತ್ತು.  ನೆರೆದಿದ್ದ ಸಾವಿರಾರು ಭಕ್ತರು ಜಯ ಘೋಷ ಕೂಗಿದರು. ನೆರೆದಿದ್ದ ಭಕ್ತರು ಹಣ್ಣು ಜವನ ಎಸೆದು ಹರಕೆ ತೀರಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    2 hrs ago
  • ಹಿರಿಯ ನಾಗರಿಕರು ಮೈದಾನದಲ್ಲಿ ವ್ಯಾಯಾಮ ಮಾಡುವ ಸಲುವಾಗಿ ಇದ್ದ ಜಾಗದಲ್ಲಿ ವ್ಯಕ್ತಿಯೊಬ್ಬ ಸಾಕುನಾಯಿ ಕರೆತಂದು ಮಲಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಕಾರಣ ಹಿರಿಯ ನಾಗರಿಕರೊಬ್ಬರು ತಗಾದೆ ತೆಗೆದಾಗ, ನಾಯಿ ಮಾಲೀಕ ವಿಡಿಯೋ ಮಾಡಲು ಮೊಬೈಲ್ ಫೋನ್ ತೆಗೆದಿದ್ದಾನೆ, ಆಗ ಹಿರಿಯ ವ್ಯಕ್ತ ವಿಡಿಯೋ ಮಾಡಬೇಡ ಎಂದು ಫೋನ್ ತಳ್ಳಿದ್ದಾರೆ,ಕೋಪಗೊಂಡ ವ್ಯಕ್ತಿ ಹಿರಿಯರ ಮೇಲೆ ಹಲ್ಲೆ ಮಾಡಿದ್ದಾರೆ, ವಿಕೋಪಕ್ಕೆ ತಿರುಗಿದ ಜಗಳದಿಂದ ಅಲ್ಲಿದ ಹಿರಿಯ ನಾಗರಿಕರು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ..
    1
    ಹಿರಿಯ ನಾಗರಿಕರು ಮೈದಾನದಲ್ಲಿ ವ್ಯಾಯಾಮ ಮಾಡುವ ಸಲುವಾಗಿ ಇದ್ದ ಜಾಗದಲ್ಲಿ ವ್ಯಕ್ತಿಯೊಬ್ಬ ಸಾಕುನಾಯಿ ಕರೆತಂದು ಮಲಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಕಾರಣ ಹಿರಿಯ ನಾಗರಿಕರೊಬ್ಬರು ತಗಾದೆ ತೆಗೆದಾಗ, ನಾಯಿ ಮಾಲೀಕ ವಿಡಿಯೋ ಮಾಡಲು ಮೊಬೈಲ್ ಫೋನ್ ತೆಗೆದಿದ್ದಾನೆ, ಆಗ ಹಿರಿಯ ವ್ಯಕ್ತ ವಿಡಿಯೋ ಮಾಡಬೇಡ ಎಂದು ಫೋನ್ ತಳ್ಳಿದ್ದಾರೆ,ಕೋಪಗೊಂಡ ವ್ಯಕ್ತಿ ಹಿರಿಯರ ಮೇಲೆ ಹಲ್ಲೆ ಮಾಡಿದ್ದಾರೆ, ವಿಕೋಪಕ್ಕೆ ತಿರುಗಿದ ಜಗಳದಿಂದ ಅಲ್ಲಿದ ಹಿರಿಯ ನಾಗರಿಕರು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ..
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    13 hrs ago
  • ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪೊಮೈ ಶಿಕ್ಷಣ ಸಂಸ್ಥೆ ವತಿಯಿಂದ, ಪೊಮೈ ಕಾಲೇಜಿನಲ್ಲಿ ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಶ್ರೀಮತಿ ಪದ್ಮಶ್ರೀ ಭಟ್‌ ನಿದ್ದೋಡಿ ಅವರನ್ನು ಜನ ಮೆಚ್ಚಿದ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು... ದಿನಾಂಕ 09/03/2026 ರಂದು ಮಧ್ಯಾಹ್ನ ಪೊಮೈ ಕಾಲೇಜಿನಲ್ಲಿ ಪ್ರಶಸ್ತಿ ಪತ್ರ ನೀಡಿ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಮೂಲಕ ಪದ್ಮಶ್ರೀ ಭಟ್ ಅವರು ಕಳೆದ 8 ವರ್ಷಗಳಿಂದ ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡುತ್ತಾ ಬಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ನಿರ್ದೇಶಕಿಯೂ ಆಗಿರುವ ಅವರು ನೂರಾರು ಬಹುಮುಖ ಪ್ರತಿಭೆಯ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ವಾಯ್ಸ್ ಆಫ್‌ ಆರಾಧನಾ ಸಂಸ್ಥೆಯ ಮೂಲಕ ರಾಜ್ಯದ ಹಲವು ಕಡೆಗಳಲ್ಲಿ ರಾಜ್ಯಮಟ್ಟದ ಮಕ್ಕಳ ಮೇಳ ನಡೆಸಿದ್ದಾರೆ. ಮೂಲತಃ ಪತ್ರಕರ್ತೆಯಾದ ಪದ್ಮಶ್ರೀ ಭಟ್ ಅವರು ಸಾಮಾಜಿಕ ಕಾರ್ಯಕರ್ತೆಯೂ ಹೌದು. ✍️ವರದಿ: ಸುರೇಂದ್ರ ಶಿವಮೊಗ್ಗ.....
    2
    ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪೊಮೈ ಶಿಕ್ಷಣ ಸಂಸ್ಥೆ ವತಿಯಿಂದ, ಪೊಮೈ ಕಾಲೇಜಿನಲ್ಲಿ  ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಶ್ರೀಮತಿ ಪದ್ಮಶ್ರೀ ಭಟ್‌ ನಿದ್ದೋಡಿ ಅವರನ್ನು  ಜನ ಮೆಚ್ಚಿದ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು...
ದಿನಾಂಕ 09/03/2026 ರಂದು ಮಧ್ಯಾಹ್ನ ಪೊಮೈ ಕಾಲೇಜಿನಲ್ಲಿ ಪ್ರಶಸ್ತಿ ಪತ್ರ ನೀಡಿ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಮೂಲಕ ಪದ್ಮಶ್ರೀ ಭಟ್ ಅವರು ಕಳೆದ 8 ವರ್ಷಗಳಿಂದ ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡುತ್ತಾ ಬಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ನಿರ್ದೇಶಕಿಯೂ ಆಗಿರುವ ಅವರು ನೂರಾರು ಬಹುಮುಖ ಪ್ರತಿಭೆಯ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ವಾಯ್ಸ್ ಆಫ್‌ ಆರಾಧನಾ ಸಂಸ್ಥೆಯ ಮೂಲಕ ರಾಜ್ಯದ ಹಲವು ಕಡೆಗಳಲ್ಲಿ ರಾಜ್ಯಮಟ್ಟದ ಮಕ್ಕಳ ಮೇಳ ನಡೆಸಿದ್ದಾರೆ. ಮೂಲತಃ ಪತ್ರಕರ್ತೆಯಾದ ಪದ್ಮಶ್ರೀ ಭಟ್ ಅವರು ಸಾಮಾಜಿಕ ಕಾರ್ಯಕರ್ತೆಯೂ ಹೌದು.
✍️ವರದಿ: ಸುರೇಂದ್ರ ಶಿವಮೊಗ್ಗ.....
    user_Surendra Shimoga
    Surendra Shimoga
    Shuru News Publisher ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ಭಾಲ್ಕಿ :-ನಾಗಮೋಹನದಾಸ ವರದಿ ಧಿಕ್ಕರಿಸಿ, ಭಾಲ್ಕಿ ಪಟ್ಟಣದಲ್ಲಿ ಬೃಹತ ಪ್ರತಿಭಟನೆ ರ‍್ಯಾಲಿ.
    1
    ಭಾಲ್ಕಿ :-ನಾಗಮೋಹನದಾಸ ವರದಿ ಧಿಕ್ಕರಿಸಿ, ಭಾಲ್ಕಿ ಪಟ್ಟಣದಲ್ಲಿ ಬೃಹತ  ಪ್ರತಿಭಟನೆ ರ‍್ಯಾಲಿ.
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bengaluru East, Bengaluru Urban•
    1 hr ago
  • ಬೆಂಗಳೂರಿನ ಹೆಣ್ಣೂರು ಗಾರ್ಡನ್ಸ್‌ನ ಪ್ರಕೃತಿ ಲೇಔಟ್‌ನಲ್ಲಿ ನಡೆದ ಆತಂಕಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆಯಲ್ಲಿ ವ್ಯಕ್ತಿಯೊಬ್ಬ ಬಿದ್ದಿದ್ದರೆ, ಮತ್ತೊಂದು ಗುಂಪು ಕಿತ್ತಾಟದಲ್ಲಿ ತೊಡಗಿದೆ. ಅಷ್ಟರಲ್ಲಿ ಬುಲೆಟ್ ಸವಾರನೊಬ್ಬ ಚಲಿಸುತ್ತಿದ್ದ ಬೈಕ್‌ಗೆ ಕಾಲಿನಿಂದ ಒದ್ದು ಪುಂಡಾಟಿಕೆ ಮೆರೆದಿದ್ದಾನೆ. ಒಂದೇ ಸ್ಕೂಟಿಯಲ್ಲಿ ಮೂವರು ಸವಾರಿ ಮಾಡುವ ಮೂಲಕ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸಾರ್ವಜನಿಕರ ಸುರಕ್ಷತೆಗೆ ಸವಾಲು ಹಾಕುವಂತಿರುವ ಈ ರೌಡಿಸಂ ಮತ್ತು ಅಶಿಸ್ತಿನ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
    1
    ಬೆಂಗಳೂರಿನ ಹೆಣ್ಣೂರು ಗಾರ್ಡನ್ಸ್‌ನ ಪ್ರಕೃತಿ ಲೇಔಟ್‌ನಲ್ಲಿ ನಡೆದ ಆತಂಕಕಾರಿ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಸ್ತೆಯಲ್ಲಿ ವ್ಯಕ್ತಿಯೊಬ್ಬ ಬಿದ್ದಿದ್ದರೆ, ಮತ್ತೊಂದು ಗುಂಪು ಕಿತ್ತಾಟದಲ್ಲಿ ತೊಡಗಿದೆ. ಅಷ್ಟರಲ್ಲಿ ಬುಲೆಟ್ ಸವಾರನೊಬ್ಬ ಚಲಿಸುತ್ತಿದ್ದ ಬೈಕ್‌ಗೆ ಕಾಲಿನಿಂದ ಒದ್ದು ಪುಂಡಾಟಿಕೆ ಮೆರೆದಿದ್ದಾನೆ. ಒಂದೇ ಸ್ಕೂಟಿಯಲ್ಲಿ ಮೂವರು ಸವಾರಿ ಮಾಡುವ ಮೂಲಕ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಸಾರ್ವಜನಿಕರ ಸುರಕ್ಷತೆಗೆ ಸವಾಲು ಹಾಕುವಂತಿರುವ ಈ ರೌಡಿಸಂ ಮತ್ತು ಅಶಿಸ್ತಿನ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    22 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.