ಶಿವಮೊಗ್ಗ-ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಾಗರದಲ್ಲಿ ರೈತರ ಪ್ರತಿಭಟನೆ ಶಿವಮೊಗ್ಗ: ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ವಿರೋಧಿಸಿ ಗುರುವಾರ ಜಿಲ್ಲಾ ರೈತ ಸಂಘದ ವತಿಯಿಂದ ಸಾಗರದಲ್ಲಿ ಪ್ರತಿಭಟನೆ ನಡೆಯಿತು. ಮಹಾಗಣಪತಿ ದೇವಸ್ಥಾನದಿಂದ ಆರಂಭ ವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಬಳಿಕ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ, ಕಸ್ತೂರಿ ರಂಗನ್ ವರದಿ ಅನುಷ್ಠಾನದ ಹೆಸರಿನಲ್ಲಿ ಮಲೆನಾಡು ರೈತರ ಬದುಕಿಗೆ ಕೊಳ್ಳಿ ಇಡುವುದನ್ನು ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ 20,668 ಎಕರೆ ಪ್ರದೇಶ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಬರಲಿದ್ದು, 1,449 ಹಳ್ಳಿಗಳು ಇದರ ವ್ಯಾಪ್ತಿಗೆ ಸೇರುತ್ತಿವೆ. ಶಿವಮೊಗ್ಗ ಜಿಲ್ಲೆಯ 449 ಹಳ್ಳಿಗಳು ಒಳಪಡಲಿವೆ ಎಂದು ಅವರು ಹೇಳಿದರು. ಮಲೆನಾಡು ಭಾಗದ ರೈತರು ಈ ವಿಚಾರ ವನ್ನು ಗಂಭೀರವಾಗಿ ಗಮನಿಸಬೇಕು ಎಂದು ಕರೆ ನೀಡಿದರು. ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾ ರರು, ಪೊಲೀಸ್ ಇಲಾಖೆಯ ಧೋರಣೆ ಯನ್ನು ಖಂಡಿಸಿದರು. ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಕೂಡ ಪೊಲೀಸ್ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ರಮೇಶ್ ಕೆಳದಿ, ಡಾ. ರಾಮಚಂದ್ರಪ್ಪ ಮನೆಘಟ್ಟ, ಶಿವು ಮೈಲಾರಿ ಕೊಪ್ಪ, ಪ್ರಸನ್ನ ಕೆರೆಕೈ, ಸೋಮಶೇಖರ್, ಸಂತೋಷ್ ಚಿಕ್ಕನೆಲ್ಲೂರು, ಸುನೀಲ್, ಚಂದ್ರು ಪೂಜಾರಿ ಸೇರಿದಂತೆ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಶಿವಮೊಗ್ಗ-ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಾಗರದಲ್ಲಿ ರೈತರ ಪ್ರತಿಭಟನೆ ಶಿವಮೊಗ್ಗ: ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ವಿರೋಧಿಸಿ ಗುರುವಾರ ಜಿಲ್ಲಾ ರೈತ ಸಂಘದ ವತಿಯಿಂದ ಸಾಗರದಲ್ಲಿ ಪ್ರತಿಭಟನೆ ನಡೆಯಿತು. ಮಹಾಗಣಪತಿ ದೇವಸ್ಥಾನದಿಂದ ಆರಂಭ ವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಬಳಿಕ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹರತಾಳು ಹಾಲಪ್ಪ, ಕಸ್ತೂರಿ ರಂಗನ್ ವರದಿ ಅನುಷ್ಠಾನದ ಹೆಸರಿನಲ್ಲಿ ಮಲೆನಾಡು ರೈತರ ಬದುಕಿಗೆ ಕೊಳ್ಳಿ ಇಡುವುದನ್ನು ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ 20,668 ಎಕರೆ ಪ್ರದೇಶ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಬರಲಿದ್ದು, 1,449 ಹಳ್ಳಿಗಳು ಇದರ
ವ್ಯಾಪ್ತಿಗೆ ಸೇರುತ್ತಿವೆ. ಶಿವಮೊಗ್ಗ ಜಿಲ್ಲೆಯ 449 ಹಳ್ಳಿಗಳು ಒಳಪಡಲಿವೆ ಎಂದು ಅವರು ಹೇಳಿದರು. ಮಲೆನಾಡು ಭಾಗದ ರೈತರು ಈ ವಿಚಾರ ವನ್ನು ಗಂಭೀರವಾಗಿ ಗಮನಿಸಬೇಕು ಎಂದು ಕರೆ ನೀಡಿದರು. ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾ ರರು, ಪೊಲೀಸ್ ಇಲಾಖೆಯ ಧೋರಣೆ ಯನ್ನು ಖಂಡಿಸಿದರು. ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಕೂಡ ಪೊಲೀಸ್ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ರಮೇಶ್ ಕೆಳದಿ, ಡಾ. ರಾಮಚಂದ್ರಪ್ಪ ಮನೆಘಟ್ಟ, ಶಿವು ಮೈಲಾರಿ ಕೊಪ್ಪ, ಪ್ರಸನ್ನ ಕೆರೆಕೈ, ಸೋಮಶೇಖರ್, ಸಂತೋಷ್ ಚಿಕ್ಕನೆಲ್ಲೂರು, ಸುನೀಲ್, ಚಂದ್ರು ಪೂಜಾರಿ ಸೇರಿದಂತೆ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
- ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ ವರದಿಯ ಜಾರಿಗೆ ಬಗ್ಗೆ ಯಾರೂ ಆತಂಕ ಪಡಬೇಕಾಗಿಲ್ಲ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯ ಸರ್ಕಾರ ಈ ವರದಿಯನ್ನು ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ಅಧಿಕೃತವಾಗಿ ಮಾಹಿತಿ ನೀಡಿದ್ದರೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈಗ ಮತ್ತೆ ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶ (ESA) ಗುರುತಿಸಿ, ಹೊಸ ಕರಡು ಅಧಿಸೂಚನೆ ಪ್ರಕಟಿಸಿದೆ. ಇದು ಖಂಡನೀಯ. ಈ ಕರಡು ಅಧಿಸೂಚನೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಈ ವಿಷಯದ ಕುರಿತು ರಾಜ್ಯ ಸರ್ಕಾರ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದೆ. ಅರಣ್ಯ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರು ಸಹ ವಿಧಾನಸಭೆಯಲ್ಲಿಯೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ಸಮಿತಿ ವರದಿ ಹೇಳಿರುವಂತೆಯೇ ಕರ್ನಾಟಕದ ರಾಜ್ಯದ 1,576 ಗ್ರಾಮ ವ್ಯಾಪ್ತಿಯ 20,668 ಚದರ ಕಿ.ಮೀ. ಪ್ರದೇಶವನ್ನು ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಈ ಕರಡು ಅಧಿಸೂಚನೆಯಲ್ಲಿ ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳು ಪ್ರಸ್ತಾವಿತ ಪಟ್ಟಿಯಲ್ಲಿವೆ. ಜನವಸತಿ ಪ್ರದೇಶ, ಕೃಷಿ ಭೂಮಿ ಇರುವ ಪ್ರದೇಶವನ್ನೂ ʻಪರಿಸರ ಸೂಕ್ಷ್ಮ ಪ್ರದೇಶʼ ಎಂದು ಗುರುತಿಸಿರುವುದರಿಂದ ಮಲೆನಾಡಿನ ರೈತರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಆದರೆ ಸರ್ಕಾರ ಈ ವರದಿಯ ಜಾರಿಗೆ ಅವಕಾಶ ನೀಡುವುದಿಲ್ಲ. ಈ ಕರಡು ಅಧಿಸೂಚನೆಯನ್ನು ವಿರೋಧಿಸಲಿದೆ. ಹೀಗಾಗಿ ಮಲೆನಾಡಿನ ಜನರು ಆತಂಕ ಪಡುವ ಅಗತ್ಯ ಇಲ್ಲ. ಮಲೆನಾಡಿನ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಮ್ಮ ಸರ್ಕಾರ ರೈತರ ಪರವಾಗಿದೆ. ಈ ವಿಚಾರವನ್ನು ಈಗಾಗಲೇ ನಮ್ಮ ಪಕ್ಷದ ಹಿರಿಯ ನಾಯಕರಾದ ಶ್ರೀ ಆರ್.ವಿ. ದೇಶಪಾಂಡೆ, ಶಾಸಕ ಮಿತ್ರರಾದ ಶ್ರೀ ಭೀಮಣ್ಣ ಟಿ. ನಾಯಕ್, ಶ್ರೀ ಟಿ.ಡಿ. ರಾಜೇಗೌಡ, ಶ್ರೀ ಎಚ್. ಡಿ. ತಮ್ಮಯ್ಯ ಹಾಗೂ ಶ್ರೀ ಎ.ಎಸ್. ಪೊನ್ನಣ್ಣ ಅವರು ಸದನದ ಒಳಗೂ ಮತ್ತು ಹೊರಗೆ ಪ್ರಸ್ತಾಪಿಸಿ ಚರ್ಚಿಸಿದ್ದಾರೆ. ಸರ್ಕಾರ ಈ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿಕೆ ನೀಡಿದೆ. ವಿಪಕ್ಷ ನಾಯಕರು ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನವನ್ನು ಖಂಡಿಸುವುದಕ್ಕೆ ಬದಲಾಗಿ ಗೊಂದಲ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅನಗತ್ಯವಾಗಿ ಮಲೆನಾಡು ಭಾಗದ ರೈತರಲ್ಲಿ ಆತಂಕ ಸೃಷ್ಟಿಸುತ್ತಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅತ್ಯಂತ ಮಹತ್ವದ ಈ ವಿಷಯದ ಕುರಿತು ಚರ್ಚೆಗೆ ಮುಂದಾಗುವ ಬದಲು ಗದ್ದಲ ನಡೆಸಿ ಅಧಿವೇಶನದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಇದರಿಂದ ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯೇ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ವಿಚಾರವಾಗಿ ನಾನು ವೈಯಕ್ತಿಕವಾಗಿಯೂ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳು ಸಹ ಈ ಕರಡು ಅಧಿಸೂಚನೆಯನ್ನು ವಿರೋಧಿಸುವ ತೀರ್ಮಾನ ಪ್ರಕಟಿಸಿದ್ದಾರೆ. ರೈತರ ಜೊತೆ ನಿಲ್ಲುವುದಾಗಿ ಅಭಯ ನೀಡಿದ್ದಾರೆ. ಹೀಗಾಗಿ ಮಲೆನಾಡಿನ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರೈತರು ಯಾವುದೇ ಆತಂಕ ಪಡಬಾರದು. ನಮ್ಮ ತಂದೆ ಎಸ್. ಬಂಗಾರಪ್ಪ ಅವರು ಸದಾ ರೈತರು ಹಾಗೂ ಜನಸಾಮಾನ್ಯರ ಪರವಾಗಿ ನಿಂತವರು. ಅವರ ಆಶಯಗಳನ್ನು ಎತ್ತಿಹಿಡಿಯುವುದೇ ನನ್ನ ಗುರಿ. ಅವರ ಮಾರ್ಗದಲ್ಲಿಯೇ ನಾನು ನಡೆಯುತ್ತಿದ್ದೇನೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ.1
- ಈದ್ ಮಿಲಾದ್ ಸಂಭ್ರಮದ ಆಚರಣೆ : ರಕ್ತದಾನ, ಅನ್ನದಾನ ಸೇರಿದಂತೆ ವಿವಿಧ ಸೇವಾ ಕಾರ್ಯಗಳು. ಯುವ ಮುಖಂಡ ಬಿ.ಎಸ್ ಗಣೇಶ್ ಬಾಗಿ ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ದೇಶಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದಿಂದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಮೀಪ ಸಾವಿರಾರು ಮಂದಿಗೆ ಮಜ್ಜಿಗೆ ವಿತರಿಸಲಾಯಿತು. ಯುವ ಮುಖಂಡ ಬಿ.ಎಸ್ ಗಣೇಶ್ ಸೇವಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಸೇವಾ ಕಾರ್ಯವನ್ನು ಅಭಿನಂದಿಸಿದರು. ಇದೆ ಸಂದರ್ಭದಲ್ಲಿ ಬಡಮಹಿಳೆಯರಿಗೆ ಸೀರೆ ಮತ್ತು ರವಿಕೆ ವಿತರಿಸಲಾಯಿತು. ಅನ್ನದಾನ, ತಂಪು ಪಾನೀಯ ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳು ಜರುಗಿದವು. ಮಧ್ಯಾಹ್ನ ಸುಮಾರು ೩.೩೦ ಸಮಯಕ್ಕೆ ಹೊಳೆಹೊನ್ನೂರು ವೃತ್ತದಿಂದ ಮರ್ಕಜೀ ಇದಾರ ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಅಯೂಬ್ ಖಾನ್‌ರವರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಆರಂಭಗೊಂಡಿತು. ಮೆರವಣಿಗೆಯಲ್ಲಿ ಮಹಮ್ಮದ್ ಫೈಗಂಬರರ ಜನ್ಮಸ್ಥಳ ಮೆಕ್ಕಾ-ಮದೀನಾ ಮಾದರಿಗಳು, ಹಸಿರು ದ್ವಜಗಳು ಎಲ್ಲೆಡೆ ರಾರಾಜಿಸುತ್ತಿದ್ದವು. ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು. ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಮಹಾತ್ಮಗಾಂಧಿ ವೃತ್ತ ಮೂಲಕ ಸಾದತ್ ದರ್ಗಾವರೆಗೂ ಮೆರವಣಿಗೆ ನಡೆಯಿತು. ನಗರದ ವಿವಿಧೆಡೆಗಳ ಮಸೀದಿಗಳ ಧರ್ಮಗುರುಗಳು, ಆಡಳಿತ ಮಂಡಳಿಯವರು, ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ಮೆರವಣಿಗೆ ಹಿನ್ನಲೆಯಲ್ಲಿ ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮುಸ್ಲಿಂ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಹಬ್ಬದ ಹಿನ್ನಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹೆಚ್ಚಿನ ಅಲಂಕಾರ ಕೈಗೊಳ್ಳಲಾಗಿತ್ತು. ಭದ್ರಾವತಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಮಕ್ಕಳು, ಯುವಕರು, ವಯಸ್ಕರು ಬೇಧಭಾವವಿಲ್ಲದೆ ಅಬ್ಬರದ ಹಾಡಿನ ಸದ್ದಿಗೆ ಕುಣಿದು ಸಂಭ್ರಮಿಸಿದರು3
- ನಮ್ಮ ಚನ್ನಗಿರಿ ತಾಲ್ಲೂಕು ತುಮಕೊಸ್ ಅಧ್ಯಕ್ಷರು ಸಗಾರಪೇಟೆಯಲ್ಲಿ ನೂತನ ವಾಗಿ ಸೂಪರ್ ಮಾರ್ಕೆಟ್ ಉದ್ಘಾಟನೆ ನೆರವೇರಿಸಿದರು.1
- ಕೋಟೆ ನಾಡು ಚಿತ್ರದುರ್ಗದಲ್ಲಿ ರಾಕಿಂಗ್ ಸ್ಟಾರ್ ಯಶು ಅಭಿಮಾನಿಗಳ ಸಂಭ್ರಮ1
- ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಆಂಜನೇಯ ದೇವಾಲಯದ ಆವರಣದಲ್ಲಿ ಅಪವಿತ್ರ ಕೃತ್ಯ – ಸ್ವಯಂಪ್ರೇರಿತ ಬಂದ್‌ಗೆ ಅಭೂತಪೂರ್ವ ಬೆಂಬಲ; ಪೊಲೀಸ್ ಇಲಾಖೆಯ ಧೋರಣೆಗೆ ಬಿಜೆಪಿ ಆಕ್ರೋಶ ಶಿಗ್ಗಾವಿ: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ, ಅಪವಿತ್ರಗೊಳಿಸಿದ ಘಟನೆಯನ್ನು ಖಂಡಿಸಿ ಪ್ರಮೋದ್ ಮುತಾಲಿಕ್ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ನೀಡಿದ್ದ ಬಂದ ಕರೆಗೆ ಸಾರ್ವಜನಿಕರು ಹಾಗೂ ವರ್ತಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಬಿಜೆಪಿ ತಾಲೂಕಾ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆದ ಘಟನೆಯಿಂದ ಭಕ್ತಾದಿಗಳ ಮನಸ್ಸಿನಲ್ಲಿ ಆತಂಕ ಉಂಟಾಗಿದ್ದು, ಶಾಂತಿಯುತವಾಗಿ ಬಂದ್ ಆಚರಿಸುವ ಮೂಲಕ, ಆರೋಪಿಗೆ ಕಠಿಣಾತಿ ಕಠೀಣ ಶಿಕ್ಷೆ ಯಾಗಲೇಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅಪರಾಧಿಗೆ ರಕ್ಷಣೆ ನೀಡುವ ಹುನ್ನಾರ ನಡೆದರೆ ಮತ್ತು ತಾಲೂಕಿನಲ್ಲಿ ಅವನಿಗೆ ನೀಡಿರುವ ಸೌಲತ್ತುಗಳನ್ನು ಹಿಂಪಡೆದು ಗಡಿಪಾರು ಮಾಡದಿದ್ದರೆ ಉಗ್ರ ಹೋರಾಟ ರೂಪಿಸಲಾಗುತ್ತದೆ ಎಂದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನರಹರಿ ಕಟ್ಟಿ ಮಾತನಾಡಿ, ಘಟನೆಗೆ ಸಂಬಂಧವಿಲ್ಲದ ಸಣ್ಣ ಹುಡುಗರು, ಬಿಜೆಪಿ ನಾಯಕರು ಸೇರಿದಂತೆ ಇತರರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿ ನಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಪೊಲೀಸರ ಮೂಲ ಪ್ರಯತ್ನಿಸಲಾಗಿದ್ದು ತೀವ್ರ ಖಂಡನೀಯ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಪೊಲೀಸ್ ಇಲಾಖೆಯು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಸಾರ್ವಜನಿಕರಿಗೆ ಹಾಗೂ ಭಕ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ರಾಜ್ಯ ನಾಯಕರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ರೇಣಕನಗೌಡ ಪಾಟೀಲ, ಅನೀಲ ಸಾತಣ್ಣನವರ ಸೇರಿದಂತೆ ಇತರರಿದ್ದರು.4
- ಚಿತ್ರದುರ್ಗದಲ್ಲಿ ‘ಸೀರತ್ ಅಭಿಯಾನ’! 🔥 ಪ್ರವಾದಿ ಮುಹಮ್ಮದ್ ﷺ ಸಂದೇಶ ಸಾರಲು ಸಜ್ಜು! #SeeratUnNabi #ಸೀರತ್_ಅಭಿಯಾನ #ಕ್ರಾಂತಿಯಜ್ಯೋತಿ #ಪ್ರವಾದಿಮುಹಮ್ಮದ್ﷺ #Muhammadﷺ #ProphetMuhammad #SeeratCampaign #JamaatEIslamiHind #ಚಿತ್ರದುರ್ಗ #Chitradurga #ChitradurgaNews #KarnatakaNews #KannadaNews #BreakingNews #ViralNews #LocalNews #CTownNews #CtownNews #NewsUpdate #ಸುದ್ದಿ #ಸುದ್ದಿವಾಹಿನಿ1
- ಗುಟ್ಕಾ ನಿಷೇಧ ತಡೆಯಲು ಚನ್ನಗಿರಿ ಯಿಂದ ದಾವಣಗೆರೆ ಗೆ ದಿನಾಂಕ 26/8/2026 ರಿಂದ 28/8/2026 ರಾ ವರೆಗೆ ಬೃಹತ್ ಪಾದ ಯಾತ್ರೆ ಮಾಡುತ್ತಿರುವ ಮಾಡಳ್ ಮಲ್ಲಿಕಾರ್ಜುನ ರವರು ಮತ್ತು ರೈತರು1
- ಟಿ ನುಲೇನೂರು ಗೇಟ್ ಬಳಿ ಕಾರು ಬೈಕ್ ಬೀಕರ ಅಪಘಾತ ನಡೆದು ಇಬ್ಬರು ಸಾವು ಟಿ ನುಲೇನೂರು ಗೇಟ್ ಬಳಿ ಕಾರು ಬೈಕ್ ಬೀಕರ ಅಪಘಾತ ನಡೆದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ಟಿ ನುಲೇನೂರು ಗೇಟ್ ನ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆಸಿದ್ದು ಮಲೆನಳ್ಳಿ ಗ್ರಾಮದ ಉಪೇಂದ್ರ ಕುಮಾರ್ ಹಾಗೂ ಗೌತಮ್ ಬಾಬು ಎಂಬ ಇಬ್ಬರು ಮೃತಪಟ್ಟಿದ್ದಾರೆ. ಇನ್ನೂ ಚಿಕ್ಕಮಗಳೂರು ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಚಿತ್ರದುರ್ಗ ಕಡೆಯಿಂದ ಹೋಗುತ್ತಿದ್ದ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಬವಿಸಿದ್ದು ಬೈಕ್ ನಲ್ಲಿದ್ದ ಇಬ್ಬೆಉ ಮೃತಪಟ್ಟಿದ್ದಾರೆ. ಇನ್ನೂ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.1