logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೆ.ಜಿ.ಎಫ್‌ ತಾಲ್ಲೂಕು ಆಡಳಿತ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಕೆ.ಜಿ.ಎಫ್: ತಾಲ್ಲೂಕು ಆಡಳಿತ ಮತ್ತು ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕೆ.ಜಿ.ಎಫ್ ನಗರಸಭೆ ಆವರಣದಲ್ಲಿ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ಯನ್ನು ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನ ನೀಡಿರುವ ಹಕ್ಕುಗಳು ಮತ್ತು ಕರ್ತವ್ಯಗಳ ಮಹತ್ವವನ್ನು ಸಾರುವ ಉದ್ದೇಶದಿಂದ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಒಗ್ಗೂಡಿ ಭಾರತ ಸಂವಿಧಾನದ ಪೀಠಿಕೆಯನ್ನು ಗೌರವಪೂರ್ವಕವಾಗಿ ವಾಚಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಸಂವಿಧಾನ ಪೀಠಿಕೆಯ ಬ್ಯಾನರ್‌ನೊಂದಿಗೆ ನಗರಸಭೆ ಆವರಣದಿಂದ ಸಾರ್ವಜನಿಕರಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳ ಅರಿವು ಮೂಡಿಸುವ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಆಡಳಿತದ ವಿವಿಧ ಇಲಾಖಾ ಮುಖ್ಯಸ್ಥರು, ಜನಪ್ರತಿನಿಧಿಗಳು, ಶಾಲಾ-ಕಾಲೇಜುಗಳ ಶಿಕ್ಷಕ ವೃಂದ, ನೂರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ದೇಶದ ಸಮಗ್ರತೆ, ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತತ್ವಗಳನ್ನು ಪ್ರತಿಯೊಬ್ಬ ನಾಗರಿಕನೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಅಧಿಕಾರಿಗಳು ಕರೆ ನೀಡಿದರು.

1 day ago
user_Prashanth  Vibes
Prashanth Vibes
Video Creator ಕೋಲಾರ ಗೋಲ್ಡ್ ಫೀಲ್ಡ್, ಕೋಲಾರ, ಕರ್ನಾಟಕ•
1 day ago
4a1dc41e-78d7-42c0-9e57-cb4077afcc0b

ಕೆ.ಜಿ.ಎಫ್‌ ತಾಲ್ಲೂಕು ಆಡಳಿತ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಕೆ.ಜಿ.ಎಫ್: ತಾಲ್ಲೂಕು ಆಡಳಿತ ಮತ್ತು ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕೆ.ಜಿ.ಎಫ್ ನಗರಸಭೆ ಆವರಣದಲ್ಲಿ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ಯನ್ನು ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನ ನೀಡಿರುವ ಹಕ್ಕುಗಳು ಮತ್ತು ಕರ್ತವ್ಯಗಳ ಮಹತ್ವವನ್ನು ಸಾರುವ ಉದ್ದೇಶದಿಂದ ಅಧಿಕಾರಿಗಳು,

c1a36d93-8be5-4c65-8992-984f7b5b6ffe

ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಒಗ್ಗೂಡಿ ಭಾರತ ಸಂವಿಧಾನದ ಪೀಠಿಕೆಯನ್ನು ಗೌರವಪೂರ್ವಕವಾಗಿ ವಾಚಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಸಂವಿಧಾನ ಪೀಠಿಕೆಯ ಬ್ಯಾನರ್‌ನೊಂದಿಗೆ ನಗರಸಭೆ ಆವರಣದಿಂದ ಸಾರ್ವಜನಿಕರಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳ ಅರಿವು ಮೂಡಿಸುವ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಆಡಳಿತದ ವಿವಿಧ ಇಲಾಖಾ ಮುಖ್ಯಸ್ಥರು, ಜನಪ್ರತಿನಿಧಿಗಳು, ಶಾಲಾ-ಕಾಲೇಜುಗಳ ಶಿಕ್ಷಕ ವೃಂದ, ನೂರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ದೇಶದ ಸಮಗ್ರತೆ, ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತತ್ವಗಳನ್ನು ಪ್ರತಿಯೊಬ್ಬ ನಾಗರಿಕನೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಅಧಿಕಾರಿಗಳು ಕರೆ ನೀಡಿದರು.

More news from ಕರ್ನಾಟಕ and nearby areas
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ.
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ 
ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    7 hrs ago
  • ಸಿದ್ಧಾರ್ಥ ನಗರದಲ್ಲಿ ಜೈ ಭೀಮ್ ಗೆಳೆಯರ ಬಳಗದ 2ನೇ ವಾರ್ಷಿಕೋತ್ಸವ:ಸಿ.ಕೆ. ಮೌಲಾ ಶರೀಫ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರರು
    1
    ಸಿದ್ಧಾರ್ಥ ನಗರದಲ್ಲಿ ಜೈ ಭೀಮ್ ಗೆಳೆಯರ ಬಳಗದ 2ನೇ ವಾರ್ಷಿಕೋತ್ಸವ:ಸಿ.ಕೆ. ಮೌಲಾ ಶರೀಫ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರರು
    user_Lokesh bvINCHARATV
    Lokesh bvINCHARATV
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    10 hrs ago
  • ಹಿಂದೂಗಳನ್ನ ಎರಡನೇ ದರ್ಜೆಯಲ್ಲಿ ನೋಡೋದು ಕಾಂಗ್ರೆಸ್ಸಿನ ರಕ್ತದಲ್ಲೇ ಬಂದಿದೆ ಹಿಂದೂಗಳನ್ನ ಎರಡನೇ ದರ್ಜೆಯಲ್ಲಿ ನೋಡೋದು ಕಾಂಗ್ರೆಸ್ಸಿನ ರಕ್ತದಲ್ಲೇ ಬಂದಿದೆ
    1
    ಹಿಂದೂಗಳನ್ನ ಎರಡನೇ 
ದರ್ಜೆಯಲ್ಲಿ ನೋಡೋದು 
ಕಾಂಗ್ರೆಸ್ಸಿನ ರಕ್ತದಲ್ಲೇ ಬಂದಿದೆ 
ಹಿಂದೂಗಳನ್ನ ಎರಡನೇ 
ದರ್ಜೆಯಲ್ಲಿ ನೋಡೋದು 
ಕಾಂಗ್ರೆಸ್ಸಿನ ರಕ್ತದಲ್ಲೇ ಬಂದಿದೆ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    52 min ago
  • ಪಣತ್ತೂರಿನಲ್ಲಿ 45 ಎಕರೆ ಅರಣ್ಯ ಭೂಮಿ ಉದ್ಘಾಟನೆಯಾಗಿದೆ,ಆದರೆ 145 ಎಕರೆ ಅರಣ್ಯ ಭೂಮಿಯು ಉದ್ಯಾನವನವಾಗಿ ಆಗಬೇಕು ಮಹದೇವಪುರ ಕ್ಷೇತ್ರದಲ್ಲಿ 6ರಿಂದ 7 ಲಕ್ಷ ಜನ ಮತದಾರರೇ ಇದ್ದಾರೆ.ಇನ್ನು ಹೆಚ್ಚುವರಿಯಾಗಿ ಇಲ್ಲಿಗೆ ಬಂದು ಕೆಲಸ ಮಾಡಿ ಹೋಗುವವರು ನೋಡಿದರೆ 10 ಲಕ್ಷ ಆಗುತ್ತೆ ಇವುಗಳ ಅಭಿವೃದ್ಧಿಗೆ ಎಂಪಿ ಅನುದಾನವನ್ನು ನೀಡಲು ತಯಾರಿದ್ದೇವೆ .145 ಎಕರೆಗಳನ್ನು ಮೂರು ಭಾಗವಾಗಿ ವಿಂಗಡಿಸಲಾಗಿದೆ .ಒಂದು ಭಾಗದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ.ಹಾಗೆ ಮಿಕ್ಕಿರುವ ನೂರು ಎಕರೆ ಜಾಗದಲ್ಲಿ ಒಂದು ಎಲಿವೇಟರ್ ಪ್ಲೇ ಓವರ್ ಮಾಡಿದರೆ ಸೂಕ್ತ ಎಂದರು
    1
    ಪಣತ್ತೂರಿನಲ್ಲಿ 45 ಎಕರೆ ಅರಣ್ಯ ಭೂಮಿ ಉದ್ಘಾಟನೆಯಾಗಿದೆ,ಆದರೆ 145 ಎಕರೆ ಅರಣ್ಯ ಭೂಮಿಯು ಉದ್ಯಾನವನವಾಗಿ ಆಗಬೇಕು 

ಮಹದೇವಪುರ ಕ್ಷೇತ್ರದಲ್ಲಿ 6ರಿಂದ 7 ಲಕ್ಷ ಜನ ಮತದಾರರೇ ಇದ್ದಾರೆ.ಇನ್ನು ಹೆಚ್ಚುವರಿಯಾಗಿ ಇಲ್ಲಿಗೆ ಬಂದು ಕೆಲಸ ಮಾಡಿ ಹೋಗುವವರು ನೋಡಿದರೆ 10 ಲಕ್ಷ ಆಗುತ್ತೆ   ಇವುಗಳ ಅಭಿವೃದ್ಧಿಗೆ ಎಂಪಿ ಅನುದಾನವನ್ನು ನೀಡಲು ತಯಾರಿದ್ದೇವೆ  .145 ಎಕರೆಗಳನ್ನು ಮೂರು ಭಾಗವಾಗಿ ವಿಂಗಡಿಸಲಾಗಿದೆ .ಒಂದು ಭಾಗದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ.ಹಾಗೆ ಮಿಕ್ಕಿರುವ ನೂರು ಎಕರೆ ಜಾಗದಲ್ಲಿ ಒಂದು ಎಲಿವೇಟರ್ ಪ್ಲೇ ಓವರ್ ಮಾಡಿದರೆ ಸೂಕ್ತ ಎಂದರು
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಭಾಗಿ ಬೆಂಗಳೂರು:ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅವರು ಉಪಸ್ಥಿತರಿದ್ದರು.
    1
    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಭಾಗಿ
ಬೆಂಗಳೂರು:ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅವರು ಉಪಸ್ಥಿತರಿದ್ದರು.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ. ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ. ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಆರೋಪಿಗಳ ಬಂಧನಕ್ಕೆ ಪ್ರತಿಭಟನೆ ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು. ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
    3
    ನೀರು ಬಿಡುವ ವಿಚಾರದಲ್ಲಿ ಹಲ್ಲೆ ಆರೋಪ ನೀರುಗಂಟಿ ಆತ್ಮಹತ್ಯೆ; ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ
ಕನಕಪುರ:ನೀರು ಸರಬರಾಜು ಮಾಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಮನನೊಂದು ಗ್ರಾಮ ಪಂಚಾಯಿತಿ ನೀರುಗಂಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕಡಬೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹಣಕಡಬೂರು ಗ್ರಾಮದ ನಿವಾಸಿ ಹಾಗೂ ಹೊಸದುರ್ಗ ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುನಿಸಿದ್ದೇಗೌಡ (56) ಎಂದು ಗುರುತಿಸಲಾಗಿದೆ.
ಅಣಕಡಬೂರು ಗ್ರಾಮದಲ್ಲಿರುವ ಎರಡು ಕೊಳವೆಬಾವಿಗಳ ಪೈಕಿ ಒಂದು ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ನೀರು ಸರಬರಾಜು ಮಾಡಲು ತೊಂದರೆಯಾಗಿತ್ತು ಎನ್ನಲಾಗಿದೆ. ಈ ನಡುವೆ ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿರುವ ಡಿ.ಕೆ. ಶಿವಕುಮಾರ್ ಎಂಬವರು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಂತೆ ಒತ್ತಾಯಿಸಿದ್ದರು ಎಂದು ತಿಳಿದುಬಂದಿದೆ.
ಶನಿವಾರ ನೀರಿನ ವಾಲ್ವ್ ತಿರುಗಿಸುತ್ತಿದ್ದ ಸಂದರ್ಭದಲ್ಲಿ ನೀರು ಬಿಡುವ ವಿಚಾರಕ್ಕೆ ಶಿವಕುಮಾರ್, ಅವರ ತಂದೆ ಕಾಳೇಗೌಡ ಹಾಗೂ ಅತ್ತೆ ಸುಶೀಲಮ್ಮ ಅವರು ಮುನಿಸಿದ್ದೇಗೌಡ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇದರಿಂದ ಮನನೊಂದ ಮುನಿಸಿದ್ದೇಗೌಡ ಅವರು ಘಟನೆ ನಡೆದ ಕೆಲವೇ ಸಮಯದಲ್ಲಿ ಮನೆಗೆ ತೆರಳಿ ದನದ ಕೊಟ್ಟಿಗೆಯ ಮೇಲ್ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮೃತದೇಹವನ್ನು ಕನಕಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಆರೋಪಿಗಳ ಬಂಧನಕ್ಕೆ ಪ್ರತಿಭಟನೆ
ಮುನಿಸಿದ್ದೇಗೌಡ ಅವರ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ, ಸಿಐಟಿಯು ಹಾಗೂ ಗ್ರಾಮಸ್ಥರು ಮೃತದೇಹವನ್ನು ಕೋಡಿಹಳ್ಳಿ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವರು ಮಾತನಾಡಿ, ಘಟನೆ ನಡೆದು 24 ಗಂಟೆ ಕಳೆದರೂ ಪ್ರಕರಣ ದಾಖಲಿಸಿಲ್ಲ ಹಾಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.
ಗ್ರಾಮದಲ್ಲಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿ ನೀರು ಸರಬರಾಜು ಮಾಡುತ್ತಿದ್ದ ನೀರುಗಂಟಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ಸರ್ಕಾರಿ ಸೌಲಭ್ಯ, ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರ ಒತ್ತಡದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಹಣಕಡಬೂರು ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು.
    user_ಶಿವು.ಎಸ್ ದೊಡ್ಡಆಲಹಳ್ಳಿ
    ಶಿವು.ಎಸ್ ದೊಡ್ಡಆಲಹಳ್ಳಿ
    Local News Reporter ಕನಕಪುರ, ರಾಮನಗರ, ಕರ್ನಾಟಕ•
    1 day ago
  • ಬೆಂಗಳೂರಿನಲ್ಲಿ 21% ಅರಣ್ಯ ಭೂಮಿ ಇದೆ 33% ಆಗಬೇಕು ,ಕಾಡು ಬೆಳೆಸುವ ಕೆಲಸ ರಾಜ್ಯದಲ್ಲೂ‌, ದೇಶದಲ್ಲೂ ನಡೆಯಬೇಕು ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ ಪರಿಸರ ವೃದ್ಧಿಯ ಜೊತೆಗೆ ವನ್ಯಜೀವಿಗಳ ರಕ್ಷಣೆ , ವನ್ಯಜೀವಿಗಳಿಂದ ಮಾನವರ ರಕ್ಷಣೆಯು ಆಗಬೇಕು ಆನೆಗಳು ಹೆಚ್ಚಿರುವ ಭಾಗದಲ್ಲಿ ಹೆಚ್ಚಾದ ಸುರಕ್ಷಿತ ಕ್ರಮಗಳನ್ನು ಕೈಗೊಂಡಿದ್ದರು , ಕೆಲವೊಮ್ಮೆ ಅನಾಹುತಗಳು ನಡೀತಿದೆ ಈಗ ಪಣತ್ತೂರಿನಲ್ಲಿ ನಗರ ಉದ್ಯಾನವನ ಉದ್ಘಾಟನೆ ಆಗಿದೆ ಹಾಗೆ ರಸ್ತೆ ಹಾಗೂ ಸೇತುವೆ ಬೇಡಿಕೆ ಇದೆ ಇದರ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತವೆ ಎಂದಿದ್ದಾರೆ
    1
    ಬೆಂಗಳೂರಿನಲ್ಲಿ 21% ಅರಣ್ಯ ಭೂಮಿ ಇದೆ 33% ಆಗಬೇಕು ,ಕಾಡು ಬೆಳೆಸುವ ಕೆಲಸ ರಾಜ್ಯದಲ್ಲೂ‌, ದೇಶದಲ್ಲೂ ನಡೆಯಬೇಕು ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ
ಪರಿಸರ ವೃದ್ಧಿಯ ಜೊತೆಗೆ ವನ್ಯಜೀವಿಗಳ ರಕ್ಷಣೆ , ವನ್ಯಜೀವಿಗಳಿಂದ ಮಾನವರ ರಕ್ಷಣೆಯು ಆಗಬೇಕು  
ಆನೆಗಳು ಹೆಚ್ಚಿರುವ ಭಾಗದಲ್ಲಿ ಹೆಚ್ಚಾದ ಸುರಕ್ಷಿತ ಕ್ರಮಗಳನ್ನು ಕೈಗೊಂಡಿದ್ದರು , ಕೆಲವೊಮ್ಮೆ ಅನಾಹುತಗಳು ನಡೀತಿದೆ  
ಈಗ ಪಣತ್ತೂರಿನಲ್ಲಿ ನಗರ ಉದ್ಯಾನವನ ಉದ್ಘಾಟನೆ ಆಗಿದೆ ಹಾಗೆ ರಸ್ತೆ ಹಾಗೂ ಸೇತುವೆ ಬೇಡಿಕೆ ಇದೆ 
ಇದರ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತವೆ ಎಂದಿದ್ದಾರೆ
    user_Darshan
    Darshan
    Local News Reporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಮಸೀದಿ ಮುಂದೆ ಏನಕ್ಕೆ ಪಟಾಕಿ ಹೊಡಿಬೇಕು? ಇನ್ಸ್ಪೆಕ್ಟರ್ ಪರ ಯತೀಂದ್ರ ಬ್ಯಾಟಿಂಗ್ ಮಸೀದಿ ಮುಂದೆ ಏನಕ್ಕೆ ಪಟಾಕಿ ಹೊಡಿಬೇಕು? ಇನ್ಸ್ಪೆಕ್ಟರ್ ಪರ ಯತೀಂದ್ರ ಬ್ಯಾಟಿಂಗ್
    1
    ಮಸೀದಿ ಮುಂದೆ ಏನಕ್ಕೆ ಪಟಾಕಿ ಹೊಡಿಬೇಕು?
ಇನ್ಸ್ಪೆಕ್ಟರ್ ಪರ ಯತೀಂದ್ರ ಬ್ಯಾಟಿಂಗ್ 
ಮಸೀದಿ ಮುಂದೆ ಏನಕ್ಕೆ ಪಟಾಕಿ ಹೊಡಿಬೇಕು?
ಇನ್ಸ್ಪೆಕ್ಟರ್ ಪರ ಯತೀಂದ್ರ ಬ್ಯಾಟಿಂಗ್
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಕೇಂದ್ರದ ನಾಯಕರಿಂದ ಸಭೆ: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು:ನೂತನವಾಗಿ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಸುರ್ಜೇವಾಲ ಅವರು ಆಗಮಿಸಿರುವ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು. ನಾಳೆಯಿಂದ (ಗುರುವಾರ) 3 ದಿನಗಳ ಕಾಲ ವಿವಿಧ ಜಿಲ್ಲೆಗಳ ಪ್ರವಾಸದ ಬಗ್ಗೆ ಕೇಳಿದಾಗ, "ಇಂದಿನಿಂದ (ಬುಧವಾರ) ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಪ್ರವಾಸ ಮಾಡಲಿದ್ದೇನೆ. ವಿಧಾನ ಮಂಡಲ ಅಧಿವೇಶನದಲ್ಲಿ ಬರಗಾಲ ಹಾಗೂ ಕಸ್ತೂರಿ ರಂಗನ್ ವರದಿಯ ಕುರಿತಂತೆ ಚರ್ಚೆ ನಡೆಯಲಿದೆ" ಎಂದರು.
    1
    ನೂತನ ಜಿಲ್ಲಾ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಕೇಂದ್ರದ ನಾಯಕರಿಂದ ಸಭೆ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು:ನೂತನವಾಗಿ ಜಿಲ್ಲಾ ಅಧ್ಯಕ್ಷರು ನೇಮಕಗೊಂಡಿದ್ದು, ಅವರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. 
ಸದಾಶಿವನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಸುರ್ಜೇವಾಲ ಅವರು ಆಗಮಿಸಿರುವ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು. 
ನಾಳೆಯಿಂದ (ಗುರುವಾರ) 3 ದಿನಗಳ ಕಾಲ ವಿವಿಧ ಜಿಲ್ಲೆಗಳ ಪ್ರವಾಸದ ಬಗ್ಗೆ ಕೇಳಿದಾಗ, "ಇಂದಿನಿಂದ (ಬುಧವಾರ) ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳ ಪ್ರವಾಸ ಮಾಡಲಿದ್ದೇನೆ. ವಿಧಾನ ಮಂಡಲ ಅಧಿವೇಶನದಲ್ಲಿ ಬರಗಾಲ ಹಾಗೂ ಕಸ್ತೂರಿ ರಂಗನ್ ವರದಿಯ ಕುರಿತಂತೆ ಚರ್ಚೆ ನಡೆಯಲಿದೆ" ಎಂದರು.
    user_ಶಿವನಿ
    ಶಿವನಿ
    Fruit & Vegetable Exporter ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.