logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಿರ್ಗತಿಕ ಮಹಿಳೆಗೆ ನೆರವಾದ ಪ್ರಮೋದ ಬೆಳಗಾವಿ: ಮಾನವೀಯತೆ ಮೆರೆದ ಐಸಿಡಿಎಸ್ ಪೋಷಣ ಸಂಯೋಜಕ ದೇವರಹಿಪ್ಪರಗಿ: ಸಿಂದಗಿಯಿಂದ ವಿಜಯಪುರಕ್ಕೆ ತೆರಳುವ ಮಾರ್ಗಮಧ್ಯೆ ಪಡಗಾನೂರ ಕ್ರಾಸ್ ಬಳಿ ಅಪರಿಚಿತ ನಿರ್ಗತಿಕ ಮಹಿಳೆಯೊಬ್ಬರು ಕಂಡುಬಂದಿದ್ದು, ಅವರ ಸಂಕಷ್ಟಕ್ಕೆ ಸ್ಪಂದಿಸಿದ ಸಿಂದಗಿ ತಾಲೂಕು ಐಸಿಡಿಎಸ್ ಪೋಷಣ ಸಂಯೋಜಕ ಪ್ರಮೋದ ಬೆಳಗಾವಿ ಅವರು ಮಾನವೀಯತೆ ಮೆರೆದಿದ್ದಾರೆ. ಮಹಿಳೆಯನ್ನು ಕಂಡ ತಕ್ಷಣ ಪ್ರಮೋದ ಬೆಳಗಾವಿ ಅವರು 112ಕ್ಕೆ ಕರೆ ಮಾಡಿ ಪೊಲೀಸರ ಸಹಾಯ ಪಡೆದು ಮಹಿಳೆಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬಳಿಕ ಮಹಿಳೆಯನ್ನು ನಿರ್ಗತಿಕರ ಕುಟೀರದ ಸಿಬ್ಬಂದಿಗೆ ಒಪ್ಪಿಸಿ, ಆಕೆಗೆ ಅಗತ್ಯ ಆಶ್ರಯ ಮತ್ತು ನೆರವು ದೊರೆಯುವಂತೆ ಮಾಡಿದ್ದಾರೆ. ದೇವರಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಮಾನವೀಯ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಕಷ್ಟದಲ್ಲಿದ್ದ ಮಹಿಳೆಯ ನೆರವಿಗೆ ಸಮಯೋಚಿತವಾಗಿ ಧಾವಿಸಿದ ಪ್ರಮೋದ ಬೆಳಗಾವಿ ಅವರ ಮಾನವೀಯ ಕಾಳಜಿಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಸಂಕಷ್ಟದಲ್ಲಿರುವವರಿಗೆ ನೆರವಾಗುವುದೇ ನಿಜವಾದ ಮಾನವೀಯತೆ.

20 hrs ago
user_NERA NUDI NEWS
NERA NUDI NEWS
ಸಿಂದಗಿ, ವಿಜಯಪುರ, ಕರ್ನಾಟಕ•
20 hrs ago
27b95f19-6a60-4fd0-a3df-faae26a2c6d7

ನಿರ್ಗತಿಕ ಮಹಿಳೆಗೆ ನೆರವಾದ ಪ್ರಮೋದ ಬೆಳಗಾವಿ: ಮಾನವೀಯತೆ ಮೆರೆದ ಐಸಿಡಿಎಸ್ ಪೋಷಣ ಸಂಯೋಜಕ ದೇವರಹಿಪ್ಪರಗಿ: ಸಿಂದಗಿಯಿಂದ ವಿಜಯಪುರಕ್ಕೆ ತೆರಳುವ ಮಾರ್ಗಮಧ್ಯೆ ಪಡಗಾನೂರ ಕ್ರಾಸ್ ಬಳಿ ಅಪರಿಚಿತ ನಿರ್ಗತಿಕ ಮಹಿಳೆಯೊಬ್ಬರು ಕಂಡುಬಂದಿದ್ದು, ಅವರ ಸಂಕಷ್ಟಕ್ಕೆ ಸ್ಪಂದಿಸಿದ ಸಿಂದಗಿ ತಾಲೂಕು ಐಸಿಡಿಎಸ್ ಪೋಷಣ ಸಂಯೋಜಕ ಪ್ರಮೋದ ಬೆಳಗಾವಿ ಅವರು ಮಾನವೀಯತೆ ಮೆರೆದಿದ್ದಾರೆ. ಮಹಿಳೆಯನ್ನು ಕಂಡ ತಕ್ಷಣ ಪ್ರಮೋದ ಬೆಳಗಾವಿ ಅವರು 112ಕ್ಕೆ ಕರೆ ಮಾಡಿ ಪೊಲೀಸರ ಸಹಾಯ ಪಡೆದು ಮಹಿಳೆಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬಳಿಕ ಮಹಿಳೆಯನ್ನು ನಿರ್ಗತಿಕರ ಕುಟೀರದ ಸಿಬ್ಬಂದಿಗೆ ಒಪ್ಪಿಸಿ, ಆಕೆಗೆ ಅಗತ್ಯ ಆಶ್ರಯ ಮತ್ತು ನೆರವು ದೊರೆಯುವಂತೆ ಮಾಡಿದ್ದಾರೆ. ದೇವರಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಮಾನವೀಯ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಕಷ್ಟದಲ್ಲಿದ್ದ ಮಹಿಳೆಯ ನೆರವಿಗೆ ಸಮಯೋಚಿತವಾಗಿ ಧಾವಿಸಿದ ಪ್ರಮೋದ ಬೆಳಗಾವಿ ಅವರ ಮಾನವೀಯ ಕಾಳಜಿಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಸಂಕಷ್ಟದಲ್ಲಿರುವವರಿಗೆ ನೆರವಾಗುವುದೇ ನಿಜವಾದ ಮಾನವೀಯತೆ.

More news from ಕರ್ನಾಟಕ and nearby areas
  • ಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿ ಸಿಂದಗಿ : ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಿ, ರೈತರ ನೆರವಿಗೆ ಧಾವಿಸಬೇಕು ಎಂದು ರೈತ ಹೋರಾಟಗಾರ ಪೀರು ಕೇರೂರ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು. ಅಲ್ಲದೆ, ಕೇಂದ್ರ ಸರ್ಕಾರವೂ ರೈತರ ನೆರವಿಗೆ ಬಂದು ಅಗತ್ಯ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ರಾಜಕೀಯ ಹಗ್ಗಜಗ್ಗಾಟದಲ್ಲಿ ರೈತರ ಸಮಸ್ಯೆಗಳನ್ನು ಮರೆತು ಕುಳಿತಿವೆ ಎಂದು ಪೀರು ಕೇರೂರ ಆರೋಪಿಸಿದರು. ರೈತರ ಸಂಕಷ್ಟಕ್ಕೆ ಸರ್ಕಾರಗಳು ಕೂಡಲೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪೀರು ಕೇರೂರ ಎಚ್ಚರಿಕೆ ನೀಡಿದರು.
    1
    ಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿ
ಸಿಂದಗಿ : ರಾಜ್ಯದಲ್ಲಿ ಬರದ ಛಾಯೆ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿಬರಗಾಲ ಘೋಷಣೆ, ಬೆಳೆ ಪರಿಹಾರ ಹಾಗೂ ಸಾಲಮನ್ನಾಕ್ಕೆ ಪೀರು ಕೇರೂರ ಮನವಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಿ, ರೈತರ ನೆರವಿಗೆ ಧಾವಿಸಬೇಕು ಎಂದು ರೈತ ಹೋರಾಟಗಾರ ಪೀರು ಕೇರೂರ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು. ಅಲ್ಲದೆ, ಕೇಂದ್ರ ಸರ್ಕಾರವೂ ರೈತರ ನೆರವಿಗೆ ಬಂದು ಅಗತ್ಯ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವಿನ ರಾಜಕೀಯ ಹಗ್ಗಜಗ್ಗಾಟದಲ್ಲಿ ರೈತರ ಸಮಸ್ಯೆಗಳನ್ನು ಮರೆತು ಕುಳಿತಿವೆ ಎಂದು ಪೀರು ಕೇರೂರ ಆರೋಪಿಸಿದರು.
ರೈತರ ಸಂಕಷ್ಟಕ್ಕೆ ಸರ್ಕಾರಗಳು ಕೂಡಲೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪೀರು ಕೇರೂರ ಎಚ್ಚರಿಕೆ ನೀಡಿದರು.
    user_NERA NUDI NEWS
    NERA NUDI NEWS
    ಸಿಂದಗಿ, ವಿಜಯಪುರ, ಕರ್ನಾಟಕ•
    22 hrs ago
  • ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಗುಂಡಣ್ಣ ಡಿಗ್ಗಿ ಮಾತುಗಳಿಗೆ ಸಭಿಕರಿಂದ ಭರ್ಜರಿ ಚಪ್ಪಾಳೆ, ನಗೆ
    1
    ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಗುಂಡಣ್ಣ ಡಿಗ್ಗಿ ಮಾತುಗಳಿಗೆ ಸಭಿಕರಿಂದ ಭರ್ಜರಿ ಚಪ್ಪಾಳೆ, ನಗೆ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    18 hrs ago
  • ಕರ್ನಾಟಕದಲ್ಲಿ ಗಣಪತಿಗೆ ಮೆರವಣಿಗೆಗೆ ಡಿಜೆ ಅನುಮತಿ ಇಲ್ಲಾ ಎಂದ ಗೃಹ ಮಂತ್ರಿ ಪಿಯಾಂಕ :ಖರ್ಗೆ ವಿರುದ್ಧ ಬಿ ಜೆ ಪಿ ಮುಖಂಡರು ಗಣಪತಿಗೆ ಯಾಕೆ ಡಿಜಿ ಇಲ್ಲಾ ಗೃಹ ಮಂತ್ರಿಯ ರೆ ಮುಸಾಲ್ಮಾನರಿಗೆ ನಾಲಕ್ಕು ಐದು ಸಲಾ ಮೈಕ್ ಹಚ್ಚಿ ನಮಾಜ್ ಮಾಡುತ್ತಾರೆ ನಮಗ ಏಕೆ ಇಲ್ಲ ಹೇಳಿ ಗೃಹ ಮಂತ್ರಿ ಯರೆ ನಮಗೂ ಡಿಜಿ ಪರ್ಮಿಷನ್ ಕೊಡಬೇಕು ಇಲ್ಲಾಂದ್ರೆ ನಾವು ಬಿಡುವುದಿಲ್ಲ ಬಿಜೆಪಿ ಮುಖಂಡ ರಾಜ ಹೇಳಿಕೆ
    1
    ಕರ್ನಾಟಕದಲ್ಲಿ ಗಣಪತಿಗೆ ಮೆರವಣಿಗೆಗೆ ಡಿಜೆ ಅನುಮತಿ ಇಲ್ಲಾ ಎಂದ ಗೃಹ ಮಂತ್ರಿ ಪಿಯಾಂಕ :ಖರ್ಗೆ ವಿರುದ್ಧ ಬಿ ಜೆ ಪಿ ಮುಖಂಡರು
ಗಣಪತಿಗೆ ಯಾಕೆ ಡಿಜಿ ಇಲ್ಲಾ ಗೃಹ ಮಂತ್ರಿಯ ರೆ ಮುಸಾಲ್ಮಾನರಿಗೆ ನಾಲಕ್ಕು ಐದು  ಸಲಾ ಮೈಕ್ ಹಚ್ಚಿ ನಮಾಜ್ ಮಾಡುತ್ತಾರೆ ನಮಗ ಏಕೆ ಇಲ್ಲ ಹೇಳಿ ಗೃಹ ಮಂತ್ರಿ ಯರೆ ನಮಗೂ ಡಿಜಿ ಪರ್ಮಿಷನ್ ಕೊಡಬೇಕು  ಇಲ್ಲಾಂದ್ರೆ ನಾವು ಬಿಡುವುದಿಲ್ಲ ಬಿಜೆಪಿ ಮುಖಂಡ  ರಾಜ  ಹೇಳಿಕೆ
    user_Sharanugouda Patil
    Sharanugouda Patil
    Muddebihal, Vijayapura•
    9 hrs ago
  • "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    1
    "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ 

ಕಲ್ಯಾಣ ವಾರ್ತೆ -ಯಾದಗಿರಿ 
ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. 
೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು.
*ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ 
೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು  ಕೋಲಿ ಸಮಾಜದ ಆಶಯವಾಗಿದೆ*-"
*ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    user_DR. S.S. NAYAK
    DR. S.S. NAYAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    11 hrs ago
  • ಜಿಲ್ಲೆಯಲ್ಲಿ ಬಾಕಿರುವ ಬಿಲ್ಲನ್ನು ಶೀಘ್ರದಲ್ಲೇ ಪಾವತಿಸಲು ಸೂಚನೆ ನೀಡಲಾಗಿದೆ: ಡಿಸಿ ಸಂಗಪ್ಪ
    1
    ಜಿಲ್ಲೆಯಲ್ಲಿ ಬಾಕಿರುವ ಬಿಲ್ಲನ್ನು ಶೀಘ್ರದಲ್ಲೇ ಪಾವತಿಸಲು ಸೂಚನೆ ನೀಡಲಾಗಿದೆ: ಡಿಸಿ ಸಂಗಪ್ಪ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ‌ ಯರಗಲ್ಲ ಭೇಟಿನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ‌ ಯರಗಲ್ಲ ಭೇಟಿ ಮುಧೋಳ : ನಗರದಲ್ಲಿನ ತಾಲೂಕು ಸಾರ್ವಜನಿಕರ ಆಸ್ಪತ್ರೆಯಲ್ಲಿನ ಸಿಬ್ಬಂದಿ‌ ಕೊರತೆ ಹಾಗೂ ಅವ್ಯವಸ್ಥೆ ವಿರುದ್ಧ ಭೀಮ್ ಆರ್ಮಿ ಮೂಲ‌ ನಿವಾಸಿ ಏಕತಾ ಪರಿಷತ್‌ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ರಾಜಕುಮಾರ ಯರಗಲ್ಲ ಅವರು ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು.
    1
    ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ‌ ಯರಗಲ್ಲ ಭೇಟಿನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು.
ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ‌ ಯರಗಲ್ಲ ಭೇಟಿ
ಮುಧೋಳ : ನಗರದಲ್ಲಿನ ತಾಲೂಕು ಸಾರ್ವಜನಿಕರ ಆಸ್ಪತ್ರೆಯಲ್ಲಿನ ಸಿಬ್ಬಂದಿ‌ ಕೊರತೆ ಹಾಗೂ ಅವ್ಯವಸ್ಥೆ ವಿರುದ್ಧ ಭೀಮ್ ಆರ್ಮಿ ಮೂಲ‌ ನಿವಾಸಿ ಏಕತಾ ಪರಿಷತ್‌ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ರಾಜಕುಮಾರ ಯರಗಲ್ಲ ಅವರು ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು.
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸರಿಂದ ಪಥಸಂಚಲನ ಇಳಕಲ್ಲ : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಮಂಗಳವಾರ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಯಿತು. ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಪಾಟೀಲ ಹಾಗೂ ಕ್ರೈಂ ಪಿಎಸ್‌ಐ ಸಿ. ಬಿ. ಕಿರಶ್ಯಾಳ ಅವರ ನೇತೃತ್ವದಲ್ಲಿ ಪಥಸಂಚಲನ ಜರುಗಿತು. ಪೊಲೀಸ್ ಠಾಣೆಯಿಂದ ಆರಂಭಗೊAಡ ಪಥಸಂಚಲನವು ಕಂಠಿ ವೃತ್ತ, ದ್ವಾರಕಾ ಲಾಡ್ಜ್, ಗ್ರಾಮ ಚಾವಡಿ, ಗಾಂಧಿ ಚೌಕ್, ಬಜಾರ್ ಬಸವಣ್ಣನ ಗುಡಿ, ಕೊಪ್ಪರದಪೇಟೆ ಹಾಗೂ ಪಶು ಆಸ್ಪತ್ರೆ ಮಾರ್ಗವಾಗಿ ಸಂಚರಿಸಿ ಪೊಲೀಸ್ ಬಯಲಿನಲ್ಲಿ ಮುಕ್ತಾಯಗೊಂಡಿತು. ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತಾ ಭಾವ ಮೂಡಿಸಲು ಈ ಪಥಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
    2
    ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸರಿಂದ ಪಥಸಂಚಲನ
ಇಳಕಲ್ಲ : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಮಂಗಳವಾರ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ  ನಡೆಯಿತು.
ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಪಾಟೀಲ ಹಾಗೂ ಕ್ರೈಂ ಪಿಎಸ್‌ಐ ಸಿ. ಬಿ. ಕಿರಶ್ಯಾಳ ಅವರ ನೇತೃತ್ವದಲ್ಲಿ ಪಥಸಂಚಲನ ಜರುಗಿತು. 
ಪೊಲೀಸ್ ಠಾಣೆಯಿಂದ ಆರಂಭಗೊAಡ ಪಥಸಂಚಲನವು ಕಂಠಿ ವೃತ್ತ, ದ್ವಾರಕಾ ಲಾಡ್ಜ್, ಗ್ರಾಮ ಚಾವಡಿ, ಗಾಂಧಿ ಚೌಕ್, ಬಜಾರ್ ಬಸವಣ್ಣನ ಗುಡಿ, ಕೊಪ್ಪರದಪೇಟೆ ಹಾಗೂ ಪಶು ಆಸ್ಪತ್ರೆ ಮಾರ್ಗವಾಗಿ ಸಂಚರಿಸಿ ಪೊಲೀಸ್ ಬಯಲಿನಲ್ಲಿ ಮುಕ್ತಾಯಗೊಂಡಿತು.
ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತಾ ಭಾವ ಮೂಡಿಸಲು ಈ ಪಥಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    10 hrs ago
  • ಸ್ವ ಕ್ಷೇತ್ರದಲ್ಲೇ ಸಚಿವ ಡಾ. ಅಜಯ್ ಸಿಂಗ್ ವಿರುದ್ಧ ಧಿಕ್ಕಾರದ ಕೂಗು ಜೇವರ್ಗಿ: ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಚಿವ ಡಾ. ಅಜಯ್ ಸಿಂಗ್ ಅವರ ಸ್ವಕ್ಷೇತ್ರ ಜೇವರ್ಗಿಯಲ್ಲೇ ಕೆಲ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘಟನೆಗಳ ಕಾರ್ಯಕರ್ತರು ಸಚಿವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ವಕ್ಷೇತ್ರದಲ್ಲೇ ಸಚಿವರ ವಿರುದ್ಧ ಧಿಕ್ಕಾರದ ಕೂಗು ಕೇಳಿಬಂದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ತಮ್ಮ ಬೇಡಿಕೆಗಳನ್ನು ಸರ್ಕಾರ ಹಾಗೂ ಸಚಿವರು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಘಟನೆಗಳ ಮುಖಂಡರು ಆಗ್ರಹಿಸಿದರು. #ಜೇವರ್ಗಿ #ಅಜಯ್_ಸಿಂಗ್ #ಧಿಕ್ಕಾರದ_ಕೂಗು #ಆಕ್ರೋಶ #ಸಂಘಟನೆಗಳು
    1
    ಸ್ವ ಕ್ಷೇತ್ರದಲ್ಲೇ ಸಚಿವ ಡಾ. ಅಜಯ್ ಸಿಂಗ್ ವಿರುದ್ಧ ಧಿಕ್ಕಾರದ ಕೂಗು
ಜೇವರ್ಗಿ: ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಚಿವ ಡಾ. ಅಜಯ್ ಸಿಂಗ್ ಅವರ ಸ್ವಕ್ಷೇತ್ರ ಜೇವರ್ಗಿಯಲ್ಲೇ ಕೆಲ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘಟನೆಗಳ ಕಾರ್ಯಕರ್ತರು ಸಚಿವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸ್ವಕ್ಷೇತ್ರದಲ್ಲೇ ಸಚಿವರ ವಿರುದ್ಧ ಧಿಕ್ಕಾರದ ಕೂಗು ಕೇಳಿಬಂದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ತಮ್ಮ ಬೇಡಿಕೆಗಳನ್ನು ಸರ್ಕಾರ ಹಾಗೂ ಸಚಿವರು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಘಟನೆಗಳ ಮುಖಂಡರು ಆಗ್ರಹಿಸಿದರು.
#ಜೇವರ್ಗಿ #ಅಜಯ್_ಸಿಂಗ್ #ಧಿಕ್ಕಾರದ_ಕೂಗು #ಆಕ್ರೋಶ #ಸಂಘಟನೆಗಳು
    user_NERA NUDI NEWS
    NERA NUDI NEWS
    ಸಿಂದಗಿ, ವಿಜಯಪುರ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.