ಮಂಗಳೂರು: ಮರ್ಸಿ ಬ್ಯೂಟಿ ಅಕಾಡೆಮಿಯ ಬ್ಯೂಟಿ ಥೆರಪಿಸ್ಟ್, ಮೇಕಪ್ ಆರ್ಟಿಸ್ಟ್ ಕೋರ್ಸ್‌ಗಳ ಪದವಿ ಪ್ರದಾನ ಮಂಗಳೂರು, ಸೆ.16: ನಗರದ ಬಂಟ್ಸ್ ಹಾಸ್ಟೆಲ್‌ನಲ್ಲಿರುವ ಮರ್ಸಿ ಬ್ಯೂಟಿ ಅಕಾಡೆಮಿ ಅಂಡ್ ಲೇಡೀಸ್ ಸಲೂನ್ ವತಿಯಿಂದ ಬ್ಯೂಟಿ ಥೆರಪಿಸ್ಟ್ ಹಾಗೂ ಮೇಕಪ್ ಆರ್ಟಿಸ್ಟ್ ಕೋರ್ಸ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಬುಧವಾರ ನಡೆಯಿತು. ಮರ್ಸಿ ಬ್ಯೂಟಿ ಅಕಾಡೆಮಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದೆ ಯಕ್ಷಪ್ರಿಯೆ ಅರ್ಷಿಯಾ ಖಾನ್ ಹಾಗೂ ಅಂತಾರಾಷ್ಟ್ರೀಯ ರೂಪದರ್ಶಿ ತಷ್ಮಾ ಚೇತನ್ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭ ಆರ್ಷಿಯಾ ಖಾನ್ ಮಾತನಾಡಿ, ಬ್ಯೂಟಿ ಥೆರಪಿ, ಮೇಕಪ್ ಕಲೆ ಸೇರಿದಂತೆ ಸೌಂದರ್ಯ ಕ್ಷೇತ್ರದಲ್ಲಿ ವೃತ್ತಿ ರೂಪಿಸಿಕೊಳ್ಳಲು ಬಯಸುವವರಿಗೆ ಕೌಶಲ್ಯಾಧಾರಿತ ತರಬೇತಿ ನೀಡುವ ಮೂಲಕ ಉದ್ಯೋಗ ಹಾಗೂ ಸ್ವಯಂ ಉದ್ಯಮದ ಅವಕಾಶಗಳಿಗೆ ದಾರಿ ಮಾಡಿಕೊಡುವ ಪ್ರಯತ್ನವನ್ನು ಮರ್ಸಿ ವೀಣಾ ಬ್ಯೂಟಿ ಅಕಾಡೆಮಿ ಮಾಡುತ್ತಿದೆ. ಇನ್ನೂ ಹೆಚ್ಚಿನವರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ರೂಪದರ್ಶಿ ತಷ್ಮಾ ಚೇತನ್ ಮಾತನಾಡಿ, ಸೌಂದರ್ಯ ಕ್ಷೇತ್ರ ನಿರಂತರವಾಗಿ ಬೆಳವಣಿಗೆಯನ್ನು ಕಾಣುತ್ತಿದೆ. ಬೇರೆ ಬೇರೆ ರೀತಿಯ ಅವಕಾಶಗಳು ಇದ್ದು, ಅದಕ್ಕೆ ಸಂಬಂಧಿಸಿದಂತೆ ಪರಿಣತಿಯನ್ನು ಪಡೆದುಕೊಳ್ಳುವುದಕ್ಕೆ ಮರ್ಸಿ ಬ್ಯೂಟಿ ಅಕಾಡೆಮಿಯ ಕೋರ್ಸ್‌ಗಳು ಸಹಕಾರಿಯಾಗಿದೆ ಎಂದರು. ಸೌಂದರ್ಯ ಕ್ಷೇತ್ರದಲ್ಲಿ ವೃತ್ತಿಪರ ಕೌಶಲ್ಯಗಳನ್ನು ಬೆಳೆಸುವುದರ ಜೊತೆಗೆ ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸಿ ಸ್ವಾವಲಂಬಿ ಭವಿಷ್ಯ ರೂಪಿಸುವ ಉದ್ದೇಶದಿಂದ ಮರ್ಸಿ ಬ್ಯೂಟಿ ಅಕಾಡೆಮಿ ವಿವಿಧ ತರಬೇತಿಗಳನ್ನು ನೀಡುತ್ತಿದೆ. ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸಮಾರಂಭದಲ್ಲಿ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಮರ್ಸಿ ಬ್ಯೂಟಿ ಅಕಾಡೆಮಿಯ ಮಾಲಕರಾದ ಮರ್ಸಿ ವೀಣಾ ಡಿಸೋಜಾ ಉಪಸ್ಥಿತರಿದ್ದರು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ನೀಕ್ಷಾ, ಡೆವಿಟಾ, ಭವಿತಾ ಪ್ರಾರ್ಥಿಸಿದರು.

- ವಿವಿಧೆಡೆ ಅದ್ದೂರಿ ಗಣೇಶೋತ್ಸವ, ಭವ್ಯ ಶೋಭಾಯಾತ್ರೆ ಮೆರವಣಿಗೆ... ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ನಗರದ ಉಳ್ಳಾಲ ವಿದ್ಯಾವಿನಾಯಕ ಉತ್ಸವ ಸಮಿತಿ ವತಿಯಿಂದ 43 ನೇ ವರ್ಷದ ಗಣೇಶೋತ್ಸವ ಅಚರಣೆ ನಡೆದಿದೆ.ಹಾಗೂ ಬಗಂಬಿಲ ಸತ್ಯನಾರಾಯಣ ಮಂದಿರದಲ್ಲಿ 19 ವರ್ಷದ ಗಣೇಶೋತ್ಸವದ ಶೋಭಾಯಾತ್ರೆ ಮೆರವಣಿಗೆ ಅದ್ದೂರಿಯಾಗಿ ಜರುಗಿತು.ಇನ್ನೂ ಮೆರವಣಿಗೆಯಲ್ಲಿ ಕುಣಿತ ಭಜನಾ ತಂಡ, ಚೆಂಡೆ, ಸ್ತಬ್ಧ ಚಿತ್ರಗಳು ಭಾಗ ವಹಿಸಿದ್ದವು,1
- ಸುಂಟಿಕೊಪ್ಪದಲ್ಲಿ ಸಂಭ್ರಮದ ಶ್ರೀ ಗೌರಿ- ಗಣೇಶೋತ್ಸವ ಮೆರವಣಿಗೆ ಸುಂಟಿಕೊಪ್ಪ ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿಯ ವತಿಯಿಂದ 62ನೇ ವರ್ಷದ ಗೌರಿ ಮೆರವಣಿಗೆ ಮತ್ತು ಪ್ರತಿಷ್ಠಾಪನೆಯು ಶ್ರದ್ಧಾಭಕ್ತಿಯಿಂದ ಸೋಮವಾರ ನಡೆಯಿತು. ಕೋದಂಡ ರಾಮ ದೇವಾಲಯದಲ್ಲಿ ವಿಶೇಷ ಪೂಜೆಯ ನಂತರ ಬೆಳಿಗ್ಗೆ 9.30 ಗಂಟೆಗೆ ದೇವಾಲಯದಿಂದ ಹೊರಟು ಗದ್ದೆಹಳ್ಳ ಪಟ್ಟೆಮನೆ ಗೌರಮ್ಮನ ಬಾವಿಯಿಂದ ಗಂಗಾ ಜಲ ತಂದು ಗೌರಮ್ಮನಿಗೆ ಹೂವಿನ ಪೂಜೆ, ಗಂಗಾಪೂಜೆಯೊಂದಿಗೆ ಆಕರ್ಷಕ ಮಂಟಪದಲ್ಲಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ನಾದಸ್ವರ, ಯುವತಿಯರು ಕಳಸ ಹೊತ್ತು, ಭಜನೆಯೊಂದಿಗೆ ನೂರಾರು ಭಕ್ತರೊಂದಿಗೆ ಮೆರವಣಿಗೆ ಮೂಲಕ ಸಾಗಿ ಬೆಳಿಗ್ಗೆ 11ರ ಸಲ್ಲುವ ತುಲಾ ಲಗ್ನದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ಬೆಳಿಗ್ಗೆ 11.45ಗಂಟೆಗೆ ತುಲಾ ಲಗ್ನದಲ್ಲಿ ಗಣಪತಿ ಮೂರ್ತಿಯ ಪ್ರತಿಷ್ಠಾಪನೆ ನಡೆಯಿತು. ಅರ್ಚಕರಾದ ಮಂಜುನಾಥ್ ಭಟ್, ಹಾ.ಮ.ಗಣೇಶ್ ಶರ್ಮ ಅವರ ನೇತೃತ್ವದಲ್ಲಿ ಮಹಾಪೂಜೆ,ಮಹಾಮಂಗಳಾತಿ, ಪ್ರಸಾದ ವಿನಿಯೋಗ ನೆರವೇರಿತು.1
- ಶಿವಮೊಗ್ಗದಲ್ಲಿ ಸಂಭ್ರಮದ ಗಣೇಶೋತ್ಸವ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮತ್ತೂರು ರಸ್ತೆಯಲ್ಲಿ ಭಕ್ತಿ ಸಂಭ್ರಮ; 30ನೇ ವರ್ಷದ ಗಣೇಶ ಪ್ರತಿಷ್ಠಾಪನೆ1
- ಭದ್ರಾ ನಾಲೆಗಳಲ್ಲಿ ತಕ್ಷಣ ನೀರು ಹರಿಸಲು ಆಗ್ರಹಿಸಿ ರೈತರಿಂದ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ಭದ್ರಾವತಿ ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಆಗ್ರಹಿಸಿದರು. ಭದ್ರಾವತಿ: ತಾಲೂಕಿನ ರೈತರ ಬೆಳೆಗಳಿಗೆ ತಕ್ಷಣ ನೀರು ಹರಿಸಬೇಕೆಂದು ರೈತರು ಮಂಗಳವಾರ ಶಾಸಕರ ಗೃಹ ಕಛೇರಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಶಾಸಕರಿಗೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಕಲ್ಲಹಳ್ಳಿ ಶೇಖರ್ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ನೀರು ಹರಿಸುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಪ್ರಸ್ತುತ ಮಳೆ ಕೊರೆತೆಯಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಇದ್ದು, ಅಲ್ಲದೆ ಇದೀಗ ತಾಲೂಕಿನ ರೈತರ ಬೆಳೆಗಳಿಗೆ ನೀರಿನ ಅಗತ್ಯವಿದೆ. ತಕ್ಷಣ ಕಾಲುವೆಗಳಲ್ಲಿ ನೀರು ಹರಿಸುವ ಮೂಲಕ ರೈತರ ಹಿತಕಾಪಾಡುವಂತೆ ಆಗ್ರಹಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಾಗಿದೆ. ಇದರಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಗ್ರಾಮಗಳಲ್ಲಿ ಜನರಿಗೆ ಹಾಗು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾದ ಚಲುವರಾಯಸ್ವಾಮಿಯವರಿಗೆ ಪತ್ರ ಬರೆಯಲಾಗಿದ್ದು, ತಕ್ಷಣ ಎಡ ಮತ್ತು ಬಲದಂಡೆ ನಾಲೆ ಹಾಗು ಗೊಂದಿ ಜಲಾಶಯದ ನಾಲೆಗಳಿಗೆ ನೀರು ಹರಿಸುವಂತೆ ಕೋರಲಾಗಿದೆ. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸಚಿವರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅಲ್ಲದೆ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ಕಾಡಾ)ದ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಸಂಬಂಧ ೨-೩ ದಿನಗಳಲ್ಲಿ ಸಭೆ ನಡೆಯಲಿದ್ದು, ನೀರು ಬಿಡುವ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ರೈತರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗದಂತೆ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಮಾಜಿ ಸದಸ್ಯರಾದ ಎಸ್. ಕುಮಾರ್, ಎಚ್.ಎಲ್ ಷಡಾಕ್ಷರಿ, ಕಣ್ಣಪ್ಪ, ಶಾಂತಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.1
- ಶಿವಮೊಗ್ಗ-ಭದ್ರಾ ನದಿಯ ನೀರು ಎಡ, ಬಲ ಹಾಗೂ ಗೋಂದಿ ನಾಲೆ ಹರಿಸಲು ಬದ್ದ ಶಿವಮೊಗ್ಗ: ಭದ್ರಾ ಎಡನಾಲೆ ಮತ್ತು ಬಲನಾಲೆ ಮತ್ತು ಗೋಂದಿ ನಾಲೆ ನೀರನ್ನು ಆದಷ್ಟು ಬೇಗನೆ ಡ್ಯಾಮ್ ನಿಂದ ನೀರನ್ನು ಬಿಡಲಾಗುವುದು ಈ ವಿಚಾರವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ನಡೆಸಿದ್ದು ರೈತರು ಆತಂಕ ಪಡುವುದು ಬೇಡ ಎಂದು ಭದ್ರಾವತಿ ಶಾಸಕ ಬಿಕೆ. ಸಂಗಮೇಶ್ವರ್ ತಿಳಿಸಿದ್ದಾರೆ. ಅವರಿಂದು ತಮ್ಮ ಗೃಹಕಚೇರಿಯಲ್ಲಿ ನೆರೆದಿದ್ದ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದರು. ಕುಡಿಯುವ ಹಾಗೂ ದನಕರುಗಳಿಗೆ ನೀರು ಅವಶ್ಯಕತೆ ಇದೆ ಎಂಬ ವಿಚಾರ ನನಗೂ ತಿಳಿದಿದೆ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡವೆಂದು ತಿಳಿಯಪಡಿಸುತ್ತೇನೆ. ಈ ವಿಚಾರವಾಗಿ ಆದಷ್ಟು ಬೇಗನೆ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿರುತ್ತಾರೆಂದರು.1
- ಶಿವಮೊಗ್ಗ,: ತನು ಜ್ಯೂಸ್ ಸೆಂಟರ್ ಬೇಟಿ ನೀಡಿದ ಅಧಿಕಾರಿಗಳ ತಂಡ ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗ ತನು ಜ್ಯೂಸ್ ಸೆಂಟರ್ ಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದಾಗ ಕೊಳೆತ ಹಣ್ಣುಗಳನ್ನು ಶೇಖರಿಸಿಟ್ಟಿದ್ದ ಬ್ರಿಡ್ಜ್ ತಪಾಸಣೆ ಮಾಡಿದಾಗ ಸೇಬು, ಮೂಸಂಬಿ, ಕಲ್ಲಂಗಡಿ, ಅವಕೊಡ,ದ್ರಾಕ್ಷಿ, ಬಾಳೆಹಣ್ಣು, ಮಾವಿನಹಣ್ಣು , ಬೆಣ್ಣೆ ಹಣ್ಣು,ಹೀಗೆ ಹಲವಾರು ಹಣ್ಣುಗಳಿಂದ ಜ್ಯೂಸ್ ತಯಾರಿಸಿ ಸಾರ್ವಜನಿಕರಿಗೆ ಕೊಡುತ್ತಿರುವುದು ಕಂಡುಬಂದಿದ್ದು ಹಾಗೂ ಕೆಲವರು ಆಸ್ಪತ್ರೆಯ ರೋಗಿಗಳಿಗೂ ಸಹ ಇದೇ ಕೊಳೆತ ಹಣ್ಣಿನಿಂದ ಜ್ಯೂಸ್ ತೆಗೆದುಕೊಂಡು ಹೋಗಿರುವುದು ಕೂಡ ಗಮನಕ್ಕೆ ಬಂದಿರುವುದು ಕಂಡು ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ ಕೂಡಲೇ ಇದನ್ನು ಸೀಜ್ ಮಾಡಲಾಗಿದೆ. ಜ್ಯೂಸ್ ಮಾಲಿಕನ ಮೇಲೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.1
- ₹3,383 ಕೋಟಿ ಆಸ್ತಿ ಒಡೆಯ ಶಾಸಕ ಬೀದಿಯಲ್ಲಿ ಭಿಕ್ಷೆ ಬೇಡಿದ್ದೇಕೆ? ಕಾರಣ ವೈರಲ್! ಮುಂಬೈ ಬೀದಿಯಲ್ಲಿ ಭಿಕ್ಷುಕನಾದ ಕೋಟ್ಯಾಧೀಶ ಬಿಜೆಪಿ ಶಾಸಕ ಪರಾಗ್ ಶಾ!1
- ಭದ್ರಾ ನೀರಿಗಾಗಿ ದಾವಣಗೆರೆಯಲ್ಲಿ ಜಲಸಂಘರ್ಷ ಹೆದ್ದಾರಿ ತಡೆ; ರೈತ–ಪೊಲೀಸರ ನಡುವೆ ನೂಕಾಟ, ಇಬ್ಬರಿಗೂ ಗಾಯ ದಾವಣಗೆರೆ: ಭದ್ರಾ ಬಲದಂಡೆ ನಾಲೆಗೆ ನೀರು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ನಡೆಸಿದ ಪ್ರತಿಭಟನೆ ಮಂಗಳವಾರ ದಾವಣಗೆರೆ ಹೊರವಲಯದ ಬಾಡಾ ಕ್ರಾಸ್ ಬಳಿ ತೀವ್ರ ಸ್ವರೂಪ ಪಡೆದುಕೊಂಡಿತು. ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ-48ಕ್ಕೆ ನುಗ್ಗಿ ರಸ್ತೆ ತಡೆ ನಡೆಸಿದ ಪರಿಣಾಮ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬಾಡಾ ಕ್ರಾಸ್‌ನ ಅಪೂರ್ವ ರೆಸಾರ್ಟ್ ಎದುರಿನ ಸರ್ವೀಸ್ ರಸ್ತೆಯಲ್ಲಿ ರೈತರು ಒಲೆ, ಪಾತ್ರೆಗಳನ್ನು ತಂದು ಅಡುಗೆ ಮಾಡಲು ಮುಂದಾದಾಗ ಪೊಲೀಸರು ಆಕ್ಷೇಪಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಪೊಲೀಸರ ನಡುವೆ ಕೂಡ ವಾಗ್ವಾದ ನಡೆಯಿತು. ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದ ರೈತರು ಸರ್ವೀಸ್ ರಸ್ತೆಯಲ್ಲೇ ಅಡುಗೆ ಮಾಡುವುದಾಗಿ ಘೋಷಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ವೇಳೆ ನೂಕಾಟ, ತಳ್ಳಾಟ ಸಂಭವಿಸಿದ್ದು, ಮುಕ್ತೇನಹಳ್ಳಿ ಗ್ರಾಮದ ರೈತ ಶಿವಯೋಗಿ ಅವರ ತಲೆಗೆ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡದೆ ಬಸ್‌ನಲ್ಲಿ ಕರೆದೊಯ್ಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಹರಿಹರ ಸಿಟಿ ಸಿಪಿಐ ಸುರೇಶ್ ಸಗರಿ ಅವರ ಮೊಣಕೈ ಹಾಗೂ ಹಣೆಗೆ ಗಾಯವಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಭದ್ರಾ ನೀರಿನ ಬೇಡಿಕೆ ಈಡೇರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ವರದಿ: ದೇವರಾಜ್ ಕೆ. ನೆಲ್ಲಿಹಂಕಲು, ದಾವಣಗೆರೆ4