logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಏಪ್ರಿಲ್ 24 ರಂದು ಮಲ್ಲೇಶ್ವರ ಶ್ರೀ ಸ್ವರ್ಣಾಂಬ ದೇವಿ ಬ್ರಹ್ಮ ರಥೋತ್ಸವ ಕಡೂರು: ಏಪ್ರಿಲ್ 20 ರಿಂದ 27 ರ ವರೆಗೆ ತಾಲ್ಲೂಕಿನ ಮಲ್ಲೇಶ್ವರದ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಸ್ವರ್ಣಾಂಬ ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಡಾ.ಎಂ.ಟಿ.ಸತ್ಯನಾರಾಯಣ ತಿಳಿಸಿದರು. ಈ ಕುರಿತು ಮಾಹಿತಿ ನೀಡಿದ ಅವರು, 20 ರಂದು ಶಂಖತೀರ್ಥದಲ್ಲಿ ಮೃತ್ತಿಕಾ ಸಂಗ್ರಹಣೆಯೊಂದಿಗೆ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಆರಂಭವಾಗಲಿದೆ. ಪ್ರತಿ ನಿತ್ಯ ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಹೋಮ, ಹವನ, ಪ್ರಸಾದ ವಿನಿಯೋಗ, ದುರ್ಗಾ ಸಪ್ತಶತಿ ಪಾರಾಯಣ, ಕುಂಕುಮಾರ್ಚನೆ ನೆರವೇರಲಿದೆ. ಏಪ್ರಿಲ್ 23 ರ ಗುರುವಾರ ಚಿಕ್ಕರಥೋತ್ಸವ ಹಾಗೂ ಚಂಡಿಕಾ ಹೋಮ ನಡೆಯಲಿದ್ದು, ಅಂದು ಸಂಜೆ ದೀಪೋತ್ಸವ ಮತ್ತು ಮಲ್ಲೇಶ್ವರದ ಸ್ವರ್ಣಾಂಬ ದೇವಸ್ಥಾನದ ಧರ್ಮದರ್ಶಿಗಳಾಗಿದ್ದ ದಿ.ಎಂ.ಟಿ.ಶ್ರೀನಿವಾಸ ಅವರ ಸಂಸ್ಮರಣಾ ಕಾರ್ಯಕ್ರಮವಿದೆ. ಏಪ್ರಿಲ್ 24 ರಂದು ಶುಕ್ರವಾರ ಬ್ರಹ್ಮರಥೋತ್ಸವ ನಡೆಯಲಿದೆ. 25 ರ ಶನಿವಾರ ಸಿಡಿಸೇವೆ,ವಸಂತೋತ್ಸವ, ಸಂಜೆ ಶ್ರೀದೇವಿಯವರ ಉಯ್ಯಾಲೋತ್ಸವ ನಡೆಯಲಿದ್ದು, ವಿದುಷಿ ಅಂಜಲಿ ಶ್ರೀರಾಂ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ಏಪ್ರಿಲ್ 26 ರಂದು ಸತ್ಯನಾರಾಯಣ ಪೂಜೆ, 27 ರಂದು ಪುಷ್ಪಯಾಗ ಹಾಗೂ ಸಂಜೆ ಸ್ವರ್ಣಪುಷ್ಕರಿಣಿಯಲ್ಲಿ ತೆಪ್ಪೋತ್ಸವ ನಡೆದ ನಂತರ ಶ್ರೀದೇವಿಯವರ ಆಲಯ ಪ್ರವೇಶದೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರಬೀಳಲಿದೆ. ಸರ್ವ ಭಕ್ತಾದಿಗಳು ಆಗಮಿಸಿ ರಥೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು. ಧರ್ಮದರ್ಶಿ ಮಂಡಳಿ ಕಾರ್ಯಾಧ್ಯಕ್ಷ ಎಂ.ಟಿ.ಹನುಮಂತಯ್ತ, ಕಾರ್ಯದರ್ಶಿ ಎಂ.ವೈ.ಚಂದ್ರಶೇಖರ, ಎಂ‌.ಆರ್‌‌.ಧರ್ಮಣ್ಣ, ಪುಟ್ಟಸ್ವಾಮಿ, ಪುಟ್ಟಪ್ಪ, ಎಂ.ಸಿ.ಮಾಲತೇಶ್ ಇದ್ದರು.

13 hrs ago
user_Balaji M.V.
Balaji M.V.
Local News Reporter ಕಡೂರು, ಚಿಕ್ಕಮಗಳೂರು, ಕರ್ನಾಟಕ•
13 hrs ago
35f9aedc-afd4-4aad-aea0-a82c8e6acea2

ಏಪ್ರಿಲ್ 24 ರಂದು ಮಲ್ಲೇಶ್ವರ ಶ್ರೀ ಸ್ವರ್ಣಾಂಬ ದೇವಿ ಬ್ರಹ್ಮ ರಥೋತ್ಸವ ಕಡೂರು: ಏಪ್ರಿಲ್ 20 ರಿಂದ 27 ರ ವರೆಗೆ ತಾಲ್ಲೂಕಿನ ಮಲ್ಲೇಶ್ವರದ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಸ್ವರ್ಣಾಂಬ ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಡಾ.ಎಂ.ಟಿ.ಸತ್ಯನಾರಾಯಣ ತಿಳಿಸಿದರು. ಈ ಕುರಿತು ಮಾಹಿತಿ ನೀಡಿದ ಅವರು, 20 ರಂದು ಶಂಖತೀರ್ಥದಲ್ಲಿ ಮೃತ್ತಿಕಾ ಸಂಗ್ರಹಣೆಯೊಂದಿಗೆ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಆರಂಭವಾಗಲಿದೆ. ಪ್ರತಿ ನಿತ್ಯ ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಹೋಮ, ಹವನ, ಪ್ರಸಾದ ವಿನಿಯೋಗ, ದುರ್ಗಾ ಸಪ್ತಶತಿ ಪಾರಾಯಣ, ಕುಂಕುಮಾರ್ಚನೆ ನೆರವೇರಲಿದೆ. ಏಪ್ರಿಲ್ 23 ರ ಗುರುವಾರ ಚಿಕ್ಕರಥೋತ್ಸವ ಹಾಗೂ ಚಂಡಿಕಾ ಹೋಮ ನಡೆಯಲಿದ್ದು, ಅಂದು ಸಂಜೆ ದೀಪೋತ್ಸವ ಮತ್ತು

241befe8-0f69-4e69-b6dd-bc4ad80c58a7

ಮಲ್ಲೇಶ್ವರದ ಸ್ವರ್ಣಾಂಬ ದೇವಸ್ಥಾನದ ಧರ್ಮದರ್ಶಿಗಳಾಗಿದ್ದ ದಿ.ಎಂ.ಟಿ.ಶ್ರೀನಿವಾಸ ಅವರ ಸಂಸ್ಮರಣಾ ಕಾರ್ಯಕ್ರಮವಿದೆ. ಏಪ್ರಿಲ್ 24 ರಂದು ಶುಕ್ರವಾರ ಬ್ರಹ್ಮರಥೋತ್ಸವ ನಡೆಯಲಿದೆ. 25 ರ ಶನಿವಾರ ಸಿಡಿಸೇವೆ,ವಸಂತೋತ್ಸವ, ಸಂಜೆ ಶ್ರೀದೇವಿಯವರ ಉಯ್ಯಾಲೋತ್ಸವ ನಡೆಯಲಿದ್ದು, ವಿದುಷಿ ಅಂಜಲಿ ಶ್ರೀರಾಂ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ಏಪ್ರಿಲ್ 26 ರಂದು ಸತ್ಯನಾರಾಯಣ ಪೂಜೆ, 27 ರಂದು ಪುಷ್ಪಯಾಗ ಹಾಗೂ ಸಂಜೆ ಸ್ವರ್ಣಪುಷ್ಕರಿಣಿಯಲ್ಲಿ ತೆಪ್ಪೋತ್ಸವ ನಡೆದ ನಂತರ ಶ್ರೀದೇವಿಯವರ ಆಲಯ ಪ್ರವೇಶದೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರಬೀಳಲಿದೆ. ಸರ್ವ ಭಕ್ತಾದಿಗಳು ಆಗಮಿಸಿ ರಥೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು. ಧರ್ಮದರ್ಶಿ ಮಂಡಳಿ ಕಾರ್ಯಾಧ್ಯಕ್ಷ ಎಂ.ಟಿ.ಹನುಮಂತಯ್ತ, ಕಾರ್ಯದರ್ಶಿ ಎಂ.ವೈ.ಚಂದ್ರಶೇಖರ, ಎಂ‌.ಆರ್‌‌.ಧರ್ಮಣ್ಣ, ಪುಟ್ಟಸ್ವಾಮಿ, ಪುಟ್ಟಪ್ಪ, ಎಂ.ಸಿ.ಮಾಲತೇಶ್ ಇದ್ದರು.

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    15 hrs ago
  • ಮೈಸೂರಿನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ
    1
    ಮೈಸೂರಿನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    19 hrs ago
  • ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    1
    ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ.
ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    user_ASN News24Kannada
    ASN News24Kannada
    Newsagent Byadgi, Haveri•
    12 hrs ago
  • ಬನ್ನೂರು: ತಾಲೂಕಿನ ಬನ್ನೂರು ಹೋಬಳಿಯ ಬಿ.ಸಿ ಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆಯಾದ ಹುಚ್ಚಮ್ಮ ದೇವಿಯ ದೊಡ್ಡ ಹಬ್ಬ ಭಕ್ತಿಭಾವ, ಸಂಪ್ರದಾಯ ಮತ್ತು ಗ್ರಾಮೀಣ ಸಂಸ್ಕೃತಿಯ ಸೊಬಗಿನೊಂದಿಗೆ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆಯಿಂದಲೇ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ಹಬ್ಬದ ಪ್ರಮುಖ ಅಂಗವಾಗಿ ಗ್ರಾಮದ ಮಹಿಳೆಯರು 70 ಕ್ಕೂ ಹೆಚ್ಚು ಮಡಿಕೆಗಳಲ್ಲಿ ಪವಿತ್ರ ನೀರನ್ನು ತಂದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಹುಚ್ಚಮ್ಮ ದೇವಿಯ ಉತ್ಸವ ಮೂರ್ತಿಗೆ ಗ್ರಾಮ ಸುತ್ತ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು, ನಾದಸ್ವರ, ಪೂಜಾ ಘೋಷಣೆಗಳು ಮತ್ತು ಭಕ್ತರ ಜಯಘೋಷಗಳಿಂದ ಗ್ರಾಮದೆಲ್ಲೆಡೆ ಭಕ್ತಿಮಯ ವಾತಾವರಣ ನಿರ್ಮಾಣವಾಯಿತು. ದೇವಿಗೆ ಹರಕೆ ತೀರಿಸುವ ಸಲುವಾಗಿ ಭಕ್ತರು ಸ್ವಯಂಪ್ರೇರಿತವಾಗಿ ಸುಮಾರು 500 ಕುರಿಗಳನ್ನು ಸಮರ್ಪಿಸಿದರು. ಪ್ರತಿಯೊಂದು ಕುರಿಯ ಅಂದಾಜು ಬೆಲೆ ₹12,000 ಆಗಿದ್ದು, ಒಟ್ಟು ಮೌಲ್ಯ ಸುಮಾರು ₹60 ಲಕ್ಷ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭಕ್ತರು ನೀಡಿದ ಈ ಕುರಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು. ಹಬ್ಬದ ವಿಶೇಷ ಆಕರ್ಷಣೆಯಾಗಿ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಯಿತು. ಭಕ್ತರಿಗಾಗಿ ಸುಮಾರು 12 ಟನ್ ಮಟನ್ ಸಾಂಬಾರ್ ಹಾಗೂ ರಾಗಿ ಮುದ್ದೆ ತಯಾರಿಸಿ 1000 ಕ್ಕೂ ಹೆಚ್ಚು ಜನರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು. ಗ್ರಾಮಸ್ಥರು, ಹಾಗೂ ಮಹಿಳಾ ಯಾರು ಸಹ ಅಡುಗೆ ತಯಾರಿ ಭಾಗವಹಿಸಿ ದ್ದರು. ಅಡುಗೆ ವ್ಯವಸ್ಥೆ ಸುಸೂತ್ರವಾಗಿ ನಡೆಯಿತು. ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಏಕತೆ, ಸಹಕಾರ ಮತ್ತು ಭಕ್ತಿಯ ಪ್ರತಿರೂಪ ಕಾಣಿಸಿಕೊಂಡಿತು. ದೂರದ ಊರುಗಳಿಂದ ಆಗಮಿಸಿದ ಭಕ್ತರು ದೇವಿಯ ಆಶೀರ್ವಾದ ಪಡೆದು ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪರಂಪರೆ ಮತ್ತು ಜನಪದ ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿರುವ ಹುಚ್ಚಮ್ಮ ದೇವಿ ಹಬ್ಬ ಗ್ರಾಮೀಣ ಬದುಕಿನ ಸಾಂಸ್ಕೃತಿಕ ವೈಭವವನ್ನು ಮತ್ತೊಮ್ಮೆ ಸಾರಿತು. ಗ್ರಾಮಸ್ಥರ ಒಗ್ಗಟ್ಟು ಹಾಗೂ ಭಕ್ತರ ಅಪಾರ ಭಕ್ತಿ ಈ ವರ್ಷದ ಹುಚ್ಚಮ್ಮ ದೇವಿ ದೊಡ್ಡ ಹಬ್ಬವನ್ನು ವಿಶೇಷವಾಗಿ ಮೆರಗುಗೊಳಿಸಿತು.
    1
    ಬನ್ನೂರು: ತಾಲೂಕಿನ ಬನ್ನೂರು ಹೋಬಳಿಯ ಬಿ.ಸಿ ಹಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆಯಾದ ಹುಚ್ಚಮ್ಮ ದೇವಿಯ ದೊಡ್ಡ ಹಬ್ಬ ಭಕ್ತಿಭಾವ, ಸಂಪ್ರದಾಯ ಮತ್ತು ಗ್ರಾಮೀಣ ಸಂಸ್ಕೃತಿಯ ಸೊಬಗಿನೊಂದಿಗೆ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆಯಿಂದಲೇ ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.
ಹಬ್ಬದ ಪ್ರಮುಖ ಅಂಗವಾಗಿ ಗ್ರಾಮದ ಮಹಿಳೆಯರು 70 ಕ್ಕೂ ಹೆಚ್ಚು ಮಡಿಕೆಗಳಲ್ಲಿ ಪವಿತ್ರ ನೀರನ್ನು ತಂದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಹುಚ್ಚಮ್ಮ ದೇವಿಯ ಉತ್ಸವ ಮೂರ್ತಿಗೆ ಗ್ರಾಮ ಸುತ್ತ ಭವ್ಯ ಮೆರವಣಿಗೆ ನಡೆಸಲಾಯಿತು. ಡೊಳ್ಳು, ನಾದಸ್ವರ, ಪೂಜಾ ಘೋಷಣೆಗಳು ಮತ್ತು ಭಕ್ತರ ಜಯಘೋಷಗಳಿಂದ ಗ್ರಾಮದೆಲ್ಲೆಡೆ ಭಕ್ತಿಮಯ ವಾತಾವರಣ ನಿರ್ಮಾಣವಾಯಿತು.
ದೇವಿಗೆ ಹರಕೆ ತೀರಿಸುವ ಸಲುವಾಗಿ ಭಕ್ತರು ಸ್ವಯಂಪ್ರೇರಿತವಾಗಿ ಸುಮಾರು 500 ಕುರಿಗಳನ್ನು ಸಮರ್ಪಿಸಿದರು. ಪ್ರತಿಯೊಂದು ಕುರಿಯ ಅಂದಾಜು ಬೆಲೆ ₹12,000 ಆಗಿದ್ದು, ಒಟ್ಟು ಮೌಲ್ಯ ಸುಮಾರು ₹60 ಲಕ್ಷ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭಕ್ತರು ನೀಡಿದ ಈ ಕುರಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು.
ಹಬ್ಬದ ವಿಶೇಷ ಆಕರ್ಷಣೆಯಾಗಿ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಯಿತು. ಭಕ್ತರಿಗಾಗಿ ಸುಮಾರು 12 ಟನ್ ಮಟನ್ ಸಾಂಬಾರ್ ಹಾಗೂ ರಾಗಿ ಮುದ್ದೆ ತಯಾರಿಸಿ 1000 ಕ್ಕೂ ಹೆಚ್ಚು ಜನರಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು. ಗ್ರಾಮಸ್ಥರು,  ಹಾಗೂ ಮಹಿಳಾ ಯಾರು ಸಹ ಅಡುಗೆ ತಯಾರಿ ಭಾಗವಹಿಸಿ ದ್ದರು. ಅಡುಗೆ ವ್ಯವಸ್ಥೆ ಸುಸೂತ್ರವಾಗಿ ನಡೆಯಿತು.
ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಏಕತೆ, ಸಹಕಾರ ಮತ್ತು ಭಕ್ತಿಯ ಪ್ರತಿರೂಪ ಕಾಣಿಸಿಕೊಂಡಿತು. ದೂರದ ಊರುಗಳಿಂದ ಆಗಮಿಸಿದ ಭಕ್ತರು ದೇವಿಯ ಆಶೀರ್ವಾದ ಪಡೆದು ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಪರಂಪರೆ ಮತ್ತು ಜನಪದ ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿರುವ ಹುಚ್ಚಮ್ಮ ದೇವಿ ಹಬ್ಬ ಗ್ರಾಮೀಣ ಬದುಕಿನ ಸಾಂಸ್ಕೃತಿಕ ವೈಭವವನ್ನು ಮತ್ತೊಮ್ಮೆ ಸಾರಿತು.
ಗ್ರಾಮಸ್ಥರ ಒಗ್ಗಟ್ಟು ಹಾಗೂ ಭಕ್ತರ ಅಪಾರ ಭಕ್ತಿ ಈ ವರ್ಷದ ಹುಚ್ಚಮ್ಮ ದೇವಿ ದೊಡ್ಡ ಹಬ್ಬವನ್ನು ವಿಶೇಷವಾಗಿ ಮೆರಗುಗೊಳಿಸಿತು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    6 hrs ago
  • ಕೊಳ್ಳೇಗಾಲ. ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದಂದು ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕರ ಮಾಡದೇ ಅಪಮಾನ ಎಸಗಿರುವುದನ್ನು ಖಂಡಿಸಿ ಮನವಿ ಸಲ್ಲಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಹಾಗೂ ಪದಾಧಿಕಾರಿಗಳು ಜಮಾಯಿಸಿ ಶಿರೆಸ್ತದಾರ್ ಕೃಪಕಾರ್ ರವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಮಾತನಾಡಿ ಪ್ರಜಾಪ್ರಭುತ್ವದ ಪಿತಾಮಹ, ರಾಷ್ಟ್ರನಾಯಕ ಡಾ. ಅಂಬೇಡ್ಕರ್‌ರವರ 135ನೇ ಜಯಂತಿಯನ್ನು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳ ಗೌರವ ಪೂರ್ವಕವಾಗಿ ಆಚರಣೆ ಮಾಡುತ್ತೀರುವುದು ನಮ್ಮೇಲ್ಲರಿಗೂ ತಿಳಿದಿರುವು ನಿಮಗೂ ಸಹ ತಿಳಿದಿಲಿದೆ. ಆದರೆ ಕೊಳ್ಳೇಗಾಲ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಕೂಡ ಆಚರಣೆ ಮಾಡಿದೆ ಆದರೆ ಕೆಲವು ತಾಲ್ಲೂಕಿನ ವಿವಿಧ ಇಲಾಖೆಗಳು ನಿಯಮ ವಾಗಿ ದೀಪಾಲಂಕರ ಮಾಡದೆ, ಕಾಟಚಾರಕ್ಕೆ ಜಯಂತಿಯನ್ನು ಮಾಡಿರುತ್ತಾರೆ, ಹಾಗಾಗಿ ಇಂತವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ, ಉಪಾಧ್ಯಕ್ಷರು ಮೊಹಮ್ಮದ್ ಅಬ್ಜಲ್, ಯೂನುಸ್ ಪಾಷ, ಪ್ರಧಾನ ಕಾರ್ಯದರ್ಶಿ ನಾಗರಾಜು, ಚೇತನ್, ಚಂದನ್ ಇದ್ದರು.
    1
    ಕೊಳ್ಳೇಗಾಲ. ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದಂದು ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕರ ಮಾಡದೇ ಅಪಮಾನ ಎಸಗಿರುವುದನ್ನು ಖಂಡಿಸಿ ಮನವಿ ಸಲ್ಲಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಹಾಗೂ ಪದಾಧಿಕಾರಿಗಳು ಜಮಾಯಿಸಿ ಶಿರೆಸ್ತದಾರ್ ಕೃಪಕಾರ್ ರವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಮಾತನಾಡಿ ಪ್ರಜಾಪ್ರಭುತ್ವದ ಪಿತಾಮಹ, ರಾಷ್ಟ್ರನಾಯಕ ಡಾ. ಅಂಬೇಡ್ಕರ್‌ರವರ 135ನೇ ಜಯಂತಿಯನ್ನು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳ ಗೌರವ ಪೂರ್ವಕವಾಗಿ ಆಚರಣೆ ಮಾಡುತ್ತೀರುವುದು ನಮ್ಮೇಲ್ಲರಿಗೂ ತಿಳಿದಿರುವು ನಿಮಗೂ ಸಹ ತಿಳಿದಿಲಿದೆ. ಆದರೆ ಕೊಳ್ಳೇಗಾಲ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಕೂಡ ಆಚರಣೆ ಮಾಡಿದೆ ಆದರೆ ಕೆಲವು ತಾಲ್ಲೂಕಿನ ವಿವಿಧ ಇಲಾಖೆಗಳು ನಿಯಮ ವಾಗಿ ದೀಪಾಲಂಕರ ಮಾಡದೆ, ಕಾಟಚಾರಕ್ಕೆ ಜಯಂತಿಯನ್ನು ಮಾಡಿರುತ್ತಾರೆ, ಹಾಗಾಗಿ ಇಂತವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ, ಉಪಾಧ್ಯಕ್ಷರು ಮೊಹಮ್ಮದ್ ಅಬ್ಜಲ್, ಯೂನುಸ್ ಪಾಷ, ಪ್ರಧಾನ ಕಾರ್ಯದರ್ಶಿ ನಾಗರಾಜು, ಚೇತನ್, ಚಂದನ್ ಇದ್ದರು.
    user_ಎನ್. ನಟರಾಜ್
    ಎನ್. ನಟರಾಜ್
    Kollegal, Chamarajanagara•
    11 hrs ago
  • ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಏಪ್ರಿಲ್ 18ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣಾ ಶಿಭಿರ ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮತ್ತು ದಾವಣಗೆರೆಯ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಇದೇ ಏಪ್ರಿಲ್ 18ರಂದು ನಗರದ ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 15ರಲ್ಲಿ “ಉಚಿತ ಮೂತ್ರಕೋಶ ತಪಾಸಣಾ ಶಿಬಿರ” ನಡೆಯಲಿದೆ.
    1
    ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಏಪ್ರಿಲ್ 18ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣಾ ಶಿಭಿರ ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮತ್ತು ದಾವಣಗೆರೆಯ ಎಸ್.ಎಸ್.ನಾರಾಯಣ ಹೆಲ್ತ್ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಇದೇ ಏಪ್ರಿಲ್ 18ರಂದು ನಗರದ ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 15ರಲ್ಲಿ “ಉಚಿತ ಮೂತ್ರಕೋಶ ತಪಾಸಣಾ ಶಿಬಿರ” ನಡೆಯಲಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    15 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.